Subscribe to Updates
Get the latest creative news from FooBar about art, design and business.
- ಲಕ್ಷ್ಮೀ ಹೆಬ್ಬಾಳ್ಕರ್ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ
- ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ ಕೈ ಹೈಕಮಾಂಡ್ ಶಾಕ್!
- ಬೀದರ್ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು
- ಕೂಡ್ಲಿಗಿ: ಸಭೆ–ಉತ್ಸವ ಕಾಟಾಚಾರಕ್ಕಾಗದಿರಲಿ, ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸಂಘಟನೆಗಳ ಆಗ್ರಹ
- ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: 20 ಹೊಸ ಸಚಿವರ ಸೇರ್ಪಡೆ, ಪ್ರಮುಖ ಹುದ್ದೆಗಳಿಗೆ ಎಐಸಿಸಿ ಅಂತಿಮ ಅನುಮೋದನೆ
- ಕಾವೇರಿ ಕಿಚ್ಚು: ‘ಭೂಮಿ, ನೀರು, ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’ : ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಕರೆ
- ತಿಪಟೂರಿನಲ್ಲಿ ಜ್ಞಾನ ವಿಕಾಸ ಮಹಿಳಾ ವಿಚಾರಗೋಷ್ಠಿ: ಆರೋಗ್ಯ ಜಾಗೃತಿ ಹಾಗೂ ಸಾಂಸ್ಕೃತಿಕ ವೈಭವ
- ವಿಜಯಪುರ: ಆಟೋ ಪಕ್ಕಕ್ಕೆ ಸರಿಸು ಎಂದಿದ್ದಕ್ಕೆ KSRTC ಕಂಡಕ್ಟರ್ ಮೇಲೆ ಹಲ್ಲೆ; ವಿಡಿಯೋ ವೈರಲ್!
Author: admin
ತುಮಕೂರು: ಅರಣ್ಯ ಇಲಾಖೆ ಪ್ರಾದೇಶಿಕ ಅರಣ್ಯ ವಿಭಾಗದ ವತಿಯಿಂದ ಸಹಬಾಳ್ವೆಯೊಂದಿಗೆ ವನ್ಯಜೀವಿ ಸಂರಕ್ಷಣೆ ಎಂಬ ಧ್ಯೇಯದೊಂದಿಗೆ ಅಕ್ಟೋಬರ್ 2 ರಿಂದ 8ರವರೆಗೆ “70ನೇ ವನ್ಯಜೀವಿ ಸಪ್ತಾಹ-2024” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಹೆಚ್.ಅನುಪಮ ತಿಳಿಸಿದ್ದಾರೆ. ಸಪ್ತಾಹದ ಅಂಗವಾಗಿ ಅಕ್ಟೋಬರ್ 4ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಎಂಪ್ರೆಸ್ ಮಹಿಳಾ ಕಾಲೇಜು ಸಭಾಂಗಣದಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು “70ನೇ ವನ್ಯಜೀವಿ ಸಪ್ತಾಹ-2024” ಕಾರ್ಯಕ್ರಮವನ್ನು ಉದ್ಘಾಟಿಸುವರು. ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಘನ ಉಪಸ್ಥಿತರಿರುವರು. ಸಹಕಾರ ಸಚಿವ ಕೆ.ಎನ್.ರಾಜಣ್ಣ, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸುವರು ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ…
