Subscribe to Updates
Get the latest creative news from FooBar about art, design and business.
- ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್?
- ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್ ಆರ್ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ
- ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ
- ತುಮಕೂರು: ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಹಿರಿಯ ಶಾಸಕರಿಗೆ ಕಡೆಗಣನೆ; ಕಾಂಗ್ರೆಸ್ ನಲ್ಲಿ ಬಂಡಾಯದ ಕಾವು
- ಕಾರವಾರ: ಅಂಚೆ ಇಲಾಖೆಯಿಂದ ಬುಕಿಂಗ್, ಪಿಕ್–ಅಪ್ ಮತ್ತು ಡೆಲಿವರಿ ಪಾಲುದಾರರಿಗಾಗಿ ಆನ್ ಲೈನ್ ಅರ್ಜಿ
- ಗ್ಯಾಸ್ ಸಿಲಿಂಡರ್ ಕಳ್ಳತನ ಜಾಲ ಭೇದಿಸಿ ಬೀದರ್ ಪೊಲೀಸರು: ₹9.75 ಲಕ್ಷ ಮೌಲ್ಯದ 55 ಗ್ಯಾಸ್ ಸಿಲಿಂಡರ್ ವಶ | ನಾಲ್ವರು ಆರೋಪಿಗಳ ಬಂಧನ
- 560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ
- ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
Author: admin
ತುಮಕೂರು :ಬೆಂಗಳೂರು ಕಡೆಗೆ ಸಾಗುವ ರಾಷ್ಟ್ರೀಯ ಹೆದ್ದಾರಿ ತುಮಕೂರು-ಶಿರಾ ಮಾರ್ಗದಲ್ಲಿ ಇಂದು ಮುಂಜಾನೆಯಿಂದಲೂ ಟ್ರಾಫಿಕ್ ಸಮಸ್ಯೆ ಎದುರಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿನ ಟ್ರಾಫಿಕ್ ಸಮಸ್ಯೆಗೆ ವಾಹನ ಸವಾರರು ಹೈರಾಣು ಆಗಿದ್ದಾರೆ.ಇಂದು ಮುಂಜಾನೆ ಐದು ಗಂಟೆಯಿಂದಲೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿ.ಮೀ. ಗಟ್ಟಲೆ ಟ್ರಾಫಿಕ್ ನಲ್ಲಿ ವಾಹನ ಸವಾರರು ಸಿಲುಕಿ ಪರದಾಡುತ್ತಿದ್ದಾರೆ. ಆಂಬುಲೆನ್ಸ್ ಗಳು ಸಹ ಟ್ರಾಫಿಕ್ ಸಿಲುಕಿ ತುರ್ತು ತೆರಳಲು ಸಾಧ್ಯವಾಗದೆ ಟ್ರಾಫಿಕ್ ನಲ್ಲಿ ಗಂಟೆಗಟ್ಟಲೆ ಸೈರನ್ ಹೊಡೆಯುತ್ತ ನಿಂತಿವೆ. ಹಬ್ಬಕ್ಕೆ ಹೋದವರೆಲ್ಲರೂ ವಾಪಸು ಬೆಂಗಳೂರಿಗೆ ಹೋಗುತ್ತಿರುವ ಪರಿಣಾಮ ಒಂದೆಡೆ ಆದರೆ ಇನ್ನೊಂದೆಡೆ ಹೆದ್ದಾರಿಯ ಐದು ಕಡೆಗಳಲ್ಲಿ ಕಾಮಗಾರಿ ನಡೆಯುತ್ತಿದೆ. ಬೆಳಿಗ್ಗೆ ಐದು ಗಂಟೆಗೆ ಹೆದ್ದಾರಿಯಲ್ಲಿ ಸಿಲುಕಿದವರು ಬೆಳಿಗ್ಗೆ 10 ಗಂಟೆಯಾದರೂ ತುಮಕೂರು ಬಿಟ್ಟು ಹೋಗಲು ಪರದಾಡುವಂತಾಗಿದೆ. ತುಮಕೂರಿನ ಹೊರವಲಯದ ಊರುಕೆರೆ ಬಳಿ, ಬೆಳ್ಳಾವಿ ಕ್ರಾಸ್ ಬಳಿ, ನೆಲಹಾಲ್ ಸಮೀಪ, ಕಳ್ಳಂಬೆಳ್ಳ ಸಮೀಪದಲ್ಲಿ ಎರಡು ಸೇತುವೆ ಕಾಮಗಾರಿ ನಡೆಯುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ಮೀನಾ ರಾಶಿಯವರಿಗೆ 👇🏻 ಉದ್ಯೋಗದಲ್ಲಿ ಉನ್ನತ ಸ್ಥಾನವನ್ನು ಪಡೆಯುವುದು ಒಳ್ಳೆಯದು. ನಿಮ್ಮ ಮಗುವಿನಿಂದ ನೀವು ಒಳ್ಳೆಯ ಸುದ್ದಿಯನ್ನು ಪಡೆಯುತ್ತೀರಿ.ಜೀವನ ಮತ್ತು ಆಹಾರದ ಗುಣಮಟ್ಟ ಹೆಚ್ಚಾಗುತ್ತದೆ.ಹೊಸ ಸುಂದರವಾದ ಬಟ್ಟೆಗಳತ್ತ ನಿಮ್ಮ ಆಕರ್ಷಣೆ…
ಕಲಬುರಗಿ: ಮಾಜಿ ಸಚಿವ ಸಿದ್ದಿಖಿ ಹತ್ಯೆ ದಿಗ್ಧಮೆ ಉಂಟು ಮಾಡಿದೆ. ಮಹಾರಾಷ್ಟ್ರದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 15 ದಿನಗಳಿಂದ ಸಿದ್ದಿಖಿ ಹತ್ಯೆ ಸಂಚು ನಡೆದಿತ್ತು. ಇದು ಮಹಾರಾಷ್ಟ್ರ ಸರ್ಕಾರಕ್ಕೂ ಗೊತ್ತಿತ್ತು. ಆದರೂ, ತಡೆಯಲು ವಿಫಲವಾಗಿದೆ ಎಂದು ಅವರು ಆರೋಪಿಸಿದರು. ಮಹಾರಾಷ್ಟ್ರದಲ್ಲಿ ಮೂರು ಸರಕಾರಗಳ ಹೇಳಿಕೆಗಳಿಂದ ಅಧಿಕಾರಿಗಳು ಗೊಂದಲಕ್ಕೆ ಬಿದ್ದ ಪರಿಣಾಮ ಇಂತಹ ಘಟನೆ ನಡೆದಿದೆ ಎಂದು ಖೇದ ವ್ಯಕ್ತಪಡಿಸಿದ ಅವರು, ಹಾಡುಹಗಲೇ ಕಚೇರಿಗೆ ನುಗ್ಗಿ ಶೂಟ್ ಮಾಡುತ್ತಾರೆಂದರೆ ಏನರ್ಥ ಎಂದು ಪ್ರಶ್ನಿಸಿದರು. ಕಳೆದ 15 ದಿನಗಳಿಂದ ಹತ್ಯೆಗೆ ಸಂಚು ನಡೆದಿತ್ತು ಎಂದು ಅಧಿಕಾರಿಗಳಿಗೆ ಗೊತ್ತಿದೆ. ಅದಕ್ಕಾಗಿ ಅವರಿಗೆ ಭದ್ರತೆಯನ್ನು ನೀಡಲಾಗಿತ್ತು. ಆದರೂ, ಹತ್ಯೆಯಾಗಿರುವುದು ಸೂಜಿಗದ ಸಂಗತಿ ಎಂದರು. ತಮ್ಮ ಸಾವಿನ ಕುರಿತು ಖುದ್ದು ಸಿದ್ದಿಖಿ ಹೇಳಿದ್ದರು. ನನ್ನ ಹತ್ಯೆಗೆ ಸಂಚು ನಡೆಯುತ್ತಿದೆ. ಜೀವ ಉಳಿಯುತ್ತೋ ಇಲ್ಲವೋ ಎಂದು ಮುಂಬಯಿ ಪೊಲೀಸರಿಗೆ ಮಾಹಿತಿ ನೀಡಿದ್ದರು ಆದರೂ ಕೂಡ…
