Author: admin

ತುಮಕೂರು:  ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ,ಅಕ್ಟೋಬರ್ 18, 19 ಹಾಗೂ 20ರಂದು 3 ದಿನಗಳ ಕಾಲ ಜಿಲ್ಲೆಗೆ ಭೇಟಿ ನೀಡಲಿದ್ದು, ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಅಕ್ಟೋಬರ್ 18ರಂದು ಬೆಳಿಗ್ಗೆ 10 ರಿಂದ ಮ.1:30 ಹಾಗೂ ಮಧ್ಯಾಹ್ನ 2:30 ರಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕ ಕುಂದು ಕೊರತೆಗಳ ವಿಚಾರಣೆ/ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎ.ವಿ.ಲಕ್ಷ್ಮೀನಾರಾಯಣ ಅವರು ತಿಳಿಸಿದರು. ನಗರದ ಪರಿವೀಕ್ಷಣಾ ಮಂದಿರದಲ್ಲಿ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಗೆ ಸಂಬಂಧಿಸಿದಂತೆ ಈಗಾಗಲೇ ಲೋಕಾಯುಕ್ತಕ್ಕೆ 182ಕ್ಕೂ ಹೆಚ್ಚು ದೂರು ಅರ್ಜಿಗಳು ಸಲ್ಲಿಕೆಯಾಗಿವೆ. ಜಿಲ್ಲೆಯ ಯಾವುದೇ ಸರ್ಕಾರಿ ಅಧಿಕಾರಿ/ಸಿಬ್ಬಂದಿ ಕಾನೂನು ಬದ್ಧವಾಗಿ ತಮ್ಮ ಕರ್ತವ್ಯ ನಿರ್ವಹಿಸದೆ ವಿನಾಕಾರಣ ವಿಳಂಬ ಮಾಡುತ್ತಿರುವ, ಕೆಲಸ ಮಾಡದೆ ತೊಂದರೆ ಉಂಟುಮಾಡುತ್ತಿರುವ ಬಗ್ಗೆ ಯಾವುದೇ ದೂರುಗಳಿದ್ದಲ್ಲಿ ಸಾರ್ವಜನಿಕರು ನೇರವಾಗಿ ಈ ಸಭೆಗೆ ಆಗಮಿಸಿ ಲಿಖಿತ ರೂಪದಲ್ಲಿ ನೀಡಬಹುದಾಗಿದೆ. ಸಭೆಯಲ್ಲಿ ಎಲ್ಲಾ…

Read More

ತುಮಕೂರು: ದಸರಾ ಉತ್ಸವ ಪ್ರಯುಕ್ತ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಚಾಮುಂಡೇಶ್ವರಿ ದೇವಿಯು ಅಕ್ಟೋಬರ್ 11ರ ಶುಕ್ರವಾರ ಆಯುಧ ಪೂಜೆ ದಿನದಂದು ಸಿದ್ಧಿದಾತ್ರಿ ಅಲಂಕಾರದಲ್ಲಿ ಭಕ್ತರಿಗೆ ದರ್ಶನ ನೀಡಿ ಅನುಗ್ರಹಿಸಲಿದ್ದಾಳೆ ಎಂದು ದಸರಾ ಉತ್ಸವದ ಧಾರ್ಮಿಕ ಆಚರಣೆ ಸಮಿತಿ ಅಧ್ಯಕ್ಷ ಹಾಗೂ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ತಿಳಿಸಿದ್ದಾರೆ. ಶರದ್ ಋತು ಅಶ್ವಿಜ ಮಾಸ ಶುಕ್ಲ ಪಕ್ಷದ ಶುಕ್ರವಾರ ಬೆಳಿಗ್ಗೆ 5:30 ಗಂಟೆಗೆ ಬ್ರಾಹ್ಮಿ ಮುಹೂರ್ತದಲ್ಲಿ ಸಿದ್ಧಿದಾತ್ರಿ ದೇವಿಗೆ ಪುಣ್ಯಾಹ, ಗಣಪತಿ ಪೂಜೆ, ಪ್ರಧಾನ ಕಳಶರಾಧನೆ, ಪಂಚಾಮೃತ ಅಭಿಷೇಕ, ಅಗ್ನಿ ಪ್ರತಿಷ್ಠಾಪನೆ, “ಶ್ರೀ ಗಾಯಿತ್ರಿ ಹೋಮ”, ಲಘು ಪೂರ್ಣಾಹುತಿ, ಅಷ್ಟಾವದಾನ ಸೇವೆ, ಮಂತ್ರಪುಷ್ಪ ರಾಷ್ಟ್ರಾಶಿರ್ವಾದ, ಬೆಳಿಗ್ಗೆ 9:30 ಗಂಟೆಗೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ಸಂಜೆ 4:30 ಗಂಟೆಗೆ ವೇದಪಾರಾಯಣ, ದುರ್ಗಾಸಪ್ತಶಶಿ ಪಾರಾಯಣ, ಅಷ್ಟಾವದಾನ, ಕುಂಕುಮಾರ್ಚನೆ, ರಾ.7:30 ಗಂಟೆಗೆ ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ. ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು : ದಸರಾ ಪ್ರಯುಕ್ತ ನಗರದ ಸರ್ಕಾರಿ…

