Subscribe to Updates
Get the latest creative news from FooBar about art, design and business.
- ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
- ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ಜೂನ್ 3 ರಂದು ವಿಧಾನಸೌಧ ಸುತ್ತಮುತ್ತಲಿನ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
- ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯುವ ಕಾಂಗ್ರೆಸ್ ಮುಖಂಡ ಒತ್ತಾಯ
- ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!
- ಶಿಥಿಲಾವಸ್ಥೆಯ ಶಾಲಾ ಕಟ್ಟಡಗಳ ಮಾಹಿತಿಗೆ ಸೂಚನೆ
- ಸಾರಿಗೆ ಬಲಪಡಿಸಲು ಪುರುಷರು ಕಡ್ಡಾಯವಾಗಿ ಟಿಕೆಟ್ ಪಡೆದು ಪ್ರಯಾಣಿಸಿ: ಕೆ.ಎನ್.ರಾಜಣ್ಣ ಕರೆ
- ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ
- ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!
Author: admin
ಯಾದಗಿರಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಜಿಲ್ಲೆಗಳಲ್ಲಿ ಆಯ್ಕೆಯಾಗಿರುವ ಯಾದಗಿರಿ ಜಿಲ್ಲೆಯನ್ನು ಸಮಗ್ರ ಅಭಿವೃದ್ಧಿ ಸೂಚ್ಯಂಕದಲ್ಲಿ ಮುಂಚೂಣಿಯಲ್ಲಿ ಬರುವಂತೆ ನೋಡಿಕೊಳ್ಳಲು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು. ವಡಿಗೇರಾ ತಾಲೂಕಿನ ತಡಿಬಿಡಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಇಂದು ಸಂಪೂರ್ಣತಾ ಅಭಿಯಾನ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ರಾಷ್ಟ್ರದ 112 ಜಿಲ್ಲೆಗಳನ್ನು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಆಯ್ಕೆ ಮಾಡಿದ್ದು ಅದರಲ್ಲಿ ಯಾದಗಿರಿ ಮತ್ತು ರಾಯಚೂರು ಜಿಲ್ಲೆ ಕೂಡ ಇವೆ. ಈ ಹಿನ್ನಲೆಯಲ್ಲಿ ಆರೋಗ್ಯ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮೂಲಸೌಕರ್ಯ ಅಭಿವೃದ್ಧಿ, ಕುಡಿಯುವ ನೀರು, ಕೃಷಿ ಇಲಾಖೆ ಸೂಚ್ಯಂಕದಲ್ಲಿ ಮುಂಚೂಣಿಯಲ್ಲಿ ತರಲು ಪ್ರಯತ್ನಿಸಬೇಕು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಗಮನ ನೀಡುವಂತೆ ಅವರು ಸಲಹೆ ನೀಡಿದರು. ಜಿಲ್ಲೆಯಲ್ಲಿ 7 ಸಾವಿರ ಶಿಕ್ಷಕರ ಪೈಕಿ ಕೇವಲ 3 ಸಾವಿರ ಶಿಕ್ಷಕರ ಗುರಿ ತಲುಪಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ವಿನಂತಿಸುವುದಾಗಿ ತಿಳಿಸಿದ ಅವರು ತಕ್ಷಣ…
