Subscribe to Updates
Get the latest creative news from FooBar about art, design and business.
- ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್?
- ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್ ಆರ್ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ
- ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ
- ತುಮಕೂರು: ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಹಿರಿಯ ಶಾಸಕರಿಗೆ ಕಡೆಗಣನೆ; ಕಾಂಗ್ರೆಸ್ ನಲ್ಲಿ ಬಂಡಾಯದ ಕಾವು
- ಕಾರವಾರ: ಅಂಚೆ ಇಲಾಖೆಯಿಂದ ಬುಕಿಂಗ್, ಪಿಕ್–ಅಪ್ ಮತ್ತು ಡೆಲಿವರಿ ಪಾಲುದಾರರಿಗಾಗಿ ಆನ್ ಲೈನ್ ಅರ್ಜಿ
- ಗ್ಯಾಸ್ ಸಿಲಿಂಡರ್ ಕಳ್ಳತನ ಜಾಲ ಭೇದಿಸಿ ಬೀದರ್ ಪೊಲೀಸರು: ₹9.75 ಲಕ್ಷ ಮೌಲ್ಯದ 55 ಗ್ಯಾಸ್ ಸಿಲಿಂಡರ್ ವಶ | ನಾಲ್ವರು ಆರೋಪಿಗಳ ಬಂಧನ
- 560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ
- ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
Author: admin
ಕೂಡ್ಲಿಗಿ (ವಿಜಯನಗರ ಜಿಲ್ಲೆ): ಕೋಡಿ ಬಿದ್ದ ಕೆರೆಯ ಬಳಿ ಸೆಲ್ಫಿ ತೆಗೆಯುತ್ತಿದ್ದ ವೇಳೆ ಯುವಕನೊಬ್ಬ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಗಂಡಬೊಮ್ಮನಹಳ್ಳಿ ಕೆರೆ ಶುಕ್ರವಾರ ನಡೆದಿದೆ. ತಾಲ್ಲೂಕಿನ ಕೆ.ದಿಬ್ಬದಹಳ್ಳಿ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ಪಾಲಯ್ಯ ಅವರ ಮಗ ಚೇತನ್ ಕುಮಾರ್ (21) ಮೃತ ಯುವಕ ಎಂದು ತಿಳಿದು ಬಂದಿದೆ. ತನ್ನ ಕುಟುಂಬಸ್ಥರ ಜೊತೆಗೆ ಕೋಡಿಬಿದ್ದ ಕೆರೆಯನ್ನು ನೋಡಲು ಚೇತನ್ ತೆರಳಿದ್ದ. ಇಬ್ಬರು ಸ್ನೇಹಿತರು ತುಂಬಿದ ಕೆರೆಯ ಕೋಡಿ ಬಳಿ ಫೋಟೋ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಈ ವೇಳೆ ಕಾಲು ಜಾರಿ ಚೇತನ್ ಕೆರೆಗೆ ಬಿದ್ದಿದ್ದು, ಆತನನ್ನು ರಕ್ಷಿಸಲು ಜೊತೆಗಿದ್ದವರು ಸಾಕಷ್ಟು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬಳ್ಳಾರಿ: ಜೈಲಲ್ಲಿ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಗೆ ಆರ್ಥೋಪೆಡಿಕ್ ತಜ್ಞವೈದ್ಯರಿಂದ ತಪಾಸಣೆ ನಡೆಸಲಾಗಿದ್ದು ಇದೀಗ ನ್ಯೂರೋ ಸರ್ಜನ್ ರಿಂದ ದರ್ಶನ್ ತಪಾಸಣೆ ನಡೆಯುತ್ತಿದೆ. ದರ್ಶನ್ ಬೆನ್ನು ನೋವಿನಿಂದ ಬಳಲುತ್ತಿರುವ ಹಿನ್ನಲೆ ದರ್ಶನ್ ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕರೆತರಲಾಗಿದ್ದು ವೈದ್ಯರಿಂದ ತಪಾಸಣೆ ನಡೆಸಲಾಗುತ್ತಿದೆ. ಕಳೆದ ವಾರ ಅರ್ಥೋಪೆಡಿಕ್ ವೈದ್ಯರು ತಪಾಸಣೆ ಮಾಡಿದ್ದರು ಇದೀಗ ನ್ಯೂರೋ ಸರ್ಜನ್ ಡಾ.ವಿಶ್ವನಾಥ ಅವರಿಂದ ದರ್ಶನ್ ತಪಾಸಣೆ ನಡೆಸಲಾಗುತ್ತಿದೆ. ಜೈಲಿನ ಅಧಿಕಾರಿಗಳಿಗೆ ವೈದ್ಯಕೀಯ ರಿಪೋರ್ಟ್ ಕೊಡೋ ಮುನ್ನ ನ್ಯೂರೋ ಸರ್ಜನ್ ಪರಿಶೀಲಿಸಬೇಕಿತ್ತು. ನ್ಯೂರೋ ಸರ್ಜನ್ ವರದಿ ಬಳಿಕ ಅರ್ಥೋಪೆಡಿಕ್ ವೈದ್ಯರು ದರ್ಶನ್ ಬೆನ್ನು ನೋವಿನ ಪೂರ್ಣ ವರದಿ ನೀಡಲಿದ್ದಾರೆ. ವೈದ್ಯರ ವರದಿ ಆಧಾರದಲ್ಲಿ ದರ್ಶನ್ ಬೆಂಗಳೂರಿಗೆ ಶಿಫ್ಟ್ ಆಗುವ ಬಗ್ಗೆ ನಿರ್ಧಾರವಾಗಲಿದೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕ್ಯಾಲಿಫೋರ್ನಿಯಾ: ಸಾಕು ನಾಯಿ ಕಚ್ಚಿದ ಪರಿಣಾಮ 1 ತಿಂಗಳ ಮಗು ಸಾವನ್ನಪ್ಪಿರುವ ದಾರುಣ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. ಮನೆಯವರು ಮಗುವಿನ ಮೇಲೆ ಗಮನ ನೀಡದ ಪರಿಣಾಮ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಕ್ಯಾಲಿಫೋರ್ನಿಯಾದ ಟೊರೆನ್ಸ್‌ನಲ್ಲಿ ಮಾರ್ಥಾ ಅವೆನ್ಯೂನಲ್ಲಿರುವ ಮನೆಯಲ್ಲಿ ಮಂಗಳವಾರ ಮಧ್ಯಾಹ್ನದ ಸುಮಾರಿಗೆ 1 ತಿಂಗಳ ಮಗುವಿಗೆ ನಾಯಿ ಕಚ್ಚಿತ್ತು. ಈ ವೇಳೆ ಕುಟುಂಬಸ್ಥರು ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಗು ಬದುಕುಳಿಯಲಿಲ್ಲ. ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಮಗುವಿನ ಕುಟುಂಬದ ಸ್ನೇಹಿತೆ ಫಾಯೆ ತೋಹಿಡಿ, ಇದು ನಿಜಕ್ಕೂ ದುರಂತ, ಮಗುವಿನ ಮೇಲೆ ಹೆಚ್ಚಿನ ಗಮನ ನೀಡಬೇಕಿತ್ತು ಎಂದು ಹೇಳಿದ್ದಾರೆ. ಟಾರೆನ್ಸ್ ಅನಿಮಲ್ ಕಂಟ್ರೋಲ್ ಅಧಿಕಾರಿಗಳು ಮಗುವನ್ನು ಕಚ್ಚಿದ ನಾಯಿಯನ್ನು ಮನೆಯಿಂದ ಹೊರತೆಗೆದಿದ್ದಾರೆ ಮತ್ತು