ಹುಬ್ಬಳ್ಳಿ: ನಿರಾಧಾರವಾದ ವಿಚಾರಗಳ ಬಗ್ಗೆಯೇ ಬಿಜೆಪಿಯವರು ಹೋರಾಟ ಮಾಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಸರ್ಕಾರ ವಾಪಸ್ಸು ಪಡೆದಿರುವ ಬಗ್ಗೆ ಬಿಜೆಪಿಯವರು ಪ್ರತಿಭಟನೆ ನಡೆಸುವ ಬಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಾ ಮಾತನಾಡಿದರು. ಸುಳ್ಳು ಮೊಕದ್ದಮೆಗಳು, ಹೋರಾಟಗಳನ್ನು ಕಾರಣವಾಗಿಸಿ ಮೊಕದ್ದಮೆಗಳಿದ್ದರೆ ಅವುಗಳ ಬಗ್ಗೆ ಸೂಕ್ತವಾಗಿ ತೀರ್ಮಾನಿಸಿ ಪ್ರಕರಣಗಳನ್ನು ವಾವಸ್ಸು ಪಡೆಯಲು ಸಚಿವಸಂಪುಟ ಉಪಸಮಿತಿಯನ್ನು ರಚಿಸಲಾಗಿದ್ದು , ಇಂತಹ ಸಮಿತಿಗಳು ಬಿಜೆಪಿ ಸೇರಿದಂತೆ ಎಲ್ಲರ ಅಧಿಕಾರವಧಿಯಲ್ಲಿಯೂ ಅಸ್ತಿತ್ವದಲ್ಲಿತ್ತು ಎಂದು ಹೇಳಿದರು. ಹುಬ್ಬಳ್ಳಿ ಗಲಭೆ ಪ್ರಕರಣದ ಸುಳ್ಳು ಪ್ರಕರಣವೆಂದು ನಿರ್ಧರಿಸಿ ಪ್ರಕರಣವನ್ನು ವಾಪಸ್ಸು ಪಡೆಯಲಾಗಿದೆ. ಈ ತೀರ್ಮಾನವನ್ನು ನ್ಯಾಯಾಲಯದ ಮುಂದೆ ಮಂಡಿಸಿದ ನಂತರವಷ್ಟೇ ಪ್ರಕರಣವನ್ನು ವಾಪಸ್ಸು ಪಡೆಯಲು ಸಾಧ್ಯ ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ದಾವಣಗೆರೆ: ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನಾನೇ ಅಭ್ಯರ್ಥಿ ಎಂದು ಒಂದೆಡೆ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡುತ್ತಿದ್ದಾರೆ. ಇದೇ ಮಾದರಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೂಡ ಹೇಳಿಕೆ ನೀಡಿದ್ದು, ಚನ್ನಪಟ್ಟಣದಲ್ಲಿ ಯಾರೇ ಅಭ್ಯರ್ಥಿ ಯಾದರೂ ನಾನೇ ಎನ್ ಡಿಎ ಅಭ್ಯರ್ಥಿ ಎಂದು ಹೇಳಿಕೆ ನೀಡಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಕೇಸ್ ವಾಪಸ್ ಪಡೆದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಕೇಸ್ ವಾಪಸ್ ಪಡೆದ ವಿಚಾರ ನೋಡಿದರೆ ರಾಜ್ಯ ಸರ್ಕಾರ ಗಲಭೆಕೋರರಿಗೆ ರಕ್ಷಣೆ ಕೊಡುತ್ತಿದೆ ಎಂದು ದೂರಿದರು. ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ದೂರು ದಾಖಲಿಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನನ್ನ ಮೇಲೆ ಅವರು ದೂರು ದಾಖಲು ಮಾಡಿದ್ದಾರೆ. ಅದಕ್ಕೆ ನಾನು ನ್ಯಾಯಾಲಯದಲ್ಲಿ ಉತ್ತರ ಕೊಡುತ್ತೇನೆ ಎಂದು ತಿಳಿಸಿದರು. 3–4 ಸಾವಿರ ಪುಟಗಳಷ್ಟು ಚಾರ್ಜ್ ಶೀಟ್ ಹಾಕುತ್ತಾರೆ. 12 ವರ್ಷದಿಂದ ನನ್ನ ಮೇಲೆ ಕೇಸ್ ಹಾಗೆ ಉಳಿಸಿಕೊಂಡಿದ್ದಾರೆ. ಈಗ…
