Subscribe to Updates
Get the latest creative news from FooBar about art, design and business.
- ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್ ಗೆ ನುಗ್ಗಿದ ವಾಹನ!
- ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
- ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
- ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
- ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
Author: admin
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣ ಆರೋಪ ಸಂಬಂಧ ಕಾನೂನುಬಾಹಿರ ನಿರ್ಣಯ ಕೈಗೊಂಡ ರಾಜ್ಯಪಾಲರು ರಾಜೀನಾಮೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ನಲ್ಲಿ ಅಧಿಕೃತವಾಗಿ ಅರ್ಜಿ ಸಲ್ಲಿಸಿದ್ದಾರೆ. ಇದೇ ವೇಳೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಆದೇಶದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ಚುನಾಯಿತ ಸರ್ಕಾರವನ್ನು ಅಸ್ತಿರಗೊಳಿಸುತ್ತಿದೆ. ಇದು ಪ್ರಜಾಪ್ರಭುತ್ವದ ಮೂಲಭೂತ ತತ್ವಕ್ಕೆ ಧಕ್ಕೆ, ಒಕ್ಕೂಟ ವ್ಯವಸ್ಥೆಗೆ ಧಕ್ಕೆ, ಪ್ರಜಾತಂತ್ರಕ್ಕೆ ಧಕ್ಕೆ ಎಂದು ಸಚಿವ ಸಂಪುಟ ನಿರ್ಣಯಿಸಿದೆ. ಎಲ್ಲಾ ರಾಜ್ಯ ಸರ್ಕಾರಗಳ ಎಲ್ಲಾ ಮುಖ್ಯ ಕಾರ್ಯದರ್ಶಿಗಳಿಗೆ ಸೆಪ್ಟೆಂಬರ್ 3, 2021 ಕ್ಕೆ ಕೇಂದ್ರ ಸರ್ಕಾರವೇ ಕಳುಹಿಸಿರುವ ಸುತ್ತೋಲೆ ಪ್ರಕಾರವೇ ರಾಜ್ಯಪಾಲರು ಪ್ರೊಸೀಜರ್ ಅನುಸರಿಸಿಲ್ಲ. ಸುತ್ತೋಲೆಯಲ್ಲಿರುವ ನಿರ್ದೇಶನಗಳನ್ನೇ ರಾಜ್ಯಪಾಲರು ಪಾಲಿಸಿಲ್ಲ. ಆದ್ದರಿಂದ ರಾಜ್ಯಪಾಲರ ನಿರ್ಣಯ ಕಾನೂನುಬಾಹಿರ. ಈ ಕಾನೂನುಬಾಹಿರ ತೀರ್ಮಾನದ ವಿರುದ್ಧ ಕಾನೂನು ಹೋರಾಟ ನಡೆಸಲು ಸಚಿವ ಸಂಪುಟ ಸಭೆ ನಿರ್ಣಯಿಸಿದೆ. ಚುನಾಯಿತ ಸರ್ಕಾರವನ್ನು ಕಿತ್ತಾಕುವ…
