Subscribe to Updates
Get the latest creative news from FooBar about art, design and business.
- ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್?
- ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್ ಆರ್ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ
- ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ
- ತುಮಕೂರು: ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಹಿರಿಯ ಶಾಸಕರಿಗೆ ಕಡೆಗಣನೆ; ಕಾಂಗ್ರೆಸ್ ನಲ್ಲಿ ಬಂಡಾಯದ ಕಾವು
- ಕಾರವಾರ: ಅಂಚೆ ಇಲಾಖೆಯಿಂದ ಬುಕಿಂಗ್, ಪಿಕ್–ಅಪ್ ಮತ್ತು ಡೆಲಿವರಿ ಪಾಲುದಾರರಿಗಾಗಿ ಆನ್ ಲೈನ್ ಅರ್ಜಿ
- ಗ್ಯಾಸ್ ಸಿಲಿಂಡರ್ ಕಳ್ಳತನ ಜಾಲ ಭೇದಿಸಿ ಬೀದರ್ ಪೊಲೀಸರು: ₹9.75 ಲಕ್ಷ ಮೌಲ್ಯದ 55 ಗ್ಯಾಸ್ ಸಿಲಿಂಡರ್ ವಶ | ನಾಲ್ವರು ಆರೋಪಿಗಳ ಬಂಧನ
- 560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ
- ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
Author: admin
ಪಾವಗಡ : ದಸರಾ ಹಬ್ಬದ ರಜೆಗಳನ್ನು ಕಡಿತಗೊಳಿಸಿ ಹಿಂದೂ ಭಾವನೆಗಳಿಗೆ ಧಕ್ಕೆ ತರುವ ಕ್ರಿಶ್ಚಿಯನ್ ಶಾಲೆ ಹಾಗೂ ಖಾಸಗಿ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ತಾಲ್ಲೂಕು ಕಚೇರಿಯ ಅಧಿಕಾರಿಗಳಿಗೆ ಶ್ರೀರಾಮ ಸೇನಾ ಜಿಲ್ಲಾಧ್ಯಕ್ಷರಾದ ಅನಿಲ್ ಯಾದವ್ ರವರ ನೇತೃತ್ವದಲ್ಲಿ ಸೋಮವಾರ ಮನವಿ ಪತ್ರವನ್ನು ನೀಡಲಾಯಿತು. ಹಿಂದೂಗಳ ಪವಿತ್ರ ದಸರಾ ಹಬ್ಬದ ರಜೆಯನ್ನು ನೀಡಿದೆ. ತಾಲ್ಲೂಕಿನ ಹಲವಾರು ಶಾಲೆಗಳು ತರಗತಿ ಮತ್ತು ಪರೀಕ್ಷೆ ನಡೆಸುವ ಮೂಲಕ ಹಿಂದೂ ಧರ್ಮ ಪವಿತ್ರ ದಸರಾ ಹಬ್ಬ ಆಚರಣೆಗೆ ತೊಂದರೆ ನೀಡುತ್ತಿರುವುದು ಸರಿಯಲ್ಲ. ದಸರಾ ಹಬ್ಬದ ರಜೆಯನ್ನು ಕ್ರಿಸ್ಮಸ್ ನಲ್ಲಿ ನೀಡುವ ಮೂಲಕ ಮತಾಂತರಕ್ಕೆ ಪ್ರೇರಣೆ ನೀಡಲಾಗುತ್ತಿದೆ ಎಂದು ಆರೋಪಿಸಿದರು. ಹಲವಾರು ವರ್ಷಗಳಿಂದ ಇಡೀ ರಾಜ್ಯದಲ್ಲಿ ಪ್ರಾಥಮಿಕ ಪ್ರೌಢ ಶಾಲೆಗಳು ದಸರಾ ರಜೆ ನೀಡುವುದು ಸಂಪ್ರದಾಯವಾಗಿದೆ. ಈ ಪರಂಪರೆಯನ್ನು ಇತ್ತೀಚಿಗೆ ಉದ್ದೇಶಪೂರ್ವಕವಾಗಿ ತಡೆಯುವ ಷಡ್ಯಂತ್ರ ಇದಾಗಿದೆ ಎನ್ನುವುದು ಹಿಂದೂ ಸಮಾಜದ ವಿದ್ಯಾರ್ಥಿ ಪೋಷಕರಿಂದ ಕೇಳಿ ಬರುತ್ತಿದೆ. ಇದು ಮೇಲ್ನೋಟಕ್ಕೆ ಸತ್ಯ ಸಹ ಅನ್ನಿಸುತ್ತಿದೆ…
ಮೈಸೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದರೂ ಆಭ್ಯಂತರವಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ದಸರಾ ಮಹೋತ್ಸವ ವೀಕ್ಷಣೆಗೆ ಮೈಸೂರಿಗೆ ಭೇಟಿ ನೀಡಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ . ಹಾಗಾಗಿ ಹುದ್ದೆಗಾಗಿ ರೇಸ್ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಅವರು ಹೇಳಿದರು. ಸತೀಶ್ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿಯಾಗಬೇಕೆಂದು ವಿರೋಧ ಪಕ್ಷಗಳು ಅಭಿಮಾನ ತೋರಿಸುತ್ತಿರುವುದಕ್ಕೆ ಧನ್ಯವಾದಗಳು ಎಂದು ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿಗಳು. ನಾವೆಲ್ಲ ಅವರ ಬೆಂಬಲಕ್ಕೆ ಇದ್ದೇವೆ. ಐದು ವರ್ಷ ಕಾಲವು ಸಿದ್ದರಾಮಯ್ಯ ಅವರೇ ಅಧಿಕಾರದಲ್ಲಿ ಮುಂದುವರೆಯುತ್ತಾರೋ ಅಥವಾ ಮೂರು ವರ್ಷ ಮಾತ್ರ ಇರುತ್ತಾರೋ ಎಂಬುದನ್ನು ಹೈಕಮಾಂಡ್ ಹೇಳಬೇಕು. ಅದರ ಬಗ್ಗೆ ಹೇಳಿಕೆ ನೀಡುವ ಸಾಮರ್ಥ್ಯ ತಮಗಿಲ್ಲ ಎಂದರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದರೂ ತಮಗೇನೂ ಆಭ್ಯಂತರವಿಲ್ಲ. ಈ ನಿಟ್ಟಿನಲ್ಲಿ ಹೈಕಮಾಂಡ್ ತಮ್ಮೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ. ಮುಂದಿನ ಯಾವುದೇ ನಿರ್ಧಾರಗಳಾದರೂ ಪಕ್ಷದ ವರಿಷ್ಠರೇ ತೆಗೆದುಕೊಳ್ಳಬೇಕು…
ಬೆಂಗಳೂರು: ಮುಡಾ ಪ್ರಕರಣವನ್ನು ಬಿಜೆಪಿ ಪ್ರಚಾರಕ್ಕೆ ಬಳಸಿಕೊಂಡಿರುವುದೇ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲುಂಟಾಗಲು ಕಾರಣ ಎಂದು ಕಾಂಗ್ರೆಸ್ಸಿನ ಹಿರಿಯ ನಾಯಕ ಕೆ.ಬಿ. ಕೋಳಿವಾಡ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆಯೇ ತಾನು ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಿ, ಪಕ್ಷಕ್ಕೆ ಮುಜುಗರ ತಪ್ಪಿಸಬೇಕು ಎಂದು ಹೇಳಿದ್ದೆ. ಆ ಹೇಳಿಕೆಗೆ ನಾನು ಈಗಲೂ ಬದ್ಧನಾಗಿರುವುದಾಗಿ ಅವರು ತಿಳಿಸಿದರು. ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್ ಗೆಲುವು ಕಂಡಿದೆ. ಹರಿಯಾಣದಲ್ಲಿ ಸೋಲಿಗೆ ಮುಡಾ ಪ್ರಕರಣವೇ ಕಾರಣ. ಅಂದು ನಾನು ಹೇಳಿದ್ದು, ಈಗ ಸತ್ಯವಾಗಿದೆ. ತಾವು ಸಕ್ರಿಯ ರಾಜಕಾರಣದಿಂದ ದೂರವಿದ್ದರೂ ಕಾಂಗ್ರೆಸ್ ಪಕ್ಷದ ಪರವಾಗಿದ್ದೇನೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು : ರುಡ್‌ಸೆಟ್ ಸಂಸ್ಥೆಯ ವತಿಯಿಂದ ಗ್ರಾಮೀಣ ನಿರುದ್ಯೋಗಿ ಯುವತಿಯರಿಗೆ 30 ದಿನಗಳ ಉಚಿತ ಬ್ಯೂಟಿ ಪಾರ್ಲರ್ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯನ್ನು ನವೆಂಬರ್ 5 ರಿಂದ ಪ್ರಾರಂಭಿಸಲಾಗುತ್ತಿದ್ದು, ಅರ್ಜಿ ಸಲ್ಲಿಸುವವರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್/ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 18 ಕೊನೆಯ ದಿನವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕು ಹುಳಿಯಾರು ಪೊಲೀಸ್ ಠಾಣೆ ವ್ಯಾಪ್ತಿ ಹುಳಿಯಾರು ಬಸ್ ನಿಲ್ದಾಣದಲ್ಲಿ ಅನಾರೋಗ್ಯದಿಂದ ಅಸ್ವಸ್ಥಳಾಗಿದ್ದ ಸುಮಾರು 70 ವರ್ಷದ ಅಪರಿಚಿತ ವೃದ್ಧೆಯನ್ನು ಸೆಪ್ಟೆಂಬರ್ 28ರಂದು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆ ಫಲಕಾರಿಯಾಗದೆ ಅಕ್ಟೋಬರ್ 1ರಂದು ಬೆಳಿಗ್ಗೆ 6:40 ಗಂಟೆಗೆ ಮೃತಪಟ್ಟಿದ್ದು, ವಾರಸುದಾರರು ಯಾರೆಂದು ತಿಳಿದು ಬಂದಿರುವುದಿಲ್ಲ. ಮೃತೆಯು 162 ಸೆಂ.ಮೀ. ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಮೃತರ ಮೈಮೇಲೆ ನೀಲಿ ಬಣ್ಣದ ನೈಟಿ ಇರುತ್ತದೆ. ಮೃತಳ ವಾರಸುದಾರರು ಯಾರಾದರೂ ಇದ್ದಲ್ಲಿ ದೂ.ಸಂ. 08133-256150 / 267234, 08134-251084, 0816-2272451ನ್ನು ಸಂಪರ್ಕಿಸಬೇಕೆಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 132–ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ–2025ರ ಸಂಬಂಧ ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯ 35 ವಾರ್ಡ್ ಗಳಲ್ಲಿ ಅಕ್ಟೋಬರ್ 5ರ ಶನಿವಾರ ಹಮ್ಮಿಕೊಂಡಿದ್ದ ಮತದಾರರ ಅಭಿಯಾನದಲ್ಲಿ ನಮೂನೆ-6ರಲ್ಲಿ 328 ಸೇರ್ಪಡೆ, ನಮೂನೆ–7ರಲ್ಲಿ 371 ಕೈಬಿಡುವ ಮತ್ತು ನಮೂನೆ–8ರಲ್ಲಿ 410 ತಿದ್ದುಪಡಿ ಅರ್ಜಿ ಸೇರಿ ಒಟ್ಟು 1109 ಅರ್ಜಿಗಳು ಸ್ವೀಕೃತವಾಗಿರುತ್ತವೆ ಎಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ತಿಳಿಸಿದ್ದಾರೆ. ಈ ಅಭಿಯಾನದಲ್ಲಿ ದಿನಾಂಕ 01.01.2025 ಅನ್ನು ಅರ್ಹತಾ ದಿನಾಂಕವಾಗಿಟ್ಟುಕೊಂಡು 18 ವರ್ಷ ತುಂಬಿದ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯವನ್ನು ಕೈಗೊಳ್ಳಲಾಗಿತ್ತು. ಈ ವಿಶೇಷ ಅಭಿಯಾನದಲ್ಲಿ 