Author: admin

ರಾಜ್ಯದಲ್ಲಿ ಕೃಷಿ ಭೂಮಿ ಖರೀದಿಗೆ ಸಂಬಂಧಿಸಿದಂತೆ ಹೊಸ ನಿಯಮ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಶೀಘ್ರವೇ ಭೂ ಸುಧಾಕರಣೆ ಕಾಯ್ದೆಗೆ ತಿದ್ದುಪಡಿ ಮಾಡಲು ನಿರ್ಧರಿಸಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಭೂ ಸುಧಾರಣೆಗೆ ಮರು ತಿದ್ದುಪಡಿ ತಂದು ಉದ್ಯಮಿಗಳ ಪಾಲಾಗುತ್ತಿರುವ ಕೃಷಿಕರ ಜಮೀನುಗಳನ್ನು ಮರಳಿ ಕೃಷಿಕರಿಗೆ ಮಾತ್ರ ಸೀಮಿತಗೊಳಿಸಲಾಗುವುದು. ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಿ ಅಸಂಖ್ಯಾತ ಜನರಿಗೆ ಭೂಮಿಯ ಮಾಲೀಕತ್ವ ನೀಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಭೂಮಿಯ ಹಕ್ಕನ್ನು ಖಾತ್ರಿಪಡಿಸಲು 79 ಎ ಮತ್ತು ಬಿ ಗೆ ಮಾಡಿರುವ ತಿದ್ದುಪಡಿಯನ್ನು ಮತ್ತೆ ಸರಿಪಡಿಸಲಾಗುವುದು ಎಂದು ಹೇಳಿದ್ದಾರೆ. ಸ್ವಾತಂತ್ರ್ಯ ಬಂದು 77 ವರ್ಷಗಳು ಕಳೆದರೂ ಇನ್ನೂ ನಮ್ಮಲ್ಲಿ ಸಾಮಾಜಿಕ ಸಮಾನತೆ ಸಾಧ್ಯವಾಗಿಲ್ಲ. ಸಮಾನವಾಗಿ ಸಂಪತ್ತು ಹಂಚಿಕೆ ನಮಗೆ ಸಾಧ್ಯವಾಗಿಲ್ಲ. ವ್ಯಕ್ತಿಯನ್ನು ಜಾತಿ ಆಧಾರದಲ್ಲಿ ಗುರುತಿಸುವಂತಹ ವ್ಯವಸ್ಥೆ ಇನ್ನೂ ನಮ್ಮಲ್ಲಿ ಇದೆ. ಜನರನ್ನು ಅವರ ಪ್ರತಿಭೆ ಮೇಲೆ, ವ್ಯಕ್ತಿತ್ವದ ಮೇಲೆ ಗುರುತಿಸದೆ ಜಾತಿ ಆಧಾರದಲ್ಲಿ ಗುರುತಿಸಲಾಗುತ್ತಿದೆ.…

Read More

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರಾಗೌಡ ಜೈಲು ಸೇರಿದ್ದಾರೆ. ಇತ್ತ ಪವಿತ್ರಾಗೌಡ ಮನೆಯಲ್ಲಿದ್ದ ಶ್ವಾನಗಳು ಸರಿಯಾದ ಆರೈಕೆಯಿಲ್ಲದೇ ಸೊರಗಿದ್ದವು. ಪವಿತ್ರಾ ಮನೆಯಲ್ಲಿದ್ದ ನಾಯಿಗಳನ್ನು ಪವನ್ ಎಂಬಾತ ನೋಡಿಕೊಳ್ಳುತ್ತಿದ್ದ. ಆದರೆ ಆತ ಕೂಡ ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದರಿಂದ ನಾಯಿಗಳು ಅನಾಥವಾಗಿವೆ. ಈ ವಿಷಯ ತಿಳಿಯುತ್ತಿದ್ದಂತೆ ಪೀಪಲ್ಸ್ ಫಾರ್ ಅನಿಮಲ್ಸ್ ಸಂಸ್ಥೆಯ ಹರೀಶ್ ಹಾಗೂ ಲೀನಾ ಆರ್.ಆರ್.ನಗರ ಪೊಲೀಸರಿಗೆ ಹಾಗೂ ಪಶುಸಂಗೋಪನಾ ಇಲಾಖೆಯ ಗಮನಕ್ಕೆ ತಂದಿದ್ದರು. ಇದೀಗ ಅಧಿಕಾರಿಗಳ ನೆರವಿನಿಂದ ಪವಿತ್ರಾ ಗೌಡ ಮನೆಯಲ್ಲಿದ್ದ ಬುಲ್ ಡಾಗ್ ಹಾಗೂ ಬೆಲ್ಜಿಯನ್ ಮಾಲಿನೋಯಿಸ್ ತಳಿಯ ಶ್ವಾನಗಳನ್ನು ದರ್ಶನ್ ಮನೆಗೆ ಶಿಫ್ಟ್ ಮಾಡಲಾಗಿದೆ ಎಂದು ವರದಿಗಳಿಂದ ತಿಳಿದು ಬಂದಿದೆ. ಉಳಿದ ಮತ್ತೊಂದು ಶ್ವಾನವನ್ನು ಪವಿತ್ರಾ ಗೌಡ ಸ್ನೇಹಿತರು ತೆಗೆದುಕೊಂಡು ಹೋಗಿದ್ದು, ಆರೈಕೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ರಾಂಚಿ:  ಜಾರ್ಖಂಡ್‌ನಲ್ಲಿ ಅಬಕಾರಿ ಇಲಾಖೆಯ ಕಾನ್‌ ಸ್ಟೆಬಲ್ ನೇಮಕಾತಿಯ ದೈಹಿಕ ಪರೀಕ್ಷೆ ವೇಳೆ ಮೂರ್ಛೆ ಹೋಗಿ ಚಿಕಿತ್ಸೆ ಪಡೆಯುತ್ತಿದ್ದ 25 ಅಭ್ಯರ್ಥಿಗಳ ಪೈಕಿ ಮೂವರು ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ. ಪಲಮು ಜಿಲ್ಲೆಯ ಮೇದಿನಿನಗರದಲ್ಲಿರುವ ಮೇದಿನಿರಾಯ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಅಭ್ಯರ್ಥಿಗಳು ಮೃತಪಟ್ಟಿದ್ದರೆ, ಮತ್ತೊಬ್ಬ ಅಭ್ಯರ್ಥಿ ರಾಂಚಿಯ ‘ರಿಮ್ಸ್’ನಲ್ಲಿ ಸಾವಿಗೀಡಾಗಿದ್ದಾರೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಮಣಿಭೂಷಣ್ ಪ್ರಸಾದ್ ತಿಳಿಸಿದ್ದಾರೆ. ಅಮರೇಶ್ ಕುಮಾರ್ (20), ಅರುಣ್ ಕುಮಾರ್ (25) ಮತ್ತು ಪ್ರದೀಪ್ ಕುಮಾರ್ (25) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪಲಾಮು ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯ ಕಾನ್‌ಸ್ಟೆಬಲ್ ನೇಮಕಾತಿಯ ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಿದ್ದ‌ 100ಕ್ಕೂ ಅಭ್ಯರ್ಥಿಗಳು ಮೂರ್ಛೆ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೆ.9ರವರೆಗೆ ನೇಮಕಾತಿ ಪ್ರಕ್ರಿಯೆ ಮುಂದುವರಿಯಲಿದೆ. ಆದರೆ, ದೈಹಿಕ ಪರೀಕ್ಷೆಯನ್ನು 9 ಗಂಟೆ ಬದಲು ಬೆಳಿಗ್ಗೆ 4:30ರಿಂದ ನಡೆಸಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ನಡುವೆ ಕಾನ್‌ ಸ್ಟೆಬಲ್ ಅಭ್ಯರ್ಥಿಗಳು ಮೃತಪಟ್ಟಿರುವ ಬಗ್ಗೆ…

