Subscribe to Updates
Get the latest creative news from FooBar about art, design and business.
- ಸಾರಿಗೆ ಬಲಪಡಿಸಲು ಪುರುಷರು ಕಡ್ಡಾಯವಾಗಿ ಟಿಕೆಟ್ ಪಡೆದು ಪ್ರಯಾಣಿಸಿ: ಕೆ.ಎನ್.ರಾಜಣ್ಣ ಕರೆ
- ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ
- ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!
- ಕಲಬುರಗಿ: ಮಗನ ಕಣ್ಣೆದುರೇ ಭೀಮಾ ನದಿಯಲ್ಲಿ ಮುಳುಗಿ ತಂದೆ ಸಾವು; ಮೊಬೈಲ್ ನಲ್ಲಿ ಸೆರೆಯಾಯ್ತು ದೃಶ್ಯ!
- ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್ ಗೆ ನುಗ್ಗಿದ ವಾಹನ!
- ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
- ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
- ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
Author: admin
ತುಮಕೂರು: ರಾಷ್ಟ್ರೀಯ ಹೆದ್ದಾರಿ ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಖಡಕ್ಕಾಗಿ ಮಾತನಾಡಿ ಮಾಹಿತಿ ತೆಗೆದುಕೊಂಡರು. ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಅವರು ಪುಲ್ ಕ್ಲಾಸ್ ತೆಗೆದುಕೊಂಡರು. ತುಮಕೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಯೋಜನೆ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಕುಂಠಿತಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಖಡಕ್ ಎಚ್ಚರಿಕೆ ನೀಡಿದರು. ‘ನನಗೆ ಯಾವುದೇ ಕಾರಣ ಕೊಡಬೇಡಿ ಕೆಲಸ ಮಾಡಿ ಮುಗಿಸಬೇಕು ಅಷ್ಟೇ. ಸಾರ್ವಜನಿಕರಿಗೆ ತೊಂದರೆಯಾಗಬಾರದು’ ಎಂದರು. ಅದೇನು ಮಾಡ್ತಿರೋ ನನಗೆ ಗೊತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಗರಂ ಆದರು. ಅಲ್ಲದೆ ರಾಜ್ಯ ಸರ್ಕಾರದಿಂದ ಬೇಕಾಗಿರುವ ಸಹಕಾರದ ಕುರಿತು ಮಾಹಿತಿ ನೀಡುವಂತೆ ಸೂಚನೆ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಡಾಲಿ ಧನಂಜಯ್ ಸಿನಿ ಜೀವನದಲ್ಲಿ ಕಷ್ಟ ಪಟ್ಟು ಮೇಲೆ ಬಂದು ಈಗ ಸಿನಿಮಾದಲ್ಲಿ ಅತಿ ಹೆಚ್ಚು ಯಶಸ್ಸು