ಚೆನ್ನೈ: ಎನ್ ಸಿಸಿ ಕ್ಯಾಂಪ್ ನಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಹಾಗೂ ಹಲವು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ನೀಡಿರುವ ಘಟನೆಗೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ 9 ಮಂದಿಯನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿ ಶಿವರಾಮನ್ ಸೇರಿದಂತೆ ಶಾಲೆಯ ಪ್ರಾಂಶುಪಾಲ, ವರದಿಗಾರ, ಇಬ್ಬರು ಶಿಕ್ಷಕರು ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಿ, ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಲಾಗಿದೆ. ಆಗಸ್ಟ್ 5ರಿಂದ 9ರವರೆಗೆ ಕೃಷ್ಣಗಿರಿ ಜಿಲ್ಲೆಯ ಬರಗೂರು ಖಾಸಗಿ ಶಾಲೆಯಲ್ಲಿ ಎನ್‌ಸಿಸಿ ಶಿಬಿರ ಆಯೋಜಿಸಲಾಗಿತ್ತು. ಶಿಬಿರದಲ್ಲಿ 17 ಬಾಲಕಿಯರು ಸೇರಿದಂತೆ ಒಟ್ಟು 41 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಿಬಿರದಲ್ಲಿ ಲೈಂಗಿಕ ಕಿರುಕುಳ ನಡೆದಿರುವುದು ಶಾಲಾ ಆಡಳಿತ ಮಂಡಳಿಗೆ ತಿಳಿದಿತ್ತು. ಆದರೆ, ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಪ್ರಯತ್ನಿಸಲಾಗಿತ್ತು. ಇದೀಗ ಶಾಲಾ ಆಡಳಿತ ಮಂಡಳಿ ಕೂಡ ಈ ಪ್ರಕರಣದಲ್ಲಿ ತಪ್ಪಿತಸ್ಥ ಸ್ಥಾನದಲ್ಲಿ ನಿಂತಿದ್ದು, ಕಾನೂನು ಕ್ರಮವಾಗುವ ಸಾಧ್ಯತೆ ಇದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಬೆಂಗಳೂರು: ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಶಾಸಕ ಎ.ಮಂಜು ಆಗ್ರಹಿಸಿದರು. ಜೆಪಿ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಾರೆ. ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟ ಮೇಲೆ ರಾಜೀನಾಮೆ ಕೊಡಬೇಕು ಅಂತ ಕಾನೂನಿನಲ್ಲಿ ಇಲ್ಲ. ಆದರೆ ನೈತಿಕತೆ ಅಂತ ಇದೆ. ಲಾಯರ್ ಆಗಿದ್ದವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ನೀಡಬೇಕು ಎಂದು ಅವರು ಒತ್ತಾಯಿಸಿದರು. ಕುಮಾರಸ್ವಾಮಿ ಕೇಸ್‌ಗೆ ರಾಜ್ಯಪಾಲರು ಅನುಮತಿ ಕೊಡಲಿಲ್ಲ ಎನ್ನುತ್ತಾರೆ. ಅವರು ಅಧಿಕಾರದಲ್ಲಿ ಇದ್ದಾಗ ನೋಡಿಕೊಳ್ಳಬೇಕಿತ್ತು. ನನಗೆ ಇರುವ ಮಾಹಿತಿ ಪ್ರಕಾರ ಸುಪ್ರೀಂ ಕೋರ್ಟ್‌ನಲ್ಲಿ ಸ್ಟೇ ಇದೆ. ಅದಕ್ಕೆ ರಾಜ್ಯಪಾಲರು ಅನುಮತಿ ಕೊಟ್ಟಿಲ್ಲ ಎನಿಸುತ್ತದೆ ಎಂದು ಹೇಳಿದರು. ಸಿಎಂ ನೈತಿಕತೆ ಬಗ್ಗೆ ಮಾತನಾಡುತ್ತಾರೆ. ಹೀಗಾಗಿ ಇವರು ತನಿಖೆಗೆ ಅವಕಾಶ ಮಾಡಿಕೊಡಲಿ. ಸಿದ್ದರಾಮಯ್ಯ ನಾನು ಲಾಯರ್ ಅಂತಾರೆ. ಲಾಯರ್ ಆಗಿರುವುದರಿಂದ ನೈತಿಕತೆಯಿಂದ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು…
