Author: admin

ಬೆಳಗಾವಿ: ಸತೀಶ್‌ ಜಾರಕಿಹೊಳಿ ಮುಖ್ಯಮಂತ್ರಿಯಾದರೆ ಸ್ವಾಗತಿಸುತ್ತೇನೆ ಎಂದು ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ. ಸುದ್ದಿಗಾರರ ಪಶ್ನೆಗಳಿಗೆ ಉತ್ತರಿಸಿದ ಅವರು, ಬೆಳಗಾವಿ ಜಿಲ್ಲೆಯ ಯಾರೇ ಮುಖ್ಯಮಂತ್ರಿಯಾದರೂ ನಾನು ಸ್ವಾಗತಿಸುತ್ತೇನೆ, ಸತೀಶ್‌ ಜಾರಕಿಹೊಳಿ ಸೇರಿದಂತೆ ಯಾರೇ ಮುಖ್ಯಮಂತ್ರಿಯಾದರೂ ನನ್ನ ಬೆಂಬಲವಿದೆ  ಎಂದು ತಿಳಿಸಿದರು. ಬಿಜೆಪಿಯ ಪ್ರಭಾವಿ ನಾಯಕರಾಗಿದ್ದ ಲಕ್ಷ್ಮಣ್ ಸವದಿ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಆದರೆ ಸಚಿವ ಸ್ಥಾನ ಅವರಿಗೆ ಇನ್ನೂ ಸಿಕ್ಕಿಲ್ಲ. ಈ ನಡುವೆ ಸತೀಶ್ ಜಾರಕಿಹೊಳಿ ಸಿಎಂ ಆಗೋದಾದ್ರೆ ನನ್ನ ಬೆಂಬಲವಿದೆ. ಬೆಳಗಾವಿಯವರು ಯಾರೇ ಸಿಎಂ ಆಗುವುದಿದ್ದರೂ ನನ್ನ ಬೆಂಬಲವಿದೆ ಅಂತ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ಚರ್ಚೆಯಲ್ಲಿರುವ ಸಂದರ್ಭದಲ್ಲೇ ಸತೀಶ್‌ ಜಾರಕಿಹೊಳಿ ತೆರೆಮರೆಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ಟವಲ್‌ ಹಾಕಿದ್ದಾರೆ ಎನ್ನಲಾಗಿದೆ. ಈ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಲಕ್ಷ್ಮಣ್‌ ಸವದಿ ಬೆಳಗಾವಿ ಜಿಲ್ಲೆಯಿಂದ ಯಾರೇ ಸಿಎಂ ಆದರೂ ನನ್ನ ಬೆಂಬಲವಿದೆ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ಮೈಸೂರು: ನಗರಾಭಿವೃದ್ಧಿ ಪ್ರಾಧಿಕಾರ–ಮುಡಾದಿಂದ ಒಂದೇ ದಿನ 848 ನಿವೇಶನಗಳು ಹಂಚಿಕೆಯಾಗಿದೆ ಎನ್ನುವ ಮಾಹಿತಿ ಗೊತ್ತಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸುತ್ತೇನೆ ಎಂದು  ಸಚಿವ ಭೈರತಿ ಸುರೇಶ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಒಂದೇ ದಿನ ಇಷ್ಟೊಂದು ನಿವೇಶನಗಳು ಹಂಚಿಕೆಯಾಗಿರುವುದು ನನಗೆ ಹೊಸ ವಿಚಾರ. ಮುಡಾ ಪ್ರಕರಣದಲ್ಲಿ ತನಿಖೆಗೆ ನ್ಯಾಯಾಂಗ ಆಯೋಗ ರಚನೆಯಾದ ಮೇಲೆ ನಾನು ಆ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಏನೇ ಇದ್ದರೂ ಆಯೋಗವೇ ವಿಚಾರಣೆ ನಡೆಸಬೇಕು. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಸರ್ಕಾರ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ. 2022 ರಲ್ಲಿ ಆಗಿನ ಮುಡಾ ಅಧ್ಯಕ್ಷರಾಗಿದ್ದ ರಾಜೀವ್‌ ಅವರು ಒಂದೇ ದಿನ 848 ನಿವೇಶನಗಳನ್ನು ಹಂಚಿಕೆ ಮಾಡಿರುವುದು ನನಗೆ ತಿಳಿದಿಲ್ಲ. ಈ ಬಗ್ಗೆ ಕಾರ್ಯದರ್ಶಿಗಳಿಗೆ ಪತ್ರ ರವಾನೆಯಾಗಿದ್ದರೆ ಅದನ್ನು ಪರಿಶೀಲಿಸಲಾಗುವುದು ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 Provided by ಮೇಷ ರಾಶಿ:✨ ಮೇಷ ರಾಶಿಯವರ ಜೀವನದ ಫಲಾನುಫಲ ಈ ದಿನ ಈ ರೀತಿಯಾಗಿದೆ. ಮಕ್ಕಳಿಂದ ಗೌರವ ಲಭಿಸಬಹುದು ಆರ್ಥಿಕ ನಷ್ಟವನ್ನು ಅನುಭವಿಸಬಹುದು ಎಚ್ಚರದಿಂದಿರಿ. ವೃಷಭ ರಾಶಿ:✨ ಹಣಕಾಸಿನಲ್ಲಿ ತೊಂದರೆ ಬರಬಹುದು. ಚಿನ್ನದ ವ್ಯಾಪಾರಿಗೆ ನಷ್ಟವಾಗುತ್ತದೆ. ಆರೋಗ್ಯದ ಕಡೆ ಗಮನ ಹರಿಸಿ ಮಿಥುನ ರಾಶಿ: ✨ ಮಿಥುನ ರಾಶಿಯವರು…

