Author: admin

ಸರಕಾರ ಕೆಲವು ವರ್ಷಗಳ ಹಿಂದೆ ಮೌಢ್ಯ ಪ್ರತಿಬಂಧಕ ಕಾಯ್ದೆಯನ್ನು ಹಲವಾರು ವಿರೋಧಗಳ ನಡುವೆ ಜಾರಿಗೆ ತಂದರು ಅವುಗಳಲ್ಲಿ ಮಾಟ–ಶೂನ್ಯ ಮಾಡುವುದು, ಜಾತ್ರೆಗಳಲ್ಲಿ ಬಾಯಿಗೆ ಬೀಗ ಹಾಕುವುದು, ಸಿಡಿ ಹಾಕುವುದು. ದೈಹಿಕವಾಗಿ ದೇವರ ಹೆಸರಿನಲ್ಲಿ ಹಿಂಸೆ ನೀಡುವುದು, ಮೊಹರಂ ಹಬ್ಬದಲ್ಲಿ ಕೆಲವು ಸ್ಥಳಗಳಲ್ಲಿ ಅಲ್ಪಸಂಖ್ಯಾತ ಧರ್ಮದವರು (ಇಸ್ಲಾಂ ) ದೇಹಕ್ಕೆ ಹರಿತವಾದ ಆಯುಧಗಳಿಂದ ಬಡಿದುಕೊಳ್ಳುವುದು, ಹಾಗೂ ದೇವಾಲಾಯಗಳಲ್ಲಿ ಪಟ್ಟಾ ಹೇಳುವುದು ಹಾಗೂ ಇತರೆ ಇವೆಲ್ಲಾ ನಿಷೇಧ ಆಗಿವೆ ಇದರಲ್ಲೂ ಕಾನೂನು ಅಪರಾಧಗಳು ಆಗಿವೆ. ಆದರೆ ಇವುಗಳನ್ನು ತಡೆಯಲು ಸಾಧ್ಯ ಆಗಿದೆಯಾ ಎಂದೂ ನೋಡುವುದಾದರೆ ಕೆಲವು ಮಾತ್ರ ಸಾಧ್ಯ ಆಗಿದೆ. ಆದರೆ ಕೆಲವು ದೇವಾಲಯಗಳಲ್ಲಿ ಪಟ್ಟಾ ಹೇಳುವುದು ಅಂದರೆ ಮೈ ಮೇಲೆ ದೇವರು ಬರುತ್ತದೆ ಎಂದೂ ಜನರನ್ನು ಮರಳು ಮಾಡಿ ಅಲ್ಲಿ ಜ್ಯೋತಿಷ್ಯ ಹೇಳುವುದು, ಇವು ಅಣಬೆಯಂತೆ ದೇಶದಲ್ಲಿ / ರಾಜ್ಯದಲ್ಲಿ ಕಂಡುಬರುತ್ತವೆ. ಇಂತ ಸ್ಥಳದಲ್ಲಿ ಅವರನ್ನು ನೋಡಿದರೆ ಅವರ ಅವತಾರವನ್ನು ನೋಡಿದರೆ ನಗುವು ಬರುತ್ತದೆ, ಅಷ್ಟೆ ಕೋಪ ಬರುತ್ತದೆ. ಕಾರಣ ಇವೆಲ್ಲಾ ನಾಟಕಿಯ…

