Author: admin

ತುಮಕೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್), ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಜಿಲ್ಲೆಯಲ್ಲಿ ಸ್ವಂತ ಉದ್ಯಮ ಸ್ಥಾಪಿಸ ಬಯಸುವ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಆಗಸ್ಟ್ 30 ರಿಂದ 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ತರಬೇತಿ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವ ಪರಿಶಿಷ್ಟ ಪಂಗಡದ ಆಸಕ್ತರಿಗೆ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು/ಪ್ರೋತ್ಸಾಹ, ಉದ್ಯಮಗಳ ಆಯ್ಕೆ, ಮಾರುಕಟ್ಟೆ, ಯೋಜನಾವರದಿ, ತೆರಿಗೆ ನಿರ್ವಹಣೆ ಮತ್ತು ಇತರೆ ಕೈಗಾರಿಕಾ ವಿಷಯಗಳ ಕುರಿತು ಮಾಹಿತಿ ನೀಡಲಾಗುವುದು. ಆಸಕ್ತರು ಆಗಸ್ಟ್ 30ರಂದು ಬೆಳಿಗ್ಗೆ 9:30 ಗಂಟೆಗೆ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ನಡೆಯುವ ತರಬೇತಿಗೆ ನೇರವಾಗಿ ಭಾಗವಹಿಸಿ ಪ್ರಯೋಜನ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, ಬಿ.ಹೆಚ್.ರಸ್ತೆ, ತುಮಕೂರು ಅಥವಾ ದೂ.ವಾ.ಸಂಖ್ಯೆ: 8073313988ನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ…

Read More

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ದರ್ಬಾರ್ ಗೆ ಬ್ರೇಕ್ ಬಿದ್ದಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಲ್ಲಿದ್ದ ದರ್ಶನ್ ನ ರಾಜಾತಿಥ್ಯದ ಫೋಟೋ ವೈರಲ್ ಆದ ಹಿನ್ನೆಲೆ FIR ದಾಖಲಾಗಿ ತನಿಖೆ ಕೂಡ ನಡೆಸಲಾಗ್ತಿದೆ. ಈಗ ಬಿಗಿ ಭದ್ರತೆಯಲ್ಲಿ ದರ್ಶನ್ ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಜೈಲಲ್ಲಿ ರಾಜಾತಿಥ್ಯ ನೀಡಿದ ಆರೋಪದಲ್ಲಿ 7 ಜನ ಅಧಿಕಾರಿಗಳನ್ನು ಈಗಾಗಲೇ ಅಮಾನತು ಮಾಡಲಾಗಿದೆ. ಇದೇ ವೇಳೆ ದರ್ಶನ್ ನನ್ನು ಬೆಂಗಳೂರಿನ ಸೆಂಟ್ರಲ್ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ಇದೇ ಸಂದರ್ಭ ರೇಣುಕಾಸ್ವಾಮಿ ಕೊಲೆ ಕೇಸ್ ನ ಇತರ ಆರೋಪಿಗಳನ್ನು ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡುವಂತೆ ನ್ಯಾಯಾಲಯ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆದ್ರೆ ಮತ್ತಿತರ ಆರೋಪಿಗಳಾದ ಆರೋಪಿ ಪವನ್ , ರಾಘವೇಂದ್ರ ನಂದೀಶ್…