17+ ಮತ್ತು 18 ವರ್ಷ ಪೂರೈಸಿದ ಯುವ ಮತದಾರರು ಹೆಚ್ಚಿನ ಆಸಕ್ತಿ ತೋರಿರುತ್ತಾರೆ. ಈ ದಿನ ಅರ್ಜಿ ಸಲ್ಲಿಸಲು ಸಾಧ್ಯವಾಗದ ಸಾರ್ವಜನಿಕರು ನಿರಂತರ ಪರಿಷ್ಕರಣೆಯಡಿ VOTER HELP LINE APP ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಸದರಿ ಅವಕಾಶವನ್ನು ಸದುಪಯೊಗಪಡಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ…
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ತುಮಕೂರು ದಸರಾ ಉತ್ಸವ 2024ರ ಅಂಗವಾಗಿ ಅಕ್ಟೋಬರ್ 11ರಂದು ವಿವಿಧ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಂದು ಬೆಳಿಗ್ಗೆ 6 ರಿಂದ 9:30 ಗಂಟೆಯವರೆಗೆ ಮಿನಿ ಮ್ಯಾರಥಾನ್, ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಚೆಸ್ ಕ್ರೀಡೆಗಳು ನಡೆಯಲಿವೆ. ಅದೇ ದಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 9 ರಿಂದ ರಾತ್ರಿ 10 ಗಂಟೆಯವರೆಗೆ ಕಬಡ್ಡಿ, ಖೋ–ಖೋ, ವಾಲಿಬಾಲ್, ಕುಸ್ತಿ ಪಂದ್ಯಾವಳಿಗಳು ನಡೆಯಲಿವೆ. ಆಸಕ್ತ ಕ್ರೀಡಾಪಟುಗಳು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಂಜುನಾಥ್(ಮೊ.ಸಂ.9035030273) ಅವರನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ತುಮಕೂರು: ದಸರಾ ಉತ್ಸವ ಪ್ರಯುಕ್ತ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಸ್ಕಂದಮಾತಾ ದೇವಿ(ಕರಗ) ರೂಪದಲ್ಲಿದ್ದ ಚಾಮುಂಡೇಶ್ವರಿ ದೇವಿಯ ಪೂಜೆಗಾಗಿ ಜರುಗಿದ ಶ್ರೀ ಲಲಿತಾ ಹೋಮದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಪಾಲ್ಗೊಂಡು ಪುಣ್ಯಾಹುತಿ ಅರ್ಪಿಸಿದರು. ನವರಾತ್ರಿ ಪ್ರಯುಕ್ತ ಸಚಿವರು ಹಾಗೂ ಅವರ ಪತ್ನಿ ಕನ್ನಿಕಾ ಪರಮೇಶ್ವರ ದಂಪತಿಗಳು ಚಾಮುಂಡೇಶ್ವರಿ ದೇವಿಗೆ ಕುಂಕುಮಾರ್ಚನೆ, ಪುಷ್ಪಾರ್ಚನೆ ಪೂಜಾ ಸೇವೆ ಸಲ್ಲಿಸಿದರು. ಚಾಮುಂಡೇಶ್ವರಿ ದೇವಿಯ ಪೂಜಾ ಕಾರ್ಯಕ್ರಮಗಳಲ್ಲಿ ಮಾಜಿ ಶಾಸಕ ಗೌರಿಶಂಕರ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ತಹಶೀಲ್ದಾರ್ ರಾಜೇಶ್ವರಿ, ಮುಜರಾಯಿ ತಹಸೀಲ್ದಾರ್ ಸವಿತಾ, ಮತ್ತಿತರರು ಪಾಲ್ಗೊಂಡು ಸಾಮೂಹಿಕವಾಗಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿವಿಧ ಮಹಿಳಾ ಮಂಡಳಿಯ ಮಹಿಳಾ ಸದಸ್ಯರು ಶ್ರೀ ಲಲಿತಾ ಸಹಸ್ರನಾಮವನ್ನು ಪಠಿಸಿದರು. ನವರಾತ್ರಿಯ ಶುಕ್ಲ ಪಕ್ಷದ ಪಂಚಮಿಯಂದು ದುರ್ಗೆಯ…
