Subscribe to Updates
Get the latest creative news from FooBar about art, design and business.
- ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!
- ಶಿಥಿಲಾವಸ್ಥೆಯ ಶಾಲಾ ಕಟ್ಟಡಗಳ ಮಾಹಿತಿಗೆ ಸೂಚನೆ
- ಸಾರಿಗೆ ಬಲಪಡಿಸಲು ಪುರುಷರು ಕಡ್ಡಾಯವಾಗಿ ಟಿಕೆಟ್ ಪಡೆದು ಪ್ರಯಾಣಿಸಿ: ಕೆ.ಎನ್.ರಾಜಣ್ಣ ಕರೆ
- ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ
- ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!
- ಕಲಬುರಗಿ: ಮಗನ ಕಣ್ಣೆದುರೇ ಭೀಮಾ ನದಿಯಲ್ಲಿ ಮುಳುಗಿ ತಂದೆ ಸಾವು; ಮೊಬೈಲ್ ನಲ್ಲಿ ಸೆರೆಯಾಯ್ತು ದೃಶ್ಯ!
- ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್ ಗೆ ನುಗ್ಗಿದ ವಾಹನ!
- ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
Author: admin
ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ಯ ಬೆಂಗಳೂರಿನ ಈ ರಸ್ತೆಯಲ್ಲಿ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಸಂಚಾರ ಪೊಲೀಸರು ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಯಾವ ರಸ್ತೆಯಲ್ಲಿ ಸಂಚಾರವಿಲ್ಲ, ಬದಲಿ ಮಾರ್ಗ ಯಾವುದು ಇಲ್ಲಿದೆ ಮಾಹಿತಿ. ಶ್ರೀಕೃಷ್ಣ ಜನ್ಮಾಷ್ಟಮಿ ( Krishna Janmashtami ) ಉತ್ಸವದ ಪ್ರಯುಕ್ತ ಆಗಸ್ಟ್ 26 ಮತ್ತು 27 ರಂದು ಬೆಂಗಳೂರು ನಗರದ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಸಂಚಾರ ಪೊಲೀಸರು ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಶ್ರೀಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ದೇವಸಂದ್ರ ಮುಖ್ಯರಸ್ತೆಯಲ್ಲಿರುವ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಹಾಗೆ ಮತ್ತು ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ರಥೋತ್ಸವಿದೆ. ಹೀಗಾಗಿ ಈ ಮಾರ್ಗದಲ್ಲಿ ಭಾರಿ ಸಂಚಾರ ದಟ್ಟಣೆ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಂಚಾರ ಪೂಲಿಸರು ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ದೇವಸಂದ್ರ ಮುಖ್ಯರಸ್ತೆಯಲ್ಲಿರುವ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದ ಟ್ರಸ್ಟ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ…
