Subscribe to Updates
Get the latest creative news from FooBar about art, design and business.
- ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
- ಲಕ್ಷ್ಮೀ ಹೆಬ್ಬಾಳ್ಕರ್ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ
- ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ ಕೈ ಹೈಕಮಾಂಡ್ ಶಾಕ್!
- ಬೀದರ್ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು
- ಕೂಡ್ಲಿಗಿ: ಸಭೆ–ಉತ್ಸವ ಕಾಟಾಚಾರಕ್ಕಾಗದಿರಲಿ, ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸಂಘಟನೆಗಳ ಆಗ್ರಹ
- ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: 20 ಹೊಸ ಸಚಿವರ ಸೇರ್ಪಡೆ, ಪ್ರಮುಖ ಹುದ್ದೆಗಳಿಗೆ ಎಐಸಿಸಿ ಅಂತಿಮ ಅನುಮೋದನೆ
- ಕಾವೇರಿ ಕಿಚ್ಚು: ‘ಭೂಮಿ, ನೀರು, ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’ : ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಕರೆ
- ತಿಪಟೂರಿನಲ್ಲಿ ಜ್ಞಾನ ವಿಕಾಸ ಮಹಿಳಾ ವಿಚಾರಗೋಷ್ಠಿ: ಆರೋಗ್ಯ ಜಾಗೃತಿ ಹಾಗೂ ಸಾಂಸ್ಕೃತಿಕ ವೈಭವ
Author: admin
ತುಮಕೂರು: ತುಮಕೂರು ನಗರದಲ್ಲಿ ನಡೆಯುತ್ತಿರುವ ತುಮಕೂರು ದಸರಾ ಮಹೋತ್ಸವದಲ್ಲಿ ರೋಬೋಟ್ ಭಕ್ತರನ್ನು ಸೆಳೆಯುತ್ತಿದೆ. ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಿರ್ಮಿಸಲಾಗಿರುವ ವೇದಿಕೆಯಲ್ಲಿ ಶಕ್ತಿ ದೇವತೆಯನ್ನು ಪ್ರತಿಷ್ಠಾಪನೆ ಮಾಡಲಾಗಿದ್ದು ಅದರ ಪಕ್ಕದಲ್ಲಿ ರೋಬೋಟ್ ಆನೆಯನ್ನು ಕೂಡ ಇರಿಸಲಾಗಿದೆ. ಸ್ವಿಚ್ ಮೂಲಕ ಆನೆಯ ಕಿವಿ ಹಾಗೂ ಸೊಂಡಿಲನ್ನು ಆಪರೇಟ್ ಮಾಡಲಾಗುತ್ತಿದೆ. ಜಿಲ್ಲೆಯ ಕುಣಿಗಲ್ ತಾಲೂಕಿನ ಶ್ರೀ ಯಡಿಯೂರು ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ಈ ರೋಬೋಟ್ ಆನೆಯನ್ನು ಪೇಟಾ ಸಂಸ್ಥೆಯು ದಾನವಾಗಿ ನೀಡಿದೆ. ತುಮಕೂರು ದಸರಾ ದೇವಿಗೆ ಚಂದ್ರಗಂಟಿ ಅಲಂಕಾರವನ್ನು ಮಾಡಿ ಪೂಜಿಸಲಾಗುತ್ತಿದೆ. ಕಳೆದ ಮೂರು ದಿನಗಳಿಂದ ದೇವಿಗೆ ವಿವಿಧ ಅಲಂಕಾರಗಳನ್ನು ಮಾಡಿ ಶಾಸ್ತ್ರೋಕ್ತವಾಗಿ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಲಾಗುತ್ತಿದೆ. ಈ ನಡುವೆ ಈ ವೇದಿಕೆಯಲ್ಲಿ ಬಹು ಆಕರ್ಷಣೀಯವಾಗಿ ಯಡಿಯೂರು ಸಿದ್ದಲಿಂಗೇಶ್ವರ ದೇಗುಲದಿಂದ ತರಿಸಲಾಗಿರುವ ರೋಬೋಟ್ ಆನೆಯು ಭಕ್ತರನ್ನು ಸೆಳೆಯುತ್ತಿದೆ. ಈ ಮೂಲಕ ಈ ಮಹೋತ್ಸವದಲ್ಲಿ ಒಂದು ಕೊರತೆಯನ್ನು ಈ ರೋಬೋಟ ಆನೆ ನೀಗಿಸಿದೆ ಎಂದೇ ಹೇಳಬಹುದಾಗಿದೆ ಎನ್ನುತ್ತಾರೆ ಅರ್ಚಕರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಹೆಚ್.ಡಿ.ಕೋಟೆ: ಯುವತಿಯೊಬ್ಬಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾದ ಘಟನೆ ಹೆಚ್.ಡಿ.ಕೋಟೆ ತಾಲ್ಲೂಕು ಹಿರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೆಚ್.ಡಿ.ಕೋಟೆ ತಾಲೂಕು ಹಿರೇಹಳ್ಳಿ ಗ್ರಾಮದ ಪುಟ್ಟಮಲ್ಲಪ್ಪ ಎಂಬುವವರ ಪುತ್ರಿ ಕವಿತಾ ಸಾವನ್ನಪ್ಪಿದ ಯುವತಿಯಾಗಿದ್ದಾಳೆ. ಸುಮಾರು ಎರಡು ಮೂರು ತಿಂಗಳ ಹಿಂದೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೂದನೂರು ಗ್ರಾಮದ ಪುಟ್ಟಪ್ಪ ಎಂಬುವವರ ಮಗ ಜಗ ಆಲಿಯಾಸ್ ನಿರಂಜನ್ ಎಂಬುವವನ ಜೊತೆ ಈಕೆಯನ್ನು ನಿಶ್ಚಿತಾರ್ಥ ಮಾಡಲಾಗಿತ್ತು. ನಿಶ್ಚಿತಾರ್ಥ ಆದಾಗಿನಿಂದ ಜಗ ಪ್ರತಿ ನಿತ್ಯ ಪುಟ್ಟಮಲ್ಲಪ್ಪ ಮನೆಗೆ ಬಂದು ಉಳಿದು ಹೋಗುತಿದ್ದ. ಮದುವೆಗೆ ಇನ್ನೂ ಕೇವಲ ಇಪ್ಪತ್ತು ದಿನ ಮಾತ್ರ ಇತ್ತು. ಎಂದಿನಂತೆ ಜಗ ಎರಡು ಗಂಟೆ ಸಮಯದಲ್ಲಿ ಹಿರೇಹಳ್ಳಿ ಗ್ರಾಮದ ಪುಟ್ಟಮಲ್ಲಪ್ಪ ಮನೆಗೆ ಬಂದಿದ್ದಾನೆ. ಈ ಸಂದರ್ಭದಲ್ಲಿ ಮನೆಯಲ್ಲಿ ಕವಿತಾ ತಂದೆ ತಾಯಿ ಕೂಲಿಗೆ ಹೋಗಿದ್ದರಿಂದ ಮನೆಯಲ್ಲಿ ಕವಿತಾ ಒಬ್ಬಳ್ಳೇ ಇದ್ದಳು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಆತ ಬಂದ ಹೋದ ಬಳಿಕ ಕವಿತಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಜೊತೆಗೆ ಮನೆಯ ಹೆಂಚು ತೆಗೆದ…
