Subscribe to Updates
Get the latest creative news from FooBar about art, design and business.
- ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
- ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
- ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
- ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
- ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
- ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
- ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
- ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
Author: admin
ತುಮಕೂರು: ರಾಜ್ಯದ ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿಗೆ ಜನರು ಬೇಸತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ, ಜನರಿಗೆ ಗೌರವ ತರುವಂತಹ ಜನಪರ ಸರ್ಕಾರವನ್ನು ಅಧಿಕಾರಕ್ಕೆ ತರಲು ಜನರು ಆಶೀರ್ವದಿಸಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ತುಮಕೂರು ತಾಲೂಕಿನ ಮುಳಕುಂಟೆ ಗ್ರಾಮದಲ್ಲಿ ನಡೆದ ಶ್ರೀ ವಿಜಯ ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಜನರು ಉತ್ತಮ ಆಡಳಿತವನ್ನು ಬಯಸುತ್ತಿದ್ದಾರೆ. ಹೀಗಾಗಿ ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟವನ್ನು ಬೆಂಬಲಿಸುವ ಮೂಲಕ ಜನಪರ ಸರ್ಕಾರ ರಚಿಸಲು ಸಹಕರಿಸಬೇಕು ಎಂದು ತಿಳಿಸಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ವಿ. ಸೋಮಣ್ಣ ಅವರನ್ನು ದಾಖಲೆ ಮತಗಳ ಅಂತರದಿಂದ ಗೆಲ್ಲಿಸಿದ್ದಕ್ಕೆ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ಈ ಗೆಲುವಿನಿಂದಾಗಿ ಸೋಮಣ್ಣ ಮತ್ತು ತಮಗೆ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿದೆ ಎಂದು ಸ್ಮರಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ…
