Author: admin

ಬೆಳಗಾವಿ: ಗೃಹ ಲಕ್ಷ್ಮೀ ಹಣವನ್ನು ಕೂಡಿಟ್ಟು, ಗ್ರಾಮದೇವತೆಗೆ ಪೂಜೆ ಸಲ್ಲಿಸಿ ಊರಿಗೆ ಹೋಳಿಗೆ ಊಟ ಹಾಕಿಸಿದ್ದ ವೃದ್ಧೆ ಇಂದು ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾಗಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ವೃದ್ಧೆಯಾದ ಅಕ್ಕಾತಾಯಿ ಲಂಗೋಟಿ ಅವರು ತನ್ನ ಹತ್ತು ಕಂತಿನ ಗೃಹಲಕ್ಷ್ಮಿ ಹಣವನ್ನ ಕೂಡಿಟ್ಟು ನಿನ್ನೆ ಗ್ರಾಮದೇವತೆಗೆ ಪೂಜೆ ಸಲ್ಲಿಸಿ ಊರಿಗೆ ಹೋಳಿಗೆ ಊಟ ಹಾಕಿಸಿದ್ದರು. ಇಂದು ಬೆಳಗಾವಿ ಏರ್ ಪೋರ್ಟ್ನಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಅಕ್ಕಾತಾಯಿಯನ್ನು ಸಿಎಂಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರಿಚಯಿಸಿದರು. ಈ ವೇಳೆ ಸಿಎಂಗೆ ಕಂಬಳಿ ಹೊದಿಸಿ, ಹಾರ ಹಾಕಿ ಹೋಳಿಗೆ ತಿನ್ನಿಸಿದ್ದಾರೆ. ಊಟ ಹಾಕಿಸಿದ ವಿಚಾರ ತಿಳಿದ ಸಿಎಂ ಸಂತಸ ವ್ಯಕ್ತಪಡಿಸಿದ್ದಾರೆ. ಗೃಹಲಕ್ಷ್ಮೀ ಯೋಜನೆ ನಿಲ್ಲಿಸಬೇಡಿ ಎಂದು ಅಕ್ಕಾತಾಯಿ ಮನವಿ ಮಾಡಿದ್ದು, ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲವೆಂದು ಸಿಎಂ ಭರವಸೆ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಪಾವಗಡ: ಹಿಂದಿ ಭಾಷಾ ಶಿಕ್ಷಕರಿಗೆ ಪುನಶ್ಚೇತನ ಕಾರ್ಯಾಗಾರ ವೈ ಎನ್ ಹೊಸಕೋಟೆ ಹೋಬಳಿ ಪಾವಗಡ ತಾಲ್ಲೂಕ್ ವಾಸವಿ ವಿದ್ಯಾನಿಕೇತನ ಆಂಗ್ಲ ಮಾ. ಪ್ರೌಢಶಾಲೆಯಲ್ಲಿ ಶಿಕ್ಷಣ ಇಲಾಖೆಯಿಂದ ಹಿಂದಿ ಭಾಷಾ ಶಿಕ್ಷಕರ ಪುನರ್ ಚೇತನ ಕಾರ್ಯಗಾರವನ್ನು ಎಚ್.ಚಿತ್ತಯ ಡಯಟ್ ಉಪನ್ಯಾಸಕರು ಉದ್ಘಾಟಿಸಿದರು. ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿ ವಾಸವಿ ವಿದ್ಯಾನಿಕೇತನ ಶಾಲೆಯಲ್ಲಿ ಉದ್ಘಾಟನೆ ಮಾಡಿ ಮಾತನಾಡಿ, 10ನೇ ತರಗತಿಯ ಫಲಿತಾಂಶ ಅಭ್ಯುದಯಕ್ಕೆ ಶಾಲೆಯಲ್ಲಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣವನ್ನು ನೀಡುವುದು, ಶಾಲೆಯಲ್ಲಿ ಘಟಕದ ವಿಷಯ ಮುಗಿದ ನಂತರ ಘಟಕ ಪರೀಕ್ಷೆಯನ್ನು ಮಾಡಿ ಮಂದಗತಿಯಲ್ಲಿ ಕಲಿಯುವಂತಹ ಮಕ್ಕಳ ಕಲಿಕೆಯ ಬಗ್ಗೆ ವಿಶೇಷ ಗಮನ ಹರಿಸುವಂತೆ ತಿಳಿಸಿದರು. ವಾಸವಿ ವಿದ್ಯಾನಿಕೇತನ ಆಡಳಿತ ಅಧಿಕಾರಿಗಳಾದ ಎನ್.ಜಿ.ಶ್ರೀನಿವಾಸ್ ಮಾತನಾಡಿ, ಈ ಶಾಲೆಯಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಂಡಿರುವುದು ನನಗೆ ತುಂಬಾ ಸಂತೋಷವಾಗಿದ್ದು, ಶಿಕ್ಷಕರು ನಮ್ಮ ತಾಲೂಕಿನಲ್ಲಿ ಬಡ ಮಕ್ಕಳು ಸಾಕಷ್ಟು ಇದ್ದು, ಈ ಮಕ್ಕಳು ಅನುತ್ತೀರ್ಣ ರಾಗದೆ ಎಲ್ಲಾ ಮಕ್ಕಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬೇಕೆಂಬುದೇ ನನ್ನ ಅಭಿಲಾಷೆ ಎಂದು…