ತುಮಕೂರು: 7ನೇ ವೇತನ ಆಯೋಗದ ಅವಧಿಯಲ್ಲಿ ನಿವೃತ್ತಿಯಾಗಿರುವ ಸರ್ಕಾರಿ ನೌಕರರಿಗೆ 6ನೇ ವೇತನ ಆಯೋಗದ ನಿವೃತ್ತಿ ಸೌಲಭ್ಯ ನೀಡಿರುವುದನ್ನು ಖಂಡಿಸಿ ನಿವೃತ್ತ ನೌಕರರ ವೇದಿಕೆ ವತಿಯಿಂದ ನಗರದ ಬಾಲಭವನದ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಎಂ.ಜಿ. ರಸ್ತೆಯಲ್ಲಿರುವ ಬಾಲಭವನದಲ್ಲಿ ಆಯೋಜಿಸಲಾಗಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮಕ್ಕೂ ಮುನ್ನ ನಿವೃತ್ತ ನೌಕರರು ಪ್ರತಿಭಟನೆ ನಡೆಸಿ ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು. ರಾಜ್ಯ ಸರ್ಕಾರ 7ನೇ ವೇತನ ಆಯೋಗದ ವರದಿಯಂತೆ ಸರ್ಕಾರಿ ನೌಕರರಿಗೆ ದಿನಾಂಕ: 01—08–2024 ರಿಂದ ಅನ್ವಯವಾಗುವಂತೆ ಆರ್ಥಿಕ ಸೌಲಭ್ಯವನ್ನು ಅನುಷ್ಠಾನಗೊಳಿಸಲು ಕ್ರಮವಹಿಸಿದೆ. ಆದರೆ 01–07–2022 ರಿಂದ ಕಾಲ್ವನಿಕ ವೇತನ ನಿಗದಿಪಡಿಸಿ 1—08–2024 ರಿಂದ ಆರ್ಥಿಕ ಸೌಲಭ್ಯ ನೀಡುವುದರಿಂದ 01—07–2022 ರಿಂದ 31—07–2024 ರ ಅವಧಿಯಲ್ಲಿ ನಿವೃತ್ತಿ ಹೊಂದಿದ ನೌಕರರಿಗೆ 6ನೇ ವೇತನದ ಮೂಲ ವೇತನಕ್ಕೆ ಡಿ.ಸಿ.ಆರ್.ಜಿ. ಕಮ್ಯುಟೇಷನ್ ಆಫ್ ಪೆನ್ಷನ್ ಮತ್ತು ಲೀವ್ ಎನ್‌ಕ್ಯಾಷ್ ಮೆಂಟ್ ಲೆಕ್ಕಾಚಾರ ಮಾಡುವುದರಿಂದ ಸುಮಾರು 8 ರಿಂದ 20 ಲಕ್ಷದವರೆಗೆ ಆರ್ಥಿಕ ಸೌಲಭ್ಯದಿಂದ…
ತುಮಕೂರು: ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸ್ವೀಕರಿಸಿದ ಪುಸ್ತಕ(2021ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ)ಗಳ ಆಯ್ಕೆ ಪ್ರಕ್ರಿಯೆಯು ಪೂರ್ಣಗೊಂಡಿದ್ದು, ಆಯ್ಕೆಯಾದ ಹಾಗೂ ಆಯ್ಕೆಯಾಗದ ಪುಸ್ತಕಗಳ ತಾತ್ಕಾಲಿಕ ಪಟ್ಟಿ ಮತ್ತು ಪುಸ್ತಕಗಳ ಪ್ರದರ್ಶನವನ್ನು ಬೆಂಗಳೂರು ಹಂಪಿನಗರ ಪಶ್ಚಿಮ ವಲಯದ ನಗರ ಕೇಂದ್ರ ಗ್ರಂಥಾಲಯದಲ್ಲಿ ಅಕ್ಟೋಬರ್ 4 ಮತ್ತು 5ರಂದು ಹಮ್ಮಿಕೊಳ್ಳಲಾಗಿದೆ. ಆಯ್ಕೆಗಾಗಿ ಸಲ್ಲಿಸಿದ ಪುಸ್ತಕಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಲೇಖಕರು, ಲೇಖಕ–ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು ಅಕ್ಟೋಬರ್ 9ರೊಳಗಾಗಿ ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ. ಆಕ್ಷೇಪಣೆಗಳನ್ನು ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ.ಅಂಬೇಡ್ಕರ್ ವೀದಿ, ಬೆಂಗಳೂರು-560001 ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.dpl.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ ಎಂದು ನಗರ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಜಿಲ್ಲಾಡಳಿತದ ವತಿಯಿಂದ ಮೊದಲ ಬಾರಿಗೆ ಆಚರಿಸಲಾಗುತ್ತಿರುವ ತುಮಕೂರು ದಸರಾ ಭಾಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಹಿಳಾ ಮತ್ತು ಮಕ್ಕಳ ದಸರಾ ಕಾರ್ಯಕ್ರಮವನ್ನು ಮಾಡಲಾಗುತ್ತಿದ್ದು, ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಗರದ ಶಿವಕುಮಾರ ಸ್ವಾಮೀಜಿ ವೃತ್ತದಿಂದ ಮಹಾತ್ಮಗಾಂಧಿ ಕ್ರೀಡಾಂಗಣ ರಸ್ತೆಯಲ್ಲಿ ಅಕ್ಟೋಬರ್ 6ರ ಬೆಳಿಗ್ಗೆ 7 ರಿಂದ 9:30ಗಂಟೆಯವರೆಗೂ ರಂಗೋಲಿ ಸ್ಪರ್ಧೆ, ಬೆಳಿಗ್ಗೆ 10 ಗಂಟೆಗೆ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಹಗ್ಗ ಜಗ್ಗಾಟ, ಪಾಯಿಸನ್ ಬಾಕ್ಸ್ ಲೆಗ್ ಟೈಡ್ ರೇಸ್, ವಾಟರ್ ಬಾಲ್ ಅನ್ ಬಾಸ್ಕೆಟ್ ಸ್ಪರ್ಧೆ, ಸಂಜೆ 5:30 ಗಂಟೆಗೆ ಬಾಲಭವನ ಸಭಾಂಗಣದಲ್ಲಿ ತಾಯಿ ಮತ್ತು ಮಗುವಿನ ಸಾಂಪ್ರದಾಯಿಕ ಉಡುಗೆಗಳ ವೇಷಭೂಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಆಸಕ್ತರು ಅಕ್ಟೋಬರ್ 4 ರಂದು ಸಂಜೆ 5:30 ಗಂಟೆಯೊಳಗೆ ಜಿಲ್ಲಾ ಬಾಲಭವನ ಕಛೇರಿಯಲ್ಲಿ ತಮ್ಮ ಹೆಸರು ಮತ್ತು ಮಕ್ಕಳ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9901890079…
