Subscribe to Updates
Get the latest creative news from FooBar about art, design and business.
- ಲಕ್ಷ್ಮೀ ಹೆಬ್ಬಾಳ್ಕರ್ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ
- ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ ಕೈ ಹೈಕಮಾಂಡ್ ಶಾಕ್!
- ಬೀದರ್ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು
- ಕೂಡ್ಲಿಗಿ: ಸಭೆ–ಉತ್ಸವ ಕಾಟಾಚಾರಕ್ಕಾಗದಿರಲಿ, ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸಂಘಟನೆಗಳ ಆಗ್ರಹ
- ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: 20 ಹೊಸ ಸಚಿವರ ಸೇರ್ಪಡೆ, ಪ್ರಮುಖ ಹುದ್ದೆಗಳಿಗೆ ಎಐಸಿಸಿ ಅಂತಿಮ ಅನುಮೋದನೆ
- ಕಾವೇರಿ ಕಿಚ್ಚು: ‘ಭೂಮಿ, ನೀರು, ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’ : ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಕರೆ
- ತಿಪಟೂರಿನಲ್ಲಿ ಜ್ಞಾನ ವಿಕಾಸ ಮಹಿಳಾ ವಿಚಾರಗೋಷ್ಠಿ: ಆರೋಗ್ಯ ಜಾಗೃತಿ ಹಾಗೂ ಸಾಂಸ್ಕೃತಿಕ ವೈಭವ
- ವಿಜಯಪುರ: ಆಟೋ ಪಕ್ಕಕ್ಕೆ ಸರಿಸು ಎಂದಿದ್ದಕ್ಕೆ KSRTC ಕಂಡಕ್ಟರ್ ಮೇಲೆ ಹಲ್ಲೆ; ವಿಡಿಯೋ ವೈರಲ್!
Author: admin
ರಾಮನಗರ: ರಾಜ್ಯಕ್ಕೆ ಸೇವೆ ಮಾಡಬೇಕು ಎಂದು ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಜಿಲ್ಲೆಯ ಕನಕಪುರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಕನಕಪುರ ಜನ ನನಗೆ ಆಶೀರ್ವಾದ ಮಾಡಿದ್ದಾರೆ. ನಾನು ರಾಜ್ಯ ಸೇವೆ ಮಾಡಬೇಕು ಅಂತಾ ದೊಡ್ಡ ಪ್ರಯತ್ನ ನಡೆದಿದೆ. ಜೊತೆಗೆ ದೊಡ್ಡ ಹೋರಾಟವೂ ಕೂಡ ನಡೆಯುತ್ತಿದೆ. ಈಗ ಮಾತನಾಡಿದರೆ ವಿವಿಧ ರೀತಿಯಲ್ಲಿ ಬಿಂಬಿಸುತ್ತಾರೆ ಎಂದು ಹೇಳಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ರಾ ಎಂಬ ರೀತಿಯಲ್ಲಿ ಚರ್ಚೆಗೀಡಾಗುತ್ತಿದೆ. ಮುಡಾ ಪ್ರಕರಣ ಸಂಬಂಧ ಸಿದ್ದರಾಮಯ್ಯನವರ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸುತ್ತಿರುವ ಸಂದರ್ಭದಲ್ಲೇ ಡಿ.ಕೆ.ಶಿವಕುಮಾರ್ ಈ ಹೇಳಿಕೆ ನೀಡಿರುವುದು ಮಹತ್ವ ಪಡೆದುಕೊಂಡಿದೆ. ನಾನು ಇಲ್ಲಿಗೆ ಡಿಸಿಎಂ ಆಗಿ ಬಂದಿಲ್ಲ, ಶಾಸಕನಾಗಿ ಬಂದಿದ್ದೇನೆ. ಡಿಸಿಎಂ ಏನಿದ್ರೂ ವಿಧಾನಸೌಧದಲ್ಲಿ, ನೀವೆಲ್ಲ ನಮ್ಮ ಮನೆಯ ಮಕ್ಕಳು ಎಂದಿದ್ದಾರೆ. ಪ್ರತಿ ಶನಿವಾರ ರಜೆ ಇದ್ದಾಗ ಕನಕಪುರಕ್ಕೆ ಕಾರ್ಯಕ್ರಮ ರೂಪಿಸಿದ್ದೆ. ಅದೇ ಥರ ಕನಕಪುರಕ್ಕೆ ಬಂದಿದ್ದೇನೆ. ತಮಗೆ ಕಾಲೇಜು…
ಬೆಂಗಳೂರು: ನಗರದ ಒಟೆರಾ ಗೆ ಇ–ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದ್ದು, 6 ತಿಂಗಳ ಹಿಂದೆಯೂ ಇದೇ ರೀತಿಯಾಗಿ ಹುಸಿ ಬೆದರಿಕೆ ಬಂದಿತ್ತು. ಬಾಂಬ್ ಇಟ್ಟು ಹೊಟೇಲ್ ಸ್ಪೋಟಿಸುವುದಾಗಿ ಈ ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾಳ ದಳ ಮತ್ತು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಭೇಟಿ ನೀಡಿ, ತಪಾಸಣೆ ನಡೆಸಿದರು. ಶನಿವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ರಾಜಕಾರಣಿಗಳು, ಕ್ರಿಕೆಟರ್ಗಳು ಆಗಾಗ ವಾಸ್ತವ್ಯ ಹೂಡುವ ನಗರದ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೆಲ್ಗೆ ಬಾಂಬ್ ಬೆದರಿಕೆ ಇ–ಮೇಲ್ ಬಂದಿತ್ತು. ಕೂಡಲೇ ಎಚ್ಚೆತ್ತ ಹೋಟೆಲ್ ಸಿಬ್ಬಂದಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೆಲಹೊತ್ತಲ್ಲೇ ಸ್ಥಳಕ್ಕೆ ಬಂದ ಪೊಲೀಸರು, ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದ್ದರು. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ಗೊತ್ತಾಗಿದೆ. ಇದಾದ ಕೆಲವೇ ಗಂಟೆಗಳಲ್ಲಿ ಹೋಟೆಲ್ ಒಟೆರಾ ಗೆ ಇ–ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ನಮ್ಮತುಮಕೂರಿನ ಕ್ಷಣ…
ಆನೇಕಲ್: ಎರಡು ಟಿಪ್ಪರ್ ಲಾರಿಗಳು ಹಾಗೂ ಕಾರಿನ ನಡುವೆ ನಡೆದ ಸರಣಿ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಕೋಲಾರ ಹೆದ್ದಾರಿಯ ಗೊಟ್ಟಿಪುರ ಗೇಟ್ ಬಳಿಯಲ್ಲಿ ನಡೆದಿದೆ. ಇಂದು ಮುಂಜಾನೆ ವೇಳೆ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ಇಬ್ಬರು ಗಾಯಗೊಂಡವರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಹೊಸಕೋಟೆ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಹೊಸಕೋಟೆ ಹೆದ್ದಾರಿಯಲ್ಲಿ ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೋಲೀಸರು ಭೇಟಿ ನೀಡಿ ರಸ್ತೆ ಸಂಚಾರ ಸುಗಮಗೊಳಿಸಿದ್ದಾರೆ. ಘಟನೆ ಸಂಬಂಧ ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಬೆಂಗಳೂರು: ನೇಪಾಳಿ ಮಹಿಳೆ ಮಹಾಲಕ್ಷ್ಮೀ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ರೀತಿಯ ವರದಿಗಳು ಆಶ್ಚರ್ಯಕರ ಸಂಗತಿಗಳನ್ನು ಬಯಲು ಮಾಡಿದೆ. ಮಹಾಲಕ್ಷ್ಮೀ ಪ್ಲಾನ್ ಮಾಡಿದ್ದೇ ಬೇರೆ ಆದ್ರೆ ಆಗಿದ್ದೇ ಬೇರೆ ಎಂದು ಹೇಳಲಾಗಿದೆ. ಮಹಾಲಕ್ಷ್ಮಿ ಮೊದಲೇ ಮದುವೆಯಾಗಿದ್ದರೂ ಪ್ರೇಮಿ ಮುಕ್ತಿ ರಂಜನ್ ಪ್ರತಾಪ್ ರಾಯ್ ನಿಂದ ವಿಚಾರ ಮುಚ್ಚಿಟ್ಟಿದ್ದಳಂತೆ. ಇದಲ್ಲದೇ ಬೇರೆ ಹುಡುಗರ ಸಂಗವನ್ನೂ ಮಾಡಿರುವುದಾಗಿ ವರದಿ ತಿಳಿಸಿದೆ. ಈ ವಿಚಾರ ತಿಳಿದು ಮುಕ್ತಿ ಆಕೆಯನ್ನು ತರಾಟೆಗೆ ತೆಗೆದುಕೊಂಡಿದ್ದ. ತನಗೆ ಕಿರಿ ಕಿರಿ ಮಾಡುತ್ತಿದ್ದ ಮುಕ್ತಿಯನ್ನು ಮುಗಿಸಲು ಆಕೆಯೇ ಮೊದಲು ಪ್ಲ್ಯಾನ್ ಮಾಡಿದ್ದಳು ಎಂದು ಕೆಲವು ವರದಿಗಳು ಹೇಳುತ್ತಿವೆ. ಮಹಾಲಕ್ಷ್ಮಿ ಹಂತ ಮುಕ್ತಿ ರಂಜನ್ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಸಾವಿಗೆ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದ. ಇದರಲ್ಲಿ ಮಹಾಲಕ್ಷ್ಮಿಯನ್ನು ಯಾಕೆ ಕೊಂದೆ ಎಂದು ವಿವರವಾಗಿ ಬರೆದಿದ್ದಾನಂತೆ. ತನ್ನ ಬಳಿ ಮಹಾಲಕ್ಷ್ಮಿ ಹಣ ವಸೂಲಿ ಮಾಡಿದ್ದಳು. ಆದರೆ ಮದುವೆ ವಿಚಾರವನ್ನು ಮುಚ್ಚಿಟ್ಟಿದ್ದಳು. ಈ ವಿಚಾರವಾಗಿ ತಮ್ಮಿಬ್ಬರ ನಡುವೆ ಗಲಾಟೆಯಾಗಿತ್ತು ಎಂದು ಬರೆದುಕೊಂಡಿದ್ದಾನೆ ಎನ್ನಲಾಗಿದೆ. ನಮ್ಮತುಮಕೂರಿನ…