Read More

ನವದೆಹಲಿ: ಪೂಜೆಗೆ ಪ್ರತಿಫಲ ಸಿಗಬೇಕಾದ್ರೆ ನೀನು ನನ್ನ ಜೊತೆಗೆ ದೈಹಿಕ ಸಂಪರ್ಕ ಹೊಂದಬೇಕು ಅಂತ ಪೂಜಾರಿಯೊಬ್ಬ ಮಹಿಳೆಗೆ ಕಿರುಕುಳ ನೀಡಿರುವ  ಘಟನೆ ನಡೆದಿದ್ದು, ಪೂಜಾರಿ ಮಾತಿನಿಂದ ರೊಚ್ಚಿಗೆದ್ದ ಮಹಿಳೆ ಪೂಜಾರಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾಳೆ. ರೇಖಾ ಅಂಬೇಡ್ಕರ್ ಎಂಬುವವರು ಎಕ್ಸ್‌ ನಲ್ಲಿ ಈ ವಿಡಿಯೋ ಪೋಸ್ಟ್‌ ಮಾಡಿದ್ದು, ಘಟನೆ ಬಗ್ಗೆ ಹಂಚಿಕೊಂಡಿದ್ದಾನೆ. ಈತ ಪೂಜೆ ಮಾಡಲು ಬಂದು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ನನ್ನ ಜೊತೆ ದೈಹಿಕ ಸಂಪರ್ಕ ಬೆಳೆಸಿದರೆ ಮಾತ್ರ ನಿನ್ನ ಪೂಜೆ ಸಫಲವಾಗಿತ್ತೆ ಎಂದು ಹೇಳಿದ್ದಾನೆ. ಇದರಿಂದ ಕೋಪಗೊಂಡು ಮಹಿಳೆ ಆತನಿಗೆ ಥಳಿಸಿದ್ದಾಳೆ ಎಂದು ಬರೆದುಕೊಳ್ಳಲಾಗಿದೆ. ಜನರ ನಂಬಿಕೆಗಳನ್ನು ಮೌಢ್ಯತೆಗೆ ಬಳಸಿಕೊಂಡು ಕೆಲವರು ಮೋಸ ಮಾಡುತ್ತಾರೆ. ತಮ್ಮ ಕಾಮವನ್ನು ತಣಿಸಿಕೊಳ್ಳಲು ಪೂಜೆಯ ನೆಪದಲ್ಲಿ ಕಿರುಕುಳ ನೀಡುತ್ತಾರೆ. ಜನರು ಇಂತಹ ವಿಷಯಗಳಲ್ಲಿ ಎಚ್ಚರಿಕೆಯಿಂದಿರಬೇಕಾದದ್ದು ತುಂಬಾ ಅಗತ್ಯವಾಗಿದೆ. ತನ್ನೊಂದಿಗೆ ಲೈಂಗಿಕ ಸಂಪರ್ಕ ನಡೆಸಿದರೆ, ನಿಮ್ಮ ಸಮಸ್ಯೆ ಬಗೆಹರಿಯುತ್ತದೆ ಎಂದು ಪೂಜಾರಿ ಹೇಳಿದ್ದಾನೆ. ಸಮಸ್ಯೆ ಬಗೆ ಹರಿಸುವುದಾಗಿ ಬಂದ ಪೂಜಾರಿಯೇ ಆ ಕುಟುಂಬಕ್ಕೆ ದೊಡ್ಡ…

