Subscribe to Updates
Get the latest creative news from FooBar about art, design and business.
- ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
- ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
- ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
- ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
- ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
- ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
- ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
- ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
Author: admin
ಬೆಂಗಳೂರು: “ಹಜ್ ಯಾತ್ರೆ ಕೈಗೊಳ್ಳುವ ಪ್ರತಿಯೊಬ್ಬ ಯಾತ್ರಿಕರು ತಮ್ಮ ಪ್ರಾರ್ಥನೆಯಲ್ಲಿ ರಾಜ್ಯದ ಹಿತ ಮತ್ತು ಸರ್ಕಾರದ ಒಳಿತನ್ನು ಬಯಸಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದರು. ಕರ್ನಾಟಕ ಹಜ್ ಸಮಿತಿಯು ಹಮ್ಮಿಕೊಂಡಿದ್ದ ‘ಹಜ್–2026’ ಯಾತ್ರಿಕರ ವಿಮಾನಯಾನಕ್ಕೆ ಇಂದು ಹಸಿರು ನಿಶಾನೆ ತೋರಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಹಜ್ ಯಾತ್ರೆಯ ಮಹತ್ವ ಹಾಗೂ ಮಾನವೀಯ ಮೌಲ್ಯಗಳ ಬಗ್ಗೆ ಮುಖ್ಯಮಂತ್ರಿಗಳು ಅರ್ಥಪೂರ್ಣ ಮಾತುಗಳನ್ನಾಡಿದರು. ಇಸ್ಲಾಂ ಧರ್ಮದ ಐದು ಪ್ರಮುಖ ಸ್ತಂಭಗಳಲ್ಲಿ ಒಂದಾದ ಹಜ್ ಯಾತ್ರೆಯನ್ನು ಪ್ರತಿಯೊಬ್ಬ ಮುಸಲ್ಮಾನನು ಜೀವಿತಾವಧಿಯಲ್ಲಿ ಒಮ್ಮೆಯಾದರೂ ಕೈಗೊಳ್ಳಬೇಕು. ಈ ಯಾತ್ರೆಯಿಂದ ಮನುಷ್ಯನ ಹಿಂದಿನ ಪಾಪಗಳು ಕ್ಷಮಿಸಲ್ಪಡುತ್ತವೆ ಮತ್ತು ಆತ ಮರುಜನ್ಮ ಪಡೆದ ಮಗುವಿನಂತೆ ಪರಿಶುದ್ಧನಾಗುತ್ತಾನೆ ಎಂಬ ನಂಬಿಕೆಯಿದೆ ಎಂದು ಸಿಎಂ ತಿಳಿಸಿದರು. “ಯಾರಾದರೂ ಒಬ್ಬ ನಿರಪರಾಧಿಯನ್ನು ಕೊಂದರೆ, ಅವನು ಇಡೀ ಮಾನವಕುಲವನ್ನೇ ಕೊಂದಂತೆ; ಮತ್ತು ಒಬ್ಬ ಜೀವವನ್ನು ಉಳಿಸಿದರೆ ಇಡೀ ಮಾನವಕುಲವನ್ನೇ ಉಳಿಸಿದಂತೆ” ಎಂಬ ಕುರಾನ್ ನ ಅತ್ಯುನ್ನತ ಸಂದೇಶವನ್ನು ಅವರು ಈ ಸಂದರ್ಭದಲ್ಲಿ ಸ್ಮರಿಸಿದರು. ಯಾವುದೇ…
