Subscribe to Updates
Get the latest creative news from FooBar about art, design and business.
- ಲಕ್ಷ್ಮೀ ಹೆಬ್ಬಾಳ್ಕರ್ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ
- ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ ಕೈ ಹೈಕಮಾಂಡ್ ಶಾಕ್!
- ಬೀದರ್ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು
- ಕೂಡ್ಲಿಗಿ: ಸಭೆ–ಉತ್ಸವ ಕಾಟಾಚಾರಕ್ಕಾಗದಿರಲಿ, ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸಂಘಟನೆಗಳ ಆಗ್ರಹ
- ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: 20 ಹೊಸ ಸಚಿವರ ಸೇರ್ಪಡೆ, ಪ್ರಮುಖ ಹುದ್ದೆಗಳಿಗೆ ಎಐಸಿಸಿ ಅಂತಿಮ ಅನುಮೋದನೆ
- ಕಾವೇರಿ ಕಿಚ್ಚು: ‘ಭೂಮಿ, ನೀರು, ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’ : ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಕರೆ
- ತಿಪಟೂರಿನಲ್ಲಿ ಜ್ಞಾನ ವಿಕಾಸ ಮಹಿಳಾ ವಿಚಾರಗೋಷ್ಠಿ: ಆರೋಗ್ಯ ಜಾಗೃತಿ ಹಾಗೂ ಸಾಂಸ್ಕೃತಿಕ ವೈಭವ
- ವಿಜಯಪುರ: ಆಟೋ ಪಕ್ಕಕ್ಕೆ ಸರಿಸು ಎಂದಿದ್ದಕ್ಕೆ KSRTC ಕಂಡಕ್ಟರ್ ಮೇಲೆ ಹಲ್ಲೆ; ವಿಡಿಯೋ ವೈರಲ್!
Author: admin
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 26 ಮತ್ತು 27ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ. ಕ್ರೀಡಾಕೂಟವನ್ನು ಸೆ.26ರಂದು ಪುರುಷರು ಹಾಗೂ ಸೆ.27ರಂದು ಮಹಿಳೆಯರಿಗಾಗಿ ಏರ್ಪಡಿಸಲಾಗಿದ್ದು, ನಿಗದಿಪಡಿಸಿದ ದಿನಾಂಕದಂದು ಬೆಳಿಗ್ಗೆ 9 ಗಂಟೆಗೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬಹುದಾಗಿದೆ. ಈಗಾಗಲೇ ಸಂಘಟಿಸಲಾಗಿರುವ 2024–25ನೇ ಸಾಲಿನ ಜಿಲ್ಲೆಯ ಎಲ್ಲಾ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವಾಲಿಬಾಲ್, ಖೋ-ಖೋ, ಕಬಡ್ಡಿ, ಫುಟ್ ಬಾಲ್, ಥ್ರೋಬಾಲ್, ಯೋಗ ಕ್ರೀಡೆಗಳಲ್ಲಿ ಪ್ರಥಮ ಸ್ಥಾನ, ಅಥ್ಲೆಟಿಕ್ಸ್ ವಿಭಾಗದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸಿದ ಕ್ರೀಡಾಪಟುಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ. ಕ್ರೀಡಾಪಟುಗಳು ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗುವ ಕುಸ್ತಿ, ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್‌ಬಾಲ್, ಟೇಬಲ್ ಟೆನ್ನಿಸ್, ಬ್ಯಾಸ್ಕೆಟ್ ಬಾಲ್, ಬಾಲ್ ಬ್ಯಾಡ್ಮಿಂಟನ್, ಯೋಗ, ಟೆನ್ನಿಸ್, ನೆಟ್ ಬಾಲ್, ಈಜು ಕ್ರೀಡೆಗಳಲ್ಲಿ ಭಾಗವಹಿಸಬಹುದಾಗಿದೆ ಎಂದು ಯುವ ಸಬಲೀಕರಣ…