Read More

ತುಮಕೂರು:  ಜಿಲ್ಲೆಯಲ್ಲಿ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿರುವ ತುಮಕೂರು ದಸರಾ ಉತ್ಸವವನ್ನು ಸಂಪ್ರದಾಯಬದ್ಧವಾಗಿ ಮೈಸೂರು ದಸರಾ ಮಾದರಿಯಲ್ಲಿ ನಡೆಸುತ್ತಿರುವುದು ಸಂತಸ ತಂದಿದೆ ಎಂದು ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದರು. ಇದಕ್ಕೂ ಮುನ್ನ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ದಸರಾ ಅಂಗವಾಗಿ ಪ್ರತಿಷ್ಟಾಪಿಸಲಾಗಿರುವ ಮಹಾಗೌರಿ ಅಲಂಕಾರದಲ್ಲಿದ್ದ ಚಾಮುಂಡೇಶ್ವರಿ ದೇವಿಗೆ ತಮ್ಮ ಧರ್ಮಪತ್ನಿ ಶೈಲಜ ಸೋಮಣ್ಣ ಅವರೊಂದಿಗೆ ಪೂಜೆ ಸಲ್ಲಿಸಿದರು. ವಿ.ಸೋಮಣ್ಣ ದಂಪತಿಗಳು ಅಷ್ಟಮಿ ಪ್ರಯುಕ್ತ ಜರುಗಿದ ಶ್ರೀ ದುರ್ಗಾ ಹೋಮದಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಅವರು, ಸಂಸ್ಕೃತಿ ಮತ್ತು ಸಂಪ್ರದಾಯಗಳು ನಮ್ಮ ಪೂರ್ವಿಕರು ನಮಗೆ ನೀಡಿದ ಉತ್ತಮ ಸಂದೇಶಗಳಾಗಿದ್ದು ಅವುಗಳನ್ನು ಮುಂದುವರೆಸಿಕೊಂಡು ಹೋಗುವ ನಿಟ್ಟಿನಲ್ಲಿ ಯಾವುದೇ ಬೇಧ ಭಾವಗಳಿಲ್ಲದೆ ಎಲ್ಲರನ್ನೂ ಒಗ್ಗೂಡಿಸಿಕೊಂಡು ತುಮಕೂರಿನಲ್ಲಿ ದಸರಾ ಉತ್ಸವ ಆಚರಣೆ ಮಾಡುತ್ತಿರುವುದು ಹರ್ಷ ತಂದಿದೆ ಎಂದರು. ಎಲ್ಲಾ ರೀತಿಯ ಸಾಂಪ್ರದಾಯಿಕ ವಿಧಿ ವಿಧಾನಗಳ ಮೂಲಕ ದಸರಾ ಆಚರಣೆಯನ್ನು ಅತ್ಯಂತ ವ್ಯವಸ್ಥಿತವಾಗಿ ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನದಲ್ಲಿ ಜಿಲ್ಲೆಯ…