ಮುಂದಿನ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಚೆನ್ನೈ: ತಮಿಳುನಾಡಿನ ತಿರುವಳ್ಳುವರ್ ಜಿಲ್ಲೆಯ ಕಾವರೈಪೇಟೈ ಸಮೀಪದಲ್ಲಿ ಮೈಸೂರು-ದರ್ಭಾಂಗ ಬಾಗ್‌ಮತಿ ಎಕ್ಸ್‌ಪ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಶುಕ್ರವಾರ ರಾತ್ರಿ ಮೈಸೂರು-ದರ್ಭಾಂಗ ಬಾಗ್‌ಮತಿ ಎಕ್ಸ್‌ಪ್ರೆಸ್, ಗೂಡ್ಸ್ ರೈಲಿಗೆ ಡಿಕ್ಕಿಯಾಗಿ ಸುಮಾರು 19 ಮಂದಿ ಗಾಯಗೊಂಡಿದ್ದರು. 12ರಿಂದ 13 ಬೋಗಿಗಳು ಹಳಿ ತಪ್ಪಿದ್ದವು. ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಈ ಅವಘಡವು ಒಡಿಶಾದ ಬಾಲೇಶ್ವರದಲ್ಲಿ ನಡೆದ ದುರ್ಘಟನೆಯನ್ನು ನೆನಪಿಸುವಂತಿದೆ ಎಂದಿದ್ದಾರೆ. ಹಲವು ಅಪಘಾತಗಳಲ್ಲಿ ಅನೇಕ ಜೀವಗಳನ್ನು ಕಳೆದುಕೊಂಡರೂ ಯಾವುದೇ ಪಾಠ ಕಲಿತಂತಿಲ್ಲ. ಇದಕ್ಕೆ ಉನ್ನತ ಮಟ್ಟದಿಂದಲೇ ಹೊಣೆಗಾರರಾಗುತ್ತಾರೆ. ಸರ್ಕಾರ ಎಚ್ಚೆತ್ತುಕೊಳ್ಳಲು ಇನ್ನೆಷ್ಟು ಕುಟುಂಬಗಳು ಬಲಿಯಾಗಬೇಕು ಎಂದು ಪ್ರಶ್ನಿಸಿದ್ದಾರೆ. ಕಳೆದ ವರ್ಷ ಒಡಿಶಾದ ಬಾಲೇಶ್ವರದಲ್ಲಿ ಎರಡು ಪ್ರಯಾಣಿಕ ರೈಲುಗಳು ಮತ್ತು ಸರಕು ಸಾಗಣೆ ರೈಲು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 293 ಮಂದಿ ಮೃತಪಟ್ಟಿದ್ದರು. ಘಟನೆಯಲ್ಲಿ 1,200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಬೆಂಗಳೂರು: ನ.1 ರಂದು ಕಡ್ಡಾಯವಾಗಿ ಎಲ್ಲಾ ಕಂಪನಿ, ಕಚೇರಿಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು. ಬಾವುಟ ಹಾರಿಸದ ಕಂಪನಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳುತ್ತದೆ, ಕನ್ನಡ ಪರ ಸಂಘಟನೆಗಳು ಕಾನೂನು ಕೈಗೆ ತೆಗೆದುಕೊಂಡರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ರಾಜ್ಯೋತ್ಸವ ಆಚರಣೆ ಮಾಡದೇ ಇರುವ ಸಂಸ್ಥೆಗಳ ವಿರುದ್ಧ ಸರ್ಕಾರವೇ ಕ್ರಮ ಕೈಗೊಳ್ಳಲಿದೆ, ಕನ್ನಡ ಪರ ಸಂಘಟನೆಗಳು ಗಲಾಟೆ ಮಾಡಿ ಬೆದರಿಕೆ ಹಾಕಬಾರದು ಎಂದರು. ಈ ಬಾರಿ 50 ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಗುತ್ತಿದೆ.ನವೆಂಬರ್ 1 ರಂದು ಎಲ್ಲಾ ಶಾಲಾ ಕಾಲೇಜುಗಳು, ಎಲ್ಲಾ ಕಂಪನಿ, ಕಾರ್ಖಾನೆಗಳಲ್ಲಿ ಕನ್ನಡ ಬಾವುಟ ಹಾರಿಸಬೇಕು ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಶೋ ರೂಮ್‌ನಿಂದ ಕಾರು ಕದ್ದ ಮೂವರನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಗೆಳತಿಯನ್ನು ಹೊಸ ಕಾರಿನಲ್ಲಿ ಡ್ರೈವ್ ಗೆ ಕರೆದೊಯ್ಯಲು ಆರೋಪಿಗಳು ಈ ಕೃತ್ಯ ಎಸಗಿದ್ದಾರಂತೆ! ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ವಿಶ್ವವಿದ್ಯಾನಿಲಯದ ಈ ಮೂವರು ವಿದ್ಯಾರ್ಥಿಗಳು ಬಂಧಿತ ಆರೋಪಿಗಳಾಗಿದ್ದಾರೆ. ಸೆಪ್ಟೆಂಬರ್ 26 ಕಾರು ಕಳವು ನಡೆದಿತ್ತು. ಆರೋಪಿ ಮತ್ತವನ ಸ್ನೇಹಿತರೂ ಸೇರಿದಂತೆ ಮೂವರು ಕಾಲೇಜು ವಿದ್ಯಾರ್ಥಿಗಳು ಗ್ರೇಟರ್ ನೋಯ್ಡಾದ ಕಾರ್ ಬಜಾರ್‌ನಲ್ಲಿ ಹೊಚ್ಚಹೊಸ ಹ್ಯುಂಡೈ ವೆನ್ಯೂ ಕಾರಿನ ಟೆಸ್ಟ್ ಡ್ರೈವ್ ಕೇಳಿದ್ದು, ಕಾರ್ ಡೀಲರ್ ವಾಹನವನ್ನು ಹೊರತೆಗೆದು ಆರೋಪಿ ವಿದ್ಯಾರ್ಥಿ ಮತ್ತವನ ಜೊತೆ ಬಂದಿದ್ದ ಇಬ್ಬರೊಂದಿಗೆ ಕುಳಿತಿದ್ದಾನೆ. ಪೊಲೀಸರ ಪ್ರಕಾರ, ಸ್ವಲ್ಪ ದೂರ ಹೋದ ನಂತರ ಡೀಲರ್ ನನ್ನು ಕಾರಿನಿಂದ ತಳ್ಳಿ ಮೂವರೂ ಪರಾರಿಯಾಗಿದ್ದಾರೆ. 100ಕ್ಕೂ ಹೆಚ್ಚು ಸಿಸಿಟಿವಿಗಳ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಲಾಗಿದ್ದು, ಕೊನೆಗೂ ಮೂವರು ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ನವದೆಹಲಿ: ರಾಮರಾಜ್ಯ ಅಂದ್ರೆ ಎಲ್ಲರಿಗೂ ಶಿಕ್ಷಣ, ಆರೋಗ್ಯ ಸಿಗಬೇಕು ಎಂದು ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಪೂರ್ವ ದೆಹಲಿಯ ಮಯೂರ ವಿಹಾರದಲ್ಲಿ ರಾಮಲೀಲಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದಲ್ಲಿ ಯಾವುದೇ ಮಕ್ಕಳು ಅವಿದ್ಯಾವಂತರಾಗಿ ಉಳಿಯಬಾರದು. ಆರೋಗ್ಯದ ಸೌಲಭ್ಯ ಸಿಗದೇ ಹೋಗಬಾರದು ಎಂದು ಹೇಳಿದರು. ದೆಹಲಿಯ ಜನರ ಸೇವೆಗಾಗಿ ಆಮ್ ಆದ್ಮಿ ಪಕ್ಷವು ರಾಮರಾಜ್ಯದ ಆದರ್ಶಗಳನ್ನು ಪಾಲಿಸುತ್ತಿದೆ ಎಂದು ನುಡಿದರು. ಶ್ರೀರಾಮ ದೇವರ ನ್ಯಾಯ, ಸಮಾನತೆ, ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು’ ಎಂದು ಅವರು ಮನವಿ ಮಾಡಿದರು. ಭಾರತೀಯ ಹಾಗೂ ಹಿಂದೂ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ರಾಮನ ಆದರ್ಶಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ರಾಮಲೀಲಾದಂತಹ ಕಾರ್ಯಕ್ರಮಗಳನ್ನು ವೀಕ್ಷಿಸುವಂತೆ ಮಾಡುವ ಮೂಲಕ ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಮಕ್ಕಳಿಗೂ ಪಸರಿಸಬೇಕು ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ದೇಶದಾದ್ಯಂತ ಸಂಭ್ರಮದ ವಿಜಯದಶಮಿ ಆಚರಿಸಲಾಗುತ್ತಿದೆ. ಸಡಗರದ ವಿಜಯದಶಮಿ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಜನತೆಗೆ ಶುಭಾಶಯ ತಿಳಿಸಿದ್ದಾರೆ. ‘ವಿಜಯದಶಮಿಯ ಶುಭ ಸಂದರ್ಭದಲ್ಲಿ, ನಾನು ಎಲ್ಲಾ ದೇಶವಾಸಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇದು ಅನ್ಯಾಯದ ವಿರುದ್ಧ ನ್ಯಾಯದ ವಿಜಯದ ಹಬ್ಬವಾಗಿದೆ. ಈ ಹಬ್ಬವು ಸತ್ಯ ಮತ್ತು ನೈತಿಕತೆಯ ಮೌಲ್ಯಗಳಲ್ಲಿ ನಮ್ಮ ನಂಬಿಕೆಯ ಸಂಕೇತವಾಗಿದೆ. ಈ ಸುಸಂದರ್ಭದಲ್ಲಿ ಅತ್ಯಂತ ಕ್ಲಿಷ್ಟಕರ ಸಂದರ್ಭದಲ್ಲೂ ನ್ಯಾಯದ ಪರವಾಗಿ ನಿಲ್ಲುತ್ತೇವೆ ಎಂದು ಪ್ರತಿಜ್ಞೆ ಮಾಡಬೇಕು. ಈ ಪವಿತ್ರ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರಲಿ ಮತ್ತು ನಮ್ಮ ದೇಶವು ಯಾವಾಗಲೂ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯಲಿ ಎಂದು ನಾನು ಬಯಸುತ್ತೇನೆ ದೇಶದ ಜನತೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶುಭಾಶಯ ತಿಳಿಸಿದ್ದಾರೆ. ‘ದುರ್ಗಾ ಮಾತೆ ಮತ್ತು ಪ್ರಭು ಶ್ರೀರಾಮನ ಆಶೀರ್ವಾದದಿಂದ ನೀವೆಲ್ಲರೂ ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ…
ಉತ್ತರ ಪ್ರದೇಶ: ಎಲೆಕ್ಟ್ರಿಕಲ್ ಬೋರ್ಡ್‌ನಿಂದ ಬೆಂಕಿ ಹೊತ್ತಿಕೊಂಡು ಪಟಾಕಿ ಮತ್ತು ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಭೀಕರ ಅಗ್ನಿ ಅನಾಹುತ ನೋಯ್ಡಾದ ಸೆಕ್ಟರ್ 27 ರಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಗ್ನಿಶಾಮಕದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ. ಆದರೆ ಇಡೀ ಮಹಡಿ ಸುಟ್ಟುಹೋಗಿದೆ. ನೋಯ್ಡಾದ ಸೆಕ್ಟರ್ 27ರಲ್ಲಿ ಶುಕ್ರವಾರ ರಾತ್ರಿ ಮನೆಯೊಂದರಲ್ಲಿ ತೀವ್ರ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡ ಎರಡನೇ ಮಹಡಿಯಲ್ಲಿ ಸಿಲುಕಿದ್ದ ಶ್ವೇತಾ ಸಿಂಗ್ ಸಾವನ್ನಪ್ಪಿದ್ದಾರೆ. ಆಕೆಯ ಸೋದರ ಸಂಬಂಧಿ ನಮ್ರತಾ ಸಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಗ್ನಿಶಾಮಕ ದಳ ಮೂರು ಅಗ್ನಿಶಾಮಕ ವಾಹನಗಳೊಂದಿಗೆ ಬೆಂಕಿಯನ್ನು ಹತೋಟಿಗೆ ತಂದಿದೆ. ಪೊಲೀಸರ ಪ್ರಕಾರ, ಮೊದಲಿಗೆ ಬೆಂಕಿಯು ವಿದ್ಯುತ್ ಬೋರ್ಡ್‌ನಲ್ಲಿ ಪ್ರಾರಂಭವಾಯಿತು. ಮನೆಯಲ್ಲಿ ಶೇಖರಿಸಿಟ್ಟಿದ್ದ ಪಟಾಕಿಗಳು ಹೊತ್ತಿಕೊಂಡಾಗ ಅದು ಬೇಗನೆ ಹರಡಿ, ಬೆಂಕಿಯ ಜ್ವಾಲೆಯು ತೀವ್ರಗೊಂಡು ಇಡೀ ಮನೆಗೆ ಆವರಿಸಿದೆ. ಹೊಗೆಯಿಂದಾಗಿ ಎರಡನೇ ಮಹಡಿಯಲ್ಲಿ ವಾಸಿಸುತ್ತಿದ್ದ ಇಬ್ಬರು ಮಹಿಳೆಯರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದಾರೆ ಎಂದು ರಕ್ಷಣಾ…
ಮೈಸೂರು : ವಿಶ್ವ ಪ್ರಸಿದ್ಧ ಮೈಸೂರು ದಸರಾ ನೋಡಲು ಖುಷಿಯಾಗುತ್ತಿದೆ. ಜೀವನದಲ್ಲಿ ಮೊದಲ ಬಾರಿಗೆ ದಸರಾ ನೋಡುತ್ತಿರುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮೈಸೂರಿನ ಶಾರದಾ ದೇವಿನಗರದ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರನ್ನು ಸಚಿವರು ಭೇಟಿಯಾದರು. ಈ ವೇಳೆ ಮಾತನಾಡಿದ ಸಚಿವರು ಜೀವನದಲ್ಲಿ ಒಮ್ಮೆಯಾದರೂ ದಸರಾ ನೋಡಬೇಕು. ಇಂದು ದಸರಾ ನೋಡುವ ಕನಸು ಈಡೇರುತ್ತಿದೆ ಎಂದರು. ದಸರಾ ನೋಡಲು ಖುಷಿಯಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಜೊತೆಯಲ್ಲಿ ದಸರಾ ನೋಡುತ್ತಿರುವೆ. ದಸರಾ ವೈಭವವನ್ನು ನೋಡುವುದೇ ಚಂದ ಎಂದು ಸಚಿವರು ತಿಳಿಸಿದರು. ಸಿಎಂ ಭೇಟಿಯಾದ ಸಚಿವರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಚಿವರು ಕೆಲಕಾಲ ಚರ್ಚೆ ನಡೆಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ, ಸಚಿವ ಕೆ.ವೆಂಕಟೇಶ್, ಶಾಸಕರಾದ ಕೃಷ್ಣಮೂರ್ತಿ, ಡಿ.ರವಿ ಶಂಕರ್, ದರ್ಶನ್ ದ್ರುವನಾರಾಯಣ್, ಅನಿಲ್ ಚಿಕ್ಕಮಾದು ಸೇರಿದಂತೆ ಹಲವರು ಉಪಸ್ಥಿತರಿದ್ದರು. ರೈಲು ದುರಂತಕ್ಕೆ ಬೇಸರ: ತಮಿಳುನಾಡಿನ ಪೆರಂಬೂರು ಸಮೀಪ ಮೈಸೂರು ದರ್ಬಾಂಗ್…