Author: admin

ಬೆಂಗಳೂರು: ರಾಜ್ಯದಲ್ಲಿ ವಿವಿಧ ಸಾರ್ವಜನಿಕ ಯೋಜನೆಗಳಿಗಾಗಿ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯಸಮ್ಮತ ಪರಿಹಾರ ಒದಗಿಸಲು ಆಸ್ತಿಗಳ ‘ಮಾರ್ಗಸೂಚಿ ದರ’ವನ್ನು (Guideline Rate) ಕಾಲಕಾಲಕ್ಕೆ ಪರಿಷ್ಕರಿಸುವುದು ಅತ್ಯಗತ್ಯ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ಬುಧವಾರ ವಿಧಾನಪರಿಷತ್‌ನಲ್ಲಿ ಜೆಡಿಎಸ್ ಸದಸ್ಯ ಕೆ.ಎಸ್. ನವೀನ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಭೂಸ್ವಾಧೀನ ಪ್ರಕ್ರಿಯೆಯಲ್ಲಿ ರೈತರಿಗೆ ಆಗುತ್ತಿರುವ ಆರ್ಥಿಕ ನಷ್ಟದ ಬಗ್ಗೆ ವಿವರಣೆ ನೀಡಿದರು. ಪ್ರಸ್ತುತ ಅಧಿಕೃತ ಮಾರ್ಗಸೂಚಿ ದರ ಮತ್ತು ಮಾರುಕಟ್ಟೆ ದರಗಳ ನಡುವೆ ಭಾರಿ ವ್ಯತ್ಯಾಸವಿದೆ. ಕೆಲವು ಕಡೆ ಮಾರ್ಗಸೂಚಿ ದರ ಕೇವಲ 2 ಲಕ್ಷ ರೂಪಾಯಿ ಇದ್ದರೆ, ಮಾರುಕಟ್ಟೆ ದರ 80 ಲಕ್ಷ ರೂಪಾಯಿಗಳವರೆಗೂ ಇರುತ್ತದೆ. ಈ ಅಂತರದಿಂದಾಗಿ ರೈತರಿಗೆ ಕಡಿಮೆ ಪರಿಹಾರ ಸಿಗುತ್ತಿದೆ. ಮಾರ್ಗಸೂಚಿ ದರ ಮತ್ತು ಮಾರುಕಟ್ಟೆ ದರಗಳ ನಡುವಿನ ವ್ಯತ್ಯಾಸವೇ ‘ಚೆಕ್’ ಮತ್ತು ‘ಕ್ಯಾಶ್’ ಮೂಲಕ ನಡೆಯುವ ಕಪ್ಪು ಹಣದ ವ್ಯವಹಾರಗಳಿಗೆ ಪ್ರಮುಖ ಕಾರಣವಾಗಿದೆ. ದರ ಪರಿಷ್ಕರಣೆಯಿಂದ ಇದನ್ನು ತಡೆಗಟ್ಟಬಹುದು ಎಂದು ಸಚಿವರು ಅಭಿಪ್ರಾಯಪಟ್ಟರು.…