Read More

ತುಮಕೂರು: ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನ ವಿಭಾಗ ವ್ಯಾಪ್ತಿಯಲ್ಲಿ ತುಮಕೂರು–ರಾಯದುರ್ಗ ರೈಲ್ವೇ ಸೇತುವೆ ಕಾಮಗಾರಿ ಕೈಗೊಂಡಿರುವುದರಿಂದ ಅಕ್ಟೋಬರ್ 14ರಂದು ಬೆಳಿಗ್ಗೆ 7 ರಿಂದ ಬೆಳಿಗ್ಗೆ 11 ಗಂಟೆಯವರೆಗೆ ಹಾಗೂ ಅಕ್ಟೋಬರ್ 15ರಂದು ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆಯವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಬೆಳ್ಳಾವಿ, ಮಲ್ಲಸಂದ್ರ, ಹೆಗ್ಗೆರೆ, ಮೆಳೆಕೋಟೆ ಉಪಸ್ಥಾವರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಪೂರಕಗಳಿಗೆ ಒಳಪಡುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು:  ತುಮಕೂರು ದಸರಾ ಉತ್ಸವದ ಅಂಗವಾಗಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಿರ್ಮಿಸಿರುವ ಅಮರ ಶಿಲ್ಪಿ ಜಕಣಾಚಾರಿ ಬೃಹತ್ ವೇದಿಕೆಯಲ್ಲಿ ಅಕ್ಟೋಬರ್ 11 ಹಾಗೂ 12ರಂದು ಪ್ರತಿ ದಿನ ಬೆಳಿಗ್ಗೆ ಧಾರ್ಮಿಕ ಕಾರ್ಯಕ್ರಮ ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ದಸರಾ ಉತ್ಸವದ ಮೆರುಗನ್ನು ಇನ್ನಷ್ಟು ಹೆಚ್ಚಿಸಲಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಗೃಹ ಸಚಿವರಿಂದ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ : ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದ ಡಾ.ಶಿವಕುಮಾರ ಸ್ವಾಮೀಜಿ ಧಾರ್ಮಿಕ ಮಂಟಪದಲ್ಲಿ ಪ್ರತಿಷ್ಠಾಪಿಸಲಾಗಿರುವ ಮಹಾಗೌರಿ(ಮಹಾಕಾಳಿ) ಅಲಂಕಾರದಲ್ಲಿದ್ದ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು, ತುಮಕೂರು ದಸರಾ ಪ್ರಯುಕ್ತ ಅಕ್ಟೋಬರ್ 11ರ ಆಯುಧ ಪೂಜೆ ದಿನದಂದು ಏರ್ಪಡಿಸಿರುವ ಮ್ಯಾರಾಥಾನ್, ನಾಡಕುಸ್ತಿ, ಆಹಾರ ಮೇಳ, ವಸ್ತುಪ್ರದರ್ಶನ, ಸಾಂಸ್ಕೃತಿಕ ವೈಭವ ಕಾರ್ಯಕ್ರಮಗಳನ್ನು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಅವರು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು. ಕ್ರೀಡಾ ದಸರಾ ಉತ್ಸವದಲ್ಲಿ ಅಕ್ಟೋಬರ್ 11ರ ಬೆಳಿಗ್ಗೆ…

