Subscribe to Updates
Get the latest creative news from FooBar about art, design and business.
- ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್?
- ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್ ಆರ್ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ
- ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ
- ತುಮಕೂರು: ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಹಿರಿಯ ಶಾಸಕರಿಗೆ ಕಡೆಗಣನೆ; ಕಾಂಗ್ರೆಸ್ ನಲ್ಲಿ ಬಂಡಾಯದ ಕಾವು
- ಕಾರವಾರ: ಅಂಚೆ ಇಲಾಖೆಯಿಂದ ಬುಕಿಂಗ್, ಪಿಕ್–ಅಪ್ ಮತ್ತು ಡೆಲಿವರಿ ಪಾಲುದಾರರಿಗಾಗಿ ಆನ್ ಲೈನ್ ಅರ್ಜಿ
- ಗ್ಯಾಸ್ ಸಿಲಿಂಡರ್ ಕಳ್ಳತನ ಜಾಲ ಭೇದಿಸಿ ಬೀದರ್ ಪೊಲೀಸರು: ₹9.75 ಲಕ್ಷ ಮೌಲ್ಯದ 55 ಗ್ಯಾಸ್ ಸಿಲಿಂಡರ್ ವಶ | ನಾಲ್ವರು ಆರೋಪಿಗಳ ಬಂಧನ
- 560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ
- ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
Author: admin
ತುಮಕೂರು: ಮೇಲ್ನೋಟಕ್ಕೆ ಇದು ಅವೈಜ್ಞಾನಿಕ ಜಾತಿಗಣತಿ ಎಲ್ಲಾ ಸಮುದಾಯಕ್ಕೂ ಸಾಮಾಜಿಕ, ಶೈಕ್ಷಣಿಕ ನ್ಯಾಯ ಸಿಗಬೇಕು, ಆ ರೀತಿಯಲ್ಲಿ ವರದಿಯನ್ನ ಮತ್ತೊಮ್ಮೆ ತಯಾರಿಸಿ ಬಿಡುಗಡೆ ಮಾಡಲಿ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ. ಜಾತಿ ಜನಗಣತಿ ಜಾರಿಗೆ ವಿರೋಧ ವ್ಯಕ್ತಪಡಿಸಿ ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾನಾಡಿದ ಅವರು, ನಾನು ಹಿಂದೆ ಇದರ ಬಗ್ಗೆ ಒಂದು ಸಾರಿ ಪ್ರಸ್ತಾಪ ಮಾಡಿದ್ದೆ, ನಮ್ಮ ಒಕ್ಕಲಿಗರಲ್ಲಿ ಒಳಪಂಗಡಗಳು ಇವೆ. ಲಿಂಗಾಯತರಲ್ಲೂ ಒಳಪಂಗಡಗಳು ಇವೆ ಎಂದು ಹೇಳಿದರು. ಕುಂಚಿಟಿಗರು ಕೇವಲ ಕುಂಚಿಟಿಗ ಅಂತ ಬರೆದಿರ್ತಾರೆ ನಮ್ಮಲ್ಲಿ ಕುಂಚಿಟಿಗ ಒಕ್ಕಲಿಗ ಅಂತ ಬರೆದಿರಲ್ಲ, ಸರ್ಪ ಒಕ್ಕಲಿಗರು ಇದ್ದಾಗ ಕೇವಲ ಸರ್ಪರು ಅಂತ ಬರಿತಾರೆ, ಅದ್ಯಾವುದು ಕೂಡಾ ಆಗ ನಮ್ಮ ಸಮುದಾಯದ ಪಟ್ಟಿಯಲ್ಲಿ ಬರಲ್ಲ ಎಂದು ಹೇಳಿದರು. ಇವರು ವರದಿ ತಯಾರು ಮಾಡಿದವರು ಕೂಡಾ ಕುಂಚಿಟಿಗ ಅಂತ ಬರೆದುಕೊಂಡು ಹೋಗಿರ್ತಾರೆ ನಮ್ಮಲ್ಲಿ ವಿರೋಧ ಯಾಕೆ ಅಂದ್ರೆ ಒಟ್ಟಿಗೆ ಒಕ್ಕಲಿಗ ಅಂತ ಮಾಡಲಿ ಅಂತ. ಲಿಂಗಾಯತ ಸಮುದಾಯದಲ್ಲೂ ಸಹ ಅದೇ ರೀತಿ ಆಗಿರಬಹುದು ಎಂದರು. ಅವರಲ್ಲಿಯೂ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಕುರಿತು ಜಾರಿನಿರ್ದೇಶನಾಲಯ (ಇಡಿ) ಮುಡಾ ಅಧಿಕಾರಿಗಳಿಗೆ ದಾಖಲೆ ನೀಡಲು ನೋಟೀಸ್ ಜಾರಿ ಮಾಡಿದೆ. ಈಗಾಗಲೇ ಇಡಿ ಪ್ರಕರಣಕ್ಕೆ ಸಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಭಾವ ಮೈದುನ ಮಲ್ಲಿಕಾರ್ಜುನ ಸ್ವಾಮಿ, ಜಮೀನು ಮಾಲೀಕ ದೇವರಾಜ್ ವಿರುದ್ಧ ಇಸಿಐಆರ್ ದಾಖಲಿಸಿತ್ತು. ಇದರ ಬೆನ್ನಲ್ಲೇ ಪ್ರಕರಣದ ಪ್ರಮುಖ ಕೇಂದ್ರ ಬಿಂದು ಆಗಿರುವ ಮುಡಾ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿರುವ ಇಡಿ ಮೂರರಿಂದ 4 ದಿನದೊಳಗೆ ಸಂಭಂಧಪಟ್ಟ ದಾಖಲೆಗಳನ್ನು ನೀಡಬೇಕೆಂದು ಸೂಚನೆ ಕೊಟ್ಟಿದೆ. ಮೈಸೂರಿನ ಕೆಸರೆ ಗ್ರಾಮದಲ್ಲಿ 50:50ರ ಅನುಮಪಾತದಲ್ಲಿ ನಿವೇಶನ ಹಂಚಿಕೆ ಸಂಭಂದ ಕೇಳಿಬಂದಿರುವ ಆರೋಪಗಳ ಕುರಿತು ಸಮಗ್ರವಾದ ದಾಖಲೆಗಳನ್ನು ಒದಗಿಸಬೇಕು. ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ನಾಲ್ಕು ದಿನದೊಳಗೆ ದಾಖಲೆಗಳನ್ನು ತರಬೇಕೆಂದು ಮುಡಾ ಆಯುಕ್ತರಿಗೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. ಮೈಸೂರು ನಗರದಿಂದ 15 ಕಿ.ಮೀ ದೂರದಲ್ಲಿರುವ ಕೆಸರೆ ಗ್ರಾಮದಲ್ಲಿ ಮುಖ್ಯಮಂತ್ರಿ ಪತ್ನಿಗೆ ಪರ್ಯಾಯ ನಿವೇಶನ ನೀಡಬೇಕಾದಲ್ಲಿ ಯಾವುದಾದರೂ ಬಡಾವಣೆಯನ್ನು…
ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಒಮರ್ ಅಬ್ದುಲ್ಲಾ ಹಳೆಯ ಮಿತ್ರ ಕಾಂಗ್ರೆಸ್ ನ ಕೈ ಬಿಟ್ಟು, ಬಿಜೆಪಿಗೆ ಜೈ ಎನ್ನುತ್ತಾರಾ ಅನ್ನುವ ಅನುಮಾನ ಇದೀಗ ಸೃಷ್ಟಿಯಾಗಿದೆ. ಒಮರ್ ಅಬ್ದುಲ್ಲಾ ಜಮ್ಮು ಕಾಶ್ಮೀರದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಆದರೆ ನ್ಯಾಷನಲ್ ಕಾನ್ಫರೆನ್ಸ್ ಗೆದ್ದಿರುವುದು 42 ಸ್ಥಾನಗಳು. ಇನ್ನೊಂದು ಪಕ್ಷದ ಬೆಂಬಲದೊಂದಿಗೇ ಒಮರ್ ಅಬ್ದುಲ್ಲಾ ಸರ್ಕಾರ ನಡೆಸಬೇಕಿದೆ. ಹೀಗಿರುವಾಗ ಕಾಂಗ್ರೆಸ್ ಜೊತೆಗೇ ಇರುತ್ತಾರಾ ಅಥವಾ ಬಿಜೆಪಿ ಕೈ ಹಿಡಿಯುತ್ತಾರಾ ಎಂಬ ಅನುಮಾನ ಮೂಡಿದೆ. ಜಮ್ಮು ಕಾಶ್ಮೀರದಲ್ಲಿ ತಮ್ಮ ಪಕ್ಷದ ಗೆದ್ದ ಬಳಿಕ ಒಮರ್ ಅಬ್ದುಲ್ಲಾ ನಿನ್ನೆಯಿಂದ ಮೋದಿ ಸರ್ಕಾರವನ್ನು ಕೊಂಡಾಡುತ್ತಿದ್ದಾರೆ. ಮೋದಿ ಸರ್ಕಾರ ಈ ಹಿಂದೆ ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಅದನ್ನು ಬಿಟ್ಟು ನಾವು ಕೇಂದ್ರದ ಜೊತೆಗೇ ರಾಜ್ಯದ ಅಭಿವೃದ್ಧಿಗಾಗಿ ಕೆಲಸ ಮಾಡಲಿದ್ದೇವೆ ಎಂದಿದ್ದಾರೆ. ಹೀಗಾಗಿ ಒಮರ್ ಅಬ್ದುಲ್ಲಾ 29 ಸ್ಥಾನ ಗೆದ್ದಿರುವ ಬಿಜೆಪಿ ಬೆಂಬಲ ಪಡೆದರೂ ಅಚ್ಚರಿಯಿಲ್ಲ. ಒಂದು ವೇಳೆ ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಮೈತ್ರಿಯೊಂದಿಗೆ ಒಮರ್ ಅಬ್ದುಲ್ಲಾ…