Read More

ಬೆಂಗಳೂರು: ರಾಜ್ಯ ವಿಧಾನಸಭೆ ಅಧಿವೇಶನಕ್ಕೆ ಸತತವಾಗಿ ಗೈರುಹಾಜರಾಗುತ್ತಿರುವ ಹಾಗೂ ಶಾಸಕರ ಅಹವಾಲುಗಳಿಗೆ ಸ್ಪಂದಿಸದ ಸಚಿವರ ವಿರುದ್ಧ ಆಡಳಿತಾರೂಢ ಕಾಂಗ್ರೆಸ್ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂತಹ ಸಚಿವರನ್ನು ಕೂಡಲೇ ಸಂಪುಟದಿಂದ ಕೈಬಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರು ಒತ್ತಾಯಿಸಿದ್ದಾರೆ. ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಈ ಬೆಳವಣಿಗೆ ನಡೆದಿದೆ.  ಅನಿವಾರ್ಯ ಕಾರಣಗಳಿಲ್ಲದಿದ್ದರೂ ಅನೇಕ ಸಚಿವರು ಸದನಕ್ಕೆ ಗೈರಾಗುತ್ತಿದ್ದಾರೆ. ಮುಖ್ಯಮಂತ್ರಿಗಳ ಸೂಚನೆಯನ್ನೂ ಮೀರಿ ಸಚಿವರು ನಡೆದುಕೊಳ್ಳುತ್ತಿರುವುದು ಶಾಸಕರ ಕೆಂಗಣ್ಣಿಗೆ ಗುರಿಯಾಗಿದೆ. ತಮ್ಮ ಕ್ಷೇತ್ರಗಳ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ಸಚಿವರು ವಿಳಂಬ ಮಾಡುತ್ತಿದ್ದಾರೆ ಎಂದು ಶಾಸಕರು ದೂರಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಕ್ಷಮತೆಯ ಮೌಲ್ಯಮಾಪನವಾಗಬೇಕು ಎಂದು ಹಿರಿಯ ಶಾಸಕರು ಆಗ್ರಹಿಸಿದ್ದಾರೆ. ಸಿಎಂ ಸೂಚನೆ: ಶಾಸಕರ ಅಸಮಾಧಾನಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಜಿಎಸ್ಟಿ ಹಂಚಿಕೆಯಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಮತ್ತು ಗ್ಯಾಸ್ ಬೆಲೆ ಏರಿಕೆ ವಿಚಾರದಲ್ಲಿ ಬಿಜೆಪಿಯನ್ನು ಸದನದಲ್ಲಿ ಸಮರ್ಥವಾಗಿ ಎದುರಿಸುವಂತೆ ಶಾಸಕರಿಗೆ…

Read More

ತುಮಕೂರು: ಕೊಟ್ಟಿದ್ದ ಸಾಲದ ಹಣವನ್ನು ವಾಪಸ್‌ ಕೇಳಿದ ವಿಚಾರಕ್ಕೆ ಉಂಟಾದ ಗಲಾಟೆಯಲ್ಲಿ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಗರದ ಮೆಳೆಕೋಟೆ ಬಳಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ತಿಲಕ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ನಜರಾಬಾದ್ ನಿವಾಸಿ ಮೊಹಮ್ಮದ್ ಮುಬಾರಕ್ (28) ಕೊಲೆಯಾದ ದುರ್ದೈವಿ. ಮರಳೂರು ದಿಣ್ಣೆಯ ನಿವಾಸಿ ಮುಬಾರಕ್ (29) ಬಂಧಿತ ಆರೋಪಿ. ಇಬ್ಬರೂ ಕಳೆದ ಹಲವು ವರ್ಷಗಳಿಂದ ಸ್ನೇಹಿತರಾಗಿದ್ದು, ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದರು. ಆರೋಪಿ ಮುಬಾರಕ್, ಮೃತ ಮೊಹಮ್ಮದ್ ಮುಬಾರಕ್‌ನಿಂದ ₹50 ಸಾವಿರ ಸಾಲ ಪಡೆದಿದ್ದ ಎನ್ನಲಾಗಿದೆ. ಈ ಹಣವನ್ನು ಹಿಂದಿರುಗಿಸುವಂತೆ ಮೊಹಮ್ಮದ್ ಪದೇ ಪದೇ ಕೇಳುತ್ತಿದ್ದರು. ಇದೇ ವಿಷಯಕ್ಕೆ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಮಂಗಳವಾರ ಸಂಜೆ ಸಹ ಹಣದ ವಿಚಾರವಾಗಿ ಇಬ್ಬರ ನಡುವೆ ಮೆಳೆಕೋಟೆ ಬಳಿ ತೀವ್ರ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಆಕ್ರೋಶಗೊಂಡ ಆರೋಪಿ ಮುಬಾರಕ್, ತನ್ನಲ್ಲಿದ್ದ ಚಾಕುವಿನಿಂದ ಮೊಹಮ್ಮದ್ ಮುಬಾರಕ್‌ನ ಕುತ್ತಿಗೆ ಮತ್ತು ಕೆನ್ನೆಗೆ ಇರಿದು ಹಲ್ಲೆ ನಡೆಸಿದ್ದಾನೆ.…

