Author: admin

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಬಳ್ಳಾರಿ ಜೈಲು ಸೇರಿದ್ದಾರೆ. ಇದೀಗ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ನಟ ದರ್ಶನ್ ಗೆ ಹಲವು ಸಮಸ್ಯೆಗಳು ಕಾಣಿಕೊಂಡಿವೆ. ಇಂಡಿಯನ್ ಟಾಯ್ಲೆಟ್ ಬಳಸಲು ದರ್ಶನ್ ಗೆ ಕಷ್ಟವಾಗ್ತಿದೆಯಂತೆ. ಹೀಗಾಗಿ ಶೌಚಾಲಯಕ್ಕೆ ಸರ್ಜಿಕಲ್ ಚೇರ್ ನೀಡುವಂತೆ ಮನವಿ ಮಾಡಲಾಗಿದೆ. ಜೈಲು ಅಧಿಕಾರಿಗಳು ಈ ಮನವಿಯನ್ನು ಪರಿಶೀಲನೆ ನಡೆಸಿದ್ದಾರೆ. ನಟ ದರ್ಶನ್ ಗೆ  ಬೆನ್ನು ಮೂಳೆ ಸಮಸ್ಯೆ, ಮಲಬದ್ಧತೆ ಸಮಸ್ಯೆಯಿದೆ. ಕೆಳಗೆ ಕೂರಲು ಆಗುವುದಿಲ್ಲ. ಶೌಚಾಲಯಕ್ಕೆ ಸರ್ಜಿಕಲ್ ಚೇರ್ ನೀಡುವಂತೆ ಡಿಐಜಿ ಮುಂದೆ ನಟ ದರ್ಶನ್ ಮನವಿ ಮಾಡಿಕೊಂಡಿದ್ದರು. ಈ ಸಂಬಂಧ ಬೆಂಗಳೂರಿನಿಂದ ನಟನ ಆರೋಗ್ಯ ವರದಿ ಬಂದಿದ್ದು, ವೈದ್ಯಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಭಾನುವಾರವೂ ದರ್ಶನ್ ಅವರ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಇಂದು ನಟನಿಗೆ ಸರ್ಜಿಕಲ್ ಚೇರ್ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ. ವಿಜಯಲಕ್ಷ್ಮೀ ಜೈಲಿಗೆ ಭೇಟಿ ಕೊಟ್ಟಾಗ ನೀಡಿದ್ದ ಬೇಕರಿ ತಿಂಡಿಗಳನ್ನು ದರ್ಶನ್ ಸೇವಿಸಿದ್ದಾರೆ. ಜೈಲಿನ ಬ್ಯಾರಕ್‌ ಆವರಣದಲ್ಲಿಯೇ ವಾಕಿಂಗ್ ಮಾಡುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ…