Read More

ಬೆಂಗಳೂರು: ವಿದ್ಯಾರ್ಥಿಗಳು ಶಾಲೆಯಲ್ಲಿ ಶೌಚಾಲಯ ಸ್ವಚ್ಛಗೊಳಿಸಿದರೆ ತಪ್ಪೇನು? ಜಪಾನ್ ನಲ್ಲಿ ಮಾಡುತ್ತಾರಲ್ವಾ? ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಜ್ಯದ ಹಲವು ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ತೊಳೆಸಿರುವ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಇದೇ ಪ್ರಕರಣದ ಬಗ್ಗೆ ಬಿಜೆಪಿ ಸಂಸದ ಗೋವಿಂದ ಕಾರಜೋಳ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಜಪಾನ್ ನಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಛಗೊಳಿಸುತ್ತಾರೆ. ನಾನು ವಿದ್ಯಾರ್ಥಿಯಾಗಿದ್ದ ಸಮಯದಲ್ಲಿ ನನ್ನ ವಸತಿ ನಿಲಯವನ್ನು ಗುಡಿಸಿ ಸ್ವಚ್ಛಗೊಳಿಸುತ್ತಿದ್ದೆ ಎಂದು ಸಮರ್ಥಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಚ ಮಾಡಿದ್ದನ್ನು ದೊಡ್ಡ ಅಪರಾಧ ಎಂಬಂತೆ ಬಿಂಬಿಸಲಾಗುತ್ತಿದೆ. ವಿದ್ಯಾರ್ಥಿಗಳು ಪೊರಕೆ ಹಿಡಿಯುವುದು ಅಪರಾಧ ಎನ್ನುವ ರೀತಿ ಕಾಣುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳಿಗೆ ಸ್ವಚ್ಚತೆ ಕೆಲಸ ಕೀಳು ಎಂಬ ಭಾವನೆ ಮೂಡುತ್ತಿದೆ ಎಂದು ಅವರು  ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ಬೀದರ್‌: ಜಿಲ್ಲೆಯ ಔರಾದ್ ಪಟ್ಟಣದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಕಾಲೇಜು ಕಟ್ಟಡ ನಿರ್ಮಾಣ ಜಾಗದಲ್ಲಿ ತೆಗೆದಿರುವ ಗುಂಡಿಗೆ ಬಿದ್ದ ಬಾಲಕನ್ನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಶನಿವಾರ ನಡೆದಿದೆ. ಔರಾದ್ ನಿವಾಸಿ ಜಿಶಾನ್ ಇಸ್ಮಾಯಿಲ್‌ (11) ಮೃತಪಟ್ಟ ಬಾಲಕ. ಬಾಲಕ 5ನೇ ತರಗತಿಯಲ್ಲಿ ಓದುತ್ತಿದ್ದ, ಶನಿವಾರ ಶಾಲೆಗೆ ರಜೆ ಹಿನ್ನೆಲೆ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಆಟವಾಡಲು ಹೋದ ವೇಳೆ ಆಕಸ್ಮಿಕವಾಗಿ ಗುಂಡಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಔರಾದ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು, ಬಾಲಕನ ಶವ ತಾಲೂಕು ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರಿಗೆ ಒಪ್ಪಿಸಿದ್ದಾರೆ. ಈ ದುರ್ಘಟನೆಗೆ ಪಟ್ಟಣದ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ನೂತನ ಕಾಲೇಜು ಕೊಠಡಿ ನಿರ್ಮಾಣ ಮಾಡುತ್ತಿರುವ ಸಂಬಂಧಿಸಿದ ಗುತ್ತಿಗೆದಾರ ಹಾಗೂ ಇಂಜಿನಿಯರ್‌ ನಿರ್ಲಕ್ಷ್ಯವೇ ಕಾರಣ ಎಂದು ವಿದ್ಯಾರ್ಥಿ ಮಾನವ ಬಂಧುತ್ವ ವೇದಿಕೆಯ ಪ್ರಮುಖರು ಆಕ್ರೋಶ ವ್ಯಕ್ತಪಡಿಸಿದರು. ವೇದಿಕೆಯ ರತ್ನದೀಪ…