ಬೆಂಗಳೂರು: ದೋಷಪೂರಿತ ನಂಬರ್ ಪ್ಲೇಟ್ ಗಳ ಬಳಕೆಯನ್ನು ತಡೆಯಲು ಕರ್ನಾಟಕ ಪೊಲೀಸರು ರಾಜ್ಯಾದ್ಯಂತ ಕಠಿಣ ಕ್ರಮ ಆರಂಭಿಸಿದ್ದಾರೆ. ಕೇವಲ 22 ದಿನಗಳಲ್ಲಿ 19,448 ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಗಮನಾರ್ಹ ಸಂಖ್ಯೆಯ ಅಪರಾಧಗಳು ಕಂಡು ಬಂದಿವೆ, ಸುಮಾರು ಅರ್ಧದಷ್ಟು ಪ್ರಕರಣಗಳು ಬೆಂಗಳೂರಿನಲ್ಲಿ ದಾಖಲಾಗಿವೆ. ಬೆಂಗಳೂರು ನಗರ ಪೊಲೀಸರು 9,816 ಪ್ರಕರಣಗಳನ್ನು ದಾಖಲಿಸಿದ್ದು, ಮೈಸೂರಿನಲ್ಲಿ 672 ಪ್ರಕರಣಗಳು ಮತ್ತು ಮಂಗಳೂರಿನಲ್ಲಿ 550 ಪ್ರಕರಣಗಳು, ಕೊಡಗು ಮತ್ತು ರಾಮನಗರದಲ್ಲಿ ಕ್ರಮವಾಗಿ 21 ಮತ್ತು 35 ಪ್ರಕರಣಗಳು ದಾಖಲಾಗಿವೆ. ನಗರದ ರಸ್ತೆಗಳಲ್ಲಿ ಹೆಚ್ಚುತ್ತಿರುವ ಕಾನೂನುಬಾಹಿರ ಚಟುವಟಿಕೆ, ಸಂಚಾರ ನಿಯಮ ಉಲ್ಲಂಘನೆ ಪರಿಹರಿಸಲು ಸಂಚಾರ ಪೊಲೀಸರ ವ್ಯಾಪಕ ಕಾರ್ಯತಂತ್ರದ ಭಾಗವಾಗಿದೆ. ದೋಷಪೂರಿತ ನಂಬರ್ ಪ್ಲೇಟ್ ಇರುವ ವಾಹನಗಳನ್ನು ಗುರುತಿಸುವುದು ಮತ್ತು ಟ್ರ್ಯಾಕಿಂಗ್ ಮಾಡುವುದಕ್ಕೆ ಸವಾಲೆಸೆಯುತ್ತವೆ. ಅಷ್ಟೇ ಅಲ್ಲದೇ, ಸಂಚಾರ ನಿಯಮ ಉಲ್ಲಂಘನೆ, ಹಿಟ್ & ರನ್ ಪ್ರಕರಣಗಳು ಸೇರಿದಂತೆ ಅಪರಾಧ ಚಟುವಟಿಕೆಗಳಲ್ಲಿ ತೊಡಗುವವರಿಗೆ ರಕ್ಷಣೆಯನ್ನೂ ಒದಗಿಸುತ್ತವೆ. ಕಾನೂನು ಉಲ್ಲಂಘಿಸುವವರ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.…
ಮೈಸೂರು: ರಾಜ್ಯಪಾಲರು ಕೇಂದ್ರ ಸರ್ಕಾರ ಕೈಗೊಂಬೆಯಾಗುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಲದರ್ಶಿನಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿದ ನಂತರ ಅವರು ಸುದ್ದಿಗಾರರ ಜೊತೆಗೆ ಮಾತನಾಡಿದರು. ರಾಜ್ಯಪಾಲರು ಕೇಂದ್ರದ ಕೈ ಗೊಂಬೆಯಾಗಿದ್ದರೆ. ಬರಿ ಕರ್ನಾಟಕವಲ್ಲ ದೇಶದ ಬೇರೆ ರಾಜ್ಯಗಳಲ್ಲೂ ಈ ರೀತಿ ಉದಾಹರಣೆ ನೋಡಬಹುದು. ಖಾಸಗಿ ವ್ಯಕ್ತಿ ಕೊಟ್ಟಿರುವ ದೂರನ್ನು ಇಷ್ಟು ತೀವ್ರವಾಗಿ ಪರಿಗಣಿಸಿದ್ದಾರೆ. ಅದೇ ಲೋಕಾಯುಕ್ತ ಅಧಿಕಾರಿಗಳು ಸಲ್ಲಿಸಿರುವ ಮನವಿಯನ್ನು ಯಾಕೆ ಇನ್ನು ಪರಿಗಣಿಸಿಲ್ಲ? ಅಂತ ಅವರು ಪ್ರಶ್ನಿಸಿದರು. ಕುಮಾರಸ್ವಾಮಿ, ಜನಾರ್ಧನರೆಡ್ಡಿ, ಶಶಿಕಲಾ ಜೊಲ್ಲೆ ಮತ್ತು ಮುರುಗೇಶ್ ನಿರಾಣಿ ಅವರ ವಿರುದ್ದವು ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದರೆ ಅವರು ಕೇಂದ್ರದ ಸಚಿವರು ಎಂದು ಅನುಮತಿ ಕೊಟ್ಟಿಲ್ಲ. ಇದರಿಂದ ಸ್ಪಷ್ಟವಾಗಿ ಗೊತಾಗುತ್ತೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈ ಗೊಂಬೆಯಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗಿದ್ದರೂ, ಡಾ.ಜಿ.ಪರಮೇಶ್ವರ್ ಅವರು ದೆಹಲಿಯಲ್ಲೇ ಮೊಕ್ಕಾಂ ಹೂಡಿದ್ದು, ಇದು ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ಕಾರಣವಾಗಿದೆ. ದೆಹಲಿಗೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಅವರು ಮುಡಾ ಹಗರಣ ಪ್ರಕರಣ ಕುರಿತು ನ್ಯಾಯಾಲಯದ ತೀರ್ಪಿನ ಸಂಭವನೀಯ ಪರಿಣಾಮಗಳ ಕುರಿತು ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಿದರು. ಸಭೆಯಲ್ಲಿ ರಾಹುಲ್ ಗಾಂಧಿ ಅವರ ಆಪ್ತರೆಂದೇ ಹೇಳಲಾಗುವ ವೇಣುಗೋಪಾಲ್ ಅವರು ಸಿದ್ದರಾಮಯ್ಯ ಅವರನ್ನು ಸಿಎಂ ಆಗಿ ಮುಂದುವರಿಸಲು ಬಲವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ರಾಜ್ಯ ನಾಯಕತ್ವ ಬದಲಾವಣೆಯ ಸಂದರ್ಭದಲ್ಲಿ ವೇಣುಗೋಪಾಲ್ ಅವರ ಪಾತ್ರ ಪ್ರಮುಖವಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಈ ನಡುವೆ ಪರಮೇಶ್ವರ್ ಅವರೂ ಕೂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭೇಟಿ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಅವರು, ಈ ಭೇಟಿಯಲ್ಲಿ ಯಾವುದೇ ವಿಶೇಷಗಳೇನು ಇಲ್ಲ. ದೆಹಲಿಗೆ ಭೇಟಿ ನೀಡಿದಾಗಲೆಲ್ಲಾ ಪಕ್ಷದ ಉನ್ನತ ನಾಯಕರನ್ನು ಭೇಟಿಯಾಗುತ್ತೇನೆಂದು…
ಕೊರಟಗೆರೆ: ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಮರೇನಾಯಕನಹಳ್ಳಿ ಗ್ರಾಮಸ್ಥರಿಂದ ಶ್ರೀ ಆಂಜನೇಯ ಸ್ವಾಮಿ ಮತ್ತು ಶ್ರೀ ಶನೇಶ್ವರ ಸ್ವಾಮಿಗೆ ಆರತಿಯೊಂದಿಗೆ ವಿಶೇಷ ಪೂಜೆ ನಡೆಯಿತು. ಸಂತೃಪ್ತಿ ಮಳೆ–ಬೆಳೆಗಾಗಿ, ಜಾನುವಾರು ಸಮೃದ್ಧಿಗಾಗಿ ಗ್ರಾಮ ದೇವರಿಗೆ ಮೊರೆಯಿಟ್ಟಿತು. ಮರೇನಾಯಕನಹಳ್ಳಿ ಗ್ರಾಮದ ಬೆಟ್ಟದಲ್ಲಿ ಹುರುಳಿ ಬೀಳಿನಲ್ಲಿ ನೆಲೆಸಿರುವ ಶ್ರೀ ಶನೇಶ್ವರ ಸ್ವಾಮಿಗೆ ಊರಿನ ಗ್ರಾಮಸ್ಥರು