ಹುಬ್ಬಳ್ಳಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಗೆ ಭೇಟಿ ನೀಡಿದ ವೇಳೆ ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಕಾರಿಗೆ ಕಪ್ಪುಪಟ್ಟಿ ಪ್ರದರ್ಶಿಸಿದ ಘಟನೆ ನಡೆಯಿತು. 2022 ರಲ್ಲಿ ಹಳೆ ಹುಬ್ಬಳ್ಳಿ ಗಲಭೆ ಕೇಸ್ ಅನ್ನು ಇತ್ತೀಚಿಗೆ ರಾಜ್ಯ ಸರ್ಕಾರ ಹಿಂಪಡೆದಿತ್ತು. ಈ ಒಂದು ವಿಚಾರವಾಗಿ ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದರು. ಇಂದು ಸಿಎಂ ಸಿದ್ದರಾಮಯ್ಯ ಕಾರಿಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶಿಸಿದರು. ಹುಬ್ಬಳ್ಳಿಯ ಗೋಕುಲ್ ರೋಡ್ ನಲ್ಲಿ ಕಪ್ಪು ಬಟ್ಟೆ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಬಿಜೆಪಿ ಕಾರ್ಯಕರ್ತರಾದ ಜಗದೀಶ್ ಕಂಬಳಿ, ಮಂಜುನಾಥ್ ಮತ್ತು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮುಂಬೈ: ಮುಂಬೈ ಸೆಂಟ್ರಲ್ ಕಾರ್ಶೆಡ್ ಪ್ರವೇಶಿಸುವಾಗ ಭಾನುವಾರ ಮಧ್ಯಾಹ್ನ ಖಾಲಿ ಇಎಂಯು ರೈಲಿನ ಎರಡು ಬೋಗಿಗಳು ಹಳಿತಪ್ಪಿವೆ ಎಂದು ಪಶ್ಚಿಮ ರೈಲ್ವೆ ಹೇಳಿದೆ. ರೇಕ್ ಖಾಲಿಯಾಗಿದ್ದರಿಂದ, ಘಟನೆಯಲ್ಲಿ ಯಾವುದೇ ವ್ಯಕ್ತಿ ಗಾಯಗೊಂಡಿಲ್ಲ ಎಂದು ರೈಲ್ವೆ ತಿಳಿಸಿದೆ. ಪಶ್ಚಿಮ ರೈಲ್ವೆ ತನ್ನ ಪೋಸ್ಟ್ನಲ್ಲಿ, “12: 10 ರ ಸುಮಾರಿಗೆ ಮುಂಬೈ ಸೆಂಟ್ರಲ್ ಗೆ ಪ್ರವೇಶಿಸುವಾಗ ಒಂದು ಇಎಂಯು ಖಾಲಿ ರೇಕ್ ನ ಎರಡು ಬೋಗಿಗಳು ಹಳಿ ತಪ್ಪಿವೆ. ಚರ್ಚ್ ಗೇಟ್ ನಿಂದ ಮುಂಬೈ ಸೆಂಟ್ರಲ್ ವರೆಗಿನ ನಿಧಾನಗತಿಯ ಟ್ರ್ಯಾಕ್ ಅನ್ನು ತಡೆಹಿಡಿಯಲಾಗಿದೆ ಮತ್ತು ರೈಲುಗಳನ್ನು ಚರ್ಚ್ ಗೇಟ್ ನಿಂದ ಮುಂಬೈ ಸೆಂಟ್ರಲ್ ನಡುವಿನ ವೇಗದ ಮಾರ್ಗಕ್ಕೆ ತಿರುಗಿಸಲಾಗಿದೆ ಮತ್ತು ರೈಲು ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮೈಸೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ನಾನೇ ಅಭ್ಯರ್ಥಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೊಂಡಿದ್ದಾರೆ. ನಾನಾ ಅಭ್ಯರ್ಥಿ ಎಂದಿರುವ ಡಿ.