ಕಂಡು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಇಂದು ಡಾಲಿ ಹುಟ್ಟುಹಬ್ಬ. ಇಲ್ಲಿದೆ ಡಾಲಿ ಧನಂಜಯ್ ಬಗ್ಗೆ ಯಾರಿಗೂ ತಿಳಿಯದ ಕುತೂಹಲ ವಿಷಯಗಳು ಈ ನಾಯಕ ನಟನ ಮೂಲ ಹೆಸರು ಕಲ್ಲೇನಹಳ್ಳಿ ಅಡವಿಸ್ವಾಮಿ ಧನಂಜಯ್ ಅಂತಲೇ ಇದೆ. ಆಗಸ್ಟ್–23, 1985ರಂದು ಹಾಸನ ಜಿಲ್ಲೆಯ ಅರಸಿಕೇರಿಯ ಕಲ್ಲೇನಹಳ್ಳಿಯಲ್ಲಿ ಜನಿಸಿದ್ದಾರೆ. ಇದೀಗ 39 ಕ್ಕೆ ಕಾಲಿಡುತ್ತಿದ್ದಾರೆ. SSLCಯಲ್ಲಿ ಜಿಲ್ಲೆಗೆ ಫಸ್ಟ್ ಡಾಲಿ: ಧನಂಜಯ್ ತುಂಬಾನೆ ಚೆನ್ನಾಗಿಯೇ ದ್ದಾರೆ. SSLCಯಲ್ಲಿ ಶೇಕಡ ೯೦ ಕ್ಕೂ ಹೆಚ್ಚು ಅಂಕ ಪಡೆದಿದ್ದರು. ಜಿಲ್ಲೆಗೆ ಫಸ್ಟ್ ಬಂದಿದ್ದರು. ಶಾಲಾ ದಿನಗಳಲ್ಲಿಯೇ ನಾಟಕದ ಬಗ್ಗೆ ಆಸಕ್ತಿ ಹೊಂದಿದ್ದರು. ಏಕಪಾತ್ರ ಅಭಿನಯ ಕೂಡ ಮಾಡಿದ್ದರು. ಇವರ ತಂದೆ ಪ್ರಾಥಮಿಕ ಶಾಲಾ ಶಿಕ್ಷಕರು ಆಗಿದ್ದರು. ಧನಂಜಯ್ ಇಂಜಿನಿಯರಿಂಗ್ ಮುಗಿಸಿದ್ದಾರೆ. ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಮಾಡಿದ್ದಾರೆ. ಇನ್ಫೋಸಿಸ್ ನಲ್ಲಿ ಉದ್ಯೋಗ ಕೂಡ ಮಾಡಿದ್ದಾರೆ. ಈ ಸಮಯದಲ್ಲಿ ಸುಮಾರು…
ಪೊಲೀಸ್ ಇಲಾಖೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಎಂಬ ಸುದ್ದಿ ಹರಿದಾಡುತ್ತಿದ್ದು, ಈ ಕುರಿತು ರಾಜ್ಯ ಪೊಲೀಸ್ ಇಲಾಖೆ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದೆ. ಪೊಲೀಸ್ ಇಲಾಖೆ ಸ್ಪಷ್ಟನೆ: ಗಮನಿಸಿ !! ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನಿಯಂತ್ರಣ ಕೊಠಡಿಗೆ ಕರೆ ಮಾಡಿದಲ್ಲಿ, ಮಹಿಳೆಯರಿಗೆ ಉಚಿತ ಪ್ರಯಾಣ ಎಂಬ ಮೆಸೇಜ್ ಹರಿದಾಡುತ್ತಿದ್ದು, ಈ ಮಾಹಿತಿಯು ಸುಳ್ಳಾಗಿದೆ. ತುರ್ತು ಸಹಾಯಕ್ಕಾಗಿ 112 ಗೆ ಕರೆಮಾಡಿ ಎಂದು ರಾಜ್ಯ ಪೊಲೀಸ್ ಇಲಾಖೆ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದೆ. ಏನಿದು ವೈರಲ್ ಮೆಸೇಜ್? ಪೊಲೀಸರು ಟ್ರಾವೆಲ್ ಸ್ಕೀಂ ಎಂಬ ಯೋಜನೆ ಆರಂಭಿಸಿದ್ದಾರೆ. ಈ ಮೂಲಕ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯವರೆಗೆ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುತ್ತಾರೆ. ಜೊತೆಗೆ ಒಂಟಿ ಮಹಿಳೆಯರಿಗೆ ವಾಹನ ಸಿಗದಿದ್ದರೆ ಸಹಾಯವಾಣಿ ಸಂಖ್ಯೆ 1091 ಅಥವಾ 7837018555 ಗೆ ಕರೆ ಮಾಡಿದರೆ ಪೊಲೀಸರು ಮನೆಗೆ ಬಿಡುವ ವ್ಯವಸ್ಥೆ ಮಾಡಲಿದ್ದಾರೆ ಎಂಬ ಸುಳ್ಳು ಸಂದೇಶ ಭಾರಿ ವೈರಲ್ ಆಗಿತ್ತು. ಜೊತೆಗೆ…