ಯಾದಗಿರಿ: ಕೇಂದ್ರ ಸರ್ಕಾರದ ಜಲಜೀವನ ಮಿಷನ್, ಜಲಧಾರೆ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ವಿ ಸೋಮಣ್ಣ ಅವರು ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಜಲಜೀವನ್ ಮಿಷನ್ ಯೋಜನೆಯಡಿ 438 ಕಾಮಗಾರಿಗಳನ್ನು ಪೂರ್ಣಗೊಳಿಸಿ, ಶೇಕಡಾ 63 ರಷ್ಟು ಪ್ರಗತಿ ಸಾಧಿಸಲಾಗಿದೆ. ಅದರಂತೆ ಜಲಧಾರೆ ಯೋಜನೆಯಡಿ ನಾರಾಯಣಪುರ ಜಲಾಶಯ ವ್ಯಾಪ್ತಿಯಲ್ಲಿ ನಿರ್ಮಿಸಲಾಗುತ್ತಿರುವ ಜಾಕವೆಲ್ ಮತ್ತು ಇತರೆ ಕಾಮಗಾರಿಗಳಲ್ಲಿ 40 ರಷ್ಟು ಪ್ರಗತಿ ಸಾಧಿಸಿದ್ದು ಅಧಿಕಾರಿಗಳು ಇನ್ನೂ ಚುರುಕಾಗಿ ಕಾರ್ಯನಿರ್ವಹಿಸುವ ಮೂಲಕ ಸೂಕ್ತ ಪ್ರಗತಿ ಸಾಧಿಸುವಂತೆ ಸೂಚನೆ ನೀಡಿದರು. ಪ್ರಧಾನಮಂತ್ರಿಗಳ ಗ್ರಾಮ ಸಡಕ್ ಯೋಜನೆ, ಕೃಷಿ ಸಿಂಚನ ಯೋಜನೆ , ಮಕ್ಕಳ ಅಪೌಷ್ಟಿಕತೆ ನಿವಾರಣೆ, ರಸ್ತೆಗಳ ದುರಸ್ತಿ, ಸ್ವಚ್ಛ ಭಾರತ ಮಿಷನ್ ಯೋಜನೆಗಳಲ್ಲಿ ಅವಶ್ಯಕ ಪ್ರಗತಿ ಸಾಧಿಸುವಂತೆ ಸೂಚನೆ ನೀಡಿದರು. ಯಾದಗಿರಿ ಜಿಲ್ಲೆ, ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಅತ್ಯಂತ ಹಿಂದೆ ಇದ್ದು, ಫಲಿತಾಂಶ ಹೆಚ್ಚಳಕ್ಕೆ…
ಪಾವಗಡ: ವಿಧಾನಮಂಡಲದ ಸಾರ್ವಜನಿಕ ಉದ್ದಿಮೆಗಳ ಸಮಿತಿ ಅಧ್ಯಕ್ಷ ತನ್ವೀರ್ ಸೇಠ್ ಅವರ ನೇತೃತ್ವದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರ ನಿಯೋಗವು ಪಾವಗಡದ ಸೋಲಾರ್ ಪಾರ್ಕ್‌ಗೆ ಬುಧವಾರ ಭೇಟಿ ನೀಡಿತು. ಕ್ರೆಡಲ್ ಅಧ್ಯಕ್ಷರೂ ಆಗಿರುವ ಶಾಸಕರಾದ ಟಿ.ಡಿ. ರಾಜೇಗೌಡ ಅವರನ್ನು ಒಳಗೊಂಡಂತೆ ಶಾಸಕರಾದ ಯು.ಬಿ.ಬಣಕಾರ್, ಡಿ.ಜಿ.ಶಾಂತನಗೌಡ, ಹೆಚ್.ವಿ.ವೆಂಕಟೇಶ್ ಹಾಗೂ ವಿಧಾನ ಪರಿಷತ್ ಸದ್ಯರಾದ ಉಮಾಶ್ರೀ, ಭಾರತಿ ಶೆಟ್ಟಿ ಅವರಿದ್ದ ನಿಯೋಗಕ್ಕೆ ಅಧಿಕಾರಿಗಳು ಪಾರ್ಕ್ನ ವೈಶಿಷ್ಟ್ಯತೆಗಳ ಬಗ್ಗೆ ವಿವರ ನೀಡಿದರು. ಈ ವೇಳೆ ಮಾತನಾಡಿದ ಸಮಿತಿ ಅಧ್ಯಕ್ಷ ತನ್ವೀರ್ ಸೇಠ್, “ಇಂಧನ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಪಾವಗಡದ ಸೋಲಾರ್ ಪಾರ್ಕ್ ಮಾದರಿಯಾಗಿದೆ. ಇದೇ ರೀತಿ ರಾಜ್ಯದ ಬೇರೆ ಭಾಗದಲ್ಲೂ ಬೃಹತ್ ಸೋಲಾರ್ ಪಾರ್ಕ್ ಅಭಿವೃದ್ಧಿಯಾಗಬೇಕು,” ಎಂದು ಹೇಳಿದರು. ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ, ಕೆ.ಎಸ್.ಪಿ.ಡಿ.ಸಿ.ಎಲ್.ನ ಸಿಇಓ ಅಮರನಾಥ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ರಾಜ್ಯವನ್ನೇ ತಲ್ಲಣಗೊಳಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣ ಇದೀಗ ಅಂತಿಮ ಹಂತಕ್ಕೆ ಬಂದು ನಿಂತಿದೆ. ಇಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ಪೊಲೀಸರು ಕೋರ್ಟ್ ಗೆ 