Subscribe to Updates
Get the latest creative news from FooBar about art, design and business.
- ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು
- ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ
- ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ
- ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ
- ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ
- ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿ ಜಯಂತಿ ಹಾಗೂ ವ್ಯಸನ ಮುಕ್ತ ದಿನಾಚರಣೆ
- ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
- ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
Author: admin
ಕಲಬುರ್ಗಿ: ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ಇರುವಂತ ಮಿನಿ ವಿಧಾನಸೌಧಗಳ ಹೆಸರುಗಳನ್ನು ಪ್ರಜಾ ಸೌಧ ಎಂದು ಮರುನಾಮಕರಣ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ. ಕಲಬುರ್ಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಸರಿ ಮಾಡಿದಂತ ಎಲ್ಲಾ ಅಧಿಕಾರಿ, ನೌಕರರು, ಸಿಬ್ಬಂದಿಗಳಿಗೆ ಸನ್ಮಾನ ಮಾಡಲಾಗುತ್ತದೆ. ಕೂಡಲಸಂಗಮದಿಂದ ಎಲ್ಲಾ ಪ್ರವಾಸಿ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು. ರಾಜ್ಯದ ತಾಲ್ಲೂಕು ಕೇಂದ್ರಗಳಲ್ಲಿ ಮಿನಿ ವಿಧಾನಸೌಧಗಳನ್ನು ನಿರ್ಮಿಸಲಾಗಿದೆ. ಇನ್ನೂ ಕೆಲವು ತಾಲ್ಲೂಕುಗಳಲ್ಲಿ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಇನ್ನೂ ಕೆಲವು ಕಡೆ ಮಾಡಲಿದ್ದೇವೆ. ಇವುಗಳ ಹೆಸರನ್ನು ಮಿನಿ ವಿಧಾನಸೌಧ ಎನ್ನುವ ಬದಲಾಗಿ ಪ್ರಜಾ ಸೌಧ ಎಂಬುದಾಗಿ ಮರು ನಾಮಕರಣ ಮಾಡುವಂತ ನಿರ್ಧಾರವನ್ನು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ಇದೇ ವೇಳೆ ಘೋಷಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಬೀದರ: ಬಸವಕಲ್ಯಾಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಅನುಭವ ಮಂಟಪ ಕಾಮಗಾರಿ ಪ್ರಗತಿಯಲ್ಲಿದೆ. 2025ರ ಡಿಸೆಂಬರ್ ಗೆ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅನುಭವ ಮಂಟಪಕ್ಕೆ ಈವರೆಗೆ 300 ಕೋಟಿ ರೂ. ಬಿಡುಗಡೆಯಾಗಿದ್ದು, ಅನುದಾನದ ಯಾವುದೇ ಕೊರತೆ ಇಲ್ಲ. ಅನುಷ್ಠಾನದ ಜವಾಬ್ದಾರಿ ಗುತ್ತಿಗೆದಾರರ ಮೇಲಿದೆ. ಶೇ.48ರಷ್ಟು ಕಾಮಗಾರಿ ಮುಗಿದಿದೆ ಅಂತ ತಿಳಿಸಿದ್ದಾರೆ. ಕಾಲಮಿತಿಯಲ್ಲಿ ಇನ್ನುಳಿದ ಕೆಲಸ ಮುಗಿಸಲು ನಿರ್ದೇಶನ ನೀಡಿದ್ದೇನೆ. ಮಂಟಪಕ್ಕೆ ಗುಣಮಟ್ಟದ ಕಲ್ಲುಗಳು ಸಿಗುತ್ತಿಲ್ಲ ಎನ್ನುತ್ತಿದ್ದಾರೆ. ಈ ಬಗ್ಗೆ ಹುಡುಕಾಟ ನಡೆದಿದೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಬಿಹಾರ: ಕಾರಿನಲ್ಲಿ ಬಂದೂಕು ತೋರಿಸಿ ಬೆದರಿಸಿ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ಸೋಮವಾರ ಬಾಲಕಿ ಪೊಲೀಸರಿಗೆ ದೂರು ನೀಡಿದ್ದಾಲೆ. ಬಿಹಾರದ ಸಹರ್ಸದಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಸದಾರ್ ಪ್ರದೇಶದಲ್ಲಿ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಸಹರ್ಸದ ಎಸ್ಪಿ ಹಿಮಾಂಶು ತಿಳಿಸಿದ್ದಾರೆ. ಸಂತ್ರಸ್ತೆಯ ವೈದ್ಯಕೀಯ ತಪಾಸಣಾ ವರದಿ ಇನ್ನು ಬರಬಾಗಿದೆ. ಎಲ್ಲ ಆಯಾಮಗಳಲ್ಲಿ ಕೂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಹಿನ್ನೆಲೆಯಲ್ಲಿ ಡಿಸೇಲ್ ತುಂಬಿದ್ದ ಲಾರಿ ಪಲ್ಟಿಯಾಗಿರೋ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಬಳಿಯ ರಾಜ್ಯ ಹೆದ್ದಾರಿ 33 ರಲ್ಲಿರುವ ದೊಡ್ಡಮಾವತ್ತೂರು ಟೋಲ್ ಬಳಿ ನಡೆದಿದೆ. ಲಾರಿಗಳು ಡಿಕ್ಕಿಯಾದ ರಭಸಕ್ಕೆ ಟೋಲ್ ಸಂಪೂರ್ಣ ಜಖಂಗೊಂಡಿದೆ. ಡಿಸೇಲ್ ತುಂಬಿದ್ದ ಲಾರಿ ಚಾಲಕ ಹಾಗೂ ಇಬ್ಬರು ಟೋಲ್ ಸಿಬ್ಬಂದಿ ಸೇರಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಕುಣಿಗಲ್ ಕಡೆಯಿಂದ ಮದ್ದೂರು ಕಡೆಗೆ ತೆರಳುತ್ತಿದ್ದ ಟೈಲ್ಸ್ ತುಂಬಿದ್ದ ಲಾರಿ ಹಾಗೂ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮದ್ದೂರು ಕಡೆಯಿಂದ ಕುಣಿಗಲ್ ಕಡೆಗೆ ಬರುತ್ತಿದ್ದ ಡಿಸೇಲ್ ತುಂಬಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಲಾರಿಗಳು ಡಿಕ್ಕಿಯಾದ ಪರಿಣಾಮ. ದೊಡ್ಡಮಾವತ್ತೂರು ಟೋಲ್ ಗೆ ಗುದ್ದಿ ಟೋಲ್ ಸಿಬ್ಬಂದಿಗಳ ವಿಶ್ರಾಂತಿ ಕೊಠಡಿಗೆ ಲಾರಿ ನುಗ್ಗಿದೆ. ದೊಡ್ಡಮಾವತ್ತೂರು ಟೋಲ್ ಸಂಪೂರ್ಣ ಪುಡಿಯಾಗಿದೆ. ಡಿಸೇಲ್ ಲಾರಿ ಚಾಲಕ ಹಾಗೂ ಇಬ್ಬರು ಟೋಲ್ ಸಿಬ್ಬಂದಿಗಳಿಗೆ ಗಂಭೀರ ಗಾಯಗಳಾಗಿವೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಮೃತೂರು ಪೊಲೀಸರು,…
ತುಮಕೂರು: ನಾಗಮಂಗಲದಲ್ಲಿ ನಡೆದ ಗಲಭೆಯಲ್ಲಿ ನಿಷೇಧಿತ ಪಿಎಫ್ ಐ ಸಂಘಟನೆ ಭಾಗಿ ವಿಚಾರಕ್ಕೆ ಸಂಬಂಧಿಸಿದಂತೆ ಇದನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕು, ಬ್ಯಾನ್ ಮಾಡಿದವರು ಸ್ವತಂತ್ರ ವಾಗಿ ಓಡಾಡಿಕೊಂಡಿದ್ದಾರೆ. ಅಂತವರ ವಿರುದ್ದ ಕಠಿಣವಾಗ ಶಿಕ್ಷೆಯಾಗಬೇಕು. ಬರಿ ಎಫ್ ಐ ಆರ್ ಆದ್ರೆ ಸಾಕಾಗಲ್ಲ. ಗಣೇಶನ್ನ ಬಿಡೋಕೆ ಅಡ್ಡಿ ಪಡಿಸುತ್ತಿರಾ ಅಂದ್ರೆ ಏನು ಹೇಳ್ಬೇಕು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಕಿಡಿಕಾರಿದ್ದಾರೆ. ತುಮಕೂರಿನಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, 2023ರಲ್ಲಿ ಇದೇ ತರಹ ಘಟನೆ ನಡೆದಿತ್ತು. ಇದು ಮತ್ತೆ ಮರುಕಳಿಸಿದೆ, ಇದರ ಉದ್ದೇಶ ಏನೆಂದರೆ ಪ್ರತಿಕಾರವಾಗಿದೆ. ಯಾಕೆ ಬಿಜೆಪಿ ಸರ್ಕಾರ ಇದ್ದಾಗ ಉಸಿರೆತ್ತಲ್ಲ. ಕಾಂಗ್ರೆಸ್ ಬಂದಾಗ ಯಾಕೆ ಆಗುತ್ತೆ ಎಂದು ಪ್ರಶ್ನಿಸಿದರು. ಗೃಹ ಸಚಿವ ಪರಮೇಶ್ವರ್ ಒಬ್ಬ ದಕ್ಷ ಅನುಭವಿ ರಾಜಕಾರಣಿ. ಮುಂದಿನ ಭಾರತದ ಭವಿಷ್ಯದಲ್ಲಿ ಕರ್ನಾಟಕ ಮೆಲ್ಫಂಕ್ತಿಯಲ್ಲಿ ಇರಬೇಕು ಅಂತ ಯೋಚನೆ ಮಾಡಿದ್ರೆ, ಅವರು ನಿಯಂತ್ರಣ ಮಾಡ್ತಾರೆ. ಜನ ಯಾವ ರೀತಿ ನಡೆದುಕೊಳ್ತಾರೆ ಅನ್ನೋದು ನಿಮಗೂ ಗೊತ್ತಿದೆ, ಇದು ಖಂಡನೀಯ ಅದಕ್ಕೆ ಅವಕಾಶ ಕೊಡೊದು…