ಬೆಂಗಳೂರು: ಮುಡಾ ಹಗರಣದಿಂದ ಸಾರ್ವಜನಿಕರ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್ ಸರ್ಕಾರ ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಅವರನ್ನು ಗುರಿಯಾಗಿಸಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಸಾವರ್ಕರ್ ಮಾಂಸ ತಿನ್ನುತ್ತಿದ್ದರು ಮತ್ತು ಗೋಹತ್ಯೆಯನ್ನು ವಿರೋಧಿಸಲಿಲ್ಲ ಎಂಬ ಹೇಳಿಕೆಯನ್ನು ಸಚಿವ ದಿನೇಶ್ ಗುಂಡೂರಾವ್ ನೀಡಿರುವ ಹಿನ್ನೆಲೆ ಸಾಮಾಜಿಕ ಜಾಲತಾಣಗಳಲ್ಲಿ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ಅಧಿಕಾರದ ದುರಾ ಸೆಯಿಂದ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಭಾರತದ ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ಮುಡಿಪಾಗಿಟ್ಟ ದೇಶಭಕ್ತ ವೀರ್ ಸಾವರ್ಕರ್ ಅವರನ್ನು ನಾಚಿಕೆಗೇಡಿನ ರೀತಿಯಲ್ಲಿ ಗುರಿಯಾಗಿಸಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಡಾಸ್ಕಾಮ್ ನಲ್ಲಿನ ಅವರ ಭ್ರಷ್ಟಾಚಾರದಿಂದ ಸಾರ್ವಜನಿಕರನ್ನು ದಾರಿತಪ್ಪಿಸುವ ಈ ಹತಾಶ ತಂತ್ರವು ಸ್ವೀಕಾರಾರ್ಹವಲ್ಲ. ಕಾಂಗ್ರೆಸ್ನ ಭ್ರಷ್ಟ ನಾಯಕರನ್ನು ಹೊಣೆಗಾರರನ್ನಾಗಿ ಮಾಡುವವರೆಗೂ ಬಿಜೆಪಿ ಹೋರಾಟ ನಡೆಸಲಿದೆ ಎಂದು ಹೇಳಿದರು. ವೀರ್ ಸಾವರ್ಕರ್ ಸ್ವತಃ ಹೇಳಿದಂತೆ, ಸ್ವಾತಂತ್ರ್ಯವನ್ನು ಎಂದಿಗೂ ನೀಡಲಾಗುವುದಿಲ್ಲ, ಅದನ್ನು ಯಾವಾಗಲೂ ತೆಗೆದುಕೊಳ್ಳಲಾಗುತ್ತದೆ. ಯಾವುದೇ ಸುಳ್ಳು ಅಥವಾ ಗೊಂದಲಗಳು ಸತ್ಯವನ್ನು ಮರೆಮಾಚುವುದಿಲ್ಲ ಮತ್ತು ನಿಮ ಭ್ರಷ್ಟ ನಾಯಕರನ್ನು…
ಶಿವಮೊಗ್ಗ: ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಭಾಗದಲ್ಲಿ ಕಾಡಾನೆ ಹಾವಳಿ ನಿಯಂತ್ರಿಸಲು ಭದ್ರಾ ಅಭಯಾರಣ್ಯದಲ್ಲಿ 2 ಸಾವಿರ ಹೆಕ್ಟೇರ್ ನಲ್ಲಿ ಆನೆ ಶಿಬಿರ ಸ್ಥಾಪನೆ ಮಾಡಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು. ನಗರದ ಶಂಕರಘಟ್ಟದಲ್ಲಿ ನಡೆದ ಭದ್ರಾ ಹುಲಿ ಸಂರಕ್ಷಿತ ಪ್ರದೇಶ ರಜತ ಮಹೋತ್ಸವದಲ್ಲಿ ಅವರು ಈ ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ವನ್ಯಜೀವಿ ಮತ್ತು ಮಾನವ ಸಂಘರ್ಷ ಹೆಚ್ಚಾಗುತ್ತಿದೆ. ಆನೆಗಳಿಂದ ಹೆಚ್ಚಿನ ಜೀವಹಾನಿ ಮತ್ತು ರೈತರ ಬೆಳೆ ಹಾನಿ ಸಂಭವಿಸುತ್ತಿದ್ದು, ಜನರ ಸಂಕಷ್ಟದಲ್ಲಿದ್ದಾರೆ. ಇದನ್ನು ನಿಯಂತ್ರಿಸಲು 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆ ವಿಹಾರ ಧಾಮ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ. ಇನ್ನೂ ಆನೆಗಳಿಗೆ ಇಷ್ಟವಾಗುವಂತೆ ಬಿದಿರು, ಹಲಸು, ಹುಲ್ಲು ಇತ್ಯಾದಿ ಬೆಳೆಸಲಾಗುವುದು. ಸುತ್ತಲೂ ಬ್ಯಾರಿಕೇಡ್ ಅಳವಡಿಸಿ ಸೆರೆ ಹಿಡಿದ ಆನೆಗಳನ್ನು ಇಲ್ಲಿ ತಂದು ಬಿಡಲಾಗುವುದು. ಇದರಿಂದ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾಡಿನ ಹೊರಗೆ ಇರುವ ಆನೆಗಳಿಂದ ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಸಾಧ್ಯವಾಗುತ್ತದೆ…
ತುಮಕೂರು:ವಿದ್ಯಾರ್ಥಿಗಳಲ್ಲಿ ಶಿಕ್ಷಣದಲ್ಲಿ ಆಸಕ್ತಿ ವೃದ್ಧಿಯಾಗಬೇಕಾದರೆಧ್ಯಾನದಿಂದ ಮಾತ್ರ ಸಾಧ್ಯಎಂದು ಸಹಜಯೋಗದಜಿಲ್ಲಾ ನಿಕಟಪೂರ್ವ ಸಂಯೋಜಕ ಕೃಷ್ಣ ಅಭಿಪ್ರಾಯಪಟ್ಟರು. ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಎನ್.ಎಸ್.ಎಸ್. ವತಿಯಿಂದ ಆಯೋಜಿಸಲಾಗಿದ್ದ ಸಹಜಯೋಗ ಅಭ್ಯಾಸಕಾರ್ಯಕ್ರಮದಲ್ಲಿ ಮಾತನಾಡಿದರು. ಇಂದಿನ ದಿನಮಾನಗಳಲ್ಲಿ ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಬದ್ಧತೆ ಕಡಿಮೆಯಾಗುತ್ತಿದ್ದು, ವಿದ್ಯಾರ್ಥಿಗಳಲ್ಲಿ ಶಿಸ್ತು, ಮಾನಸಿಕ ಅಸ್ಮಿತೆ, ಜೀವನ ಕೌಶಲ್ಯಗಳಲ್ಲಿ ಬದಲಾವಣೆಗಳ ಮೂಲಕ ದೇಶಕ್ಕೆ ಶಕ್ತಿಯಾಗಬೇಕಾದರೆ ವಿದ್ಯಾರ್ಥಿಗಳು ಧ್ಯಾನವನ್ನುಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಪ್ರೇಮ ಹೆಗ್ಗಡೆ ಅವರು ಧ್ಯಾನವನ್ನು ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆಯ ಮುಖಾಂತರ ಸಹಜಯೋಗ ಮಾಡುವುದನ್ನು ತಿಳಿಸಿದರು. ವಿವಿಯಕಲಾ ಕಾಲೇಜಿನಎನ್.ಎಸ್.ಎಸ್. ಅಧಿಕಾರಿ ಡಾ.ಸುಮಾದೇವಿ ಎಸ್. ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು : ಸಮಾಜ ಕಲ್ಯಾಣ ಇಲಾಖೆಯು 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ವಿದ್ಯಾಥಿಗಳಿಗೆ ಮೆಟ್ರಿಕ್ ಪೂರ್ವ/ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ನೀಡಲು ಹಾಗೂ ನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಿದೆ. ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ http://ssp.postmetric.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಖಾಸಗಿ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ವಡ್ಡರಹಳ್ಳಿ ಬಳಿ ಇಂದು ಬೆಳಿಗ್ಗೆ ನಡೆದಿದೆ. ಬೆಂಗಳೂರಿನ ಶಿವಾಜಿನಗರದ ವಾಸಿಗಳಾದ ಅಕ್ಕಿರಾಮಪುರ ಸಂತೆಗೆ ಕುರಿ ಖರೀದಿ ಮಾಡಲು ಬಂದಿದ್ದರು. ಈ ವೇಳೆ ಎದುರಿಗೆ ಬಂದಂತಹ ಖಾಸಗಿ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಹೊರ ತೆಗೆಯಲು ಸ್ಥಳೀಯರು ಹರಸಾಹಸ ಪಟ್ಟರು. ಕಾರಿನಲ್ಲಿ ಸಿಲುಕಿಕೊಂಡಿದ್ದವರನ್ನು ಹೊರತೆಗೆದು ಕೊರಟಗೆರೆ ತಾಲೂಕು, ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಈ ಸಂಬಂಧ ಕೋರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಪಾವಗಡ: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಮುಂದಿನ 6 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವಂತೆ ಯಲ್ಲೊ ಅಲರ್ಟ್ ಘೋಷಿಸಲಾಗಿರುತ್ತದೆ. ತಾಲ್ಲೂಕಿನಲ್ಲಿ ಪ್ರಮುಖ ಬೆಳೆಗಳಾದ ಶೇಂಗಾ, ತೊಗರಿ, ರಾಗಿ, ಭತ್ತ ಹಾಗೂ ಮುಸಕಿನ ಜೋಳ ಬೆಳೆಗಳನ್ನು ಭಾರೀ ಮಳೆಯಿಂದ ಸಂರಕ್ಷಿಸಬೇಕಾಗಿರುತ್ತದೆ. ಶೇಂಗಾ ಬೆಳೆಯು ಕಟಾವು ಹಂತದಲ್ಲಿದ್ದು, ತಗ್ಗು ಪ್ರದೇಶದ ಜಮೀಗಳಲ್ಲಿ ನೀರು ನಿಂತು ಬೆಳೆ ಹಾಳಾಗುವ ಸಂಭವವಿರುವುದರಿಂದ ಬಸಿಗಾಲುವೆಗಳನ್ನು ತೆಗೆದು, ಮಳೆ ನೀರನ್ನು ಹೊರ ಹಾಕಲು ಕ್ರಮ ವಹಿಸುವುದು. ತೊಗರಿ ಬೆಳೆಯು ಹೂಬಿಡುವ ಹಂತದಲ್ಲಿದ್ದು ಮೋಡ ಹಾಗೂ ಮಳೆಯ ಕಾರಣ ಕಾಯಿಕೊರಕ ಕೀಟದ ಭಾಧೆಯು ಅಲಲ್ಲಿ ಕಂಡು ಬಂದಿರುತ್ತದೆ. ಈ ಕೀಟವು ಹೂವು, ಮೊಗ್ಗು ಕೊರೆಯುತ್ತದೆ, ಹೂ ಉದುರುವುದು, ಕಾಯಿಗಳನ್ನು ಕೊರೆದು ತಿನ್ನುತ್ತದೆ. ಈ ಕೀಟವನ್ನು ಒಂದು ಲೀಟರ್ ನೀರಿಗೆ 0.5 ಎಂ.ಎಲ್ ಇಂಡಾರೈಕಾರ್ಬ್ 45SP, 0.15 ML ಸ್ಟೈನೋಸಾಡ್ –45 SC, 2 ML ಪ್ರೋಪೆನೋಪಾಸ್ 25% ಈ.ಸಿ ಕೀಟನಾಶಕಗಳಿಂದ ಸಿಂಪರಣೆಯನ್ನು ಕೈಗೊಂಡು ಕೀಟ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಂತೆ…
