Subscribe to Updates
Get the latest creative news from FooBar about art, design and business.
- ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ
- ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ
- “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
- 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
- ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
- ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
- ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
- ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
Author: admin
ಬೀದರ್: ದೇಶದಲ್ಲಿ ಸದ್ಯ ಎದುರಾಗಿರುವ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ತೀವ್ರ ಕೊರತೆಯು ಕೇಂದ್ರದ ಬಿಜೆಪಿ ಸರ್ಕಾರವೇ ಹರಿಬಿಟ್ಟಿರುವ ಬಿಕ್ಕಟ್ಟು ಎಂದು ಐಟಿ–ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೀದರ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಉದ್ಯಮಿ ಸ್ನೇಹಿತರನ್ನು ಓಲೈಸಲು ದೇಶದ ವಿದೇಶಾಂಗ ನೀತಿಯಲ್ಲಿ ರಾಜಿ ಮಾಡಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಪರಿಸ್ಥಿತಿ ಇರುವಾಗ ಪ್ರಧಾನಿ ಮೋದಿ ಅವರು ಇಸ್ರೇಲ್‌ಗೆ ಭೇಟಿ ನೀಡುವ ಅಗತ್ಯವೇನಿತ್ತು? ಅವರು ಇರಾನ್ ನಾಯಕರ ಮೇಲಿನ ದಾಳಿಯನ್ನು ಖಂಡಿಸದೆ ಕೇವಲ ಪ್ರಶಸ್ತಿ ಪಡೆಯಲು ಆಸಕ್ತಿ ತೋರಿದರು ಎಂದು ಟೀಕಿಸಿದರು. ದೇಶದ ಹಿತಕ್ಕಿಂತ ಹೆಚ್ಚಾಗಿ ಇಬ್ಬರು-ಮೂವರು ಉದ್ಯಮಿ ಗೆಳೆಯರಿಗಾಗಿ ವಿದೇಶಾಂಗ ನೀತಿಯನ್ನು ಬಲಿಕೊಡಲಾಗಿದೆ. ಇದರ ಪರಿಣಾಮವಾಗಿ ಇಂದು ದೇಶದ ಜನತೆ ಎಲ್‌ಪಿಜಿ ಕೊರತೆ ಅನುಭವಿಸುವಂತಾಗಿದೆ ಎಂದರು. ಕಳೆದ 14 ದಿನಗಳಿಂದ ಯುದ್ಧ ನಡೆಯುತ್ತಿದ್ದರೂ ಪ್ರಧಾನಿ ಮೋದಿ, ವಿದೇಶಾಂಗ ಸಚಿವ ಜೈಶಂಕರ್ ಅಥವಾ…