Read More

ತುಮಕೂರು:  ಜಿಲ್ಲಾಡಳಿತದಿಂದ ನಗರದಲ್ಲಿ ಅಕ್ಟೋಬರ್ 11 ಮತ್ತು 12 ರಿಂದ  ಎರಡು ದಿನಗಳ ಕಾಲ ನಡೆಯುವ ತುಮಕೂರು ‘ದಸರಾ 2024’ರ ಆನೆಯೊಂದಿಗೆ ಜಂಬೂಸವಾರಿ ಮಾರ್ಗವನ್ನು ಜಿಲ್ಲಾಧಿಕಾರಿಯ ಶುಭ ಕಲ್ಯಾಣ ಪರಿಶೀಲನೆ ನಡೆಸಿದರು. ತುಮಕೂರು ನಗರದ ಟೌನ್ ಹಾಲ್ ವೃತ್ತದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್ ಅರಣ್ಯ ಉಪ ಸಂರಕ್ಷಣಾಧಿಕಾರಿ ಅನುಪಮಾ ಮುಜರಾಯಿ ತಹಶೀಲ್ದಾರ್ ಸವಿತಾ  ಅವರೊಂದಿಗೆ  ಎಂಜಿ ರಸ್ತೆ ಸೇರಿದಂತೆ ಜಬ್ಬುಸವಾರಿ ಸಾಗುವ  ಮಾರ್ಗದಲ್ಲಿ ಕಾಲ್ನಡಿಗೆ ಮೂಲಕ ಸಾಗಿದರು. ಈ ಬಾರಿ ಜಿಲ್ಲಾಡಳಿತದ ವತಿಯಿಂದಲೇ ಅದ್ದೂರಿ ದ ಸರ ಕಾರ್ಯಕ್ರಮವನ್ನು ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು ಎಂಬ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹೆಚ್ಚಿನ ಮುಂಜಾಗ್ರತ ಕ್ರಮವನ್ನು ಕೈಗೊಂಡಿದೆ. ಪ್ರತಿ ವರ್ಷವೂ  ದಸರಾ ಸಮಿತಿ ನೇತೃತ್ವದಲ್ಲಿ ದಸರಾ ಮಹೋತ್ಸವವನ್ನು ಆ ಯೋಜನೆ ಮಾಡಲಾಗುತ್ತಿತ್ತು ಆದರೆ ಈ ಬಾರಿ ಸಂಪೂರ್ಣವಾಗಿ ಜಿಲ್ಲಾಡಳಿತ ಈ ಮಹೋತ್ಸವವನ್ನು ಆ ಯೋಜನೆ ಮಾಡಲು ಕೈಗೆತ್ತಿಕೊಂಡಿದೆ. ಇತ್ತೀಚೆಗಷ್ಟೇ ಜಿಲ್ಲಾ ಉಸ್ತುವಾರಿ ಸಚಿವ…