Read More

ತುಮಕೂರು: ತಾಲೂಕು ಬುಳ್ಳಸಂದ್ರ ಗ್ರಾಮದಲ್ಲಿ ವಿಷಾಹಾರ ಸೇವಿಸಿ ಮೂವರು ಮಹಿಳೆಯರು ಮೃತಪಟ್ಟಿರುವ ಘಟನೆ ನಡೆದಿದೆ. ಕಾಟಮ್ಮ(45), ತಿಮ್ಮಕ್ಕ(85), ಗಿರಿಯಮ್ಮ (38) ಮೃತಪಟ್ಟವರಾಗಿದ್ದಾರೆ. ವಿಷಾರಸೇವಿಸಿ  ಸೇವಿಸಿ ಮೂವರು ಮೃತಪಟ್ಟಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಗ್ರಾಮದಲ್ಲಿ ನಡೆದ ಜಾತ್ರೆ ಬಳಿಕ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಮನೆಯಲ್ಲೇ ಅಡುಗೆ ಮಾಡಿ ಬಡಿಸಲಾಗಿತ್ತು. ಊಟ ಸೇವಿಸಿ ಗ್ರಾಮದ 18 ಮಹಿಳೆಯರು 12 ಪುರುಷರು ಅಸ್ವಸ್ತರಾಗಿದ್ದು,  ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮದ ಶಾಲಾ ಆವರಣದಲ್ಲಿ  ತಾತ್ಕಾಲಿಕ ಆಸ್ಪತ್ರೆ ತೆರೆಯಲಾಗಿದ್ದು  ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಮಂಜುನಾಥ್ ಅವರ ಪ್ರಕಾರ ಬುಳ್ಳಸಂದ್ರದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರಸಾದ ಸೇವಿಸಿದ ಕೆಲವರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ಆದರೆ ಸಾವು ಸಂಭವಿಸಿರುವುದು ಇದೇ ಕಾರಣಕ್ಕೆ ಎಂಬುದು ಸ್ಪಷ್ಟವಿಲ್ಲ ಮೃತಪಟ್ಟವರು ಹಾಗೂ ಅನಾರೋಗ್ಯಕ್ಕೆ ಒಳಗಾದವರ ಕುರಿತು ಪರೀಕ್ಷೆ ನಡೆಸುತ್ತಿದ್ದು ವರದಿ ಬಂದ ನಂತರವಷ್ಟೇ ಕಾರಣ ತಿಳಿಯಲಿದೆ ಎಂದು ತಿಳಿಸಿದ್ದಾರೆ. ಮಧುಗಿರಿ ಉಪವಿಭಾಗಾಧಿಕಾರಿ ಶಿವಪ್ಪ ಅವರ ಪ್ರಕಾರ ಆರೋಗ್ಯ ಇಲಾಖೆ ವತಿಯಿಂದ ಆರೋಗ್ಯ…

Read More

ಶ್ರೀ ಕೃಷ್ಣ ಜನ್ಮಾಷ್ಟಮಿಯ ಹಬ್ಬದ ದಿನದಂದು ಈ  ವಸ್ತುಗಳನ್ನು ತರುವುದರಿಂದ ಮನೆಯಲ್ಲಿ ಅದೃಷ್ಟ ಎನ್ನುವುದು ನಡೆಸುತ್ತದೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 Provided by ಶ್ರೀಕೃಷ್ಣನಿಗೆ ಕೆಲವು ವಸ್ತುಗಳೆಂದರೆ ತುಂಬಾನೇ ಇಷ್ಟ ಅಂತಹ ವಸ್ತುಗಳನ್ನು ಮನೆಗೆ ತನ್ನಿ ಶ್ರೀಕೃಷ್ಣನ ಅಪಾರ ಅನುಗ್ರಹ ಪ್ರಾಪ್ತಿಯಾಗುತ್ತದೆ  ಯಾವೆಲ್ಲ ವಸ್ತುಗಳನ್ನು ತರಬೇಕು ನೋಡೋಣ: * ಈ ದಿನ ಭಗವಾನ್ ವಿಷ್ಣು…