3,991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ದೋಷಾರೋಪನ ಪಟ್ಟಿಯಲ್ಲಿ ಇರುವ ಮಾಹಿತಿಗಳು ದರ್ಶನ್ ಕೊಲೆಯಲ್ಲಿ ಪ್ರಮುಖ ಪಾತ್ರ ವಹಿಸಿರುವುದನ್ನು ದೃಢ ಪಡಿಸಿವೆ ಎನ್ನಲಾಗಿದೆ. ದರ್ಶನ್ ಎ2 ಆರೋಪಿ ಆಗಿ ಮುಂದುವರಿದಿದ್ದಾರೆ. ಕಿಡ್ನಾಪ್ ಮಾಡಿಸಿದ್ದು, ಹಲ್ಲೆ ಮಾಡಿದ್ದು, ಕೊಲೆ ನಡೆದ ಬಳಿಕ ಅದನ್ನು ಮುಚ್ಚಿಹಾಕಲು ಹಣ ನೀಡಿದ್ದು ದರ್ಶನ್ ಅನ್ನೋದು ಚಾರ್ಜ್ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ. ದರ್ಶನ್ ಕೊಲೆ ನಡೆದ ಸ್ಥಳದಲ್ಲಿ ಇರುವುದು ಹಾಗೂ ಕೊಲೆ ಬಳಿಕ ಸ್ಥಳದಿಂದ ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ದರ್ಶನ್ ಬಟ್ಟೆ ಮತ್ತು ಶೂನಲ್ಲಿ ರೇಣುಕಾಸ್ವಾಮಿ ರಕ್ತ ಇರುವುದು ಪತ್ತೆ ಆಗಿದೆ. ಇದಕ್ಕೆ ಸಾಕ್ಷ್ಯಗಳು ಕೂಡ ಸಿಕ್ಕಿವೆ. ದರ್ಶನ್ ಹಲ್ಲೆ ಮಾಡಿರುವ ಬಗ್ಗೆ ಮತ್ತು ಕೊಲೆಯಲ್ಲಿ ಭಾಗಿಯಾದ್ದು ಚಾರ್ಜ್ಶೀಟ್ ನಲ್ಲಿ ದೃಢಪಟ್ಟಿದೆ.…
ತುಮಕೂರು: ಪಾವಗಡ ತಾಲೂಕಿನ ರೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲಿಬೆಟ್ಟ ತಾಂಡ ಗ್ರಾಮದಲ್ಲಿ ಲಂಬಾಣಿ ಸಮುದಾಯದ 80 ಕ್ಕೂ ಹೆಚ್ಚು ಮನೆಗಳ ಬಳಿಯಲ್ಲಿ ಕಲುಷಿತ ವಾತಾವರಣ ಸೃಷ್ಟಿಯಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ನಮ್ಮತುಮಕೂರು ವರದಿ ಮಾಡಿತ್ತು. ವರದಿ ಪ್ರಕಟಗೊಂಡು ಕೆಲವೇ ಗಂಟೆಗಳಲ್ಲಿ ಸ್ಥಳೀಯಾಡಳಿತ ಕ್ರಮಕೈಗೊಂಡಿದೆ. ಚರಂಡಿಯಲ್ಲಿ ಹೂಳು ತುಂಬಿದ ಪರಿಣಾಮ ನೀರು ಚರಂಡಿಯಲ್ಲಿ ನಿಂತಿತ್ತು. ಫಾರ್ತೇನಿಯಂ ಗಿಡಗಳು ಬೆಳೆದು ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್ಯೂ ಭೀತಿ ಸೃಷ್ಟಿಯಾಗಿತ್ತು. ಈ ಬಗ್ಗೆ ನಮ್ಮತುಮಕೂರು ಸವಿವರವಾದ ವರದಿ ಪ್ರಕಟಿಸಿದ ಬೆನ್ನಲ್ಲೇ ಅಧಿಕಾರಿಗಳು ತಕ್ಷಣವೇ ಕ್ರಮಕೈಗೊಂಡಿದ್ದಾರೆ. ಇದೀಗ ಫಾರ್ತೇನಿಯಂ ಗಿಡಗಳನ್ನು ತೆರವುಗೊಳಿಸಿ, ಚರಂಡಿಯನ್ನು ಸ್ವಚ್ಛಗೊಳಿಸುವ ಕೆಲಸ ಅಧಿಕಾರಿಗಳು ನಡೆಸುತ್ತಿದ್ದಾರೆ. ಊರಿನ ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ತಂದ ನಮ್ಮತುಮಕೂರು ಮಾಧ್ಯಮಕ್ಕೆ ಸ್ಥಳೀಯರು ಧನ್ಯವಾದ ತಿಳಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಮೈಕ್ರೋ ಫೈನಾನ್ಸ್ ವಿರುದ್ಧ ನೂರಾರು ಮಹಿಳೆಯರು ಪ್ರತಿಭಟನೆ ನಡೆಸಿದ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ. ಮೈಕ್ರೋ ಫೈನಾನ್ಸ್ ಪ್ರತಿಕೃತಿ ದಹಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ತಾಲೂಕು