Author: admin

ರಾಯಬಾಗ(ಬೆಳಗಾವಿ): ಮಹಿಳೆಯೊಬ್ಬರು ತಮ್ಮ ಇಬ್ಬರು ಮಕ್ಕಳನ್ನು ಬಾವಿಗೆ ದೂಡಿ ತಾನೂ ಬಾವಿಗೆ ಜಿಗಿದು ಸಾವಿಗೆ ಶರಣಾಗಿರುವ ಘಟನೆ ತಾಲ್ಲೂಕಿನ ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ. ಯಲ್ಲವ್ವ ಅರ್ಜುನ ಕರಿಹೊಳೆ(30), ಅವರ ಮಕ್ಕಳಾದ ಸ್ವಾತಿ(5), ಮುತ್ತಪ್ಪ(1) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪತಿ ಅರ್ಜುನನ ಜೊತೆಗೆ ಯಲ್ಲವ್ವ ಭಾನುವಾರ ಬೆಳಗ್ಗೆ ಜಗಳವಾಡಿದ್ದರು. ಪತಿ ಕೃಷಿ ಭೂಮಿಯತ್ತ ತೆರಳಿದ ಬಳಿಕ ಬಾವಿಗೆ ಜಿಗಿದು ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಮೃತರ ತಾಯಿ ಶೋಭಾ ಈ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಯಲ್ಲವ್ವಳ ಪತಿ ವಿಪರೀತ ಮದ್ಯ ವ್ಯಸನಿಯಾಗಿದ್ದ. ವರದಕ್ಷಿಣೆ ಕಿರುಕುಳ ಕೂಡ ನೀಡುತ್ತಿದ್ದ. ಆತನೇ ಹತ್ಯೆ ಮಾಡಿರುವ ಶಂಕೆ ಇದೆ ಎಂದು ರಾಯಭಾಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ನಟ ದರ್ಶನ್ ಅವರ ಜಾಮೀನು ಅರ್ಜಿ ಸೋಮವಾರ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದಸರಾ ಸಂದರ್ಭದಲ್ಲಿ ದರ್ಶನ್ ಗೆ ಜಾಮೀನು ಸಿಗುತ್ತಾ? ಎನ್ನುವ ನಿರೀಕ್ಷೆ ಅಭಿಮಾನಿಗಳಲ್ಲಿ ಮೂಡಿದೆ. ಸೆಪ್ಟೆಂಬರ್ 27ರಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಬೇಕಿತ್ತು, ಆದರೆ ದರ್ಶನ್ ಪರ ಹಿರಿಯ ವಕೀಲರು ಕೋರ್ಟ್‌ಗೆ ಹಾಜರಾಗದ ಕಾರಣ, ವಿಚಾರಣೆ ಮುಂದೂಡುವಂತೆ ಸಹಾಯಕ ವಕೀಲರು ಮನವಿ ಮಾಡಿದ್ದರಿಂದ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 30 ಕ್ಕೆ ಮುಂದೂಡಲಾಗಿತ್ತು. ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಪಾತ್ರವಿಲ್ಲ ಮತ್ತು ದರ್ಶನ್ ತನಿಖೆಗೆ ಸಹಕಾರ ನೀಡುತ್ತಿದ್ದಾರೆ. ಪೊಲೀಸರು ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಹೀಗಾಗಿ ದರ್ಶನ್ ಸಾಕ್ಷಿ ನಾಶ ಮಾಡಲು ಯಾವುದೇ ಅವಕಾಶವಿಲ್ಲ ಎನ್ನುವ ವಾದವನ್ನು ದರ್ಶನ್ ವಕೀಲರು ಕೋರ್ಟ್ ಮುಂದಿರುವ ಸಾಧ್ಯತೆಗಳಿವೆ ಎನ್ನಲಾಗ್ತಿದೆ. ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಅವರನ್ನು ಭೇಟಿಯಾಗಿ ಹಲವಾರು ಬಾರಿ ಮಾತುಕತೆ ನಡೆಸಿದ್ದಾರೆ. ಈಗಾಗಲೇ ಈ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ಲಭಿಸಿದ ಹಿನ್ನೆಲೆ ನಟ ದರ್ಶನ್ ಗೆ…

Read More

ಪ್ರಯಾಗ್ರಾಜ್: ಮಾಸ್ಟರ್ ಆಫ್ ಸರ್ಜರಿ ವ್ಯಾಸಂಗ ಮಾಡುತ್ತಿದ್ದ ವೈದ್ಯನೊಬ್ಬ ವಿಷಕಾರಿ ಇಂಜೆಕ್ಷನ್ ಚುಚ್ಚಿಕೊಂಡು ಸಾವಿಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದಿದೆ. ಇಲ್ಲಿನ ಸರ್ಕಾರಿ ಮೋತಿ ಲಾಲ್ ನೆಹರೂ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಡಾ.ಕಾರ್ತಿಕೇಯ ಶ್ರೀವಾಸ್ತವ (28) ಸಾವಿಗೆ ಶರಣಾದ ವೈದ್ಯರಾಗಿದ್ದಾರೆ. ಡಾ. ಕಾರ್ತಿಕೇಯ ಶ್ರೀವಾಸ್ತವ ಆಸ್ಪತ್ರೆಯ ವಿಚಾರದಲ್ಲಿ ತಲೆ ಕೆಡಿಸಿಕೊಂಡು ಸಾವಿಗೆ ಶರಣಾಗಿದ್ದಾರೆ ಅಂತ ಹೇಳಲಾಗಿದೆ. ಆಸ್ಪತ್ರೆ ಆವರಣದಲ್ಲಿ ತಮ್ಮ ಕಾರಿನಲ್ಲೇ ಇವರು ಪ್ರಾಣ ಬಿಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಮೈಸೂರು: ಕುಮಾರಸ್ವಾಮಿ ತಪ್ಪು ಮಾಡಿದ್ದಾರೆ. ಅದಕ್ಕಾಗಿ ಅಧಿಕಾರಿಗಳ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಕುಮಾರಸ್ವಾಮಿ ಮತ್ತು ಎಡಿಜಿಪಿ ನಡುವೆ ನಡೆಯುತ್ತಿರುವ ವಾದ–ಪ್ರತಿವಾದಗಳ ಬಗ್ಗೆ ಮಾಧ್ಯಮಗಳ ಪ್ರಶ್ನೆಗಳಿಗೆ ಸಿಎಂ ಉತ್ತರಿಸಿದರು. ಹಿರಿಯ ಐಪಿಎಸ್‌‍ ಅಧಿಕಾರಿ ಚಂದ್ರಶೇಖರ್‌ ಅವರು ಕುಮಾರಸ್ವಾಮಿಯವರನ್ನು ನೇರವಾಗಿ ಟೀಕಿಸಿಲ್ಲ, ಬರ್ನಾಡ್‌ ಶಾ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ ಎಂದು ಸಿಎಂ ಹೇಳಿದರು. ಕುಮಾರಸ್ವಾಮಿ ಮತ್ತು ಎಡಿಜಿಪಿ ನಡುವೆ ನಡೆಯುತ್ತಿರುವ ವಾದ-ಪ್ರತಿವಾದಗಳ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಎಡಿಜಿಪಿ ಚಂದ್ರಶೇಖರ್‌ ಅವರ ವಿರುದ್ಧ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಅದಕ್ಕೆ ಚಂದ್ರಶೇಖರ್‌ ಉತ್ತರ ನೀಡಿದ್ದಾರೆ. ನನಗೆ ಅಷ್ಟೇ ಗೊತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು. ಕಾನೂನು