ಆರತಿ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ನಂತರ ಗ್ರಾಮದ ಶ್ರೀ ಆಂಜನೇಯ ಸ್ವಾಮಿಗೆ ಶನಿವಾರ ರಾತ್ರಿ ಆರತಿಯೊಂದಿಗೆ ವಿಶೇಷ ಪೂಜೆ ಸಲ್ಲಿಸಿ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ದೇವರನ್ನು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಊರಿನ ಗೌಡರು, ಪಣಗಾರ್, ಪಟೇಲರು, ಒಂಬತ್ತು ಕೈವಾಡಸ್ಥರು, ರೈತರು ಊರಿನ ಹಿರಿಯರು, ಯುವಕರು, ಮಹಿಳೆಯರು ಸಾರ್ವಜನಿಕರು ಹಾಜರಿದ್ದರು. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಬಿಹಾರ: ಪತ್ನಿ ಹಬ್ಬಕ್ಕೆ ತವರು ಮನೆಗೆ ಹೋದದ್ದೇ ತಡ ಪತಿ ಯುವತಿಯೊಬ್ಬಳನ್ನು ಮನೆಗೆ ಕರೆದುಕೊಂಡು ಬಂದು ಸರಸ ಸಲ್ಲಾಪದಲ್ಲಿ ತೊಡಗಿದ್ದು, ಆದ್ರೆ ಅದೃಷ್ಟ ಕೆಟ್ಟು ಸ್ಥಳೀಯರ ಕೈಗೆ ಸಿಕ್ಕಿ ಬಿದ್ದ ಘಟನೆ ಬಿಹಾರದ ಪುರ್ನಿಯಾದಲ್ಲಿ ನಡೆದಿದೆ ಝುನ್ನಿ ಈಸ್ತಂಬರ್ ಪಂಚಾಯತ್‌ನ ಬೇಗಂಪುರ ಮಾಧ್ಯಮಿಕ ಶಾಲೆಯ ಶಿಕ್ಷಕನಾಗಿರುವ ಶೇಖರ್ ಪಾಸ್ವಾನ್ ಅಲಿಯಾಸ್ ರಾಜೇಶ್ ಕುಮಾರ್ ಸಿಕ್ಕಿಬಿದ್ದ ಶಿಕ್ಷಕನಾಗಿದ್ದಾನೆ. ಎರಡು ದಿನಗಳ ಹಿಂದೆ ಪತ್ನಿ ಹಬ್ಬಕ್ಕಾಗಿ ತನ್ನ ತವರು ಮನೆಗೆ ಹೋಗಿದ್ದಳು. ಈ ವೇಳೆ ಸ್ಥಳೀಯ ಯುವತಿಯೊಬ್ಬಳನ್ನು ಮನೆಗೆ ಕರೆತಂದಿದ್ದ ಈತ ಸರಸದಲ್ಲಿ ತೊಡಗಿದ್ದಾಗ ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾನೆ. ಇದೀಗ ಸಿಕ್ಕಿ ಬಿದ್ದ ಬೆನ್ನಲ್ಲೇ ಗ್ರಾಮಸ್ಥರು ಶಿಕ್ಷಕನಿಗೆ ಈ ಯುವತಿಯೊಂದಿಗೆ ಮದುವೆ ಮಾಡಿಸಿದ್ದಾರೆ. ಘಟನೆಯ ಮಾಹಿತಿ ತಿಳಿದು ಪತ್ನಿ ತವರು ಮನೆಯಿಂದ ಹಿಂದಿರುಗಿದ್ದು, ಪತಿಯ ವಿರುದ್ಧ ಕೇಸ್ ದಾಖಲಿಸಿದ್ದಾಳೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ದಾವಣಗೆರೆ: ಕಲುಷಿತ ನೀರು ಸೇವಿಸಿದ್ದ ವೃದ್ಧೆಯೊಬ್ಬರು ಅಸ್ವಸ್ಥಗೊಂಡು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹುಣದಘಟ್ಟ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಗ್ರಾಮದ 7 ಜನರು ಆಸ್ಪತ್ರೆಗೆ ದಾಖಲಾಗಿದ್ದರು. 