Subscribe to Updates
Get the latest creative news from FooBar about art, design and business.
- ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
- ಲಕ್ಷ್ಮೀ ಹೆಬ್ಬಾಳ್ಕರ್ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ
- ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ ಕೈ ಹೈಕಮಾಂಡ್ ಶಾಕ್!
- ಬೀದರ್ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು
- ಕೂಡ್ಲಿಗಿ: ಸಭೆ–ಉತ್ಸವ ಕಾಟಾಚಾರಕ್ಕಾಗದಿರಲಿ, ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸಂಘಟನೆಗಳ ಆಗ್ರಹ
- ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: 20 ಹೊಸ ಸಚಿವರ ಸೇರ್ಪಡೆ, ಪ್ರಮುಖ ಹುದ್ದೆಗಳಿಗೆ ಎಐಸಿಸಿ ಅಂತಿಮ ಅನುಮೋದನೆ
- ಕಾವೇರಿ ಕಿಚ್ಚು: ‘ಭೂಮಿ, ನೀರು, ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’ : ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಕರೆ
- ತಿಪಟೂರಿನಲ್ಲಿ ಜ್ಞಾನ ವಿಕಾಸ ಮಹಿಳಾ ವಿಚಾರಗೋಷ್ಠಿ: ಆರೋಗ್ಯ ಜಾಗೃತಿ ಹಾಗೂ ಸಾಂಸ್ಕೃತಿಕ ವೈಭವ
Author: admin
ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರವು ರೈತರಿಗೆ ಆಧುನಿಕ ಹೈನುಗಾರಿಕೆ(ಹಸು ಸಾಕಾಣಿಕೆ) ಕುರಿತು ಅಕ್ಟೋಬರ್ 8 ಮತ್ತು 9ರಂದು ಬೆಳಿಗ್ಗೆ 10 ಗಂಟೆಗೆ ಉಚಿತ ತರಬೇತಿ ನೀಡಲು ಉದ್ದೇಶಿಸಿದ್ದು, ಆಸಕ್ತರು ನಿಗಧಿಪಡಿಸಿದ ದಿನಾಂಕದಂದು ತರಬೇತಿಗೆ ಹಾಜರಾಗಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ. ತರಬೇತಿಗೆ ಹಾಜರಾಗಲಿಚ್ಛಿಸುವವರು ಇತ್ತೀಚಿನ ತಮ್ಮ 2 ಪಾಸ್ಪೋರ್ಟ್ ಅಳತೆ ಭಾವಚಿತ್ರ, ರೈತರ ಫ್ರೂಟ್ ಐಡಿ ಸಂಖ್ಯೆ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ(ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ)ವನ್ನು ಕಡ್ಡಾಯವಾಗಿ ತರಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶು ವೈದ್ಯಕೀಯ ಸಂಸ್ಥೆ/ ದೂರವಾಣಿ ಸಂಖ್ಯೆ 0816-2251214ನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ವೃತ್ತಿಪರ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜಾಲತಾಣ https://shp.karnataka.gov.in/bcwd ನಲ್ಲಿ ಅಕ್ಟೋಬರ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ ಆದಾಯ ಮಿತಿ 1ಲಕ್ಷ ರೂ. ಹಾಗೂ ಪ್ರವರ್ಗ-1, ಪರಿಶಿಷ್ಟ ಜಾತಿ/ಪಂಗಡಕ್ಕೆ ಸೇರಿದ ಅಭ್ಯರ್ಥಿಗಳ ಆದಾಯ ಮಿತಿ 2.50ಲಕ್ಷ ರೂ. ಮಿತಿಯೊಳಗಿರಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆ ವೆಬ್ಸೈಟ್ https://bcwd.karnataka.gov.in ಅಥವಾ ದೂರವಾಣಿ ಸಂಖ್ಯೆ 8050770004, 8050770005ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸೋನಿಯಾ ವರ್ಣೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ದಸರಾ ಹಬ್ಬದ ಸಮಯದಲ್ಲಿ ಶನಿ, ಸೂರ್ಯ ಮತ್ತು ಬುಧ ಸಂಚಾರದಿಂದ ಶಶ ರಾಜಯೋಗ, ಬುಧಾದಿತ್ಯ ಯೋಗ ರೂಪುಗೊಂಡಿವೆ. ಇದು ಕೆಲವು ರಾಶಿಗಳ ಅದೃಷ್ಟವನ್ನು ಬೆಳಗಲಿವೆ. 👇🏻 ವೃಷಭ ರಾಶಿ 👇🏻…
ತುಮಕೂರು: ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ಅಕ್ಟೋಬರ್ 6ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಬಿದರೆ, ಸೋಮಲಾಪುರ, ಸಂಪಿಗೆ, ಗುಬ್ಬಿ, ಕಲ್ಲೂರು ಉಪಸ್ಥಾವರ ಹಾಗೂ ನಿಟ್ಟೂರು ಸ್ವೀಕರಣಾ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಪೂರಕಗಳಿಗೆ ಒಳಪಡುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ತುಮಕೂರಿನ ಶ್ರೀ ಸಿದ್ದಿವಿನಾಯಕ ಸೇವಾಮಂಡಳಿ ಆವರಣದಲ್ಲಿಗಣೇಶ ಚತುರ್ಥಿ–2024ರ ಪ್ರಯುಕ್ತ ಹಮ್ಮಿಕೊಂಡಿದ್ದ ದಕ್ಷಯಜ್ಞಯಕ್ಷಗಾನ ಪ್ರಸಂಗತುಂಬಿದ ಪ್ರೇಕ್ಷಾಂಗಣದಲ್ಲಿ ಯಶಸ್ವಿ ಪ್ರದರ್ಶನಕಂಡಿತು. ಕಾರ್ಯಕ್ರಮವನ್ನು ದೀಪ ಬೆಳಗುವುದರ ಮುಖಾಂತರ ಉದ್ಘಾಟಿಸಿ ಮಾತನಾಡಿದ ಪ್ರಸನ್ನಕುಮಾರ್ , ಕಳೆದ ಹಲವಾರು ವರ್ಷಗಳಿಂದ ಗಣೇಶ ಉತ್ಸವವನ್ನು ನಡೆಸುತ್ತಿದ್ದು ನೂರಾರು ರಂಗತಂಡಗಳು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಿಕೊಟ್ಟು ನಮ್ಮ ಗಣೇಶ ಉತ್ಸವವನ್ನು ಯಶಸ್ವಿಗೊಳಿಸಿವೆ. ಈ ಬಾರಿಯೂ ಹತ್ತಾರು ರಂಗತಂಡಗಳು, ಯುವಕಲಾವಿದರು ಈ ಉತ್ಸವದಲ್ಲಿ ಭಾಗವಸುತ್ತಿದ್ದಾರೆ. ಅವರೆಲ್ಲರಿಗೂ ಶುಭಕೋರಿ ಮತ್ತು ಇಂದಿನ ದಕ್ಷಯಜ್ಞಯಕ್ಷಗಾನ ಪ್ರಸಂಗವೂ ಯಶಸ್ವಿಗೊಳ್ಳಲಿ ಎಂದು ಹಾರೈಸಿದರು. ನಂತರಇನ್ನೊಬ್ಬಅತಿಥಿಯಾದ ನಾಗೇಶ್ ಅವರು ಕಾರ್ಯಕ್ರಮಕ್ಕೆ ಶುಭಕೋರಿದರು. ಕಡೆಯದಾಗಿ ದಕ್ಷ ಯಜ್ಞಯಕ್ಷಗಾನ ಪ್ರಸಂಗದ ನಿರ್ದೇಶಕರಾದ ಮತ್ತು ಹೆಸರಾಂತ ಯಕ್ಷಗಾನ ಕಲಾವಿದರಾದ ಬೇಗಾರ್ ಶಿವಕುಮಾರ್ ಅವರು ಮಾತನಾಡಿ, ಯಕ್ಷಗಾನಂ ವಿಶ್ವಗಾನಂ ಎಂದು ಹೇಳಿ ಹೀಗೆ ಮುಂದಿನ ಎಲ್ಲಾ ರಂಗಕಾರ್ಯಕ್ರಮಗಳಿಗೆ ತುಮಕೂರಿನ ಪ್ರೇಕ್ಷಕರು ಬಂದು ಕಲಾವಿದರನ್ನು ಆಶೀರ್ವದಿಸಬೇಕು ಎಂದು ಕೇಳಿಕೊಂಡರು. ದಕ್ಷನ ಪಾತ್ರದಲ್ಲಿಯಕ್ಷಗಾನದ ಪ್ರಸಿದ್ಧ ಕಲಾವಿದರಾದ ಬೇಗಾರ್ ಶಿವಕುಮಾರ್ ಅವರು ಬಹಳ ಮನೋಜ್ಞವಾಗಿ ಅಭಿನಯಿಸಿದರು ಮತ್ತು ಉಳಿದ ಪಾತ್ರಗಳು…
ತುಮಕೂರು: ನಿವೃತ್ತ ಆರಕ್ಷಕ ಮಹಾನಿರೀಕ್ಷಕರಾದ ಸಿ.ಚಂದ್ರಶೇಖರ್ ಬರೆದಿರುವ ‘ಕಾವೇರಿ ವಿವಾದ –ಒಂದು ಐತಿಹಾಸಿಕ ಹಿನ್ನೋಟ’ ಪುಸ್ತಕ ನಗರದಲ್ಲಿಂದು ಲೋಕಾರ್ಪಣೆ ಗೊಂಡಿತು. ನಗರದ ಎಸ್ ಎಸ್ ಐಟಿ ಕ್ಯಾಂಪಸ್ ನಲ್ಲಿ ಶನಿವಾರದಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮತ್ತು ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಕೆ.ನಾರಾಯಣಗೌಡ ಅವರು ಪುಸ್ತಕ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಡಾ.ಕೆ.ನಾರಾಯಣಗೌಡ ಅವರು, ನ್ಯಾಯಮೂರ್ತಿ ಗ್ರಿಫ್ಫಿನ್ ಅವರು ನೀಡಿದ್ದ ಆದೇಶ ಕರ್ನಾಟಕಕ್ಕೆ ಅನುಕೂಲ ಆಗಿತ್ತು. ಆದರೆ, ಮದ್ರಾಸ್ ಸರ್ಕಾರದ ಒತ್ತಾಯದಿಂದಾಗಿ, ಬ್ರಿಟಿಷ್ ಸರ್ಕಾರ ಅದನ್ನು ಅಸಿಂಧುಗೊಳಿಸಿತು. ಆ ಸಂದರ್ಭದಲ್ಲಿ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ಕಾವೇರಿ ನೀರಿನ ಮೇಲೆ ತಮಿಳುನಾಡಿಗೆ ಪರಂಪರಾನುಗತ ಹಕ್ಕು ಇರಲಿಲ್ಲ. ಪರಂಪರಾನುಗತ ಹಕ್ಕು ಇಲ್ಲದಿರುವಾಗ ತಮಿಳುನಾಡು ರಾಜ್ಯವು, ತನ್ನಲ್ಲಿ ಕೃಷಿ ಚಟುವಟಿಕೆಗಳು ಹೆಚ್ಚಲು ಬಿಡಬಾರದಿತ್ತು. ತಮಿಳುನಾಡು ಒಪ್ಪಂದ ಮೀರಿ, ಕೃಷಿ ಜಮೀನು ವಿಸ್ತರಿಸಿದೆ ಎಂದು ಕಾವೇರಿ ನದಿ ನ್ಯಾಯಮಂಡಳಿ ಕೂಡ ಹೇಳಿದೆ. ಅದರೇ ಆನಂತರ ಕಾನೂನು…
ತುಮಕೂರು: ತುಮಕೂರು ದಸರಾ ಪ್ರಯುಕ್ತ ನಗರದ ಮಹಾತ್ಮಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಅಕ್ಟೋಬರ್ 6ರಂದು ಬೆಳಿಗ್ಗೆ 10 ಗಂಟೆಗೆ ಮಹಿಳಾ ಮತ್ತು ಮಕ್ಕಳ ದಸರಾ ಕಾರ್ಯಕ್ರಮ ಜರುಗಲಿದ್ದು, ಆಕರ್ಷಕ ಕ್ರೀಡೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅಂದು ಸಂಜೆ 5 ಗಂಟೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಡೆಯಲಿರುವ ಯುವ ಸಂಭ್ರಮದಲ್ಲಿ ಜಿಲ್ಲೆಯ ಪ್ರತಿಷ್ಠಿತ ಕಲಾವಿದರು ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಲಾ ಪ್ರದರ್ಶನ ಮತ್ತು ಆಹಾರ ಮೇಳವನ್ನು ಏರ್ಪಡಿಸಲಾಗಿದೆ. ನಂತರ ಸಂಜೆ 7 ಗಂಟೆಗೆ ನಗರದ ಡಾ.