Read More

ಕೊರಟಗೆರೆ: ನಾಡಿನಲ್ಲೆಡೆ ಗೌರಿ ಗಣೇಶ ಹಬ್ಬದ ಸಡಗರ, ಅತ್ಯಂತ ವಿಜೃಂಭಣೆಯಿಂದ ಆಚರಣೆ ಮಾಡಲಾಯ್ತು.  ನಾಡಿನ ಪ್ರತಿ ಗ್ರಾಮದಲ್ಲೂ ಗಣೇಶ ಮೂರ್ತಿಯನ್ನು ಕೂರಿಸಿ ಅದ್ದೂರಿಯಾಗಿ ನಿಂತಿರುವ ಪೂಜಾ ಕಾರ್ಯಕ್ರಮಗಳು ನೆರವೇರಿದವು. ಕೊರಟಗೆರೆ ಪಟ್ಟಣದ ಸತ್ಯ ಗಣಪತಿ ಹಾಗೂ ಕಟ್ಟೆ ಗಣಪತಿ ಅದ್ದೂರಿಯಾಗಿ ಪ್ರತಿಷ್ಠಾಪನೆಗೊಂಡಿತು.  ಕಟ್ಟೆ ಗಣಪತಿಯ ಸನ್ನಿಧಾನದಲ್ಲಿ  16ನೇ ವರ್ಷದ ವಿಶೇಷವಾಗಿ ಅಮರನಾಥೇಶ್ವರನ ರೂಪದಲ್ಲಿ ಗಣಪತಿಯ ಪ್ರತಿಷ್ಠಾಪನೆ ನಡೆಯಿತು. ಪಟ್ಟಣದ ಸತ್ಯ ಗಣಪತಿ ಸಮಿತಿ ವತಿಯಿಂದ 65ನೇ ವರ್ಷದ ವೈಭವದ ಗಣಪತಿಯ ಪ್ರತಿಷ್ಠಾಪನೆ ಮಾಡಲಾಯಿತು.  ಕೊರಟಗೆರೆ ಪಟ್ಟಣದಲ್ಲಿ ಈ ಬಾರಿ ದಸರಾ ಉತ್ಸವದ ಹಾಗೆ ಗಣಪತಿಗಳ ವಿಸರ್ಜನಾ ಕಾರ್ಯಕ್ರಮ ನಡೆಯುತ್ತದೆ. 250 ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳ ನಿಯೋಜನೆಯಲ್ಲಿ ವಿವಿಧ ವಾದ್ಯಗೋಷ್ಠಿಗಳೊಂದಿಗೆ  ಗಣಪತಿ ಹಬ್ಬದಿಂದ 12 ದಿನಗಳ ಕಾಲ ವಿಶೇಷ ಪೂಜೆಗಳನ್ನು ನೆರವೇರಿಸಲಾಗುವುದು. ಪಟ್ಟಣದಲ್ಲಿ ಸ್ಥಾಪಿಸಿರುವ  ಎಲ್ಲಾ ಗಣಪತಿ ಮೂರ್ತಿಗಳ ವಿಶೇಷ ಮೆರವಣಿಗೆಯೊಂದಿಗೆ  ಪಟ್ಟಣದ ಪೊಲೀಸ್ ಅಧಿಕಾರಿಗಳು, ಗಣ್ಯಾದಿ ಗಣ್ಯರ, ಸಾವಿರಾರು ಭಕ್ತಾದಿಗಳ ಜೊತೆಗೂಡಿ ಅದ್ದೂರಿ ವಿಸರ್ಜನೆ ಮಾಡಲು ಪಟ್ಟಣದ ಜನತೆ ತೀರ್ಮಾನಿಸಿದ್ದಾರೆ.…

