Subscribe to Updates
Get the latest creative news from FooBar about art, design and business.
- ಲಕ್ಷ್ಮೀ ಹೆಬ್ಬಾಳ್ಕರ್ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ
- ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ ಕೈ ಹೈಕಮಾಂಡ್ ಶಾಕ್!
- ಬೀದರ್ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು
- ಕೂಡ್ಲಿಗಿ: ಸಭೆ–ಉತ್ಸವ ಕಾಟಾಚಾರಕ್ಕಾಗದಿರಲಿ, ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸಂಘಟನೆಗಳ ಆಗ್ರಹ
- ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: 20 ಹೊಸ ಸಚಿವರ ಸೇರ್ಪಡೆ, ಪ್ರಮುಖ ಹುದ್ದೆಗಳಿಗೆ ಎಐಸಿಸಿ ಅಂತಿಮ ಅನುಮೋದನೆ
- ಕಾವೇರಿ ಕಿಚ್ಚು: ‘ಭೂಮಿ, ನೀರು, ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’ : ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಕರೆ
- ತಿಪಟೂರಿನಲ್ಲಿ ಜ್ಞಾನ ವಿಕಾಸ ಮಹಿಳಾ ವಿಚಾರಗೋಷ್ಠಿ: ಆರೋಗ್ಯ ಜಾಗೃತಿ ಹಾಗೂ ಸಾಂಸ್ಕೃತಿಕ ವೈಭವ
- ವಿಜಯಪುರ: ಆಟೋ ಪಕ್ಕಕ್ಕೆ ಸರಿಸು ಎಂದಿದ್ದಕ್ಕೆ KSRTC ಕಂಡಕ್ಟರ್ ಮೇಲೆ ಹಲ್ಲೆ; ವಿಡಿಯೋ ವೈರಲ್!
Author: admin
ಪಾವಗಡ: ಪೋಷಣ್ ಅಭಿಯಾನದ ಕುರಿತು ಪ್ರತಿಯೊಬ್ಬರಿಗೂ ಅಭಿಯಾನದ ದ್ಯೇಯೋದ್ದೇಶ ಸೇರಿದಂತೆ ಮಕ್ಕಳನ್ನು ಹೇಗೆ ಪೋಷಣೆ ಮಾಡಬೇಕು ಎನ್ನುವುದರ ಅರಿವು ಇರಬೇಕು ಎಂದು ಪಾವಗಡ ಸಿಡಿಪಿಓ ಸುನಿತ ತಿಳಿಸಿದರು. ಸೋಮವಾರ ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಸಿದ್ದಾಪುರ ಗ್ರಾಮದ ಹೊರವಲಯದ ನರೇಂದ್ರ ಪೌಂಡೇಶನ್ ಕಟ್ಟಡದಲ್ಲಿ ವೈ.ಎನ್.ಹೊಸಕೋಟೆ ವೃತ್ತದ ಕೊನೆಯ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ನಂತರ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಸದಸ್ಯ ಈರಣ್ಣ ಮಾತನಾಡಿ, ಜನರಿಗೆ ಮಾಹಿತಿ ತಲುಪಬೇಕಾದಂತಹ ಕಾರ್ಯಕ್ರಮ ಗ್ರಾಮದ ಹೊರಭಾಗದಲ್ಲಿ ನಡೆಸುತ್ತಿರುವುದು ಬೇಸರದ ಸಂಗತಿ ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಸುಸೂತ್ರವಾಗುವ ರೀತಿಯಲ್ಲಿ ಆಚರಿಸುವಂತೆ ಸಲಹೆ ನೀಡಿದರು. ಈ ವೇಳೆ ಮೇಲ್ವಿಚಾರಕಿ ವಿಜಯಲಕ್ಷ್ಮೀ, ನರೇಂದ್ರ ಪೌಂಡೇಶನ್ ಸುದರ್ಶನ್, ಸಿಎಚ್ ಒ ಗಂಗಮ್ಮ, ಗ್ರಾಪಂ ಸದಸ್ಯ ಓಬಲಪತಿ, ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಆಶಾ ಕಾರ್ಯಕರ್ತೆಯರು ಗ್ರಾಮಸ್ಥರು ಹಾಜರಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಬೆಂಗಳೂರು: ರಾಜಕೀಯವಾಗಿ ಸಂಕಷ್ಟ ಬಂದಾಗಲೆಲ್ಲ ಜಾತಿ ಗಣತಿ ವರದಿ ಜಾರಿ ವಿಚಾರ ಪ್ರಸ್ತಾಪಿಸಿ ಹಿಂದುಳಿದ ಹಾಗೂ ಶೋಷಿತ ವರ್ಗದ ದಾರಿ ತಪ್ಪಿಸುವುದು ಸಿಎಂ ಸಿದ್ದರಾಮಯ್ಯ ಅವರಿಗೆ ಚಟವಾಗಿ ಬಿಟ್ಟಿದೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯನವರಿಗೆ ಜಾತಿ ಗಣತಿ ವರದಿ ಎನ್ನುವುದು ಖುರ್ಚಿ ಭದ್ರಪಡಿಸಿ ಕೊಳ್ಳುವುದಕ್ಕಾಗಿನ ಮಹಾನ್ ಅಸ್ತ್ರವಾಗಿದೆ ಎಂದು ಅವರು ಟೀಕಿಸಿದ್ದಾರೆ. ಸಿದ್ದರಾಮಯ್ಯನವರು ಹಾದಿ ತಪ್ಪಿಸುವುದರಲ್ಲಿ ಎಕ್ಸ್ ಪರ್ಟ್, ಇಡೀ ಕರ್ನಾಟಕವನ್ನು ನಾಲ್ಕು ದಶಕಗಳಿಂದ ಹಾದಿ ತಪ್ಪಿಸುತ್ತಲೇ ಬಂದಿದ್ದೀರಿ. ರಾಮಕೃಷ್ಣ ಹೆಗಡೆ, ದೇವೇಗೌಡ, ಎಸ್.ಎಂ.ಕೃಷ್ಣರಂಥ ಘಟಾನುಘಟಿಗಳ ಪಥವನ್ನೇ ಬದಲಿಸಿದ ನಿಮಗೆ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಯಾವುದಾದರೂ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ನೀಡಬೇಕಿದೆ ಎಂದು ಟೀಕಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬಳ್ಳಾರಿ: ಬಳ್ಳಾರಿಯಲ್ಲಿ ಶಂಕಿತ ಡೆಂಗ್ಯೂ ಜ್ವರಕ್ಕೆ 5 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಸಿದ್ದಮ್ಮನಹಳ್ಳಿಯ ಪ್ರದೀಪ್ ಆಚಾರಿ(5) ಮೃತಪಟ್ಟ ಬಾಲಕನಾಗಿದ್ದಾನೆ. ವಿಪರೀತ ಜ್ವರದಿಂದ ಬಳಲುತ್ತಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಸಿದ್ದಮ್ಮನ ಹಳ್ಳಿಯಲ್ಲಿ ಕಳೆದ ಒಂದು ವಾರಗಳಿಂದಲೂ 20ಕ್ಕೂ ಹೆಚ್ಚು ಜನರಲ್ಲಿ ಡೆಂಗ್ಯೂ ಸೋಂಕು ಕಾಣಿಸಿಕೊಂಡಿದೆ. ಇದೀಗ ಬಾಲಕ ಪ್ರದೀಪ್ ಡೆಂಗ್ಯೂ ಸೋಂಕಿನಿಂದ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಗ್ರಾಮದಲ್ಲಿ ಡೆಂಗ್ಯೂ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಅಧಿಕಾರಿಗಳು ಇನ್ನೂ ಎಚ್ಚೆತ್ತುಕೊಂಡಿಲ್ಲ. ಗ್ರಾಮದಲ್ಲಿ, ಮನೆಗಳ ಸುತ್ತ ಫಾಗಿಂಗ್ ಮಾಡುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಚೆನ್ನೈ: ತಮಿಳುನಾಡಿನ ನೂತನ ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ಎನ್.ರವಿ ಅವರು ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಉದಯನಿಧಿ ಸ್ಟಾಲಿನ್ ಸೇರಿದಂತೆ ನಿಯೋಜಿತ ಮಂತ್ರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಡಿಎಂಕೆ ಸರ್ಕಾರದಲ್ಲಿ ಮೂವರು ತಮಿಳುನಾಡಿನ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಡಿಎಂಕೆ ನಾಯಕ ಸೆಂಥಿಲ್ ಬಾಲಾಜಿ ಅವರು ಸಚಿವರಾಗಿ ಪುನಃ ಪ್ರಮಾಣ ವಚನ ಸ್ವೀಕರಿಸಿದರು. ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಇತರ ಮೂವರು ಶಾಸಕರೆಂದರೆ ಗೋವಿ ಚೆಜಿಯಾನ್, ಎಸ್ ಎಂ ನಾಸರ್ ಮತ್ತು ಆರ್ ರಾಜೇಂದ್ರನ್. ಬಾಲಾಜಿ ವಿದ್ಯುತ್, ಅಬಕಾರಿ ಮತ್ತು ನಿಷೇಧ ಸಚಿವರಾಗಿ ಮರಳಿದ್ದಾರೆ. ಚೆಝಿಯಾನ್ ಅವರು ಉನ್ನತ ಶಿಕ್ಷಣ ಖಾತೆಯನ್ನು ವಹಿಸಿಕೊಳ್ಳಲಿದ್ದಾರೆ, ನಾಸರ್ ಹೊಸ ಅಲ್ಪಸಂಖ್ಯಾತರ ಸಚಿವರಾಗಲಿದ್ದಾರೆ ಮತ್ತು ರಾಜೇಂದ್ರನ್ ಅವರಿಗೆ ಪ್ರವಾಸೋದ್ಯಮ ಖಾತೆಯನ್ನು ನೀಡಲಾಗಿದೆ. ಇನ್ನೂ ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ನನಗೆ ಸ್ಥಾನವಲ್ಲ ಆದರೆ…
ಕಠಂಡು: ಭಾರೀ ಮಳೆ, ಭೂಕುಸಿತದ ಪರಿಣಾಮ ನೇಪಾಳದಾದ್ಯಂತ ಸಾವನ್ನಪ್ಪಿದವರ ಸಂಖ್ಯೆ 200ಕ್ಕೆ ತಲುಪಿದೆ. ಕನಿಷ್ಠ 30 ಜನರು ಇನ್ನೂ ನಾಪತ್ತೆಯಾಗಿದ್ದಾರೆ. ಸತತ ಮಳೆ, ಪ್ರವಾಹ, ಭೂಕುಸಿತ ಮತ್ತು ಪ್ರವಾಹದಲ್ಲಿ ಕನಿಷ್ಠ 192 ಜನರು ಸಾವನ್ನಪ್ಪಿದ್ದಾರೆ ಎಂದು ನೇಪಾಳ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ದುರಂತದಲ್ಲಿ ದೇಶಾದ್ಯಂತ 94 ಮಂದಿ ಗಾಯಗೊಂಡಿದ್ದಾರೆ ಮತ್ತು 30 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅವರು ಹೇಳಿದರು.ಹುಡುಕಾಟ, ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ ಎಂದು ಗಹ ಸಚಿವಾಲಯದ ವಕ್ತಾರ ರಿಷಿರಾಮ್ ತಿವಾರಿ ಉಲ್ಲೇಖಿಸಿ ಮೈ ರಿಪಬ್ಲಿಕಾ ನ್ಯೂಸ್ ಪೋರ್ಟಲ್ ವರದಿ ಮಾಡಿದೆ. ದೇಶಾದ್ಯಂತ ಭದ್ರತಾ ಏಜೆನ್ಸಿಗಳನ್ನು ಹುಡುಕಾಟ, ರಕ್ಷಣೆ ಮತ್ತು ಪರಿಹಾರ ಕಾರ್ಯಗಳಿಗಾಗಿ ನಿಯೋಜಿಸಲಾಗಿದೆ ಮತ್ತು ಇದುವರೆಗೆ 4,500 ಕ್ಕೂ ಹೆಚ್ಚು ವಿಪತ್ತು ಪೀಡಿತ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ವರದಿ ತಿಳಿಸಿದೆ. ಗಾಯಗೊಂಡವರು ಉಚಿತ ಚಿಕಿತ್ಸೆ ಪಡೆಯುತ್ತಿದ್ದರೆ, ಪ್ರವಾಹದಿಂದ ಸಂತ್ರಸ್ತರಾದ ಇತರರಿಗೆ ಆಹಾರ ಮತ್ತು ಇತರ ತುರ್ತು ಪರಿಹಾರ ಸಾಮಗ್ರಿಗಳನ್ನು ಒದಗಿಸಲಾಗಿದೆ. ರಾಷ್ಟ್ರದಾದ್ಯಂತ ಹಲವಾರು…