Read More

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗ್ರಾಮೀಣ ನೀರು ಪೂರೈಕೆ ಮತ್ತು ನೈರ್ಮಲ್ಯ ಇಲಾಖೆಯ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಜೆಜೆಎಂ ಕಾಮಗಾರಿಯ ಬಿಲ್ ಪಾಸ್ ಮಾಡಲು ಎಇಇ ಉಮಾ ಮಹೇಶ್ ಸೂಚನೆ ಮೇರೆಗೆ ಗುತ್ತಿಗೆದಾರ ಚಿಕ್ಕೇಗೌಡ ಎಂಬುವರಿಂದ 1.5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಪಡೆಯುವಾಗ ಹೊರಗುತ್ತಿಗೆ ಎ.ಇ. ಶಶಿಕುಮಾರ್, ಎ.ಇ. ಕಿರಣ್ ಕುಮಾರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತುಮಕೂರು ಲೋಕಾಯುಕ್ತ ಎಸ್.ಪಿ.ಲಕ್ಷ್ಮೀನಾರಾಯಣ್ ನೇತೃತ್ವದಲ್ಲಿ ಡಿ.ವೈ.ಎಸ್.ಪಿ.ಗಳಾದ ಉಮಾಶಂಕ‌ರ್, ಹೆಚ್. ಜಿ. ರಾಮಕೃಷ್ಣ, ಇನ್ಸ್ ಪೆಕ್ಟರ್ ಗಳಾದ ಮಹಮ್ಮದ್ ಸಲೀಂ, ಶಿವರುದ್ರಪ್ಪ ಮೇಟಿ, ಸುರೇಶ್ ಗೌಡ ಮತ್ತು ಸಿಬ್ಬಂದಿ ವರ್ಗ ಸೋಮವಾರ ಮಧ್ಯಾಹ್ನ ದಿಢೀರ್ ದಾಳಿ ಮಾಡಿ ಮೂರು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಮೂರು ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ತುಮಕೂರು ಲೋಕಾಯುಕ್ತ ಕಚೇರಿ ಮೂಲಗಳಿಂದ ತಿಳಿದು ಬಂದಿದೆ. ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ಔರಾದ: ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌಧರಿ ಗ್ರಾಮದ ಸಕಾ೯ರಿ ಪ್ರೌಢ ಶಾಲಾ ಉಸ್ತುವಾರಿ ಸಮಿತಿ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಸವ೯ಸದಸ್ಯರ ಸಹಾನುಮತದಿಂದ ಎಸ್ ಡಿ ಎಮ್ ಸಿ ಅಧ್ಯಕ್ಷರಾಗಿ ಎಮ್.ಡಿ. ನಯೂಮ್ ಆಯ್ಕೆಯಾದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಮಂತರಾವ್, ಗ್ರಾಮ ಪಂಚಾಯಿತಿ ಸದಸ್ಯರಾದ ದೇವಿದಾಸ ಮಾಳಗೆ ಹಾಗೂ ಸಹಕಾರಿ ಹಿರಿಯ ಪ್ರಾಥಮಿಕ ಶಾಲಾ ಎಸ್ ಡಿ ಎಮ್ ಸಿ, ಅಧ್ಯಕ್ಷರಾದ ಮಹೇಶ್ ಚಾಂಬೋಳೆ PK PS, ಅಧ್ಯಕ್ಷರಾದ ರಾಜಕುಮಾರ ಪಟೇಲ್, ಪ್ರಭಾಕರ ಇಂಗಳೆ ರಾಜು H ಹಾಗೂ ಮುಖ್ಯ ಗುರುಗಳು ಹಾಗೂ ಸಹ ಶಿಕ್ಷಕರು ಶಾಲೆಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ಪಾಲಕರು ಸೇರಿದಂತೆ ಉಪಸ್ಥಿತಿಯಲ್ಲಿ ಇದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಪಾವಗಡ: ಇಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪಾವಗಡ ತಾಲ್ಲೂಕು ಕೋಟಗುಡ್ಡದ ಸಹನಾ ಆಂಗ್ಲ ಶಾಲೆಯಲ್ಲಿ ರಾಧಾ-ಶ್ರೀಕೃಷ್ಣ ವೇಷ ಸ್ಪರ್ಧೆ ಮತ್ತು ಪ್ರದರ್ಶನವನ್ನು ಹಮ್ಮಿಕೊಂಡಿದ್ದು, ಮಕ್ಕಳು ವಿವಿಧ ವೇಷಭೂಷಣಗಳಿಂದ ರಾಧಾ ಮತ್ತು ಶ್ರೀಕೃಷ್ಣವೇಷವನ್ನು ಧರಿಸಿಕೊಂಡು ಬಂದಿದ್ದರು. ಶಾಲೆಯಲ್ಲಿ ಜೋಕಾಲಿ ಆಡಿ ಮೊಸರು ಕುಡಿಕೆ ಹೊಡೆದು ಸಂಭ್ರಮಿಸಿದರು. ಸಹನಾ ಆಡಳಿತ ಮಂಡಳಿ ಆಡಳಿತಾಧಿಕಾರಿಗಳಾದ ಶ್ರೀನಿವಾಸ್ ರವರು ಮಕ್ಕಳಿಗೆ ಬಹುಮಾನವನ್ನು ವಿತರಿಸಿ ಪೋಷಕರಿಗೆ, ಶಿಕ್ಷಕರಿಗೆ ಮತ್ತು ಮಕ್ಕಳಿಗೆ ಶುಭಾಶಯಗಳನ್ನು ಕೋರಿದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಬೆಂಗಳೂರು: ಕ್ಯಾಬ್ ಚಾಲಕನೊಬ್ಬ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿದ್ದು, ಪುತ್ರನ ಸಾವಿನ ಸುದ್ದಿಕೇಳಿ ಆತನ ತಾಯಿ ಕೂಡ ಮೃತಪಟ್ಟಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ. ಕಾಮಾಕ್ಷಿಪಾಳ್ಯದ ಕಾವೇರಿಪುರ ನಿವಾಸಿ ಅರುಣ್ ಕುಮಾರ್ (37) ಸಾವಿಗೆ ಶರಣಾದ ಯುವಕನಾಗಿದ್ದಾನೆ. ಇವರ ತಾಯಿ ಸರಸ್ವತಿ(73) ಪುತ್ರನ ಸಾವಿನ ಸುದ್ದಿ ತಿಳಿದು 3 ತಾಸಿನ ಬಳಿಕ ತಾಯಿ ಕೂಡ ಸಾವನ್ನಪ್ಪಿದ್ದಾರೆ. ಮೃತ ಸ್ವರಸ್ವತಿಗೆ ಮೂವರು ಗಂಡ ಮಕ್ಕಳು. ಈ ಪೈಕಿ ಹಿರಿಯ ಮತ್ತು ಕೊನೆಯ ಮಗ ಪ್ರತ್ಯೇಕವಾಗಿ ವಾಸವಾಗಿದ್ದಾರೆ. 2ನೇ ಪುತ್ರ ಅರುಣ್ ಕುಮಾರ್ ಮತ್ತು ತಾಯಿ ಸರಸ್ವತಿ ಜತೆ ಕಾವೇರಿಪುರದಲ್ಲಿ ವಾಸವಾಗಿದ್ದರು. ಅರುಣ್ ಕುಮಾರ್ ಅವಿವಾಹಿತನಾಗಿದ್ದು, ಕ್ಯಾಬ್ ಚಾಲನಾಗಿದ್ದ. ತಾಯಿಯ ಅನಾರೋಗ್ಯ ಹಾಗೂ ಆರ್ಥಿಕ ಸಂಕಷ್ಟದಿಂದ ಸಾಕಷ್ಟು ಸಾಲ ಮಾಡಿಕೊಂಡಿದ್ದ. ಒಂದು ವರ್ಷದ ಹಿಂದೆ ಸ್ನಾನದ ಕೋಣೆಯಲ್ಲಿ ತಾಯಿ ಸರಸ್ವತಿ ಕಾಲು ಜಾರಿ ಬಿದ್ದು ಬೆನ್ನು ಮೂಳೆ ಮುರಿದುಕೊಂಡಿದ್ದು, ಅನಾರೋಗ್ಯಕ್ಕೀಡಾಗಿ ಹಾಸಿಗೆ ಹಿಡಿದಿದ್ದರು. ತನ್ನ ಸಾಲ ಹಾಗೂ ತಾಯಿ ಹಾಸಿಗೆ ಹಿಡಿದಿರುವುದರಿಂದ…