ಬೆಂಗಳೂರು: ನಾವು ನಲಪಾಡ್ ಕಡೆಯವರು ಎಂದು ವಿದ್ಯಾರ್ಥಿಯನ್ನು ಬೆದರಿಸಿ, ಕಿಡ್ನಾಪ್ ಮಾಡಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 9 ಮಂದಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಕಿಡ್ನಾಪ್ ಮಾಡಿ ಸುಲಿಗೆ ಮಾಡಿರುವ ಕುರಿತು ನಾಲ್ವರ ವಿರುದ್ಧ ಜೀವನ್ ಜೈನ್ ಎಂಬ ವಿದ್ಯಾರ್ಥಿ ಆರೋಪ ಮಾಡಿದ್ದಾನೆ. ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿರುವ ಜೀವನ್ ಜೈನ್ ಎಂಬ ವಿದ್ಯಾರ್ಥಿ ಕಳೆದ ವರ್ಷ ಆಯುಷ್ ಶ್ರೀನಿವಾಸ್ ಎಂಬಾತನಿಂದ ಮೂರು ಲಕ್ಷ ಸಾಲ ಪಡೆದಿದ್ದ. ಇವೆಂಟ್ ಒಂದರ ವಿಚಾರವಾಗಿ ಹಣ ಪಡೆದಿದ್ದ. ಆದರೆ ಹೇಳಿದ ಸಮಯಕ್ಕೆ ಹಣ ನೀಡಲು ಆಗಿರಲಿಲ್ಲ. ತಡವಾಗಿ ಸಾಲ ತೀರಿಸಿದ್ದ. ಆದರೆ ಕಿಡಿಗೇಡಿಗಳು ಸಾಲ ತೀರಿಸಿದರೂ ಆತನನ್ನು ಬಿಡದೆ ಮತ್ತಷ್ಟು ಹಣಕ್ಕಾಗಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಲೇಟಾಗಿ ಹಣ ಕೊಟ್ಟಿದ್ದಕ್ಕೆ ಕಿಡ್ನಾಪ್ ಮಾಡಿ ಬೆದರಿಸಲಾಗಿದೆ. ನಾವು ನಲಪಾಡ್ ಹುಡುಗರು, ಹತ್ತು ಲಕ್ಷ ಕೊಡಬೇಕು ಎಂದು ಬೆದರಿಕೆ ಹಾಕಿದ್ದಾರೆ. ಆರು ಲಕ್ಷ ರೂಪಾಯಿ ಹಾಕಿಸಿಕೊಂಡಿದ್ದಲ್ಲದೆ ಹತ್ತು…
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತಮ್ಮ ವಿರುದ್ಧ ತನಿಖೆಗೆ ಆದೇಶಿಸಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಇಂದಿನಿಂದ ಕಾನೂನು ಹೋರಾಟ ಆರಂಭಿಸಲಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಮೂವರು ದೂರುದಾರರನ್ನು ಪ್ರತಿವಾದಿಯನ್ನಾಗಿಸಿ ರಿಟ್ ಅರ್ಜಿ ಸಲ್ಲಿಸಲಾಗಿದೆ. ಸಚಿವ ಸಂಪುಟದ ಶಿಫಾರಸಿಗೆ ವಿರುದ್ಧವಾಗಿ ರಾಜ್ಯಪಾಲರು ನಡೆದುಕೊಂಡಿದ್ದಾರೆ. ಅನುಮತಿಗೂ ಮುನ್ನ ದಾಖಲೆಗಳನ್ನು ಪರಿಶೀಲಿಸಿಲ್ಲ ಎಂದು ರಿಟ್ ಅರ್ಜಿಯಲ್ಲಿ ತಿಳಿಸಲಾಗಿದೆ. ಖಾಸಗಿ ದೂರಿನ ಆಧಾರದ ಮೇಲೆ ಗೌರ್ನರ್ ಭ್ರಷ್ಟಾಚಾರ ನಿಗ್ರಹ ಕಾಯಿದೆ ಸೆಕ್ಷನ್ 17–ಎ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್ 218ರಡಿ ತನಿಖೆಗೆ ಅನುಮತಿ ನೀಡಿರುವುದು ಕಾನೂನು ಬಾಹಿರವಾಗಿರುವುದರಿಂದ ರದ್ದುಪಡಿಸುವಂತೆ ಸಿಎಂ ಪರ ವಕೀಲ ರವಿವರ್ಮ ಕುಮಾರ್ ವಾದ ಮಂಡಿಸಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಅಸ್ಸಾಂ: ಶಿಕ್ಷಕನೊಬ್ಬ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಬೆನ್ನಲ್ಲೇ ಉದ್ರಿಕ್ತ ಗ್ರಾಮಸ್ಥರು ಶಾಲೆಗೆ ಬೆಂಕಿಯಿಟ್ಟು ಧ್ವಂಸಗೊಳಿಸಿದ ಘಟನೆ ಕರೀಂಗಂಜ್ ನ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರ ಜೊತೆಗೆ ಈ ಶಾಲೆಯ ಶಿಕ್ಷಕ ಅಸಭ್ಯವಾಗಿ ವರ್ತಿಸುತ್ತಿದ್ದ. ವಿದ್ಯಾರ್ಥಿನಿಯರಿಗೆ ಅಶ್ಲೀಲ ಚಿತ್ರ ನೋಡುವಂತೆ ಒತ್ತಡ ಹಾಕುತ್ತಿದ್ದ, ಬಳಿಕ ಅವರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ವಿದ್ಯಾರ್ಥಿನಿಯೊಬ್ಬಳು ಶಿಕ್ಷಕ ತನಗೆ ಅಶ್ಲೀಲ ಚಿತ್ರ ತೋರಿಸಿ, ಮೈ ಸ್ಪರ್ಶಿಸಿ ಕಿರುಕುಳ ನೀಡುತ್ತಿದ್ದಾನೆ ಎಂದು ತನ್ನ ಮನೆಯಲ್ಲಿ ಪೋಷಕರ ಬಳಿ ಹೇಳಿಕೊಂಡಿದ್ದಳು. ಇದರಿಂದ ಕೆಂಡಾಮಂಡಲವಾದ ಪೋಷಕರು ಗ್ರಾಮಸ್ಥರೊಂದಿಗೆ ಶಾಲೆಗೆ ಬಂದಿದ್ದು, ಶಿಕ್ಷಕನನ್ನು ವಿಚಾರಿಸಲು ಮುಂದಾಗಿದ್ದಾರೆ. ಈ ವೇಳೆ ಶಿಕ್ಷಕ ಸ್ಥಳದಿಂದ ಪರಾರಿಯಾಗಿದ್ದಾನೆ. ಇದರಿಂದ ಮತ್ತಷ್ಟು ಕೋಪಗೊಂಡ ಸಾರ್ವಜನಿಕರು ಶಾಲೆಯನ್ನು ಧ್ವಂಸಗೊಳಿಸಿ ಬೆಂಕಿಯಿಟ್ಟಿದ್ದಾರೆ. ಸದ್ಯ ಕಾಮುಕ ಶಿಕ್ಷಕನ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ಚೆನ್ನೈ: ಭಾರತೀಯ ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ರಾಕೇಶ್ ಪಾಲ್ ಶನಿವಾರ ಚೆನ್ನೈಗೆ ಬಂದಿದ್ದ ವೇಳೆ ತೀವ್ರ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾಗಿದ್ದರು. ತಕ್ಷಣವೇ ಅವರನ್ನು ರಾಜೀವ್ ಗಾಂಧಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ. 