ತುಮಕೂರು: ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಮತ್ತು ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯಗಳನ್ನು ತಡೆದು ಸೂಕ್ತ ಸುರಕ್ಷತೆ ಒದಗಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಮಹಿಳಾ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು. ದುಡಿಯುವ ಮಹಿಳೆಯರ ಸಮನ್ವಯ ಸಮಿತಿ (CITU) ಮತ್ತು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಈ ಪ್ರತಿಭಟನೆ ನಡೆಯಿತು. ಪ್ರಮುಖ ಬೇಡಿಕೆಗಳು: ಪುರುಷರಿಗೆ ಸಮಾನವಾಗಿ ದುಡಿಯುವ ಮಹಿಳೆಯರಿಗೂ ಸಮಾನ ವೇತನ ಜಾರಿಗೊಳಿಸಬೇಕು. ಕೆಲಸದ ಸ್ಥಳಗಳಲ್ಲಿ ಮತ್ತು ಸಮಾಜದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೈಹಿಕ ಹಾಗೂ ಮಾನಸಿಕ ದೌರ್ಜನ್ಯಗಳನ್ನು ತಡೆಯಲು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಹೆಚ್ಚಿನ ರಕ್ಷಣೆ ಮತ್ತು ಸಾರಿಗೆ ಸೌಲಭ್ಯ ಒದಗಿಸಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಸೇರಿದಂತೆ ಅಸಂಘಟಿತ ವಲಯದ ಮಹಿಳಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮುಖಂಡರು, “ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದರೂ ಅವರಿಗೆ…
ತುಮಕೂರು: ನಗರದಲ್ಲಿ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಗಳ ಕೊರತೆ ಎದುರಾಗಿದ್ದು, ಇದರ ನೇರ ಪರಿಣಾಮ ಇಂದಿರಾ ಕ್ಯಾಂಟೀನ್ ಗಳ ಮೇಲೆ ಬೀರಿದೆ. ಅಡುಗೆಗೆ ಅಗತ್ಯವಾದ ಸಿಲಿಂಡರ್ ಲಭ್ಯವಿಲ್ಲದ ಕಾರಣ, ನಗರದ ಪ್ರಮುಖ ಇಂದಿರಾ ಕ್ಯಾಂಟೀನ್ ಸೇರಿದಂತೆ ವಿವಿಧ ಘಟಕಗಳು ಶುಕ್ರವಾರದಿಂದ ಕಾರ್ಯನಿರ್ವಹಣೆ ಸ್ಥಗಿತಗೊಳಿಸಿವೆ. ತುಮಕೂರು ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿರುವ ಮುಖ್ಯ ಇಂದಿರಾ ಕ್ಯಾಂಟೀನ್ ನಲ್ಲಿ ಆಹಾರ ತಯಾರಿಸಿ ನಗರದ ಉಳಿದ 6 ಉಪಕೇಂದ್ರಗಳಿಗೆ ಸರಬರಾಜು