ತುಮಕೂರು: ಅಮೂಲ್ಯವಾದ ಜೀವವನ್ನು ಉಳಿಸಲು 18 ವರ್ಷ ತುಂಬಿದವರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು. ರಕ್ತದಾನ ಮಾಡುವುದರಿಂದ ರಕ್ತದಾನಿಗೂ ಪ್ರಯೋಜನವಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್ ಅಭಿಪ್ರಾಯಪಟ್ಟರು. ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ಇಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳ ಕಚೇರಿಯಿಂದ ಜಿಲ್ಲಾಸ್ಪತ್ರೆಯವರೆಗೆ ಹಮ್ಮಿಕೊಂಡಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಕ್ತದಾನ ಶ್ರೇಷ್ಠದಾನವಾಗಿದ್ದು, ಪ್ರತಿಯೊಬ್ಬರೂ ರಕ್ತದಾನ ಮಾಡುವ ಮೂಲಕ ಜೀವಗಳನ್ನು ಉಳಿಸಬಹುದು ಎಂದು ತಿಳಿಸಿದರು. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಮೋಹನ್ ದಾಸ್ ಆರ್.ವಿ ಮಾತನಾಡಿ, ಜನರಲ್ಲಿ ರಕ್ತದಾನ ಬಗ್ಗೆ ಅರಿವು ಮೂಡಿಸುವುದು ಹಾಗೂ ಎಲ್ಲರನ್ನು ಸ್ವಯಂ ಪ್ರೇರಿತ ರಕ್ತದಾನಿಗಳನ್ನಾಗಿ ಪರಿವರ್ತಿಸುವುದು ಈ ದಿನಾಚರಣೆಯ ಉದ್ದೇಶವಾಗಿದೆ. ಎಲ್ಲರೂ ಸ್ವಯಂ ಪ್ರೇರಿತ ರಕ್ತದಾನಿಗಳಾಗೋಣ ಎಂದು ಕರೆ ಕೊಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಹಾಗೂ ರಕ್ತನಿಧಿ ಕೇಂದ್ರಗಳ…
ತುಮಕೂರು: ಸಂಸ್ಕೃತಿ ಹಾಗೂ ಸಂಸ್ಕಾರಗಳನ್ನು ಒಳಗೊಂಡಿರುವ ನಮ್ಮ ಕೃಷಿಯ ಮೂಲ ಉದ್ದೇಶವನ್ನೇ ಉದಾರೀಕರಣ ನೀತಿ ಮರೆಮಾಚಿದೆ. ಕೈಗಾರಿಕಾ ಕ್ರಾಂತಿಯ ದುಷ್ಪರಿಣಾಮದಿಂದಾಗಿ ಕೃಷಿ ಹಣ ಮಾಡುವ ಕ್ಷೇತ್ರವಾಗಿ ಮಾರ್ಪಟ್ಟಿದೆ, ರೈತರೂ ಬಂಡವಾಳಿಗರಾಗಿ ರೂಪುಗೊಳ್ಳುತ್ತಿದ್ದಾರೆ ಎಂದು ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ರಾಷ್ಟ್ರೀಯ ಸಂಯೋಜಕರಾದ ಬಸವರಾಜ ಪಾಟೀಲ್ ವೀರಾಪುರ ಹೇಳಿದರು. ಗಾಂಧೀ ಸಹಜಬೇಸಾಯ ಆಶ್ರಮದ ವತಿಯಿಂದ ‘ಕೇಂದ್ರ ಸರ್ಕಾರ ಸುಪ್ರೀಂಕೋರ್ಟಿನ ನಿರ್ದೇಶನದಂತೆ ಬೇಯರ್ ಮತ್ತು ಮಾನ್ಸೆಂಟೋ ಕಂಪನಿಗಳ ಸಹಯೋಗದಲ್ಲಿ ತರಲು ಹೊರಟಿರುವಕುಲಾಂತರಿ ಬೀಜರಾಷ್ಟ್ರೀಯ ನೀತಿಯನ್ನು ವಿರೋಧಿಸಿ ಹಮ್ಮಿಕೊಂಡಿರುವ ಗ್ರಾಮಾಂತರದಹ್ಯಾಂಡ್ ಪೋಸ್ಟ್ ದೊಡ್ಡ ಹೊಸೂರಿನ 3ನೇ ದಿನದ ಸತ್ಯಾಗ್ರಹ’ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರೈತರ ಮನೆಗಳಿಗೆ ಅಪರಿಚಿತರು ದಾರಿ ತಪ್ಪಿಬಂದರೂ ಊಟಕ್ಕೆ ಬಡಿಸಿಯೇ ಕಳುಹಿಸುತ್ತಿದ್ದರು. ಈ ನಮ್ಮ ಸಂಸ್ಕೃತಿಯು ಮೂಲ ಸ್ವರೂಪವನ್ನು ಕಳೆದುಕೊಳ್ಳುತ್ತಿದೆ. ವ್ಯಾಪಾರಕ್ಕಾಗಿ ಬಂದಿದ್ದಈಸ್ಟ್ಇಂಡಿಯಾ ಕಂಪನಿಗಳು ಜಾಗತೀಕರಣ ಹಾಗೂ ಉದಾರೀಕರಣದ ಹೆಸರಿನಲ್ಲಿ ಭಾರತವನ್ನು ಮತ್ತೆ ಪ್ರವೇಶಿಸುತ್ತಿವೆ. ನಾವು ದೇಶಿ ಅಸ್ಮಿತೆಯನ್ನು ಉಳಿಸಿಕೊಳ್ಳಲಾರದ ಸ್ಥಿತಿಗೆ ತಲುಪಿದ್ದೇವೆ. ರೈತರ ಮುಗ್ದತೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಸರ್ಕಾರಗಳು ಕೃಷಿಯಲ್ಲಿ ಜೀವ ವಿರೋಧಿ…
ತುಮಕೂರು: ಹಿರಿಯ ನಾಗರಿಕರು ಜೀವಿತಾವಧಿಯ ಕೊನೆ ಕ್ಷಣದವರೆಗೂ ನೆಮ್ಮದಿಯಿಂದ ಬದುಕುವಂತಹ ವಾತಾವರಣವನ್ನು ನಾವೆಲ್ಲರೂ ಕಲ್ಪಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ಸದಸ್ಯ ಕಾರ್ಯದರ್ಶಿ ನೂರುನ್ನಿಸ ಅವರು ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ, ಹಿರಿಯ ನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಬಾಲಭವನ ಸಭಾಂಗಣದಲ್ಲಿಂದು ಹಮ್ಮಿಕೊಂಡಿದ್ದ ವಿಶ್ವ ಹಿರಿಯನಾಗರಿಕರ ದಿನಾಚರಣೆ –2024 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿರಿಯ ನಾಗರಿಕರು ತಮ್ಮ ವಿಶ್ರಾಂತ ಜೀವನದಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ ಎಂದರಲ್ಲದೆ, ತಾವು ಶ್ರಮದಿಂದ ದುಡಿದ ಸ್ಥಿರಾಸ್ತಿ, ಚರಾಸ್ತಿಗಳನ್ನು ತಾವೇ ಅನುಭವಿಸುವ ಮೂಲಕ ಸಂತಸದಿಂದ ಬದುಕಬೇಕೆಂದು ಸಲಹೆ ನೀಡಿದರು. ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ.ದೊಡ್ಡಮನಿ ಮಾತನಾಡಿ, ಹಿರಿಯ ನಾಗರಿಕರಿಗೆ ಮಕ್ಕಳಿಂದ ತೊಂದರೆ/ಸಮಸ್ಯೆಗಳು…
ತುಮಕೂರು: ತುಮಕೂರಿನ ಜಿಲ್ಲಾ ಕಾರಾಗೃಹದಲ್ಲಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೂವರು ಆರೋಪಿಗಳು ಇಂದು ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದರು. ಎ 15 ಆರೋಪಿ ಕಾರ್ತಿಕ್, ಎ 16 ಕೇಶವಮೂರ್ತಿ ಮತ್ತು ಎ17 ನಿಖಿಲ್ ಬಿಡುಗಡೆಯಾದವರಾಗಿದ್ದಾರೆ. ಜಾಮೀನು ಮಂಜೂರು ಬಳಿಕ ಸತತ 10 ದಿನಗಳ ನಂತರ ಬಿಡುಗಡೆಯಾಗಿರುವುದು ಇಲ್ಲಿ ಗಮನಾರ್ಹಶವಾಗಿದೆ. ಜಾಮೀನು