Read More

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಆ್ಯಂಡ್ ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಗೆ ದಿನಗಣನೆ ಶುರುವಾಗಿದೆ. ವರದಿಗಳ ಪ್ರಕಾರ, ಇದೇ ವಾರ ಚಾರ್ಜ್ ಶೀಟ್ ಸಲ್ಲಿಕೆಯಾಗುವ ಸಾಧ್ಯತೆಯಿದೆಯಂತೆ. ಆರೋಪಪಟ್ಟಿ ಸ್ಟ್ರಾಂಗ್ ಆಗಿದ್ದು, ತನಿಖೆ ಅಂತಿಮ ಹಂತದಲ್ಲಿದೆ ಎಂದು ತನಿಖೆಯ ಭಾಗವಾಗಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ತನಿಖಾ ತಂಡ ಕೆಲ ವಿಧಿವಿಜ್ಞಾನ ಮತ್ತು ತಾಂತ್ರಿಕ ವರದಿಗಾಗಿ ಕಾಯುತ್ತಿದ್ದು, ವರದಿ ಬಂದ ಕೂಡಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ. ಜೂನ್ 9 ರಂದು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಜೂನ್ 11 ರಂದು ನಟ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು: ಪಟಾಕಿ ತುಂಬಿದ  ಗೋಡೌನ್ ಗೆ ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಅಪಾರ ಪ್ರಮಾಣದ  ಸಾಮಗ್ರಿಗಳು ಸುಟ್ಟು ಭಸ್ಮವಾಗಿರುವ ಘಟನೆ ತುಮಕೂರು ನಗರದ ಹೃದಯ ಭಾಗ ಮಂಡಿ ಪೇಟೆಯಲ್ಲಿ ನಡೆದಿದೆ. ಹೊತ್ತಿ ಉರಿದ ಪಟಾಕಿ ಜೊತೆಗೆ ಪಕ್ಕದಲ್ಲಿಯೇ ಇದ್ದ ಪ್ಲಾಸ್ಟಿಕ್ ಅಂಗಡಿ, ಗ್ರಂಥಿಗೆ ಅಂಗಡಿಯ ಗೋದಾಮಿಗೂ ಬೆಂಕಿ ವ್ಯಾಪಿಸಿತ್ತು. ಮೆಟ್ರೋ ಮುಂಭಾಗ ಇರುವ ನೇತಾಜಿ ಸ್ಟೋರ್ ಗೋದಾಮಿನಲ್ಲಿ   ಪಟಾಕಿ, ಗ್ರಂಥಿಗೆ, ಸ್ಡೇಷನರಿ ಪ್ಲಾಸ್ಟಿಕ್ ವಸ್ತುಗಳ ಅಂಗಡಿ ಇತ್ತು. ರಾಮಕೃಷ್ಣ ಎಂಬುವರಿಗೆ ಸೇರಿದ ಅಂಗಡಿ ಮಳಿಗೆ ಇದಾಗಿದ್ದು,, ಬೆಳಗ್ಗೆ 8ಗಂಟೆಯಿಂದ ಗೋದಾಮು ಹೊತ್ತಿಉರಿಯುತ್ತಿದೆ. ಅಕ್ರಮ ಪಟಾಕಿ ಶೇಖರಣೆಯಿಂದ ಭಾರಿ ಅನಾಹುತವಾಗಿದ್ದು ನಿರಂತರವಾಗಿ ಪಟಾಕಿಗಳು ಸ್ಪೋಟಗೊಂಡಿವೆ. ಗೋದಾಮಿಗೆ ಹೊಂದಿಕೊಂಡಂತೆ ಮನೆಗಳಿದ್ದು, ಪಟಾಕಿ ಸ್ಪೋಟದಿಂದ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಹೆಚ್ಚಿದೆ. ಸುತ್ತಮುತ್ತಲ ಪ್ರದೇಶದಲ್ಲಿ ಆವರಿಸಿದ ದಟ್ಟವಾದ ಹೊಗೆ ಆವರಿಸಿತ್ತು. ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸಲು ಹರಸಾಹಸ ಪಡಬೇಕಾಯಿತು. ಬೆಳಗ್ಗೆ 8 ಗಂಟೆಯಿಂದ ನಿರಂತರವಾಗಿ ಕಾರ್ಯಾಚರಣೆ ನಡೆದಿದೆ. ಮಂಡಿಪೇಟೆ ರಸ್ತೆಯಲ್ಲಿ ಎರಡು ಕಡೆ ಬಂದ್ ಬಿಗಿ ಪೊಲೀಸ್…

