Subscribe to Updates
Get the latest creative news from FooBar about art, design and business.
- ಕೊರಟಗೆರೆ | ಇಂದು ಹಾಲು ಶೇಖರಣಾ ಘಟಕ ಉದ್ಘಾಟಿಸಲಿರುವ ಡಾ.ಜಿ.ಪರಮೇಶ್ವರ್
- ಉತ್ತಮ ಆಡಳಿತದಿಂದ ಸರ್ವತೋಮುಖ ಪ್ರಗತಿ ಸಾಧ್ಯ: ಕೆ.ಮಂಜುನಾಥ್
- ಪಾವಗಡ ತಾ.ಪಂ ಇ.ಒ. ಉತ್ತಮ್ ಕುಮಾರ್ ವಿರುದ್ಧ ಪಿಡಿಒಗಳ ದೂರು..!
- ಕಾಲುನಡಿಯಲ್ಲಿ ಮಾಗಡಿಯಿಂದ ಮಂತ್ರಾಲಯಕ್ಕೆ ಪಾದಯಾತ್ರೆ: 100 ಕ್ಕೂ ಹೆಚ್ಚು ಯಾತ್ರಾರ್ಥಿಗಳಿಂದ ಸಂಕಲ್ಪ ಯಾತ್ರೆ
- ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯಾವಶ್ಯಕ: ಡಾ.ಹನುಮಂತನಾಥ ಸ್ವಾಮೀಜಿ ಕರೆ
- ಕ್ಯಾನ್ಸರ್ ಪೀಡಿತ ಮಹಿಳೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 25 ಸಾವಿರ ರೂ. ನೆರವು
- ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆಗೆ ಗಲ್ಲು ಶಿಕ್ಷೆ ನೀಡಬೇಕೆಂದು ದಲಿತ ಪರ ಸಂಘಟನೆಗಳ ಆಗ್ರಹ
- ಮಹಾರಾಜವಾಡಿಯಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ: ಜನಸ್ನೇಹಿ ಆಡಳಿತಕ್ಕೆ ಮುನ್ನುಡಿ
Author: admin
ಸರಗೂರು: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಆರ್.ಬಿ. ಗವಾಯಿ ಮೇಲೆ ವಕೀಲನೊಬ್ಬ ಶೂ ಎಸೆದಿರುವ ಘಟನೆ ತೀವ್ರ ಖಂಡನೀಯವಾಗಿದೆ ಎಂದು ದಸಂಸ (ಅಂಬೇಡ್ಕರ್ ವಾದ) ತಾಲೂಕು ಸಂಚಾಲಕ ಕೂಡಗಿ ಗೋವಿಂದರಾಜು ಕಿಡಿಕಾರಿದ್ದರು. ಪಟ್ಟಣದ ತಹಶೀಲ್ದಾರ್ ಮೋಹನಕುಮಾರಿರವರಿಗೆ ದಸಂಸ (ಅಂಬೇಡ್ಕರ್ ವಾದ) ವತಿಯಿಂದ ಬುಧವಾರದಂದು ಮನವಿ ಸಲ್ಲಿಸಿ ಮಾತನಾಡಿದರು. ತಹಶೀಲ್ದಾರ್ ಕಚೇರಿ ಮೂಲಕ ರಾಷ್ಟ್ರಪತಿಗಳಿಗೆ ಈ ಘಟನೆ ಸಂಬಂಧ ಪತ್ರ ಬರೆದಿದ್ದು,ರಾಷ್ಟ್ರದ ಅತ್ಯುನ್ನತ ಸ್ಥಾನದಲ್ಲಿರುವ ಮುಖ್ಯ ನ್ಯಾಯಮೂರ್ತಿಗಳಿಗೆ ಅವಮಾನ ಮಾಡುವುದು ದೇಶಕ್ಕೆ ಅವಮಾನಿಸಿದಂತೆ, ಈ ಘಟನೆಗೆ ಕಾರಣನಾದ ವಕೀಲನ ಮೇಲೆ ದೇಶದ್ರೋಹ ಕೇಸ್ ದಾಖಲಿಸಿ ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದ್ದಾರೆ. ಭಾರತದ ಜಾತಿ ವ್ಯವಸ್ಥೆ ಎಷ್ಟು ಕ್ರೂರವಾಗಿದೆ ಎಂದರೆ, ಯಾರು ಈ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನದಲ್ಲಿ ನಂಬಿಕೆ ಇಟ್ಟಿರುತ್ತಾರೋ ಅವರೆಲ್ಲರನ್ನು ಈ ಸನಾತನವಾದಿಗಳು ತಮ್ಮ ವಿರೋಧಿಗಳಂತೆ ಕಾಣುತ್ತಾರೆ ಅವರು ರಾಷ್ಟ್ರಪತಿಗಳೇ ಆಗಿರಲಿ. ಮುಖ್ಯ ನ್ಯಾಯಮೂರ್ತಿಗಳೇ ಆಗಿರಲಿ ಸಂವಿಧಾನ ಜಾರಿಯಾದ 75 ವರ್ಷಗಳ ನಂತರವೂ ಈ ದೇಶದ ಜಾತಿವಾದಿ ಮನಸ್ಸುಗಳು ತಮ್ಮ ಜಾತಿ ಮೂಲದ ಅಸಮಾನತೆ ಮತ್ತು…
ಸರಗೂರು: ಪಟ್ಟಣದಲ್ಲಿ ಕ್ರೀಡಾ ಚಟುವಟಿಕೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸರ್ಕಾರದ ಕಾರ್ಯಕ್ರಮಗಳನ್ನು ಆಯೋಜಿಸಲು ಬಾಲ್ ಫೀಲ್ಡ್ ನ್ನು ಹಸ್ತಾಂತರಿಸುವಂತೆ ಮುಖ್ಯಾಧಿಕಾರಿಗಳು, ಪಟ್ಟಣ ಪಂಚಾಯಿತಿ, ಸರಗೂರು ರವರು ಕೋರಿರುತ್ತಾರೆ. ಅದರಂತೆ ಈ ಬಗ್ಗೆ ಪರಿಶೀಲಿಸಲಾಗಿ, ಸದರಿ ಬಾಲ್ ಫೀಲ್ಡ್ ಸರಗೂರು ಸ.ನಂ. 1/1 ಮತ್ತು ಸ.ನಂ. 1/2 d ಜಮೀನಾಗಿರುತ್ತದೆ. ಸ.ನಂ. 1/1 ರಲ್ಲಿನ 7–19 ಎಕರೆ ಚನ್ನರಾಜೇ ಅರಸ್ ಬಿನ್ ವೀರರಾಜೇ ಅರಸ್ ರವರ ಹೆಸರಿನಲ್ಲಿ ಹಾಗೂ ಸರಗೂರು ಸ.ನಂ. 1/2 ರಲ್ಲಿನ 1-31 ಎಕರೆ ಜಮೀನು ಬ್ರಹ್ಮದೇವಯ್ಯ ಬಿನ್ ಬ್ರಹ್ಮದೇವಯ್ಯ ರವರ ಹೆಸರಿನಲ್ಲಿ ಖಾತೆ ದಾಖಲಾಗಿರುವುದು ಆರ್.ಟಿ.ಸಿ ಯಿಂದ ಕಂಡುಬಂದಿರುತ್ತದೆ. ಮೇಲ್ಕಂಡ ಜಮೀನನ್ನು ಕ್ರೀಡಾಂಗಣಕ್ಕಾಗಿ ಕಾಯ್ದಿರಿಸುವ ಸಂಬಂಧ ಮೇಲ್ಕಂಡ ಜಮೀನಿನ ಖಾತೆದಾರರು ಅಥವಾ ವಾರಸುದಾರರು ದಿನಾಂಕ: 25—10–2025 ರ ಒಳಗೆ ಕಛೇರಿ ವೇಳೆಯಲ್ಲಿ ಸರಗೂರು ತಾಲ್ಲೂಕು ಕಛೇರಿಯ ತಹಶೀಲ್ದಾರ್ ರವರನ್ನು ಜಮೀನಿಗೆ ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಸಂಪರ್ಕಿಸಲು ತಿಳಿಯಪಡಿಸಿದೆ. ತಪ್ಪಿದ್ದಲ್ಲಿ ನಿಯಮಾನುಸಾರ ಕ್ರಮವಹಿಸಲಾಗುವುದೆಂದು ಎಂದು ಸರಗೂರು ತಹಶೀಲ್ದಾರ್ ಮೋಹನಕುಮಾರಿ ತಿಳಿಸಿದರು. ವರದಿ:…
ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಬಳಿ ಜಾಲಿವುಡ್ ಸ್ಟುಡಿಯೋಸ್ ಹಾಕಿದ್ದ ಬಿಗ್ ಬಾಸ್ ಮನೆಯ ನಿರ್ಮಾಣದಲ್ಲಿ ಸಂಪೂರ್ಣವಾಗಿ ನಿಯಮ ಉಲ್ಲಂಘಿಸಲಾಗಿದೆ ಎಂದು ಜಿಲ್ಲಾಡಳಿತ ಬೀಗಮುದ್ರೆ ಹಾಕಿದ್ದು, ಜಾಲಿವುಡ್ ಆಡಳಿತ ಮಂಡಳಿಗೆ ಬಿಕ್ ಶಾಕ್ ನೀಡಿದೆ. ಸರ್ಕಾರದ ಆದೇಶವನ್ನು ಪ್ರಶ್ನಿಸಿ ಇಂದು ಜಾಲಿವುಡ್ ಸ್ಟುಡಿಯೋಸ್ ಹೈಕೋರ್ಟ್ ಮೊರೆ ಹೋಗಲಿದೆ ಎಂದು ಹೇಳಲಾಗಿದೆ. ಬಿಗ್ ಬಾಸ್ ನ ಮುಂದಿನ ದಿನಗಳು ಹೇಗೆ ಬೇರೆ ಕಡೆ ಶೋ ನಡೆಸುವುದೇ ಅಥವಾ ಸದ್ಯಕ್ಕೆ ಸ್ಥಗಿತಗೊಳಿಸುವುದೇ ಎಂದು ಚರ್ಚಿಸುತ್ತಿದೆ. ಇಂದೇ ಹೈಕೋರ್ಟ್ ಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ. ಅಲ್ಲಿಯವರೆಗೆ ಬಿಗ್ ಬಾಸ್ ನ ಎಲ್ಲಾ 17 ಮಂದಿ ಸ್ಪರ್ಧಿಗಳು ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಈಗಲ್ ಟನ್ ರೆಸಾರ್ಟ್ ನಲ್ಲಿ ಇರುತ್ತಾರೆ ಎನ್ನಲಾಗಿದೆ. ಸ್ಪರ್ಧಿಗಳಿಗಾಗಿ 12 ಕೊಠಡಿಗಳನ್ನು ಕಾಯ್ದಿರಿಸಲಾಗಿದೆ. ಜಾಲಿವುಡ್ ಸ್ಟುಡಿಯೋಸ್ ಆಡಳಿತ ಮಂಡಳಿ 2024ರಿಂದಲೇ ನಿಯಮ ಉಲ್ಲಂಘಿಸಿ ಬಿಗ್ ಬಾಸ್ ಮನೆಯ ಸೆಟ್ ಹಾಕಿ ವರ್ಷದಲ್ಲಿ ಮೂರ್ನಾಲ್ಕು ತಿಂಗಳು ಚಿತ್ರೀಕರಣ ಮಾಡುತ್ತಿತ್ತು. ಜಾಲಿವುಡ್ ಸ್ಟುಡಿಯೋಸ್ ಗೆ ಬೀಗಮುದ್ರೆ…
ಔರಾದ: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಆರ್.ಬಿ. ಗವಾಯಿ ಮೇಲೆ ವಕೀಲನೊಬ್ಬ ಶೂ ಎಸೆದಿರುವ ಘಟನೆ ತೀವ್ರ ಖಂಡನೀಯವಾಗಿದೆ ಎಂದು ಸುಭಾಷ್ ಚಂದ್ರ ಭೋಸ್ ಯುವಕ ಸಂಘದ ಅಧ್ಯಕ್ಷ ರತ್ನದೀಪ್ ಕಸ್ತೂರೆ ಕಿಡಿಕಾರಿದ್ದಾರೆ. ಸೋಮವಾರ ಪಟ್ಟಣದಲ್ಲಿ ತಹಶೀಲ್ದಾರ್ ಕಚೇರಿ ಮೂಲಕ ರಾಷ್ಟ್ರಪತಿಗಳಿಗೆ ಈ ಘಟನೆ ಸಂಬಂಧ ಪತ್ರ ಬರೆದಿದ್ದು,ರಾಷ್ಟ್ರದ ಅತ್ಯುನ್ನತ ಸ್ಥಾನದಲ್ಲಿರುವ ಮುಖ್ಯ ನ್ಯಾಯಮೂರ್ತಿಗಳಿಗೆ ಅವಮಾನ ಮಾಡುವುದು ದೇಶಕ್ಕೆ ಅವಮಾನಿಸಿದಂತೆ, ಈ ಘಟನೆಗೆ ಕಾರಣನಾದ ವಕೀಲನ ಮೇಲೆ ದೇಶದ್ರೋಹ ಕೇಸ್ ದಾಖಲಿಸಿ ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಘಟನೆ ಹಿಂದಿರುವ ಶಕ್ತಿಯನ್ನು ಪತ್ತೆ ಹಚ್ಚಬೇಕು. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಒತ್ತಾಯಿಸಿದ್ದಾರೆ. ಸುನೀಲ್ ಮಿತ್ರಾ, ಆನಂದ ಕಾಂಬಳೆ, ಚಂದು ಡಿಕೆ, ಬಬ್ಲೂಶಾ ಮುಂತಾದವರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೀದರ್ : ಚೆಂಡು ಹೂವಿನ ಬೆಳೆಯ ಜೊತೆಗೆ ಬೆಳೆದಿದ್ದ ಸುಮಾರು 15,10,000 ಸಾವಿರ ರೂ. ಮೌಲ್ಯದ 15 ಕೆ.ಜಿ 100 ಗ್ರಾಂ ತೂಕದ ಗಾಂಜಾ ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಿದ ಘಟನೆ ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಸಾವಳಿ ಗ್ರಾಮದಲ್ಲಿ ನಡೆದಿದೆ. ಸಾವಳಿ ಗ್ರಾಮದ ನಿವಾಸಿ ಸಂತೋಷ ತಂದೆ ನರಸಿಂಗರಾವ್ ಎನ್ನುವ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ. ಸಾವಳಿ ಗ್ರಾಮದ ತನ್ನ ಹೊಲದಲ್ಲಿ ಸಂತೋಷನು ಗಾಂಜಾ ಗಿಡಗಳನ್ನು ಬೆಳೆಸಿರುವ ಬಗ್ಗೆ ಮಾಹಿತಿ ಪಡೆದುಕೊಂಡು, ಪಿಎಸ್ ಐ ಆಶಾ ಅವರ ತಂಡ ಪಂಚರ ಸಮ್ಮುಖದಲ್ಲಿ ಇಂದು ದಾಳಿ ನಡೆಸಿ, ಹೊಲದಲ್ಲಿ ಬೆಳೆದಿರುವ ಒಟ್ಟು 51 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಎಲ್ಲ ಗಿಡಗಳ ಒಟ್ಟು ತೂಕ 15 ಕೆ.ಜಿ 100 ಗ್ರಾಂ ಆಗಿದ್ದು, ಸುಮಾರು 15 ಲಕ್ಷ 10 ಸಾವಿರ ರೂ. ಮೌಲ್ಯದ್ದಾಗಿದೆ ಎಂದು ತಿಳಿದು ಬಂದಿದೆ. ಈ ಘಟನೆಗೆ ಸಂಬಂಧಿಸಿಸಂತೆ ಕಮಲನಗರ್ ಪೊಲೀಸ್ ಠಾಣೆಯಲ್ಲಿ…
