Author: admin

ಚೆನ್ನೈ: ಯಾರಾದ್ರೂ ಅನುಚಿತವಾಗಿ ವರ್ತಿಸಿ ಅಡ್ಜೆಸ್ಟ್ ಮಾಡಿ ಅಂತ ಹೇಳಿದ್ರೆ ಚಪ್ಪಲಿಯಲ್ಲಿ ಹೊಡೆಯಿರಿ ಅಂತ ಮಹಿಳಾ ಕಲಾವಿದೆಯರಿಗೆ ತಮಿಳು ನಟ ವಿಶಾಲ್ ಕರೆ ನೀಡಿದ್ದಾರೆ. ಕೇರಳ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯದ ಆರೋಪದ ಹಿನ್ನೆಲೆ ಪ್ರತಿಕ್ರಿಯಿಸಿದ ಅವರು, ಯಾರಾದರೂ ಅನುಚಿತವಾಗಿ ವರ್ತಿಸಲು ಪ್ರಯತ್ನಿಸಿದರೆ, ಯುವತಿ ಧೈರ್ಯದಿಂದ ರಿಯಾಕ್ಟ್ ಮಾಡಬೇಕು. ಹೊಂದಾಣಿಕೆಗೆ ಅಥವಾ ಅವರ ಬೇಡಿಕೆಗಳಿಗೆ ಸಮ್ಮತಿಸಲು ಒತ್ತಾಯಿಸಿದರೆ ಚಪ್ಪಲಿಯಿಂದ ಹೊಡೆಯುವ ಧೈರ್ಯ ಹೊಂದಿರಬೇಕು ಎಂದು ಅವರು ಹೇಳಿದ್ದಾರೆ. ಮಹಿಳೆಯನ್ನು ಬಳಸಿಕೊಳ್ಳಲು ಬಯಸುವವರಿಗೆ ಶಿಕ್ಷೆಯಾಗಬೇಕು. ತಮಿಳು ಚಿತ್ರರಂಗದಲ್ಲಿ ‘ಹೊಂದಾಣಿಕೆ’ಯಂತಹ ಸಮಸ್ಯೆಗಳು ಇಲ್ಲ ಎಂದು ಹೇಳಲಾಗದು. ಇಂತಹ ದೂರುಗಳು ಬಹಳ ಹಿಂದಿನಿಂದಲೂ ಇವೆ. ಇಲ್ಲಿಯೂ ಇದೇ ರೀತಿಯ ಸಮಸ್ಯೆಗಳಿರಬಹುದು ಎಂದು ಅವರು ಹೇಳಿದ್ದಾರೆ. ಕೆಲ ಕಂಪನಿಗಳು ಕಚೇರಿಯನ್ನು ಸ್ಥಾಪಿಸಿ ಫೋಟೋಶೂಟ್ ಗೆ ಮಹಿಳೆಯರನ್ನು ಬಳಸಿಕೊಳ್ಳುತ್ತವೆ. ನಾನು ಆ ವಿಚಾರವನ್ನು ಅಲ್ಲಗಳೆಯುವುದಿಲ್ಲ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ನವದೆಹಲಿ: ಯುದ್ಧ, ಕೋಮುಗಲಭೆಗಳಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಭಾರತೀಯರು ರಸ್ತೆ ಅಪಘಾತಗಳಲ್ಲೇ ಸಾವಿಗೀಡಾಗಿದ್ದಾರೆ ಅಂತ ಕೇಂದ್ರ ಸಚಿವ ನಿತಿನ್ ಗಡ್ಕರಿ ಅಭಿಪ್ರಾಯಪಟ್ಟಿದ್ದಾರೆ. ಅವರು, FICCI ರೋಡ್ ಸೇಫ್ಟಿ ಅವಾರ್ಡ್ಸ್ ಮತ್ತು ಕಾನ್ಕ್ಲೇವ್ 2024 ರ ಆರನೇ ಆವೃತ್ತಿಯಲ್ಲಿ ಮಾತನಾಡಿ, ಪ್ರತಿ ವರ್ಷ ಭಾರತದಲ್ಲಿ ರಸ್ತೆ ಅಪಘಾತಗಳಲ್ಲಿ ಸುಮಾರು 1.5 ಲಕ್ಷ ಸಾವುಗಳು ವರದಿಯಾಗಿದೆ ಎಂದರು. ಬಲಿಪಶುಗಳಲ್ಲಿ ಸುಮಾರು 65% ಯುವಕರು ಮತ್ತು ಯುವತಿಯರು ಇದ್ದಾರೆ. ಇದರಿಂದ ಜಿಡಿಪಿಯ ಶೇ.3ರಷ್ಟು ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ನೀವು