Read More

ಬೆಂಗಳೂರು: ನನ್ನ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಷಡ್ಯಂತ್ರ ನಡೆಯುತ್ತಿದೆ. ಆದ್ರೆ ನಾವು ಯಾವುದಕ್ಕೂ ಹೆದ್ರಲ್ಲ ಅಂತ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಭಾನುವಾರ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು,  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ಟ್ರಸ್ಟ್‌ ಗೆ ಕೆಐಎಡಿಬಿ ಜಮೀನು ಮಂಜೂರು ವಿವಾದ ಕುರಿತು ಕಾಂಗ್ರೆಸ್ ನಾಯಕರ ವಿರುದ್ಧ ಸಲ್ಲಿಕೆಯಾಗಿರುವ ಎರಡು ಅರ್ಜಿಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದರು. ಇದರ ಬಗ್ಗೆ ನಮ್ಮ ಬಳಿ ಯಾವುದೇ ಮಾಹಿತಿಲ್ಲ. ಕೆಲವರು ಕಾಂಗ್ರೆಸ್ ನಾಯಕರ ವಿರುದ್ಧ ದೂರು ಸಲ್ಲಿಸಿದ್ದಾರೆ. ನನ್ನ ವಿರುದ್ಧವೂ ದೂರು ಸಲ್ಲಿಸಲು ಯತ್ನಗಳು ನಡೆಯುತ್ತಿವೆ. ದೂರು ಸಲ್ಲಿಸಲಿ. ಆದರೆ, ನಾನು ಯಾವುದಕ್ಕೂ ಹೆದರುವುದಿಲ್ಲ ಎಂದು ಹೇಳಿದರು. ಇದೇ ವೇಳೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಗಾಲಿ ಜನಾರ್ದನ ರೆಡ್ಡಿ, ಮುರುಗೇಶ್ ನಿರಾಣಿ ಸೇರಿದಂತೆ ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಾಯಕರ ವಿರುದ್ಧ ರಾಜಭವನದಲ್ಲಿ ಯಾವುದೇ ದೂರುಗಳೂ ದಾಖಲಾಗಿಲ್ಲ ಎಂದು ರಾಜ್ಯಪಾಲರು ಕಾಂಗ್ರೆಸ್ ನಿಯೋಗಕ್ಕೆ ತಿಳಿಸಿದ್ದಾರೆ ಎಂದು…

Read More

ಗ್ರಹಗತಿಗಳ ಸ್ಥಾನಗಳನ್ನು ಆಧರಿಸಿ 12 ರಾಶಿಯವರಿಗೆ ಫಲಾನುಫಲ ಹೇಗಿದೆ ಎಂದು ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ: 9535156490 Provided by ಮೇಷ ರಾಶಿ✨ ಈ ದಿನ ನಿಮಗೆ ಉತ್ತಮವಾಗಿರಲಿದೆ. ನೀವು ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಪರಿಹಾರವನ್ನು ಪಡೆಯುತ್ತೀರಿ. ಈ ಸಮಯದಲ್ಲಿ, ನೀವು ಕೆಲಸಕ್ಕೆ ಸಂಬಂಧಿಸಿದ ಕೆಲವು ಪ್ರಮುಖ ನಿರ್ಧಾರಗಳನ್ನು ಸಹ ತೆಗೆದುಕೊಳ್ಳಬಹುದು. ಈ ದಿನ ಕುಟುಂಬದೊಂದಿಗೆ ತುಂಬಾ…