Read More

ತುಮಕೂರು: ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ದೊಡ್ಡ ಮಟ್ಟದಲ್ಲಿ ಅರ್ಜಿಗಳು ತಿರಸ್ಕೃತಗೊಂಡಿವೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಹುದ್ದೆಗಳ ವಿವರ ಮತ್ತು ಅರ್ಜಿಗಳ ಸ್ಥಿತಿಗತಿ ಈ ಕೆಳಗಿನಂತಿದೆ: ಅಂಗನವಾಡಿ ಕಾರ್ಯಕರ್ತೆಯರು: ಒಟ್ಟು 117 ಹುದ್ದೆಗಳಿಗೆ 3,072 ಅರ್ಜಿಗಳು ಸಲ್ಲಿಕೆಯಾಗಿದ್ದವು. ಇದರಲ್ಲಿ ಕೇವಲ 444 ಅರ್ಜಿಗಳು ಮಾತ್ರ ಅರ್ಹತೆ ಪಡೆದಿದ್ದು, ಉಳಿದ 2,628 ಅರ್ಜಿಗಳು ತಿರಸ್ಕೃತಗೊಂಡಿವೆ. ಅರ್ಜಿಗಳು ತಿರಸ್ಕೃತಗೊಂಡಿರುವ 9 ಕೇಂದ್ರಗಳಿಗೆ ಪುನಃ ಅರ್ಜಿ ಆಹ್ವಾನಿಸಲು ನಿರ್ಧರಿಸಲಾಗಿದೆ. ಅಂಗನವಾಡಿ ಸಹಾಯಕಿಯರು: ಒಟ್ಟು 829 ಹುದ್ದೆಗಳಿಗೆ 3,026 ಅರ್ಜಿಗಳು ಬಂದಿದ್ದವು. ಈ ಪೈಕಿ 1,316 ಅರ್ಜಿಗಳು ಸ್ವೀಕೃತವಾಗಿದ್ದು, 1,710 ಅರ್ಜಿಗಳು ತಾಂತ್ರಿಕ ಅಥವಾ ಇತರೆ ಕಾರಣಗಳಿಂದ ತಿರಸ್ಕೃತಗೊಂಡಿವೆ. ಸುಮಾರು 225 ಕೇಂದ್ರಗಳಿಗೆ ಮತ್ತೆ ಅರ್ಜಿ ಕರೆಯುವ ಸಾಧ್ಯತೆ ಇದೆ. ಪಟ್ಟಿ ಎಲ್ಲಿ ಲಭ್ಯ? ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಸಂಬಂಧಪಟ್ಟ ಅಂಗನವಾಡಿ ಕೇಂದ್ರಗಳು, ಗ್ರಾಮ…