ಲೆಕ್ಕ ಹಾಕಿದರೆ, ಚೀನಾ ಅಥವಾ ಪಾಕಿಸ್ತಾನ ಯುದ್ಧಗಳು, ನಕ್ಸಲರ ದಾಳಿ, ಕೋಮು ಗಲಭೆಗಳು, ಕಾನೂನು ಮತ್ತು ಸುವ್ಯವಸ್ಥೆಯಲ್ಲಿನ ದುರ್ಘಟನೆಗಳಿಗಿಂತ ರಸ್ತೆ ಅಪಘಾತಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಪ್ರತಿ ರಸ್ತೆ ಅಪಘಾತಕ್ಕೂ ಚಾಲಕರನ್ನೇ ಹರಕೆಯ ಕುರಿ ಮಾಡುತ್ತಿದ್ದೇವೆ. ಆದರೆ ರಸ್ತೆ ಎಂಜಿನಿಯರುಗಳ ತಪ್ಪು ಇಲ್ಲಿ ಎದ್ದು ಕಾಣುತ್ತಿದೆ ಎಂದು ಆರೋಪಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ಪಾವಗಡ: ಶೃಂಗೇರಿ ಶ್ರೀ ಸರಸ್ವತಿ ವಿದ್ಯಾಪೀಠ ಪಾವಗಡದಲ್ಲಿ ವಿಜ್ಞಾನ ವಿಷಯ ಶಿಕ್ಷಕರ ಕಾರ್ಯಾಗಾರವನ್ನು ನಡೆಸಲಾಯಿತು. ಪ್ರೌಢಶಾಲಾ ವಿಜ್ಞಾನ ವಿಷಯ ಶಿಕ್ಷಕರ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಡಯಟ್ ಉಪನ್ಯಾಸಕರು ಹಾಗೂ ನೋಡಲ್ ಅಧಿಕಾರಿಗಳಾದ ಚಿತ್ತಯ್ಯ, ವಿಜ್ಞಾನ ಶಿಕ್ಷಕರು ಹೆಚ್ಚು ಕ್ರಿಯಾಶೀಲವಾಗಿ ಕರ್ತವ್ಯ ನಿರ್ವಹಿಸಿದಲ್ಲಿ ಶಾಲೆಗಳ ಫಲಿತಾಂಶಗಳು ಉತ್ತಮಗೊಳ್ಳುತ್ತವೆ. ಮೂಲ ವಿಜ್ಞಾನದ ಕಡೆಗೆ ವಿದ್ಯಾರ್ಥಿಗಳನ್ನು ಬರುವಂತೆ ಮಾಡುವ ಕೆಲಸವನ್ನು ವಿಜ್ಞಾನ ಶಿಕ್ಷಕರು ಮಾಡಬೇಕು ಎಂದು ತಿಳಿಸಿದರು. ಎಸ್ ಎಸ್ ಎಲ್ ಸಿ ಫಲಿತಾಂಶ ಉತ್ತಮಗೊಳಿಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನಿರಂತರವಾಗಿ ವಿದ್ಯಾರ್ಥಿಗಳೊಂದಿಗೆ ಕಲಿಕೆಯಲ್ಲಿ ತೊಡಗಿಸಿಕೊಂಡು ಉತ್ತಮ ಫಲಿತಾಂಶ ಸಾಧಿಸಬೇಕು ಎಂದು ಅವರು ತಿಳಿಸಿದರು. ವಿದ್ಯಾಸಂಸ್ಥೆ ಕಾರ್ಯದರ್ಶಿ ಶ್ರೀರಾಮ್ ರವರು ಮಾತನಾಡಿ, ನಮ್ಮ ಶಾಲೆಯು ಇಲಾಖೆಯ ಯಾವುದೇ ಕಾರ್ಯಗಳು ನಡೆಸಲು ಉತ್ಸಾಹ ತೋರಿಸುತ್ತದೆ. ಕಾರ್ಯಾಗಾರದ ಪ್ರಯೋಜನವನ್ನು ಎಲ್ಲಾ ಶಿಕ್ಷಕರು ಪಡೆಯಬೇಕೆಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ನಿವೃತ್ತ ಪ್ರಾಧ್ಯಾಪಕರಾದ ಸುಬ್ಬಯ್ಯರವರು ಆಮ್ಲಗಳು ಪ್ರತ್ಯಾಮ್ಲಗಳು ಮತ್ತು ಲವಣಗಳು ರಾಸಾಯನಿಕ ಕ್ರಿಯೆಗಳು ಮತ್ತು ಸಮೀಕರಣಗಳು ಎಂಬ ವಿಷಯದ…

Read More

ಲಖನೌ: ಮುಸ್ಲಿಮರು ಬಿಜೆಪಿಯನ್ನು ನಿರ್ಬಂಧಿಸುವ ಅವರ ಫ್ಯಾಶನ್ ನ್ನು ಬದಲಿಸಬೇಕು ಅಂತ ಬಿಜೆಪಿಯ ಹಿರಿಯ ನಾಯಕ ಮುಖ್ತಾರ್ ಅಬ್ಬಾಸ್ ನಖ್ವಿ ಗುರುವಾರ ಹೇಳಿಕೆ ನೀಡಿದ್ದಾರೆ. ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಸದಸ್ಯತ್ವ ಅಭಿಯಾನದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಮುಸ್ಲಿಂರಲ್ಲಿ ಅಪನಂಬಿಕೆಯನ್ನು ವಿಶ್ವಾಸವನ್ನಾಗಿ ಪರಿವರ್ತಿಸುವುದು ಇಂದಿನ ಅಗತ್ಯವಾಗಿದೆ. ಬಿಜೆಪಿಯನ್ನು ಸೋಲಿಸುವ ಅಲ್ಪಸಂಖ್ಯಾತರು ಮತ್ತು ಮುಸ್ಲಿಮರ ತಮ್ಮ ದಶಕಗಳ ಪ್ಯಾಷನ್ ಅನ್ನು ಬದಲಿಸಲು ಶ್ರಮಿಸಬೇಕು. ಅವರು ಬಿಜೆಪಿ ಬೆಂಬಲಿಸುವಂತೆ ಮಾಡಬೇಕು. ಅಭಿವೃದ್ಧಿಯ ವಿಷಯದಲ್ಲಿ ಬಿಜೆಪಿ ಯಾವುದೇ ವರ್ಗದ ವಿರುದ್ಧ ತಾರತಮ್ಯ ಮಾಡದಿದ್ದಾಗ ಬಿಜೆಪಿಗೆ ಮತ ಹಾಕಲು ಯಾವುದೇ ಹಿಂಜರಿಕೆ ಬೇಡ ಎಂದರು. ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸೆಕ್ಯುಲರ್ ಸಿಂಡಿಕೇಟ್ ಎಂದು ಕರೆಯಲ್ಪಡುವ ಪ್ಯೂಡಲ್ ಸುಲ್ತಾನರು ದೀರ್ಘಕಾಲದವರೆಗೆ ಮುಸ್ಲಿಮರಲ್ಲಿ ಬಿಜೆಪಿ ಬಗ್ಗೆ ಭಯದ ವಾತಾವರಣವನ್ನ ಹೆಚ್ಚಿಸಿದ್ದಾರೆ ಅಂತ ಹೇಳಿದರು. ಬಿಜೆಪಿ ಮತ್ತು ಪ್ರಧಾನಿ ಮೋದಿಯವರ ವಿರುದ್ಧ ‘ಸಂವಿಧಾನ ವಿರೋಧಿ’ ಎಂಬ ಆರೋಪ ಹೊರಿಸಲಾಗಿದೆ. ಇದು ‘ಸತ್ಯದ ಪರ್ವತವನ್ನು ಸುಳ್ಳಿನ ಪೊದೆಯಡಿಯಲ್ಲಿ ಮರೆಮಾಚುವ ಪಟ್ಟಭದ್ರರ ಪ್ರಯತ್ನವೇ…

Read More

ಗದಗ: ಅಪರಿಚಿತ ವಾಹನ ಡಿಕ್ಕಿಯಾಗಿ ಅರ್ಚಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಗಜೇಂದ್ರಗಢ ತಾಲೂಕಿನ ನರೇಗಲ್ ಪಟ್ಟಣದಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ನರೇಗಲ್ ನಿವಾಸಿ ಮಲ್ಲಯ್ಯ ಬಕ್ಕಯ್ಯನವರ (65) ಮೃತಪಟ್ಟಿದ್ದಾರೆ. ಬೆಳಿಗ್ಗೆ ಚಹಾ ಕುಡಿಯಲೆಂದು ಮನೆಯಿಂದ ಹೊರ ಹೋಗಿದ್ದ ಮಲ್ಲಯ್ಯ ಅವರಿಗೆ ಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ನರೇಗಲ್ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಗ್ಯಾಂಗ್ಟಾಕ್: 61 ವರ್ಷ ವಯಸ್ಸಿನ ವಿಕಲಚೇತನ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ವಿಡಿಯೋ ವೈರಲ್ ಮಾಡಿದ ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ಸಿಕ್ಕಿಂ ಪೊಲೀಸರು ತಿಳಿಸಿದ್ದಾರೆ. ಆಗಸ್ಟ್ 26ರಂದು ಜೋರೆಥಾಂಗ್ ಟೌನ್ ಬಸ್ ಪಾರ್ಕಿಂಗ್ ಕಾಂಪ್ಲೆಕ್ಸ್‌ನಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳು ಕೃತ್ಯವನ್ನು ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದರು. ನಾಲ್ವರು ಆರೋಪಿಗಳ ಪೈಕಿ ಮೂವರು ಅಪ್ರಾಪ್ತ ವಯಸ್ಕರು ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಕುಟುಂಬಸ್ಥರು ನೀಡಿದ ದೂರು ಆಧರಿಸಿ ಆರೋಪಿಗಳನ್ನ ಬಂಧಿಸಲಾಗಿತ್ತು. ಆರೋಪಿಗಳನ್ನ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಸಿರುಗುಪ್ಪ: ಈ ಶಾಲೆಯ ವಿದ್ಯಾರ್ಥಿಗಳಿಗೆ ದೇವಸ್ಥಾನದ ಆವರಣವೇ ಶಾಲೆ. ಜೋರಾಗಿ ಮಳೆ ಬಂದರೆ, ಕುಳಿತುಕೊಳ್ಳಲು ನಿಂತುಕೊಳ್ಳಲೂ ಆಗದೇ ಮನೆಯ ದಾರಿ ಹಿಡಿಯಬೇಕಿರುವ ಅನಿವಾರ್ಯತೆ ಈ ಶಾಲೆಯ ಮಕ್ಕಳದ್ದಾಗಿದೆ. ಸಿರುಗುಪ್ಪ ತಾಲ್ಲೂಕಿನ ಬೀರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೈರಗಾಮದಿನ್ನೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿ ಇದಾಗಿದೆ. ಇಲ್ಲಿ ಒಟ್ಟು 130 ವಿದ್ಯಾರ್ಥಿಗಳು 1ರಿಂದ 5ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಐದು ತರಗತಿಗಳ ವಿದ್ಯಾರ್ಥಿಗಳಿಗಾಗಿ ಈ ಹಿಂದೆ ಕಟ್ಟಲಾಗಿರುವ ಮೂರು ಕೊಠಡಿಗಳ ಕಟ್ಟಡಗಳು ಸೋರುತ್ತಿದ್ದು, ಪಾಠ ಪ್ರವಚನ ಕೇಳಲು ಸಾಧ್ಯವಿಲ್ಲದ ಸ್ಥಿತಿಯಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಯೋಜನೆಯಡಿ 5 ಹೊಸ ಶಾಲಾ ಕೊಠಡಿ ನಿರ್ಮಿಸಲು ಅನುದಾನ ಬಿಡುಗಡೆಯಾಗಿದೆ. ಆದರೆ ಸದ್ಯ ಇರುವ ಶಾಲೆಯ ಹಿಂದಿನ ಬಯಲು ಜಾಗ ತಮ್ಮದೆಂದು ಗ್ರಾಮಸ್ಥರೊಬ್ಬರು ನ್ಯಾಯಾಲಯದ ಮೊರೆ ಹೋಗಿರುವುದರಿಂದ ಹೊಸ ಕೊಠಡಿ ನಿರ್ಮಿಸಲು ಸಾಧ್ಯವಾಗಿಲ್ಲವೆಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳುತ್ತಾರೆ. ಸದ್ಯ ಇರುವ ಮೂರು ಕೊಠಡಿಗಳು ಶಿಥಿಲಾವಸ್ಥೆ ತಲುಪಿದ್ದು, ಕೆ.ಕೆ.ಆರ್.ಡಿ.ಬಿ. ಯೋಜನೆಯಡಿ ಈ 5…

Read More

ನವದೆಹಲಿ: ದೇಶದ ಆಸ್ಪತ್ರೆಗಳಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ವೈದ್ಯರಲ್ಲಿ ಮೂರನೇ ಒಂದು ಭಾಗದಷ್ಟು ಮಂದಿ ಅಸುರಕ್ಷಿತವಾಗಿದ್ದಾರೆ ಎಂದು ಇಂಡಿಯನ್ ಮೆಡಿಕಲ್ ಅಸೋಷಿಯೇಷನ್ ವರದಿ ಮಾಡಿದೆ. ಶೇ.45ರಷ್ಟು ಮಂದಿ ವೈದ್ಯರು ರಾತ್ರಿ ಪಾಳಿಯಲ್ಲಿ ಡ್ಯೂಟಿ ರೂಮ್ ಲಭ್ಯವಿಲ್ಲ ಹೀಗಾಗಿ ನಾವು ಅತ್ಯಂತ ಅಸುರಕ್ಷಿತರಾಗಿದ್ದೇವೆ ಎಂದು ತಿಳಿಸಿದ್ದಾರೆ ಎಂದು ಐಎಂಎ ಹೇಳಿದೆ. ಕೋಲ್ಕತ್ತಾದ ಸರ್ಕಾರಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳಾ ವೈದ್ಯೆ ಅತ್ಯಾಚಾರ ಮತ್ತು ಕೊಲೆ ನಡೆದ ಘಟನೆಯ ನಂತರ ಐಎಂಎ ನಡೆಸಿದ ಸಮೀಕ್ಷೆ ವೇಳೆ ಮಹಿಳಾ ವೈದ್ಯರಲ್ಲಿ ಮೂರನೇ ಒಂದು ಭಾಗದಷ್ಟು ಮಂದಿ ಅಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ. 20–30 ವರ್ಷ ವಯಸ್ಸಿನ ವೈದ್ಯರು ಆಸ್ಪತ್ರೆಯಲ್ಲಿ ಸುರಕ್ಷತೆ ಎಂಬುವುದೇ ಇಲ್ಲ ಎಂದು ಭಾವಿಸುತ್ತಿದ್ದಾರೆ. ಈ ಗುಂಪು ಹೆಚ್ಚಾಗಿ ಇಂಟರ್ನಿಗಳು ಮತ್ತು ಸ್ನಾತಕೋತ್ತರ ಪದವೀಧರರನ್ನು ಒಳಗೊಂಡಿದೆ. ರಾತ್ರಿ ಪಾಳಿಯಲ್ಲಿ 45 ಪ್ರತಿಶತದಷ್ಟು ಮಂದಿಗೆ ಕರ್ತವ್ಯ ಕೊಠಡಿ ಲಭ್ಯವಿರಲಿಲ್ಲ. ಡ್ಯೂಟಿ ಕೋಣೆಗೆ ಪ್ರವೇಶ ಹೊಂದಿರುವವರು ತಾವು ಸುರಕ್ಷಿತವಾಗಿರುವುದಾಗಿ ಹೇಳಿಕೊಂಡಿದ್ದಾರೆ.…

Read More