Read More

ಇಂದು ದಾವಣಗೆರೆ ಜಿಲ್ಲೆಯ ಆನೆಕೊಂಡ ಬಸವೇಶ್ವರ ಜಾತ್ರೆ ಅದ್ಧೂರಿಯಾಗಿ ನಡೆಯಿತು. ಈ ವೇಳೆಯಲ್ಲಿ ದೇವರ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ. ರಾಮ ರಾಮ ಎಂದು ನುಡಿದಿತಲೇ, ನರ ಲೋಕದ ಜನಕೆ ಆನೆ ಕಣ್ಣೀರು ಉಗ್ಗಿತಲೇ, ಮುತ್ತೈದೆ ಭೂತಾಯಿ ಉಡಿ ತುಂಬಿತಲೇ ಎಂಬುದಾಗಿ ಪೂಜಾರಪ್ಪ ಕಾರ್ಣಿಕ ನುಡಿ ನುಡಿದಿದ್ದಾರೆ. ಸಾವಿರಾರು ಜನರ ಸಮ್ಮುಖದಲ್ಲಿ ಕಾರ್ಣಿಕ ನುಡಿಯನ್ನು ಪೂಜಾರಿ ನುಡಿದಿದ್ದು, ಬರುವ ದಿನಗಳಲ್ಲಿ ನಾಡಿಗೆ, ದೇಶಕ್ಕೆ ಒಳ್ಳೇಯದಾಗಲಿದೆ ಎಂಬುದು ಇದರ ಸಾರಾಂಶ ಎಂಬುದಾಗಿ ಜನರು ವಿಶ್ಲೇಷಿಸಿದ್ದಾರೆ. ನರ ಲೋಕದ ಜನಕೆ ದೃಷ್ಟಿ ಹೆಚ್ಚಿತಲೇ ಎಂಬುದಾಗಿ ದಾವಣಗೆರೆಯ ಆನೆಕೊಂಡ ಬಸವೇಶ್ವರ ದೇವರ ಕಾರ್ಣಿಕ ನುಡಿ ನುಡಿಯುವ ಮೂಲಕ, ಮುಂಬರುವ ದಿನಗಳಲ್ಲಿ ನಾಡಿಗೆ ದೇಶಕ್ಕೆ ಒಳ್ಳೇಯದಾಗಲಿದೆ ಎಂಬುದಾಗಿ ಹೇಳಿದೆ. ರಾಮ ರಾಮ ಎಂದು ನುಡಿದಿತಲೇ, ನರ ಲೋಕದ ಜನಕೆ ಆನೆ ಕಣ್ಣೀರು ಉಗ್ಗಿತಲೇ, ಮುತ್ತೈದೆ ಭೂತಾಯಿ ಉಡಿ ತುಂಬಿತಲೇ ಎಂದು ಕಾರ್ಣಿಕ ಭವಿಷ್ಯ ನುಡಿದಿದ್ದು, ಇದು ಮುಂದಿನ ದಿನಗಳ ಶುಭ ಸೂಚಕವಾಗಿದೆ. ಕೃಷಿಯಲ್ಲಿ ಉತ್ತಮ ಫಸಲು ಬರಲಿದೆ ಎಂದು…