Read More

ತುಮಕೂರು:  ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಚರಿಸಲಾಗುತ್ತಿರುವ ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 12ರಂದು ವೈಭವದ ದಸರಾ ಮೆರವಣಿಗೆ ನಡೆಯಲಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಾಹನ ಸಂಚಾರ ಮಾರ್ಗ ಬದಲಾಯಿಸಿ ಕೆಲವು ಸ್ಥಳಗಳಲ್ಲಿ ವಾಹನಗಳನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ. ಮೆರವಣಿಗೆಯಲ್ಲಿ ಚಾಮುಂಡೇಶ್ವರಿ ದೇವಿಯನ್ನು ಹೊತ್ತ ಜಂಬೂಸವಾರಿ, 25 ಕಲಾತಂಡ, ತುಮಕೂರು ನಗರದ ದೇವರು, ವಿಂಟೇಜ್ ಕಾರು, ಅಶ್ವ, ಸಾಂಪ್ರಾಯದಾಯಿಕ ಉಡುಗೆ ತಂಡ ಪಾಲ್ಗೊಳ್ಳಲಿವೆ. ಸುಮಾರು 1.5 ಕಿ.ಮೀ.ಗಳಷ್ಟು ದೂರ ಸಾಗುವ ಮೆರವಣಿಗೆಯಲ್ಲಿ ವಿವಿಧ ಸಚಿವರು, ಸಂಸದರು, ಶಾಸಕರು, ಅಧಿಕಾರಿಗಳು, ಗಣ್ಯ ವ್ಯಕ್ತಿಗಳು, ರಾಜಕೀಯ ಮುಖಂಡರು ಹಾಗೂ ಸಾರ್ವಜನಿಕರು ಸೇರಿ ಸುಮಾರು 30,000–35,000 ಜನರು ಸೇರುವ ನಿರೀಕ್ಷೆಯಿರುವುದರಿಂದ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ವಾಹನ ಸಂಚಾರ ಮಾರ್ಗವನ್ನು ಬದಲಾಯಿಸಿ ಆದೇಶ ಹೊರಡಿಸಲಾಗಿದೆ. ಮೆರವಣಿಗೆಯು ಅಶೋಕರಸ್ತೆ, ಸ್ವತಂತ್ರ ಚೌಕ, ಕೋಡಿ ಸರ್ಕಲ್, ಅಮಾನಿಕೆರೆರಸ್ತೆ, ಕೋತಿತೋಪು ರಸ್ತೆ, ಎಸ್.ಎಸ್. ಸರ್ಕಲ್…

Read More

ತುಮಕೂರು:  ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಚರಿಸಲಾಗುತ್ತಿರುವ ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 12ರಂದು ವೈಭವದ ದಸರಾ ಮೆರವಣಿಗೆ ನಡೆಯಲಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಕೆಎಸ್‌ ಆರ್‌ ಟಿಸಿ ಬಸ್ ಸಂಚಾರ ಮಾರ್ಗ ಬದಲಾಯಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ. ಮೆರವಣಿಗೆಯಲ್ಲಿ ಸುಮಾರು 30,000–35,000 ಜನರು ಸೇರುವ ನಿರೀಕ್ಷೆಯಿರುವುದರಿಂದ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಈ ಬಸ್ ಸಂಚಾರ ಮಾರ್ಗವನ್ನು ಬದಲಾಯಿಸಿ ಆದೇಶ ಹೊರಡಿಸಲಾಗಿದೆ. ಬೆಂಗಳೂರು ಕಡೆಯಿಂದ ತುಮಕೂರು ನಗರಕ್ಕೆ ಬರುವ ಬಸ್ ಗಳು ಜಾಸ್ ಟೋಲ್ –ಶ್ರೀ ಕೆ.ಎನ್. ರಾಜಣ್ಣ ರವರ ಮನೆಯ ಮುಂಭಾಗದ ರಸ್ತೆ ಮೂಲಕ ರಿಂಗ್ ರಸ್ತೆಗೆ ಪ್ರವೇಶಿಸಿ, ಗುಬ್ಬಿ ಗೇಟ್ ರಿಂಗ್ ರಸ್ತೆಗೆ ಬರುವುದು. ಕುಣಿಗಲ್ ಕಡೆಯಿಂದ ತುಮಕೂರು ನಗರಕ್ಕೆ ಬರುವ ಬಸ್ ಗಳು ಕುಣಿಗಲ್ ಜಂಕ್ಷನ್ ಮೂಲಕ ಗುಬ್ಬಿ ಗೇಟ್ ರಿಂಗ್ ರಸ್ತೆಗೆ ಬರುವುದು. ಶಿರಾ ಕಡೆಯಿಂದ ತುಮಕೂರು ನಗರಕ್ಕೆ ಬರುವ…