ಕೊಲಂಬೊ: ಶ್ರೀಲಂಕಾ ನೌಕಾಪಡೆಯು ಭಾರತದ 17 ಮೀನುಗಾರರನ್ನು ಬಂಧಿಸಿದ್ದು, ಅವರ ಟ್ರಾಲರ್ ಗಳನ್ನು ವಶಪಡಿಸಿಕೊಂಡಿದೆ. ತನ್ನ ವ್ಯಾಪ್ತಿಯಲ್ಲಿ ಮೀನುಗಾರಿಕೆ ನಡೆಸಿದ ಮೀನುಗಾರರನ್ನು ಬಂಧಿಸಲಾಗಿದೆ ಮತ್ತು ಅವರ ಎರಡು ಟ್ರಾಲರ್ ಗಳನ್ನು ಮನ್ನಾರ್ ನ ಉತ್ತರಕ್ಕೆ ವಶಪಡಿಸಿಕೊಳ್ಳಲಾಗಿದೆ ಎಂದು ಶ್ರೀಲಂಕಾ ನೌಕಾಪಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ನೌಕಾಪಡೆಯು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಭಾರತೀಯ ಮೀನುಗಾರರನ್ನು ಬಂಧಿಸಲು ಕಾರಣವಾಯಿತು ಎಂದು ಅದು ಹೇಳಿದೆ. ಬಂಧಿತ 17 ಮೀನುಗಾರರನ್ನು ತಲೈಮನ್ನಾರ್ ಪಿಯರ್‌ಗೆ ಕರೆದೊಯ್ಯಲಾಗಿದ್ದು, ಮುಂದಿನ ಕ್ರಮಕ್ಕಾಗಿ ಮನ್ನಾರ್ ಮೀನುಗಾರಿಕಾ ನಿರೀಕ್ಷಕರಿಗೆ ಹಸ್ತಾಂತರಿಸಲಾಗುವುದು ಎಂದು ಅದು ತಿಳಿಸಿದೆ. ಲಂಕಾ ನೌಕಾಪಡೆಯು 2024 ರಲ್ಲಿ ಇಲ್ಲಿಯವರೆಗೆ 55 ಭಾರತೀಯ ಮೀನುಗಾರಿಕಾ ದೋಣಿಗಳು ಮತ್ತು 413 ಭಾರತೀಯ ಮೀನುಗಾರರನ್ನು ದ್ವೀಪದ ನೀರಿನಲ್ಲಿ ಹಿಡಿದಿಟ್ಟುಕೊಂಡು ಕಾನೂನು ಕ್ರಮಕ್ಕಾಗಿ ಅಧಿಕಾರಿಗಳಿಗೆ ಹಸ್ತಾಂತರಿಸಿದೆ ಎಂದು ಹೇಳಿಕೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಬಿಜೆಪಿಯವರಿಗೆ ನೈತಿಕತೆ ಇದ್ದರೆ ಮೊದಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ತಮ್ಮ ಪಕ್ಷದಿಂದ ಮೊದಲು ಹೊರಹಾಕಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜ್ಯಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯವರು ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ ಹಾಗೂ ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ನಾವು ಇದಕ್ಕೆ ಹೆದರುವುದಿಲ್ಲ ಎಂದರು. ಕರಡಿಗೆ ಎಷ್ಟು ಕೂದಲುಗಳಿವೆಯೋ ಅಷ್ಟು ಆರೋಪಗಳು ಬಿಜೆಪಿಯವರ ಮೇಲಿದೆ. ಬಿ.ವೈ.ವಿಜಯೇಂದ್ರ ಸೆಲ್ ಕಂಪನಿಗಳ ಮೂಲಕ ಮನಿಲ್ಯಾಂಡ್ರಿಂಗ್ ಮಾಡುತ್ತಿದ್ದಾರೆ. ಹಲವು ಬಾರಿ ಮಲೇಷಿಯಾ ಸೇರಿದಂತೆ ವಿದೇಶಗಳಿಗೆ ಭೇಟಿ ನೀಡಿದ್ದಾರೆ. ಅವರು ಎಷ್ಟು ಬಾರಿ ವಿದೇಶಕ್ಕೆ ಭೇಟಿ ನೀಡಿದ್ದಾರೆ ಎಂಬ ಬಗ್ಗೆ ಪಾಸ್ಪೋರ್ಟ್ ತೋರಿಸಲಿ. ನಾವು ನಮ ಪಾಸ್ಪೋರ್ಟ್ ತೋರಿಸುತ್ತೇವೆ ಎಂದು ಸೆಡ್ಡು ಹೊಡೆದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಗಾಗಿ ಬಿಜೆಪಿ ನಾಯಕರು ಕಸರತ್ತು ನಡೆಸುತ್ತಿದ್ದಾರೆ, ಪ್ರತ್ಯೇಕ ಸಭೆಗಳು, ಚುಚ್ಚುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ದಾಬಸ್ ಪೇಟೆಯಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಯತ್ನಾಳ್ ಸೇರಿ ಕೆಲ ನಾಯಕರ ಪ್ರತ್ಯೇಕ ಸಭೆ ವಿಚಾರವಾಗಿ ಇಂತಹ ಸಭೆ ನಮಗೆ ಹೊಸದೇನಲ್ಲ ಎಂದು ಹೇಳಿಕೆ ನೀಡಿದರು. ಯಡಿಯೂರಪ್ಪ ಅವಧಿಯಲ್ಲಿ ಅನೇಕ ಸವಾಲುಗಳನ್ನು ನೋಡಿ ಬೆಳೆದಿದ್ದೇನೆ. ಇಂತಹ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸುತ್ತೇನೆ ಎಂದು ಯತ್ನಾಳ್ ಹಾಗೂ ತಂಡಕ್ಕೆ ಪ್ರತ್ಯುತ್ತರ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಇಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಈ ಬಾರಿ ದಸರಾಕ್ಕೆ ಬಾಸ್ ಹೊರ ಬರಬೇಕು ಅಂತ ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ನಡುವೆ ದರ್ಶನ್ ಪರವಾಗಿ ವಾದ ಮಂಡಿಸಲು ವಕೀಲರು ಸಿದ್ಧತೆ ನಡೆಸಿದ್ದಾರೆ. ಪೊಲೀಸರು ಸಾಕ್ಷಿಗಳನ್ನ ಸೃಷ್ಟಿ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ನಟ ದರ್ಶನ್ ಪರ ವಕೀಲರು ವಾದ ಮಾಡುವ ಸಾಧ್ಯತೆಗಳಿವೆಯಂತೆ. ದರ್ಶನ್ ಕರೆ ಮಾಡಿರುವುದು ತನ್ನ ಸ್ನೇಹಿತರಿಗೆ. ಅವರು ಎಂದಿನಂತೆ ಕರೆ ಮಾಡಿದ್ದಾರೆ, ಅವರ ರೆಗ್ಯುಲರ್ ಸಂಪರ್ಕದಲ್ಲಿರುವವರನ್ನು ಮಾತ್ರವೇ ಅವರು ಸಂಪರ್ಕಿಸಿದ್ದಾರೆ ಎಂದು ವಾದಿಸಲಿದ್ದಾರೆನ್ನಲಾಗಿದೆ. ಕೊಲೆ ನಡೆದ ಹಲವು ದಿನಗಳ ನಂತರ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ನಾಲ್ಕು ದಿನಗಳ ಬಳಿಕ ಮೃತದೇಹದ ತಪಾಸಣೆ ನಡೆದಿದೆ. ಈ ನಿಧಾನ ಪ್ರಕ್ರಿಯೆ ಬಗ್ಗೆಯೂ ತನಿಖಾಧಿಕಾರಿಗಳೂ ಸಂಪೂರ್ಣ ವಿವರ ನೀಡಿಲ್ಲ ಎಂದಿದ್ದಾರೆ. ಇನ್ನು ಮೃತ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ನಡೆಸಿರುವ ವೈದ್ಯರು ಅಸ್ಪಷ್ಟವಾದ ವರದಿ ನೀಡಿದ್ದಾರೆ. ರೇಣುಕಾಸ್ವಾಮಿ ಸಾವಿಗೆ ನಿಖರವಾದ ಕಾರಣ ಹಾಗೂ ಸಾವಿನ ಅವಧಿ ಬಗ್ಗೆಯೂ ಸ್ಪಷ್ಟ…
ಚಿತ್ರದುರ್ಗ: ಕೆಎಸ್ ಆರ್ ಟಿಸಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಓಬಳಾಪುರ ತಾಂಡದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಬಸ್ಸಿನಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗಿದ್ದು ಓಬಳಾಪುರ ತಾಂಡ ವಾಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕೂಡಲೇ ಸ್ಥಳೀಯರು ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳನ್ನು ಹಾಗೂ ಇತರ ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ, ಘಟನೆಯಿಂದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಹಿರಿಯೂರು ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296