Read More

ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರವು ಆಧುನಿಕ ಕೋಳಿ ಸಾಕಾಣಿಕೆ ತರಬೇತಿ ಕುರಿತು ರೈತರಿಗೆ ಉಚಿತ ತರಬೇತಿ ನೀಡಲು ಉದ್ದೇಶಿಸಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ. ಆಧುನಿಕ ಕೋಳಿ ಸಾಕಾಣಿಕೆ ತರಬೇತಿಯನ್ನು ಆಗಸ್ಟ್ 29 ಮತ್ತು 30ರಂದು ಹಮ್ಮಿಕೊಳ್ಳಲಾಗಿದೆ. ಆಸಕ್ತರು ನಿಗದಿಪಡಿಸಿದ ದಿನಾಂಕದಂದು ಬೆಳಿಗ್ಗೆ 10 ಗಂಟೆಗೆ ತರಬೇತಿಗೆ ಹಾಜರಾಗಬಹುದಾಗಿದೆ. ತರಬೇತಿಗೆ ಹಾಜರಾಗಲು ಇಚ್ಛಿಸುವವರು 2 ಪಾಸ್ ಪೋರ್ಟ್ ಅಳತೆ ಭಾವಚಿತ್ರ, ರೈತರ ಫ್ರೂಟ್ ಐಡಿ ಸಂಖ್ಯೆ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ(ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ)ವನ್ನು ಕಡ್ಡಾಯವಾಗಿ ತರಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆ/ ದೂರವಾಣಿ ಸಂಖ್ಯೆ 0816-2251214ನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು: ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿ ಪಿ.ಓ.ಪಿ ನಿರ್ಮಿತ ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗೌರಿ/ಗಣೇಶ ವಿಗ್ರಹ ಮತ್ತು ಬಣ್ಣಲೇಪಿತ ವಿಗ್ರಹಗಳ ಮಾರಾಟ ಮತ್ತು ವಿಸರ್ಜನೆ ಮಾಡುವುದನ್ನು ನಿಷೇಧಿಸಿದೆ ಎಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ತಿಳಿಸಿದ್ದಾರೆ. ಬರುವ ಸೆಪ್ಟೆಂಬರ್ 6ರ ಸ್ವರ್ಣಗೌರಿ ವ್ರತ ಮತ್ತು ಸೆಪ್ಟೆಂಬರ್ 7ರಂದು ಆಚರಿಸುವ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಗೌರಿ/ಗಣೇಶ ವಿಗ್ರಹಗಳನ್ನು ತಯಾರಿಸುವ ಮಾಲೀಕರು ಮತ್ತು ಮಾರಾಟಗಾರರು ಸಂಪೂರ್ಣವಾಗಿ ಮಣ್ಣಿನಿಂದ ತಯಾರಿಸಿರುವ ವಿಗ್ರಹಗಳನ್ನು ಮಾತ್ರ ಮಾರಾಟ ಮಾಡಬೇಕು. ತಪ್ಪಿದಲ್ಲಿ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಬೆಂಗಳೂರು ನಗರ:  ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮ ಹಾಗೂ ಪ್ರೋತ್ಸಾಹಧನ ಕಾರ್ಯಕ್ರಮಗಳಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತೆ ಹಾಗೂ ಯಾವುದೇ ಅರ್ಹ ವಿದ್ಯಾರ್ಥಿಗೆ ವಿದ್ಯಾರ್ಥಿವೇತನದಿಂದ ವಂಚಿತರಾಗದಂತೆ ಮಾಡಲು ಸೆಪ್ಟೆಂಬರ್ 1 ರಿಂದ ವಿದ್ಯಾರ್ಥಿವೇತನ ಮತ್ತು ಪ್ರೋತ್ಸಾಹಧನ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಹಾಗೂ ಪ್ರೋತ್ಸಾಹ ಧನಕ್ಕಾಗಿ ವೆಬ್ ಸೈಟ್: www.sw.kar.nic.in ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.20/1, 1ನೇ ಮಹಡಿ, ಜೆಲ್ಲೇಟಾ ಟವರ್, ಮಿಷನ್ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು. ದೂರವಾಣಿ ಸಂಖ್ಯೆ: 080-22240449, 9480843019. ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಉತ್ತರ ತಾಲ್ಲೂಕು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಕ್ಕ, ಯಲಹಂಕ, ಬೆಂಗಳೂರು, ದೂರವಾಣಿ ಸಂಖ್ಯೆ: 080-28461351, 9480843051. ಸಹಾಯಕ ನಿರ್ದೇಶಕರು (ಗ್ರೇಡ್-1),…

Read More

ತುಮಕೂರು: ಮಧುಗಿರಿಯ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ದೊಡ್ಡೇರಿ ಹೋಬಳಿ ಬುಳಸಂದ್ರ ಗ್ರಾಮದಲ್ಲಿ ಜಾತ್ರೆ ಹಿನ್ನೆಲೆ ಶನಿವಾರ ಮನೆಯಲ್ಲಿ ತಯಾರಿಸಿದ ಆಹಾರ ಸೇವಿಸಿ ವಾಂತಿ, ಭೇದಿ ಸಮಸ್ಯೆಯಿಂದ ಅಸ್ವಸ್ಥಗೊಂಡು ತಾಲ್ಲೂಕು ಆಸ್ಪತ್ರೆ ಹಾಗೂ ತುಮಕೂರು ನಗರದ ಶ್ರೀದೇವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಸಚಿವ ಕೆ.ಎನ್.ರಾಜಣ್ಣ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಬುಳಸಂದ್ರ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದ ಶಾಲೆಯಲ್ಲಿ ಏರ್ಪಡಿಸಿರುವ ಶಿಬಿರಕ್ಕೆ ಆಗಮಿಸಿ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಗ್ರಾಮಸ್ಥರಿಂದ ಅವರು ಮಾಹಿತಿ ಪಡೆದರು. ಈ ಘಟನೆ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ ಅವರು, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾದದೆ ಧೈರ್ಯದಿಂದ ಇರಲು ಮನವರಿಕೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಯಾದ ಶುಭ ಕಲ್ಯಾಣ್ ರವರು, ಸಿ.ಇ.ಓ ಪ್ರಭು, ಡಿ.ಎಚ್.ಓ. ಮಂಜುನಾಥ್, ಉಪವಿಭಾಗ ಅಧಿಕಾರಿಗಳಾದ ಗೊಟೂರು ಶಿವಪ್ಪ, ಇ.ಓ ಲಕ್ಷಣ್, ಟಿ.ಎಚ್.ಓ. ಶ್ರೀನಿವಾಸ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ತುಮಕೂರು: ಜಿಲ್ಲೆಯ ಮಧುಗಿರಿ ತಾಲ್ಲೂಕು ದೊಡ್ಡೇರಿ ಹೋಬಳಿ ಬುಳಸಂದ್ರ ಗ್ರಾಮದಲ್ಲಿ ವರದಿಯಾದ ವಾಂತಿ, ಭೇದಿ ಪ್ರಕರಣಗಳಿಗೆ ಕಲುಷಿತ ನೀರು ಕಾರಣವಲ್ಲವೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸ್ಪಷ್ಟನೆ ನೀಡಿದರು. ಅವರು ಬುಳಸಂದ್ರ ಗ್ರಾಮಕ್ಕೆ ಭೇಟಿ ನೀಡಿ ಘಟನೆಯ ಬಗ್ಗೆ ಅಧಿಕಾರಿಗಳು ಹಾಗೂ ಗ್ರಾಮಸ್ಥರಿಂದ ಮಾಹಿತಿ ಪಡೆದರು. ನಂತರ ಮಾತನಾಡಿದ ಅವರು, ನೀರನ್ನು ಕಾಯಿಸಿ–ಆರಿಸಿ ಕುಡಿಯಬೇಕು. ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಶೌಚಕ್ಕಾಗಿ ಶೌಚಾಲಯವನ್ನೇ ಬಳಸಬೇಕು. ಶೌಚದ ನಂತರ ಕೈಗಳನ್ನು ಸಾಬೂನಿನಿಂದ ಶುಚಿಗೊಳಿಸಬೇಕು ಎಂದು ಗ್ರಾಮಸ್ಥರಲ್ಲಿ ಮನವಿ ಮಾಡಿದರು. ಮುನ್ನೆಚ್ಚರಿಕಾ ಕ್ರಮವಾಗಿ ಆಶಾ ಕಾರ್ಯಕರ್ತೆಯರು ಗ್ರಾಮದ ಮನೆ–ಮನೆ ಭೇಟಿ ನೀಡಿ ಮನೆಯ ಸದಸ್ಯರ ಆರೋಗ್ಯದ ಬಗ್ಗೆ ಸಮೀಕ್ಷೆ ಮಾಡಬೇಕು ಎಂದರಲ್ಲದೆ ಬರುವ ಆಗಸ್ಟ್ 31ರಂದು ಶ್ರಾವಣ ಮಾಸದ ಕಡೆಯ ಶನಿವಾರ ಇರುವುದರಿಂದ ಗ್ರಾಮಗಳ ದೇವಾಲಯಗಳಲ್ಲಿ ವಿಶೇಷ ಪೂಜೆ/ಜಾತ್ರೆಗಳು ನಡೆಯುವುದರಿಂದ ಅಧಿಕಾರಿಗಳು ಸ್ವಚ್ಛತೆ, ಕುಡಿಯುವ ನೀರಿನ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ವಾಂತಿ–ಭೇದಿ ಪ್ರಕರಣಗಳು ಮರುಕಳಿಸದಂತೆ ಹೆಚ್ಚಿನ ಜಾಗ್ರತೆ ವಹಿಸಬೇಕೆಂದು ಸೂಚನೆ ನೀಡಿದರು. ಜನರ ಆರೋಗ್ಯದ ಹಿತದೃಷ್ಟಿಯಿಂದ…