Read More

ತುಮಕೂರು:  ತುಮಕೂರು ದಸರಾ ಉತ್ಸವಕ್ಕೆ ಆಗಮಿಸಲಿರುವ ವಿಶೇಷ 35 ವಿಂಟೇಜ್ ಕಾರುಗಳಿಗೆ ವಿಧಾನಸೌಧದ ಮುಂಭಾಗದಲ್ಲಿ ಅಕ್ಟೋಬರ್ 11 ಬೆಳಿಗ್ಗೆ 7:30 ಗಂಟೆಗೆ ನವದೆಹಲಿ ವಿಶೇಷ ಪ್ರತಿನಿಧಿ ಶಿರಾ ಶಾಸಕ ಟಿ.ಬಿ.ಜಯಚಂದ್ರ ಮತ್ತು ಕುಣಿಗಲ್ ಶಾಸಕ ಡಾ.ಹೆಚ್.ಡಿ.ರಂಗನಾಥ್ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ವಿಭಾಗದ ಜಂಟಿ ಸಾರಿಗೆ ಆಯುಕ್ತ ಎನ್.ಜಿ. ಗಾಯಿತ್ರಿದೇವಿ, ಕರ್ನಾಟಕ ವಿಂಟೇಜ್ ಆಂಡ್ ಕ್ಲಾಸಿಕ್ ಕಾರ್ ಕ್ಲಬ್ ಅಧ್ಯಕ್ಷ ಬಾಲ್ ಚಂದ್ ಎ. ಯಡ್ಲಾಂ, ಉಪಾಧ್ಯಕ್ಷ ಪಿ.ಎ. ಸುರೇಶ್ ಮತ್ತು ಕಾರ್ಯದರ್ಶಿ ಟಿ.ಆರ್. ರಘುನಂದನ್ ಉಪಸ್ಥಿತರಿರುತ್ತಾರೆ. ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಅಕ್ಟೋಬರ್ 11ರಂದು ವಿಂಟೇಜ್ ಕಾರುಗಳ ಪ್ರದರ್ಶನವನ್ನು ಏರ್ಪಡಿಸಲಾಗಿದ್ದು, ಕಾರು ಪ್ರಿಯರು ಈ ಪ್ರದರ್ಶನದ ಪ್ರಯೋಜನ ಪಡೆಯಬಹುದೆಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಸಾದ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು: ನಗರದ ಸರಸ್ವತಿಪುರಂ ನಲ್ಲಿರುವ ಶ್ರೀ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ 2024ರ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಐಕ್ಯೂಎಸಿ , ಕಾಲೇಜಿನ ಪ್ರಾಂಶುಪಾಲರಾದ ಡಾ.ಹೇಮಲತಾ ಪಿ. ಹಾಗೂ ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾದ ಶಿಲ್ಪಾಶ್ರೀ ಜಿ.ಸಿ. ಗುರುವಾರ ಆಯೋಜಿಸಿದ್ದರು. ಕಾರ್ಯಕ್ರಮವನ್ನು ಬೆಂಗಳೂರಿನ ಭಾರತೀಯ ವಿದ್ಯಾಭವನ, ಮುಖ್ಯ ಮನಃಶಾಸ್ತ್ರಜ್ಞರಾದ  ಕೀರ್ತಿ ಸಾಯಿ ರಾಜ್ ಟಿ.  ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮವನ್ನು ತುಮಕೂರು ಪ್ರುಡೆನ್ಸ್ ಇಂಟರ್‌ ನ್ಯಾಶನಲ್ ಸ್ಕೂಲ್, ಶಾಲಾ ಸಲಹೆಗಾರಾದ ವೈಭವಿ ಸಿ ಎಂ. ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಎಲ್ಲಾ ವಿಭಾಗದ ಮುಖ್ಯಸ್ಥರು, ಸಹಾಯಕ ಪ್ರಾಧ್ಯಾಪಕರು,  ಬೋಧಕೇತರ ವರ್ಗದವರು  ಹಾಗೂ ವಿದ್ಯಾರ್ಥಿಗಳು   ಹಾಜರಾಗಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಧಾರವಾಡ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಮಹಿಳೆ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧ ದೂರು ಪ್ರತಿದೂರಿನ ತನಿಖೆಯನ್ನು ಸಿಐಡಿ ಕೈಗೆತ್ತಿಕೊಂಡಿದೆ. ಹಾವೇರಿ ಮೂಲದ ಮಹಿಳೆ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ವಿನಯ್ ಕುಲಕರ್ಣಿ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಆರೋಪಿಸಿದ್ದರು. ಈ ಆರೋಪಕ್ಕೆ ಪ್ರತಿಯಾಗಿ ದೂರು ನೀಡಿರುವ ಶಾಸಕ ವಿನಯ್ ಕುಲಕರ್ಣಿ, ದೂರುದಾರೆ ಮಹಿಳೆ ಹಾಗೂ ಖಾಸಗಿ ಸುದ್ದಿವಾಹಿನಿಯೊಂದರ ಮುಖ್ಯಸ್ತರ ವಿರುದ್ಧ 2 ಕೋಟಿ ರೂ. ಬ್ಲ್ಯಾಕ್ಮೇಲ್ ಮಾಡಿದ್ದಾರೆಂದು ದೂರು ನೀಡಿದ್ದಾರೆ. ಇದೀಗ ಸಿಐಡಿ ಪೊಲೀಸರು ದೂರುಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ. ಹಾವೇರಿಯಲ್ಲಿ ರೈತಪರ ಹೋರಾಟಗಳಲ್ಲಿ ಸಕ್ರಿಯವಾಗಿದ್ದ ವೇಳೆ ವಿನಯ್ ಪರಿಚಯವಾಗಿದ್ದು, ನಂತರದ ದಿನಗಳಲ್ಲಿ ಪರಸ್ಪರ ಮೊಬೈಲ್ ಸಂಖ್ಯೆ ವಿನಿಮಯ ಮಾಡಿಕೊಂಡು ಸಭ್ಯತೆಯಿಂದ ಮಾತನಾಡುತ್ತಿದ್ದರು. ನಂತರದ ದಿನಗಳಲ್ಲಿ ಅಸಭ್ಯವಾಗಿ, ಅಶ್ಲೀಲವಾಗಿ ಸಂಭಾಷಣೆ ನಡೆಸುತ್ತಿದ್ದರು. 2022 ರಲ್ಲಿ ಕೆಲಸ ನಿಮಿತ್ತ ಬೆಂಗಳೂರಿಗೆ ಬಂದಿದ್ದಾಗ ಹೆಬ್ಬಾಳದ ತಮ ಮನೆಗೆ ಕರೆಸಿಕೊಂಡಿದ್ದಲ್ಲದೆ, ದೇವನಹಳ್ಳಿ ಸಮೀಪ ನಿರ್ಜನ ಪ್ರದೇಶಕ್ಕೆ ಕರೆದೊಯ್ದು…

Read More