ಪಾವಗಡ: ಪಟ್ಟಣದ ಮಧುಗಿರಿ ಊರುಬಾಗಿಲು ಅರಳಿಕಟ್ಟೆ ಬಳಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿಯ ಶುಭ ಸಂಜೆಯ ಪೂಜಾಕಾರ್ಯಕ್ರಮದಲ್ಲಿ ಪಟ್ಟಣದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಡಾ.ಜಿವೆಂಕಟರಾಮಯ್ಯ, ಮಾಜಿ ಪುರಸಭೆ ಅಧ್ಯಕ್ಷರಾದ ಮಾನಂ ವೆಂಕಟಸ್ವಾಮಿ, ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ಹಾಗೂ ಇತರರು ಶ್ರೀ ವಿನಾಯಕನ ದರ್ಶನ ಪಡೆದರು. ಈ ಸಂದರ್ಭದಲ್ಲಿ ಹೆಲ್ಪ್ ಸೊಸೈಟಿ ವತಿಯಿಂದ ಪೂಜಾ ಕಾರ್ಯಕ್ಕೆ ಕಿರು ಕಾಣಿಕೆ ನೀಡಿದರು. ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಮಂಡಳಿಯಿಂದ ಗಣ್ಯರಿಗೆ ಶಾಲು ಹೊದಿಸಿ ದೇವರ ಪ್ರಸಾದ ನೀಡಿ ಸತ್ಕರಿಸಿದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರು ವಿದ್ಯುತ್ ತಂತಿ ಸ್ಪರ್ಶಿಸಿ ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಚೇಳೂರು ಹೋಬಳಿಯ ಮಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮಯ್ಯ(55) ಮೃತಪಟ್ಟವರಾಗಿದ್ದಾರೆ. ಎಂದಿನಂತೆ ಹೊಲಕ್ಕೆ ಕೆಲಸಕ್ಕೆ ತೆರಳಿದ್ದ ಇವರು ಹೊಲದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ್ದು, ಪರಿಣಾಮ ವಿದ್ಯುತ್ ಶಾಕ್ ನಿಂದ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕಳೆದ ನಾಲ್ಕು ದಿನಗಳಿಂದ ವಿದ್ಯುತ್ ತಂತಿ ಕಟ್ಟಾಗಿ ಹೊಲದಲ್ಲಿ ಬಿದ್ದಿತ್ತು. ಇದನ್ನು ಗಮನಿಸಿದ ಸ್ಥಳೀಯರು ವಿದ್ಯುತ್ ಅಂತಿಯನ್ನ ಸರಿಪಡಿಸಲು ಸ್ಥಳೀಯ ಬೆಸ್ಕಾಂ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಆದರೆ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದು, ಇದೀಗ ವ್ಯಕ್ತಿಯೊಬ್ಬರ ಪ್ರಾಣ ಬಲಿಯಾಗಿದೆ. ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಪಾವಗಡ : ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮಪಂಚಾಯಿತಿಯಲ್ಲಿ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರದಂದು ಚುನಾವಣೆ ನಡೆಯಿತು. ಚುನಾವಣಾ ಪ್ರಕ್ರಿಯೆಯಲ್ಲಿ ಸದಸ್ಯರಾದ ರಾಮಚಂದ್ರಪ್ಪ ಮತ್ತು ಸಿ.ನಂದೀಶ್ ಅವರು ಅಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಿದ್ದರು. ನಂದೀಶ್ ರವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆಯಲಾಗಿ, ಚುನಾವಣಾ ಕಣದಲ್ಲಿ ರಾಮಚಂದ್ರಪ್ಪ ಒಬ್ಬರೇ ಉಳಿದು, ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಯಾದ ತಹಶೀಲ್ದಾರ್ ಡಿ.ಎನ್.ವರದರಾಜು ಘೋಷಿಸಿದರು. ವೈ.ಎನ್.ಹೊಸಕೋಟೆ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 32 ಜನ ಸದಸ್ಯ ಸ್ಥಾನಬಲವಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 6 ಜನ ಸದಸ್ಯರು ಮತ್ತು ಜೆಡಿಎಸ್ ಬೆಂಬಲಿತ 19 ಜನರು ಸೇರಿ ಒಟ್ಟು 25 ಸದಸ್ಯರು ಭಾಗವಹಿಸಿದ್ದರು. ಉಳಿಕೆ 7 ಜನ ಸದಸ್ಯರು ಗೈರು ಆಗಿದ್ದರು. ನೂತನ ಅಧ್ಯಕ್ಷರಾದ ರಾಮಚಂದ್ರಪ್ಪ ರವರ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಪುರ ಮೆರವಣಿಗೆ ನಡೆಸಿ ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ಪಿಡಿಓ ಶ್ರೀರಾಮ್ ನಾಯ್ಕ, ಪಿಎಸ್ಐ ಮಾಳಪ್ಪ ನಾಯ್ಕೋಡಿ ಮುಖಂಡರಾದ ಜಿ.ಬಿ.ಸತ್ಯನಾರಾಯಣ, ಸತ್ಯನಾರಾಯಣ ಚೌದರಿ, ಟಿ.ಎನ್.ಕೃಷ್ಣಮೂರ್ತಿ, ನಾರಾಯಣಪ್ಪ,…
ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ತುಮಕೂರಿನಲ್ಲಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ.ಸೋಮಣ್ಣ ನೇತೃತ್ವದಲ್ಲಿ ವಿವಿಧ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಮುಖ್ಯವಾಗಿ ಸ್ವಚ್ಚ್ ಭಾರತ್ ಕಾರ್ಯಕ್ರಮದ ಅನುಷ್ಟಾನ ಮತ್ತು ಜನರಿಗೆ ಮನವರಿಕೆ ಮಾಡಿಕೊಡುವ ಯತ್ನ ಮಾಡಲಾಯಿತು. ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಇರುವ ಸಚಿವ ವಿ.ಸೋಮಣ್ಣ ಕಚೇರಿ ಮುಂಭಾಗ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ, ಉಚಿತ ಕನ್ನಡಕಗಳ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಜ್ಯೋತಿ ಗಣೇಶ್, ಸುರೇಶ್ ಗೌಡ ಮತ್ತಿತರರು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಬೆಂಗಳೂರು: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನ ಮೇಲೆ ಪೊಲೀಸರು ಹಲ್ಲೆ ನಡೆಸಿ ಆತನ ಸಾವಿಗೆ ಕಾರಣವಾಗಿರುವ ಬಗ್ಗೆ ಮೃತನ ಪತ್ನಿ ಸಿಎಂಗೆ ದೂರು ನೀಡಿದ್ದಾರೆ. ಮೃತ ವ್ಯಕ್ತಿ ರಾಮಸ್ವಾಮಿ ಎಂದು ಗುರುತಿಸಲಾಗಿದೆ. ಇವರ ಪತ್ನಿ ಮುನಿಯಮ್ಮ ಎಂಬವರು ಸಿಎಂ ಸಿದ್ದರಾಮಯ್ಯನವರಿಗೆ ಕೋಣನಕುಂಟೆ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಪಾಪಣ್ಣ ವಿರುದ್ಧ ದೂರು ನೀಡಿದ್ದಾರೆ. ತನ್ನ ಪತಿಯ ಸಾವಿಗೆ ಕಾರಣವಾದ ಇನ್ಸ್ ಪೆಕ್ಟರ್ ಪಾಪಣ್ಣ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಮುನಿಯಮ್ಮ ಮನವಿ ಮಾಡಿಕೊಂಡಿದ್ದಾರೆ. ಇನ್ಸ್ ಪೆಕ್ಟರ್ ಪಾಪಣ್ಣ, ತಮ್ಮ ಜಮೀನಿನ ಬಳಿ ಬಂದು ಪತಿ ಮೇಲೆ ಹಲ್ಲೆ ನಡೆಸಿದ್ದಾರೆ. ಸೆ.13ರಂದು ತನ್ನ ಪತಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕ್ರಮಕೈಗೊಳ್ಳಲು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿನಲ್ಲಿ ಅವರು ಉಲ್ಲೇಖಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296