ನವದೆಹಲಿ: 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಸಮಾರಂಭದಲ್ಲಿ ಕಾಂತಾರ ಸಿನಿಮಾದ ಅಭಿನಯಕ್ಕಾಗಿ ನಟ ರಿಷಬ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನೀಡಿದರು. ಅತ್ಯುತ್ತಮ ಮನರಂಜನಾ ಚಿತ್ರ ‘ಕಾಂತಾರ’ ಮತ್ತು ಈ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ. ಅದಷ್ಟೇ ಅಲ್ಲ, ಅತ್ಯುತ್ತಮ ಪ್ರಾದೇಶಿಕ ಸಿನಿಮಾ, ಅತ್ಯುತ್ತಮ ಸಾಹಸ ನಿರ್ದೇಶನ ವಿಭಾಗದಲ್ಲಿ ‘ಕೆಜಿಎಫ್ 2’ಗೆ ರಾಷ್ಟ್ರ ಪ್ರಶಸ್ತಿ ದಕ್ಕಿದ್ದು, ಚಿತ್ರದ ನಿರ್ಮಾಣ ಸಂಸ್ಥೆಯ ರೂವಾರಿ ವಿಜಯ್ ಕಿರಗಂದೂರು ಅವರಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ. ಮಧ್ಯಂತರ ಸಿನಿಮಾಗಾಗಿ ಬೆಸ್ಟ್ ಡೆಬ್ಯೂ ನಿರ್ದೇಶಕ ಬಸ್ತಿ ದಿನೇಶ್ ಶೆಣೈ. ಅತ್ಯುತ್ತಮ ಸಂಕಲನಕ್ಕಾಗಿ ಸುರೇಶ್ ಅರಸ್‌ಗೆ ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕನ್ನಡದ ನಟಿ ನಿತ್ಯಾ ಮೆನನ್‌ಗೆ ‘ತಿರುಚಿತ್ರಂಬಲಂ’ ಸಿನಿಮಾದ ನಟನೆಗಾಗಿ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹಲವು ವರ್ಷಗಳ ಬೇಡಿಕೆಯಾದ ಗ್ರಾಚ್ಯುಟಿ ಬಗ್ಗೆ ಸಚಿವ ವಿ.ಸೋಮಣ್ಣ ಮಹತ್ವದ ಮಾಹಿತಿ ನೀಡಿದ್ದು, ಕಾರ್ಯಕರ್ತೆಯರಿಗೆ ಗ್ರ್ಯಾಚುಯಿಟಿ ಸೇರಿದಂತೆ ಇರುವ ಹಲವು ಬೇಡಿಕೆಗಳ ಈಡೇರಿಕೆ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರದ ಬಳಿಗೆ ನಿಯೋಗವನ್ನು ಕರೆದೊಯ್ಯುವುದಾಗಿ ಭರವಸೆ ನೀಡಿದ್ದಾರೆ. ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಆಯೋಜಿಸಿದ್ದ ಪೌಷ್ಟಿಕತೆ ಮತ್ತು ಪೂರ್ವ ಪ್ರಾಥಮಿಕ ಶಿಕ್ಷಣದ ಹಕ್ಕಿನೆಡೆಗೆ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಸಚಿವ ಸೋಮಣ್ಣ ಮಾತನಾಡಿದರು. ಹಿಂದಿನ ವರ್ಷಗಳಲ್ಲಿ ಎದುರಾಗಿದ್ದ ಕೋವಿಡ್‌ನಂತಹ ಭೀಕರ ಪರಿಸ್ಥಿತಿಯಲ್ಲಿ ಜನ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದರು. ಈ ಸಮಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಶ್ಲಾಘನೀಯ ಎಂದರು. ಜನ ಭಯ ಪಡುವ ಸಮಯದಲ್ಲೂ ಆರೋಗ್ಯ ಇಲಾಖೆ ಜೊತೆಗೂಡಿ ಅಂಗನವಾಡಿ ಕಾರ್ಯಕರ್ತೆಯರು ಮಾಡಿದ ಸೇವೆಯನ್ನು ಕಣ್ಣಾರೆ ಕಂಡಿದ್ದೇನೆ. ಆದರೆ, ಕಾರ್ಯಕರ್ತೆಯರು ತಮ್ಮ ಶ್ರಮಕ್ಕೆ ತಕ್ಕ ಸ್ಥಾನಮಾನಗಳನ್ನು ಪಡೆದುಕೊಂಡಿಲ್ಲ. ನೀವು ನ್ಯಾಯಯುತವಾಗಿ ಮುಂದಿಟ್ಟಿರುವ ಬೇಡಿಕೆಗಳನ್ನು ಪರಿಗಣಿಸುತ್ತೇವೆ ಎಂದು ಭರವಸೆ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಕಾರವಾರ: ರಾಜ್ಯದಲ್ಲಿ 34 ಸರ್ವೆ ಎಡಿಎಲ್ ಆರ್ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 364 ಸರ್ವೆಯರ್ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗೆ ಸಿಎಂ ಅನುಮತಿ ನೀಡಿದ್ದಾರೆ. ಸರ್ವೆಯರ್ ಹುದ್ದೆಗಳ ನೇಮಕಾತಿ ಕೂಡ ಜಾರಿಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ. 1091 ಲೈಸೆನ್ಸ್ ಸರ್ವೆಯರ್ ಗಳ ನೇಮಕ ಮಾಡಲಾಗಿದೆ. ಗ್ರಾಮ ಆಡಳಿತಾಧಿಕಾರಿ ಹುದ್ದೆ ಖಾಲಿ ಇವೆ. ಒಂದು ಸಾವಿರ ಗ್ರಾಮ ಲೆಕ್ಕಗರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ತಹಶೀಲ್ದಾರ್ ಕೋರ್ಟ್ ಗಳಲ್ಲಿ ಬಾಕಿ ಉಳಿದ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಕ್ರಮ ವಹಿಸಲಾಗಿದೆ. ಈ ಹಿಂದೆ 212 ದಿನಗಳಲ್ಲಿ ವಿಲೇವಾರಿಯಾಗುತ್ತಿದ್ದ ಪ್ರಕರಣಗಳು ಈಗ 76 ದಿನಗಳಲ್ಲಿ ವಿಲೇವಾರಿ ಆಗುತ್ತಿವೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು : 14 ಮಂದಿ ಪಾಕ್ ಪ್ರಜೆಗಳನ್ನು ಜಿಗಣಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿರುವ ಘಟನೆ ನಡೆದಿದೆ. ದೇಶದ ನಾನಾ ಭಾಗಗಳಲ್ಲಿ ಅಡಗಿ ಕುಳಿತಿದ್ದ 14 ಮಂದಿ ಪಾಕ್ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ ಇದುವರೆಗೆ 22 ಮಂದಿ ಪಾಕ್ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಚೆನ್ನೈ, ದೆಹಲಿ, ಹೈದರಾಬಾದ್ ಗೆ ತೆರಳಿದ ಪೊಲೀಸರ ತಂಡ ಅಕ್ರಮವಾಗಿ ಭಾರತದಲ್ಲಿ ನೆಲೆಯೂರಿದ್ದ ಪಾಕ್ ಪ್ರಜೆಗಳನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ನವದೆಹಲಿ: ಬಿಜೆಪಿಯ ಗೆಲುವು ಪಕ್ಷದ ಕಾರ್ಯಕರ್ತರ ಪರಿಶ್ರಮದ ಫಲಿತಾಂಶವಾಗಿದೆ ಎಂದು ಹರಿಯಾಣದಲ್ಲಿ ಬಿಜೆಪಿಯ ಗೆಲುವು ಪಕ್ಷದ ಕಾರ್ಯಕರ್ತರ ಪರಿಶ್ರಮದ ಫಲಿತಾಂಶವಾಗಿದೆ ಹೇಳಿದರು. ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ರಾಜಕೀಯದ ಗೆಲುವು ಎಂದು ಅವರು ಹೇಳಿದರು. ನವರಾತ್ರಿಯ ಆರನೇ ದಿನ. ಮಾತಾ ಕಾತ್ಯಾಯನಿಯ ದಿನ. ಮಾತಾ ಕಾತ್ಯಾಯನಿ ಕೈಯಲ್ಲಿ ಕಮಲ ಹಿಡಿದು ಸಿಂಹದ ಮೇಲೆ ಕುಳಿತಿದ್ದಾಳೆ. ಅವಳು ನಮ್ಮೆಲ್ಲರನ್ನು ಆಶೀರ್ವದಿಸುತ್ತಿದ್ದಾಳೆ. ಇಂತಹ ಪವಿತ್ರ ದಿನದಂದು ಹರಿಯಾಣದಲ್ಲಿ ಮೂರನೇ ಬಾರಿಗೆ ಕಮಲ ಅರಳಿದೆ. ಹರಿಯಾಣದಲ್ಲಿ ಕೇಸರಿ ಪಕ್ಷದ ಗೆಲುವು ‘ದೇಶದಾದ್ಯಂತ ಪ್ರತಿಧ್ವನಿಸಲಿದೆ’ ಎಂದು ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಹರ್ಯಾಣದ ಜನತೆ ಇಂದು ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಹರ್ಯಾಣವು 1966ರಲ್ಲಿ ರಚನೆಯಾಯಿತು. ಇಷ್ಟು ವರ್ಷಗಳಲ್ಲಿ ಅನೇಕ ಪ್ರಮುಖ ನಾಯಕರು ಹರ್ಯಾಣ ರಾಜ್ಯವನ್ನು ಮುನ್ನಡೆಸಿದ್ದಾರೆ. ಭಾರತದಲ್ಲಿ ಕೆಲವೇ ಕೆಲವು ರಾಜ್ಯ ನಾಯಕರು ಇಡೀ ದೇಶದಾದ್ಯಂತ ಹೆಸರುವಾಸಿಯಾಗಿದ್ದಾರೆ. ಇಡೀ ರಾಷ್ಟ್ರವು ಹರಿಯಾಣದ ಉನ್ನತ…
ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ ಮೊದಲ ಬಾರಿಗೆ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಎರಡನೇ ಭಾರೀ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಆಯ್ಕೆಯಾಗಿದ್ದಾರೆ. ಗೆಲುವಿನ ಬಳಿಕ ಮಾತನಾಡಿದ ಒಮರ್ ಅಬ್ದುಲ್ಲಾ, ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿ ಕೇಂದ್ರ ಸರ್ಕಾರ ಒಳ್ಳೆಯ ಕೆಲಸ ಮಾಡಿದೆ. ಪ್ರಧಾನಿ ಮೋದಿ ಗೌರವಾನ್ವಿತ ವ್ಯಕ್ತಿ, ಮತ್ತೆ ಅದನ್ನು ಮರಳಿ ಸ್ಥಾಪಿಸುವಂತಹ ಮೂರ್ಖ ಕೆಲಸ ಮಾಡುವುದಿಲ್ಲ ಎಂದಿದ್ದಾರೆ. ಕಾಂಗ್ರೆಸ್ ಈ ಹಿಂದೆ ಜಮ್ಮು ಕಾಶ್ಮೀರದ ರ್ಯಾಲಿಯಲ್ಲಿ ಆರ್ಟಿಕಲ್ 370 ಮರಳಿ ಸ್ಥಾಪಿಸುವುದಾಗಿ ಹೇಳಿತ್ತು. ಆದರೆ ಇದೀಗ ನೂತನ ಸಿಎಂ ಇದಕ್ಕೆ ಹಿಂದೇಟು ಹಾಕಿದ್ದು, ಕೇಂದ್ರದ ಜೊತೆ ಸೇರಿ ಕೆಲಸ ಮಾಡುವುದಾಗಿ ಒಮರ್ ಸ್ಪಷ್ಟನೆ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ರಾಯಚೂರು: ಹರ್ಯಾಣ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ. ಜನರು ನೀರುವ ತೀರ್ಪನ್ನು ಒಪ್ಪುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ರೈತ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಹರ್ಯಾಣದಲ್ಲಿ ನಮ್ಮ ಸರ್ಕಾರ ಬಂದೇ ಬರುತ್ತದೆ ಎಂಬ ವಿಶ್ವಾವಿತ್ತು. ಜನರು ನಮಗೆ ತೀರ್ಪು ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ. ಹಿನ್ನಡೆ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದರು. ಮುಡಾ ಹಗರಣದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆಯಿಲ್ಲ. ಸಿದ್ದರಾಮಯ್ಯ ಅವರಿಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ. ಇನ್ನೂ ಈ ಸಂಬಂಧ ಮುಖ್ಯಮಂತ್ರಿ ಬದಲಾವಣೆಯಾಗುವುದಿಲ್ಲ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296