Subscribe to Updates
Get the latest creative news from FooBar about art, design and business.
- ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್?
- ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್ ಆರ್ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ
- ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ
- ತುಮಕೂರು: ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಹಿರಿಯ ಶಾಸಕರಿಗೆ ಕಡೆಗಣನೆ; ಕಾಂಗ್ರೆಸ್ ನಲ್ಲಿ ಬಂಡಾಯದ ಕಾವು
- ಕಾರವಾರ: ಅಂಚೆ ಇಲಾಖೆಯಿಂದ ಬುಕಿಂಗ್, ಪಿಕ್–ಅಪ್ ಮತ್ತು ಡೆಲಿವರಿ ಪಾಲುದಾರರಿಗಾಗಿ ಆನ್ ಲೈನ್ ಅರ್ಜಿ
- ಗ್ಯಾಸ್ ಸಿಲಿಂಡರ್ ಕಳ್ಳತನ ಜಾಲ ಭೇದಿಸಿ ಬೀದರ್ ಪೊಲೀಸರು: ₹9.75 ಲಕ್ಷ ಮೌಲ್ಯದ 55 ಗ್ಯಾಸ್ ಸಿಲಿಂಡರ್ ವಶ | ನಾಲ್ವರು ಆರೋಪಿಗಳ ಬಂಧನ
- 560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ
- ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
Author: admin
ಮೈಸೂರು: ಸಿಎಂ ಬದಲಾವಣೆ ಸಂದರ್ಭದಲ್ಲೇ ಮೈಸೂರಿನಲ್ಲಿ ದಲಿತ ನಾಯಕರು ಸಭೆ ನಡೆಸಿದ್ದಾರೆ. ಸಭೆಯ ಬಗ್ಗೆ ಪ್ರಶ್ನಿಸಿದ ವೇಳೆ ಡಾ.ಜಿ.ಪರಮೇಶ್ವರ್ ಊಟಕ್ಕಾಗಿ ಸೇರಿದ್ದೇವೆ ಅಷ್ಟೇ ಎಂದು ಉತ್ತರಿಸಿದ್ದಾರೆ. ಮೈಸೂರಿನಲ್ಲಿ ಜಿ ಪರಮೇಶ್ವರ್, ಸತೀಶ್ ಜಾರಕಿಹೊಳಿ ಸೇರಿದಂತೆ ಪ್ರಮುಖ ನಾಯಕರು ಚರ್ಚೆ ನಡೆಸಿದ್ದಾರೆ. ಇತ್ತೀಚೆಗೆ ಹೈಕಮಾಂಡ್ ಭೇಟಿ ಮಾಡಿ ಬಂದಿದ್ದ ಸತೀಶ್ ಜಾರಕಿಹೊಳಿ ದಲಿತ ನಾಯಕರೊಂದಿಗೆ ಪದೇ ಪದೇ ಸಭೆ ನಡೆಸುತ್ತಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಇದರ ನಡುವೆಯೇ ಸಿದ್ದರಾಮಯ್ಯನೇ ಸಿಎಂ ಎಂದು ಸ್ವತಃ ಸತೀಶ್ ಜಾರಕಿಹೊಳಿಯೇ ಹೇಳಿದರೂ ಒಳಗೊಳಗೇ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ದಲಿತ ಸಿಎಂ ಬೇಡಿಕೆ ಮುಂದಿಡಲು ಈ ನಾಯಕರು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ. ಮೈಸೂರಿನಲ್ಲಿ ಡಿನ್ನರ್ ಪಾರ್ಟಿ ಏರ್ಪಾಡಾದ ಬಗ್ಗೆ ಪ್ರತಿಕ್ರಿಯಿಸಿರುವ ಜಿ. ಪರಮೇಶ್ವರ್ ಎಲ್ಲರೂ ಊಟಕ್ಕೆ ಕರೆದಿದ್ದರು. ಊಟಕ್ಕಾಗಿ ಜೊತೆ ಸೇರಿದ್ದೇವೆ ಅಷ್ಟೇ. ಇಲ್ಲಿ ಸಿಎಂ ಸ್ಥಾನದ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಅಕಾಲಿಕ ಮಳೆಯ ಪರಿಣಾಮ ಟೊಮೆಟೊ ಬೆಳೆಗೆ ಭಾರೀ ಹಾನಿಯಾಗಿದೆ. ಹೀಗಾಗಿ ಪೂರೈಕೆಯೂ ಕಮ್ಮಿಯಾಗಿದೆ. ಇದರಿಂದಾಗಿ ಕರ್ನಾಟಕ ಸಹಿತ ಅನೇಕ ರಾಜ್ಯಗಳಲ್ಲಿ ಟೊಮೆಟೋ ಬೆಲೆ ಏರಿಕೆಯಾಗಿದೆ. ಕೆಲವು ರಾಜ್ಯಗಳಲ್ಲಿ ಕೆ.ಜಿ.ಗೆ 100 ರೂ. ವರೆಗೆ ಟೊಮೆಟೋ ಬೆಲೆ ಏರಿಕೆಯಾಗಿದೆ. ನಿರಂತರವಾಗಿ ಏರುತ್ತಿರುವ ಬೆಲೆಯನ್ನು ನಿಯಂತ್ರಿಸಲು ಸರ್ಕಾರವು ಟೊಮೆಟೋ ದರ ಕೆಜಿಗೆ 65 ರೂ.ಗೆ ಮಾರಾಟ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ. ಅಕ್ಟೋಬರ್‌ನಲ್ಲಿ ಟೊಮೆಟೋ ಬೆಲೆ ಶೇ.39ರಷ್ಟು ಹೆಚ್ಚಾಗಿದೆ. ಕಳೆದ ತಿಂಗಳು ಕೆಜಿಗೆ ಸರಾಸರಿ 44 ರೂ.ನಿಂದ 62 ರೂ.ಗೆ ಏರಿಕೆಯಾಗಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ಸಗಟು ಮಾರುಕಟ್ಟೆಯಲ್ಲಿ ಟೊಮೆಟೋ ಬೆಲೆ ಕ್ವಿಂಟಲ್‌ಗೆ 3562 ರೂ.ನಿಂದ 5045 ರೂ.ಗೆ ಏರಿಕೆಯಾಗಿದೆ. ಶೇ.11ರಷ್ಟು ತರಕಾರಿ ಥಾಲಿಯ ಬೆಲೆ ಏರಿಕೆಯಾಗಿದೆ. ಇದಕ್ಕೆ ಕಾರಣ ತರಕಾರಿಗಳ ಬೆಲೆ ಏರಿಕೆ. ಆದರೆ, ಮಾಂಸಾಹಾರಿ ಥಾಲಿಯ ದರ ಶೇ.2ರಷ್ಟು ಕಡಿಮೆಯಾಗಿದೆ. ಈ ಹಿಂದೆಯೂ ಟೊಮೆಟೋ ಬೆಲೆ ಹೆಚ್ಚಾದಾಗ ಸರ್ಕಾರ ಇದೇ ರೀತಿ ಮಾರಾಟ ಆರಂಭಿಸಿತ್ತು. ಆಂಧ್ರಪ್ರದೇಶ, ಗುಜರಾತ್, ಮಹಾರಾಷ್ಟ್ರ, ಛತ್ತೀಸ್ ಗಢದಲ್ಲೂ ಟೊಮೇಟೊ…
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ಜ್ಯೋತಿಷ್ಯವು 12 ರಾಶಿಚಕ್ರ ಚಿಹ್ನೆಗಳು ಮತ್ತು 27 ನಕ್ಷತ್ರಗಳನ್ನು ವಿವರಿಸುತ್ತದೆ. ಈ ಚಿಹ್ನೆಗಳನ್ನು ಕೆಲವು ಗ್ರಹಗಳು ಆಳುತ್ತವೆ. ಈ ಕಾರಣದಿಂದಾಗಿ ಈ ಚಿಹ್ನೆಗೆ ಸಂಬಂಧಿಸಿದ ಜನರ ಸ್ವಭಾವ ಮತ್ತು ವ್ಯಕ್ತಿತ್ವವು ಪರಸ್ಪರ ಭಿನ್ನವಾಗಿರುತ್ತದೆ.…
ತುಮಕೂರು: ಜನ್ಮ ನೀಡಿದ ತಂದೆ ತಾಯಂದಿರಿಗೆ ಗೌರವ ನೀಡಿ ನೋಡಿಕೊಳ್ಳುವುದು ಮಕ್ಕಳ ಕರ್ತವ್ಯವಾಗಿರುತ್ತದೆ ಎಂದು ವಿದ್ಯಾರ್ಥಿಗಳಿಗೆ ತುಮಕೂರು ಜಿಲ್ಲಾ ನ್ಯಾಯಾಲಯದ ಹಿರಿಯ ನ್ಯಾಯಾಧೀಶರಾದ ನೂರುನ್ನೀಸ ಅವರು ಕರೆ ನೀಡಿದರು. ತುಮಕೂರು ನಗರದ ಸರಸ್ವತಿಪುರಂನಲ್ಲಿರುವ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಿದ್ದಾರ್ಥ ಸಂಕಲ್ಪ– 2024 ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ನ್ಯಾಯಾಧೀಶರು ಮಾತನಾಡಿದರು. ಈ ವೇಳೆ ಕಾಲೇಜಿನಲ್ಲಿ 2021 ರಿಂದ 24 ವರೆಗೆ ವಿದ್ಯಾಭ್ಯಾಸ ಮಾಡಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ ಸನ್ಮಾನ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಪಿ.ಹೇಮಲತಾ, ಸಿದ್ದಾರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿದ್ದರಾಜು ಆರ್., ಸಹಾಯಕ ಆಡಳಿತ ಅಧಿಕಾರಿ ಖಲಂದರ್ ಪಾಷಾ, ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ.ರಮೇಶ್ ಮಣ್ಣಿ, ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರುಗಳು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ತುಮಕೂರು: ಜಿಲ್ಲೆಯಲ್ಲಿ ಮೊದಲ ಬಾರಿಗೆ ಸರ್ಕಾರದ ವತಿಯಿಂದ ಅಕ್ಟೋಬರ್ 11ಮತ್ತು 12ರಂದು ತುಮಕೂರು ದಸರಾ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಜಿಲ್ಲೆಯ ಜನತೆ ಸ್ವಯಂ ಪ್ರೇರಣೆಯಿಂದ ಪಾಲ್ಗೊಂಡು ತುಮಕೂರು ದಸರಾ ವೈಭವವನ್ನು ಕಣ್ತುಂಬಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ ನೀಡಿದರು. ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಚಾಮುಂಡೇಶ್ವರಿ ದೇವಿ ನಿತ್ಯಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಅವರು, ವಿಶ್ವವಿಖ್ಯಾತ ಮೈಸೂರು ದಸರಾ ಮಾದರಿಯಲ್ಲಿಯೇ ತುಮಕೂರಿನಲ್ಲಿಯೂ ದಸರಾ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಪ್ರಥಮ ಬಾರಿಗೆ ಆಚರಿಸಲಾಗುತ್ತಿರುವ ತುಮಕೂರು ದಸರಾ ಉತ್ಸವಕ್ಕೆ ಜಿಲ್ಲೆಯ ಕಲಾಸಕ್ತರು, ಸಾಹಿತಿಗಳು, ಕ್ರೀಡಾಪಟುಗಳು, ಲೇಖಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಸಾಕ್ಷಿಯಾಗಬೇಕೆಂದರು. ದಸರಾ ಉತ್ಸವದ 9ನೇ ದಿನವಾದ ಅಕ್ಟೋಬರ್ 11ರಂದು ಜಿಲ್ಲೆಯ ಜನರ ಮನಸ್ಸನ್ನು ರಂಜಿಸಲು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆಗಮಿಸಲಿದ್ದು, ಖ್ಯಾತ ಗಾಯಕ ಗುರು ಕಿರಣ್ ಮತ್ತು ಕಂಬದ ರಂಗಯ್ಯ ಅವರ ತಂಡಗಳಿಂದ ಸಂಗೀತ ರಸಸಂಜೆ, ಮಿನಿ ಮ್ಯಾರಥಾನ್, ಕುಸ್ತಿ, ಆಕರ್ಷಕ ಲೇಸರ್ ಶೋ ಕಾರ್ಯಕ್ರಮವಲ್ಲದೆ, ಅ.12ರಂದು…