ತುಮಕೂರು: ಶಿಕ್ಷಣದ ರೂವಾರಿ ಮಹಾತ್ಮ ಜ್ಯೋತಿಬಾ ಫುಲೆ ಅವರ 200ನೇ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ತುಮಕೂರಿನ ಕೊಡಿಪಾಳ್ಯ ಮತ್ತು ಬಾಳಬಸವನಹಳ್ಳಿಯಲ್ಲಿ ಒಂದು ದಿನದ ಮಕ್ಕಳ ಬೇಸಿಗೆ ಶಿಬಿರ ಮಾಡಲಾಯಿತು. “ಮಹಾನ್ ವ್ಯಕ್ತಿಗಳ ಜೀವನ ಹಾಗೂ ಸಂಘರ್ಷ ವನ್ನು ಪರಿಚಯಿಸುವ ಮೂಲಕ, ಅವರು ಜೀವನದಲ್ಲಿ ಅಳವಡಿಸಿಕೊಂಡ ಮೌಲ್ಯಗಳನ್ನು ಹೇಳಿಕೊಡುವುದರ ಮೂಲಕ ಮಾತ್ರವೇ ಮಕ್ಕಳನ್ನು ನೀತಿ ನೈತಿಕತೆ ಹಾಗೂ ಮೌಲ್ಯಾಧಾರಿತ ವ್ಯಕ್ತಿಯನ್ನಾಗಿ ಮಾಡಲು ಸಾಧ್ಯ” ಎಂದು ಎಐಡಿಎಸ್ಓ ಜಿಲ್ಲಾ ಸೆಕ್ರಟೆರಿಯಟ್ ಸದಸ್ಯರಾದ ಭರತ್ ಅವರು ಶಿಬಿರ ಉದ್ದೇಶಿಸಿ ಮಾತನಾಡಿದರು. ಶಿಬಿರದ ಮೋದಲ ಅಧಿವೇಶನದಲ್ಲಿ ಶೋಷಣೆ ವಿರುದ್ಧ ಶಿಕ್ಷಣದ ಕಿಡಿ ಹಚ್ಚಿದ ಜ್ಯೋತಿ ರಾವ್ ಫುಲೆ ಅವರ ಜೀವನ ಚರಿತ್ರೆ ಕುರಿತು ಅವರು ಮಾತನಾಡುತ್ತಾ, “ಶತಮಾನಗಳ ಕಾಲ ಕವಿದಿದ್ದ ಅಂಧಕಾರವನ್ನು ಹೊಡೆದೋಡಿಸಲು ಜ್ಞಾನದ ಬೆಳಕನ್ನು ನೀಡಲು ಅವರು ಶಾಲೆಗಳನ್ನು ಆರಂಭಿಸಿದರು. ಶಿಕ್ಷಣದಿಂದ ಮಾತ್ರವೇ ಮನುಷ್ಯರು ವಿಮರ್ಶಾತ್ಮಕ ಧೋರಣೆ ಮತ್ತು ಆತ್ಮ ಸ್ಥೈರ್ಯ ವನ್ನು ಹೊಂದಲು ಸಾಧ್ಯ” ಎಂಬುದನ್ನು ಅವರು ಬಲವಾಗಿ ಹೇಳಿದರು. “ಶಿಕ್ಷಣವು ಸಾರ್ವತ್ರಿಕವಾಗಿರಬೇಕು ಮತ್ತು…
ಚಿಕ್ಕಮಗಳೂರು: ಜಿಲ್ಲೆಯ ತಾಲೂಕಿನ ಅರಳಗುಪ್ಪೆ ಗ್ರಾಮದಲ್ಲಿ ಇಂದು ಎದೆನಡುಗಿಸುವ ಘಟನೆಯೊಂದು ನಡೆದಿದೆ. ಬಾತುಕೋಳಿ ಹಿಡಿಯಲು ಹೋದ ಐವರು ಮಕ್ಕಳ ಪೈಕಿ ನಾಲ್ವರು ಕೆರೆ ನೀರು ಪಾಲಾಗಿದ್ದು, ಮತ್ತೊಂದು ಮಗುವಿನ ಸ್ಥಿತಿ ಗಂಭೀರವಾಗಿದೆ. ಅರಳಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟ ಮಕ್ಕಳನ್ನು ಮಹಾದಿಯಾ, ಅರುನುಸ್, ನಾಯುಸ್ ಮತ್ತು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ 5 ರಿಂದ 14 ವರ್ಷದೊಳಗಿನವರಾಗಿದ್ದಾರೆ. ಕೆರೆಯಲ್ಲಿದ್ದ ಬಾತುಕೋಳಿಯನ್ನು ಹಿಡಿಯಲು ಹೋಗಿದ್ದಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ನಾಲ್ಕು ವರ್ಷದ ಅರ್ಮಾನ್ ಎಂಬ ಬಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮೃತಪಟ್ಟ ಮಕ್ಕಳು ಸಂಬಂಧಿಕರ ಮನೆಗೆ ಬಂದಿದ್ದಾಗ ಈ ಘಟನೆ ನಡೆದಿದೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಗೋಳು ಆಸ್ಪತ್ರೆಯ ಮುಂಭಾಗದಲ್ಲಿ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,…