Read More

ದಾವಣಗೆರೆ: ದಾವಣಗೆರೆಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣ ಸಂಬಂಧ ಅಸ್ವಸ್ಥರಾದವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈವರೆಗೆ 52 ಜನರು ತೀವ್ರ ಅಸ್ವಸ್ಥತೆಯಿಂದ ವಿವಿಧ ಆಸ್ಪತ್ರೆಗೆಗಳಿಗೆ ದಾಖಲಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡವರ ಸಂಖ್ಯೆ ಹೆಚ್ಚಿದ್ದು, ವಾಂತಿ-ಬೇಧಿಯಿಂದ ಜನರು ಬಳಲುತ್ತಿದ್ದಾರೆ. 52 ಜನರನ್ನು ಚನ್ನಗಿರಿ, ಭದ್ರಾವತಿ, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿಗಳು ಜೋಳದಾಳ್ ಗ್ರಾಮದಲ್ಲಿಯೇ ಬೀಡುಬಿಟ್ಟಿದ್ದಾರೆ. ಸಧ್ಯ ಯಾವುದೇ ಪ್ರಾಣಾಪಾಯವಿಲ್ಲ ಎಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಪೆರ್ನಾಜೆ: “ಸ್ವರಸಿಂಚನ” ಸಂಗೀತ ಶಾಲೆ ವಿಟ್ಲ ಮತ್ತು ಪಡಿಬಾಗಿಲು ಶಾಖೆಯ ವಿದ್ಯಾರ್ಥಿಗಳಿಂದ ಶ್ರೀ ಭಗವತಿ ದೇವಸ್ಥಾನ ಪೂಜಾ ಕಾರ್ಯಕ್ರಮದ ಪ್ರಯುಕ್ತ ಶ್ರೀ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ಆಗಸ್ಟ್ 25 ರಂದು ಭಕ್ತಿ ಗಾನ ಸಂಗೀತ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ದೇಗುಲದ ವ್ಯವಸ್ಥಾಪಕರಾದ ಕೇಶವ ಆರ್.ವಿ. ದೀಪ ಪ್ರಜ್ವಲನೆ ಮಾಡಿದರು. ಬಳಿಕ ಮಾತನಾಡಿದ ಅವರು, ಸಂಗೀತ ಶಿಕ್ಷಕಿಯ ಮಾರ್ಗದರ್ಶನದಲ್ಲಿ ಉತ್ತಮ ರೀತಿಯಲ್ಲಿ ವೈವಿಧ್ಯಮಯ ವಿನ್ಯಾಸದಲ್ಲಿ ಸುಂದರ ಹಾಡುಗಳ ಜೋಡಣೆಯಲ್ಲಿ ಪ್ರತಿಭೆಗಳು ಹೊರ ಹೊಮ್ಮುತಿರುವುದನ್ನು ಕಂಡಾಗ ಮನ ತುಂಬಿ ಬರುತ್ತದೆ. ಹಾಗೆ ಈ ವಿದ್ಯಾರ್ಥಿಗಳಿಗೆ ಮುಂದೆ ಉತ್ತಮ ಭವಿಷ್ಯ ಇದೆ ಎಂದು ಮೆಚ್ಚುಗೆಯ ನುಡಿಯನ್ನು ನುಡಿದರು. ವಿಠಲ ಬಾಲಿಕ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಕೆ.ಕೃಷ್ಣ ಭಟ್ , ಗೋಪಾಲಕೃಷ್ಣ ನಾಯಕ್ ಪಾಡಿಬಾಗಿಲು, ವಿಟ್ಲ ಸುಪ್ರ ಜೀತ್ ಐಟಿಐ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ರಘುರಾಮ ಶಾಸ್ತ್ರಿ ಕೋಡಂದೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು. ಸಿಂಚನ ಲಕ್ಷ್ಮಿ ಕೋಡಂದೂರು ಪ್ರಾರ್ಥನೆ ಮಾಡಿದರು. ಮುಖ್ಯ ಶಿಕ್ಷಕಿ ಸವಿತಾ ಕೋಡಂದೂರು ಸ್ವಾಗತಿಸಿದರು.…

Read More

ಪಾವಗಡ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿಗಳ ಕಾರ್ಯಾಲಯ ಪಾವಗಡ ಇದರ ವತಿಯಿಂದ ಹಮ್ಮಿಕೊಂಡಿದ್ದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಹಾಗೂ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಕೋಟಗುಡ್ಡ ಸಹನಾ ಶಾಲೆಯ P. ಗೀತಾ ಲಕ್ಷ್ಮಿ ಹಾಗೂ ತನುಜಾ ಶ್ರೀ. E  ಇವರು ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿಜೇತರನ್ನು ಹಾಗೂ ಮಾರ್ಗದರ್ಶಿ ಶಿಕ್ಷಕರಾದ ತಿಪ್ಪೇಸ್ವಾಮಿ ರವರನ್ನು ECO ರಂಗನಾಥ್, ವಿಜ್ಞಾನ ಸಂಘದ ಕಟ್ಟಾ ನರಸಿಂಹ ಮೂರ್ತಿ, ಹನುಮಂತರೆಡ್ಡಿ ಹಾಗೂ ಸಹನಾ ಶಾಲಾ ಆಡಳಿತ ಅಧಿಕಾರಿಗಳಾದ ಎನ್. ಶ್ರೀನಿವಾಸ್ ರವರು ಅಭಿನಂದಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಹೊಸಪೇಟೆ/ವಿಜಯನಗರ: ಭಾರತ ಸರ್ಕಾರದ 16ನೇ ಕೇಂದ್ರ ಹಣಕಾಸು ಆಯೋಗದ ನಿಯೋಗವು ಐತಿಹಾಸಿಕ ವಿಜಯನಗರ ಜಿಲ್ಲೆಗೆ ಆಗಸ್ಟ್ 30ರಂದು ಭೇಟಿ ನೀಡಿತು. ಪೂರ್ವ ನಿಗದಿಯಂತೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹೊರಟು ಸಂಜೆ ವೇಳೆಗೆ ತೋರಣಗಲ್ಲಿಗೆ ಆಗಮಿಸಿದ ನಿಯೋಗದಲ್ಲಿನ ಅಧ್ಯಕ್ಷರು ಮತ್ತು ಸದಸ್ಯರಿಗೆ ವಿಜಯನಗರ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆಯಿಂದ ಆತ್ಮೀಯವಾಗಿ ಸ್ವಾಗತ ಕೋರಲಾಯಿತು. ರಾಜ್ಯ ಸರ್ಕಾರದ ಪರವಾಗಿ ಆರ್ಥಿಕ ಇಲಾಖೆಯ  ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ.ಅತಿಕ್, ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು ಬಿ.ಎಲ್., ಜಿಪಂ ಸಿಇಓ ನೊಂಗ್ಜಾಯ್ ಮೊಹಮದ್ ಅಲಿ ಅಕ್ರಮ ಷಾಹ ಸೇರಿದಂತೆ ಇತರರು ನಿಯೋಗದಲ್ಲಿ ಹಿರಿಯ ಅಧಿಕಾರಿಗಳಿಗೆ ಹೂಗುಚ್ಛ ನೀಡಿ ಆತ್ಮೀಯವಾಗಿ ಬರ ಮಾಡಿಕೊಂಡರು. ಪುಳಕಿತರಾದರು: ತೋರಣಗಲ್ಲಿನ ಮೂಲಕ ರಸ್ತೆ ಮಾರ್ಗವಾಗಿ ವಿಶೇಷ ವಾಹನದ ಮೂಲಕ ವಿಜಯನಗರ ಜಿಲ್ಲೆಯ ಹೊಸಪೇಟೆಯ ಹಂಪಿಗೆ ಆಗಮಿಸುತ್ತಿದ್ದಂತೆ ನಿಯೋಗದಲ್ಲಿನ ಹಿರಿಯ ಅಧಿಕಾರಿಗಳು ಪುಳಕಿತರಾದರು. ವಿಜಯವಿಠ್ಠಲ ದೇವಾಲಯಕ್ಕೆ ಭೇಟಿ: ಹಂಪಿಗೆ ಭೇಟಿ ನೀಡಿದ ಸಂದರ್ಭದಲ್ಲಿ…