ತುಮಕೂರು: ಸೆನ್ ಮತ್ತು ಪಾವಗಡ ಪೋಲಿಸರ ಜಂಟಿ ಕಾರ್ಯಾಚರಣೆಯಲ್ಲಿ ಬಿಲ್ಲೆ ಆಟದಲ್ಲಿ ನಿರತರಾಗಿದ್ದ 32 ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಾವಗಡ ತಾಲೂಕಿನ ಕಸಬಾ ಹೋಬಳಿಯ ಗುಮ್ಮಘಟ್ಟ ಗ್ರಾಮದ ಸಮೀಪದ ಆಂಧ್ರ ಗಡಿಯಲ್ಲಿ ಬಿಲ್ಲೆ ಆಟ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ತುಮಕೂರಿನ ಸೆನ್ ಮತ್ತು ಪಾವಗಡ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ 18 ಬೈಕ್ ಗಳು 2.27 ಲಕ್ಷ ಮೊತ್ತದ ಹಣ ವಶಕ್ಕೆ ಪಡೆದುಕೊಳ್ಳಲಾಗಿದೆ. ಕಾರ್ಯಾಚರಣೆಯು ತುಮಕೂರು ಎಸ್ಪಿ ಅಶೋಕ ಕೆ.ವಿ. ಅವರ ಮಾರ್ಗದರ್ಶನದಲ್ಲಿ ತುಮಕೂರು ಸೆನ್ ಪೊಲೀಸ್ ಠಾಣೆಯ ಪಿ ಎಸ್ ಐ ಪ್ರಸನ್ನಕುಮಾರ್ ಪಾವಗಡ ಪೊಲೀಸ್ ಠಾಣೆಯ ಸಿಪಿಐ ಸುರೇಶ್ ದಾಳಿ ನಡೆಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಮುಡಾ ಹಗರಣ ವಿಚಾರದಲ್ಲಿ ಸಿದ್ದರಾಮಯ್ಯ ಹೆದರಿ ರಾತ್ರಿಯೆಲ್ಲಾ ನಿದ್ರೆಗೆಟ್ಟು ಕೂತಿದ್ದರು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಅವರು, ಮುಡಾ ಹಗರಣದಲ್ಲಿ ನಾನೇನೂ ತಪ್ಪು ಮಾಡಿಲ್ಲ. ನಾನು ಯಾರಿಗೂ ಹೆದರಲ್ಲ ಎಂದು ಬಾಯಿ ಮಾತಿನಲ್ಲಿ ಹೇಳ್ತಾರೆ. ಆದರೆ ಪಾಪ ಅವರ ಮನೆ ಕೆಲಸದವರೇ ಹೇಳ್ತಾರೆ. ಸಾಹೇಬ್ರು ರಾತ್ರಿಯೆಲ್ಲಾ ನಿದ್ರೆಗೆಟ್ಟು ಕೂತಿದ್ದರು. ಮಧ್ಯರಾತ್ರಿ ದಿಗ್ಗನೆ ಎದ್ದು ಕೂತ್ಕೊಂಡ್ರು, ಡಾಕ್ಟರನ್ನೆಲ್ಲಾ ಕರೆಸಿಕೊಂಡ್ರು. ಬಳಿಕ ಡಾಕ್ಟರಿಗೂ ನೀವು ಎಲ್ಲೂ ಹೋಗಬೇಡಿ ಎಂದು ಹೇಳಿದ್ದರು ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ನಾನು ರಾಜೀನಾಮೆ ಕೊಡಬೇಕು ಎಂದು ಸಿದ್ದರಾಮಯ್ಯ ಹೇಳ್ತಾರಲ್ಲ. ನಾನೇನು ತಪ್ಪು ಮಾಡಿದ್ದೀನಿ. ನನ್ನ ಮೇಲೆ ಏನು ಕೇಸ್ ಇದೆ ಹೇಳಲಿ ನೋಡೋಣ ಎಂದು ಅವರು ಪ್ರಶ್ನಿಸಿದರು. ಗಂಗೇನಹಳ್ಳಿ ಕೇಸ್ ನಲ್ಲಿ ನನ್ನ ಪಾತ್ರವೇನು? ದಾಖಲೆಗಳು ನಿಮ್ಮ ಮುಂದೆ ಇದೆ. ಕುಮಾರಸ್ವಾಮಿ ಏನು ನಿರ್ಧಾರ ತೆಗೆದುಕೊಂಡಿದ್ದರು ಎಂಬ ದಾಖಲೆಗಳೂ ಇವೆ. ಹೌದು, ನಾನು ಸಹಿ ಹಾಕಿದ್ದೆ. ಸಾವಿರಾರು ಅರ್ಜಿಗಳು ನನ್ನ…