ಕೇಂದ್ರದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ನೀಡುವ ನೆಪದಲ್ಲಿ ಗ್ರಾಮೀಣ ಜನರಿಗೆ ಮಾನಸಿಕ ಕಿರುಕುಳ ನೀಡುತ್ತಿವೆ. ಇವರ ಕಿರುಕುಳದಿಂದ ಈಗಾಗಲೇ ಕೆಲವರು ಊರು ಬಿಟ್ಟಿದ್ದಾರೆ ಮತ್ತೆ ಕೆಲವು ಪ್ರಾಣ ಬಿಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕುವಂತೆ ಒತ್ತಾಯಿಸಿ ತಹಶೀಲ್ದಾರ್ ಅವರಿಗೆ ಸಾರ್ವಜನಿಕರು ಮನವಿ ಮನವಿ ಸಲ್ಲಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಪಾವಗಡ: ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ 2024– 25 ನೇ ಸಾಲಿನ ನಡೆದ ತಾಲ್ಲೂಕು ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ವೆಂಕಟಾಪುರ ಸರ್ಕಾರಿ ಪ್ರಥಮ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರು ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಈ ಸಾಧನೆಗೆ ಕಾಲೇಜ್ ಪ್ರಾಂಶುಪಾಲರಾದ ನಾರಾಯಣ ಸ್ವಾಮಿ, ದೈಹಿಕ ಶಿಕ್ಷಕರಾದ ಮುರಳಿ, ಸಹ ಶಿಕ್ಷಕರು ಸೇರಿ ಗ್ರಾಮಸ್ಥರಿಂದ ಅಭಿನಂದನೆ ಸಲ್ಲಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತಿಪಟೂರು: ಕಾಮುಕ ತಂದೆಯೊಬ್ಬ ತನ್ನ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿರುವ ಪರಿಣಾಮ 14 ವರ್ಷದ ಬಾಲಕಿ ಗರ್ಭಿಣಿಯಾಗಿರುವ ಘಟನೆ ತಿಪಟೂರು ತಾಲೂಕಿನ ಹೊನ್ನವಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿ ಗರ್ಭ ಧರಿಸಿದ ಪರಿಣಾಮ ತಂದೆಯ ಅಮಾನಷ ಕೃತ್ಯ ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹೊನ್ನವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುಷ್ಕೃತ್ಯ ನಡೆದಿದೆ. ಆರೋಪಿಯ ಕುಟುಂಬ ಎಂಟು ತಿಂಗಳ ಹಿಂದೆ ಕೂಲಿ ಕೆಲಸಕ್ಕಾಗಿ ಹೊರ ರಾಜ್ಯದಿಂದ ಹೊನ್ನವಳ್ಳಿಗೆ ಬಂದು ನೆಲೆಸಿತ್ತು. ಇತ್ತೀಚೆಗೆ ಬಾಲಕಿ ಪದೇ–ಪದೇ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಳು. ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷೆ ವೇಳೆ ಆಕೆ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಆಸ್ಪತ್ರೆ ಸಿಬ್ಬಂದಿ ವಿಚಾರಿಸಿದ ವೇಳೆ ತನ್ನ ಮೇಲೆ ತಂದೆಯೇ ಅತ್ಯಾಚಾರ ಎಸಗಿರುವುದಾಗಿ ಬಾಲಕಿ ಹೇಳಿದ್ದಾಳೆ. ಕಾಮುಕ ತಂದೆಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ವರದಿ: ಆನಂದ್, ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಪಾವಗಡ: ಚಿನ್ನ ಶುದ್ಧಿಕರಿಸುತ್ತೇವೆಂದು ಹೇಳಿ, ಚಿನ್ನ ಕದ್ದು ಪರಾರಿಯಾಗುತ್ತಿದ್ದ ವೇಳೆ ಬೈಕ್ ನಿಂದ ಬಿದ್ದ ಕಳ್ಳರು ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದ ಘಟನೆ ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿಯ ತಿಮ್ಮಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಯಾರು ಇಲ್ಲದ ಸಮಯ ನೋಡಿಕೊಂಡು ಜನರ ಬಳಿ ಬಂದು ಚಿನ್ನ ಶುದ್ಧಿಕರಿಸುತ್ತೇವೆಂದು ನಂಬಿಸಿ ಚಿನ್ನವನ್ನು ದೋಚಿ ಪರಾರಿಯಾಗಲು ಕಳ್ಳರು ಯತ್ನಿಸಿದ್ದಾರೆ. ಆದ್ರೆ ಅತೀವೇಗದಲ್ಲಿ ಆತುರಾತುರವಾಗಿ ಹೋಗುತ್ತಿದ್ದ ವೇಳೆ ಬೈಕ್ ನಿಂದ ಬಿದ್ದಿದ್ದು, ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ತಿರುಮಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅರಸೀಕೆರೆ ಪೊಲೀಸ್ ಠಾಣೆ ಪ್ರಕಟಣೆ: ಸಾರ್ವಜನಿಕರಲ್ಲಿ ವಿನಂತಿಸಿಕೊಳ್ಳುವುದೇದರೆ, ಇರಾನಿ ಗ್ಯಾಂಗ್ ಹಳ್ಳಿಗಳಲ್ಲಿ ಬೆಡ್ ಶೀಟ್ ಮಾರಾಟ ಮಾಡುವ ಅಥವಾ ಬಂಗಾರ–ಬೆಳ್ಳಿ ಪಾಲಿಸ್ ಮಾಡುವ ಅಥವಾ ಒಂಟಿಯಾಗಿ ಇರುವ ಮಹಿಳೆಯರನ್ನು ಗುರಿಯಾಗಿ ಇಟ್ಟುಕೊಂಡು ಅಡ್ರೆಸ್ ಕೇಳುವ ನೆಪದಲ್ಲಿ ನಿಮಗೆ ಮೋಸಮಾಡುವ ಸಾಧ್ಯತೆ ಇರುವುದರಿಂದ ತಾವುಗಳು ಎಚ್ಚರಿಕೆಯಿಂದ ಇರಬೇಕು ಮತ್ತು ಅಂತಹ…
ಎಷ್ಟೋ ಜನರಿಗೆ ಹಲವಾರು ಬಾರಿ ತಮ್ಮ ತಮ್ಮ ಮೊಬೈಲ್ ಹ್ಯಾಕ್ ಆಗಿದೆ ಎಂಬ ಅರಿವೇ ಇರುವುದಿಲ್ಲ. ಆದರೆ ಹ್ಯಾಕರ್ ಗಳು ಮತ್ತು ಅಪರಾಧಿಗಳು ಬಳಕೆದಾರರ ವೈಯಕ್ತಿಕ ಡೇಟಾವನ್ನು ಕದಿಯುತ್ತಾರೆ ಮತ್ತು ಅವರ ಬ್ಯಾಂಕ್ ಖಾತೆಗಳನ್ನು ಖಾಲಿ ಮಾಡುವುದು ಇವರ ಗುರಿಯಾಗಿರುತ್ತದೆ. ಈ ವಂಚಕರು ಹಲವು ಬಾರಿ ಬಳಕೆದಾರರಿಗೆ ಮುಗ್ದ ಜನರನ್ನು ಬ್ಲ್ಯಾಕ್ ಮೇಲ್ ಮಾಡಿ ಅವರ ವೈಯಕ್ತಿಕ ಡೇಟಾ ಸೋರಿಕೆ ಮಾಡಿ ಹಣ ವಸೂಲಿ ಮಾಡುತ್ತಾರೆ. ನಿಮ್ಮ ಸ್ಮಾರ್ಟ್ಫೋನ್ ನಲ್ಲಿ ಈ ಕೆಳಗೆ ಪಟ್ಟಿ ಮಾಡಲಾಗಿರುವ ಸಾಮಾನ್ಯ 3 ಲಕ್ಷಣಗಳು ಕಂಡು ಬಂದರೆ ತಕ್ಷಣ ಎಚ್ಚೆತ್ತುಕೊಳ್ಳಬೇಕು. ಅದನ್ನು ಗಮನದಲ್ಲಿಟ್ಟುಕೊಂಡು ನಿಮ್ಮ ಮೊಬೈಲ್ ಹ್ಯಾಕ್ (Phone Hack) ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ನೀವು ಕಂಡುಹಿಡಿಯಬಹುದು. ವಾಸ್ತವವಾಗಿ ಹ್ಯಾಕರ್ ಗಳು ನಿಮ್ಮ ಫೋನ್ ಅನ್ನು ಪ್ರವೇಶಿಸಿದಾಗ ಅಂದರೆ ಫೋನ್ ಅನ್ನು ಹ್ಯಾಕ್ ಮಾಡಿದಾಗ ಫೋನ್ ನಲ್ಲಿ ಈ ಕೆಲವು ಸಿಗ್ನಲ್ ಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ಇದ್ದಕ್ಕಿದ್ದಂತೆ ಮೊಬೈಲ್ ನಿಧಾನವಾಗುವುದು ಅಥವಾ ಸ್ವಿಚ್ ಆಫ್…