Read More

ಬೆಂಗಳೂರು: ಕರಿಯ ಸಿನಿಮಾ ರೀರಿಲೀಸ್ ಸಂದರ್ಭದಲ್ಲಿ ಕೆಲವು ಅಭಿಮಾನಿಗಳು ಪುಂಡಾಟಿಕೆ ಮೆರೆದ ಘಟನೆ ನಡೆದಿದ್ದು, ಪೊಲೀಸರು ವಾರ್ನಿಂಗ್ ನೀಡಿದರೂ ಕೇಳದೇ ದುರ್ವರ್ತನೆ ತೋರಿದ ಘಟನೆ ನಡೆದಿದೆ. ಬೆಂಗಳೂರಿನ ಪ್ರಸನ್ನ ಚಿತ್ರಮಂದಿರದ ಬಳಿ ಈ ಘಟನೆ ನಡೆದಿದೆ.  ಉದ್ಧಟತನದ ವರ್ತನೆ ತೋರುತ್ತಿದ್ದವರಿಗೆ ಪೊಲೀಸರು ಮೈಕ್ ಹಿಡಿದು ವಾರ್ನಿಂಗ್ ನೀಡಿದರು. ನಿಮ್ಮಂತಹ ಅಭಿಮಾನಿಗಳಿಂದ ದರ್ಶನ್‌ ಗೆ ಕೆಟ್ಟ ಹೆಸರು ಬರುತ್ತಿದೆ. ನಿಮ್ಮಿಂದ ಇನ್ನೊಬ್ಬರಿಗೆ ತೊಂದರೆ ಆಗಬಾರದು ಎಂದು ಪೊಲೀಸರು ಬುದ್ಧಿ ಹೇಳಿದರೂ ಬಾಯಿಗೆ ಬಂದಂತೆ ನಿಂದಿಸುತ್ತಾ ಥೇಟರ್ ಬಾಗಿಲು ಹಾಕಿಕೊಂಡರು. ಈ ವೇಳೆ ಥಿಯೇಟರ್ ಬಾಗಿಲು ಓಪನ್ ಮಾಡಿ ಪೊಲೀಸರು ಮೂವರನ್ನು  ವಶಕ್ಕೆ ಪಡೆದರು. ಪೊಲೀಸರು ವಶಕ್ಕೆ  ಪಡೆದ ಬಳಿಕ ಪುಂಡಾಟಿಕೆ ಮೆರೆದ ಅಭಿಮಾನಿ ತಪ್ಪಾಯ್ತು ಅಂತಾ ಕ್ಷಮೆ ಕೇಳಿದ್ದಾರೆ ಅಂತ ವರದಿಯಾಗಿದೆ. ಇನ್ನೂ ಅಭಿಮಾನಿಗಳ ಅತಿರೇಕದ ವರ್ತನೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಸನ್ನ ಥೇಟರ್‌ ನಲ್ಲಿ ರಾತ್ರಿ 10:30ರ ಪ್ರದರ್ಶನವನ್ನು ಪೊಲೀಸರು ಕ್ಯಾನ್ಸಲ್ ಮಾಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ತುಮಕೂರು:  ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಯಾರು ಅಭ್ಯರ್ಥಿ ಆಗಲಿದ್ದಾರೆ ಎಂಬುದಲ್ಲ, ಅಂತಿಮವಾಗಿ  ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್ ಡಿ ಎ  ಅಭ್ಯರ್ಥಿ ಕಣದಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಕೇಂದ್ರ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರುಚನ್ನಪಟ್ಟಣದಲ್ಲಿ ಅಷ್ಟೇ ಅಲ್ಲ ಉಪಚುನಾವಣೆ ಜೊತೆಗೆ ಸಂಡೂರು, ಶಿಗ್ಗಾವಿ ಸೇರಿ ಮೂರು ಕಡೆ ಉಪಚುನಾವಣೆ ನಡೆಯಬೇಕಿದೆ.ಸಾಕಷ್ಟು ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ ಎಂದರು. ಬಿಜೆಪಿ ರಾಜ್ಯನಾಯಕರು, ನಮ್ಮ ಜೆಡಿಎಸ್ ರಾಜ್ಯ ನಾಯಕರು ಸೇರಿ ಚರ್ಚೆ ಮಾಡುತ್ತಿದ್ದಾರೆ. ಸಿ.ಪಿ ಯೋಗೇಶ್ವರ್ ಗೆ ಟಿಕೆಟ್ ವಿಚಾರದಲ್ಲಿ  ಸೂಕ್ತವಾದ ಸಂದರ್ಭದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು. ಚರ್ಚೆಗಳು ಆಗಬೇಕಾಗುತ್ತೆ. ಆಗ ಫಲಿತಾಂಶ ನಮ್ಮ ಪರ ಬರಲು ಸಾಧ್ಯ. ಅಂತಿಮವಾಗಿ ಎನ್ ಡಿಎ ಅಭ್ಯರ್ಥಿಯಾಗಿರುತ್ತೆ. ಜೆಡಿಎಸ್- ಬಿಜೆಪಿ ಚರ್ಚೆಯಿಲ್ಲ, ಒಟ್ಟಾಗಿದ್ದೇವೆ, ಒಗ್ಗಟ್ಟಾಗಿದ್ದೇವೆ. ಹಾಗಾಗಿ ಎನ್ ಡಿಎ ಅಭ್ಯರ್ಥಿ ಕಣದಲ್ಲಿ ಇರಲಿದ್ದಾರೆ ಎಂದರು. ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಜೆಡಿಎಸ್ ಗೆ ಹುಮ್ಮಸ್ಸು ಹೆಚ್ಚಿದೆ, ರಾಜ್ಯದ ಜನತೆ ಬಿಜೆಪಿ- ಜೆಡಿಎಸ್…