Read More

ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ವಾಸವಿ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲ್ಲೂಕು ಆಂಗ್ಲ ಮಾಧ್ಯಮ ಶಾಲೆ ಆಡಳಿತ ಸಂಘದ ವತಿಯಿಂದ ರಸಪ್ರಶ್ನೆ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಾಸವಿ ವಿದ್ಯಾನಿಕೇತನ ಸಂಸ್ಥೆಯ ಅಧ್ಯಕ್ಷರಾದ ಡಾ.ಪ್ರೇಮಯೋಗಿ, ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಬೇಕಾದರೆ ವಿದ್ಯಾರ್ಥಿಗಳು ಮೊದಲು ಪ್ರಶ್ನೆಯನ್ನು ಅರ್ಥ ಮಾಡಿಕೊಳ್ಳಬೇಕು. ಪ್ರಶ್ನೆ ಅರ್ಥವಾದಲ್ಲಿ ಉತ್ತರ ತಾನಾಗಿಯೇ ಮೂಡಿ ಬರುತ್ತದೆ. ಆದಾಗಿ ವಿದ್ಯಾರ್ಥಿಗಳು ಪ್ರಶ್ನೆಗಳತ್ತ ಗಮನ ಹರಿಸಬೇಕು ಎಂದರು. ಹತ್ತನೇ ತರಗತಿಯು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ತೋರ್ಪಡಿಸಲು ದೊರೆತಿರುವ ಅವಕಾಶ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಪ್ರತಿಭೆ ಇದ್ದು, ಅದನ್ನು ಹೊರಸೂಸುವ ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ವಾಸವಿ ವಿದ್ಯಾನಿಕೇತನ ಕಾರ್ಯದರ್ಶಿ ಎನ್.ಜಿ.ರಾಮು  ತಿಳಿಸಿದರು. ಅಂತ್ಯೋದಯ ಶಾಲೆಯ ಮುಖಸ್ಥರಾದ ಮುನಿಸ್ವಾಮಿ ರಸಪ್ರಶ್ನೆ ಕಾರ್ಯಕ್ರಮದ ಕಾರ್ಯ ವೈಖರಿಯನ್ನು ವಿವರಿಸಿದರು. ತಾಲ್ಲೂಕಿನ ಹನ್ನೆರಡು ಶಾಲೆಗಳ ವಿದ್ಯಾರ್ಥಿಗಳು ರಸಪ್ರಶ್ನೆ ಕಾರ್ಯಕ್ರಮದಲ್ಲಿ ಬಾಗವಹಿಸಿದ್ದು, ಪ್ರಥಮ ಸ್ಥಾನ ಅವನ್ನು ಕೋಟಿಗುಡ್ಡ ಸಹನಾ ಆಂಗ್ಲ ಮಾಧ್ಯಮ ಶಾಲೆ, ಶಾರದಾ ವಿದ್ಯಾಪೀಠ ಶಾಲೆಯ ದ್ವಿತೀಯ,…