ಪಾವಗಡ: ತಾಲ್ಲೂಕಿನ ರೈತರು ಪ್ರತಿ ವರ್ಷ ಆರಂಭದ ಮಳೆ ಬಿದ್ದಾಗ ಆಶಾವಾದದಿಂದಲೇ ಕೃಷಿ ಚಟುವಟಿಕೆಯಲ್ಲಿ ತೊಡಗುತ್ತಾರೆ. ಆದರೆ ಅತಿವೃಷ್ಟಿ ಅನಾವೃಷ್ಟಿಗೆ ತುತ್ತಾದ ರೈತರು ಇಟ್ಟ ಫಸಲು ಕೈಗೆ ಬಾರದೆ ಕಂಗಾಲಾಗುತ್ತಾರೆ. ಹೀಗಾಗಿ ಪಾವಗಡ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಪೂಜಾರಪ್ಪ ಒತ್ತಾಯಿಸಿದ್ದಾರೆ. ರೈತರ ಜಮೀನಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಅವರು ಮಾತನಾಡಿ, ಮಳೆ ಆಶ್ರಿತ ಕಡಲೆಕಾಯಿ ಬೆಳೆ ಈ ಬಾರಿಯೂ ಕೈ ಕೊಟ್ಟಿರುವುದರಿಂದ ಸರ್ಕಾರವು ರೈತರ ನೆರವಿಗೆ ಧಾವಿಸಬೇಕು. ತುಮಕೂರು ಜಿಲ್ಲೆಯ ಪಾವಗಡ, ಮಧುಗಿರಿ, ಶಿರಾ ಮತ್ತು ಕೊರಟಗೆರೆ ತಾಲೂಕುಗಳಲ್ಲಿ ಮಳೆಯು ಸಕಾಲಕ್ಕೆ ಬರದೇ ರೈತರು ಕಂಗಾಲಾಗಿದ್ದಾರೆ. ಆದ್ದರಿಂದ ಈ ನಾಲ್ಕು ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕೆಂದು ಆಗ್ರಹಿಸಿದರು. ಪಾವಗಡ ತಾಲೂಕಿನ ಬ್ಯಾಡನೂರು ಗ್ರಾಮದ ಸರ್ವೆ ನಂಬರ್ 182 ರಲ್ಲಿ ಚಿತ್ತಪ್ಪ ಎಂಬ ರೈತ 3 ಎಕರೆ ಜಮೀನಿನಲ್ಲಿ ಇಟ್ಟಿರುವ ಕಡಲೆಕಾಯಿ ಬೆಳೆಯು ಸಂಪೂರ್ಣವಾಗಿ ಕೈಕೊಟ್ಟಿದೆ.…
ಕುಣಿಗಲ್: ಬೈಕ್ ಗೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ವೃದ್ಧೆಯೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಸುಗ್ಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಅಮೃತ್ತೂರು ಹೋಬಳಿ ಉಂಗ್ರ ಗ್ರಾಮದ ಹುಚ್ಚೇಗೌಡ( 55) ಹಾಗೂ ಅವರ ಮೊಮ್ಮಗ ಪ್ರೀತಮ್ ಗೌಡ (10) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಗಳು. ಇದೇ ಗ್ರಾಮದ ಲಿಂಗಮ್ಮ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹುಚ್ಚೇಗೌಡ ಹಾಗೂ ಆತನ ಮಗಳ ಮಗ ಪ್ರೀತಮ್ ಗೌಡ, ಇದೇ ಗ್ರಾಮದ ಲಿಂಗಮ್ಮ ಬೈಕ್ ನಲ್ಲಿ ಉಂಗ್ರ ಗ್ರಾಮದಿಂದ ಹುಲಿಯೂರುದುರ್ಗಕ್ಕೆ ಹೋಗುತ್ತಿದ್ದ ವೇಳೆ, ಹುಲಿಯೂರುದುರ್ಗ ಕಡೆಯಿಂದ ಯಡವಾಣಿ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ತುಮಕೂರು: ಕುಣಿಗಲ್ ತಾಲ್ಲೂಕಿನ ಮಾರ್ಕೋನಹಳ್ಳಿ ಜಲಾಶಯದ ಹಿನ್ನೀರಿನಲ್ಲಿ ಮಂಗಳವಾರ 6 ಜನ ಕೊಚ್ಚಿಕೊಂಡು ಹೋಗಿದ್ದು, ಇಬ್ಬರ ಮೃತದೇಹ ಪತ್ತೆಯಾಗಿದೆ. ಉಳಿದವರಿಗೆ ಹುಡುಕಾಟ ನಡೆದಿದೆ. ಜಲಾಶಯದ ಹಿನ್ನೀರಿನ ಕಾಲುವೆಗೆ ಇಳಿದಿದ್ದು, ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಒಟ್ಟು ಏಳು ಮಂದಿಯಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಒಬ್ಬರನ್ನು ರಕ್ಷಿಸಲಾಗಿದೆ ಎಂದು ವರದಿಗಳಿಂದ ತಿಳಿದು ಬಂದಿದೆ. ಮೃತರು ತುಮಕೂರು ನಗರದ ಬಿ.ಜೆ.ಪಾಳ್ಯದ ನಿವಾಸಿಗಳು. ಕುಣಿಗಲ್ ತಾಲ್ಲೂಕಿನ ಮಾಗಡಿಪಾಳ್ಯ ಗ್ರಾಮದ ಸಂಬಂಧಿಕರ ಮನೆಗೆ ಹೋಗಿದ್ದರು. ಊಟ ಮುಗಿಸಿಕೊಂಡು ಜಲಾಶಯಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದೆ. ಮೃತರ ವಿವರ ಇನ್ನೂ ಲಭ್ಯವಾಗಿಲ್ಲ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಕುಣಿಗಲ್: ದಲಿತರು ದೇವಾಲಯ ಪ್ರವೇಶಿಸಿ ಪೂಜೆ ಸಲ್ಲಿಸಲು ಮುಂದಾದಾಗ ಇದು ಖಾಸಗಿ ದೇವಾಲಯ ಎಂದು ದೇವಸ್ಥಾನ ಪ್ರವೇಶಕ್ಕೆ ಅಡ್ಡಿಪಡಿಸಿದ್ದಲ್ಲದೆ ಪೂಜೆಗೂ ನಿರಾಕರಿಸಿರುವ ಘಟನೆ ಕಿಚ್ಚಾವಾಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ತಾಲೂಕಿನ ಹುಲಿಯೂರುದುರ್ಗ ಹೋಬಳಿ ಕಿಚ್ಚವಾಡಿ ಗ್ರಾಮದಲ್ಲಿ ಒಕ್ಕಲಿಗರು, ಆಚಾರ್, ಮಡಿವಾಳರು, ಲಿಂಗಾಯಿತರು, ವೈಷ್ಣವರು ಮತ್ತು ಪರಿಶಿಷ್ಟ ಜಾತಿ ಜನಾಂಗದವರು ವಾಸವಾಗಿದ್ದಾರೆ. ಗ್ರಾಮದಲ್ಲಿ ಚನ್ನಕೇಶವ, ಬಸವೇಶ್ವರ, ಲಕ್ಷ್ಮಿದೇವಿ, ಹುಚ್ಚಮ್ಮ ದೇವಿ, ಮಹಾದೇವಿ, ಮಾಸ್ತಮ್ಮ ದೇವಿ, ಕೋಣೆ ಚಿಕ್ಕಮ್ಮ ದೇವಿ ದೇವಸ್ಥಾನಗಳಿವೆ. ಅದರಲ್ಲಿ ಕೋಣೆ ಚಿಕ್ಕಮ್ಮ ದೇವಿ ದೇವಸ್ಥಾನಕ್ಕೆ ದಲಿತರಿಗೆ ಪ್ರವೇಶ ನಿರಾಕರಿಸಲಾಗಿತ್ತು. ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಗೋಪಿ ಜಯಪ್ರಕಾಶ್ ಎಂಬುವರು ಜುಲೈ 29ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದುಕೊರತೆ ಸಭೆಯಲ್ಲಿ ದೇವಾಲಯ ಪ್ರವೇಶ ಕಲ್ಪಿಸುವಂತೆ ಮನವಿ ಸಲ್ಲಿಸಿದ್ದರು. ಸೋಮವಾರ ಡಿವೈಎಸ್ ಪಿ ಓಂ ಪ್ರಕಾಶ್, ತಹಶೀಲ್ದಾರ್ ರಶ್ಮಿ, ಪಿಎಸ್ ಐ ಪ್ರಶಾಂತ್ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗ್ಗೆ ಗ್ರಾಮದ ಮುಖಂಡರೊಂದಿಗೆ…
ಪಾವಗಡ: ತಾಲ್ಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರ ವಿತರಣೆ ಮತ್ತು ಗಾಂಧಿ ಸ್ಮೃತಿ ಹಾಗೂ ಮದ್ಯಪಾನ ಮುಕ್ತರಿಗೆ ಅಭಿನಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ರೈತ ಸಂಘದ ಅಧ್ಯಕ್ಷರಾದ ನರಸಿಂಹ ರೆಡ್ಡಿ ಉದ್ಘಾಟನೆ ಮಾಡಿದರು. ಬಳಿಕ ಯೋಜನೆ ಕಾರ್ಯಕ್ರಮಗಳು ಕುರಿತು ಉಪಯುಕ್ತ ಮಾಹಿತಿ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕಿನ ಯೋಜನಾಧಿಕಾರಿಗಳಾದ ಮಹೇಶ್ ಹೆಚ್. ತಾಲೂಕಿನ ವ್ಯಾಪ್ತಿಯಲ್ಲಿ ನಮ್ಮೂರು ನಮ್ಮ ಕೆರೆ, ಜ್ಞಾನ ದೀಪ ಶಿಕ್ಷಕರ ನೀಡುವುದು, ಜ್ಞಾನ ವಿಕಾಸ ಕಾರ್ಯಕ್ರಮಗಳು, ನಗದರಲ್ಲಿ ಶುದ್ಧಗಂಗಾ ಘಟಕ ಸ್ಥಾಪನೆ, ಸದಸ್ಯರಿಗೆ ಆರೋಗ್ಯ ರಕ್ಷಾ ವಿಮಾ ಸೌಲಭ್ಯ ಹಾಗೂ ಶಾಲೆಗಳಿಗೆ ಡೆಸ್ಕ್ ಬೆಂಚ್ ವಾಟರ್ ಫಿಲ್ಟರ್ ವಿತರಣೆ ಹಾಲು ಉತ್ಪಾದಕ ಕಟ್ಟಡಗಳಿಗೆ ಮತ್ತು ದೇವಸ್ಥಾನ ಕಟ್ಟಡಗಳಿಗೆ ಅನುದಾನ ವಿತರಣೆ ಇನ್ನು ಹಲವಾರು ಕಾರ್ಯಕ್ರಮ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಒಟ್ಟು 395 ಜನ ವಿದ್ಯಾರ್ಥಿಗಳಿಗೆ 2,40,000 ರೂ ಪ್ರತೀ ತಿಂಗಳು ಸುಜ್ಞಾನ…