7 ಜನರಲ್ಲಿ ಚಂದ್ರಮ್ಮ (60) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಆಗಸ್ಟ್ 21 ರಂದು ಚಂದ್ರಮ್ಮ ಮೆಗ್ಗನ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ವಾಂತಿ ಬೇಧಿ, ಜ್ವರದಿಂದ ಬಳಲುತ್ತಿದ್ದರು. ಇಂದು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾರೆ. ಇನ್ನುಳಿದ ಆರು ಜನರು ಚಿಕಿತ್ಸೆ ಪಡೆದು ಮನೆಗೆ ವಾಪಾಸ್ಸಾಗಿದ್ದಾರೆ. ಕುಡಿಯುವ ನೀರಿನ ಪೈಪ್ ಹೊಡೆದು ಚರಂಡಿ ನೀರು ಮಿಶ್ರಣವಾದ ಹಿನ್ನಲೆ ನೀರು ಕಲುಷಿತಗೊಂಡಿತ್ತು. ಘಟನೆಯಾದ ನಂತರ ಗ್ರಾಮಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಜನರಲ್ಲಿ ನೀರು ಕಲುಷಿತಗೊಳ್ಳದಂತೆ ನೋಡಿಕೊಳ್ಳಲು ಜಾಗೃತಿ ಮೂಡಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ತುಮಕೂರು: ತತ್ತ್ವಪದಗಳೆಂದರೆ ತಿಳುವಳಿಕೆಯ ಹಾಡುಗಳು. ಜನರ ಸಾಹಿತ್ಯವಾಗಿರುವ ತತ್ತ್ವಪದಗಳು, ಕೀರ್ತನೆಗಳು ಹೃದಯದಿಂದ ಹುಟ್ಟಿವೆ. ಮಾತಿನಲ್ಲಿ ಕಾವ್ಯಕಟ್ಟಿ, ಹಾಡಿ, ಜನರಿಗೆ ತಿಳುವಳಿಕೆ ಹೇಳಿದ ಕೀರ್ತಿಶಿಶುನಾಳ ಶರೀಫರಿಗೆ ಸಲ್ಲುತ್ತದೆ ಎಂದು ಹಿರಿಯ ಕನ್ನಡ ವಿದ್ವಾಂಸ ಡಾ.ಶ್ಯಾಮಸುಂದರ ಬಿದರಕುಂದಿ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಸಂತ ಶಿಶುನಾಳ ಶರೀಫ ಅಧ್ಯಯನ ಪೀಠ ಗುರುವಾರ ಆಯೋಜಿಸಿದ್ದ ‘ಕನ್ನಡದ ಆಧುನಿಕತೆ ಮತ್ತು ಸಂತ ಶಿಶುನಾಳ ಶರೀಫರು’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇವರ, ಧರ್ಮದ ಹೆಸರಿನಲ್ಲಿ ಮೌಢ್ಯ ಬಿತ್ತುವ ಪ್ರಕ್ರಿಯೆ ಹಿಂದೆಯಿಂದ ನಡೆದಿದೆ. ಆದರೆ, ಪ್ರತಿ ಶತಮಾನದಲ್ಲೂ ಪಂಪ, ಬಸವಣ್ಣನಂತಹ ಮಾನವೀಯ ಮೌಲ್ಯ ಉಳ್ಳವರು ಜನ್ಮತಾಳಿ ಪ್ರತಿ ಹಂತದಲ್ಲೂ ಮನುಷ್ಯತ್ವ ಬೋಧಿಸಿದರು ಎಂದು ತಿಳಿಸಿದರು. ಮನುಷ್ಯ ಎಂಬುವ ಮಾತು ಹೃದಯದಿಂದ ಹುಟ್ಟುತ್ತದೆ. ಬಟ್ಟೆಯಿಂದ ಶ್ರೀಮಂತಿಕೆ ಬರುವುದಿಲ್ಲ, ಮನುಷ್ಯತ್ವದಿಂದ ಶ್ರೀಮಂತಿಕೆ ಬರಬೇಕು. ಮನುಷ್ಯರು ಭೇದ ಭಾವವಿಲ್ಲದೆ ಹೆಣ್ಣು–ಗಂಡು, ಮೇಲು–ಕೀಳು, ಬಡವ–ಶ್ರೀಮಂತ, ಜಾತಿ ಮುಂತಾದ ತಾರತಮ್ಯವಿಲ್ಲದೆ ಬದುಕಲು ಪ್ರಯತ್ನಿಸಬೇಕು. ಇದು ಶಿಶುನಾಳ ಶರೀಫರ ಆಶಯವಾಗಿತ್ತು ಎಂದರು. ತಾತ್ವಿಕ ಚಿಂತನೆಗಳಿಂದ, ಪ್ರಶ್ನೆಗಳಿಂದ ಶರೀಫರು…