ಬೆಂಗಳೂರು: ರಾಜ್ಯ ವಸತಿ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಅವರ ಬೆಂಗಳೂರಿನ ನಿವಾಸದಲ್ಲಿ ನಡೆದಿದ್ದ ಭಾರಿ ಪ್ರಮಾಣದ ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಶಿವಾಜಿನಗರ ಪೊಲೀಸರು ಭೇದಿಸಿದ್ದಾರೆ. ಸಚಿವರ ತಾಯಿಯ ನಿಕಟ ಸಂಬಂಧಿಯೇ ಈ ಕೃತ್ಯದ ಮಾಸ್ಟರ್ ಮೈಂಡ್ ಆಗಿರುವುದು ಬೆಳಕಿಗೆ ಬಂದಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸೈಯದ್ ಅಮೀರ್ ಮತ್ತು ಆತನ ಸಹಚರ ಅಮಿರ್ ಅಹ್ಮದ್ ಎಂದು ಗುರುತಿಸಲಾಗಿದೆ. ಸೈಯದ್ ಅಮೀರ್ ಸಚಿವ ಜಮೀರ್ ಅವರ ತಾಯಿಯ ಹತ್ತಿರದ ಸಂಬಂಧಿಯಾಗಿದ್ದು, ಈತನಿಗೆ ಸಚಿವರ ಮನೆಗೆ ಮುಕ್ತ ಪ್ರವೇಶವಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ಈತ, 2023ರಿಂದಲೇ ಯಾರಿಗೂ ಅನುಮಾನ ಬಾರದಂತೆ ಸ್ವಲ್ಪ ಸ್ವಲ್ಪವೇ ಚಿನ್ನಾಭರಣಗಳನ್ನು ಕದಿಯುತ್ತಿದ್ದನು. ಒಟ್ಟು ಸುಮಾರು 1.20 ಕೆಜಿ ಚಿನ್ನದ ಆಭರಣಗಳನ್ನು ಈತ ಲಪಟಾಯಿಸಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿಗಳು ಟ್ರಾವೆಲ್ಸ್ ವ್ಯವಹಾರ ನಡೆಸುತ್ತಿದ್ದರು. ಆದರೆ ಕೋವಿಡ್ ಲಾಕ್ ಡೌನ್ ಸಮಯದಲ್ಲಿ ಉದ್ಯಮದಲ್ಲಿ ಭಾರಿ ನಷ್ಟ ಅನುಭವಿಸಿ ಸಾಲಕ್ಕೆ ಸಿಲುಕಿದ್ದರು. ಈ ಸಾಲ ತೀರಿಸಲು ಮತ್ತು…
ಬೆಂಗಳೂರು: ತಮಿಳುನಾಡು ವಿಧಾನಸಭೆ ಚುನಾವಣಾ ಫಲಿತಾಂಶದ ಬೆನ್ನಲ್ಲೇ ತಮಿಳು ಸೂಪರ್ ಸ್ಟಾರ್ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಪ್ರದರ್ಶನದ ಕುರಿತು ಕರ್ನಾಟಕದ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ನಟ ವಿಜಯ್ ಅವರಿಗೆ ಇರುವ ಅಪಾರ ಜನಪ್ರಿಯತೆಯು ಇಷ್ಟೊಂದು ದೊಡ್ಡ ಮಟ್ಟದಲ್ಲಿ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ನಿರೀಕ್ಷಿಸಿರಲಿಲ್ಲ ಎಂದು ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಟ ವಿಜಯ್ ಅವರಿಗೆ ದೊಡ್ಡ ಅಭಿಮಾನಿ ಬಳಗವಿದೆ ಎಂಬುದು ನಮಗೆ ತಿಳಿದಿತ್ತು. ಆದರೆ ಅವರ ಆ ಜನಪ್ರಿಯತೆ ರಾಜಕೀಯವಾಗಿ ಮತಗಳ ರೂಪದಲ್ಲಿ ಇಷ್ಟು ದೊಡ್ಡ ಪ್ರಭಾವ ಬೀರಲಿದೆ ಎಂದು ನಾವು ಅಂದುಕೊಂಡಿರಲಿಲ್ಲ. ಅವರ ಪಕ್ಷವು ಪಡೆದಿರುವ ಮತಗಳ ಪ್ರಮಾಣ ಆಶ್ಚರ್ಯ ತಂದಿದೆ” ಎಂದು ತಿಳಿಸಿದರು. ತಮಿಳುನಾಡು ರಾಜಕೀಯದಲ್ಲಿ ಸಿನಿಮಾ ಮತ್ತು ರಾಜಕೀಯಕ್ಕೆ ಅವಿನಾಭಾವ ಸಂಬಂಧವಿದೆ. ಎಂಜಿಆರ್, ಕರುಣಾನಿಧಿ ಮತ್ತು ಜಯಲಲಿತಾ ಅವರ ಹಾದಿಯಲ್ಲೇ ಈಗ ವಿಜಯ್ ಕೂಡ ಜನಮನ್ನಣೆ ಗಳಿಸುತ್ತಿದ್ದಾರೆ. ಆರಂಭದ ಹಂತದಲ್ಲೇ ಅವರು ತೋರಿರುವ ಈ…
