Subscribe to Updates
Get the latest creative news from FooBar about art, design and business.
- ಲಕ್ಷ್ಮೀ ಹೆಬ್ಬಾಳ್ಕರ್ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ
- ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ ಕೈ ಹೈಕಮಾಂಡ್ ಶಾಕ್!
- ಬೀದರ್ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು
- ಕೂಡ್ಲಿಗಿ: ಸಭೆ–ಉತ್ಸವ ಕಾಟಾಚಾರಕ್ಕಾಗದಿರಲಿ, ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸಂಘಟನೆಗಳ ಆಗ್ರಹ
- ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: 20 ಹೊಸ ಸಚಿವರ ಸೇರ್ಪಡೆ, ಪ್ರಮುಖ ಹುದ್ದೆಗಳಿಗೆ ಎಐಸಿಸಿ ಅಂತಿಮ ಅನುಮೋದನೆ
- ಕಾವೇರಿ ಕಿಚ್ಚು: ‘ಭೂಮಿ, ನೀರು, ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’ : ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಕರೆ
- ತಿಪಟೂರಿನಲ್ಲಿ ಜ್ಞಾನ ವಿಕಾಸ ಮಹಿಳಾ ವಿಚಾರಗೋಷ್ಠಿ: ಆರೋಗ್ಯ ಜಾಗೃತಿ ಹಾಗೂ ಸಾಂಸ್ಕೃತಿಕ ವೈಭವ
- ವಿಜಯಪುರ: ಆಟೋ ಪಕ್ಕಕ್ಕೆ ಸರಿಸು ಎಂದಿದ್ದಕ್ಕೆ KSRTC ಕಂಡಕ್ಟರ್ ಮೇಲೆ ಹಲ್ಲೆ; ವಿಡಿಯೋ ವೈರಲ್!
Author: admin
ತುಮಕೂರು: ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಇಂಜಿನಿಯರ್ಸ್ ದಿನ’ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಸ್ ಎಸ್ ಐಟಿ ಕ್ಯಾಂಪಸ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಲ್ ಎಮ್ ವಿಂಡ್ ಪವರ್ ನ ಹಿರಿಯ ಸ್ಥಾವರ ನಿರ್ದೇಶಕ ರಾಜೇಶ್ ಲೋಬೊ ಮಾತನಾಡಿ, ‘ಶಿಕ್ಷಕರ ದಿನಾಚರಣೆ ಜೊತೆಗೆ ಇಂಜಿನಿಯರ್ಸ್ ದಿನವನ್ನುಆಚರಿಸುತ್ತಿರುವುದು ಖುಷಿಯ ಸಂಗತಿ. ವಿದ್ಯಾದಾನದ ಮೂಲಕ ದೇಶಕ್ಕೆ ನಿಜವಾದ ಸೇವೆಯನ್ನು ಸಲ್ಲಿಸುತ್ತಿರುವ ಶಿಕ್ಷಕರ ದಿನವನ್ನು ದಿನಕ್ಕೆ ಮಾತ್ರ ಸೀಮಿತವಲ್ಲದೆ ಪ್ರತಿದಿನವು ಶಿಕ್ಷಕರ ದಿನವೆಂದು ಭಾವಿಸಬೇಕು ಎಂದರು. ವಿಶ್ವೇಶ್ವರಯ್ಯನವರ ಇಂಜಿನಿಯರ್ ಆಗಿ ನಾಡಿಗೆ ಕೊಟ್ಟ ಕೊಡುಗೆ ಅಪಾರ. ಕೆಆರ್‌ಎಸ್ ಅಣೆಕಟ್ಟು ಕಟ್ಟುವುದರ ಮೂಲಕ ಲಕ್ಷಾಂತರ ಜನರ ಬದುಕಿಗೆ ಬೆಳಕಾಗಿದ್ದಾರೆ. ಇಂತಹ ಮಹನೀಯ ರೀತಿಯಲ್ಲಿ ನಮ್ಮ ನಾಡಿಗೆ ನಾವು ಕೊಡುಗೆ ನೀಡುವ ಕೆಲಸ ನಿರ್ವಹಿಸಬೇಕಿದೆ ಎಂದು ರಾಜೇಶ್ ಲೋಬೊ ಹೇಳಿದರು. ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ…
ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರವು ರೈತರಿಗೆ ಆಧುನಿಕ ಕುರಿ/ಮೇಕೆ ಸಾಕಾಣಿಕೆ ಕುರಿತು ಉಚಿತ ತರಬೇತಿ ನೀಡಲು ಉದ್ದೇಶಿಸಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ. ಆಧುನಿಕ ಕುರಿ/ಮೇಕೆ ಸಾಕಾಣಿಕೆ ತರಬೇತಿಯನ್ನು ಅಕ್ಟೋಬರ್ 3 ಮತ್ತು 4ರಂದು ಹಮ್ಮಿಕೊಳ್ಳಲಾಗಿದೆ. ಆಸಕ್ತರು ನಿಗಧಿಪಡಿಸಿದ ದಿನಾಂಕದಂದು ಬೆಳಿಗ್ಗೆ 10 ಗಂಟೆಗೆ ತರಬೇತಿಗೆ ಹಾಜರಾಗಬಹುದಾಗಿದೆ. ತರಬೇತಿಗೆ ಹಾಜರಾಗಲಿಚ್ಛಿಸುವವರು ಇತ್ತೀಚಿನ 2 ಪಾಸ್ ಪೋರ್ಟ್ ಅಳತೆ ಭಾವಚಿತ್ರ, ರೈತರ ಫ್ರೂಟ್ ಐಡಿ ಸಂಖ್ಯೆ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ(ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ)ವನ್ನು ಕಡ್ಡಾಯವಾಗಿ ತರಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶು ವೈದ್ಯಕೀಯ ಸಂಸ್ಥೆ/ ದೂರವಾಣಿ ಸಂಖ್ಯೆ 0816-2251214ನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ 4ನೇ ವರ್ಷದ ಬಿ.ಎಸ್ಸಿ ಮತ್ತು ಬಿ.ಸಿ.ಎ ಪದವಿ ಕೋರ್ಸ್ ಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳು ವೆಬ್ ಸೈಟ್ ವಿಳಾಸ www.ucst.ac.in ನಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 10ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಕಾಲೇಜಿನ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಬೆಸ್ಕಾಂ ಕ್ಯಾತ್ಸಂದ್ರ ಉಪ ವಿಭಾಗದ ಹೊನ್ನುಡಿಕೆ ಉಪಸ್ಥಾವರದ ಪರಿವರ್ತಕದ ಸಾಮರ್ಥ್ಯ ಹೆಚ್ಚಿಸುವ ಕಾಮಗಾರಿ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 1 ರಿಂದ 5ರವರೆಗೆ ತಾವರೇಕೆರೆ, ಮುಳುಕುಂಟೆ, ಹೊನ್ನುಡಿಕೆ, ಸಾಸಲು, ಹೊಳಕಲ್ಲು, ಚೋಳಂಬಳ್ಳಿ, ವಿರೂಪಸಂದ್ರ ಹಾಗೂ ಹಾಲುಗೊಂಡನಹಳ್ಳಿ ಫೀಡರ್ ಗಳಿಗೆ ಪ್ರತಿದಿನ 3 ರಿಂದ 4 ಗಂಟೆಗಳ ಕಾಲ ಮಾತ್ರ ವಿದ್ಯುತ್ ಸರಬರಾಜು ಮಾಡಲಾಗುವುದು. ಈ ಅವಧಿಯಲ್ಲಿ ಗ್ರಾಹಕರು ಸಹಕರಿಸಬೇಕೆಂದು ಕ್ಯಾತ್ಸಂದ್ರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಗಾಂಧಿ ಜಯಂತಿ ಪ್ರಯುಕ್ತ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ಟೋಬರ್ 1ರ ಸಂಜೆ 5 ಗಂಟೆಯಿಂದ ಅಕ್ಟೋಬರ್ 2ರ ಮಧ್ಯರಾತ್ರಿ 12 ಗಂಟೆಯವರೆಗೆ ಮಾಂಸ ಮಾರಾಟ ನಿಷೇಧಿಸಲಾಗಿದೆ. ನಿಷೇಧಿತ ಅವಧಿಯಲ್ಲಿ ಮಾಂಸದ ಅಂಗಡಿ ಹಾಗೂ ಎಲ್ಲಾ ರೀತಿಯ ಮಾಂಸ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟ ಹಾಗೂ ಸಂಗ್ರಹಣೆ ಮಾಡುವಂತಿಲ್ಲ ಎಂದು ಮಹಾನಗರಪಾಲಿಕೆ ಆರೋಗ್ಯಾಧಿಕಾರಿ ಡಾ. ವೀರೇಶ್ ಕಲ್ಮಟ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಗೌರವಾನ್ವಿತ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಅಕ್ಟೋಬರ್ 18, 19 ಹಾಗೂ 20ರಂದು 3 ದಿನಗಳ ಕಾಲ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಉಪ ಲೋಕಾಯುಕ್ತರು ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಅಕ್ಟೋಬರ್ 18ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ1:30 ಹಾಗೂ ಮಧ್ಯಾಹ್ನ 2:30 ರಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕ ಕುಂದು ಕೊರತೆಗಳ ವಿಚಾರಣೆ/ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ ಹಾಗೂ ನಂತರ 5:30 ರಿಂದ 6:30 ಗಂಟೆಯವರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಲೋಕಾಯುಕ್ತ ಕಾಯ್ದೆಗೆ ಸಂಬಂಧಿಸಿದಂತೆ ಏರ್ಪಡಿಸಿರುವ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮರು ದಿನ ಅಕ್ಟೋಬರ್ 19ರಂದು ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಬೆಳಿಗ್ಗೆ 9:45 ರಿಂದ 10:45ರವರೆಗೆ ಜಿಲ್ಲೆಯ ವಕೀಲರೊಂದಿಗೆ ಸಂವಾದ ಸಭೆ, ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1:30 ಹಾಗೂ ಮಧ್ಯಾಹ್ನ 2:30 ರಿಂದ ಸಂಜೆ 5 ಗಂಟೆಯವರೆಗೆ, ಅಕ್ಟೋಬರ್ 18ರಂದು…
ತುಮಕೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ನಗರ ಪ್ರದೇಶಗಳಲ್ಲಿನ ಕೃಷಿಯೇತರ ಆಸ್ತಿಗಳ ನೋಂದಣಿಗಾಗಿ ರೂಪಿಸಿದ್ದ ಇ–ಆಸ್ತಿ ತಂತ್ರಾಂಶವನ್ನು ಕಾವೇರಿ ತಂತ್ರಾಂಶಕ್ಕೆ ಸಂಯೋಜನೆ ಮಾಡಲಾಗಿದ್ದು, ಅಕ್ಟೋಬರ್ 7 ರಿಂದ ಜಿಲ್ಲೆಯ ಎಲ್ಲಾ ಉಪ ನೋಂದಣಿ ಕಚೇರಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಸ್ಥಿರಾಸ್ತಿಗಳನ್ನು ಇ–ತಂತ್ರಾಂಶದ ಮೂಲಕ ನೋಂದಣಿ ಮಾಡಲಾಗುವುದು. ಸಾರ್ವಜನಿಕರು ಈ ಅವಕಾಶದ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ. ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೋಸ ಹೋಗುವುದನ್ನು ತಡೆಯಲು, ಸ್ವತ್ತುಗಳ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು, ಸ್ವತ್ತುಗಳ ಖರೀದಿ ಸಂದರ್ಭಗಳಲ್ಲಿ ಉಂಟಾಗುವ ವ್ಯಾಜ್ಯ ಹಾಗೂ ಕಾನೂನು ತೊಂದರೆಗಳನ್ನು ತಪ್ಪಿಸುವ ಉದ್ದೇಶದಿಂದ ಈ ತಂತ್ರಾಂಶಗಳನ್ನು ಸಂಯೋಜನೆ ಮಾಡಲಾಗಿದ್ದು, ಸಾರ್ವಜನಿಕರು ಇನ್ನು ಮುಂದೆ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿರುವ ತಮ್ಮ ಸ್ಥಿರಾಸ್ತಿಗಳ ವರ್ಗಾವಣೆ ಮತ್ತು ನೋಂದಣಿಯನ್ನು ಜಿಲ್ಲೆಯ ಎಲ್ಲಾ ಉಪ ನೋಂದಣಿ ಕಚೇರಿಗಳಲ್ಲಿ ಮಾಡಿಸಬಹುದಾಗಿದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ತುಮಕೂರು: ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಅಣಕು ಮದುವೆ ಮಾಡಿ ಜನರಿಗೆ ಭೋಜನ ವ್ಯವಸ್ಥೆ ಮಾಡಿರುವ ಪ್ರಸಂಗ ತಿಪಟೂರು ತಾಲೂಕಿನ ಗುಳ್ಳೆಘಟ್ಟ ಗ್ರಾಮದಲ್ಲಿ ನಡೆದಿದೆ. ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮತ್ತು ಕತ್ತೆಗಳಿಗೆ ಮದುವೆ ಮಾಡಿರುವ ಉದಾಹರಣೆಗಳಿವೆ. ಆದರೆ ಮಳೆಗಾಗಿ ಮಕ್ಕಳಿಗೆ ವಧುವರರಂತೆ ಅಲಂಕಾರ ಮಾಡಿ ಅಣಕು ಮದುವೆ ಮಾಡಿಸುವ ಈ ಆಚರಣೆಗೆ ‘ತಿಂಗಳ ಮಾವ’ ಅಂತ ಕರೆಯುತ್ತಾರಂತೆ. ಹಲವು ದಿನಗಳಿಂದ ತಾಲೂಕಿನಲ್ಲಿ ಮಳೆಯಿಲ್ಲದೆ ರೈತರು ಬೆಳೆದಿದ್ದ ರಾಗಿ, ಭತ್ತ ಸೇರಿದಂತೆ ಇತರೆ ಬೆಳೆಗಳು ಒಣಗುತ್ತಿವೆ. ಇದರಿಂದ ಕಂಗೆಟ್ಟ ರೈತರು ಗ್ರಾಮದಲ್ಲಿ ಅಣಕು ವಿವಾಹ ಮಾಡಿದ್ದಾರೆ. ಗ್ರಾಮದ ಶ್ರೀ ದುರ್ಗಮ್ಮ ದೇವಿ ದೇಗುಲದ ಮುಂಭಾಗ ಚಪ್ಪರ ಹಾಕಿ, ಬಾಳೆಕಂದು ಕಟ್ಟಿ ಹೂವಿನಿಂದ ಅಲಂಕಾರ ಮಾಡಲಾಗಿತ್ತು. ಇಡೀ ಗ್ರಾಮದಲ್ಲಿ ಮದುವೆ ಸಂಭ್ರಮ ಮನೆ ಮಾಡಿತ್ತು. ಕಾಕತಾಳಿಯವೆಂಬಂತೆ ಅಂದು ರಾತ್ರಿ ಸುರಿದ ಮಳೆಯಾಗಿದ್ದು ಗ್ರಾಮಸ್ಥರ ಸಂತೋಷಕ್ಕೆ ಪಾರವೇ ಇರಲಿಲ್ಲ. ಈ ಸಂಪ್ರದಾಯವನ್ನು ಗ್ರಾಮಸ್ಥರು ಒಂಬತ್ತು ದಿನಗಳ ಕಾಲ ‘ತಿಂಗಳ ಮಾವ’ ಎಂಬ ಆಚರಣೆಯಲ್ಲಿ ತೊಡಗಿಸಿಕೊಳ್ಳುತ್ತಾರೆ. ನಮ್ಮತುಮಕೂರಿನ…