ತುಮಕೂರು: ತುಮಕೂರು ಅರಣ್ಯ ಇಲಾಖೆಯು ಪರಿಸರ ಆಸಕ್ತರ ಸಹಯೋಗದೊಂದಿಗೆ 2024ನೇ ಸಾಲಿನ ವನ್ಯಜೀವಿ ಸಪ್ತಾಹ(ಅಕ್ಟೋಬರ್ 2–8)ದ ಅಂಗವಾಗಿ ಅರಣ್ಯ ಹಾಗೂ ವನ್ಯಜೀವಿ ಛಾಯಾಚಿತ್ರಗಳ ಸ್ಪರ್ಧೆ ಹಾಗೂ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಛಾಯಾಗ್ರಾಹಕರು Forest Landscape, Birds, Insects, Reptiles and Mammalsಗೆ ಸಂಬಂಧಿಸಿದ ಛಾಯಾಚಿತ್ರಗಳನ್ನು ತುಮಕೂರು ಜಿಲ್ಲೆಯಲ್ಲಿಯೇ ತೆಗೆದಿರತಕ್ಕದ್ದು. ಛಾಯಚಿತ್ರದ ಅಳತೆ 12”x18” (A3 size) ಇರಬೇಕು. ಛಾಯಾಚಿತ್ರಗಳನ್ನು ಸೆಪ್ಟೆಂಬರ್ 20ರೊಳಗಾಗಿ E-MAIL ID: Wildweektumakuru@gmail.com ಗೆ ಸಲ್ಲಿಸಬೇಕು. ಛಾಯಾಚಿತ್ರಗಳೊಂದಿಗೆ ಸ್ವರ್ಧಿಯ ಹೆಸರು, ಮೊಬೈಲ್ ನಂಬರ್, ಛಾಯಾಚಿತ್ರ ತೆಗೆದ ಸ್ಥಳವನ್ನು ಕಡ್ಡಾಯವಾಗಿ ನಮೂದಿಸಬೇಕು. ಛಾಯಾಚಿತ್ರಗಳ ಆಯ್ಕೆಯಲ್ಲಿ ತೀರ್ಪುಗಾರರ ತೀರ್ಮಾನವೇ ಅಂತಿಮ. ಸ್ಪರ್ಧೆಯ ವಿಜೇತರಿಗೆ ಆಕರ್ಷಕ ಬಹುಮಾನ ಹಾಗೂ ಪ್ರಮಾಣ ಪತ್ರವನ್ನು ನೀಡಲಾಗುವುದು. ಆಯ್ಕೆಯಾದ ಛಾಯಾಚಿತ್ರಗಳನ್ನು ಸಾರ್ವಜನಿಕ ಪ್ರದರ್ಶನಕ್ಕಿಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಉಪ ವಲಯ ಅರಣ್ಯಾಧಿಕಾರಿ ಸುಮನ್(9019588155) ಹಾಗೂ ವಿಪಿನ್ ರಾಯ್(9901087984) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ತುಮಕೂರು ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ತುಮಕೂರು: ಜಗತ್ಪ್ರಸಿದ್ಧ ಮೈಸೂರು ದಸರಾ ಉತ್ಸವದ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 3 ರಿಂದ 11ರವರೆಗೆ ಮೈಸೂರಿನ ಹಳೆಯ ಡಿ.ಸಿ. ಕಚೇರಿ ಬಳಿ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ “ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2024”ನ್ನು ಏರ್ಪಡಿಸಲಾಗಿದೆ. ಈ ಮೇಳದಲ್ಲಿ ಕನ್ನಡ ಪ್ರಕಾಶಕರು/ ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ 1,000 ರೂ.ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಇವರ ಹೆಸರಿನಲ್ಲಿ ಸಲ್ಲಿಸಬೇಕು. ಆಸಕ್ತರು ಕನ್ನಡ ಪುಸ್ತಕ ಪ್ರಾಧಿಕಾರ ಕಚೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕಚೇರಿ ಅಥವಾ ಪ್ರಾಧಿಕಾರದ ವೆಬ್ ಸೈಟ್ https://kpp.karnataka.gov.in ನಿಂದ ಉಚಿತವಾಗಿ ನಿಗಧಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ 1,000 ರೂ.ಗಳ ಡಿ.ಡಿ. ಲಗತ್ತಿಸಿ ಸೆಪ್ಟೆಂಬರ್ 30ರ ಸಂಜೆ 5 ಗಂಟೆಯೊಳಗೆ ಆಡಳಿತಾಧಿಕಾರಿಗಳು, ಕನ್ನಡ…
ತುಮಕೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಹಾವೇರಿ ಜಿಲ್ಲೆ ಗೋಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಹಯೋಗದಲ್ಲಿ “ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು” ಕುರಿತು 3 ದಿನಗಳ ಕಮ್ಮಟವನ್ನು ಹಮ್ಮಿಕೊಂಡಿದ್ದು, ಕಮ್ಮಟದಲ್ಲಿ ಭಾಗವಹಿಸಲಿಚ್ಛಿಸುವವರಿಂದ ಅರ್ಜಿ ಆಹ್ವಾನಿಸಿದೆ. ಗೋಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಅಕ್ಟೋಬರ್ ಕೊನೆಯ ವಾರದಲ್ಲಿ ಕಮ್ಮಟವನ್ನು ನಡೆಸಲು ಉದ್ದೇಶಿಸಿದ್ದು, ಆಸಕ್ತ 20 ರಿಂದ 45 ವರ್ಷದೊಳಗಿನ ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 8 ಕಡೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಜಾಲತಾಣ http://karnatakasahithyaacademy.org ಅನ್ನು ವೀಕ್ಷಿಸಬಹುದಾಗಿದೆ ಎಂದು ಅಕಾಡೆಮಿ ರಿಜಿಸ್ಟ್ರಾರ್ ಎನ್. ಕರಿಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರವು ರೈತರಿಗೆ ಉಚಿತವಾಗಿ ಆಧುನಿಕ ಹೈನುಗಾರಿಕೆ ತರಬೇತಿ ನೀಡಲು ಉದ್ದೇಶಿಸಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ. ಆಧುನಿಕ ಹೈನುಗಾರಿಕೆ ತರಬೇತಿಯನ್ನು ಸೆಪ್ಟೆಂಬರ್ 25 ಮತ್ತು 26ರಂದು ಹಮ್ಮಿಕೊಳ್ಳಲಾಗಿದೆ. ಆಸಕ್ತರು ನಿಗದಿಪಡಿಸಿದ ದಿನಾಂಕದಂದು ಬೆಳಿಗ್ಗೆ 10 ಗಂಟೆಗೆ ತರಬೇತಿಗೆ ಹಾಜರಾಗಬಹುದಾಗಿದೆ. ತರಬೇತಿಗೆ ಹಾಜರಾಗಲಿಚ್ಛಿಸುವವರು ಇತ್ತೀಚಿನ 2 ಪಾಸ್ ಪೋರ್ಟ್ ಅಳತೆ ಭಾವಚಿತ್ರ, ರೈತರ ಫ್ರೂಟ್ ಐಡಿ ಸಂಖ್ಯೆ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ(ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ)ವನ್ನು ಕಡ್ಡಾಯವಾಗಿ ತರಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶು ವೈದ್ಯಕೀಯ ಸಂಸ್ಥೆ/ ದೂರವಾಣಿ ಸಂಖ್ಯೆ 0816–2251214ನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಜಿಲ್ಲೆಯ ವ್ಯಾಪ್ತಿಗೊಳಪಡುವ ತುಮಕೂರು ನಗರ ವಿಧಾನ ಸಭಾ ಕ್ಷೇತ್ರದಲ್ಲಿ ಹೊಸದಾಗಿ 12 ಮತಗಟ್ಟೆ ಸ್ಥಾಪನೆ ಮಾಡಲು ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದೆಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಗಮನಕ್ಕೆ ತಂದರು. ತಮ್ಮ ಕೊಠಡಿಯಲ್ಲಿ ಸೋಮವಾರ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ತುಮಕೂರು ನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಹೊಸದಾಗಿ 12 ಮತಗಟ್ಟೆಗಳನ್ನು ಸ್ಥಾಪಿಸಲು ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು. ಹೊಸ ಮತಗಟ್ಟೆಗಳ ವಿವರ: ನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2 ಕಿ.ಮೀ.ಗಿಂತ ಹೆಚ್ಚು ದೂರವಿರುವ ಮತಗಟ್ಟೆ ಹಾಗೂ 1500ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಹೊಸದಾಗಿ ಮತಗಟ್ಟೆಗಳನ್ನು ಸ್ಥಾಪಿಸಲು ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದ್ದು, ನಗರ ವ್ಯಾಪ್ತಿಯ 2 ಕಿ.ಮೀ.ಗಿಂತ ಹೆಚ್ಚು ದೂರವಿರುವ…
ತುಮಕೂರು: ಭಾರತೀಯ ಹವಾಮಾನ ಇಲಾಖೆ ವರದಿಯಂತೆ ಜಿಲ್ಲೆಯಲ್ಲಿ ಇನ್ನೆರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಗೂಗಲ್ ಮೀಟ್ ಮೂಲಕ ಮಾತನಾಡಿ, ಮಳೆಯಿಂದ ಯಾವುದೇ ಜನ, ಜಾನುವಾರುಗಳಿಗೆ ಜೀವ ಹಾನಿಯಾಗದಂತೆ ನದಿ, ಹಳ್ಳ ಕೆರೆ ದಡಗಳಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ, ಕರುಗಳನ್ನು ಮೇಯಿಸುವುದು ಹಾಗೂ ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನದಿದಡಗಳಲ್ಲಿ ಅಪಾಯವಿರುವ ಸೇತುವೆಗಳಲ್ಲಿ ಫೋಟೋ, ಸೆಲ್ಪಿಗಳನ್ನು ತೆಗೆಯದಂತೆ ಯುವಕ, ಯುವತಿಯರಿಗೆ ಮತ್ತು ಸಾರ್ವಜನಿಕರಿಗೆ ತಿಳಿ ಹೇಳಬೇಕು. ಭಾರೀ ಮಳೆ ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಡಂಗೂರ ಸಾರಬೇಕು ಹಾಗೂ ಧ್ವನಿ ವರ್ಧಕದ ಮೂಲಕ ಜಾಗೃತಿ ಮೂಡಿಸಬೇಕು ಎಂದು ಗ್ರಾಮ ಆಡಳಿತ ಅಧಿಕಾರಿಗಳಿಗೆ ತಿಳಿಸಿದ್ದಾರೆ. ನಿರಂತರ…
ಆಂಧ್ರಪ್ರದೇಶ: ತಿರುಪತಿ ಲಡ್ಡು ಅಪವಿತ್ರಗೊಂಡಿರುವ ಹಿನ್ನೆಲೆ ಇಂದು ದೇವಸ್ಥಾನದ ಶುದ್ಧೀಕರಣ ಕಾರ್ಯ ನಡೆಯಿತು. ತಿರುಪತಿ ತಿರುಮಲ ಆಡಳಿತ ಮಂಡಳಿಯು ರಾಮಕೃಷ್ಣ ದೀಕ್ಷಿತ್ ನೇತೃತ್ವದಲ್ಲಿ ಹೋಮ ನಡೆಯಿತು. ವಾಸ್ತು ಶುದ್ಧಿ, ಯಂತ್ರ ಶುದ್ಧಿ, ಸ್ಥಳ ಶುದ್ಧಿ , ಪಂಚಗವ್ಯ ಸಂಪ್ರೋಕ್ಷಣ ಮೂಲಕ, ಅನ್ನ ಪ್ರಸಾದ ತಯಾರಾಗುವ ಸ್ಥಳ, ಲಡ್ಡು ತಯಾರಾಗುವ ಸ್ಥಳ, ತುಪ್ಪ ಬಳಸುತ್ತಿದ್ದ ಎಲ್ಲಾ ಸ್ಥಳಗಳಲ್ಲಿ ಪಂಚಗವ್ಯ ಸಂಪ್ರೋಕ್ಷಣೆ ನಡೆಸುವ ಮೂಲಕ ತಿಮ್ಮಪ್ಪನ ಭಕ್ತರಿಗೆ ನಂಬಿಕೆ ಮೂಡಿಸಲಾಯಿತು. ತಿರುಮಲ ತಿರುಪತಿ ದೇವಸ್ಥಾನದಲ್ಲಿ ಲಡ್ಡು ಅಪವಿತ್ರ ವಿಚಾರಕ್ಕೆ ಸಂಬಂಧಿಸಿದಂತೆ ತುಪ್ಪ ಖರೀದಿಗೆ ಇದ್ದ ನಿಯಮಗಳ ಬದಲಾವಣೆ ಸೇರಿದಂತೆ ಅಕ್ರಮಗಳ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸಲಾಗುವುದು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರ ಜಾಮೀನು ಅರ್ಜಿಯನ್ನು ಇಂದು ವಿಚಾರಣೆ ನಡೆಸಲಾಯಿತು. ಇದೇ ವೇಳೆ ಮುಂದಿನ ವಿಚಾರಣೆಯನ್ನು ಕೋರ್ಟ್ ಸೆಪ್ಟಂಬರ್ 27ಕ್ಕೆ ಮುಂದೂಡಿದೆ. ಇನ್ನೊಂದೆಡೆ ಎ1 ಪವಿತ್ರಾ ಗೌಡ ಕೂಡ ಜಾಮೀನು ಅರ್ಜಿ ಸಲ್ಲಿಸಿದ್ದು, ಅವರ ಜಾಮೀನು ಅರ್ಜಿಯನ್ನು ಸೆಪ್ಟಂಬರ್ 25ಕ್ಕೆ ಮುಂದೂಡಲಾಗಿದೆ. ದರ್ಶನ್ ಮತ್ತು ಪವಿತ್ರಾ ಗೌಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವ ಹಿನ್ನೆಲೆ ಎಸ್ ಪಿಪಿ ಪ್ರಸನ್ನ ಕುಮಾರ್ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋಡಿರುವ ಹಿನ್ನೆಲೆ, ನ್ಯಾಯಾಲಯ ಅವಕಾಶ ನೀಡಿದೆ. ಹೀಗಾಗಿ ಪವಿತ್ರ ಗೌಡ ಹಾಗೂ ದರ್ಶನ್ ಜಾಮೀನು ಅರ್ಜಿಯನ್ನು ಮುಂದೂಡಿ 57ನೇ ಸಿಸಿಹೆಚ್ ನ್ಯಾಯಾಲಯದ ಜಡ್ಜ್ ಜೈಶಂಕರ್ ಆದೇಶ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಬೆಂಗಳೂರು: ವಯ್ಯಾಲಿಕಾವಲ್ ಬಸಪ್ಪಗಾರ್ಡನ್ ನ ಮಹಾಲಕ್ಷ್ಮಿ ಹತ್ಯೆ ಪ್ರಕರಣದಲ್ಲಿ ಮಹತ್ವದ ಮಾಹಿತಿ ದೊರೆತಿದ್ದು, ಶೀಘ್ರವೇ ಆರೋಪಿಗಳನ್ನ ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ಯೆಯಲ್ಲಿ ಒಬ್ಬರಿದ್ದಾರೋ, ಇಬ್ಬರಿದ್ದಾರೋ ಗೊತ್ತಿಲ್ಲ. ಆದರೆ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲಿದ್ದೇವೆ ಎಂದು ಅವರು ಹೇಳಿದರು. ಇನ್ನೂ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಅಕ್ರಮ ನಡೆದಿದೆ ಎಂದು ಬಿಜೆಪಿಯವರು ರಾಜ್ಯಪಾಲರಿಗೆ ದೂರು ನೀಡುವುದನ್ನು ಬೇಡ ಎನ್ನಲಾಗುವುದಿಲ್ಲ. ಆದರೆ ಅವರು ಮಾಡಿರುವ ಆರೋಪದ ಬಗ್ಗೆ ತಮಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಇದೇ ವೇಳೆ ತಿಳಿಸಿದರು. ಯಾದಗಿರಿ ಪಿಎಸ್ ಐ ಪರಶುರಾಮ್ ಅವರ ಕುಟುಂಬಕ್ಕೆ ವಿಮೆ ಆಧರಿಸಿ 25 ಲಕ್ಷ ರೂ.ಗಳ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಅವರ ಪತ್ನಿಗೆ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಲಾಗಿತ್ತು. ಆದರೆ ತಮಗೆ ಬೇರೆ ಇಲಾಖೆಯಲ್ಲಿ ಕೆಲಸ ಕೊಡಿಸುವಂತೆ ಮನವಿ ಮಾಡಿದ್ದಾರೆ. ಹೀಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅದರ ಕುರಿತು ಪರಿಶೀಲನೆ ನಡೆಸುತ್ತಿದೆ ಎಂದು…