ಮಾಡಲಾಗುತ್ತಿತ್ತು. ಆದರೆ ಕಳೆದ 3–4 ದಿನಗಳಿಂದ ಹೋಟೆಲ್‌ಗಳಿಗೆ ಪೂರೈಕೆಯಾಗುವ ವಾಣಿಜ್ಯ ಸಿಲಿಂಡರ್ ಗಳ ಅಭಾವ ಉಂಟಾಗಿದೆ. ಗುರುವಾರ ಇಡೀ ದಿನ ಸಿಬ್ಬಂದಿ ಸಿಲಿಂಡರ್ ಗಾಗಿ ಹುಡುಕಾಟ ನಡೆಸಿದರೂ ಸಿಗದೇ ಇದ್ದಾಗ, ಅನಿವಾರ್ಯವಾಗಿ ಕ್ಯಾಂಟೀನ್ ಗೆ ಬೀಗ ಹಾಕಲಾಗಿದೆ. ಕ್ಯಾಂಟೀನ್ ಮುಂಭಾಗದಲ್ಲಿ “ಗ್ಯಾಸ್ ಸಿಗದ ಕಾರಣ ಇಂದು ಇಂದಿರಾ ಕ್ಯಾಂಟೀನ್ ಮುಚ್ಚಲಾಗಿದೆ. ದಯವಿಟ್ಟು ಸಹಕರಿಸಿ” ಎಂಬ ನಾಮಫಲಕವನ್ನು ಅಳವಡಿಸಲಾಗಿದ್ದು, ಎಂದಿನಂತೆ ಕಡಿಮೆ ದರದಲ್ಲಿ ಊಟ–ತಿಂಡಿ ನಿರೀಕ್ಷಿಸಿ ಬಂದ ಸಾರ್ವಜನಿಕರು ಮತ್ತು ಕಾರ್ಮಿಕರು ನಿರಾಸೆಯಿಂದ ವಾಪಸ್ಸಾಗುತ್ತಿದ್ದಾರೆ.…
ಸರಗೂರು: ಎಚ್ ಪಿ ವಿ ಲಸಿಕೆಯು ಗರ್ಭಕಂಠದ ಕ್ಯಾನ್ಸರ್ ಗೆ ಮುಖ್ಯ ಕಾರಣವಾದ ಹ್ಯೂಮನ್ ಪ್ಯಾಪಿಲೋಮ ವೈರಸ್ ಸೋಂಕಿನಿಂದ ರಕ್ಷಣೆ ನೀಡುತ್ತದೆ. ಈ ಅಭಿಯಾನವು ಹದಿಹರೆಯದ ಬಾಲಕಿಯರ ಆರೋಗ್ಯ ರಕ್ಷಣೆಯಲ್ಲಿ ಮಹತ್ವದ ಹೆಜ್ಜೆಯಾಗಿದ್ದು ಎಂದು ತಹಶೀಲ್ದಾರ್ ಮೋಹನಕುಮಾರಿ ತಿಳಿಸಿದರು. ಪಟ್ಟಣದ ಸಾರ್ವಜನಿಕ ಸಮುದಾಯ ಆಸ್ಪತ್ರೆಯಲ್ಲಿ ಶುಕ್ರವಾರದಂದು ತಾಲೂಕು ಆರೋಗ್ಯಾಧಿಕಾರಿ ಇಲಾಖೆ ದಿಂದ 14 ವರ್ಷದ ಹೆಣ್ಣು ಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್ ನಿರೋಧಕ(ಎಚ್ ಪಿ ವಿ) ಲಸಿಕೆ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹ್ಯೂಮನ್ ಪ್ಯಾಪಿಲೋಮ ವೈರಸ್ ಗರ್ಭಕಂಠ ಸೇರಿದಂತೆ ಅನೇಕ ಮಾದರಿಯ ಕ್ಯಾನ್ಸರ್ ಗೆ ಕಾರಣವಾಗುತ್ತದೆ. ಲಸಿಕೆ ಹಾಕಿಸಿಕೊಳ್ಳುವುದರಿಂದ ಕ್ಯಾನ್ಸರ್ ಸೇರಿದಂತೆ ಇತರ ಗಂಭೀರ ಕಾಯಿಲೆಗಳು ಬರದಂತೆ ತಡೆಯಬಹುದು’ ಎಂದರು. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ಮಾತನಾಡಿ, ಅಭಿಯಾನದಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 14ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ತಾಲ್ಲೂಕಿನ ಎಲ್ಲಾ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ತಾಲ್ಲೂಕು ಸಾರ್ವಜನಿಕ…