ಮದುವೆಯಾದ ಮೇಲೆ ತುಂಬಾ ಬ್ಯುಸಿಯಾಗಿದ್ದೇನೆ. ನಾನು ಮನೆಯಲ್ಲಿ ಪಾತ್ರೆ ತೊಳೆಯುತ್ತಿದ್ದೇನೆ. ದಿಗಂತ್ ಅವರ ಬಟ್ಟೆಯನ್ನು ಮಡಚಿ ಇಡುತ್ತಿದ್ದೇನೆ. ಹೀಗೆ ಫುಲ್ ಬ್ಯೂಸಿಯಾಗಿದ್ದೇನೆ ಅಂತ ಖ್ಯಾತ ನಟಿ ಐಂದ್ರಿತಾ ರೇ ಹೇಳಿದ್ದಾರೆ. ಸುದ್ದಿವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ತಮಾಷೆಗೆ ಈ ಮಾತುಗಳನ್ನು ಐಂದ್ರಿಯಾ ಹೇಳಿದ್ದಾರೆ. ಬಳಿಕ ಇದೆಲ್ಲಾ ತಮಾಷೆಗಾಗಿ ಹೇಳಿದ್ದು, ನಾನು ಕಳೆದ ವರ್ಷದವರೆಗೂ ಹಿಂದಿಯಲ್ಲಿ ಬ್ಯೂಸಿಯಾಗಿದ್ದೆ. ತುಂಬಾ ವೆಬ್ ಸೀರಿಸ್ ಗಳನ್ನು ಮಾಡಿದ್ದೇನೆ. ಹಿಂದಿ ಸಿನಿಮಾಗಳನ್ನು ಮಾಡಿದ್ದೇನೆ. ಎರಡು ಹಿಂದಿ ಸಿನಿಮಾಗಳನ್ನು ಮಾಡಿದ್ದೇನೆ. ಅದಾದ ಮೇಲೆ ಕನ್ನಡದಲ್ಲಿ ಒಳ್ಳೆ ಅವಕಾಶ ಸಿಗಬೇಕು ಅಂತ ಕಾಯ್ತಾ ಇದ್ದೇನೆ ಅಂತ ಅವರು ಹೇಳಿದ್ದಾರೆ. ಮದುವೆಯಾದ ಮೇಲಂತೂ ಎಲ್ಲರೂ ನನ್ನನ್ನು ರಿಜೆಕ್ಟ್ ಮಾಡಿದ್ದಾರೆ. ಆದರೆ ನನ್ನ ಫ್ಯಾನ್ಸ್ ನನ್ನ ರಿಜೆಕ್ಟ್ ಮಾಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಇನ್ಸ್ಟಾಗ್ರಾಮ್ ನಲ್ಲಿ ಫ್ಯಾನ್ಸ್ ಕಂಬ್ಯಾಕ್ ಯಾವಾಗ ಅಂತಾ ಕೇಳುತ್ತಲೇ ಇರುತ್ತಾರೆ. ಆದರೆ ಅಂತಹ ಆಫರ್ ಯಾವುದೂ ಬಂದಿಲ್ಲ ಅಂತ ಅವರು ಹೇಳಿದರು. ಮದುವೆ ಆದ ಮೇಲೆ ಆಫರ್‌ಗಳೇ ಬರುತ್ತಿಲ್ಲ. ಈಗ ನಾನು…
ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ಚಿತ್ರ ಹಿಂಸೆ ನೀಡಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ವಿರುದ್ಧ ಬಿರ್ಭುಮ್ ಜಿಲ್ಲೆಯ ಬೋಲ್ಪುರ್ ಪೊಲೀಸ್ ಠಾಣೆಯಲ್ಲಿ ಬುಧವಾರ ಎಫ್‌ಐಆರ್ ದಾಖಲಿಸಲಾಗಿದೆ. ಬಹಿರಿ ಪಂಚಚೋವಾ ಗ್ರಾಮ ಪಂಚಾಯತ್ ಪ್ರದೇಶದ ಕರೀಂಪುರದ ನಿವಾಸಿಯಾದ ಫಿರೋಜ್ ಖಾನ್, ವಿವಾಹಿತ ಮಹಿಳೆಯನ್ನು ಗನ್ ತೋರಿಸಿ ಬಲವಂತವಾಗಿ ಅಪಹರಿಸಿ ದನದ ಕೊಟ್ಟಿಗೆಗೆ ಕರೆದೊಯ್ದು, ಅಲ್ಲಿ ಆಕೆಯ ಕೈ ಮತ್ತು ಕಾಲುಗಳನ್ನು