Author: admin

ಪಾವಗಡ: ಎಸ್.ಎಸ್.ಎಲ್.ಸಿ. ವಿಜ್ಞಾನ ವಿಷಯದ ಪ್ರಶ್ನೆ ಪತ್ರಿಕೆಯನ್ನು ಸರಳೀಕರಣಗೊಳಿಸುವಂತೆ ಆಗ್ರಹಿಸಿ ಪಾವಗಡ ಪ್ರೌಢಶಾಲಾ ವಿಜ್ಞಾನ ವಿಷಯ  ಶಿಕ್ಷಕರ ವೇದಿಕೆಯು ಕ್ಷೇತ್ರಶಿಕ್ಷಣಾಧಿಕಾರಿಗಳಾದ ಇಂದ್ರಾಣಮ್ಮ ಮತ್ತು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳಾದ  ವೆಂಕಟೇಶ್.ಜಿ ರವರಿಗೆ ಮನವಿ ಸಲ್ಲಿಸಿತು. ಮನವಿಯಲ್ಲಿ ಪ್ರಮುಖವಾಗಿ ಮೂಲ ವಿಜ್ಞಾನದ ಉಳಿವಿನ ಆರಂಭವು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಂದ ಆಗಬೇಕಿದೆ ಅದಕ್ಕಾಗಿ ಈ ಹಂತದಲ್ಲಿ ಓದುವ ಮಕ್ಕಳಿಗೆ ವಿಜ್ಞಾನದ ಬಗೆಗೆ ಆಸಕ್ತಿ ಮೂಡಿಸುವು ದು ಬಹಳ ಮುಖ್ಯ.ಹಾಗಾಗಿ ಇದಕ್ಕೆ ಪೂರಕವಾಗಿ ಪ್ರಶ್ನೆ ಪತ್ರಿಕೆಯ ಸ್ವರೂಪ ಬದಲಾವಣೆ ಪ್ರಮುಖ ಹೆಜ್ಜೆಯಾಗಿದೆ ಎಂಬ ಮನವಿಯನ್ನು ಸಲ್ಲಿಸಲಾಯಿತು. ಈ ವೇಳೆ ವೇದಿಕೆಯ ಅಧ್ಯಕ್ಷರಾದ  ರವೀಂದ್ರ ಬಿ., ಕಾರ್ಯದರ್ಶಿಗಳಾದ ಮಹೇಶ್ವರಪ್ಪ ಎಂ.ಎಸ್.  ಖಜಾಂಚಿ ಗಳಾದ ರೇಣುಕರಾಜ್.ಜಿ.ಹೆಚ್ ಹಾಗೂ ಪಾವಗಡ ತಾಲ್ಲೂಕಿನ ಸರ್ಕಾರಿ , ಅನುದಾನಿತ  ಮತ್ತು ಅನುದಾನ ರಹಿತ ಪ್ರೌಢಶಾಲಾ ವಿಜ್ಞಾನ ಶಿಕ್ಷಕರು ಭಾಗವಹಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಕನ್ನಡದ ಕಿರಾತಕ ಚಿತ್ರದಲ್ಲಿ ನಟಿಸಿದ್ದ ತಮಿಳು ನಟಿ ಓವಿಯಾ ತಮಿಳು ಚಿತ್ರರಂಗದ ಪ್ರಮುಖ ನಟಿಯಾಗಿದ್ದಾರೆ. ಇದೀಗ ಅವರ ಖಾಸಗಿ ವಿಡಿಯೋ ಲೀಕ್ ಆಗಿರುವ ವಿಚಾರ ತಮಿಳುನಾಡಿನಲ್ಲಿ ಇಂಟರ್ ನೆಟ್ ನಲ್ಲಿ ಕಿಡಿ ಹಚ್ಚಿದೆ. ಓವಿಯಾ ಅವರ ಖಾಸಗಿ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಅಭಿಮಾನಿಗಳು ಪ್ರಶ್ನೆ ಮಾಡಿದ್ದಾರೆ. ಅಭಿಮಾನಿಗಳ ಪ್ರಶ್ನೆಗೆ ನಟಿ,  “ವಿಡಿಯೋ ನೋಡಿ ಎಂಜಾಯ್ ಮಾಡಿ”ಎಂದು ಉತ್ತರಿಸಿದ್ದಾರೆ. ನೆಟಿಜನ್ ಒಬ್ಬರು ವಿಡಿಯೋ ಹಾಕಿ ಮೇಡಂ ನಿಮ್ಮದು 17 ಸೆಕೆಂಡ್‌ಗಳ ವಿಡಿಯೋ ಇದೆ ಎಂದು ಕಮೆಂಟ್ ಮಾಡಿದ್ದರು. ಇದಕ್ಕೆ ನಟಿ ನೋಡಿ ಆನಂದಿಸಿ ಎಂದು ಬರೆದಿದ್ದರು. ಅಂತೆಯೇ, ಇನ್ನೊಬ್ಬ ನೆಟಿಜನ್ ಮೇಡಂ ‘ಉದ್ದದ ವೀಡಿಯೊ ಇದೀಯಾ’ ಎಂದು ಕೇಳಿದ್ದರು. ಇದಕ್ಕೆ ನಟಿ ‘ನೆಕ್ಸ್ಟ್ ಟೈಮ್ ಬ್ರೋ’ ಎಂದು ಬರೆದಿದ್ದಾರೆ. ಸಾಮಾನ್ಯವಾಗಿ ವಿಡಿಯೋ ಲೀಕ್ ಆದ ಸಂದರ್ಭದಲ್ಲಿ ವ್ಯಕ್ತಿಗಳು ಭೂಗತರಾಗುವುದು, ಅದು ನಾನಲ್ಲ ಎಂದು ವಾದಿಸುವುದು ಸಾಮಾನ್ಯ ಆದ್ರೆ ನಟಿ ಓವಿಯಾ, ವಿಡಿಯೋ ನೋಡಿ ಎಂಜಾಯ್ ಮಾಡಿ ಎಂದು…

Read More

ತುಮಕೂರು:  ಭಾರತದ ಬಹುತ್ವ ಸಂಸ್ಕೃತಿಯನ್ನು ತಿಳಿಸಿದ ಬುದ್ಧ, ಬಸವ, ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಕುವೆಂಪು ಅವರಂತಹ ದಾರ್ಶನಿಕರ ವಿಚಾರಧಾರೆಗಳನ್ನು ಉಳಿಸಲು ಸಮತೆ–ಮಮತೆಗಳ ಪರಂಪರೆ ಅಗತ್ಯ ಎಂದು ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ತುಮಕೂರು ದಸರಾ ಉತ್ಸವ ಅಂಗವಾಗಿ ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದ ಪ್ರೊ.ಹೆಚ್.ಜಿ. ಸಣ್ಣಗುಡ್ಡಯ್ಯ ಹಾಗೂ ವೀಚಿ ವೇದಿಕೆಯಲ್ಲಿ ಶನಿವಾರ ಆಯೋಜಿಸಿದ್ದ ಸಾಂಸ್ಕೃತಿಕ ಪರಂಪರೆ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಸಂವಾದಗೋಷ್ಠಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಪರಂಪರೆ ಎಲ್ಲಾ ಕಾಲದಲ್ಲಿಯೂ ಬೆಳವಣಿಗೆ ಹೊಂದುತ್ತಾ ಬರುತ್ತಿದ್ದು, ಸಂಸ್ಕೃತಿ ಮತ್ತು ಪರಂಪರೆಗಳ ನಡುವಿನ ಸೂಕ್ಷö್ಮ ವ್ಯತ್ಯಾಸಗಳನ್ನು ನಾವು ತಿಳಿದುಕೊಳ್ಳಬೇಕಾಗಿದೆ. ಬರವಣಿಗೆ ಸಂಸ್ಕೃತಿಯ ಜೊತೆ–ಜೊತೆಗೆ ಜನಮೂಲ ಸಂಸ್ಕೃತಿಯನ್ನು ತಿಳಿದಾಗ ಮಾತ್ರ ಈ ನೆಲದ ಮೂಲ ಪರಂಪರೆಯ ನೆಲೆಗಟ್ಟನ್ನು ನೋಡಲು ಸಾಧ್ಯ ಎಂದು ತಿಳಿಸಿದರು. ಜಿಲ್ಲೆಯು ಕನ್ನಡ ಭಾಷೆ ಹಾಗೂ ರಾಜ್ಯಕ್ಕೆ ಹಲವು ಮೊದಲುಗಳನ್ನು ನೀಡಿದೆ. ಕನ್ನಡದ ಮೊದಲ ನಾಟಕ ಸಂಸ್ಥೆ, ಕನ್ನಡ ಮೊದಲ ಟಾಕಿ ಸಿನಿಮಾಗೆ ಚಿತ್ರಕಥೆ, ಸಾಹಿತ್ಯ,…