ತುಮಕೂರು: ದಸರಾ ಪ್ರಯುಕ್ತ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಚಾಮುಂಡೇಶ್ವರಿ ದೇವಿಯ ಆರನೇ ದಿನದ ಕಾತ್ಯಾಯಿನಿ(ಅನ್ನಪೂರ್ಣ) ದೇವಿಗೆ ಶ್ರದ್ಧಾ–ಭಕ್ತಿಯಿಂದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಇಂದು ಪೂಜೆ ಸಲ್ಲಿಸಿದರು. ಇಂದು ಬೆಳಿಗ್ಗೆ ಸಂಕಲ್ಪದೊಂದಿಗೆ ದೇವಿಯ ಪೂಜೆ ಪ್ರಾರಂಭಿಸಿದ ಅವರು ಪುಣ್ಯಾಹ, ಗಣಪತಿ ಪೂಜೆ, ಪ್ರಧಾನ ಕಳಶಾರಾಧನೆ, ದೇವಿಗೆ ಪಂಚಾಮೃತ ಅಭಿಷೇಕ, ಅಗ್ನಿ ಪ್ರತಿಷ್ಠಾಪನೆಯೊಂದಿಗೆ “ಶ್ರೀ ಮಹಾಲಕ್ಷ್ಮೀ ಹೋಮ”ದಲ್ಲಿ ಪಾಲ್ಗೊಂಡು ಲಘು ಪೂರ್ಣಾಹುತಿ ಸಮರ್ಪಣೆ ಮಾಡಿದರು. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಶಾಂತಲಾ ರಾಜಣ್ಣ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ, ತಹಶೀಲ್ದಾರ್ ರಾಜೇಶ್ವರಿ, ಮುಜರಾಯಿ ತಹಸೀಲ್ದಾರ್ ಸವಿತಾ, ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ.ನಾಗಣ್ಣ, ಮತ್ತಿತರರು ಪಾಲ್ಗೊಂಡು ಸಾಮೂಹಿಕವಾಗಿ ಪೂಜೆ ಸಲ್ಲಿಸಿದರು. ನವರಾತ್ರಿಯಲ್ಲಿ ಷಷ್ಠಿಯಂದು ಕಾತ್ಯಾಯಿನಿ ದೇವಿಯನ್ನು ಪೂಜಿಸಲಾಗುವುದು. ಸಿಂಹದ ಮೇಲೆ ಸವಾರಿ ಮಾಡುವ, ಕಮಲದ ಹೂ, ಖಡ್ಗ ಮತ್ತು ಶಿವನ ತ್ರಿಶೂಲ ಸೇರಿದಂತೆ ಬಹು ಆಯುಧಗಳನ್ನು ತನ್ನ ಕೈಗಳಲ್ಲಿ ಹಿಡಿದಿರುವ ಕಾತ್ಯಾಯಿನಿ…
ತುಮಕೂರು: ಕಿತ್ತೂರು ರಾಣಿ ಚೆನ್ನಮ್ಮಾಜಿ ಅವರ ತ್ಯಾಗ, ಶೌರ್ಯ ಮತ್ತು ದೇಶಭಕ್ತಿಯು ಇಂದಿನ ಯುವಜನಾಂಗಕ್ಕೆ ಸ್ಫೂರ್ತಿಯಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿಂದು ಕಿತ್ತೂರು ಉತ್ಸವ–2024ರ ಪ್ರಯುಕ್ತ ರಾಜ್ಯಾದ್ಯಂತ ಸಂಚರಿಸುತ್ತಿರುವ ಕಿತ್ತೂರು ಚೆನ್ನಮ್ಮಾಜಿಯವರ ವಿಜಯ ಜ್ಯೋತಿ ಯಾತ್ರೆಗೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಬ್ರಿಟೀಷರ ವಿರುದ್ಧ ಹೋರಾಡಿ ವಿಜಯ ಸಾಧಿಸಿದ ದಿಟ್ಟ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಸ್ಮರಣಾರ್ಥವಾಗಿ ಮುಖ್ಯಮಂತ್ರಿಗಳು ಅಕ್ಟೋಬರ್ 2ರಂದು ಈ ವಿಜಯ ಜ್ಯೋತಿ ಯಾತ್ರೆಗೆ ಚಾಲನೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಅಕ್ಟೋಬರ್ 23 ರಿಂದ 25ರವರೆಗೆ ನಡೆಯಲಿರುವ ಕಿತ್ತೂರು