Read More

ಬೆಂಗಳೂರು: ಮದ್ಯದ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಮದ್ಯ ಪ್ರಿಯರಿಗೆ ಇದು ಸಿಹಿ ಸುದ್ದಿ. ಶೀಘ್ರವೇ ಮದ್ಯದ ಬೆಲೆ ಇಳಿಕೆಯಾಗಲಿದೆಯಂತೆ!. ನೆರೆ ರಾಜ್ಯಗಳ ಮದ್ಯದ ದರಕ್ಕೆ ಅನುಗುಣವಾಗಿ ರಾಜ್ಯದಲ್ಲಿ ಮದ್ಯ ಮತ್ತು ಬಿಯರ್ ಬೆಲೆಗಳನ್ನು ಪರಿಷ್ಕರಿಸಲು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಪರಿಷ್ಕೃತ ದರ ಆಗಸ್ಟ್ 27ರಿಂದಲೇ ಜಾರಿಗೆ ಬರಲಿದೆ.  ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವ ಪ್ರೀಮಿಯಂ ಬ್ರಾಂಡ್ ಗಳ ದರದಲ್ಲಿ ಸ್ವಲ್ಪಮಟ್ಟಿಗೆ ಇಳಿಕೆಯಾಗಲಿದೆಯಂತೆ. ಕರಡು ಅಧಿಸೂಚನೆ ಹೊರಡಿಸಿ ಒಂದೂವರೆ ತಿಂಗಳಾದರೂ ಅಂತಿಮಗೊಳಿಸದ ಕಾರಣ ಮಾರುಕಟ್ಟೆಯಲ್ಲಿ ಪ್ರೀಮಿಯಂ ಬ್ರಾಂಡ್ ಗಳ ಮದ್ಯಕ್ಕೆ ಭಾರೀ ಕೊರತೆ ಉಂಟಾಗಿತ್ತು. ಸರ್ಕಾರ ಆಕ್ಷೇಪಣೆ ಸ್ವೀಕರಿಸಿ ಅಂತಿಮ ಅಧಿಸೂಚನೆ ಹೊರಡಿಸಿದೆ. ಅಂತಿಮ ಅಧಿಸೂಚನೆಯಂತೆ ಸ್ಲ್ಯಾಬ್ ಗಳ ಸಂಖ್ಯೆ 18 ರಿಂದ 16ಕ್ಕೆ ಇಳಿಸಲಾಗಿದೆ. ಮೊದಲ ಮೂರು ಸ್ಲ್ಯಾಬ್ ಗಳಲ್ಲಿ ದರದ ವ್ಯತ್ಯಾಸ ಆಗುವುದಿಲ್ಲ. ನಾಲ್ಕನೇ ಸ್ಲ್ಯಾಬ್ ನಲ್ಲಿ ಮದ್ಯದ ದರ ಸ್ವಲ್ಪ ಏರಿಕೆಯಾಗಲಿದೆ. ಉಳಿದಂತೆ ಐದನೇ ಸ್ಲಾಬ್ ಬಳಿಕ 16ನೇ ಸ್ಲ್ಯಾಬ್ ವರೆಗೆ ದರ ಕಡಿಮೆಯಾಗಲಿದೆ. ಆ ಸ್ಲ್ಯಾಬ್ ಗಳಲ್ಲಿನ ವಿಸ್ಕಿ,…

Read More