ಬೆಂಗಳೂರು: ಹಾಸನ ಜಿಲ್ಲೆಯ ಯಸಳೂರು ವಲಯದಲ್ಲಿ 2023 ಡಿಸೆಂಬರ್ 4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರ, ಸಿಬ್ಬಂದಿಯ ಜೀವ ಉಳಿಸಿ ಹುತಾತ್ಮನಾದ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ನಿರ್ಮಿಸಿರುವ ಸ್ಮಾರಕವನ್ನು ಮೇ 6ರಂದು ಉದ್ಘಾಟಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ದಸರಾ ಮಹೋತ್ಸವದಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತು ಗಜಗಾಂಭೀರ್ಯದಿಂದ ಹೆಜ್ಜೆಹಾಕಿ, ಜನರ ಪ್ರೀತಿಗೆ ಪಾತ್ರನಾಗಿದ್ದ ಅರ್ಜುನ ಆನೆಯ ಸಾವು ಇಲಾಖೆಗೆ ದೊಡ್ಡ ನಷ್ಟವಾಗಿದ್ದು, ಸಮಾಧಿ ಸ್ಥಳದಲ್ಲಿ ಮತ್ತು ನಾಗರಹೊಳೆಯ ಬಳ್ಳೆಯಲ್ಲಿ ಸ್ಮಾರಕ ನಿರ್ಮಿಸುವುದಾಗಿ ಸರ್ಕಾರ ತಿಳಿಸಿತ್ತು. ಅದರಂತೆ ಈಗಾಗಲೇ ಬಳ್ಳೆ ಶಿಬಿರದಲ್ಲಿ ಅರ್ಜುನನ ಹಿರಿಮೆ, ಸಾಹಸಗಾಥೆಗಳನ್ನು ಇಂದಿನ ಮತ್ತು ಮುಂದಿನ ಪೀಳಿಗೆಗೂ ತಿಳಿಸುವ ರೀತಿಯಲ್ಲಿ ಸ್ಮಾರಕ ಅನಾವರಣ ಮಾಡಲಾಗಿದೆ. ಮೇ 6ರಂದು ಯಸಳೂರಿನ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟಿಸಲಾಗುವುದು ಎಂದು ವಿವರಿಸಿದರು. ಈ ಎರಡೂ ಸ್ಥಳದಲ್ಲಿ ಅರ್ಜುನ ಆನೆಯ ಪ್ರತಿರೂಪದಂತಿರುವ ಪ್ರತಿಮೆಗಳನ್ನು ನಿರ್ಮಿಸಲಾಗಿದ್ದು, ಅರ್ಜುನ ವಿವಿಧ ಆನೆ…
ತುಮಕೂರು: ಉತ್ತರ ಕನ್ನಡ ಜಿಲ್ಲೆ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟಿ ಸಂಸ್ಥೆಯು ಮೇ ಕೊನೆಯ ವಾರದಲ್ಲಿ 30 ದಿನಗಳ ಉಚಿತ ಮೊಬೈಲ್ ಫೋನ್ ರಿಪೇರಿ ಮತ್ತು ಸರ್ವಿಸ್ ತರಬೇತಿ ನೀಡಲು ಆಸಕ್ತ ಗ್ರಾಮೀಣ ಭಾಗದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿ ಅವಧಿಯಲ್ಲಿ ಮೊಬೈಲ್ ಫೋನ್ ಗಳ ಮೂಲಭೂತ ಜ್ಞಾನ, ಹಾರ್ಡ್‌ವೇರ್ ಮತ್ತು ಸಾಫ್ಟ್‌ವೇರ್ ರಿಪೇರಿ, ದೋಷ ಪತ್ತೆ, ಉಪಕರಣಗಳ ಬಳಕೆ, ಗ್ರಾಹಕ ಸೇವಾ ಕೌಶಲ್ಯಗಳು ಮತ್ತು ಸಣ್ಣ ಉದ್ಯಮ ಆರಂಭಿಸುವ ವಿಧಾನಗಳ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಬಿಳಿ ಹಾಳೆಯ ಮೇಲೆ ತಮ್ಮ ಹೆಸರು, ವಿಳಾಸ, ಜನ್ಮ ದಿನಾಂಕ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ಬರೆದು, ಅದನ್ನು ಫೋಟೋ ತೆಗೆದು ಮೊ. ಸಂ. 8970145354 / 9483485489ಕ್ಕೆ ವಾಟ್ಸ್‌ಆಪ್ ಮಾಡುವ ಮೂಲಕ ಅಥವಾ ಕರೆ ಮಾಡಿ ಹೆಸರು ನೋಂದಣಿ ಮಾಡಬಹುದಾಗಿದೆ. ಅಥವಾ ವೆಬ್‌ಸೈಟ್…
ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದಲ್ಲಿ ಭಾರಿ ಸಂಚಲನ ಉಂಟಾಗಿದ್ದು, ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯ ನಂತರ ಬಿಜೆಪಿಯ ಡಿ.ಎನ್. ಜೀವರಾಜ್ ಅವರು ಅಧಿಕೃತವಾಗಿ ಜಯಗಳಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರ ಶಾಸಕ ಸ್ಥಾನ ರದ್ದಾದಂತಾಗಿದೆ. 2023ರ ಚುನಾವಣೆಯಲ್ಲಿ 201 ಮತಗಳಿಂದ ಸೋತಿದ್ದ ಡಿ.ಎನ್. ಜೀವರಾಜ್, ಈಗ ಮರು ಎಣಿಕೆಯ ನಂತರ 52 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಜೀವರಾಜ್ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಆದೇಶದ ಮೇರೆಗೆ ಕಳೆದ ಶನಿವಾರ ಅಂಚೆ ಮತಗಳ ಮರು ಪರಿಶೀಲನೆ ಮತ್ತು ಎಣಿಕೆ ನಡೆಸಲಾಗಿತ್ತು. ಮರು ಎಣಿಕೆಯ ವೇಳೆ ಕಾಂಗ್ರೆಸ್‌ನ ರಾಜೇಗೌಡ ಅವರಿಗೆ ಈ ಹಿಂದೆ ಬಂದಿದ್ದ ಅಂಚೆ ಮತಗಳಲ್ಲಿ 255 ಮತಗಳು ಅಮಾನ್ಯಗೊಂಡಿವೆ. ಇದರಿಂದಾಗಿ ಅವರ ಒಟ್ಟು ಮತಗಳ ಸಂಖ್ಯೆ ಕುಸಿದಿದ್ದು, ಜೀವರಾಜ್ ಅವರು ಮುನ್ನಡೆ ಸಾಧಿಸಿದರು. ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಅವರು ಡಿ.ಎನ್.ಜೀವರಾಜ್ ಅವರಿಗೆ…
ಬಾಗಲಕೋಟೆ: ರಾಜ್ಯ ರಾಜಕೀಯದ ಕುತೂಹಲಕ್ಕೆ ಕಾರಣವಾಗಿದ್ದ ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಭರ್ಜರಿ ಜಯ ಸಾಧಿಸಿದ್ದಾರೆ. ಬಿಜೆಪಿಯ ಪ್ರಭಾವಿ ನಾಯಕ ಹಾಗೂ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರನ್ನು ಸೋಲಿಸುವ ಮೂಲಕ ಮೇಟಿ ಅವರು ಮತದಾರರ ಒಲವು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯ ಆರಂಭದಿಂದಲೂ ಉಭಯ ಪಕ್ಷಗಳ ನಡುವೆ ತೀವ್ರ ಪೈಪೋಟಿ ಕಂಡುಬಂದಿತ್ತು. ಮತ ಎಣಿಕೆಯ ಆರಂಭಿಕ ಹಂತದಲ್ಲಿ ಕೆಲವೊಮ್ಮೆ ಏರಿಳಿತ ಕಂಡರೂ, ಅಂತಿಮವಾಗಿ ಉಮೇಶ್ ಮೇಟಿ ಅವರು ಮುನ್ನಡೆ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾದರು. ಈ ಗೆಲುವು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದೆ. ಉಮೇಶ್ ಮೇಟಿ ಅವರ ಗೆಲುವು ಖಚಿತವಾಗುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು ಬಾಗಲಕೋಟೆಯಾದ್ಯಂತ ಸಂಭ್ರಮಾಚರಣೆ ನಡೆಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೆಂಬಲಿಗರು, “ಇದು ಕ್ಷೇತ್ರದ ಜನರ ಅಭಿವೃದ್ಧಿ ಪರವಾದ ನಿಲುವಿಗೆ ಸಂದ ಜಯ” ಎಂದು ಹರ್ಷ ವ್ಯಕ್ತಪಡಿಸಿದರು. ಈ ಉಪಚುನಾವಣೆಯು ಬಿಜೆಪಿಗೆ…
ಹೊಸ ದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಇಂದು ನಡೆಯುತ್ತಿದ್ದು, ಆರಂಭಿಕ ಟ್ರೆಂಡ್ ಗಳು ಅಚ್ಚರಿಯ ಫಲಿತಾಂಶಗಳನ್ನು ಹೊರಹಾಕುತ್ತಿವೆ. ತಮಿಳುನಾಡು (ಒಟ್ಟು ಸೀಟುಗಳು 234): ನಟ ವಿಜಯ್ ಅವರ ಹೊಸ ಪಕ್ಷ ‘ತಮಿಳಗ ವೆಟ್ರಿ ಕಳಗಂ’ (TVK) ಮೊದಲ ಚುನಾವಣೆಯಲ್ಲೇ ಭರ್ಜರಿ ಪ್ರದರ್ಶನ ನೀಡುತ್ತಿದೆ. ಆರಂಭಿಕ ಟ್ರೆಂಡ್‌ಗಳಲ್ಲಿ ವಿಜಯ್ ಪಕ್ಷ 85 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಅಚ್ಚರಿ ಮೂಡಿಸಿದೆ. ಎಐಎಡಿಎಂಕೆ ಮೈತ್ರಿಕೂಟ 77 ಸೀಟುಗಳಲ್ಲಿ ಮುನ್ನಡೆಯಲ್ಲಿದ್ದರೆ, ಆಡಳಿತಾರೂಢ ಡಿಎಂಕೆ ಮೈತ್ರಿಕೂಟ ಮೂರನೇ ಸ್ಥಾನಕ್ಕೆ ಕುಸಿದಿದೆ. ಪಶ್ಚಿಮ ಬಂಗಾಳ (ಒಟ್ಟು ಸೀಟುಗಳು 294): ಬಂಗಾಳದಲ್ಲಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ (TMC) ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಸದ್ಯದ ಮಾಹಿತಿ ಪ್ರಕಾರ, ಬಿಜೆಪಿ 160ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಮ್ಯಾಜಿಕ್ ನಂಬರ್ ದಾಟಿದೆ. ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 110 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಅಸ್ಸಾಂ (ಒಟ್ಟು ಸೀಟುಗಳು…
ತಿಪಟೂರು: “ದಶಕಗಳಿಂದ ಭೂಮಿಯನ್ನು ನಂಬಿ ಬದುಕುತ್ತಿರುವ ರೈತರನ್ನು ಅರಣ್ಯ ಇಲಾಖೆ ಬಲವಂತವಾಗಿ ಒಕ್ಕಲೆಬ್ಬಿಸಲು ಯತ್ನಿಸಿದರೆ ತಾಲ್ಲೂಕಿನ ರೈತರೊಂದಿಗೆ ಸೇರಿ ಉಗ್ರ ಪ್ರತಿಭಟನೆ ನಡೆಸಲಾಗುವುದು” ಎಂದು ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ಎಚ್ಚರಿಕೆ ನೀಡಿದ್ದಾರೆ. ನಗರದ ತಮ್ಮ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅರಣ್ಯ ಇಲಾಖೆಯ ಇತ್ತೀಚಿನ ಕ್ರಮಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರು ಸಂಸ್ಥಾನದ ಕಾಲದಲ್ಲಿದ್ದ ಕಾಗೆ ಹಳ್ಳ ಕಾವಲ್ (ಸರ್ವೆ ನಂ. 