ಬೆಂಗಳೂರು: ಸಿಲಿಕಾನ್ ಸಿಟಿಯಾದ್ಯಂತ ಡ್ರಂಕ್ ಅಂಡ್ ಡ್ರೈವ್ ಬೇಟೆ ಆರಂಭಗೊಂಡಿದೆ. ನಗರದಾದ್ಯಂತ ಪೊಲೀಸರು ಹೆಣೆದಿದ್ದ ಬಲೆಗೆ ವಾಹನ ಸವಾರರು ಬಿದ್ದಿದ್ದಾರೆ. ಮದ್ಯಪಾನ ಮಾಡುವ ವಾಹನ ಸವಾರರ ಪರಿಶೀಲನೆಗೆ ಇಳಿದಿದ್ದು ದಂಡ ವಿಧಿಸುತ್ತಿದ್ದಾರೆ. ಇದರ ಭಾಗವಾಗಿ ನಿನ್ನೆ ಒಂದೇ ದಿನ 1200 ಜನ ಅಧಿಕಾರಿ ಮತ್ತು ಸಿಬ್ಬಂದಿಗಳು ಫೀಲ್ಡ್ ಗೆ ಇಳಿದಿದ್ದು 34,676 ವಾಹನಗಳ ತಪಾಸಣೆ ನಡೆಸಿ 779 ಡ್ರಂಕ್ ಅಂಡ್ ಡ್ರೈವ್ ಕೇಸ್ ದಾಖಲಿಸಲಾಗಿದೆ. ಕುಡಿದು ವಾಹನ ಚಾಲನೆ ಮಾಡಿದ್ರೆ ದಂಡ ಕಟ್ಟಲೇ ಬೇಕಿದೆ. ಅಲ್ಲದೇ ಕುಡಿದು ವಾಹನ ಚಾಲನೆ ಮಾಡುವವರ ವಾಹನಗಳನ್ನು ವಶಕ್ಕೆ ಪಡೆದು ನೋಟಿಸ್ ಕೊಟ್ಟು ಕಳಿಸಿದ್ದಾರೆ. ಅಷ್ಟೇ ಅಲ್ಲ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಡ್ರೈವಿಂಗ್ ಲೈಸನ್ಸ್ ರದ್ದು ಪಡಿಸಲು ಕ್ರಮ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಪಾವಗಡ: ಪದ್ಮಭೂಷಣ ಚಿರಂಜೀವಿ ಅವರ ಹುಟ್ಟುಹಬ್ಬದ ಅಂಗವಾಗಿ ಉಚಿತ ಆರೋಗ್ಯಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ತಿಳಿಸಿದರು. ಗುರುವಾರ ಪಟ್ಟಣದ ರೋಟರಿ ಆವರಣದಲ್ಲಿ ತೆಲುಗು ಸಿನಿಮಾ ನಟ ಪದ್ಮಭೂಷಣ ಚಿರಂಜೀವಿಯವರ 69 ನೇ ಹುಟ್ಟು ಹಬ್ಬದ ಅಂಗವಾಗಿ. ಬೆಂಗಳೂರಿನ ಸಪ್ತಗಿರಿ ಅಸ್ಪತ್ರೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉಚಿತ ಅರೋಗ್ಯ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರತಿವರ್ಷದಂತೆ ಈ ವರ್ಷವೂ ಸಹ ಚಿರಂಜೀವಿಯವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದ್ದು, ಚಿರಂಜೀವಿ ಇತ್ತೀಚೆಗೆ ಕೇರಳದ ವಯನಾಡುವಿನಲ್ಲಿ ನಡೆದ ಬೀಕರ ಜಲಪ್ರಳಯದಲ್ಲಿ ನೊಂದವರಿಗಾಗಿ 1 ಕೋಟಿಯಷ್ಟು ಹಣವನ್ನು ದೇಣಿಗೆ ನೀಡಿ, ಮಾನವೀಯತೆಯನ್ನು ಮೆರೆದಿದ್ದಾರೆ ಇಂತಹ ಮಹಾನ್ ನಟನ ಹುಟ್ಟುಹಬ್ಬವನ್ನು ಅಭಿಮಾನಿಗಳ ಸಹಯೋಗದಲ್ಲಿ ಅಚರಿಸಲಾಗುತ್ತಿದೆ ಎಂದು ಕೊಂಡಾಡಿದರು. ಶಮಿವೃಕ್ಷ ಅಭಿವೃದ್ದಿ ಸಮಿತಿಯ ಕಾರ್ಯದರ್ಶಿ, ಸತ್ಯಲೋಕೇಶ್ ಮಾತನಾಡಿ, ಅನೇಕ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ದೇಶದಾದ್ಯಂತ ಹೆಸರಾಗಿರುವ ಚಿತ್ರನಟ ಚಿರಂಜೀವಿಯವರ ಹುಟ್ಟಹಬ್ಬವನ್ನು ಹೆಲ್ಪ್ ಸೊಸೈಟಿಯ ನೇತೃತ್ವದಲ್ಲಿ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ ಅಚರಿಸುತ್ತಿರುವುದು ಅತ್ಯಂತ ಸಂತೋಷವಾಗಿದೆ…