Read More

ಮಂಡ್ಯ:  ಪ್ರೀತಿ ಪ್ರೇಮಾ ಅಂತ ನಾಲ್ವರು ಯುವಕರು ಅಪ ಪ್ರಚಾರ ಮಾಡಿದ್ದರಿಂದ ನೊಂದು ಬಾಲಕಿಯೊಬ್ಬಳು ಸಾವಿಗೆ ಶರಣಾದ ಘಟನೆ ಘಟನೆ ಮಂಡ್ಯದ  ಹನಕೆರೆ ಗ್ರಾಮದಲ್ಲಿ ನಡೆದಿದೆ. ಇಂಪನಾ (14) ಸಾವಿಗೆ ಶರಣಾದ ಬಾಲಕಿಯಾಗಿದ್ದಾಳೆ. ಗಗನ್, ಸಂಜಯ್ , ಮಹೇಂದ್ರ ಹಾಗೂ ಲೋಹಿತ್ ಗಗನ್, ಸಂಜಯ್ , ಮಹೇಂದ್ರ ಹಾಗೂ ಲೋಹಿತ್ ಎಂಬವರು ಹನಕೆರೆ ಗ್ರಾಮದ ಗಗನ್ ಮತ್ತು ಸ್ನೇಹಿತರು ಸೇರಿ ಇಂಪನಾ- ಮಹೇಂದ್ರ ಎಂಬಾತನನ್ನು ಪ್ರೀತಿ ಮಾಡುತ್ತಿದ್ದಾಳೆ ಎಂದು ಗಾಳಿ ಸುದ್ದಿ ಹಬ್ಬಿಸಿದ್ದರು. ಇದರಿಂದ ಮನನೊಂದು ಬಾಲಕಿ ಸಾವಿಗೆ ಶರಣಾಗಿದ್ದಾಳೆ ಎಂದು ಹೇಳಲಾಗಿದೆ. ಇಂಪನಾ 9ನೇ ತರಗತಿಯಲ್ಲಿ ಓದುತ್ತಿದ್ದಳು. ಅಪಪ್ರಚಾರದಿಂದ ನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಕೊಂಡು ಸಾವಿಗೆ ಶರಣಾಗಿದ್ದಾಳೆ. ಬಾಲಕಿಯ ವಿರುದ್ಧ ಅಪಪ್ರಚಾರ ನಡೆಸಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಪೋಷಕರು ಒತ್ತಾಯಿಸಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ತಿಪಟೂರು: ಸೆಪ್ಟಂಬರ್ 2ರಂದು  ನವದೆಹಲಿ ಭಾರತೀಯ ಕಾರ್ಯನಿರತ ಪತ್ರಕರ್ತರ 78ನೇ ರಾಷ್ಟ್ರೀಯ ಮಂಡಳಿ ಸಮಾವೇಶ ವಿಚಾರ ಸಂಕಿರಣ ಹಾಗೂ ತೆಂಗು ಉತ್ಪನ್ನಗಳ ಪ್ರದರ್ಶನ ಮತ್ತು ಗೋಷ್ಠಿಯನ್ನು ಆಯೋಜಿಸಲಾಗಿದೆ ಅಂತ ಕಲಾ ಕೃತಿ ಸಂಸ್ಥೆಯ ಪ್ರಾಯೋಜಕದೊಂದಿಗೆ ಸಂಸ್ಥೆಯ ಅಧ್ಯಕ್ಷ ಡಾ. ಶ್ರೀಧರ್ ತಿಳಿಸಿದರು. ಸ್ವಾತಂತ್ರ್ಯೋತ್ಸವದ 75ನೇ ವರ್ಷದ ನೆನಪಿನ ಅಂಚೆ, ಚೀಟಿ , ಲಕೋಟಿ, ಅಮೂಲ್ಯ ನಾಣ್ಯಗಳ ಪ್ರದರ್ಶನ, ವಿಶ್ವ ತೆಂಗು ದಿನದ ಅಂಗವಾಗಿ ತೆಂಗು ಉತ್ಪನ್ನಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಬೆಳಗ್ಗೆ 10 ಗಂಟೆಗೆ ಗೃಹ ಸಚಿವ ಡಾ.ಪರಮೇಶ್ವರ್ ರಾಷ್ಟ್ರೀಯ ಸಮಾವೇಶವನ್ನು ಉದ್ಘಾಟಿಸಲಿದ್ದು, ಶಾಸಕ ಕೆ. ಷಡಕ್ಷರಿ ವಸ್ತು ಪ್ರದರ್ಶನ ಮತ್ತು ಅಂಚೆಚೀಟಿ ಪ್ರದರ್ಶನ ಉದ್ಘಾಟಿಸಲಿದ್ದಾರೆ. ಭಾರತೀಯ ಕಾರ್ಯಕರ್ತರ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಬಿ.ಬಿ.ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯಾಧ್ಯಕ್ಷ ಶಿವಾನಂದ ಕಲ್ಪಶ್ರೀ ಸ್ವರ್ಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ ಎಂದು ಈ ಕಾರ್ಯಕ್ರಮವನ್ನು ಆಯೋಜಿಸಿರುವ ಕಲಾ ಕೃತಿ ಸಂಸ್ಥೆಯ ಅಧ್ಯಕ್ಷ ಡಾ.ಶ್ರೀಧರ್ ತಿಳಿಸಿದರು ವರದಿ: ಆನಂದ್, ತಿಪಟೂರು ನಮ್ಮತುಮಕೂರಿನ ಕ್ಷಣ…