ತುಮಕೂರು : ಜಿಲ್ಲೆಯಲ್ಲಿ ಮೊದಲ ಬಾರಿಗೆ ಸರ್ಕಾರದ ವತಿಯಿಂದ ಅಚರಿಸಲಾಗುತ್ತಿರುವ ತುಮಕೂರು ದಸರಾ ಉತ್ಸವ–2024ರ ಚಿತ್ತಾಕರ್ಷಕ ಜಂಬೂಸವಾರಿ ಮೆರವಣಿಗೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ. ಅಕ್ಟೋಬರ್ 12ರಂದು ನಡೆಯಲಿರುವ ಜಂಬೂಸವಾರಿ ಕುರಿತು ಸೋಮವಾರ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ವಿಜಯ ದಶಮಿಯಂದು ನಡೆಯಲಿರುವ ಜಂಬೂಸವಾರಿ ಮೆರವಣಿಗೆ ಕುರಿತು ಅಂತಿಮ ಸಿದ್ಧತೆಗಳನ್ನು ಚರ್ಚಿಸಲಾಯಿತು. ಜಿಲ್ಲೆಯ ಭವ್ಯ ಸಂಸ್ಕೃತಿಯನ್ನು ಅನಾವರಣಗೊಳಿಸುವ ರೀತಿಯಲ್ಲಿ ಜಂಬೂಸವಾರಿ ಮೆರವಣಿಗೆ ನಡೆಸಲಾಗುತ್ತಿದ್ದು, ಇತ್ತೀಚೆಗಷ್ಟೆ ವಿವಿಧ ಜಾನಪದ ಕಲಾತಂಡಗಳೊಂದಿಗೆ ಅಲಂಕೃತ ಆನೆಗಳ ಮೆರವಣಿಗೆ ತಾಲೀಮು ನಡೆಸಲಾಗಿತ್ತು. ಮೆರವಣಿಗೆಯಲ್ಲಿ ಏನೆಲ್ಲಾ ಇರಲಿದೆ? ಚಿತ್ತಾಕರ್ಷಕ ಜಂಬೂಸವಾರಿ ಮೆರವಣಿಗೆಯಲ್ಲಿ ಕ್ರಮವಾಗಿ ಪೊಲೀಸ್ ಇಲಾಖೆಯ ಅಶ್ವದಳ 10 ಮೀ. ಜಾನಪದ ಕಲಾ ತಂಡಗಳು 20 ಮೀ. ಗತವೈಭವ ಸಾರುವ ಆಕರ್ಷಕ 30 ವಿಂಟೇಜ್ ಕಾರುಗಳು 200 ಮೀ. ಪೊಲೀಸ್ ಹಾಗೂ ಎನ್.ಸಿ.ಸಿ ಬ್ಯಾಂಡ್ 20 ಮೀ. 20 ಜೊತೆ ಎತ್ತುಗಳ ರಾಸು 20 ಮೀ. ಅಲಂಕೃತಗೊಂಡ ಟ್ಯಾಕ್ಟರ್ ನಲ್ಲಿ ಜಿಲ್ಲೆಯ 70 ದೇವರುಗಳು 700…
ತುಮಕೂರು : ತುಮಕೂರು ದಸರಾ 2024ರ ದಸರಾ ದೀಪಾಲಂಕಾರಕ್ಕಿಂದು ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಿದರು. ತುಮಕೂರಿನ ರಾಜ ಬೀದಿಗಳು ವಿದ್ಯುತ್ ದೀಪಗಳಿಂದ ಅಲಂಕೃತಗೊಂಡು ನಾಗರಿಕರನ್ನು ಪುಳಕಗೊಳಿಸಿದೆ. ನಗರದ ಬಟವಾಡಿ ವೃತ್ತದಿಂದ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತ, ಭದ್ರಮ್ಮ ಚೌಟ್ರಿ ವೃತ್ತ, ಟೌನ್ ಹಾಲ್ ವೃತ್ತ, ಕಾಲ್ ಟ್ಯಾಕ್ಸ್ ವೃತ್ತ ಹಾಗೂ ಗುಬ್ಬಿ ವೃತ್ತದ ವರೆಗೂ ಮತ್ತು ಶಿರಾ ಗೇಟ್ ನಿಂದ ಮರಳೂರು ದಿಣ್ಣೆ ವೃತ್ತವರೆಗೂ ಅಲ್ಲದೆ ನಗರದ ಪ್ರಮುಖ ಬೀದಿಗಳು ದೀಪಾಲಂಕಾರದಿಂದ ಮಧುವಣಗಿತ್ತಿಯಂತೆ ಸಿದ್ದವಾಗಿವೆ. ನಗರದ ವೃತ್ತಗಳಲ್ಲಿ ವಿದ್ಯುತ್ ದೀಪಗಳಿಂದ ಮೂಡಿದ ಚಾಮುಂಡಿ, ಕೃಷ್ಣ, ಲಕ್ಷ್ಮೀ ಸೇರಿದಂತೆ ವಿವಿಧ ದೇವರುಗಳ ಕಲಾಕೃತಿಗಳು ದೀಪಾಲಂಕಾರದ ಮೆರಗನ್ನು ಹೆಚ್ಚಿಸಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296