1) ಹಾಗೂ ಚೌಡ್ಲಾಪುರ ಅರಣ್ಯದ (ಸರ್ವೆ ನಂ. 15) ಭೂಮಿಯನ್ನು 1963-64ರಲ್ಲಿ ರಾಜ್ಯ ಸರ್ಕಾರವು ಬಡವರು, ದೀನದಲಿತರು ಹಾಗೂ ಯೋಧರ ಅನುಕೂಲಕ್ಕಾಗಿ ಮಂಜೂರು ಮಾಡಿತ್ತು. ಕಳೆದ 60 ವರ್ಷಗಳಿಂದ ಸುಮಾರು 130ಕ್ಕೂ ಹೆಚ್ಚು ಕುಟುಂಬಗಳು ಈ ಜಮೀನಿನಲ್ಲಿ ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿವೆ. “ಸರ್ಕಾರವೇ ಈ ಭೂಮಿಯನ್ನು ಮಂಜೂರು ಮಾಡಿ, ರೈತರಿಗೆ ಸಾಗುವಳಿ ಚೀಟಿ ನೀಡಿ, ಕಂದಾಯ ದಾಖಲೆಗಳಲ್ಲಿ ದುರಸ್ತು ಮಾಡಿಕೊಟ್ಟಿದೆ. ಈ ಜಮೀನುಗಳಿಗೇ ಸರ್ಕಾರ ಬೋರ್‌ವೆಲ್ ಕೊರೆಯಲು ಅನುಮತಿ ನೀಡಿದೆ, ವಿದ್ಯುತ್…
ಪಾವಗಡ: ತಾಲ್ಲೂಕಿನಲ್ಲಿ ದೊಡ್ಡಮಟ್ಟದಲ್ಲಿ ಭೂಮಾಫಿಯಾ ದಂಧೆ ನಡೆಯುತ್ತಿದೆ ಎಂದು ಶ್ರೀ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ಗೌಡೆಟಿ ಪ್ರಭಾಕರ್ ಗಂಭೀರ ಆರೋಪ ಮಾಡಿದರು. ಅವರು ಪಟ್ಟಣದ ಅಗ್ರಿಗೋಲ್ಡ್ ಲೇಔಟ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ತಹಶೀಲ್ದಾರ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿ ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ಯಾರದೋ ಜಮೀನು, ಯಾರಿಗೋ ಖಾತೆ ವರ್ಗಾವಣೆ ಮಾಡುತ್ತಿದ್ದಾರೆ ಎಂದು ತಾಲ್ಲೂಕು ಆಡಳಿತ ಮತ್ತು ಜಿಲ್ಲಾಡಳಿತದ ಕಾರ್ಯವೈಖರಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಸಬಾ ಹೋಬಳಿಯ ಕನಕಾಪುರ ಗ್ರಾಮದ ಸರ್ವೆ ನಂಬರ್ 152 ರಲ್ಲಿನ ಜಮೀನಿನ ವಿಷಯದಲ್ಲಿ ಕಂದಾಯ ಅಧಿಕಾರಿಗಳು ಬ್ರಹ್ಮಾಂಡ ಭ್ರಷ್ಟಾಚಾರ ಎಸಗಿದ್ದಾರೆ. ಕರ್ನಾಟಕದ ಭೂಮಿಗೆ ಸಂಬಂಧಿಸಿದಂತೆ ಸ್ಥಳೀಯ ದಾಖಲೆಗಳನ್ನು ಪರಿಶೀಲಿಸುವ ಬದಲು, ಆಂಧ್ರಪ್ರದೇಶದ ವಂಶವೃಕ್ಷವನ್ನು ಆಧಾರವಾಗಿಟ್ಟುಕೊಂಡು ಅಕ್ರಮವಾಗಿ ಬೇರೆಯವರ ಹೆಸರಿಗೆ ಖಾತೆ ಮಾಡಿಕೊಡಲಾಗಿದೆ. ಗ್ರಾಮ ಆಡಳಿತಾಧಿಕಾರಿಗಳು, ಕಂದಾಯ ನಿರೀಕ್ಷಕರು ಹಾಗೂ ತಹಶೀಲ್ದಾರ್ ಅವರು ನಿಯಮಗಳನ್ನು ಗಾಳಿಗೆ ತೂರಿ ಈ ಕೆಲಸ ಮಾಡಿದ್ದಾರೆ.…