Read More

ಬೆಂಗಳೂರು: ಕೆನಡಾದ ಕೃಷಿ ಉತ್ಪನ್ನ ತಯಾರಿಕಾ ಪ್ರಮುಖ ಕಂಪನಿಯಾಗಿರುವ ವಿಟೆರಾ  ವಿಜಯಪುರ ಜಿಲ್ಲೆಯಲ್ಲಿ ಕೃಷಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು 250 ಕೋಟಿ ರೂ. ಮೊತ್ತದ ಬಂಡವಾಳ ಹೂಡಲಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ವಿಟೆರಾ ಕಂಪನಿಯ ಪ್ರತಿನಿಧಿಗಳ ಜತೆ ಸಚಿವರು ಇಲ್ಲಿನ ಖನಿಜ ಭವನದಲ್ಲಿ ನಡೆಸಿದ ಸಭೆಯಲ್ಲಿ ಈ ಬಂಡವಾಳ ಹೂಡಿಕೆ ನಿರ್ಧಾರ ಕೈಗೊಳ್ಳಲಾಗಿದೆ. ವಿಜಯಪುರ ಜಿಲ್ಲೆಯ ಕೃಷಿ ಸಮುದಾಯದ ಬಳಕೆಗೆ ಅತ್ಯಾಧುನಿಕ ಶೈತ್ಯಾಗಾರಗಳನ್ನು ನಿರ್ಮಿಸಿ ರೈತರು ಸುಗ್ಗಿಯ ನಂತರ ಎದುರಿಸುವ ನಷ್ಟ ತಗ್ಗಿಸಲು ಮತ್ತು ಕೃಷಿ ಉತ್ಪನ್ನಗಳ ಉತ್ಪಾದನೆ, ಪೂರೈಕೆ ಹಾಗೂ ಮಾರಾಟ ಪ್ರಕ್ರಿಯೆಯಲ್ಲಿ ದಕ್ಷತೆ ತರಲು ವಿಟೆರಾ ನೆರವಾಗಲಿದೆ. ವಿಟೆರಾ ಕಂಪನಿಯು ಸುಧಾರಿತ ಉತ್ಪಾದನಾ ತಂತ್ರಜ್ಞಾನ ಬಳಸಲಿದೆ. ರಾಜ್ಯದಲ್ಲಿ ಕೆನಡಾದ ಆಧುನಿಕ ಕೃಷಿ ತಂತ್ರಜ್ಞಾನ ಬಳಕೆ ಹಾಗೂ ಈ ಬಂಡವಾಳ ಹೂಡಿಕೆಯಿಂದ ಕೃಷಿ ಕ್ಷೇತ್ರದ ಉತ್ಪಾದನೆ ಹೆಚ್ಚಲಿದ್ದು, ಅದರಿಂದ ರಾಜ್ಯದ ಒಟ್ಟಾರೆ ಆರ್ಥಿಕತೆಗೂ ಉತ್ತೇಜನ ದೊರೆಯಲಿದೆ ಎಂದೂ ಸಚಿವರು ಹೇಳಿದ್ದಾರೆ. ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತೆ…

Read More