ಬಾಲ ಗಂಗಾಧರನಾಥ ಸ್ವಾಮೀಜಿ ವೃತ್ತದಲ್ಲಿ ದಸರಾ ವಿಶೇಷ ದೀಪಾಲಂಕಾರ ವೈಭವಕ್ಕೆ ಚಾಲನೆ ನೀಡಲಾಗುವುದು. ನಗರದ ಅಮಾನಿಕೆರೆಯಲ್ಲಿ ಸಂಜೆ 4 ಗಂಟೆಗೆ ಬೋಟಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆಯಬಹುದಾಗಿದೆ. ಬಳಿಕ 4:30 ಗಂಟೆಗೆ ಟೌನ್ಹಾಲ್ ವೃತ್ತದಿಂದ ಗುಬ್ಬಿ ವೀರಣ್ಣ ಕಲಾಕ್ಷೇತ್ರದವರೆಗೂ ನಡೆಯಲಿರುವ ಮೆರವಣಿಗೆಯಲ್ಲಿ ಆನೆಗಳ ಮೆರವಣಿಗೆ ತಾಲೀಮು, ಭಾರತೀಯ ಸಾಂಪ್ರದಾಯಿಕ ಉಡುಗೆ–ತೊಡುಗೆಗಳೊಂದಿಗೆ ಸುಮಾರು 1200ಕ್ಕೂ ಹೆಚ್ಚು ಯುವಕ-ಯುವತಿಯರು ಹಾಗೂ ವಿವಿಧ ಜನಪದ ಕಲಾತಂಡಗಳು…
ತುಮಕೂರು: ಜಿಲ್ಲೆಯ ಜನರ ಶ್ರೇಯಸ್ಸು, ಸಮೃದ್ಧಿ, ಸಂತಸಕ್ಕಾಗಿ ದಸರಾ ಉತ್ಸವ ಪ್ರಯುಕ್ತ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಚಾಮುಂಡೇಶ್ವರಿ ದೇವಿಗೆ ಇಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಶ್ರೀ ವನದುರ್ಗಾ ಹೋಮ ಪೂಜೆ ಸಲ್ಲಿಸಿದರು. ನಂತರ ನವರಾತ್ರಿಯ ಮೂರನೇ ದಿನ ಶನಿವಾರ ಚಂದ್ರಘಂಟಾ(ಮೀನಾಕ್ಷಿ) ಅಲಂಕಾರದಲ್ಲಿ ಕಂಗೊಳಿಸುತ್ತಿದ್ದ ಚಾಮುಂಡೇಶ್ವರಿ ದೇವಿಗೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ.ನಾಗಣ್ಣ ಸೇರಿ ಸಾಮೂಹಿಕವಾಗಿ ವಿಶೇಷ ಪೂಜಾ ಸೇವೆಗಳನ್ನು ಸಲ್ಲಿಸಿದರು. ಚಂದ್ರಘಂಟಾ ಅಲಂಕಾರವು ಪಾರ್ವತಿ ದೇವಿಯ ವಿವಾಹಿತ ರೂಪವನ್ನು ಪ್ರತಿನಿಧಿಸುತ್ತದೆ. ಶಿವಪುರಾಣದ ಪ್ರಕಾರ ರುದ್ರನು ಚಂದ್ರಶೇಖರ. ಈ ಚಂದ್ರಶೇಖರನ ಶಕ್ತಿ ಸ್ವರೂಪಿಣಿಯೇ ಚಂದ್ರಘಂಟಾ ದೇವಿ. ಮೂರನೇ ದಿನ ತದಿಗೆಯಂದು ಚಂದ್ರಘಂಟಾ ದೇವಿಯನ್ನು ಪೂಜಿಸುವುದರಿಂದ ಶಾಂತಿದಾಯಕ ಸ್ವರೂಪದ ದೇವಿ ನಮಗೆ ಶ್ರೇಯಸ್ಸನ್ನು ನೀಡುತ್ತಾಳೆ. ನಕಾರಾತ್ಮಕ ದುಷ್ಟ ಶಕ್ತಿಗಳನ್ನು ಹೊಡೆದೋಡಿಸುವ ಚಂದ್ರಘಂಟಾದೇವಿಯು ಭಕ್ತರಿಗೆ ಆರೋಗ್ಯ, ಸಮೃದ್ಧಿ ಮತ್ತು ಸಂತಸವನ್ನು ಹಂಚುತ್ತಾಳೆ…