ಬಾಹಿರವಾಗಿ ನಡೆದುಕೊಂಡಾಗ ಅಧಿಕಾರಿಗಳ ವಿರುದ್ಧ ಆರೋಪ ಮಾಡುವುದು ಕಂಡುಬರುತ್ತದೆ. ಕುಮಾರಸ್ವಾಮಿಯವರನ್ನು ಹಂದಿ ಎಂದು ಚಂದ್ರಶೇಖರ್‌ ಅವರು ಹೇಳಿಲ್ಲ. ಬರ್ನಾಡ್‌ ಶಾ ಹೇಳಿದ್ದನ್ನು ಪ್ರಸ್ತಾಪಿಸಿದ್ದಾರೆ. ಈ ವಿಚಾರದಲ್ಲಿ ನಾನು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ಚಿತ್ರದುರ್ಗ: ಮಹಾಗಣಪತಿ ಶೋಭಾಯಾತ್ರೆಯ ವೇಳೆ ಕಿಚ್ಚಸುದೀಪ್‌, ದರ್ಶನ್‌ ಅಭಿಮಾನಿಗಳ ನಡುವೆ ಬಾವುಟ ಹಾರಿಸುವ ವಿಚಾರಕ್ಕೆ ವಾಗ್ದಾಳಿ ನಡೆಸಿರುವ ಘಟನೆ ನಡೆದಿದೆ. ಚಿತ್ರದುರ್ಗ ನಗರ ಪೊಲೀಸ್‌‍ ಠಾಣೆ ಮುಂಭಾಗ ಮಹಾಗಣಪತಿ ಶೋಭಾಯಾತ್ರೆಯ ಅಂಗವಾಗಿ ಬಾವುಟ ಹಾರಿಸುವ ಸಲುವಾಗಿ ಇಬ್ಬರು ಸ್ಟಾರ್‌ ನಟರುಗಳ ಅಭಿಮಾನಿಗಳ ನಡುವೆ ಪರಸ್ಪರ ತಳ್ಳಾಟ, ನೂಕಾಟ ನಡೆದಿದೆ. ಘಟನೆಯಿಂದ ತಕ್ಷಣವೇ ಎಚ್ಚೆತ್ತ ಚಿತ್ರದುರ್ಗ ಠಾಣೆಯ ಪೊಲೀಸರು ಮಧ್ಯಪ್ರವೇಶಿಸಿ ದರ್ಶನ್‌ ಹಾಗೂ ಸುದೀಪ್‌ ಅವರ ಭಾವಚಿತ್ರವುಳ್ಳ ಬಾವುಟಗಳನ್ನು ವಶಪಡಿಸಿ ಕೊಂಡು ಪರಿಸ್ಥಿತಿಯನ್ನು ನಿಭಾಯಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಮೈಸೂರು:  ಆಸ್ಪತ್ರೆಗೆ ಬರುವಂತಹ ಪ್ರತಿಯೊಬ್ಬ ರೋಗಿಗಳನ್ನು ಅತ್ಯಂತ ಪ್ರೀತಿ, ವಾತ್ಸಲ್ಯ ,  ವಿಶ್ವಾಸ ಮತ್ತು ಅನ್ಯೋನ್ಯತೆಯಿಂದ ಕಂಡರೆ ಅದಕ್ಕಿಂತ ಉಪಚಾರ ಬೇರೊಂದಿಲ್ಲ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹೇಳಿದರು. ವೈದ್ಯಕೀಯ ಶಿಕ್ಷಣ ಇಲಾಖೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಜಿನಿಯರಿoಗ್ ಘಟಕ ವತಿಯಿಂದ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಗ್ರಂಥಾಲಯ ಕಟ್ಟಡದಲ್ಲಿ ಹಮ್ಮಿಕೊಂಡಿದ್ದ, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರ ಮನುಕುಲದ ಆಯಸ್ಸನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ ಎಂದು  ಪ್ರಶಂಸೆ ವ್ಯಕ್ತಪಡಿಸಿದರು. ಶತಮಾನ ಕಂಡ ಮೈಸೂರು ವೈದ್ಯಕೀಯ ಕಾಲೇಜು 9 ಸಾವಿರ‌ ಮಂದಿ ವೈದ್ಯ ಸಂಪತ್ತನ್ನು ಸೃಷ್ಟಿಸಿದ ಹೆಗ್ಗಳಿಕೆ ಹೊಂದಿದೆ. ಪ್ರಪಂಚದಾದ್ಯಂತ ಈ ಕಾಲೇಜಿನಲ್ಲಿ ಕಲಿತ ವೈದ್ಯರು ವಿಸ್ತರಿಸಿಕೊಂಡಿದ್ದಾರೆ ಎಂದರು. ಖಾಸಗಿ ಆಸ್ಪತ್ರೆಗಳಿಗಿಂತ ಸರ್ಕಾರಿ ಆಸ್ಪತ್ರೆಗಳ ವೈದ್ಯರಿಗೆ ಹೆಚ್ಚು ಪರಿಣಿತಿ ಮತ್ತು ಅನುಭವ ಇರುತ್ತದೆ ಎನ್ನುವುದು ನನ್ನ ಭಾವನೆ.…