Read More

ಧಾರವಾಡ: ಕರ್ನಾಟಕ ಲೋಕಸೇವಾ ಆಯೋಗ ಇಂದು ನಡೆಸಿದ ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆಯು ಧಾರವಾಡದಲ್ಲಿ ಸೂಸುತ್ರವಾಗಿ ಮತ್ತು ಶಾಂತಿಯುತವಾಗಿ ಜರುಗಿತು. ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ನಗರದ ವಿವಿಧ ಕಾಲೇಜುಗಳಲ್ಲಿ ಸ್ಥಾಪಿಸಿದ್ದ ಕೆ.ಎ.ಎಸ್. ಪ್ರೀಲಿಮ್ಸ್ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು. ಸಿ.ಸಿ.ಟಿ.ವಿ, ಪೇಸ್ ರೀಡಿಂಗ್ ಇತ್ಯಾದಿಗಳ ಪಾಲನೆ ಕುರಿತು ನೋಡಲ್ ಅಧಿಕಾರಿ ಮತ್ತು ಪ್ರಾಚಾರ್ಯರಿಂದ ಮಾಹಿತಿ ಪಡೆದರು. ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ರಾಜೀವ ಗಾಂಧಿ ಪ್ರೌಢಶಾಲೆ, ಬಾಷಲ್ ಮಿಷನ್ ಗರ್ಲ್ಸ್ ಹೈಸ್ಕೂಲ್, ಕಿಟಲ್ ಕಲಾ ಹಾಗೂ ವಿಜ್ಞಾನ ಮಹಾವಿದ್ಯಾಲಯ ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿದರು. ಧಾರವಾಡ ನಗರದ ವಿವಿಧ ಕಾಲೇಜುಗಳಲ್ಲಿ ಕೆ.ಎ.ಎಸ್ ಪೂರ್ವಭಾವಿ ಪರೀಕ್ಷೆಗಾಗಿ 33 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಕೆ.ಎ.ಎಸ್ ಪೂರ್ವಭಾವಿ ಪರೀಕ್ಷೆ ಬರೆಯಲು 10,818 ಜನ ಅಭ್ಯರ್ಥಿಗಳು ಧಾರವಾಡ ಕೇಂದ್ರವನ್ನು ಆಯ್ಕೆ ಮಾಡಿಕೊಂಡಿದ್ದರು. ಇಂದು ಬೆಳಿಗ್ಗೆ 10 ರಿಂದ 12 ಗಂಟೆವರೆಗೆ ಜರುಗಿದ ಮೊದಲ ಪೇಪರ್ ಪರೀಕ್ಷೆಗೆ 6,879 ಅಭ್ಯರ್ಥಿಗಳು ಹಾಜರಾಗಿದ್ದರು…

Read More

✨✨ ಉಪವಾಸ ಮಾಡುವುದು ಎಂದರೆ ವಾರದಲ್ಲಿ ಒಮ್ಮೆಯಾದರೂ ಮಾಡಬೇಕು ಆ ವಾರ ಯಾವುದು ಎಂದು ತಿಳಿಯೋಣ ಬನ್ನಿ ಉಪವಾಸ ಮಾಡುವುದರಿಂದ ಆಗುವ ಪ್ರಯೋಜನವೇನು ತಿಳಿದು ಕೊಳ್ಳೋಣ✨ ✨ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 Provided by ಉಪವಾಸ ಮಾಡುವುದರಿಂದ ಹಣದ ಸಮಸ್ಯೆ ನಿವಾರಣೆ ಆಗುತ್ತದೆ.  ನಾವು ಹೇಳುವ ವಾರದ ದಿನದಂದು  ಪ್ರತಿ ಶನಿವಾರ ನೀವು ಉಪವಾಸ…

Read More