ಪಾವಗಡ: ಪಾವಗಡ ತಾಲ್ಲೂಕಿನ ಪಳವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೀರಮ್ಮನಹಳ್ಳಿಯ ಕಡು ಬಡ ಕುಟುಂಬದ ಮಹಿಳೆ ಪತಿಯನ್ನು ಕಳೆದುಕೊಂಡು ಜೀವನ ಸಾಗಿಸುತ್ತಿದ್ದು, ಈ ಮಹಿಳೆಗೆ ಸೇವಾ ಟ್ರಸ್ಟ್, ಹೆಲ್ಪ್ ಸೊಸೈಟಿ ಸಂಸ್ಥೆ ಸಹಾಯಕ್ಕೆ ಮುಂದಾಗಿದೆ. ವೀರಮ್ಮನಹಳ್ಳಿಯ ಬಡ ಕುಟುಂಬದ ಮಹಿಳೆಯೋರ್ವರು ಮೂರು ಚಿಕ್ಕ ಮಕ್ಕಳ ಜೊತೆಯಲ್ಲಿ ಸೋರುತ್ತಿರುವ ಮನೆಯಲ್ಲಿ ವಾಸವಿದ್ದು, ಕೆಲ ದಿನಗಳ ಹಿಂದಷ್ಟೇ ಅನಾರೋಗ್ಯ ಕಾರಣದಿಂದ ಗಂಡನನ್ನು ಕಳೆದುಕೊಂಡು ಪುಟ್ಟ ಮಕ್ಕಳ ಜೊತೆಯಲ್ಲಿ ಪಡ ಬಾರದ ಕಷ್ಟ ಪಡುತ್ತಿರುವ ಬಗ್ಗೆ ಸ್ಥಳೀಯ ಗ್ರಾಮದ ಲೋಕೇಶ್ ಎಂಬುವವರ ಮಾಹಿತಿ ಮೇರೆಗೆ ಪಟ್ಟಣದಿಂದ ಹತ್ತು ಕಿಲೋ ಮೀಟರ್ ದೂರದ ಗ್ರಾಮದ ಬಡ ಕುಟುಂಬದ ಬಳಿ ಧಾವಿಸಿದ ಸೇವಾ ಟ್ರಸ್ಟ್, ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್, ನಿರ್ಗತಿಕ ಮಹಿಳೆಯ ಕಷ್ಟವನ್ನು , ಕೂಡಲೇ ಸೇವಾ ಟ್ರಸ್ಟ್ ತಂಡಕ್ಕೆ ಕರೆ ಮಾಡಿ ದವಸ ದಾನ್ಯ ಹಾಗೂ ದಿನಸಿ ಕಿಟ್ ಒಳಗೊಂಡ ಪದಾರ್ಥಗಳನ್ನು ಒದಗಿಸಿತು. ಸೋರುತ್ತಿರುವ ಮನೆ ಮೇಲ್ಚಾವಣಿಗೆ ಗುಣಮಟ್ಟದ ಟಾರ್ಪಲ್ ತರಿಸಿ ಬಡ ಕುಟುಂಬದ…
ತುಮಕೂರು: ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯು ವಿಕಲಚೇತನ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ನೀಡಲು ರಾಜ್ಯ ಸರ್ಕಾರದ ಸ್ಟೇಟ್ ಸ್ಕಾಲರ್ ಶಿಪ್ ಪೋರ್ಟ್ಲ್ https://ssp.postmatric.karnataka.gov.in/ ಮೂಲಕ ಆನ್ ಲೈನ್ ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ವಿಕಲಚೇತನ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಯನ್ನು ದೂರವಾಣಿ ಸಂಖ್ಯೆ: 0816-2270029ನ್ನು ಸಂಪರ್ಕಿಸಬೇಕೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ.ದೊಡ್ಡಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296