ಕಟ್ಟಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೇ ಆರೋಪಿಯು ಸಂತ್ರಸ್ತೆಯ ಜನನಾಂಗಕ್ಕೆ ಗನ್ ತೂರಿಸುವ ಮೂಲಕ ಚಿತ್ರಹಿಂಸೆ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಹಲ್ಲೆಯ ಸಮಯದಲ್ಲಿ ಆತ ಸಂತ್ರಸ್ತೆಯ ಪೋಟೊಗಳನ್ನು ಸಹ ತೆಗೆದುಕೊಂಡಿದ್ದಾನೆ ಎನ್ನಲಾಗಿದೆ. ನಂತರ ಅವಳ ನಾಲ್ಕು ವರ್ಷದ ಮಗ, ತನ್ನ ತಾಯಿಯನ್ನು ಹುಡುಕುತ್ತಾ ದನದ ಕೊಟ್ಟಿಗೆಗೆ ಬಂದಾಗ ತಾಯಿಯನ್ನು ಆ ಸ್ಥಿತಿಯಲ್ಲಿ ನೋಡಿದ ಮಗು ಅಳಲು ಪ್ರಾರಂಭಿಸಿತು. ಆಗ ಆರೋಪಿ ಟಿಎಂಸಿ ಕಾರ್ಯಕರ್ತ ಮಗುವನ್ನು ಬೆದರಿಸಿ ಗೋಣಿ ಚೀಲದಲ್ಲಿ ಕಟ್ಟಿಹಾಕಿದ್ದಾನೆ ಎಂಬುದಾಗಿ ವರದಿಯಾಗಿದೆ. ಆರೋಪಿ…
ಬಿಹಾರ: ಸ್ವಂತ ಚಿಕ್ಕಪ್ಪನನ್ನೇ ಯುವತಿಯೊಬ್ಬಳು ವಿವಾಹವಾದ ಘಟನೆ ಬಿಹಾರದಲ್ಲಿ ನಡೆದಿದೆ. ಬೇಗುಸಾರೈದ ಮಹಾನಗರ ಪಾಲಿಕೆಯ ಉಪ ಆಯುಕ್ತ ಶಿವಶಕ್ತಿ ಕುಮಾರ್ ಪ್ರೀತಿ ವಿಷ್ಯ ಇದೀಗ ವಿವಾದಕ್ಕೀಡಾಗಿದೆ. ಶಿವಶಕ್ತಿ ಕುಮಾರ್ ಹಾಗೂ ಸಜಲ್ ಸಿಂಧು ಕಳೆದ 10 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. 31 ವರ್ಷದ ಮಹಾನಗರ ಪಾಲಿಕೆಯ ಡೆಪ್ಯುಟಿ ಕಮಿಷನರ್ ಶಿವಶಕ್ತಿ ಕುಮಾರ್ 24 ವರ್ಷದ ಸಜಲ್ ಸಿಂಧು ಅವರನ್ನು ಮದುವೆ ಕೂಡ ಆಗಿದ್ದಾರೆ. ಇವರು ಹೊರ ಜಗತ್ತಿಗೆ ಪ್ರೇಮಿಗಳೇ ಆದರೂ ಕೂಡ ಸಂಬಂಧದಲ್ಲಿ ಚಿಕ್ಕಪ್ಪ ಮಗಳು ಆಗಬೇಕು. ಇವರಿಬ್ಬರ ವಿವಾಹಕ್ಕೆ ಮನೆಯವರು ಒಪ್ಪಿಗೆ ನೀಡಿಲ್ಲ. ಆದ್ರೆ ಈ ಬಗ್ಗೆ ಮಾತನಾಡಿರುವ ಸಜಲ್ ಸಿಂಧು ಮದುವೆ ನಮ್ಮ ವೈಯಕ್ತಿಕ ಹಕ್ಕು, ಇದನ್ನು ಕೇಳುವ ಹಕ್ಕು ಯಾರಿಗೂ ಇಲ್ಲ. ನಮ್ಮ ಸಂಬಂಧವನ್ನು ಅಂತ್ಯಗೊಳಿಸಲು ಕುಟುಂಬದವರು ಕಾನೂನಿನ ಮೂಲಕ ಪ್ರಯತ್ನಿಸುತ್ತಿದ್ದಾರೆ. ಆದ್ರೆ ನಮಗೆ ಸಂವಿಧಾನದಲ್ಲಿ ಈ ರೀತಿಯ ಒಂದು ಮದುವೆಯಾಗಲಿಕ್ಕೆ ಅವಕಾಶವಿದೆ. ನಾವಿಬ್ಬರು 10 ವರ್ಷದಿಂದ ಪ್ರೀತಿಸಿ ಮದುವೆಯಾಗಿದ್ದೇವೆ. ನಮ್ಮ ವಿರುದ್ಧ ಕುಟುಂಬಸ್ಥರು ಮಾಡುತ್ತಿರುವ ಆರೋಪಗಳೆಲ್ಲಾ…
ನವದೆಹಲಿ: ಭಾರತೀಯ ಪ್ರಯಾಣಿಕರು ಪ್ರಯಾಣಿಸುತ್ತಿದ್ದ ಬಸ್ಸೊಂದು ನೇಪಾಳದ ತನಾಹುನ್ ಜಿಲ್ಲೆಯ ಮಾರ್ಸ್ಯಾಂಗ್ಡಿಯಲ್ಲಿ ನದಿಗೆ ಉರುಳಿದ್ದು, ಪರಿಣಾಮವಾಗಿ 14 ಜನ ಸಾವನ್ನಪ್ಪಿ, 16 ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಬಸ್ಸಿನಲ್ಲಿ ಒಟ್ಟು 40 ಜನರು ಪ್ರಯಾಣಿಸುತ್ತಿದ್ದರು. ಬಸ್ ಪೊಖಾರಾದಿಂದ ಕಠ್ಮಂಡುವಿಗೆ ಸಾಗುತ್ತಿತ್ತು. ಉತ್ತರ ಪ್ರದೇಶದ ಎಫ್ಟಿ 7623 ನಂಬರ್ ಪ್ಲೇಟ್ ಹೊಂದಿದ್ದ ಬಸ್ ದುರಂತಕ್ಕೀಡಾದ ಬಸ್ ಆಗಿದೆ ಅಂತ ತನಾಹುನ್ ಜಿಲ್ಲೆಯ ಡಿಎಸ್ಪಿ ದೀಪು ಕುಮಾರ್ ರಾಯ ತಿಳಿಸಿದ್ದಾರೆ. ಭಾರತೀಯ ಪ್ರಯಾಣಿಕರು ಪೋಖಾರಾದ ಮಜೇರಿ ರೆಸಾರ್ಟ್ ನಲ್ಲಿ ತಂಗಿದ್ದರು. ಬಸ್ ಶುಕ್ರವಾರ ಬೆಳಿಗ್ಗೆ ಪೋಖಾರಾದಿಂದ ಕಠ್ಮಂಡುವಿಗೆ ಹೊರಟಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಗಳನ್ನು ಅರಮನೆಗೆ ಬರಮಾಡಿಕೊಳ್ಳುವುದರ ಮೂಲಕ ವಿದ್ಯುಕ್ತವಾಗಿ ಸ್ವಾಗತ ಕೋರಿದರು. ಮೈಸೂರು ಜಿಲ್ಲಾಡಳಿತ, ಅರಮನೆ ಮಂಡಳಿ ವತಿಯಿಂದ ಗಜಪಡೆಗೆ ಇಂದು ಏರ್ಪಡಿದಸಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಬೆಳಗ್ಗೆ 10:10 ರಿಂದ 10:30 ರ ಶುಭಗಳಿಗೆಯಲ್ಲಿ ಅರಮನೆಗೆ ಗಜಪಡೆ ಆಗಮನವಾಯಿತು. ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಆನೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಅದ್ಧೂರಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ, ಕೃಷ್ಣ ರಾಜ ವಿಧಾನಸಭಾ ಶ್ರೀವತ್ಸಾ, ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ, ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ.ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ ಪಿ.ಶಿವರಾಜು, ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕರಾದ ಎಂ.ಕೆ.ಸವಿತಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕೊರಟಗೆರೆ: ಸಾವಿರಾರು ಮಕ್ಕಳು ಭಾಗವಹಿಸಿದ್ದ ಕ್ರೀಡಾಕೂಟದ ಕ್ರೀಡಾಂಗಣದಲ್ಲಿ ಎಕ್ಸ್ಪರಿ ಮ್ಯಾನುಫ್ಯಾಕ್ಚರಿ ಡೇಟ್ ಇಲ್ಲದ ಐಸ್ ಕ್ರೀಮ್ ನ್ನು ಮಕ್ಕಳಿಗೆ ಮಾರಾಟ ಮಾಡಿರುವ ಘಟನೆ ಕೊರಟಗೆರೆ ಜೂನಿಯರ್ ಕಾಲೇಜ್ ಆವರಣದಲ್ಲಿ ನಡೆದಿದೆ. ಕೆಲವು ಖಾಸಗಿ ಐಸ್ ಕ್ರೀಮ್ ಕಂಪನಿಗಳು ಕಳಪೆ ಗುಣಮಟ್ಟದ ಐಸ್ ಕ್ರೀಮ್ ನ್ನು ಮಕ್ಕಳಿಗೆ ಮಾರಾಟ ಮಾಡಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಶಿಕ್ಷಕರು ಹಾಗೂ ಆರೋಗ್ಯಾಧಿಕಾರಿಗಳ ಬೇಜವಾಬ್ದಾರಿಗೆ ಈ ಘಟನೆ ಸಾಕ್ಷಿಯಾಗಿದೆ. ಬೆಂಗಳೂರು ತುಮಕೂರು ಕೊರಟಗೆರೆಯಿಂದ ಬಂದಿದ್ದ ಐಸ್ ಕ್ರೀಮ್ ಅಂಗಡಿಗಳಲ್ಲಿ ಎಕ್ಸ್ಪರಿ ಮ್ಯಾನುಫ್ಯಾಕ್ಚರಿ ಡೇಟ್ ಇಲ್ಲದ ಐಸ್ ಕ್ರೀಮ್ ನ್ನು ಮಕ್ಕಳಿಗೆ ಮಾರಾಟ ಮಾಡಲಾಗ್ತಿತ್ತು. ಮಾಧ್ಯಮಗಳು ಈ ಬಗ್ಗೆ ಪ್ರಶ್ನಿಸಿದಾಗ ಮಾಧ್ಯಮದವರ ಮುಂದೆ ತಬ್ಬಿಬಾದ ಐಸ್ ಕ್ರೀಮ್ ಅಂಗಡಿ ಮಾಲೀಕರು ತಮ್ಮ ಐಸ್ ಕ್ರೀಮ್ ಅಂಗಡಿಗಳನ್ನು ಮುಚ್ಚಿ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ಅವರಿಗೆ ಪತ್ರಕರ್ತರು ಕರೆ ಮಾಡಿ ಘಟನೆಯ ಮಾಹಿತಿ ನೀಡಿದರೂ ಅವರು ಸ್ಥಳಕ್ಕೆ ಬಾರದೆ ನಿರ್ಲಕ್ಷ್ಯ ವಹಿಸಿದ್ದಾರೆ. ಹಬ್ಬಗಳು, ಜಾತ್ರೆಗಳಲ್ಲಿ…
ತುಮಕೂರು: ಮ್ಯೆಸೂರು ದಸರಾ ಉತ್ಸವದ ಮಾದರಿಯಲ್ಲಿ ಈ ಬಾರಿ ಸಾಂಪ್ರದಾಯಿಕವಾಗಿ ಹಾಗೂ ಅದ್ದೂರಿಯಾಗಿ ತುಮಕೂರು ದಸರಾ ಉತ್ಸವವನ್ನು ಆಚರಿಸಲು ಉದ್ದೇಶಿಸಲಾಗಿದ್ದು, ದಸರಾ ಉತ್ಸವದ ಯಶಸ್ವಿಗೆ ಅಗತ್ಯ ಸಿದ್ಧತೆಗಳನ್ನು ಈಗಿನಿಂದಲೇ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ತುಮಕೂರು ದಸರಾ ಆಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲಾಡಳಿತದ ವತಿಯಿಂದ ಮೊದಲ ಬಾರಿಗೆ ತುಮಕೂರು ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 10 ರಿಂದ 12ರವರೆಗೆ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಬಾರಿ ನವೀನ ರೀತಿಯ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ದಸರಾಗೆ ಮೆರುಗು ತರಬೇಕು. ಶಿಷ್ಟಾಚಾರದಲ್ಲಿ ಯಾವುದೇ ರೀತಿಯ ಉಲ್ಲಂಘನೆಯಾಗದಂAತೆ ಎಚ್ಚರಿಕೆ ವಹಿಸಬೇಕು. ದಸರಾ ಆಚರಣೆಗೆ ಹೆಚ್ಚಿನ ಪ್ರಾಯೋಜಕತ್ವ ಪಡೆಯಲು ಅಧಿಕಾರಿಗಳು ಮುಂದಾಗಿ ದಸರಾ ಮಹೋತ್ಸವವನ್ನು ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ವಿಜಯ ದಶಮಿ ದಿನದಂದು ನಗರದ ಟೌನ್ ಹಾಲ್ ವೃತ್ತದಿಂದ ಜೂನಿಯರ್ ಕಾಲೇಜು ಮೈದಾನದವರೆಗೂ ದಸರಾ ಮೆರವಣಿಗೆ ಆಯೋಜಿಸಬೇಕು.…