ಚಿಕ್ಕನಾಯಕನಹಳ್ಳಿ: ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸುವ ನಿಟ್ಟಿನಲ್ಲಿ 2026ರ ಆಗಸ್ಟ್ 21, 22 ಮತ್ತು 23 ರಂದು ಮೂರು ದಿನಗಳ ಕಾಲ ‘ಬೃಹತ್ ವಿಶೇಷ ಲೋಕ್ ಅದಾಲತ್’ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ನ್ಯಾಯಾಧೀಶರಾದ ಸತೀಶ್ ತಿಳಿಸಿದರು. ಇಲ್ಲಿನ ನ್ಯಾಯಾಲಯದಲ್ಲಿ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಏರ್ಪಡಿಸಿದ್ದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ ನಂತರ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷರಾದ ನ್ಯಾಯಮೂರ್ತಿ ಅನು ಶಿವರಾಮನ್ ಮತ್ತು ಉಚ್ಚ ನ್ಯಾಯಾಲಯದ ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ನ್ಯಾಯಮೂರ್ತಿ ಆರ್. ದೇವದಾಸ್ ಅವರು ಸಮಾಧಾನ ಸಮಾರಂಭದ ಕುರಿತು ಅಗತ್ಯ ಮಾರ್ಗದರ್ಶನ ನೀಡಿದರು. ಸುಪ್ರೀಂ ಕೋರ್ಟ್‌ನಲ್ಲಿ ದೀರ್ಘಕಾಲದಿಂದ ಬಾಕಿ ಉಳಿದಿರುವ ಪ್ರಕರಣಗಳನ್ನು ಈ ವಿಶೇಷ ಅಭಿಯಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು. ಆಗಸ್ಟ್ 21, 22 ಮತ್ತು 23 ರಂದು ಈ ಬೃಹತ್…
ಶಿರಾ: ಅಪಘಾತ ಅಥವಾ ತುರ್ತು ಆರೋಗ್ಯ ಸಮಸ್ಯೆ ಎದುರಾದಾಗ ವೈದ್ಯರು ಸಿಗುವ ಮೊದಲೇ ಸ್ಥಳೀಯರೇ ಅಥವಾ ಮನೆಯವರೇ ಅರೆಕಾಲಿಕ ವೈದ್ಯರಾಗಿ ಜೀವ ಉಳಿಸುವ ಮಹತ್ವದ ‘ತಾಯಿ’ (TAI — Tamil Nadu Accident Emergency Initiative) ಯೋಜನೆ ಈಗ ತುಮಕೂರು ಜಿಲ್ಲೆಯಲ್ಲಿ ಸದ್ದಿಲ್ಲದೆ ಜಾರಿಯಾಗುತ್ತಿದೆ. ಹೆಸರಾಂತ ವೈದ್ಯ ಡಾ. ಎಂ.ಆರ್. ಹುಲಿನಾಯ್ಕರ್ ಅವರ ನೇತೃತ್ವದಲ್ಲಿ ಈ ವಿಶಿಷ್ಟ ಆರೋಗ್ಯ ತರಬೇತಿ ಕಾರ್ಯಕ್ರಮಕ್ಕೆ ಶಿರಾದಲ್ಲಿ ಚಾಲನೆ ನೀಡಲಾಗಿದೆ. ತಮಿಳುನಾಡಿನಲ್ಲಿ ಯಶಸ್ವಿಯಾಗಿರುವ ಈ ಮಾದರಿಯನ್ನು ಈಗ ತುಮಕೂರು ಜಿಲ್ಲೆಗೆ ಪರಿಚಯಿಸಲಾಗುತ್ತಿದೆ. ಶಿರಾದ ತಾಯಿ–ಮಗು ಆರೈಕೆ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಯೋಜನೆಯ ಉಸ್ತುವಾರಿ ಡಾ. ರಾಮ್ ಕೆ. ನಾಯರ್ ಪ್ರಾಸ್ತಾವಿಕವಾಗಿ ಮಾತನಾಡಿದರು. “ಆಸ್ಪತ್ರೆಗೆ ತಲುಪುವ ಮೊದಲಿನ ‘ಗೋಲ್ಡನ್ ಅವರ್’ (Golden Hour) ಅತ್ಯಂತ ನಿರ್ಣಾಯಕ. ಈ ಸಮಯದಲ್ಲಿ ಸ್ಥಳೀಯರು ಸೂಕ್ತ ತರಬೇತಿ ಪಡೆದಿದ್ದರೆ ಸಾವು-ನೋವಿನ ಪ್ರಮಾಣವನ್ನು ಗಣನೀಯವಾಗಿ ತಗ್ಗಿಸಬಹುದು,” ಎಂದು ಅವರು ತಿಳಿಸಿದರು. ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಕನಿಷ್ಠ 500 ಜನರಿಗೆ ತುರ್ತು ಚಿಕಿತ್ಸಾ ತರಬೇತಿ…