ದೊರೆತರೂ ಕೂಡ ಜೈಲಿನಿಂದ ಹೊರಬರಲು ಕೆಲವು ವಿಷಯಗಳಿಂದ ಅವರಿಗೆ ಹಿನ್ನಡೆ ಉಂಟಾಗಿತ್ತು. ಜೈಲಿನಿಂದ ಬಿಡುಗಡೆಯಾದ ಮೂವರು ಮಾಧ್ಯಮದವರ ಯಾವುದೇ ಪ್ರಶ್ನೆಗಳಿಗೂ ಉತ್ತರ ನೀಡಲಿಲ್ಲ, ಅಲ್ಲದೆ ಪೊಲೀಸರಿಗೆ ನಾವು ಈಗಾಗಲೇ ಹೇಳಿಕೆಯನ್ನು ನೀಡಿದ್ದೇವೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಗಾಂಧಿ ಜಯಂತಿಯ ಹಿನ್ನೆಲೆಯಲ್ಲಿ ಇಂದು ನಗರದ ಅಮಾನಿಕೆರೆ ಉದ್ಯಾನವನದಲ್ಲಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಮತ್ತು ರಾಜ್ಯ ಗೃಹ ಸಚಿವ ಡಾ ಪರಮೇಶ್ವರ್ ಅವರುಗಳು ಗ್ಯಾರಾ ಮೂರ್ತಿಯ ಪ್ರತಿಕೃತಿ ಯನ್ನು ಉದ್ಘಾಟಿಸಿದರು. ಇದು ಗಾಂಧೀಜಿ ಮುನ್ನಡೆಸುತ್ತಿರೋ ದಂಡಿಯಾತ್ರೆಯ ಪ್ರತಿಕೃತಿಯಾಗಿದೆ. 11 ಮೂರ್ತಿಗಳಲ್ಲಿ ಗಾಂಧೀಜಿ ಸೇರಿದಂತೆ ರೈತ ವರ್ಗ, ಎಲ್ಲಾ ಸಮುದಾಯದವರನ್ನು ಪ್ರತಿಬಿಂಬಿಸುತ್ತಿದೆ. ಗ್ಯಾರಾ ಮೂರ್ತಿ (ಹನ್ನೊಂದು ಮೂರ್ತಿ) ಎಂಬುದು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಚಳುವಳಿಯಾದ ‘ದಂಡಿಯಾತ್ರೆ’ ಅಥವಾ ಉಪ್ಪಿನ ಸತ್ಯಾಗ್ರಹವನ್ನು ಬಿಂಬಿಸುವ ಕಲಾಕೃತಿಯಾಗಿದೆ. ಮಹಾತ್ಮಗಾಂಧಿಜೀ ರವರು ಮುನ್ನಡೆಯುತ್ತ ಅವರನ್ನು ಸಮಾಜದ ವಿವಿಧ ವರ್ಗ ಸಮುದಾಯ ಹಾಗೂ ಆರ್ಥಿಕ ಹಿನ್ನಲೆಯುಳ್ಳ ಹತ್ತು ಈ ಮಂದಿ ಹಿಂಬಾಲಿಸುತ್ತಿರುವುದನ್ನು ಈ ಕಲಾಕೃತಿಯು ಬಿಂಬಿಸುತ್ತದೆ. ಭಾರತದ ಸ್ವಾತಂತ್ರ್ಯದ 25ನೇ ವರ್ಷದ ನೆನಪಿನಲ್ಲಿ ಮೊದಲ ಬಾರಿಗೆ 1972 ರಲ್ಲಿ ಈ ಕಲಾಕೃತಿಯನ್ನು ನವದೆಹಲಿಯಲ್ಲಿ ಸ್ಥಾಪಿಸಲಾಯಿತು. ದೇವಿಪ್ರಸಾದ್ ಚೌಧುರಿ ಈ ಕಲಾಕೃತಿಯ ಸೃಷ್ಟಿಕರ್ತ: ಗ್ಯಾರಾಮೂರ್ತಿಯನ್ನು ಸೂಕ್ಷ್ಮವಾಗಿ ಗಮನಿಸಿದ್ದಲ್ಲಿ ಮಹಾತ್ಮ ಗಾಂಧಿರವರನ್ನು ಹಿಂದೂ, ಸಿಖ್…
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ಶನಿಯನ್ನು ಅತ್ಯಂತ ಪ್ರಮುಖ ಗ್ರಹವೆಂದು ಪರಿಗಣಿಸಲಾಗಿದೆ. ಶನಿಯು ಕರ್ಮವನ್ನು ಕೊಡುವವನು ಮತ್ತು ನ್ಯಾಯದ ದೇವರು ಎಂದೂ ಕರೆಯುತ್ತಾರೆ. ಶುಭ ಕಾರ್ಯಗಳನ್ನು ಮಾಡುವವರಿಗೆ ಶನಿಯು ಯಾವಾಗಲೂ ಶುಭ ಫಲಗಳನ್ನು ನೀಡುತ್ತಾನೆ. ಇತರರಿಗೆ ತೊಂದರೆ ಕೊಡುವ ಮತ್ತು…