ಬೆಂಗಳೂರು: ಗೋಬಿ ಮಂಚೂರಿ ಮತ್ತು ಕಬಾಬ್, ಕಾಟನ್ ಕ್ಯಾಂಡಿಯಲ್ಲಿ ಕೃತಕ ಬಣ್ಣ ಬಳಕೆ ನಿಷೇಧದ ಬಳಿಕ ಇದೀಗ ಕೇಕ್ ಗಳಲ್ಲಿ ಕೃತಕ ಬಣ್ಣ ಬಳಕೆ ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಕೇಕ್ ನಲ್ಲೂ ಕೃತಕ ಬಣ್ಣಗಳನ್ನು ಬಳಸಲಾಗುತ್ತಿದ್ದು, ಹೀಗಾಗಿ ಕೃತಕ ಬಣ್ಣಗಳನ್ನು ನಿಷೇಧಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ ಎಂದು ಹೇಳಲಾಗಿದೆ. ಕೇಕ್ ನಲ್ಲಿ ಬಳಸುವ ಬಣ್ಣದಲ್ಲಿ ಅಪಾಯಕಾರಿ ಅಂಶಗಳು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಶೀಘ್ರವೇ ಸರ್ಕಾರ ಕೇಕ್ ಗಳಲ್ಲಿ ಬಣ್ಣ ಬಳಕೆ ನಿಷೇಧಿಸಿ ಆದೇಶ ಹೊರಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು: ಗುತ್ತಿಗೆದಾರರಿಗೆ ಅಧಿಕಾರಿಗಳು ಹಣ ಪಾವತಿಸಲು ಲಂಚಕ್ಕಾಗಿ ಬೇಡಿಕೆ ಇಟ್ಟು  ಸತಾಯಿಸಿದರೆ ಮುಂದಿನ ದಿನಗಳಲ್ಲಿ ಲೋಕಾಯುಕ್ತರ ಮೊರೆ ಹೋಗಲಾಗುವುದು ಎಂದು ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಬಲರಾಮಯ್ಯ  ಎಚ್ಚರಿಕೆ ನೀಡಿದ್ದಾರೆ. ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರದಲ್ಲಿ ಇದುವರೆಗೂ 31,000 ಕೋಟಿ ರೂ ಗುತ್ತಿಗೆದಾರರಿಗೆ ನೀಡಬೇಕಾಗಿದ್ದು ಅದು ಬಾಕಿ ಉಳಿದಿದೆ. ಬಿಲ್ ಪಾವತಿ ಮಾಡಲು ಲಂಚಕ್ಕಾಗಿ ಬೇಡಿಕೆ ಇಟ್ಟು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಇತ್ತೀಚಿಗೆ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಅಧಿಕಾರಿಗಳ ವರ್ತನೆಯಿಂದ ಬೇಸತ್ತು ಗುತ್ತಿಗೆದಾರರೊಬ್ಬರು ಲೋಕಾಯುಕ್ತ ಇಲಾಖೆಗೆ ದೂರು ನೀಡಿದ್ದರು ಈ ಸಂಬಂಧ ಮೂವರು ಮೂವರು ಇಂಜಿನಿಯರ್ಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದರೂ ಎಂದು ಹೇಳಿದರು. ಎಲ್ ಒಸಿ ಕೊಡುವಾಗ ತಾರತಮ್ಯ ಮಾಡುತ್ತಿದ್ದು 5 ಕೋಟಿ ರೂ ಬಿಡುಗಡೆಯಾದರೆ 5 ಕೋಟಿ ರೂ ಸೀನಿಯಾ ರೀತಿ ಮಾಡುತ್ತಾರೆ ಉಳಿದಿರುವ ಹಣ ಅಧಿಕಾರಿಗಳು ತಮ್ಮ ಮನಸ್ಸಿಗೆ ಬಂದಂತೆ ವ್ಯವಹಾರ ಮಾಡುತ್ತಾರೆ ಎಂದು ದೂರಿದರು. ಕೇಂದ್ರ ಸರ್ಕಾರದ ರೀತಿಯಲ್ಲಿ 1:1 ಅನುಪಾತದಲ್ಲಿ ರಾಜ್ಯ…

Read More