ತುಮಕೂರು: ದೇವರಾಯ ಪಟ್ಟಣದ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ದೇವರ ಹುಂಡಿ ಹೊಡೆದು ಕಳ್ಳತನ ಮಾಡಿರುವ ಘಟನೆ ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದರಿ ದೇವಾಲಯವು ಮುಜರಾಯಿ ಇಲಾಖೆಗೆ ಸೇರಿದ್ದು, ದೇವರ ಪೂಜೆಯನ್ನು ನರಸಿಂಹ ಭಟ್ಟರು ಮಾಡುತ್ತಿದ್ದರು. ಎಂದಿನಂತೆ ಬೆಳಗಿನ ಜಾವ ದೇವಾಲಯದ ಪೂಜೆಯನ್ನು ಮಾಡಿ ದೇಗುಲಕ್ಕೆ ಬೀಗ ಹಾಕಿಕೊಂಡು ಹೋಗಿದ್ದರು. ಸಂಜೆ ಪೂಜೆಗೆಂದು ದೇವಾಲಯಕ್ಕೆ ಬಂದಾಗ ದೇವರ ಹುಂಡಿ ಹೊಡೆದು ಕಳ್ಳತನವಾಗಿರುವಂತಹ ಘಟನೆ ಏ.28ರಂದು ಬೆಳಕಿಗೆ ಬಂದಿದೆ. ಈ ಸಂಬಂಧ ದೇವಾಲಯದ ಸಿಸಿ ಕ್ಯಾಮೆರಾವನ್ನು ಪರಿಶೀಲಿಸಿದಾಗ ಯಾರೋ ಒಬ್ಬ ಅಪರಿಚಿತ ವ್ಯಕ್ತಿ ದೇವಾಲಯದ ಹುಂಡಿ ಹೊಡೆದು ಕಳ್ಳತನ ಮಾಡಿರುವ ದೃಶ್ಯ ಬೆಳಕಿಗೆ ಬಂದಿದೆ. ದೇವಾಲಯದ ಹುಂಡಿಯ ಹಣವನ್ನು ಕದ್ದ ಕಳ್ಳನನ್ನು ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸುವಂತೆ ನರಸಿಂಹ ಭಟ್ಟರು ಕ್ಯಾತಸಂದ್ರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರು ದಾಖಲಿಸಿಕೊಂಡ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ತುಮಕೂರು: ಜಿಲ್ಲಾ ವ್ಯಾಪ್ತಿಯಲ್ಲಿ ನೋಂದಣಿ ಪತ್ರವನ್ನು ಪಡೆಯದೇ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂಸ್ಟೇ ಮಾಲೀಕರು ನಿಯಮದನ್ವಯ ಅಗತ್ಯ ದಾಖಲೆಗಳನ್ನು ಸಲ್ಲಿಸಿ, ನೋಂದಣಿ ಮಾಡಿಕೊಳ್ಳಲು ಹಾಗೂ ಅಧಿಕೃತವಾಗಿ ನೋಂದಣಿ ಪತ್ರವನ್ನು ಪಡೆದ ನಂತರ ಹೋಂಸ್ಟೇ ಯನ್ನು ನಡೆಸಬೇಕೆಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಅನೇಕ ಹೋಂಸ್ಟೇಗಳು ಕಾರ್ಯನಿರ್ವಹಿಸುತ್ತಿವೆ. ಪ್ರವಾಸಿಗರ ಸುರಕ್ಷತೆ, ಗುಣಮಟ್ಟದ ಸೇವೆ, ಕಾನೂನುಬದ್ಧ ನಿರ್ವಹಣೆ ಹಾಗೂ ಪ್ರವಾಸೋದ್ಯಮ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) ಅಧಿನಿಯಮ-2015ರನ್ವಯ ಕಡ್ಡಾಯವಾಗಿ ಹೋಂಸ್ಟೇಗಳು ಪ್ರವಾಸೋದ್ಯಮ ಇಲಾಖೆಯ ಅಡಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕಾಗಿರುತ್ತದೆ. ಪ್ರವಾಸಿಗರ ಸುರಕ್ಷತಾ ಹಿತದೃಷ್ಟಿಯಿಂದ ಅಧಿಕೃತ ಅನುಮೋದನೆ ಅಥವಾ ಪರವಾನಗಿ ಪಡೆಯದೆ ಇರುವ ಹೋಂಸ್ಟೇಗಳ ಅನಧಿಕೃತ ಚಟುವಟಿಕೆಗಳನ್ನು ಕೂಡಲೇ ಸ್ಥಗಿತಗೊಳಿಸಲು ತಿಳಿಸಿದೆ. ಆಸಕ್ತರು ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ತುಮಕೂರು ಜಿಲ್ಲೆ ಇವರಿಗೆ ಅಗತ್ಯ ದಾಖಲಾತಿಗಳಾದ ಗ್ರಾಮ ಪಂಚಾಯಿತಿ ನಿರಾಕ್ಷೇಪಣಾ ಪತ್ರ, ಇ-ಖಾತಾ/ಪಹಣಿ, ಪೊಲೀಸ್…
ಬೆಂಗಳೂರು: ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ ಮತ್ತು ತೆಲಂಗಾಣದ ಹಾದಿಯಲ್ಲೇ ಈಗ ಕೇರಳ ಮತ್ತು ತಮಿಳುನಾಡು ರಾಜ್ಯಗಳ ಮತದಾರರು ಕೂಡ ಬಿಜೆಪಿಯ ಕೋಮುವಾದಿ ರಾಜಕಾರಣಕ್ಕೆ ಎಳ್ಳುನೀರು ಬಿಟ್ಟಿದ್ದಾರೆ. ಈ ಮೂಲಕ ದೇಶದ ಜಾತ್ಯತೀತ ಮತ್ತು ಪ್ರಜಾಪ್ರಭುತ್ವವಾದಿ ಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ. ಚುನಾವಣಾ ಫಲಿತಾಂಶದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುದೀರ್ಘವಾಗಿ ಪ್ರತಿಕ್ರಿಯಿಸಿರುವ ಅವರು, ವಿವಿಧ ರಾಜ್ಯಗಳ ಫಲಿತಾಂಶದ ಬಗ್ಗೆ ತಮ್ಮ ವಿಶ್ಲೇಷಣೆಯನ್ನು ಹಂಚಿಕೊಂಡಿದ್ದಾರೆ. “ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) ಸಾಧಿಸಿರುವ ಗೆಲುವು ನಿರೀಕ್ಷಿತವಾಗಿತ್ತು. ಅಭ್ಯರ್ಥಿಗಳ ಆಯ್ಕೆಯಿಂದ ಹಿಡಿದು ಪ್ರಚಾರದವರೆಗೆ ಎಲ್ಲವನ್ನೂ ರಾಜ್ಯದ ನಾಯಕರು ಸಂಘಟಿತವಾಗಿ ನಿಭಾಯಿಸಿದ್ದಾರೆ. ವಿಶೇಷವಾಗಿ ಕೇರಳದೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿರುವ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರ ಹಗಲಿರುಳಿನ ಶ್ರಮ ಈ ಗೆಲುವಿಗೆ ಕಾರಣವಾಗಿದೆ,” ಎಂದು ಅವರು ಅಭಿನಂದಿಸಿದ್ದಾರೆ. ಅಲ್ಲದೆ, ಕರ್ನಾಟಕದಂತೆ ಕೇರಳದಲ್ಲೂ ಕಾಂಗ್ರೆಸ್ ‘ನುಡಿದಂತೆ ನಡೆಯುವ’ ಆಡಳಿತ ನೀಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳದ ಫಲಿತಾಂಶದ ಬಗ್ಗೆ…
ಗುಬ್ಬಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತನ್ನ ಪತ್ನಿಯನ್ನು ಕ್ರೂರವಾಗಿ ಹತ್ಯೆಗೈದ ಪತಿಗೆ ತುಮಕೂರು ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಗುಬ್ಬಿ ಪಟ್ಟಣದ ಕಾಯಿಪೇಟೆಯ ನಿವಾಸಿ ಜಗದೀಶ್ ಎಂಬಾತ ಸುಮಾರು 15 ವರ್ಷಗಳ ಹಿಂದೆ ಶಿಲ್ಪ ಎಂಬುವವರನ್ನು ವಿವಾಹವಾಗಿದ್ದನು. ಈ ದಂಪತಿಗೆ ಮಕ್ಕಳಿರಲಿಲ್ಲ. ಜಗದೀಶ್ ಮದ್ಯಪಾನದ ಚಟಕ್ಕೆ ದಾಸನಾಗಿದ್ದಲ್ಲದೆ, ಪರಸ್ತ್ರೀಯರ ಸಹವಾಸವನ್ನೂ ಹೊಂದಿದ್ದನು. ಈ ವಿಚಾರವಾಗಿ ಪತ್ನಿ ಶಿಲ್ಪ ಪದೇ ಪದೇ ಜಗದೀಶ್ ನನ್ನು ಪ್ರಶ್ನಿಸುತ್ತಿದ್ದಳು. ಇದರಿಂದ ದಂಪತಿಗಳ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಹೆಂಡತಿಯ ವರ್ತನೆಯಿಂದ ಬೇಸತ್ತಿದ್ದ ಜಗದೀಶ್, ಆಕೆಯ ಮೇಲೆ ತೀವ್ರ ದ್ವೇಷ ಸಾಧಿಸುತ್ತಿದ್ದನು. ಶಿಲ್ಪ ತನ್ನ ತಮ್ಮನ ಮದುವೆಯ ನಿಶ್ಚಿತಾರ್ಥಕ್ಕಾಗಿ ಊರಿಗೆ ಹೋಗಬೇಕೆಂದು ಜಗದೀಶ್ ಬಳಿ ಕೇಳಿದ್ದಳು. ಇದರಿಂದ ಕೆರಳಿದ ಜಗದೀಶ್, ಹಳೆಯ ವೈಮನಸ್ಸನ್ನು ಮನಸ್ಸಿನಲ್ಲಿಟ್ಟುಕೊಂಡು ಶಿಲ್ಪ ಜೊತೆ ಜಗಳವಾಡಿದ್ದಾನೆ. ಕೊಲೆ ಮಾಡುವ ಉದ್ದೇಶದಿಂದಲೇ ಮನೆಯಲ್ಲಿದ್ದ ಮಚ್ಚಿನಿಂದ ಶಿಲ್ಪರ ತಲೆ, ಹಣೆಗೆ ಮತ್ತು ಮೂಗಿಗೆ ಬಲವಾಗಿ ಹೊಡೆದು ರಕ್ತಗಾಯಗೊಳಿಸಿದ್ದಾನೆ. ಅಷ್ಟಕ್ಕೇ ನಿಲ್ಲದೆ,…
ಗುಬ್ಬಿ: ತಾಲೂಕು ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಬಸವಾದಿ ಶಿವಶರಣರ ವತಿಯಿಂದ ಮೇ 25ರಂದು ಪಟ್ಟಣದಲ್ಲಿ ಬಸವ ಜಯಂತಿ ಆಯೋಜನೆ ಮಾಡಿದೆ ಎಂದು ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತಾಲೂಕು ವೀರಶೈವ ಲಿಂಗಾಯತ ಸಮುದಾಯದ ಅಧ್ಯಕ್ಷ ಮಂಜುನಾಥ್, ಮುಖಂಡರಾದ ಎಸ್. ಡಿ. ದಿಲೀಪ್ ಕುಮಾರ್, ತಿಪಟೂರು ಸಿದ್ಧಲಿಂಗ ಸ್ವಾಮಿ, ಶಿವಕುಮಾರ್, ಸಂಗಪ್ಪ ತಿಳಿಸಿದರು. ಅಂದು ಬೆಳಗ್ಗೆ 6 ಗಂಟೆಗೆ ಶ್ರೀ ಸಿದ್ಧರಾಮೇಶ್ವರ ಸಮುದಾಯ ಭವನದಲ್ಲಿ ಇಷ್ಟಲಿಂಗ ಪೂಜೆ ಏರ್ಪಡಿಸಲಾಗಿದೆ. ನಂತರ ಬೆಳಗ್ಗೆ 9.30ಕ್ಕೆ ಪಟ್ಟಣದ ಶ್ರೀ ಚನ್ನಬಸವೇಶ್ವರ ದೇವಾಲಯ ಆವರಣದಿಂದ ಹೇರೂರು ಶ್ರೀ ಸಿದ್ಧರಾಮೇಶ್ವರ ಸಮುದಾಯ ಭವನದವರೆಗೆ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ಮೆರವಣಿಗೆಯಲ್ಲಿ ಹಲವು ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಹಾಗೂ ಶ್ರೀಗಳ ನೇತೃತ್ವದಲ್ಲಿ ಶ್ರೀ ಸಿದ್ಧರಾಮೇಶ್ವರ ಸಮುದಾಯ ಭವನಕ್ಕೆ ಆಗಮಿಸಿ ನಂತರ ಧಾರ್ಮಿಕ ಕಾರ್ಯಕ್ರಮ, ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಶೇ.90ಕ್ಕೂ ಹೆಚ್ಚು ಅಂಕ ಪಡೆದ ವೀರಶೈವ ಲಿಂಗಾಯತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ. ಅಲ್ಲದೆ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಗುಬ್ಬಿ…