ಬೆಂಗಳೂರು : ಜಾಮೀನಿನ ಮೇಲಿರುವ ಕುಮಾರಸ್ವಾಮಿ ಮೊದಲು ರಾಜೀನಾಮೆ ನೀಡಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಬಾಂಡ್ ಹಗರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯದಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೇಲೆ ಎಫ್ ಐ ಆರ್ ದಾಖಲಿಸುವಂತೆ ಆದೇಶ ಹೊರಬಿದ್ದಿದೆ. ಇವರ ರಾಜೀನಾಮೆಗೆ ಬಿಜೆಪಿ ನಾಯಕರು ಯಾವಾಗ ಪ್ರತಿಭಟನೆ, ಪಾದಯಾತ್ರೆ ಮಾಡುತ್ತಾರೆ? ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆದರೆ ಪ್ರಧಾನಿ ಮೋದಿ ಅವರೂ ರಾಜೀನಾಮೆ ನೀಡಬೇಕಾಗುತ್ತದೆ. ಜಾಮೀನಿನ ಮೇಲಿರುವ ಕುಮಾರಸ್ವಾಮಿಯವರು ರಾಜೀನಾಮೆ ನೀಡಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಮಕ್ಕಳಿಗೆ ಕೇವಲ ಪಠ್ಯ ಪುಸ್ತಕಗಳಲ್ಲಿರುವ ವಿಷಯಗಳನ್ನು ತಿಳಿಸಿ ಉತ್ತೀರ್ಣರಾಗುವಂತೆ ಮಾಡದೆ, ಮಕ್ಕಳಿಗೆ ಅನುಭವಾತ್ಮಕ ಕಲಿಕೆಯ ಮೂಲಕ ಅವರ ಮುಂದಿನ ಭವಿಷ್ಯಕ್ಕೆ ಬೇಕಾದ ಅಂಶಗಳನ್ನು ಕಲಿಸುವ ಅವಶ್ಯಕತೆ ಇದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಎಂಪ್ರೆಸ್ ಕಾಲೇಜು ಆವರಣದ ಸ್ಮಾರ್ಟ್ ಸಿಟಿ ಸಭಾಂಗಣದಲ್ಲಿಂದು ನಡೆದ “ಉತ್ತರದಾಯಿತ್ವ” ಜಿಲ್ಲಾ ಶೈಕ್ಷಣಿಕ ಸಂವರ್ಧನಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸರ್ಕಾರದ ಎಲ್ಲಾ ಇಲಾಖೆಗಳ ಒಗ್ಗೂಡಿಕೆಯಿಂದ ಸಂಘ ಸಂಸ್ಥೆಗಳ ಸಿಎಸ್‌ಆರ್ ಅನುದಾನದಡಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಸಲುವಾಗಿ ಉತ್ತಮ ವ್ಯವಸ್ಥೆಯನ್ನು ರೂಪಿಸಬೇಕು ಎಂದು ತಿಳಿಸಿದರು. ಜಿಲ್ಲೆಯ ಅನೇಕ ಶಾಲೆಗಳಲ್ಲಿನ ಮೂಲಭೂತ ಸೌಕರ್ಯಗಳ ಕೊರತೆ ಇರುವ ಬಗ್ಗೆ ವೈಜ್ಞಾನಿಕ ಸಮೀಕ್ಷೆ ಮೂಲಕ ಮಾಹಿತಿ ಕಲೆ ಹಾಕಿದ್ದು, ವಿವಿಧ ಇಲಾಖೆಗಳು ಒಟ್ಟುಗೂಡಿ ಜಿಲ್ಲೆಯ ಶಾಲೆಗಳಿಗೆ ಅಗತ್ಯ ಇರುವ ಕ್ರಿಯಾತ್ಮಕ ಶೌಚಾಲಯ, ಸುಸರ್ಜಿತ ಕೊಠಡಿ, ಕಾಂಪೌಂಡ್, ವ್ಯವಸ್ಥಿತ ಆಟದ ಮೈದಾನ, ಶುದ್ಧ ಕುಡಿಯುವ ನೀರಿನ ಘಟಕ, ಡೆಸ್ಕ್ ಸೇರಿದಂತೆ ಮತ್ತಿತರ…
