Subscribe to Updates
Get the latest creative news from FooBar about art, design and business.
- ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು
- ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ
- ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ
- ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ
- ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ
- ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿ ಜಯಂತಿ ಹಾಗೂ ವ್ಯಸನ ಮುಕ್ತ ದಿನಾಚರಣೆ
- ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
- ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
Author: admin
ಕೊಲ್ಕತ್ತಾ: ಅನುಮಾನಾಸ್ಪದವಾಗಿ ಪತ್ತೆಯಾಗಿದ್ದ ಚೀಲವನ್ನು ಪರಿಶೀಲನೆ ನಡೆಸುತ್ತಿದ್ದ ವೇಳೆ ಏಕಾಏಕಿ ಭಾರೀ ಸ್ಫೋಟಗೊಂಡು ಒಬ್ಬ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾದಲ್ಲಿ ನಡೆದಿದೆ. ಗಾಯಾಳು ವ್ಯಕ್ತಿಯನ್ನ ಎನ್ ಆರ್ ಎಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶನಿವಾರ ಮಧ್ಯಾಹ್ನ 2:45 ರ ಸುಮಾರಿಗೆ ತಲ್ತಾಲಾ ಪೊಲೀಸ್ ಠಾಣೆಗೆ ಅನುಮಾನಾಸ್ಪದವಾಗಿ ಚೀಲ ಪತ್ತೆಯಾಗಿರುವ ಮಾಹಿತಿ ಬಂದಿತ್ತು. ಆದರೆ ಈ ನಡುವೆ ಅನುಮಾನಾಸ್ಪದ ವಸ್ತು ಸ್ಟೋಟಗೊಂಡಿದೆ. ಚೀಲವನ್ನು ಪರಿಶೀಲಿಸುವಾಗ, ಅದು ಸ್ಫೋಟಗೊಂಡಿತು, ಇದರಲ್ಲಿ ತ್ಯಾಜ್ಯ ಆಯುವ ವ್ಯಕ್ತಿ ಗಾಯಗೊಂಡಿದ್ದಾನೆ. ಬ್ಲೋಚ್ಮನ್ ಸೇಂಟ್ ಮತ್ತು ಎಸ್ ಎನ್ ಬ್ಯಾನರ್ಜಿ ರಸ್ತೆಯಲ್ಲಿ ಈ ಸ್ಫೋಟ ಸಂಭವಿಸಿದೆ. ಆ ಮೂಲಕ ಹಾದುಹೋಗುತ್ತಿದ್ದ ವ್ಯಕ್ತಿಯೊಬ್ಬ ಚೀಲವನ್ನ ಎತ್ತಲು ಪ್ರಯತ್ನಿಸಿದರು, ನಂತರ ಅದು ಸ್ಫೋಟಗೊಂಡಿದೆ ಎಂದು ವರದಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು:ಹಾಲಿನ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೆ ಮೂರು ಪೈಸೆ ಆದಾಯ ಬರಲ್ಲ. ಅದು ಕೇಂದ್ರ ಸರ್ಕಾರಕ್ಕೆ ಲಾಭ ಅಷ್ಟೇ, ಇನ್ಕಂ ಟ್ಯಾಕ್ಸ್ ಮೂಲಕ ಕೇಂದ್ರಕ್ಕೆ ಹೊಗುತ್ತೆ ಎಂದು ಸಹಕರ ಸಚಿವ ರಾಜಣ್ಣ ತಿಳಿಸಿದರು. ತುಮಕೂರಿನಲ್ಲಿ ನಡೆದ ಪತ್ರಿಕಾಘೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರಕ್ಕೆ ಬರಲ್ಲ. ಲಾಭ ರೈತರಿಗೆ, ಕೇಂದ್ರ ಸರ್ಕಾರಕ್ಕೆ ಸಿಗುತ್ತೆ. ಒಂದು ಬಾಟಲು ನೀರಿಗೆ ಕೊಡುವ ದರವನ್ನು ಹಾಲಿಗೆ ಕೊಡಿ ಅಂದ್ರೆ ವಿರೋಧ ಬರ್ತಿದೆ, ಇದು ಬಹಳ ವಿಪರ್ಯಾಸ ಎಂದರು. ಹಾಲಿನ ದರ ರೈತರ ಖಾತೆಗೆ ಹೋಗುತ್ತದೆ. ಸಂಸ್ಥೆ, ಸರ್ಕಾರಕ್ಕೆ ಲಾಭವಿಲ್ಲ.ರೈತರಿಗೆ ಹಣ ಕೊಡ್ತೀವಿ ಅನ್ನೊದನ್ನ ಎಲ್ಲಾರು ಬೆಂಬಲಿಸಬೇಕು ಎಂದರು.ಯಶಸ್ವಿ ಯೋಜನೆ ಎಸ್.ಎಂ.ಕೃಷ್ಣ ಕಾಲದಲ್ಲಿ ಜಾರಿಗೆ ತರಲಾಯ್ತು.ನಂತರ ಮಧ್ಯದಲ್ಲಿ ನಿಲ್ಲಿಸಲಾಯ್ತು.ಯಡಿಯೂರಪ್ಪ ಮತ್ತೆ ಜಾರಿ ಮಾಡ್ತೀನಿ ಅಂತ ಹೇಳಿದ್ರು.ಆದ್ರೂ ಜಾರಿ ಆಗಿರಲಿಲ್ಲ ಎಂದರು. ಈಗ ಸಿದ್ದರಾಮಯ್ಯಗೆ ಮನವೊಲಿಸಿ ಯಶಸ್ವಿ ಯೋಜನೆಯನ್ನು ಮತ್ತೆ ಪುನರ್ ಪ್ರತಿಷ್ಟಾಪನೆ ಮಾಡ್ತಿದ್ದೀವಿ. ರೈತರ ಅನುಕೂಲಕ್ಕಾಗಿ ಜಾರಿ ಮಾಡ್ತಿದ್ದೀವಿ ಎಂದರು. ಇಡೀ ದೇಶದಲ್ಲಿ ನಮ್ಮಷ್ಟು ಕಡಿಮೆ ದರದಲ್ಲಿ ರೈತರಿಂದ…
ರಾಮನಗರ: ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಸೆ.13ರ ಶುಕ್ರವಾರ ಮಾಗಡಿಯ ಹೊಸಪೇಟೆ ಸರ್ಕಲ್ ನಲ್ಲಿ ಮಾಗಡಿ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, ನಿರ್ಮಾಣ ಕಾರ್ಯ ಪೂರ್ಣಗೊಂಡ ವಿವಿಧ ಕಟ್ಟಡಗಳನ್ನು ಲೋಕಾರ್ಪಣೆ ಮಾಡಿದರು. 8 ಕೋಟಿ ರೂಪಾಯಿ ವೆಚ್ಚದ ಮಾಗಡಿ ಪುರಸಭೆ ಮಾರುಕಟ್ಟೆ (ಅಂಗಡಿ) ಮಳಿಗೆಗಳ ನಿರ್ಮಾಣ, ಲೋಕೋಪಯೋಗಿ ಇಲಾಖೆ ವತಿಯಿಂದ ಮಾಗಡಿ ಪಟ್ಟಣದ ವ್ಯಾಪ್ತಿಯಲ್ಲಿ ಎಸ್.ಎಚ್.ಡಿ.ಪಿ. (ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ) ಯ 20 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ, ಮಾಗಡಿಯ ಜೂನಿಯರ್ ಕಾಲೇಜ್ ಆವರಣದಲ್ಲಿ 7 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಆಡಿಟೋರಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಬೆಂಗಳೂರು ಹಾಲು ಒಕ್ಕೂಟದ ನೂತನ ಶಿಬಿರ ಕಚೇರಿ ಹಾಗೂ ಮಾಗಡಿ ಪಟ್ಟಣದಲ್ಲಿ ನಿರ್ಮಾಣಗೊಂಡಿರುವ ಐಟಿಐ ಕಾಲೇಜನ್ನು ಉದ್ಘಾಟಿಸಿದರು. ಮಾಗಡಿ ತಾಲೂಕಿನ ಹಾರೋಹಳ್ಳಿ ಗ್ರಾಮದ ಪಾಲಿಟೆಕ್ನಿಕ್ ಕಾಲೇಜಿಗೆ, ಮಾಗಡಿ ಪಟ್ಟಣದಲ್ಲಿ ಅತ್ಯಾಧುನಿಕ ಗ್ರಂಥಾಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಮಾಗಡಿ ತಾಲೂಕು ಜೂನಿಯರ್ ಕಾಲೇಜಿನ ಕ್ರೀಡಾಂಗಣದ ಅಭಿವೃದ್ಧಿಗೆ ಭೂಮಿ ಪೂಜೆ ನೆರವೇರಿಸಿದ ಮುಖ್ಯಮಂತ್ರಿಯವರು…
