Subscribe to Updates
Get the latest creative news from FooBar about art, design and business.
- ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
- ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ಜೂನ್ 3 ರಂದು ವಿಧಾನಸೌಧ ಸುತ್ತಮುತ್ತಲಿನ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
- ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯುವ ಕಾಂಗ್ರೆಸ್ ಮುಖಂಡ ಒತ್ತಾಯ
- ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!
- ಶಿಥಿಲಾವಸ್ಥೆಯ ಶಾಲಾ ಕಟ್ಟಡಗಳ ಮಾಹಿತಿಗೆ ಸೂಚನೆ
- ಸಾರಿಗೆ ಬಲಪಡಿಸಲು ಪುರುಷರು ಕಡ್ಡಾಯವಾಗಿ ಟಿಕೆಟ್ ಪಡೆದು ಪ್ರಯಾಣಿಸಿ: ಕೆ.ಎನ್.ರಾಜಣ್ಣ ಕರೆ
- ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ
- ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!
Author: admin
ಹಾಸನ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು ಶುಕ್ರವಾರ ಚಾಲನೆ ನೀಡಿದರು. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದರು. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಕುಡಿಯುವ ನೀರು ಮತ್ತು ಕೆರೆ ತುಂಬಿಸುವ ಈ ಯೋಜನೆಯಿಂದ ಲಕ್ಷಾಂತರ ಜನರ ಬದುಕು ಬದಲಾಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ. ದಶಕಗಳ ಹಿಂದೆ ಕರಾವಳಿ ಮೂಲದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಈ ಯೋಜನೆಗೆ ಬುನಾದಿ ಹಾಕಿದ್ದರು. ಆಗ ಚಿಕ್ಕಬಳ್ಳಾಪುರ ಸಂಸದರಾಗಿದ್ದ ಅವರು ಆ ಕ್ಷೇತ್ರದ ಜನರಿಗೆ ಎತ್ತಿನಹೊಳೆ ನೀರು ಹರಿಸುವುದಾಗಿ ವಾಗ್ಧಾನ ನೀಡಿದ್ದರು. ಈಗ ಅದೇ ಕಾಂಗ್ರೆಸ್ ಅವಧಿಯಲ್ಲಿ ಯೋಜನೆಯ ಪ್ರಮುಖ ಘಟ್ಟಕ್ಕೆ ಚಾಲನೆ ದೊರಕಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ನವದೆಹಲಿ: ಭಾರತದ ಖ್ಯಾತ ರೆಸ್ಲರ್ ಬಜರಂಗ್ ಪುನಿಯಾ, ವಿನೇಶ್ ಫೋಗಟ್ ಅವರು, ಶುಕ್ರವಾರ ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಕ್ಷದ ನಾಯಕ ಪವನ್ ಖೇರಾ, ಹರ್ಯಾಣ ಕಾಂಗ್ರೆಸ್ ಮುಖ್ಯಸ್ಥ ಉದಯ್ ಭಾನ್ ಮತ್ತು ಹರಿಯಾಣದ ಎಐಸಿಸಿ ಉಸ್ತುವಾರಿ ದೀಪಕ್ ಬಬಾರಿಯಾ ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ವಿನೇಶ್ ಫೋಗಟ್, ಕಷ್ಟದ ಸಮಯದಲ್ಲೇ ನಮ್ಮವರು ಯಾರು ಎಂದು ತಿಳಿಯುತ್ತದೆ. ನಮ್ಮನ್ನು ರಸ್ತೆಯಲ್ಲಿ ಎಳೆದುಕೊಂಡು ಹೋಗುವಾಗ ಬಿಜೆಪಿ ಹೊರತುಪಡಿಸಿ ಎಲ್ಲಾ ಪಕ್ಷಗಳು ನಮ್ಮೊಂದಿಗೆ ಇದ್ದವು. ಮಹಿಳೆಯರೊಂದಿಗೆ ನಿಲ್ಲುವ ಮತ್ತು ‘ಸಡಕ್‌ನಿಂದ ಸಂಸದ್’ಗೆ ಹೋರಾಡಲು ಸಿದ್ಧವಾಗಿರುವ ಪಕ್ಷಕ್ಕೆ ನಾನು ಸೇರಿದ್ದೇನೆ ಎಂದು ನನಗೆ ಹೆಮ್ಮೆ ಇದೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಮೈಸೂರು: ವರದಕ್ಷಿಣೆ ಕಿರುಕುಳದಿಂದ ನೊಂದು ಗರ್ಭಿಣಿ ಮಹಿಳೆಯೊಬ್ಬರು ಸಾವಿಗೆ ಶರಣಾಗಿರುವ ಘಟನೆ ಮೈಸೂರಿನ ಕನಕಗಿರಿಯಲ್ಲಿ ನಡೆದಿದೆ. 8 ತಿಂಗಳ ಗರ್ಭಿಣಿ ಚೈತ್ರಾ @ ಚಿಕ್ಕದೇವಿ (23) ಸಾವಿಗೆ ಶರಣಾದವರಾಗಿದ್ದಾರೆ. 2 ವರ್ಷಗಳ ಹಿಂದೆ ಕನಕಗಿರಿಯ ಶರತ್ ರಾಜು ಎಂಬಾತನೊಂದಿಗೆ ನೂರಾರು ಕನಸು ಹೊತ್ತು ವಿವಾಹವಾಗಿದ್ದರು. ಆದರೆ ಪತಿ, ಅತ್ತೆ, ಚಿಕ್ಕತ್ತೆ ವರದಕ್ಷಿಣೆಗಾಗಿ ನಿರಂತರವಾಗಿ ಕಿರುಕುಳ ನೀಡಿದ್ದರು ಎನ್ನಲಾಗಿದೆ. ಚೈತ್ರಾಳ ತಂದೆ—ತಾಯಿ ಪತಿಯ ವಿರುದ್ಧ ಇದೀಗ ವರದಕ್ಷಿಣೆ ಕಿರುಕುಳ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡಿರುವ ವಿದ್ಯಾರಣ್ಯಪುರಂ ಪೊಲೀಸರು ಶರತ್ ರಾಜುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ರೇಣುಕಾಸ್ವಾಮಿಯನ್ನು ಖೆಡ್ಡಾಕ್ಕೆ ಬೀಳಿಸಲು ಆತನ ವಿವರಗಳನ್ನು ತಿಳಿದುಕೊಳ್ಳಲು ಪವಿತ್ರಾ ಗೌಡ ಹೆಸರಿನಲ್ಲಿ ಪವನ್ ಚಾಟ್ ಮಾಡಿ ಆತನ ವಿಳಾಸ ಪತ್ತೆ ಹಚ್ಚಿದ್ದ ಎನ್ನುವ ವಿಚಾರ ಇದೀಗ ತಿಳಿದು ಬಂದಿದೆ. ಈ ವಿಚಾರವನ್ನು ರೇಣುಕಾಸ್ವಾಮಿ ಮತ್ತು ಪವಿತ್ರಾಗೌಡ ಹಾಗೂ ಉಳಿದ ಆರೋಪಿಗಳ ಮೊಬೈಲ್ ಗಳಿಂದ ರಿಟ್ರೀವ್ ಮಾಡಿ ಎಫ್ ಎಸ್ ಎಲ್‌ನಿಂದ ಮಾಹಿತಿ ಪಡೆದುಕೊಂಡು ಚಾರ್ಜ್‌ಶೀಟ್ ನಲ್ಲಿ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ. ಪವಿತ್ರಾ ಗೌಡ ಹೆಸರಿನಲ್ಲಿ ಚಾಟ್ ಮಾಡಿದ್ದ ಪವನ್, ರೇಣುಕಾಸ್ವಾಮಿ ಕೆಲಸ ಮಾಡುತ್ತಿದ್ದ ಶಾಪ್, ಆತನ ಊರು, ವಾಸಸ್ಥಳದ ವಿಳಾಸವನ್ನು ಪತ್ತೆ ಹಚ್ಚಿದ್ದ. ನಂತರ ರೇಣುಕಾಸ್ವಾಮಿಯನ್ನು ಅಪಹರಿಸಿ ಚಿತ್ರದುರ್ಗದಿಂದ ನಗರದ ಪಟ್ಟಣಗೆರೆ ಶೆಡ್ ಗೆ ಕರೆತಂದಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಮಳೆ ಜಾಸ್ತಿ ಇರಬಹುದು. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಯಾದಗಿರಿ, ಬೀದರ್ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ. ಈ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದಂತೆ ಮಳೆಯ ಪ್ರಮಾಣವೂ ಕಡಿಮೆಯಾಗಲಿದೆ. ಈಗಿನಂತೆ ಸೆಪ್ಟೆಂಬರ್ 13ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. ಅಲ್ಲಿಯ ತನಕ…
ಔರಾದ್: ತಾಲೂಕಿನಲ್ಲಿ ಕಳೆದ ಮೂರುನಾಲ್ಕು ದಿನಗಳಿಂದ ಸುರಿದ ಮಳೆಗೆ ಹಾನಿಗೊಳಗಾದ ಪ್ರದೇಶಗಳಿಗೆ ಗುರುವಾರ ಸಂಸದ ಸಾಗರ ಖಂಡ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕಿನ ಬಾಚೆಪಳ್ಳಿ, ನಾಗೂರ (ಬಿ), ಮಸ್ಕಲ್, ಜೋಜನಾ, ಗುಡಪಳ್ಳಿ, ಮೆಡಪಳ್ಳಿ, ಕೊಳ್ಳುರ್, ಎಕಲಾರ, ತುಳಜಾಪೂರ, ಬೋರಾಳ ಗ್ರಾಮಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ವೀಕ್ಷಣೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಾಗರ ಖಂಡ್ರೆ, ತಾಲೂಕಿನಲ್ಲಿ ಮಾಂಜ್ರಾ ನದಿಯ ಬಳಿಯ ಜಮೀನಿನ ಬೆಳೆಗಳು ಹೆಚ್ಚು ಹಾನಿಗೊಳಗಾಗಿವೆ. ಅಲ್ಲದೇ ಕೆಲ ತಗ್ಗು ಪ್ರದೇಶದಲ್ಲಿ ನೀರು ಸಂಗ್ರಹವಾಗಿದ್ದು ಬೆಳೆ ನಾಶವಾಗಲಿದೆ. ಇವುಗಳ ಸಮೀಕ್ಷೆ ಮಾಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕಿನ ಕೆಲ ಗ್ರಾಮಗಳಲ್ಲಿ ಟ್ರಾನ್ಸ್ ಫಾರ್ಮರ್ ಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಅನೇಕ ಗ್ರಾಮಗಳಲ್ಲಿ ಮನೆಗಳು ಬಿದ್ದಿವೆ. ತಾಲೂಕಿನಲ್ಲಿ ಅಪಾರ ಪ್ರಮಾಣದ ಹಾನಿಯಾಗಿದೆ ಇವುಗಳ ಸಮಗ್ರ ವರದಿಯನ್ನು ನನಗೆ ಹಾಗೂ ಇಲಾಖೆಯ ಮೇಲಾಧಿಕಾರಿಗಳಿಗೆ ಸಲ್ಲಿಸುವಂತೆ ಸ್ಥಳದಲ್ಲಿರುವ ಅಧಿಕಾರಿಗಳಿಗೆ ಸೂಚಿಸಿದರು. ಪ್ರಮುಖರಾದ ಕಾಂಗ್ರೆಸ್ ಡಾ.ಭೀಮಸೇನರಾವ ಶಿಂಧೆ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ…
ತುಮಕೂರು: ಪಟ್ಟಣದ ಬಿ.ಹೆಚ್. ರಸ್ತೆಯಲ್ಲಿರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಟಿಸಿಎಚ್ ಬಿಎಡ್ ಹಾಸ್ಟೆಲ್ ಗೆ ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಬಗ್ಗೆ ವಿದ್ಯಾರ್ಥಿನಿಯರಿಂದ ಅವರು ಅಭಿಪ್ರಾಯಪಡೆದುಕೊಂಡರು. ಹಾಸ್ಟೆಲ್ ನಲ್ಲಿ ಊಟ, ತಿಂಡಿ ಉತ್ತಮ ಗುಣಮಟ್ಟದಲ್ಲಿ ಕೊಡುತ್ತಿದ್ದಾರೆ. ಗೀಸರ್ ವ್ಯವಸ್ಥೆ ಕೂಡ ಮಾಡಿಕೊಟ್ಟಿದ್ದಾರೆ ಎಂದು ವಿದ್ಯಾರ್ಥಿನಿಯರು ನ್ಯಾಯಮೂರ್ತಿಗಳಿಗೆ ತಿಳಿಸಿದರು. ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ವ್ಯಕ್ತಿತ್ವ ನಿರ್ಮಾಣ, ಶಿಸ್ತು, ಆರೋಗ್ಯ, ಸಂವಿಧಾನ ಇತ್ಯಾದಿ ವಿಚಾರಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳನ್ನ ಕರೆಸಿ ತಿಳುವಳಿಕೆ ಕಾರ್ಯಕ್ರಮವನ್ನ ಮೂಡಿಸ ಬೇಕು ಎಂದು ಇದೇ ವೇಳೆ ಅಧಿಕಾರಿಗಳಿಗೆ ನ್ಯಾಯಮೂರ್ತಿಗಳು ಸೂಚನೆ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೀದರ್: ಯುವತಿ ಭಾಗ್ಯಶ್ರೀ ಹತ್ಯೆಯಲ್ಲಿ ಭಾಗಿಯಾದ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸುವಂತೆ ಶಾಸಕ ಶರಣು ಸಲಗಾರ ಆಗ್ರಹಿಸಿದ್ದಾರೆ. ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಯುವತಿಯ ಹತ್ಯೆಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಬೀದರ್ ಹಾಗೂ ಬಿಜೆಪಿಯ ಯುವ ಮೋರ್ಚಾ ಮತ್ತು ಎಸ್ ಟಿ ಮೋರ್ಚಾ ಜಂಟಿಯಾಗಿ ಬೀದರ್ ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾ ಅಧಿಕಾರಿಗಳ ಕಚೇರಿವರೆಗೆ ಪ್ರತಿಭಟನೆ ರ‍್ಯಾಲಿ ಮೂಲಕ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಬಸವಕಲ್ಯಾಣ ತಾಲೂಕಿನ ಶಾಸಕ ಶರಣು ಸಲಗಾರ ಪ್ರತಿಭಟನೆ ರ‍್ಯಾಲಿಯಲ್ಲಿ ಭಾಗಿಯಾಗಿ ಮಾತನಾಡಿ, ಗುಣತೀರ್ಥವಾಡಿ ಭಾಗ್ಯಶ್ರೀ ಎಂಬ ಯುವತಿಯನ್ನು ಭೀಕರವಾಗಿ ಕೊಲೆ ಮಾಡಿ ಮುಳ್ಳು ಕಂಟಿಯಲ್ಲಿ ಶವ ಬಿಸಾಡಿದ್ದಾರೆ. ಈ ಘಟನೆ ಇಡೀ ಮಾನವ ಕುಲವೆ ಬೆಚ್ಚಿ ಬೀಳಿಸುವ ಕೃತ್ಯವಾಗಿದೆ. ಇಂತಹ ಘಟನೆ ನನ್ನ ಮತ ಕ್ಷೇತ್ರದಲ್ಲಿ ನಡೆದಿರುವುದು ನೋವಿನ ಸಂಗತಿಯಾಗಿದೆ ಎಂದರು. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ಬಂಧಿಸುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ…
ತುಮಕೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಒಡೆತನದ ಜಿಲ್ಲೆಯ ವಿವಿಧ ತಾಲ್ಲೂಕಿನಲ್ಲಿರುವ ಶಿಥಿಲಗೊಂಡಿರುವ ಹೆದ್ದಾರಿ ಫಲಕಗಳನ್ನು ತೆರವುಗೊಳಿಸಬೇಕಾಗಿರುವ ಕಾರಣ ಈ ಫಲಕಗಳನ್ನು ವಿಲೇವಾರಿ ಮಾಡಲು ವಿವಿಧ ಸಂಘ ಸಂಸ್ಥೆಗಳಿಂದ ದರಪಟ್ಟಿ ಆಹ್ವಾನಿಸಲಾಗಿದೆ. ಶಿಥಿಲಗೊಂಡಿರುವ ಹೆದ್ದಾರಿ ಫಲಕಗಳನ್ನು ಯಥಾಸ್ಥಿತಿಯಲ್ಲಿ ಪಡೆಯಲು ಇಚ್ಚಿಸುವವರು ಸೆಪ್ಟೆಂಬರ್ 13ರೊಳಗೆ ಸಂಸ್ಥೆಯ ಪೂರ್ಣ ವಿಳಾಸದ ವಿವರಗಳೊಂದಿಗೆ ದರಪಟ್ಟಿಯನ್ನು ಸಿದ್ದಪಡಿಸಿ ಮುಚ್ಚಿದ ಲಕೋಟೆಯಲ್ಲಿ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬಾಳನಕಟ್ಟೆ, ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಹತ್ತಿರ, ತುಮಕೂರು–572101 ಇವರಿಗೆ ಸಲ್ಲಿಸುವುದು. ಅವಧಿ ಮೀರಿದ ನಂತರ ಲಕೋಟೆಗಳನ್ನು ಸ್ವೀಕರಿಸುವುದಿಲ್ಲ. ಹೆಚ್ಚಿನ ಮಾಹಿತಿ ಹಾಗೂ ಶಿಥಿಲಗೊಂಡ ಪ್ರಚಾರ ಫಲಕಗಳ ವಿವರಗಳಿಗಾಗಿ ಮೊ.ಸಂ.9964525155ನ್ನು ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ರಾಷ್ಟ್ರೀಯ ವಿದ್ಯಾಪೀಠ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರದಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಇದೇ ವೇಳೆ ತಾಲ್ಲೂಕು ಮಟ್ಟದಲ್ಲಿ ಪದವಿ ಪೂರ್ವ ಕಾಲೇಜು ಕ್ರೀಡಾಕೂಟದಲ್ಲಿ ಬಾಲಕರ ವಾಲಿಬಾಲ್ ನಲ್ಲಿ ಪ್ರಥಮ ಸ್ಥಾನ, ಎತ್ತರ ಜಿಗಿತ ಪ್ರಥಮ ಸ್ಥಾನ ಹಾಗೂಉದ್ದಜಿಗಿತ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಆರ್.ವಿ.ಪಿ. ಸಂಸ್ಥೆಯ ಅಧ್ಯಕ್ಷರಾದ ಈ.ವಿ.ಶ್ರೀಧರ್, ಕಾರ್ಯದರ್ಶಿ ಎನ್.ಆರ್.ಅಶ್ವತ್ಥ್ ಕುಮಾರ್,ನಿರ್ದೇಶಕರಾದ ಟಿ.ಆರ್.ವಿ. ಪ್ರಸಾದ್, ಉಪನ್ಯಾಸಕರಾದ ಅನಿಲ್ ಕುಮಾರ್, ರಾಜು, ಗೋಪಾಲ್, ರಮೇಶ್ ಹಾಜರಾಗಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296