Read More

ತಿಪಟೂರು: ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ತಾಲ್ಲೂಕು ಜೈಭೀಮ್ ಛಲವಾದಿ ಮಹಾಸಭಾ ಹಾಗೂ ಪ್ರಗತಿಪರ ಸಂಘಗಳ ಮಹಾ ಒಕ್ಕೂಟದಿಂದ ನಗರದ ಅಂಬೇಡ್ಕರ್ ವೃತ್ತದಿಂದ ತಾಲ್ಲೂಕು ಆಡಳಿತಸೌಧದವರೆಗೆ ಬೈಕ್ ರ‍್ಯಾಲಿ, ಪ್ರತಿಭಟನೆ ನಡೆಸಲಾಯಿತು. ಛಲವಾದಿ ಮಹಾಸಭಾದ ಅಧ್ಯಕ್ಷ ಬಜಗೂರು ಮಂಜುನಾಥ್ ಮಾತನಾಡಿ, ರಾಜ್ಯದಲ್ಲಿ ಒಳ ಮೀಸಲಾತಿ ಕೆಲವರಿಗೆ ವಿಷವಾದರೆ, ಇನ್ನು ಕೆಲವರಿಗೆ ಹಾಲು ನೀಡಿದಂತಾಗಿದೆ. ಈ ಅಸಮಾನತೆ ಅಳಿಸಿ ಸಮಾನತೆ ನೀಡದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು. ರಾಜ್ಯದಾದ್ಯಂತ ಒಳಮೀಸಲಾತಿಯಲ್ಲಿ ಎಡ ಮತ್ತು ಬಲ ವಿಭಾಗ ಮಾಡಿ ವಿಷ ಉಣಿಸಲಾಗುತ್ತಿದೆ. ಹಿಂದಿನ 15:3 ಅನುಪಾತದ ಮೀಸಲು ಚೆನ್ನಾಗಿತ್ತು ಎಂದರು. ಗೌರವಾಧ್ಯಕ್ಷ ಬುರುಡೇಘಟ್ಟ ಪ್ರಭುಸ್ವಾಮಿ ಮಾತನಾಡಿ, ತಾಲ್ಲೂಕಿನ ಛಲವಾದಿ ಸಮುದಾಯಕ್ಕೆ ಒಳಮೀಸಲಾತಿಯಲ್ಲಿ ಅನ್ಯಾಯವಾಗಿದೆ. ನ್ಯಾಯ ಒದಗಿಸಬೇಕು. ಹಿಂದೆ ಇದ್ದ ಮೀಸಲಾತಿಯನ್ನೇ ಮತ್ತೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕಂಚಾಘಟ್ಟ ಮಧುಸೂಧನ್, ಸಿದ್ದೇಶ್ ಕರಡಾಳು, ಶಿವಲಿಂಗಮೂರ್ತಿ, ಶಿವಕುಮಾರ್, ರಘು, ವಸಂತ್, ಸುರೇಶ್, ಮೋಹನ್, ಚನ್ನರಾಜು ಮಹಾಲಿಂಗಪ್ಪ, ನರಸಿಂಹಮೂರ್ತಿ ಭಾಗವಹಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ಮಧುಗಿರಿ: ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಗೆ ತರುವ ವಿಷಯದಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ, ವಿವಿಧ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಎಡಗೈ ಸಮುದಾಯದ ವಕೀಲರು ಬುಧವಾರ ಇಲ್ಲಿನ ಉಪ ವಿಭಾಗಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಸಚಿವರಾದ ಜಿ. ಪರಮೇಶ್ವರ, ಎಚ್.ಸಿ. ಮಹದೇವಪ್ಪ, ಪ್ರಿಯಾಂಕ್ ಖರ್ಗೆ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಇವರು ಒಳ ಮೀಸಲಾತಿಯ ವಿರೋಧಿಗಳಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರಸ್ತುತ ಬಾಕಿ ಇರುವ 56,432 ಸರ್ಕಾರಿ ಹುದ್ದೆಗಳ ನೇಮಕಾತಿಯನ್ನು ಒಳ ಮೀಸಲಾತಿ ಅನ್ವಯವೇ ನಡೆಸಬೇಕು.  ಒಳ ಮೀಸಲಾತಿ ಜಾರಿಯಲ್ಲಿ ವಿಳಂಬ ಮಾಡುವುದರಿಂದ ಸಮುದಾಯದ ವಿದ್ಯಾವಂತ ಯುವಕರ ಭವಿಷ್ಯಕ್ಕೆ ತೊಂದರೆಯಾಗುತ್ತಿದೆ.  ಶೀಘ್ರವೇ ವೈಜ್ಞಾನಿಕವಾಗಿ ಒಳ ಮೀಸಲಾತಿ ಜಾರಿಗೊಳಿಸಿ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯ ನಂತರ ತಹಶೀಲ್ದಾರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು. ವಕೀಲ ಬಿದಲೋಟಿ ರಂಗನಾಥ್ ಮಾತನಾಡಿ, “ಒಳ ಮೀಸಲಾತಿ ಅಡಿಯಲ್ಲಿ ಉದ್ಯೋಗ…

Read More

ತುಮಕೂರು: ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧದ ಪರಿಣಾಮವಾಗಿ ವಾಣಿಜ್ಯ ಬಳಕೆಯ ಅಡುಗೆ ಅನಿಲ (LPG) ಸಿಲಿಂಡರ್‌ಗಳ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ತುಮಕೂರು ನಗರದ ಹಲವು ಹೋಟೆಲ್‌ಗಳು ಬಾಗಿಲು ಮುಚ್ಚಿವೆ. ನಗರದ ಹೊರಪೇಟೆಯ ಪ್ರಸಿದ್ಧ ‘ಪ್ರಸಾದ್ ಹೋಟೆಲ್’ ಬುಧವಾರದಿಂದ ವಹಿವಾಟು ಸ್ಥಗಿತಗೊಳಿಸಿದೆ. ಪ್ರತಿ ದಿನ ಸುಮಾರು ಮೂರು ಸಿಲಿಂಡರ್‌ ಗಳ ಅಗತ್ಯವಿದ್ದರೂ, ಪೂರೈಕೆ ಇಲ್ಲದ ಕಾರಣ ಅನಿವಾರ್ಯವಾಗಿ ಬೀಗ ಹಾಕಲಾಗಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಅನಿಲ ಸರಬರಾಜು ಕಡಿತಗೊಂಡಿದೆ. ಗ್ಯಾಸ್ ಏಜೆನ್ಸಿಗಳ ಮುಂದೆ ಗ್ರಾಹಕರು ಸಾಲುಗಟ್ಟಿ ನಿಂತಿದ್ದರೂ, ಹೊಸ ಬುಕಿಂಗ್‌ಗಳನ್ನು ಸ್ವೀಕರಿಸಲು ಏಜೆನ್ಸಿಗಳು ಹಿಂದೇಟು ಹಾಕುತ್ತಿವೆ. ಒಂದು ವೇಳೆ ಬುಕ್ ಮಾಡಿದರೂ ಸಿಲಿಂಡರ್ ಸಿಗಲು ಕನಿಷ್ಠ 15 ದಿನಗಳ ಕಾಲ ಕಾಯಬೇಕಾದ ಪರಿಸ್ಥಿತಿ ಇದೆ. ಕೆಲವು ಹೋಟೆಲ್ ಮಾಲೀಕರು ಸೌದೆ ಒಲೆಗಳನ್ನು ಬಳಸಲು ಮುಂದಾಗಿದ್ದರೂ, ಎಲ್ಲಾ ಖಾದ್ಯಗಳನ್ನು ಸೌದೆಯಲ್ಲಿ ತಯಾರಿಸುವುದು ಸವಾಲಾಗಿದೆ. ಇನ್ನು ಕೆಲವು ಹೋಟೆಲ್‌ ಗಳಲ್ಲಿ ಪೈಪ್‌ಲೈನ್ ಸಂಪರ್ಕ ಇರುವುದರಿಂದ ಸದ್ಯಕ್ಕೆ ತೊಂದರೆಯಾಗಿಲ್ಲ, ಆದರೆ ಮುಂದಿನ ದಿನಗಳಲ್ಲಿ…