ತುಮಕೂರು: ಜಿಲ್ಲೆಯಲ್ಲಿ ಮೊದಲ ಬಾರಿಗೆ ಸರ್ಕಾರದಿಂದ ಆಚರಿಸಲಾಗುತ್ತಿರುವ ತುಮಕೂರು ದಸರಾ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಕ್ಟೋಬರ್ 6ರಂದು ಮಹಿಳಾ ಮತ್ತು ಮಕ್ಕಳ ದಸರಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎನ್.ಚೇತನ್ ಕುಮಾರ್ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರಪಾಲಿಕೆ, ರಾಜ್ಯ ಬಾಲಭವನ ಸೊಸೈಟಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಕ್ಟೋಬರ್ 6ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಮತ್ತು ವೃಕ್ಷಮಾತೆ ನಾಡೋಜ ಹಾಗೂ ಪರಿಸರ ರಾಯಭಾರಿ ಡಾ.ಸಾಲುಮರದ ತಿಮ್ಮಕ್ಕ ಅವರು ಉದ್ಘಾಟಿಸಲಿದ್ದಾರೆ. ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರತಿನಿಧಿಗಳು ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ದಸರಾ ಕಾರ್ಯಕ್ರಮದ ಸಾಂಸ್ಕೃತಿಕ ಕಾರ್ಯಕ್ರಮ…
ತುಮಕೂರು : ತುಮಕೂರು ರೈಲ್ವೆ ನಿಲ್ದಾಣವನ್ನು ಏರ್ಪೋರ್ಟ್ ಮಾದರಿಯಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸಲು ಕೇಂದ್ರ ರೈಲ್ವೆ ಸಚಿವಾಲಯವು 88.41 ಕೋಟಿ ರೂ.ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ ರೈಲ್ವೆ ಜಲಶಕ್ತಿ ಖಾತೆ ರಾಜ್ಯ ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ. ಬೆಂಗಳೂರಿನಂತೆ ತುಮಕೂರು ಕೂಡ ಅತಿವೇಗವಾಗಿ ಬೆಳೆಯುತ್ತಿದ್ದು, ಸಾಮಾನ್ಯ ರೈಲ್ವೆ ಪ್ರಯಾಣಿಕರಿಗೂ ವಿಶ್ವ ದರ್ಜೆಯ ಸೌಲಭ್ಯಗಳು ಸಿಗಬೇಕೆಂಬ ಭವಿಷ್ಯದ ಸಾರಿಗೆ ವ್ಯವಸ್ಥೆಯನ್ನು ಮನಗಂಡು ತುಮಕೂರು ರೈಲ್ವೆ ನಿಲ್ದಾಣವನ್ನು ಸಿದ್ದಗಂಗಾ ಮಠದ ಮಾದರಿಯ ವಾಸ್ತುಶಿಲ್ಪದ ವಿನ್ಯಾಸದಲ್ಲಿ ನಿರ್ಮಿಸಲಾಗುವುದು. ಬಹುಮಹಡಿ ಕಟ್ಟಡ, ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ, ಆಗಮನ-ನಿರ್ಗಮನಕ್ಕೆ ಪ್ರತ್ಯೇಕ ದ್ವಾರಗಳು, ಏರ್ಕಾನ್ಕೋರ್ಸ್, ದಿವ್ಯಾಂಗ ಸ್ನೇಹಿ ಲಿಫ್ಟ್-ಎಸ್ಕಲೇಟರ್ಗಳು, ರಿಟೇಲ್, ವಾಣಿಜ್ಯ ಕಟ್ಟಡಗಳನ್ನು ನೂತನ ನಿಲ್ದಾಣ ಒಳಗೊಂಡಿರುತ್ತದೆ. ತುಮಕೂರು ನಗರದ ಕೇಂದ್ರ ಬಿಂದುವಾಗಿ ನಿಲ್ದಾಣ ಅಭಿವೃದ್ದಿ ಹೊಂದಲಿದ್ದು, ರೈಲ್ವೆ ಸಚಿವಾಲಯದಿಂದ ಅನುದಾನ ಬಿಡುಗಡೆಗೆ ಸಹಕರಿಸಿದ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವ ಅಶ್ವಿನಿ ವೈಷ್ಣವ ಅವರಿಗೆ ಕ್ಷೇತ್ರದ ಸಂಸದ ವಿ.ಸೋಮಣ್ಣ ಕೃತಜ್ಞತೆ ಸಲ್ಲಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…