ಉತ್ಸವ ಪ್ರಯುಕ್ತ ರಾಜ್ಯದಾದ್ಯಂತ ಸಂಚರಿಸುವ ಈ ವಿಜಯ ಜ್ಯೋತಿ ಯಾತ್ರೆ ಚಿಕ್ಕಮಗಳೂರಿನಿಂದ ಜಿಲ್ಲೆಗೆ ತಲುಪಿದ್ದು, ಜಿಲ್ಲೆಯಿಂದ ದಾಬಸ್ ಪೇಟೆ ಮಾರ್ಗವಾಗಿ ಬೆಂಗಳೂರು ಉತ್ತರ ಜಿಲ್ಲೆಗೆ ಬೀಳ್ಕೊಡಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ರಾಜೇಶ್ವರಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ, ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ…
ತುಮಕೂರು: ದಸರಾ ಉತ್ಸವ ಪ್ರಯುಕ್ತ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಚಾಮುಂಡೇಶ್ವರಿ ದೇವಿಗೆ ಅಕ್ಟೋಬರ್ 9ರ ಬುಧವಾರ ಕಾಳರಾತ್ರಿ(ಶಾರದಾ) ಅಲಂಕಾರದಲ್ಲಿ ಭಕ್ತರಿಗೆ ದರ್ಶನ ನೀಡಲಿದ್ದಾಳೆ ಎಂದು ದಸರಾ ಉತ್ಸವ ಧಾರ್ಮಿಕ ಆಚರಣೆ ಸಮಿತಿ ಅಧ್ಯಕ್ಷ ಹಾಗೂ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ. ಬುಧವಾರ ಬೆಳಿಗ್ಗೆ 5:30 ಗಂಟೆಗೆ ಬ್ರಾಹ್ಮಿ ಮುಹೂರ್ತದಲ್ಲಿ ಪುಣ್ಯಾಹ, ಗಣಪತಿ ಪೂಜೆ, ಪ್ರಧಾನ ಕಳಶರಾಧನೆ, ದೇವಿಗೆ ಪಂಚಾಮೃತ ಅಭಿಷೇಕ, ಅಗ್ನಿ ಪ್ರತಿಷ್ಠಾಪನೆ, “ಶ್ರೀ ಸರಸ್ವತಿ ಹೋಮ”, ಲಘು ಪೂರ್ಣಾಹುತಿ, ಅಷ್ಟಾವದಾನ ಸೇವೆ, ಮಂತ್ರಪುಷ್ಪ ರಾಷ್ಟಾçಶಿರ್ವಾದ, ಬೆಳಿಗ್ಗೆ 9:30 ಗಂಟೆಗೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ಸಂಜೆ 4:30 ಗಂಟೆಗೆ ವೇದಪಾರಾಯಣ, ದುರ್ಗಾಸಪ್ತಶಶಿ ಪಾರಾಯಣ, ಅಷ್ಟಾವದಾನ, ಕುಂಕುಮಾರ್ಚನೆ, ರಾ.7:30 ಗಂಟೆಗೆ ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ. ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು: ದಸರಾ ಪ್ರಯುಕ್ತ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಅಕ್ಟೋಬರ್ 9ರಂದು ಸಂಜೆ 7 ಗಂಟೆಯಿಂದ ತುಮಕೂರಿನ ಡಾ: ಲಕ್ಷ್ಮಣ್ ದಾಸ್ ಮತ್ತು…
ನವದೆಹಲಿ: ತುಮಕೂರು ಜಿಲ್ಲೆಯ ಅಭಿವೃದ್ಧಿಯ ಕುರಿತಾಗಿ ಕೆಲವು ವಿಶೇಷ ಪ್ರಸ್ತಾವನೆಗಳನ್ನು ಪ್ರಧಾನಮಂತ್ರಿಗಳಿಗೆ ಮಂಡಿಸಿದ್ದು, ತಮ್ಮ ಲೋಕಸಭಾ ಕ್ಷೇತ್ರದ ಸರ್ವೋತೋಮುಖ ಅಭಿವೃದ್ದಿಗೆ ವಿಶೇಷ ಅನುದಾನ ನೀಡುವಂತೆ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಪ್ರಧಾನ ಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ. ಅಭಿವೃದ್ಧಿಗೆ ರೂ.87 ಕೋಟಿ ಅನುದಾನ ನೀಡಿದ್ದು, ಈ ರೈಲ್ವೆ ನಿಲ್ದಾಣಕ್ಕೆ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ್ ಮಹಾ ಸ್ವಾಮೀಜಿಯವರ ನಾಮಕರಣ ಮಾಡುವಂತೆ ಮನವಿ ಮಾಡಿದ್ದಾರೆ. ತುಮಕೂರು -– ರಾಯದುರ್ಗ ಮತ್ತು ತುಮಕೂರು–ಚಿತ್ರದುರ್ಗ–ದಾವಣಗೆರೆ ರೈಲ್ವೆ ಮಾರ್ಗವನ್ನು ಜೂನ್ 2027ರಲ್ಲಿ ಲೋಕಾರ್ಪಣೆ ಮಾಡಲು ತುಮಕೂರಿಗೆ ಆಗಮಿಸುವಂತೆ ಪ್ರಧಾನಮಂತ್ರಿಗಳಲ್ಲಿ ಕೇಂದ್ರ ಸಚಿವ ಸೋಮಣ್ಣ ಮನವಿ ಮಾಡಿದ್ದಾರೆ. ರೈಲ್ವೆ ಇಲಾಖೆಯಲ್ಲಿ ಅಭಿವೃದ್ದಿಗಳಿಗೆ ಸಹಕಾರ ನೀಡಿದ ಕೇಂದ್ರ ಸಚಿವ ಅಶ್ವೀನಿ ವೈಷ್ಣವ ಇವರ ಸಹಕಾರ ಮನೋಭಾವನೆಯನ್ನು ಅತ್ಯಂತ ಗೌರವಪೂರ್ವಕವಾಗಿ ಕೇಂದ್ರ ಸಚಿವ ಸೋಮಣ್ಣನವರು ಪ್ರಧಾನಮಂತ್ರಿಯವರ ಭೇಟಿಯ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಸರಗೂರು: ಕೋಟೆ ಮಾದರಿಯಲ್ಲಿಯೇ ಸರಗೂರಿನಲ್ಲಿಯೂ ತಾಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣಕ್ಕೆ 5 ಕೋಟಿ ರೂ. ಅನುದಾನವನ್ನು ಸರಕಾರದಿಂದ ಕೊಡಿಸಿಕೊಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಭರವಸೆ ನೀಡಿದರು. ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಆದಿ ಕರ್ನಾಟಕ ಮಹಾಸಭಾ ಕೋಟೆ, ಸರಗೂರು ಘಟಕದಿಂದ ನಡೆದ 2023-2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ನೂತನ ಸಂಸದರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಸರಗೂರಿನಲ್ಲಿ ಭವನ ನಿರ್ಮಾಣಕ್ಕೆ ನಿವೇಶನದ ಕೊರತೆ ಇದ್ದು, ಶಾಸಕರು, ತಾಲೂಕು ಆಡಳಿತ ನಿವೇಶನ ಕೊಡಿಸುವುದಾದರೆ ಭವನ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು. ಇದಲ್ಲದೆ ಸರಗೂರು ಪಟ್ಟಣದಲ್ಲಿರುವ ಅಂಬೇಡ್ಕರ್ ಭವನದ ಅಭಿವೃದ್ಧಿಗೆ 1 ಕೋಟಿ ರೂ. ಅನುದಾನ ನೀಡಲಾಗುವುದು. ಜನಾಂಗದವರು ಸಂಘಟನೆಯಲ್ಲಿ ತೊಡಗಿದರೆ ಸಂಪೂರ್ಣವಾಗಿ ಸಹಕಾರ ನೀಡಲಾಗುವುದು ಎಂದು ಅವರು ಹೇಳಿದರು. ಗ್ಯಾರಂಟಿ ಬಡಜನರಿಗೆ ಅನುಕೂಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರಕಾರಕ್ಕೆ ಸಂವಿಧಾನದ ಮೇಲೆ ನಂಬಿಕೆ ಇರುವುದರಿಂದಲೇ ಐದು ಗ್ಯಾರಂಟಿಗಳನ್ನು…