ಕೆ.ಶಿವಕುಮಾರ್ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಕ್ಷದಿಂದ ಯಾರು ಬೇಕಾದರೂ ನಿಲ್ಲಲಿ ಎಂದು ಸವಾಲು ಹಾಕಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಎಂಪಿ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಹಿನ್ನಡೆ ಆಗಿತ್ತು. ಎಂಎಲ್ ಎ ಚುನಾವಣೆಯಲ್ಲಿಯೂ ಹೆಚ್ಚು ಹಿನ್ನಡೆಯಾಗಿತ್ತು. ಈಗ ನಮ್ಮ ಬೇಸ್ ಸ್ಟ್ರಾಂಗ್ ಮಾಡುತ್ತಿದ್ದೇವೆ. ಜನ ಓಟ್ ಹಾಕಿ ಗೆಲ್ಲಿಸುತ್ತಾರೆಂಬ ನಂಬಿಕೆ ನನಗಿದೆ ಎಂದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಬಗ್ಗೆ ಮಾತನಾಡಿದ ಅವರು, ‘ಇನ್ನೂ ಹತ್ತು ವರ್ಷ ಅವರೇ ಸಿಎಂ ಆಗಿ ಇರುತ್ತಾರೆ. ಬಿಜೆಪಿಯವರು ಇನ್ನೂ ಹತ್ತು ವರ್ಷ ಇದೇ ರೀತಿ ಹೇಳ್ತಾನೇ ಇರ್ತಾರೆ’ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ರಾಯಚೂರು: ಕಾರು ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಯುವತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ವಿಜಯದಶಮಿ ಹಬ್ಬದಂದು ರಾತ್ರಿ ತಾತನಿಗೆ ಬನ್ನಿ ಕೊಡಲೆಂದು ಹೋಗಿದ್ದ ಮೊಮ್ಮಕ್ಕಳು ಬನ್ನಿ ಕೊಟ್ಟಿ ವಾಪಸ್ ಬರುತ್ತಿದ್ದ ವೇಳೆ ಅಪಘಾತಕ್ಕೀಡಾಗಿದ್ದಾರೆ. ರಾಯಚೂರಿನ ಡಿಸಿ ಬಂಗಲೆ ಬಳಿ ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ. 20 ವರ್ಷದ ಸಾಕ್ಷಿ ಮೃತ ಯುವತಿ. ಇನ್ನೋರ್ವ ಯುವತಿ ಸಂಜನಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ ಕಾರು ಚಾಲಕ ಸ್ಥಳದಲ್ಲೇ ಕಾರು ಬಿಟ್ಟು ಎಸ್ಕೇಪ್ ಆಗಿದ್ದಾನೆ. ರಾಯಚೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಟಾಟಾ ಏಸ್ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಚಾಮರಾಜಪೇಟೆಯ ಗುಡ್ಡಳ್ಳಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬಾಲಕ ನೇಲೆ ಟಾಟಾ ಏಸ್ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296