ಸರಗೂರು: ಹಬ್ಬಗಳನ್ನು ಆಚರಣೆ ಮಾಡುವ ಸಂದರ್ಭದಲ್ಲಿ ಜಾತಿ, ಧರ್ಮಗಳನ್ನು ಮಧ್ಯದಲ್ಲಿ ತರಬಾರದು ಎಂದು ಸರಗೂರು ಪೊಲೀಸ್ ಠಾಣೆ ಉಪ ನಿರೀಕ್ಷಕ ಆರ್. ಕಿರಣ್ ತಿಳಿಸಿದರು. ಪಟ್ಟಣದ ಠಾಣೆ ಆವರಣದಲ್ಲಿ ಶುಕ್ರವಾರ ನಡೆದ ರಂಜಾನ್ ಹಬ್ಬದ ಪ್ರಯುಕ್ತ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದರು. ಸಾಮಾಜಿಕ ಸುವ್ಯವಸ್ಥೆ ಕದಲುವಂತಹ ಕೃತ್ಯ ಎಸಗಿದವರ ವಿರುದ್ಧ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತದೆ. ಆದರೆ ಇತ್ತೀಚೆಗೆ ಅಪರಾಧಿಗಳ ಪರವಾಗಿ ಸಮುದಾಯ, ಸಂಘಟನೆಗಳು ಸಹಕಾರಕ್ಕೆ ಬರುತ್ತಿರುವುದು ಸರಿಯಲ್ಲ. ರಂಜಾನ್ ಹಬ್ಬದ ಪ್ರಯುಕ್ತ ಎಲ್ಲ ಸಮುದಾಯದ ಜನರು ಸೌಹಾರ್ದಯುತವಾಗಿ ಹಬ್ಬ ಆಚರಿಸಬೇಕು. ಯಾವುದೇ ರೀತಿಯ ಗಲಾಟೆ, ಜನರಿಗೆ ತೊಂದರೆಯಾಗದ ರೀತಿಯಲ್ಲಿ ಮುಖಂಡರು ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು. ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಮಾತನಾಡಿ, ರಂಜಾನ್ ಹಬ್ಬದ ವೇಳೆ ನಾನಾ ಮಸೀದಿಗಳ ಪಕ್ಕದಲ್ಲಿ ಟ್ರಾಫಿಕ್, ವಾಹನಗಳ ಶಬ್ದ ನಿಯಂತ್ರಣ ಮಾಡಬೇಕು. ಹಬ್ಬದ ಪ್ರಯುಕ್ತ ಮಂದಿರದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿರುತ್ತದೆ. ಆ ವೇಳೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಪಿಎಸ್ ಐ…
ತುಮಕೂರು: ಜಿಲ್ಲೆಯಲ್ಲಿ ಅಡುಗೆ ಅನಿಲ (LPG) ಸಿಲಿಂಡರ್ ಗಳ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯವು ಈಗ ಇಂದಿರಾ ಕ್ಯಾಂಟೀನ್ ಗಳ ಮೇಲೂ ಗಂಭೀರ ಪರಿಣಾಮ ಬೀರಿದೆ. ಸಿಲಿಂಡರ್ ಪೂರೈಕೆ ಸ್ಥಗಿತಗೊಂಡಿರುವುದರಿಂದ ನಗರದ ಇಂದಿರಾ ಕ್ಯಾಂಟೀನ್ ಗಳು ಮುಚ್ಚುವ ಹಂತಕ್ಕೆ ತಲುಪಿವೆ. ತುಮಕೂರು ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿರುವ ಮುಖ್ಯ ಕ್ಯಾಂಟೀನ್ ನಲ್ಲಿ ಅಡುಗೆ ತಯಾರಿಸಿ ನಗರದ ವಿವಿಧೆಡೆ (ಕ್ಯಾತ್ಸಂದ್ರ, ಶಿರಾ ಗೇಟ್, ಮಂಡಿಪೇಟೆ, ಜಿಲ್ಲಾ ಆಸ್ಪತ್ರೆ ಮತ್ತು ಅಂತರಸನಹಳ್ಳಿ ಮಾರುಕಟ್ಟೆ) ಇರುವ ಕ್ಯಾಂಟೀನ್ ಗಳಿಗೆ ಊಟ–ತಿಂಡಿ ಸರಬರಾಜು ಮಾಡಲಾಗುತ್ತಿತ್ತು. ಆದರೆ, ಗುರುವಾರದಿಂದ ಅನಿಲ ಸಿಲಿಂಡರ್ ಪೂರೈಕೆ ಸ್ಥಗಿತಗೊಂಡಿದೆ. ಪ್ರತಿದಿನ ಅಡುಗೆ ತಯಾರಿಕೆಗೆ 1 ರಿಂದ 2 ಸಿಲಿಂಡರ್ ಗಳ ಅಗತ್ಯವಿದೆ. ಸಿಲಿಂಡರ್ ಲಭ್ಯವಿಲ್ಲದ ಕಾರಣ ಶುಕ್ರವಾರದಿಂದ ಕ್ಯಾಂಟೀನ್ ನಡೆಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. “ಬೇರೆಯವರಿಂದ ಒಂದು ಸಿಲಿಂಡರ್ ಸಾಲವಾಗಿ ಕೇಳಿದ್ದೇವೆ, ಅದು ಸಿಕ್ಕರೆ ಮಾತ್ರ ಕ್ಯಾಂಟೀನ್ ನಡೆಯುತ್ತದೆ, ಇಲ್ಲದಿದ್ದರೆ ಬಾಗಿಲು ಹಾಕಬೇಕಾಗುತ್ತದೆ” ಎಂದು ಸಿಬ್ಬಂದಿ ಅಳಲು ತೋಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಹೋಟೆಲ್‌ಗಳಿಗೂ ಸಂಕಷ್ಟ:…
ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿ ಕಳೆದ ಕೆಲವು ದಿನಗಳಿಂದ ಅಡುಗೆ ಅನಿಲ (LPG) ಸಿಲಿಂಡರ್‌ಗಳ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದ್ದು, ಇದರಿಂದ ಆಕ್ರೋಶಗೊಂಡ ನೂರಾರು ಗ್ರಾಹಕರು ಗುರುವಾರ ಸ್ಥಳೀಯ ಗ್ಯಾಸ್ ಏಜೆನ್ಸಿ ಕಚೇರಿಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು. ಸಿಲಿಂಡರ್ ಬುಕ್ ಮಾಡಿ ಹಲವು ದಿನಗಳಾದರೂ ಪೂರೈಕೆಯಾಗುತ್ತಿಲ್ಲ ಎಂದು ಗ್ರಾಹಕರು ದೂರಿದ್ದಾರೆ. “ಸಿಲಿಂಡರ್ ಬುಕ್ ಮಾಡಿ ನಾಲ್ಕು ದಿನಗಳಾಗಿವೆ. ಏಜೆನ್ಸಿಯವರನ್ನು ವಿಚಾರಿಸಿದರೆ ಇನ್ನೂ ಒಂದು ವಾರ ಕಾಯಬೇಕು ಎಂಬ ಬೇಜವಾಬ್ದಾರಿ ಉತ್ತರ ನೀಡುತ್ತಿದ್ದಾರೆ. ಮನೆಯಲ್ಲಿ ಅಡುಗೆ ಮಾಡಲು ಅನಿಲವಿಲ್ಲದೆ ಪರದಾಡುವಂತಾಗಿದೆ” ಎಂದು ಸ್ಥಳೀಯ ನಿವಾಸಿ ಅಂಬಿಕಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮತ್ತೊಬ್ಬ ನಿವಾಸಿ ಗೋಪಿ ಅವರು ಮಾತನಾಡಿ, “ಸಾಮಾನ್ಯ ಗ್ರಾಹಕರಿಗೆ ಸಿಗಬೇಕಾದ ಸಿಲಿಂಡರ್‌ಗಳನ್ನು ಹೆಚ್ಚಿನ ಬೆಲೆಗೆ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಜನರಿಗೆ ಮಾತ್ರ ದಾಸ್ತಾನು ಇಲ್ಲ ಎಂಬ ಸಬೂಬು ಹೇಳಲಾಗುತ್ತಿದೆ” ಎಂದು ಗಂಭೀರ ಆರೋಪ ಮಾಡಿದ್ದಾರೆ. ಏಜೆನ್ಸಿ ಸ್ಪಷ್ಟನೆ: ಈ ಕುರಿತು ಪ್ರತಿಕ್ರಿಯಿಸಿದ ಗ್ಯಾಸ್ ಏಜೆನ್ಸಿಯ ಆದರ್ಶ್, “ಸದ್ಯ ಪಟ್ಟಣದಲ್ಲಿ 2,500ಕ್ಕೂ ಹೆಚ್ಚು ಸಿಲಿಂಡರ್ ಬುಕಿಂಗ್…
ಪಾವಗಡ: ತಾಲೂಕಿನ ತುಮಕೂರು ರಸ್ತೆಯಲ್ಲಿರುವ ಖಾಸಗಿ ಎಲ್ ಪಿಜಿ ಏಜೆನ್ಸಿಯ ಮುಂದೆ ಗುರುವಾರ ಗೃಹಬಳಕೆಯ ಸಿಲಿಂಡರ್ ಗಳಿಗಾಗಿ ಜನರು ಸಾಲುಗಟ್ಟಿ ನಿಂತ ಪ್ರಸಂಗ ನಡೆಯಿತು. ಮುಂದಿನ ದಿನಗಳಲ್ಲಿ ಸಿಲಿಂಡರ್ ಅಭಾವ ಉಂಟಾಗಬಹುದು ಎಂಬ ಆತಂಕದಲ್ಲಿ ನೂರಾರು ಗ್ರಾಹಕರು ಬೆಳ್ಳಂಬೆಳಗ್ಗೆಯೇ ವಿತರಣಾ ಕೇಂದ್ರದ ಮುಂದೆ ಜಮಾಯಿಸಿದ್ದರು. ಕಳೆದ ನಾಲ್ಕು ದಿನಗಳಿಂದ ಗ್ಯಾಸ್ ಬುಕ್ ಮಾಡಿ ಒಟಿಪಿ (OTP) ಬಂದಿದ್ದರೂ ಸಹ, ಸರ್ವರ್ ಸಮಸ್ಯೆಯ ನೆಪವೊಡ್ಡಿ ಸಿಬ್ಬಂದಿ ಸಿಲಿಂಡರ್ ವಿತರಿಸುತ್ತಿಲ್ಲ ಎಂದು ಗ್ರಾಹಕರು ದೂರಿದ್ದಾರೆ. ಹೋಟೆಲ್ ಉದ್ದೇಶಕ್ಕೆ ಹಾಗೂ ಮನೆ ಬಳಕೆಗಾಗಿ ಸಿಲಿಂಡರ್ ಪಡೆಯಲು ಜನ ಸಾಮಾನ್ಯರು ಪರದಾಡುವಂತಾಗಿದೆ. ಬೆಲೆ ಏರಿಕೆಯ ಭೀತಿ ಮತ್ತು ಸಿಲಿಂಡರ್ ಸಿಗದೇ ಇರಬಹುದು ಎಂಬ ಆತಂಕದಿಂದ ಅನೇಕರು ಅಗತ್ಯಕ್ಕಿಂತ ಹೆಚ್ಚಿನ ದಾಸ್ತಾನು ಮಾಡಿಕೊಳ್ಳಲು ಮುಂದಾಗುತ್ತಿರುವುದು ಬೇಡಿಕೆ ಹೆಚ್ಚಲು ಕಾರಣ ಎನ್ನಲಾಗಿದೆ. ಏಜೆನ್ಸಿ ಸ್ಪಷ್ಟನೆ: ಈ ಕುರಿತು ಪ್ರತಿಕ್ರಿಯಿಸಿದ ವಿತರಣಾ ಕೇಂದ್ರದ ಪ್ರತಿನಿಧಿ ಕಾರ್ತಿಕ್ ಅವರು, “ನಮ್ಮಲ್ಲಿ ಸಿಲಿಂಡರ್ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿದೆ. ಆದರೆ ತಾಂತ್ರಿಕ ಕಾರಣಗಳಿಂದಾಗಿ ಸರ್ವರ್ ಸಮಸ್ಯೆಯಾಗುತ್ತಿದ್ದು,…
ತುಮಕೂರು: ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣ ಕದ್ದೊಯ್ದಿದ್ದ ಆರೋಪಿಯನ್ನು ದೂರು ದಾಖಲಾದ 24 ತಾಸಿನೊಳಗೆ ಕುಣಿಗಲ್ ಉಪವಿಭಾಗದ ಪೊಲೀಸರು ಸೆರೆಹಿಡಿದಿದ್ದಾರೆ. ಎಸ್ಪಿ ಕೆ.ವಿ.