Read More

ತುಮಕೂರು: ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮಕ್ಕಳ ಹಕ್ಕುಗಳು, ಸಂರಕ್ಷಣೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾನೂನುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ. ಮಾ.10 ರಂದು ಪೌರಾಡಳಿತ ನಿರ್ದೇಶನಾಲಯದಿಂದ ಈ ಸುತ್ತೋಲೆ ಹೊರಬಂದಿದ್ದು, ಈ ಹಿಂದೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ.ಕೆ.ಟಿ.ತಿಪ್ಪೇಸ್ವಾಮಿ ಅವರು ಸಲ್ಲಿಸಿದ್ದ ಶಿಫಾರಸುಗಳನ್ನು ಪರಿಗಣಿಸಿ ಸರ್ಕಾರ ಈ ಸುತ್ತೋಲೆ ಹೊರಡಿಸಿದೆ. ಪ್ರತಿ ವಾರ್ಡ್ ವ್ಯಾಪ್ತಿಯಲ್ಲಿ 10 ವರ್ಷಗಳ ವಯಸ್ಸಿನ ಮಕ್ಕಳ ಸಂಖ್ಯೆ, ಶಾಲಾ ದಾಖಲಾತಿ, ಶಾಲೆಯಿಂದ ಹೊರಗುಳಿದ ಮಕ್ಕಳು, ಬಾಲ ಕಾರ್ಮಿಕತೆ, ವಿಶೇಷ ಅವಶ್ಯಕತೆ ಇರುವ ಮಕ್ಕಳು, ಸಂಕಷ್ಟದಲ್ಲಿರುವ ಮಕ್ಕಳು ಇತ್ಯಾದಿ ಮಾಹಿತಿಗಳನ್ನು ಸಂಗ್ರಹಿಸಿ ವಾರ್ಡ್ ಮಟ್ಟದ ಮಕ್ಕಳ ಸ್ಥಿತಿಗತಿ ವರದಿ ತಯಾರಿಸಬೇಕು. ಪ್ರತಿ ಸ್ಥಳೀಯ ಆಡಳಿತದಲ್ಲಿ ಅಧ್ಯಕ್ಷರು, ಮೇಯರ್ ಅವರ ಅಧ್ಯಕ್ಷತೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ ರಚಿಸಬೇಕು. ಸಮಿತಿಯಲ್ಲಿ ಆಯ್ಕೆಯಾದ ಸದಸ್ಯರು ಸಂಬಂಧಿತ ಅಧಿಕಾರಿಗಳು, ಸಮಾಜ…

Read More

ಹುಳಿಯಾರು: ಇಲ್ಲಿಗೆ ಸಮೀಪದ ದೊಡ್ಡಬಿದರೆಯ ಡಾ.ಗೇಟ್ ಸಮೀಪದ ತೆಂಗಿನ ತೋಟವೊಂದಕ್ಕೆ  ಆಕಸ್ಮಿಕವಾಗಿ ಬೆಂಕಿ ತಗುಲಿದ್ದು,  ಪರಿಣಾಮವಾಗಿ ಐದು ಎಕರೆ ಪ್ರದೇಶದಲ್ಲಿದ್ದ ಹತ್ತಾರು ತೆಂಗಿನ ಮರಗಳು ಹಾಗೂ ಜಾಲಿ ಮರಗಳು ಅಗ್ನಿಗೆ ಆಹುತಿಯಾಗಿವೆ. ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಸರ್ವೆ ನಂಬರ್ 181 ರ ತಮ್ಮಯ್ಯ ಎಂಬುವವರ ತೋಟದಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ವಿಪರೀತ ಬಿಸಿಲು ಹಾಗೂ ಗಾಳಿಯ ವೇಗಕ್ಕೆ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿ, ರಸ್ತೆಯ ಮತ್ತೊಂದು ಬದಿಯ ಸರ್ವೆ ನಂಬರ್ 200 ಹಾಗೂ 75 ರ ಜಮೀನುಗಳಿಗೂ ಕಿಡಿ ಹಾರಿ ಕೆಲವು ಮರಗಳು ಸುಟ್ಟು ಹೋಗಿವೆ. ಅಗ್ನಿಶಾಮಕ ದಳ  ಸಕಾಲಕ್ಕೆ  ತಲುಪದ ಕಾರಣ ಬೆಂಕಿ ನಂದಿಸಲಾಗದೇ ರೈತರು ಸಂಕಷ್ಟಕ್ಕೆ ಸಿಲುಕಿದರು. ಬೆಂಕಿಯಿಂದಾಗಿ ಹಬ್ಬಿದ ಹೊಗೆಯ ದಟ್ಟ ಕಾರ್ಮೋಡಗಳನ್ನು ಕಂಡು ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಕ್ಕೊಳಗಾದರು. ಸಾರ್ವಜನಿಕರು ತಕ್ಷಣ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದರೂ, ವಾಹನ ಬರಲು ಒಂದು ಗಂಟೆ ತಡವಾಯಿತು. ಈ ವಿಳಂಬದಿಂದಾಗಿ ಬೆಂಕಿಯನ್ನು ಹತೋಟಿಗೆ ತರುವ ಹೊತ್ತಿಗೆ ತೋಟದ ಬಹುಭಾಗ…