1989ರಲ್ಲಿ ಭಾರತೀಯ ಕೋಸ್ಟ್ ಗಾರ್ಡ್ ಸೇರಿದ್ದ ಪಾಲ್, ಜುಲೈ 2023ರಲ್ಲಿ ಭಾರತೀಯ ಕೋಸ್ಟ್ ಗಾರ್ಡ್‌ನ ಮಹಾ ನಿರ್ದೇಶಕರಾಗಿ ನೇಮಕಗೊಂಡರು. ಕಳೆದ ತಿಂಗಳಷ್ಟೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ತಮ್ಮ ವಿಶೇಷ ಸೇವೆ ವಿಶಿಷ್ಟ ಸೇವಾ ಮೆಡಲ್ ಪಡೆದುಕೊಂಡಿದ್ದರು. ಕೋಸ್ಟ್ ಗಾರ್ಡ್‌ನ ಮೊದಲ ಗನ್ನರ್ ಎಂಬ ಮನ್ನಣೆ ಹೊಂದಿದ್ದ ಅವರು, 2013 ರಲ್ಲಿ ತತ್ರಾಕ್ಷಕ್ ಪದಕ (ಟಿಎಂ) ಮತ್ತು 2018 ರಲ್ಲಿ ಅವರ ವಿಶಿಷ್ಟ ಸೇವೆಗಾಗಿ ಅಧ್ಯಕ್ಷ ತತ್ರಾಕ್ಷಕ್ ಪದಕ (ಪಿಟಿಎಂ) ಸಹ ಪಡೆದುಕೊಂಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಸಹೋದರ ಸಹೋದರಿಯರ ನಡುವಿನ ಸಂಬಂಧವು ತುಂಬಾ ಪವಿತ್ರವಾದದ್ದು ಎಂದು ಭಾವಿಸಲಾಗುತ್ತದೆ. ಆದರೆ ಇಲ್ಲೊಂದು ಕಡೆಯಲ್ಲಿ ರಕ್ತ ಸಂಬಂಧಕ್ಕೆ ಬೆಲೆ ನೀಡದೇ ಅಣ್ಣನೊಂದಿಗೆ ತಂಗಿಯನ್ನೇ ಮದುವೆ ಮಾಡುವ ವಿಚಿತ್ರವಾದ ಸಂಪ್ರದಾಯವಿದೆ. ಭಾರತದ ಈ ಬುಡಕಟ್ಟು ಜನಾಂಗದಲ್ಲಿ ಸಹೋದರಿಯನ್ನೇ ಮದುವೆ ಆಗುವ ವಿಚಿತ್ರ ಸಂಪ್ರದಾಯವಿದೆ.ಈ ಬುಡಕಟ್ಟಿನಲ್ಲಿ ಒಡಹುಟ್ಟಿದವರು ವಯಸ್ಸಿಗೆ ಬಂದ ನಂತರದಲ್ಲಿ ಗಂಡ ಹೆಂಡತಿಯಾಗುತ್ತಾರೆ. ಛತ್ತೀಸ್‌ಗಢದಲ್ಲಿ ಬಾಸ್ಟರ್ ಪ್ರಾಂತ್ಯದಲ್ಲಿ ಧುರ್ವಾ ಎಂಬ ಬುಡಕಟ್ಟು ಜನಾಂಗದವರು ಈ ಸಂಪ್ರದಾಯವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಈ ಬುಡಕಟ್ಟು ಜನಾಂಗದವರು ತಮ್ಮದೇ ಅದ ಆಚಾರ ವಿಚಾರ, ವಿಚಿತ್ರ ಪದ್ಧತಿಯಿಂದಲೇ ಗಮನ ಸೆಳೆದಿದ್ದಾರೆ. ಈ ಬುಡಕಟ್ಟು ಜನಾಂಗದಲ್ಲಿ ಹೆತ್ತವರೇ ತಮ್ಮ ಇಬ್ಬರು ಮಕ್ಕಳಾದ ಅಣ್ಣ ತಂಗಿಯರಿಗೆ ಮದುವೆ ಮಾಡುತ್ತಾರೆ. ಮಗಳನ್ನು ಮಗನಿಗೆ ಮದುವೆ ಮಾಡುವ ಪದ್ಧತಿ ಈ ಗ್ರಾಮದಲ್ಲಿ ಹಲವು ವರ್ಷಗಳಿಂದಲೇ ನಡೆಯುತ್ತಿದೆ. ಇದಕ್ಕೆ ಕಾರಣ ಈ ಧುರ್ವಾ ಬುಡಕಟ್ಟು ಜನರು ರಕ್ತ ಸಂಬಂಧಗಳ ಬಗ್ಗೆ ನಂಬಿಕೆಯನ್ನು ಇಟ್ಟಿಲ್ಲ. ಇದೇ ಕಾರಣದಿಂದಾಗಿ ಈ ಬುಡಕಟ್ಟಿನ ಜನರು ಮಗಳನ್ನೇ ಮಗನಿಗೆ ಧಾರೆಯೆರೆದು ಕೊಡುತ್ತಾರೆ.…