Read More

ತುಮಕೂರು: ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಂಡ ಬೃಹತ್ ಹೆಬ್ಬಾವು ಜನರನ್ನು ಭಯಭೀತಗೊಳಿಸಿದ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದಲ್ಲಿ ನಡೆದಿದೆ. ಹೆಬ್ಬಾವನ್ನು ಕಂಡು ಗಾಬರಿಗೊಂಡ ಸಾರ್ವಜನಿಕರು ಸ್ಥಳೀಯರಿಂದ ಅರಣ್ಯ ಇಲಾಖೆ ಹಾಗು ಉರಗತಜ್ಞರಿಗೆ  ಕರೆ ಮಾಡಿದ್ದಾರೆ. ವಿಷಯ ತಿಳಿದ ತಕ್ಷಣ  ತುಮಕೂರು ವನ್ಯಜೀವಿ ಉರಗ ಜಾಗೃತಿ ಸಂಸ್ಥೆಯ ತಜ್ಞ ದಿಲೀಪ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ  ಸುರಕ್ಷಿತವಾಗಿ ಹೆಬ್ಬಾವನ್ನು ಸೆರೆಹಿಡಿದು ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ಕೊರಟಗೆರೆ ಪಟ್ಟಣದ ಹೊರವಲಯದ ಡಿಗ್ರಿ ಕಾಲೇಜ್ ಸಮೀಪ ಕಾಣಿಸಿಕೊಂಡ ಬೃಹತ್ ಹೆಬ್ಬಾವು,  ಟೀ ಅಂಗಡಿಯ ಮುಂಭಾಗದಲ್ಲಿರುವ ಕಲ್ಲುಗಳ ಅಡಿಯಲ್ಲಿ ಸೇರಿಕೊಂಡಿತ್ತು. ಸುಮಾರು ಹತ್ತು ವರ್ಷದಿಂದ  ಅನೇಕ ಭಾಗಗಳಲ್ಲಿ ಬೃಹತ್ ಗಾತ್ರದ ಹಾವುಗಳು ಕಾಣಿಸಿಕೊಳ್ಳುತ್ತಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು: ಸರಗಳ್ಳನನ್ನು ಹಿಡಿಯಲು ಚೇಸ್ ಮಾಡುತ್ತಿದ್ದ ವೇಳೆ ಪೊಲೀಸರ ಕಾರು ಅಪಘಾತವಾಗಿದ್ದು, ಮೂವರು ಮಧುಗಿರಿ ಠಾಣೆ ಪೊಲೀಸರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಘಟನೆ ಆಂಧ್ರಪ್ರದೇಶದ ಮಣೂರು ಬಳಿ ನಡೆದಿದೆ. ಮಧುಗಿರಿ ಪೊಲೀಸ್ ಠಾಣೆಯ ಕ್ರೈಂ ಸಿಬ್ಬಂದಿ ಪ್ರಕಾಶ್, ಮುದ್ದರಾಜು ಹಾಗೂ ರಮೇಶ್ ಗೆ ಗಂಭೀರ ಗಾಯವಾಗಿದೆ. ನಿನ್ನೆ ಮಧುಗಿರಿ ಪಟ್ಟಣದಲ್ಲಿ ಮಹಿಳೆ ಬಳಿ 70 ಗ್ರಾಂ ಚಿನ್ನದ ಸರ ಕದ್ದು ಎಸ್ಕೇಪ್ ಆಗ್ತಿದ್ದ ಖದೀಮನನ್ನು ಬಂಧಿಸಲು  ತೆರಳುತ್ತಿದ್ದರು. ಈ ಪ್ರಕರಣ ಸಂಬಂಧ ಮಧುಗಿರಿ ಪೊಲೀಸ್ ಠಾಣೆಗೆ ಮಹಿಳೆ ದೂರು ನೀಡಿದ್ದ‌‌ರು. ಕಳ್ಳನ ಜಾಡು ಹಿಡಿದು ಹೊರಟಿದ್ದ ಮಧುಗಿರಿ ಪೊಲೀಸರು