ತುಮಕೂರು: ನಗರದ ಅಮಾನಿಕೆರೆ ಕೋಡಿಗೆ ಅಡ್ದಲಾಗಿ ನಿರ್ಮಿಸಿರೋ ಸೇತುವೆಯನ್ನು ರಾಜ್ಯ ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಇಂದು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಸಹಕಾರ ಸಚಿವ ರಾಜಣ್ಣ, ಜಿಲ್ಲಾಧಿಕಾರಿ ಶುಭ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅಶೋಕ್ ಹಾಜರಿದ್ದರು. ಆರೂವರೆ ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಪಾವಗಡ: ಆಕಸ್ಮಿಕವಾಗಿ 11 ಕೆವಿ ಲೈನ್ ತಗುಲಿ ಒಂದು ವರ್ಷದ ಮಗುವಿನ ತಾಯಿಯೊಬ್ಬರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಇಂದು ಮುಂಜಾನೆ 8 ಗಂಟೆ ಸುಮಾರಿಗೆ ಪಾವಗಡ ತಾಲ್ಲೂಕಿನ ಕೊತ್ತೂರು ಗ್ರಾಮದಲ್ಲಿ ನಡೆದಿದೆ. 23 ವರ್ಷದ ತ್ರಿವೇಣಿ ಈ ದುರ್ಘಟನೆಯಲ್ಲಿ ಸಾವನ್ನಪ್ಪಿರುವ ಹೆಣ್ಣು ಮಗಳು. ಈಕೆಯನ್ನು ಕೊತ್ತೂರು ಗೊಲ್ಲರಹಟ್ಟಿಯಿಂದ ದವಡಬೆಟ್ಟದ ಕೃಷ್ಣಮೂರ್ತಿಯವರಿಗೆ ಮದುವೆ ಮಾಡಿ ಕೊಟ್ಟಿದ್ದರು. ಇದೀಗ ಒಂದು ವರ್ಷದ ಹೆಣ್ಣು ಮಗು ಕೂಡ ಇದೆ. ನೂತನ ಗೃಹ ನಿರ್ಮಾಣ ಮಾಡಿದ್ದ ಮನೆ ಮಹಡಿ ಮೇಲೆ ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಕಬ್ಬಿಣದ ವಸ್ತುವನ್ನು ಎತ್ತಿಡುವ ವೇಳೆ 11 ಕೆವಿ ಲೈನ್ ಗೆ ತಗುಲಿ ಈ ಘಟನೆ ಸಂಭವಿಸಿದೆ. ವಿದ್ಯುತ್ ಇಲಾಖೆಯವರ ನಿರ್ಲಕ್ಷ್ಯ ತನದಿಂದ ಈ ಘಟನೆ ಸಂಭವಿಸಿದೆ ಎಂಬುದು ಸ್ಥಳೀಯರ ಆರೋಪ. ಹೌದು ಪರ್ಮಿಷನ್ ಕೊಟ್ಟಿಲ್ಲ ಸರಿ. ಕೊನೆ ಪಕ್ಷ ನಂತರವಾದರೂ ಅಹವಾಲು ಸ್ವೀಕರಿಸಿ 11 ಕೆವಿ ಲೈನ್ ಯಾಕೆ ಬದಲಾಯಿಸುವ ಉಸಾಬರಿಗೆ ಹೋಗಿಲ್ಲ. ಆ ಕೆಲಸ ಆಗಿದ್ದರೆ…
ನಿಮ್ಮ ಆಧಾರ್ ಕಾರ್ಡ್ ಅಪ್ ಡೇಟ್ ಮಾಡಲು ಡಿಸೆಂಬರ್ 14 ರವರೆಗೆ ದಿನಾಂಕ ವಿಸ್ತರಿಸಲಾಗಿದೆ. ಆಧಾರ್ ಕಾರ್ಡ್ ಗೆ ನೀವು ವಿವರಗಳನ್ನು ನೀಡುವ ವೇಳೆ ಹಲವು ತಪ್ಪುಗಳಾಗಲು ಸಾಧ್ಯತೆ ಇವೆ. ಅಡ್ರೆಸ್, ಫೋನ್ ನಂಬರ್ ಲಿಂಕ್, ಡೇಟ್ ಆಫ್ ಬರ್ತ್ ಮೊದಲಾದ ವಿವರಗಳು ತಪ್ಪಾಗಿದ್ದರೆ. ಡಿ.14ರೊಳಗೆ ಸರಿಪಡಿಸಿಕೊಳ್ಳಿ. ಯಾಕೆಂದರೆ ಡಿಸೆಂಬರ್ 14ರವರೆಗೆ ಮಾತ್ರ ಉಚಿತವಾಗಿ ನೀವು ತಿದ್ದುಪಡಿ ಮಾಡಬಹುದು. 