ನವಗ್ರಹ ಚಿತ್ರದಲ್ಲಿ ನಟಿಸಿದ್ದ ಧರ್ಮ ಕೀರ್ತಿರಾಜ್ ಈ ಬಾರಿ ಬಿಗ್ ಬಾಸ್ ಕನ್ನಡ ಸೀಸನ್ 11ಗೆ ಎಂಟ್ರಿ ನೀಡಿದ್ದಾರೆ. ಕಿಚ್ಚ ಸುದೀಪ್ ಅವರ ಜೊತೆಗೆ ವೇದಿಕೆಯಲ್ಲಿ ಮಾತನಾಡುತ್ತಿದ್ದ ವೇಳೆ ದರ್ಶನ್ ಬಗ್ಗೆ ಧರ್ಮ ಕೀರ್ತಿರಾಜ್ ಮಾತನಾಡಿದರು. ಧರ್ಮ ಕೀರ್ತಿರಾಜ್ ಅವರು 6ನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದರು. ಬಿಗ್ ಬಾಸ್ ಮನೆಯೊಳಗೆ ಹೋಗುವುದಕ್ಕೂ ಮೊದಲು ಕಿಚ್ಚ ಸುದೀಪ್ ಜೊತೆಗೆ ಧರ್ಮ ಕೀರ್ತಿರಾಜ್ ಮಾತನಾಡಿದರು. ನವಗ್ರಹ ಸಿನಿಮಾದಲ್ಲಿ ಅಂದು ದರ್ಶನ್ ಅವರು ಅವಕಾಶ ನೀಡಿದ್ದರು ಎಂದು ಧರ್ಮ ಕೀರ್ತಿ ರಾಜ್ ಅವರು ದರ್ಶನ್ ಅವರನ್ನು ನೆನಪಿಸಿಕೊಂಡರು. ನಮ್ಮ ತಂದೆ 40 ವರ್ಷದಿಂದ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಆಶೀರ್ವಾದ ಮತ್ತು ಜನರ ಆಶೀರ್ವಾದ ಇದೆ. ನನ್ನ ಮೊದಲ ಸಿನಿಮಾ ‘ನವಗ್ರಹ’. ತೂಗುದೀಪ ಸಂಸ್ಥೆಯಿಂದ ನಾನು ಬಂದಿದ್ದು. ದರ್ಶನ್ ಸರ್ ಮತ್ತು ದಿನಕರ್ ಸರ್ ನನಗೆ ಅವಕಾಶ ನೀಡಿದ್ದು. ‘ಕಣ್ ಕಣ್ಣ ಸಲಿಗೆ..’ ಹಾಡು ನನ್ನನ್ನು ಈವರೆಗೂ ಕಾಪಾಡಿಕೊಂಡು ಬಂದಿದೆ…
ತುಮಕೂರು: ತುಮಕೂರು ದಸರಾ ಅಂಗವಾಗಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಪೂಜಿಸುವ ಚಾಮುಂಡೇಶ್ವರಿ ದೇವಿಯನ್ನು ಶರನ್ನವರಾತ್ರಿಯ ಮೊದಲ ದಿನ ಅಕ್ಟೋಬರ್ 3ರ ಬೆಳಿಗ್ಗೆ 5.30 ಗಂಟೆಗೆ ಬ್ರಾಹ್ಮಿ ಮುಹೂರ್ತದಲ್ಲಿ ಪ್ರಾರಂಭಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಮ್ಮ ಕಚೇರಿಯಲ್ಲಿ ಸೋಮವಾರ ದಸರಾ ಉತ್ಸವದ ವಿವಿಧ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ದೇವಿಯನ್ನು ಶುಭ ಮುಹೂರ್ತದಲ್ಲಿ ಪ್ರತಿಷ್ಠಾಪಿಸುವುದರೊಂದಿಗೆ ಅಕ್ಟೋಬರ್ 12ರವರೆಗೂ ಪ್ರತೀ ದಿನ ಬ್ರಾಹ್ಮಿ ಮುಹೂರ್ತದಲ್ಲಿ ಪುಣ್ಯಾಹ, ಗಣಪತಿ ಪೂಜೆ, ಪ್ರಧಾನ ಕಳಶಾರಾಧನೆ, ಪಂಚಾಮೃತ ಅಭಿಷೇಕ, ಹೋಮ-ಹವನ, ಮಹಾ ಮಂಗಳಾರತಿ, ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿನಿಯೋಗ ಸೇರಿದಂತೆ ಎಲ್ಲಾ ಪೂಜಾ ವಿಧಾನಗಳು ಸಾಂಗವಾಗಿ ನಡೆಯಬೇಕು ಎಂದು ನಿರ್ದೇಶನ ನೀಡಿದರು. ದಸರಾ ಸಂದರ್ಭದಲ್ಲಿ ಪೂಜಾ ವಿಧಿ–ವಿಧಾನಗಳೊಂದಿಗೆ ಪ್ರತಿ ದಿನ ಸಂಜೆ ಹರಿಕಥೆ, ಭಜನೆ, ಭಕ್ತಿಗೀತೆ, ಮತ್ತಿತರ ಭಕ್ತಿಪ್ರಧಾನ ಕಾರ್ಯಕ್ರಮಗಳನ್ನು ಏರ್ಪಡಿಸಲು ಕ್ರಮಕೈಗೊಳ್ಳಬೇಕು. ಜೂನಿಯರ್ ಕಾಲೇಜು ಮೈದಾನದಲ್ಲಿ ವೇದಿಕೆ ಸಿದ್ಧತೆ ಹಾಗೂ…