ಸರಗಳ್ಳನನ್ನ ಹಿಡಿಯುವ ಭರದಲ್ಲಿ ವೇಗವಾಗಿ ತೆರಳುತ್ತಿದ್ದರು. ಈ ವೇಳೆ  ಕಾರಿನ ಸ್ಟೇರಿಂಗ್ ಲಾಕ್ ಆಗಿ ಪಲ್ಟಿ ಹೊಡೆದಿದೆ. ಈ ಘಟನೆಯಿಂದಾಗಿ ಮೂವರಿಗೂ ಕಣ್ಣು, ತಲೆ, ಕೈ, ಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಪೊಲೀಸ್ ಸಿಬ್ಬಂದಿಗಳಿಗೆ ಆಂಧ್ರದ ಧರ್ಮವರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ  ಪೊಲೀಸ್ ಸಿಬ್ಬಂದಿಗಳು ಪಾರಾಗಿದ್ದಾರೆ. ಆಂಧ್ರಪ್ರದೇಶದ ಧರ್ಮವರಂ…

Read More

ಪಾವಗಡ: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಟ್ಯಾಂಕರ್ ವೊಂದು ಪಲ್ಟಿಯಾಗಿರುವ  ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಬ್ಯಾಡನೂರು ಗುಂಡಾರ್ಲಹಳ್ಳಿ ನಡುವಿನ ವಡ್ಡರಹಟ್ಟಿ ಬಳಿ  ಶನಿವಾರ ಸಂಜೆ ನಡೆದಿದೆ. ಬ್ಯಾಡನೂರು ಗ್ರಾಮದಿಂದ ಹಾಲನ್ನು ತುಂಬಿಕೊಂಡು ಪಾವಗಡದ ಕಡೆ ಬರುತ್ತಿದ್ದ ಹಾಲಿನ ಟ್ಯಾಂಕರ್ ವಡ್ಡರಹಟ್ಟಿ ಸಮೀಪ ಬರುತ್ತಿದ್ದಂತೆ ನಿಯಂತ್ರಣ ತಪ್ಪಿ ರಸ್ತೆಯ ಬಲಬದಿಗೆ ಬಿದ್ದಿದ್ದು, ಈ ಸಂದರ್ಭದಲ್ಲಿ ಟ್ಯಾಂಕರ್ ನ ಭಾಗಶಃ ಹಾಲು ನೆಲದ ಪಾಲಾಗಿದೆ. ಕ್ರೇನ್ ಸಹಾಯದಿಂದ ಟ್ಯಾಂಕರ್ ಅನ್ನು ಮೇಲೆತ್ತಿದ್ದು ಹಾಲು ಪೋಲಾಗುತ್ತಿದ್ದ ಸಂದರ್ಭದಲ್ಲಿ  ಗ್ರಾಮಸ್ಥರು ಬಿಂದಿಗೆ,  ಕ್ಯಾನುಗಳಲ್ಲಿ ಹಿಡಿದುಕೊಂಡು ಹಾಲನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗುತ್ತಿದ್ದ ದೃಶ್ಯ ಕಂಡು ಬಂತು. ಘಟನೆಯು ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಅಕ್ಟೋಬರ್ ಮೊದಲ ವಾರದಲ್ಲಿ ಬುಧಾದಿತ್ಯ ಪ್ರಭಾವಶಾಲಿಯಾಗಿರಲಿದೆ. ಈ ಶುಭ ಯೋಗದಿಂದಾಗಿ ಯಾವ ರಾಶಿಗಳ ಜನರಿಗೆ ಈ ವಾರ ಅದೃಷ್ಟಶಾಲಿಯಾಗಿರಲಿದೆ..? ವಾರದ 5 ಅದೃಷ್ಟದ ರಾಶಿ ಚಿಹ್ನೆಗಳು ಯಾವುವು ಎಂದು ತಿಳಿಯೋಣ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು  ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? Provided by ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ಅಕ್ಟೋಬರ್…

Read More