ಅಶೋಕ್ ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಈ ಪ್ರಕರಣದ ಆರೋಪಿಯನ್ನು ಘಟನೆ ನಡೆದು 24 ಗಂಟೆಗಳೊಳಗೆ ಬಂಧಿಸಿರುವುದಾಗಿ ಅವರು ತಿಳಿಸಿದರು. ಮುತ್ತುರಾಜ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತ ಕುಣಿಗಲ್ ತಾಲ್ಲೂಕು ಹುಲಿಯೂರುದುರ್ಗ ಹೋಬಳಿಯ ಉಜ್ಜನಿ ಗ್ರಾಮದಲ್ಲಿ ಒಬ್ಬಂಟಿಯಾಗಿ ವಾಸವಿದ್ದ ನಾಗಮ್ಮ ಎಂಬುವರ ಬಳಿ ಸಾಲ ಪಡೆದಿದ್ದ. ಸಾಲದ ಹಣ ತೀರಿಸುವಂತೆ ವೃದ್ಧೆ ನಾಗಮ್ಮ ಅವರು ಕೇಳುತ್ತಿದ್ದರಿಂದ ಹತ್ಯೆಗೆ ಸ್ಕೆಚ್ ಹಾಕಿ ಮಾ.9ರಂದು ರಾತ್ರಿ 7.30 ರಿಂದ 8ರ ಸಮಯದಲ್ಲಿ ಮನೆಗೆ ನುಗ್ಗಿ ವೃದ್ಧೆಯನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾನೆ. ಹತ್ಯೆಯ ನಂತರ ಆಕೆ ಧರಿಸಿದ್ದ ಚಿನ್ನದ ಮಾಂಗಲ್ಯ ಸರ ಒಂದು ಜೊತೆ ಓಲೆ ಹಾಗೂ ನಾಲ್ಕು ಚಿನ್ನದ ಬಳೆಗಳನ್ನು ದೋಚಿ ಸ್ಥಳದಿಂದ ಪರಾರಿಯಾಗಿದ್ದನು. ಘಟನೆಯ ನಂತರ ಬೆಂಗಳೂರಿನಲ್ಲಿದ್ದ ಮೃತ ನಾಗಮ್ಮ ಅವರ ಪುತ್ರ ವರದರಾಜು ಅವರು ಮಾ.11ರಂದು ಹುಲಿಯೂರುದುರ್ಗ…
ತುಮಕೂರು: ತುಮಕೂರು –ರಾಯದುರ್ಗ ಹೊಸ ರೈಲು ಮಾರ್ಗ ಯೋಜನೆಯ ಭಾಗವಾದ ತುಮಕೂರು–ಊರುಕೆರೆ ಭಾಗದಲ್ಲಿ ನಾನ್ ಇಂಟರ್ ಲಾಕಿಂಗ್ ಕಾಮಗಾರಿಯ ನಿಮಿತ್ತ, ಮಾ. 15—16–17ರಂದು ಕೆಳಕಂಡ ರೈಲು ಸೇವೆಗಳಲ್ಲಿ ಭಾಗಶಃ ಪೂರ್ಣ ರದ್ದು ಹಾಗೂ ಸಮಯದಲ್ಲಿ ವ್ಯತ್ಯಯವಾಗಲಿದೆ ಎಂದು ನೈಋತ್ಯ ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ. ಮಾ.15 ರಂದು ರದ್ದತಿಯಾಗುವ ರೈಲುಗಳ ವಿವರ: ರೈಲು ಸಂಖ್ಯೆ 56202 ಮೈಸೂರು–ಚಾಮರಾಜನಗರ ಪ್ಯಾಸೆಂಜರ್, ರೈಲು ಸಂಖ್ಯೆ 56281 ಚಾಮರಾಜನಗರ — ತುಮಕೂರು ಪ್ಯಾಸೆಂಜರ್, ರೈಲು ಸಂಖ್ಯೆ 16567 ತುಮಕೂರು — ಶಿವಮೊಗ್ಗ ಟೌನ್ ಎಕ್ಸ್ ಪ್ರೆಸ್ ಸೇವೆ, ರೈಲು ಸಂಖ್ಯೆ 66569 ಯಶವಂತಪುರ — ತುಮಕೂರು ಮೆಮು, ರೈಲು ಸಂಖ್ಯೆ 66571 ಕೆಎಸ್ಆರ್ ಬೆಂಗಳೂರು — ತುಮಕೂರು ಮೆಮು ಈ ರೈಲು ಸೇವೆಯನ್ನು ಹಿರೇಹಳ್ಳಿ– ತುಮಕೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಇದೇ ರೀತಿ ರೈಲು ಸಂಖ್ಯೆ 66568 ತುಮಕೂರು — ಕೆಎಸ್ಆರ್ ಬೆಂಗಳೂರು ಮೆಮು ರೈಲು ಸೇವೆಯನ್ನು ತುಮಕೂರು –…