ಭಾರತದ ಅತಿದೊಡ್ಡ ವಿಮಾ ಸಂಸ್ಥೆಯಾದ ಲೈಫ್ ಇನ್ಷೂರೆನ್ಸ್ ಕಾರ್ಪೊರೇಶನ್ ಅತಿದೊಡ್ಡ ಏಜೆಂಟ್ಗಳ ಬಳಗ ಹೊಂದಿದೆ. ಎಲ್ ಐಸಿ ಇನ್ಷೂರೆನ್ಸ್ ಏಜೆಂಟ್ ಗಳ ಸಂಖ್ಯೆ ದೇಶಾದ್ಯಂತ ಸುಮಾರು 14 ಲಕ್ಷ ಇದೆ. ಉದ್ಯೋಗಿಗಳನ್ನು ಸೇರಿಸಿದರೆ ಸಂಖ್ಯೆ ಇನ್ನೂ ಹೆಚ್ಚಾಗುತ್ತದೆ. ಅತಿಹೆಚ್ಚು ಮಂದಿಗೆ ಕೆಲಸ ಕೊಟ್ಟಿರುವ ಸಂಸ್ಥೆಗಳಲ್ಲಿ ಎಲ್ಐಸಿ ಒಂದು. ಇಲ್ಲಿ ಎಲ್ ಐಸಿ ಏಜೆಂಟ್ ಗಳಿಗೆ ನಿಶ್ಚಿತ ಸಂಬಳ ಎಂಬುದು ಇರುವುದಿಲ್ಲ. ಪ್ರತೀ ಏಜೆಂಟ್ ಗಳೂ ಕೂಡ ಕಮಿಷನ್ ಆಧಾರದ ಮೇಲೆ ಆದಾಯಗಳಿಸುತ್ತಾರೆ. ಕರ್ನಾಟಕದಲ್ಲಿ ಒಟ್ಟು 81,674 ಎಲ್ ಐಸಿ ಏಜೆಂಟ್ ಗಳು ಇದ್ದು, ಇವರು ಗಳಿಸುವ ಆದಾಯ ತಿಂಗಳಿಗೆ ಸರಾಸರಿಯಾಗಿ 13,265 ರೂ. ಎನ್ನಲಾಗಿದೆ. ಎಲ್ ಐಸಿ ಏಜೆಂಟ್ ಆಗುವುದು ಹೇಗೆ? ಎಲ್ ಐಸಿಯಲ್ಲಿ ಏಜೆಂಟ್ ಆಗಿ ಕೆಲಸ ಮಾಡುವವರು ಕನಿಷ್ಠ ದ್ವಿತೀಯ ಪಿಯುಸಿ ಓದಿರಬೇಕು. ಐಆರ್ ಡಿಎಐ ಪ್ರತೀ ವರ್ಷ ನಡೆಸುವ ಪರೀಕ್ಷೆಯಲ್ಲಿ ತೇರ್ಗಡೆ ಆಗಿರಬೇಕು. ನಿಮ್ಮ ಸ್ಥಳದ ಸಮೀಪ ಇರುವ ಎಲ್ಐಸಿ ಕಚೇರಿಯಲ್ಲಿ ಏಜೆಂಟ್ ಆಗಿ ಸೇರಲು ಅಲ್ಲಿನ…
ಖ್ಯಾತ ಜ್ಯೋತಿಷಿ ವೇಣುಸ್ವಾಮಿ ನಾಗ ಚೈತನ್ಯ ಮತ್ತು ಸೆಲೆಬ್ರಿಟಿಗಳ ಗಾಸಿಪ್ ಹೇಳುವುದರಲ್ಲಿ ಫೇಮಸ್. ಅವರು ಶೋಭಿತಾ ಧೂಳಿಪಾಲ ಅವರು ಬ್ರೇಕ್ ಅಪ್ ಆಗಲಿದ್ದಾರೆ ಎಂಬ ಕಾಮೆಂಟ್ ಮೂಲಕ ಸಂಚಲನ ಮೂಡಿಸಿದ್ದಾರೆ. ಈ ಸಂಘರ್ಷ ಬಗೆಹರಿಯುವ ಮುನ್ನವೇ ಮತ್ತೊಮ್ಮೆ ವಿವಾದಾತ್ಮಕ ಕಾಮೆಂಟ್‌ಗಳನ್ನು ಮಾಡಲಾಗಿದೆ. ವೇಣುಸ್ವಾಮಿ ಇತ್ತೀಚೆಗಷ್ಟೇ ಮತ್ತೊಬ್ಬ ಸ್ಟಾರ್ ಹೀರೋಯಿನ್ ಬಗ್ಗೆ ಮಾತನಾಡಿದ್ದಾರೆ. ತೆಲುಗಿನಲ್ಲಿ ಎಲ್ಲಾ ಸ್ಟಾರ್ ಹೀರೋಗಳ ಜೊತೆ ನಟಿಸಿ ಸದ್ಯ ಬಾಲಿವುಡ್ ನಿರ್ಮಾಪಕರೊಬ್ಬರ ಮಗನನ್ನು ಮದುವೆಯಾಗಿ ಮುಂಬೈನಲ್ಲಿ ನೆಲೆಸಿರುವ ನಟಿಯ ಮೇಲೆ ವೇಣುಸ್ವಾಮಿ ವಿವಾದಾತ್ಮಕ ಕಾಮೆಂಟ್ ಮಾಡಿದ್ದಾರೆ. ನಾಗ ಚೈತನ್ಯ ಅವರ ಎರಡನೇ ಭಾವಿ ಪತ್ನಿ ಶೊಭಿತಾ ಧೂಳಿಪಾಲ ಕೂಡ ಬ್ರೇಕ್ ಅಪ್ ಆಗುತ್ತಾರೆ ಎಂದು ಕಾಮೆಂಟ್ ಮಾಡುವ ಮೂಲಕ ಇತ್ತೀಚೆಗಷ್ಟೇ ಭಾರೀ ಸಂಚಲನ ಮೂಡಿಸಿದ್ದಾರೆ. ಇದೀಗ ರಾಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ಬ್ರೇಕ್ ಅಪ್ ಆಗಲಿದ್ದಾರೆ ಎಂಬ ಸುದ್ದಿ ವೈರಲ್ ಆಗಿದೆ. ಒಟ್ಟಿಗಿರುವ ಈ ಜೋಡಿ ಬೇರ್ಪಟ್ಟರೆ ವೇಣುಸ್ವಾಮಿ ಮೇಲೆ ಇನ್ನಷ್ಟು ಟೀಕೆಗಳು ಬರುವ ಸಾಧ್ಯತೆ…