10 ವರ್ಷಗಳ ಹಿಂದಿನ ಆಧಾರ್ ಕಾರ್ಡ್ ಗಳ ವಿವರಗಳನ್ನು ಉಚಿತವಾಗಿ ನವೀಕರಿಸಲು ಶನಿವಾರ ಕೊನೆಯ ದಿನಾಂಕವಾಗಿತ್ತು. ಇದೀಗ ಇದನ್ನು ಡಿಸೆಂಬರ್ 14 ರವರೆಗೆ ದಿನಾಂಕ ವಿಸ್ತರಿಸಲಾಗಿದೆ. ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಯ ಸಹಾಯದಿಂದ ನೀವು ಅಧಿಕೃತ ವೆಬ್ಸೈಟ್ https://myaadhar.uidai.gov.in ಲಾಗಿನ್ ಮಾಡಬಹುದು ಮತ್ತು ವಿವರಗಳನ್ನು ನವೀಕರಿಸಬಹುದು. ಬೆರಳಚ್ಚು, ಐರಿಸ್ ಸ್ಕ್ಯಾನ್ ಮತ್ತು ಮುಖದ ಚಿತ್ರಗಳಂತಹ ಬಯೋಮೆಟ್ರಿಕ್ ಮಾಹಿತಿಯನ್ನು ಆನ್ ಲೈನ್ ನಲ್ಲಿ ನವೀಕರಿಸಲು ಸಾಧ್ಯವಿಲ್ಲ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 Provided by ಮೇಷ ರಾಶಿ👇🏻 ಸಾಲ ಮರುಪಾವತಿ ಮಾಡಿದ ಸಮಾಧಾನ ಸಣ್ಣ ಪ್ರವಾಸ ಕೈಗೊಳ್ಳುವಿರಿ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಾಣಲಿದೆ ಶುಭ ಸಂಜೆ 8. ವೃಷಭ ರಾಶಿ 👇🏻 ಇಷ್ಟ ವಸ್ತುಗಳ ಖರೀದಿ ಮಾಡಿದಿರಿ ಕ್ರೀಡಾ ಆಸಕ್ತರಿಗೆ ಶುಭ ಪುಣ್ಯಕ್ಷೇತ್ರಗಳ ಭೇಟಿ ಸ್ವಾಗ್ರಾಮಕ್ಕೆ ಮನೆ ಬದಲಾಯಿಸುವ ಯೋಜನೆ,ಶುಭ…
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ರೀಲ್ಸ್ ಸ್ಪರ್ಧೆಯನ್ನು ಇಟ್ಟುಕೊಂಡಿದ್ದೇವೆ. ಪೋಸ್ಟರ್ನಲ್ಲಿ ಉಲ್ಲೇಖಿಸಲಾದ ವಿಷಯಗಳಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡು 40 ರಿಂದ 60 ಸೆಕೆಂಡುಗಳ ರೀಲ್ಸ್ ಅನ್ನು ಸೃಷ್ಟಿಸಿ. ನಿಮ್ಮ ಇನ್ಸ್ಟಾಗ್ರಾಮ್, ಎಕ್ಸ್, ಫೇಸ್ಬುಕ್ ಅಥವಾ ಯೂಟ್ಯೂಬ್ ಖಾತೆಯಲ್ಲಿ #ಕರ್ನಾಟಕ_ಪ್ರಜಾಪ್ರಭುತ್ವ_ದಿನ_2024 ಎಂಬ ಹ್ಯಾಷ್ ಟ್ಯಾಗ್ ನೊಂದಿಗೆ ರೀಲ್ಸ್ ಪೋಸ್ಟ್ ಮಾಡಿ. ಬಳಿಕ ಲಿಂಕ್ ಅನ್ನು https://democracydaykarnataka.in/contest/video ಇಲ್ಲಿ ಹಂಚಿಕೊಳ್ಳಿ. ಸೆಪ್ಟೆಂಬರ್ 15ರ ಒಳಗಾಗಿ ರೀಲ್ಸ್ ಕಳುಹಿಸಬೇಕು. ಅತ್ಯುತ್ತಮ 10 ವಿಡಿಯೋಗಳಿಗೆ ತಲಾ 15,000 ರೂ. ಮೌಲ್ಯದ ಬಹುಮಾನಗಳು ಸಿಗಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಧಾರವಾಡ: ಕೇಂದ್ರ ಪುರಸ್ಕೃತ ಜನಪರ ಕಲ್ಯಾಣ ಯೋಜನೆಗಳು ರೈತರಿಗೆ ಜನ ಸಾಮಾನ್ಯರಿಗೆ ಅಧಿಕಾರಿಗಳು ಸರಿಯಾದ ಸಮಯಕ್ಕೆ ತಲುಪಿಸಲಿ ಎಂದು ಕೇಂದ್ರ ಗ್ರಾಹಕರ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನವೀಕರಿಸಬಹುದಾದ ಇಂಧನ ಸಚಿವರು ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಚಿವರಾದ ಪ್ರಲ್ಹಾದ ಜೋಶಿ ತಿಳಿಸಿದರು. ಧಾರವಾಡ ಜಿಲ್ಲಾ ಪಂಚಾಯತನಲ್ಲಿ ಇಂದು ಜರುಗಿದ ದಿಶಾ ಸಮಿತಿಯ ಮೊದಲನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಬೆಳೆ ಪರಿಹಾರ ನರೇಗಾ ವಸತಿ, ಸ್ವಚ್ಛ ಭಾರತ, ಶಿಕ್ಷಣ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಭೆಯಲ್ಲಿ ವಿವರವಾಗಿ ಚರ್ಚಿಸಿದರು. ಕೇಂದ್ರ ಪುರಸ್ಕೃತ ಯೋಜನೆಗಳು ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕೆಂದರು. 2023-24 ನೇ ಸಾಲಿನ ಹಿಂಗಾರು ಬೆಳೆ ಪರಿಹಾರ ದೊರೆಯದ ಕಾರಣ ಅನೇಕ ರೈತರು ಅಹವಾಲುಗಳನ್ನು ಸಲ್ಲಿಸುತ್ತಿದ್ದು ಈ ಬಗ್ಗೆ ತಹಶೀಲ್ದಾರರು, ಉಪವಿಭಾಗಾಧಿಕಾರಿಗಳು ರೈತರಿಗೆ ಸರಿಯಾಗಿ ಸ್ಪಂದಿಸುವಂತೆ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಅವರು ಈ ಕುರಿತು ಮಾತನಾಡಿ 2023-24…
ಬೆಂಗಳೂರು: ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಇಲಾಖಾವಾರು ಪರಿಶೀಲನೆ ನಡೆಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು. ವಿಧಾನಸೌಧ ಸಮಿತಿ ಕೊಠಡಿಯಲ್ಲಿ ನಡೆದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಮೊದಲ ಸಭೆಯಾಗಿರುವುದರಿಂದ ತೀರ್ಮಾನಕ್ಕೆ ಬಂದಿಲ್ಲ. ಎಲ್ಲ ಪ್ರಕರಣಗಳನ್ನು ಪರಿಶೀಲಿಸಿದ್ದೇವೆ. ಹೊಸದಾಗಿ ತನಿಖೆ ಆಗಬೇಕಿರುವುದನ್ನು ಗಮನಿಸಿದ್ದೇವೆ. ಎರಡು ತಿಂಗಳೊಳಗೆ ಪೂರ್ಣಗೊಳಿಸಿ ಸಚಿವ ಸಂಪುಟಕ್ಕೆ ವರದಿ ಸಲ್ಲಿಸುತ್ತೇವೆ ಎಂದರು. ವಿರೋಧ ಪಕ್ಷದ ನಾಯಕರ ಹೇಳಿಕೆಗಳಿಗೆ ನಾನು ಏನನ್ನು ಹೇಳಲು ಹೋಗುವುದಿಲ್ಲ. ಅವರು ಏನೇ ಹೇಳಿದರು ಕೆರಳುವುದಿಲ್ಲ. ಸರ್ಕಾರದಲ್ಲಿ ನನಗೆ ಏನು ಜವಾಬ್ದಾರಿ ಕೊಟ್ಟಿದ್ದಾರೆ, ಅದನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತಿದ್ದೇನೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿರಬೇಕು. ಆ ಕೆಲಸವನ್ನು ಮಾಡುತ್ತಿದ್ದೇನೆ. ನನಗೆ ಇದೆಲ್ಲ ಹೊಸತೇನಲ್ಲ. ಮೂರು ಬಾರಿ ಗೃಹ ಸಚಿವನಾಗಿ ಕೆಲಸ ಮಾಡಿದ್ದೇನೆ. ನನ್ನ ಸಾಮಾರ್ಥ್ಯ ರಾಜ್ಯದ ಜನತೆಗೆ ಗೊತ್ತಿದೆ. ನಾನು ಯಾವ ಇಲಾಖೆಯನ್ನು ನಿಭಾಯಿಸಿದ್ದೇನೆ, ಎಲ್ಲ ಸಂದರ್ಭದಲ್ಲಿ ಕೂಡ ನನ್ನ ಸಾಮರ್ಥ್ಯ…