Read More

ತೆಲಂಗಾಣ: ಭಾರತೀಯ ಸಂಸ್ಕೃತಿಯಲ್ಲಿ ‘ಅತಿಥಿ ದೇವೋ ಭವ’ ಎಂಬ ಮಾತಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಕಾಲಘಟ್ಟ ಮತ್ತು ಹೆಚ್ಚುತ್ತಿರುವ ಖರ್ಚು ವೆಚ್ಚಗಳಿಂದಾಗಿ ಮದುವೆ ಸಮಾರಂಭಗಳಲ್ಲಿ ಕರೆಯದೇ ಬರುವ ಅತಿಥಿಗಳು ಆಯೋಜಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದಾರೆ. ಇದೀಗ ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯ ಕಲ್ಯಾಣ ಮಂಟಪವೊಂದರ ಮುಂದೆ ಹಾಕಲಾಗಿರುವ ಬೋರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಮಹಬೂಬಾಬಾದ್‌ ನ ಕಲ್ಯಾಣ ಮಂಟಪವೊಂದರ ಪ್ರವೇಶ ದ್ವಾರದಲ್ಲಿ ತೆಲುಗು ಭಾಷೆಯ ಎಚ್ಚರಿಕೆ ಫಲಕವೊಂದನ್ನು ಹಾಕಲಾಗಿದೆ. ಇದರಲ್ಲಿ, “ಆಹ್ವಾನವಿಲ್ಲದೇ ಮದುವೆ ಅಥವಾ ಶುಭ ಸಮಾರಂಭಗಳಿಗೆ ಬಂದು ಊಟ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಬರೆಯಲಾಗಿದೆ. ಈ ಎಚ್ಚರಿಕೆ ಫಲಕದ ಪ್ರಕಾರ, ಆಹ್ವಾನವಿಲ್ಲದೆ ಬರುವವರಿಗೆ 3 ತಿಂಗಳ ಜೈಲು ಶಿಕ್ಷೆ, 5,000 ರೂಪಾಯಿ ದಂಡ ವಿಧಿಸಲಾಗುವುದು ಅಂತಾ ಬರೆಯಲಾಗಿದೆ.  ಇದನ್ನು ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 329 (ಹಳೆಯ ಐಪಿಸಿ ಸೆಕ್ಷನ್ 441 — ಕ್ರಿಮಿನಲ್ ಅತಿಕ್ರಮಣ) ಅಡಿಯಲ್ಲಿ ಜಾರಿಗೆ ತರಲಾಗುವುದು…

Read More