ತುಮಕೂರು: ಡೆಲ್ಲಿ ಪೊಲೀಸ್ ಎಸ್ಟಾಬ್ಲಿಷ್ ಮೆಂಟ್ ಆಕ್ಟ್ ಅಡಿಯಲ್ಲಿ ಸಿಬಿಐಗೆ ಬೇರೆ ಬೇರೆ ರಾಜ್ಯಗಳಿಗೆ ತೆರಳಿ ತನಿಖೆ ಮಾಡಲು ಅವಕಾಶವಿದೆ. ಆದರೆ ಈಗ ರಾಜ್ಯ ಸರಕಾರದ ಅನುಮತಿ ಪಡೆದು ರಾಜ್ಯದಲ್ಲಿ ಸಿಬಿಐ ತನಿಖೆ ಮಾಡುವಂತೆ ಆದೇಶ ಹೊರಡಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಿಬಿಐ ವಿವಿಧ ರಾಜ್ಯಗಳಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮೇಲೆ ತನಿಖೆ ಮಾಡಬಹುದು. ಕೆಲವು ರಾಜ್ಯದಲ್ಲಿ ಸಿಬಿಐ ನೇರವಾಗಿ ಬಂದು ತನಿಖೆ ಮಾಡಬಹುದು. ನಮ್ಮ ರಾಜ್ಯದಲ್ಲಿಯೂ ಕೂಡ ಇಲ್ಲಿವರೆಗೂ ಅದೇ ರೀತಿ ಇತ್ತು. ಈ ಹಿಂದೆ ಬೇಡ ಎಂದು ಮಾಡಿದ್ದೇವೆ ಎಂದು ತಿಳಿಸಿದರು. ಈ ಹಿಂದೆ ರಾಜ್ಯ ಸರಕಾರ ಎರಡು ಮೂರು ಬಾರಿ ಆ ರೀತಿ ತೀರ್ಮಾನ ಮಾಡಿದೆ. ಇದು ಮೊದಲ ಬಾರಿ ಅಲ್ಲ. ಅನುಮತಿ ಕೊಡುವಂತಹ ಸಂದರ್ಭ ಬಂದ್ರೆ ರಾಜ್ಯ ಸರಕಾರ ಕೊಡಬೇಕಾಗುತ್ತದೆ. ಅನುಮತಿ ಕೊಡುವುದಿಲ್ಲ ಎಂದು ಹೇಳಿಲ್ಲ. ಸರಕಾರದ ಈ ಆದೇಶ ಸಿಬಿಐಗೆ ಮಾತ್ರ ಸೀಮಿತವಾಗಿರುತ್ತದೆ ಎಂದರು.…
ತುಮಕೂರು: ಮಹಿಳೆಯರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಡೆಸುವ ಸ್ವಸಹಾಯ ಸಂಘದ ಮೂಲಕ ಎಸ್.ಬಿ.ಐ.ಬ್ಯಾಂಕಿನಿಂದ ಸಾಲ ಪಡೆದು ಮತ್ತೆ ಸಂಘದ ಮೂಲಕ ಎಸ್.ಬಿ.ಐ.ಗೆ ಮರುಪಾವತಿ ಮಾಡಿ ತಮ್ಮ ಆರ್ಥಿಕ ಸಂಕಷ್ಟಗಳನ್ನು ತೀರಿಸಿಕೊಂಡು ಸ್ವಾವಲಂಬಿಗಳಾಗಿ, ಆರ್ಥಿಕ ಶಕ್ತಿಯನ್ನು ಹೊಂದಿ ಜೀವನದಲ್ಲಿ ಮುಂದೆ ಬರಬೇಕು, ಪ್ರತಿ ಮಹಿಳೆಯರು ಸ್ವಉದ್ಯೋಗವನ್ನು ಮಾಡಿ ದುಡಿದು ಸ್ವತಂತ್ರವಾಗಿ ಬದುಕಬೇಕು ಮತ್ತು ತಮ್ಮ ಕುಟುಂಬಕ್ಕೆ ಆರ್ಥಿಕ ಚೈತನ್ಯವನ್ನು ತುಂಬಬೇಕು ಎಂದು ತುಮಕೂರು ಎಸ್.ಬಿ.ಐ.ಸಹಾಯಕ ವ್ಯವಸ್ಥಾಪಕರಾದ ಹೇಮಂತ್ ರವರು ಕರೆ ನೀಡಿದರು. ನಗರದ ದಾನಃಪ್ಯಾಲೇಸ್ ನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ನಡೆದ ತಾಲ್ಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಧರ್ಮಸ್ಥಳ ಸಂಘ ಯಾವುದೇ ಸಾಲವನ್ನು ವೈಯಕ್ತಿಕವಾಗಿ ನೀಡುವುದಿಲ್ಲ, ಸಂಘವು ಎಸ್.ಬಿ.ಐ.ನಿಂದ ಸಾಲ ಕೊಡಿಸುತ್ತದೆ. ನೀವು ತೆಗೆದುಕೊಂಡ ಸಾಲಕ್ಕೆ ವೀರೇಂದ್ರಹೆಗ್ಗಡೆರವರು ಜಾಮೀನು ನೀಡಿದ್ದಾರೆ. ಸಾಲ ಪಡೆಯುವುದು ಮುಖ್ಯವಲ್ಲ ಸರಿಯಾದ ಕಂತುಗಳ ಮೂಲಕ, ಸರಿಯಾದ ವೇಳೆಗೆ ಕಂತುಗಳ ಮೂಲಕ ಬ್ಯಾಂಕಿಗೆ ಮರುಪಾವತಿ ಮಾಡುವ ಜವಾಬ್ದಾರಿ ನಿಮ್ಮ ಮೇಲಿದೆ…