Read More

ಪಾವಗಡ : ಕರ್ಪೂರಿ ಠಾಕೂರ್ ಹಿಂದುಳಿದ ವರ್ಗಗಳ ಸಂಘಟನೆ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷರಾಗಿ ನಾಗರಾಜು ಎಸ್ ಮಂಗಳವಾಡ ಇವರನ್ನು ಆಯ್ಕೆ ಮಾಡಲಾಗಿದೆ. ಸವಿತಾ ಸಮಾಜದ ಸಂಘಟನೆಗೆ ನಿಸ್ವಾರ್ಥವಾಗಿ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ, ರಾಷ್ಟ್ರೀಯ ಕರ್ಪೂರಿ ಠಾಕೂರ್ ಒಬಿಸಿ ಸಂಘಟನೆ ಅಧ್ಯಕ್ಷರು ರಘುವೀರ್ ಸಿಂಗ್, ಉಪಾಧ್ಯಕ್ಷ ಆನಂದ ವಾರಿಕ ಕಲ್ಬುರ್ಗಿ ಅಭಿನಂದಿಸಿದ್ದಾರೆ. ಜಿಲ್ಲಾ ಸವಿತಾ ಸಮಾಜ ಮಂಜೇಶ್ ಗಾಂಧಿ, ಕ.ರಾ.ಸ.ಕ್ಷೌ ಹಿತರಕ್ಷಣಾ ವೇದಿಕೆ ಅಧ್ಯಕ್ಷ  ಕೃಷ್ಣಮೂರ್ತಿ, ಮತ್ತು ಕೆ.ಬಾಲಕೃಷ್ಣ, ಮಹಿಳಾ ಮತ್ತು ಮಕ್ಕಳ ರಕ್ಷಣಾ ಸಮಿತಿ ಅಧ್ಯಕ್ಷೆ ಡಾ.ಲಕ್ಷ್ಮಿ ಮತ್ತು ಕೋಮಲ, ಸಂಘಟನೆ ಮಂಡ್ಯ ಅಧ್ಯಕ್ಷ  ಲೋಕೇಶ್ ಸೇರಿದಂತೆ ಪಾವಗಡ ತಾಲ್ಲೂಕಿನ ಸವಿತಾ ಸಮಾಜದ ಬಂಧುಗಳು, ಗಣ್ಯರು ಶುಭಾ ಹಾರೈಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಪಾವಗಡ: ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ 20 ಕುರಿ ಮರಿಗಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ 15 ಕುರಿಗಳು ಸಾವನ್ನಪ್ಪಿರುವಂತಹ ಘಟನೆ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಚಿಕ್ಕಜಾಲೊಡು ಗ್ರಾಮದಲ್ಲಿ ಶನಿವಾರ ಸಂಜೆ ಸುಮಾರು 5 ಗಂಟೆಯ ಸಂದರ್ಭದಲ್ಲಿ ಜರುಗಿದೆ ಗ್ರಾಮದ ಸಿದ್ದಲಿಂಗಪ್ಪ ಎನ್ನುವವರಿಗೆ ಸೇರಿದಂತಹ ಕುರಿಮರಿಗಳು ಇವಾಗಿದ್ದು ಕುರಿಗಳನ್ನು ಮೇಯಿಸಲು ಹೊಲಗಳಿಗೆ ಕರೆದುಕೊಂಡಾಗ ಅವುಗಳ ಮರಿಗಳನ್ನು ಕೊಟ್ಟಿಗೆ ಬಳಿಯೇ ಕುಡಿ ಹಾಕಲಾಗಿತ್ತು. ಕೊಟ್ಟಿಗೆಗೆ ಏಕಾಏಕಿ ನಾಯಿಗಳು ದಾಳಿ ನಡೆಸಿದ ಹಿನ್ನೆಲೆ 15 ಕುರಿ ಮರಿಗಳು ಸಾವನಪ್ಪಿದ್ದು ಐದು ಮರಿಗಳು ನಾಯಿಗಳಿಂದ ತಪ್ಪಿಸಿಕೊಂಡಿದೆ. ಇದರಿಂದಾಗಿ ರೈತ ಸಿದ್ದಲಿಂಗಪ್ಪ 50,000 ನಷ್ಟಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ. ಘಟನೆಯು ವೈ ಎನ್, ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಬೀದರ್: ಜಿಲ್ಲೆಯ  ಔರಾದ ತಾಲೂಕಿನ ಬೆಳಕುಣಿ ಚೌಧರಿ ಗ್ರಾಮದ ಸರಕಾರಿ ಪ್ರೌಢ ಶಾಲೆ ಯಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ವಿದ್ಯಾರ್ಥಿಗಳು ಶಿಕ್ಷಕರಿಗೆ ಹೂಗುಚ್ಚ ಶಾಲು ಹಾಕಿ ಸನ್ಮಾನ ಮಾಡಿದರು. ಶಾಲೆಯ ಮಕ್ಕಳೆಲ್ಲಾ ಕೂಡಿ ಕೇಕ್ ಕತ್ತರಿಸುವ ಮೂಲಕ ಶಿಕ್ಷಕರ ದಿನಾಚರಣೆ ಆಚರಿಸಿದರು. ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಎಮ್.ಡಿ.ನಯೂಮ್ ಮಾತನಾಡಿ, ಮಕ್ಕಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ ಹಾಗೂ ಸುಂದರ ಸದೃಢ ಸಮಾಜ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ. ಒಬ್ಬ ಶಿಲ್ಪಿ ಒಂದು ಕಲ್ಲು ಕೆತ್ತಿ ಮೂರ್ತಿ ಮಾಡಿದ ಹಾಗೆ. ಅಜ್ಞಾನ ಮಗುವಿಗೆ ತಿದ್ದಿ ತೀಡಿ ಸಮಾಜದಲ್ಲಿ ದೊಡ್ಡ ವ್ಯಕ್ತಿಯಾಗಿ ಬದಲಾಯಿಸುವುದು ಅದು ಶಿಕ್ಷಕರು ಮಾತ್ರ ಎಂದು ತಿಳಿಸಿದರು. ಶಿಕ್ಷಕರ ದಿನಾಚರಣೆ ನಿಮಿತ್ಯ ಶಾಲೆಯ ಮುಖ್ಯ ಗುರುಗಳಿಗೂ ಶಿಕ್ಷಕರಿಗೆ ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರಾದ  ಎಮ್.ಡಿ.ನಯೂಮ್ ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ…

Read More