Read More

ಬೆಂಗಳೂರು : ನಟ ದರ್ಶನ್ ಅವರು ಕೊಲೆ ಪ್ರಕರಣದಲ್ಲಿ ಸಿಲುಕುತ್ತಿದ್ದಂತೆಯೇ ಬಾಯಿಗೆ ಬಂದಂತೆ ಮಾತನಾಡಿದ್ದ ನಟ ಪ್ರಥಮ್ ಇದೀಗ ಪ್ಲೇಟ್ ಚೇಂಜ್ ಮಾಡಿದ್ದಾರೆ. ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸಂದರ್ಭದಲ್ಲಿ ಪ್ರಥಮ್ ಅಚ್ಚರಿಯ ಪೋಸ್ಟ್ ಹಂಚಿಕೊಂಡಿದ್ದಾರೆ. ಈಶ್ವರನಲ್ಲಿ ಪಾಮಾಣಿಕ ಪ್ರಾರ್ಥನೆ. ದರ್ಶನ್ ಸರ್ ಬಿಡುಗಡೆಯಾಗಿ ಚಿತ್ರರಂಗದಲ್ಲಿ ಹೊಸ ಇನ್ನಿಂಗ್ಸ್ ಶುರು ಮಾಡುವಂತಾಗಲಿ. ಕೆಟ್ಟ ಕಾಲ ಎಲ್ಲರಿಗೂ ಬರುತ್ತದೆ. ಅದನ್ನು ದಾಟಿ ಅಭಿಮಾನಿಗಳನ್ನ ರಂಜಿಸಲಿ ಎಂದು ಪೋಸ್ಟ್ ಮಾಡಿದ್ದಾರೆ. ಅಂಧಾಭಿಮಾನಿ ಅಂದಿದ್ದು ನೋವಾಗಿದ್ದರೆ ಮರೆತುಬಿಡಿ. ವ್ಯಂಗ್ಯ ಬೇಡ;ದೇವ್ರಾಣೆ ಬಿಡುಗಡೆಯಾಗಲಿ. ಮನಸ್ಸಿನಿಂದ ಈಶ್ವರನಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದು ಪ್ರಥಮ್ ಬರೆದುಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

‘ಮಾರ್ಟಿನ್’ ಸಿನಿಮಾ ರಿಲೀಸ್ ಆಗಿ ಮೂರು ದಿನಗಳು ಕಳೆದಿವೆ. ಈ ಚಿತ್ರದ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನೊಂದೆಡೆ ಧ್ರುವ ಅವರ ಅಭಿಮಾನಿಗಳು ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಈ ಚಿತ್ರದಲ್ಲಿ ಧ್ರುವ ಸರ್ಜಾ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಗಳಿಕೆ ಬಗ್ಗೆ ಮಾಹಿತಿ ಸಿಕ್ಕಿದೆ. ದಸರಾ ಸಂದರ್ಭದಲ್ಲಿ ರಿಲೀಸ್ ಆದ ಈ ಚಿತ್ರ ಮೂರು ದಿನಗಳಲ್ಲಿ ಗಳಿಕೆ ಮಾಡಿದ್ದು ಎಷ್ಟು ಎಂಬ ಬಗ್ಗೆ ಮಾಹಿತಿ ರಿವೀಲ್ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ. ಎಪಿ ಅರ್ಜುನ್ ಅವರು ‘ಮಾರ್ಟಿನ್’ ಚಿತ್ರವನ್ನು ನಿರ್ದೇಶನ ಮಾಡಿದರೆ, ಉದಯ್ ಮೆಹ್ತಾ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದು ಧ್ರುವ ಸರ್ಜಾ ವೃತ್ತಿ ಬದುಕಿನಲ್ಲೇ ಅತಿ ದೊಡ್ಡ ಬಜೆಟ್ನ ಚಿತ್ರವಾಗಿದೆ. ಸಿನಿಮಾದ ಬಜೆಟ್ 100 ಕೋಟಿ ರೂಪಾಯಿ ದಾಟಿದೆ. Sacnilk ವರದಿ ಮಾಡಿರುವ ಪ್ರಕಾರ ‘ಮಾರ್ಟಿನ್’ ಸಿನಿಮಾ ಮೂರು ದಿನಗಳಲ್ಲಿ ಸುಮಾರು 16 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆಯಂತೆ. ಬಜೆಟ್ ಗೆ ಹೋಲಿಕೆ ಮಾಡಿದರೆ ಸಿನಿಮಾದ ಗಳಿಕ…

Read More

ಬಿಗ್ ಬಾಸ್ ಎಂಬ ಕಾರ್ಯಕ್ರಮ ನಡೆಸುವ ಕೆಲವು ಕನ್ನಡ ದ್ರೋಹಿಗಳ ನಿಮ್ಮ ಕಿತ್ತೋದ್ ಆಟಕ್ಕೆ ಕಿಚ್ಚ ಸುದೀಪ್ ಬಿಗ್ ಬಾಸ್ ನಿರೂಪಕರಾಗಿ ನಿಲ್ಲಿಸಬೇಕಾಗಿದೆ ಎಂದು ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಬಿಗ್ ಬಾಸ್ ಶೋ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಿಚ್ಚ ಸುದೀಪ್ ಅವರನ್ನು ಶೋದಿಂದ ಕೈಬಿಡುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ಸುದೀಪ್ ಅವರಿಗೆ ಮಾಡಿರುವ ಅವಮಾನ ಸಹಿಸೋಲ್ಲ ಎಂದಿದ್ದಾರೆ. ಎ ಮುಂಬೈ ಮರಾಠಿ ಹಾಗೂ ತಮಿಳ್ ನಿರ್ದೇಶಕ ಮೊದಲು ಬಿಗ್ ಬಾಸ್ ಬಿಡಿ. ಇಲ್ಲ ಬಿಗ್ ಬಾಸ್ ನಿಲ್ಲಬೇಕು. ಅಸಲಿ ವಿಷಯ ನಾಳೆ ಮಾತಾಡ್ತೀನಿ ಎಂದು ಬರೆದು ಚಕ್ರವರ್ತಿ ಚಂದ್ರಚೂಡ್ ಅವರನ್ನು ಟ್ಯಾಗ್ ಮಾಡಿದ್ದಾರೆ. ರೂಪೇಶ್ ರಾಜಣ್ಣ ಅವರ ಈ ಟ್ವೀಟ್ ಸಖತ್ ಚರ್ಚೆಗೆ ಕಾರಣ ಮಾಡಿಕೊಟ್ಟಿದೆ. ಅಷ್ಟಕ್ಕೂ ರೂಪೇಶ್ ರಾಜಣ್ಣ ಅವರಿಗೆ ಗೊತ್ತಿರೋ ವಿಚಾರ ಏನು? ಅವರು ಏನು ಹೇಳೋಕೆ ಹೊರಟಿದ್ದಾರೆ ಎಂದು ತಿಳಿಯಲು ಜನರಲ್ಲಿಯೂ ಕುತೂಹಲ ಮೂಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ಬೆಳಗಾವಿ : ಶಕ್ತಿ ಯೋಜನೆಯಿಂದಾಗಿ ಇದುವರೆಗೂ ರಾಜ್ಯದಲ್ಲಿ ಮಹಿಳೆಯರು 300 ಕೋಟಿ ಉಚಿತ ಟ್ರಿಪ್ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸವದತ್ತಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ ವ್ಯವಸ್ಥೆ ರೂಪಿಸುತ್ತೇವೆ ಎಂದು ತಿಳಿಸಿದರು. ದೇವರು–ಧರ್ಮ ತಮಗೆ ಮಾತ್ರ ಸೇರಿದ್ದು ಎಂದು ಬಿಜೆಪಿಯವರು ಭಯಂಕರ ಮಾತನಾಡ್ತಾರಲ್ಲಾ, ಆದರೆ ಇದುವರೆಗೂ ದೇವಿಯ ಭಕ್ತರಿಗೆ ನಾವು ಮಾಡಿದಂಥಾ ಕಾರ್ಯಕ್ರಮವನ್ನು ಬಿಜೆಪಿಯವರು ಏಕೆ ಮಾಡಲಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ. ತಾಯಿ ಯಲ್ಲಮ್ಮ ಶಕ್ತಿ ದೇವತೆ. ಯಾವ ದೇವರೂ ಕೂಡ ಮನುಷ್ಯರನ್ನು ಧರ್ಮದ ಕಾರಣಕ್ಕೆ ದ್ವೇಷಿಸಿ ಎಂದು ಹೇಳುವುದಿಲ್ಲ. ದೇವರ ಹೆಸರಲ್ಲಿ ದ್ವೇಷ ಮಾಡಿ ಎಂದು ಹೇಳುವುದು ಬಿಜೆಪಿ ಮಾತ್ರ. ತಾಯಿ ರೇಣುಕಾ ಯಲ್ಲಮ್ಮ ಯಾವ ಮನುಷ್ಯರನ್ನು ದ್ವೇಷಿಸಿ ಎಂದು ಹೇಳುವುದಿಲ್ಲ ತಾನೆ? ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಬೆಂಗಳೂರು: ಕನ್ನಡದಲ್ಲಿಯೂ ಕಳೆದ 11 ವರ್ಷಗಳಿಂದ ಈ ಶೋ ಮೂಡಿಬರುತ್ತಿದೆ. ಬಿಗ್ ಬಾಸ್ ಅಂದ್ರೆ ಕಿಚ್ಚ ಸುದೀಪ್ ಎಂದೇ ಜನ ನೋಡುತ್ತಿದ್ದಾರೆ. ಆದ್ರೆ ಕಿಚ್ಚ ಸುದೀಪ್ ಇದೀಗ ಇದು ನನ್ನ ಕೊನೆಯ ಬಿಗ್ ಬಾಸ್ ಶೋ ಎಂದು ಹೇಳಿಕೊಂಡಿರುವುದು ಅಭಿಮಾನಿಗಳಿಗೆ ಬೇಸರ ತಂದಿದೆ. ಬಿಗ್ಬಾಸ್ ನಿರೂಪಣೆಯಿಂದ ಹಿಂದೆ ಸರಿಯಲು ಕಿಚ್ಚ ಮನಸ್ಸು ಮಾಡಿದ್ದಾರೆ. ಇದೇ ನನ್ನ ಕೊನೆಯ ಸೀಸನ್ ಎಂದು ಹೇಳಿದ್ದು, ಇದನ್ನು ಕೇಳಿದ ಬಿಗ್ಬಾಸ್ ಪ್ರೇಕ್ಷಕರಿಗೆ ಬಹಳ ಬೇಸರವಾಗಿದೆ. ಕಿಚ್ಚನ ಈ ದಿಢೀರ್ ನಿರ್ಧಾರಕ್ಕೆ ಕಾರಣವೇನು ಎಂಬ ಚರ್ಚೆಗಳು ಸಹ ಇದೀಗ ನಡೆಯುತ್ತಿವೆ. ಬಿಗ್ಬಾಸ್ ಸೀಸನ್ 11ರ ಮೇಲೆ ನೀವು ತೋರಿದ ಸ್ಪಂದನೆಗೆ ಧನ್ಯವಾದಗಳು. ಶೋ ಮತ್ತು ನನ್ನ ಮೇಲೆ ನೀವು ತೋರಿದ ಪ್ರೀತಿ ಮತ್ತು ಗೌರವ ಎಂಥದ್ದು ಎಂಬುದನ್ನು ಟಿಆರ್ಪಿ ನಂಬರ್ ಹೇಳುತ್ತಿದೆ. ಸುಮಾರು 11 ವರ್ಷಗಳ ಕಾಲ ಒಟ್ಟಿಗೆ ನಡೆದಿದ್ದೇನೆ. ಇನ್ನು ಮುಂದೆ ನಾನು ಮಾಡಬೇಕಾಗಿರುವುದನ್ನು ಮಾಡುವ ಸಮಯ ಬಂದಿದೆ. ಬಿಗ್ಬಾಸ್ ನಿರೂಪಕನಾಗಿ ಇದು ನನ್ನ ಕೊನೆಯ…

Read More

ಬೆಂಗಳೂರು: ಕನ್ನಡದ ಹಿರಿಯ ನಿರ್ದೇಶಕ ಚಿ.ದತ್ತರಾಜ್ ಇಂದು ನಿಧನರಾಗಿದ್ದು, ಅವರಿಗೆ 87 ವರ್ಷ ವಯಸ್ಸಾಗಿತ್ತು. ಚಿ.ದತ್ತರಾಜ್, ಖ್ಯಾತ ಸಾಹಿತಿ ಚಿ.ಉದಯಶಂಕರ್ ಸಹೋದರ ಆಗಿದ್ದರು. ತಮ್ಮ 87ನೇ ವಯಸ್ಸಿನಲ್ಲಿ ಅವರು ತಮ್ಮ ಜೀವನ ಪಯಣ ಮುಗಿಸಿದ್ದಾರೆ. ಬೆಂಗಳೂರಿನಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ರಾಜಕುಮಾರ್ ಅಭಿನಯದ ಕೆರಳಿದ ಸಿಂಹ, ಕಾಮನಬಿಲ್ಲು, ಅದೇ ಕಣ್ಣು, ಶೃತಿ ಸೇರಿದಾಗ, ಶಿವರಾಜಕುಮಾರ್ ಅಭಿನಯದ ಮೃತ್ಯುಂಜಯ, ಆನಂದ ಜ್ಯೋತಿ ಹಾಗೂ ಮಂಜುಳ ಅವರು ನಟಿಸಿದ್ದ ‘ರುದ್ರಿ’ ಮುಂತಾದ ಚಿತ್ರಗಳನ್ನು ಚಿ.ದತ್ತರಾಜ್ ನಿರ್ದೇಶನ ಮಾಡಿದ್ದರು. ಇಂದು ಮಧ್ಯಾಹ್ನ 1:30ಕ್ಕೆ ಹರಿಶ್ಚಂದ್ರ ಘಾಟ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಕುಡಿದ ಮತ್ತಿನಲ್ಲಿ ಬಿಯರ್ ಬಾಟಲಿಯಿಂದ ಚುಚ್ಚಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದ ಕಲಾ ವೈನ್ಸ್ ಬಾರ್ ಬಳಿ ಈ ಘಟನೆ ನಡೆದಿದೆ. ಬಿಯರ್ ಬಾಟಲಿಯಿಂದ ಚುಚ್ಚಿ ಯೋಗೇಂದರ್ ಸಿಂಗ್ ಅಲಿಯಾಸ್ ಸೋನು ಎಂಬಾತನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಹಳೇ ದ್ವೇಷದ ಹಿನ್ನೆಲೆ ಈ ಕೊಲೆ ನಡೆದಿರಬಹುದೆಂದು ಶಂಕಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More