Read More

ಪಾವಗಡ. ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮ ವತಿಯಿಂದ ನಿಡಗಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳಿಗೆ ಸ್ಕೂಲ್ ಬ್ಯಾಗ್ ನೋಟ್ ಪುಸ್ತಕ ಲೇಖನಿ ಸಾಮಗ್ರಿಗಳನ್ನು ಮಹರ್ಷಿ ವಾಲ್ಮೀಕಿ ಆಶ್ರಮದಲ್ಲಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ವಾಲ್ಮೀಕಿ ಸಂಜಯ್ ಕುಮಾರ ಸ್ವಾಮೀಜಿ ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕನ್ನಡ ಪರ ಸಂಘಟನೆಗಳು ಮುಂದೆ ಬಂದು ಸಹಾಯ ಸಹಕಾರ ನೀಡಿ ಅಭಿವೃದ್ಧಿಪಡಿಸಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕರವೇ ಗೌರವಾಧ್ಯಕ್ಷ ಪಾಳೇಗಾರ್ ಲೋಕೇಶ್ ಮಾತನಾಡಿ, ಗಡಿನಾಡ ಕನ್ನಡ ಶಾಲೆಗಳ ಅಭಿವೃದ್ಧಿಗೆ ಗಡಿನಾಡ ಕನ್ನಡ ಪರ ಸಂಘಟನೆಗಳು ಸಹಾಯ ಸಹಕಾರ ಮಾಡಿದರೆ ಗಡಿನಾಡಿನಲ್ಲಿ ಕನ್ನಡ ಶಾಲೆಗಳು ಉಳಿಯುತ್ತವೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ  ಕರವೇ ಪ್ರವೀಣ್ ಶೆಟ್ಟಿ ಬಣ ಅಧ್ಯಕ್ಷ ಲಕ್ಷ್ಮೀನಾರಾಯಣ,  ಶಿಕ್ಷಕಿ ಶ್ರೀಮತಿ ಭಾರತಿ ಪಾಳೆಗಾರ್, ಪ್ರಥಮ ದರ್ಜೆ ಗುತ್ತಿಗೆದಾರರ ಮಂಜುನಾಥ ಎಂ., ಪದಾಧಿಕಾರಿಗಳಾದ ಓಂಕಾರ ನಾಯಕ ಭಾಸ್ಕರ್ ನಾಯಕ ಶಿವು, ಮಣಿ,  ತಿಮ್ಮಯ್ಯ ಜಗದೀಶ್, ಪಾಲಾಕ್ಷ ಹಾಗೂ…

Read More

ಪಾವಗಡ: ಯಾವುದೇ ರೀತಿಯಾದ ಅಹಿತಕರ ಘಟನೆಗಳಿಗೆ ಎಡೆ ಮಾಡಿಕೊಡದೆ  ಗಣೇಶ ಚತುರ್ಥಿ ಶಾಂತಿಯುತವಾಗಿ ಆಚರಿಸಬೇಕೆಂದು ಗ್ರಾಮಾಂತರ ಸಿಪಿಐ ಗಿರೀಶ್ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ ಈ ಬಗ್ಗೆ ವೈ.ಎನ್.ಹೊಸಕೋಟೆ ಪೊಲೀಸ್ ಠಾಣೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಶಾಂತಿ ಸೌಹಾರ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ರಾಜ್ಯ ಸರ್ಕಾರ ಅನೇಕ ನಿಯಮಗಳನ್ನ ಬಿಡುಗಡೆ ಮಾಡಿದ್ದು, ಅವುಗಳನ್ನು ಕಡ್ಡಾಯವಾಗಿ ಪಾಲಿಸಬೇಕು,  ಜೊತೆಗೆ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯಾದಂತ ಡಿಜೆ ಅವಕಾಶ ನೀಡುವುದಿಲ್ಲ, ಗಣೇಶನನ್ನು ಪ್ರತಿಷ್ಠಾಪಿಸುವಂತಹವರು ಸಂಬಂಧಪಟ್ಟ ಗ್ರಾಮ ಪಂಚಾಯಿತಿಯಿಂದ ಸ್ಥಳ ದೃಢೀಕರಣ ಪತ್ರ, ಅಗ್ನಿಶಾಮಕ ಮತ್ತು ಬೆಸ್ಕಾಂ ಇಲಾಖೆಯಿಂದ ಅನುಮತಿ ಪತ್ರಗಳನ್ನು ಪಡೆದು ನಂತರ ಪೊಲೀಸ್ ಠಾಣೆಯಲ್ಲಿ  ಅನುಮತಿ ಪತ್ರವನ್ನು ಪಡೆಯಬೇಕಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ವೈ.ಎನ್.ಹೊಸಕೋಟೆ ಪಿಎಸ್ ಐ ಮಾಳಪ್ಪ ನಾಯ್ಕೋಡಿ ಸೇರದಂತೆ ಮತ್ತಿತರರು ಹಾಜರಿದ್ದರು. ವರದಿ:  ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More