Read More

ತುಮಕೂರು: ಬೆಸ್ಕಾಂ ನಗರ ಉಪವಿಭಾಗ–1ರ ವ್ಯಾಪ್ತಿಯಲ್ಲಿ ಹೆಚ್‌ ಟಿ ಮತ್ತು ಎಲ್‌ ಟಿ ಕಂಬಗಳನ್ನು ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸೆಪ್ಟೆಂಬರ್ 15ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕೋತಿತೋಪು, ಹಾರೋನಹಳ್ಳಿ, ಅಗ್ರಿಫೀಡರ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಧ್ಯಂತರ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಪಿ. ನಾಗರಾಜು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ಲೋಕಾಯುಕ್ತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಅರಣ್ಯ ಇಲಾಖೆ ಹಾಗೂ ಮಧುಗಿರಿ ವಕೀಲರ ಸಂಘದ ಸಹಯೋಗದಲ್ಲಿ ಸೆಪ್ಟೆಂಬರ್ 15ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮಧುಗಿರಿ ಬೆಟ್ಟ ಮತ್ತು ನ್ಯಾಯಾಲಯದ ಆವರಣದಲ್ಲಿ “ಒಂದು ಮರ–ತಾಯಿಯ ಹೆಸರಿನಲ್ಲಿ” ವನಮಹೋತ್ಸವ ಹಾಗೂ ಪರಿಸರ ಜಾಗೃತಿ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಗೌರವಾನ್ವಿತ ನ್ಯಾಯಮೂರ್ತಿ ಆರ್. ದೇವದಾಸ್ ಉದ್ಘಾಟಿಸುವರು. ಕಾರ್ಯಕ್ರಮದಲ್ಲಿ ಗೌರವಾನ್ವಿತ ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಮತ್ತು ಬಿ. ವೀರಪ್ಪ ಸೇರಿದಂತೆ ಮತ್ತಿತರ ಗಣ್ಯರು, ಅಧಿಕಾರಿಗಳು ಉಪಸ್ಥಿತರಿರುವರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಬೆಂಗಳೂರು:  ಕರ್ನಾಟಕ ಲೋಕಸೇವಾ‌ ಆಯೋಗದ ಅಧಿಸೂಚನೆ ಸಂಖ್ಯೆ : ಪಿಎಸ್ ಸಿ 1 ಆರ್ ಟಿ ಬಿ 1/2023, ದಿ:13–03–2024ರನ್ವಯ ಅಧಿಸೂಚಿಸಿರುವ ಉಳಿಕೆ ಮೂಲ ವೃಂದದಲ್ಲಿನ ವಿವಿಧ ಗ್ರೂಪ್ ಬಿ ಹುದ್ದೆಗಳಿಗೆ ದಿನಾಂಕ:14–09–2024 ಮತ್ತು 15–09–2024ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿ ಅಭ್ಯರ್ಥಿಗಳನ್ನು ಪರೀಕ್ಷಾ ಉಪ ಕೇಂದ್ರಗಳಿಗೆ ಹಂಚಿಕೆ ಮಾಡಲಾಗಿತ್ತು. ಈ ಮಧ್ಯೆ ದಿನಾಂಕ: 10–09–2024ರ ಕರ್ನಾಟಕ ಸರ್ಕಾರದ ನಡವಳಿಗಳಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಟ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದೆ ” ಎಂದು ತಿಳಿಸಲಾಗಿರುತ್ತದೆ. ಮೇಲ್ಕಂಡ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ದಿ:13–03–2024ರನ್ವಯ ಅಧಿಸೂಚಿಸಿರುವ ಎಲ್ಲಾ ಹುದ್ದೆಗಳಿಗೂ ವಯೋಮಿತಿ ಸಡಿಲಿಕೆ ಅನ್ವಯಿಸಿ ಹೊಸದಾಗಿ…

Read More

ತುಮಕೂರು: ಕರ್ನಾಟಕ ಲೋಕಸೇವಾ ಆಯೋಗವು ತುಮಕೂರು ನಗರದ 21 ಪರೀಕ್ಷಾ ಕೇಂದ್ರಗಳಲ್ಲಿ ಸೆಪ್ಟೆಂಬರ್ 14 ಮತ್ತು 15ರಂದು ಗ್ರೂಪ್ ‘ಬಿ’ ವೃಂದದ ಉಳಿಕೆ ಮೂಲ ವೃಂದದಲ್ಲಿನ ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಅವರು ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆಯು ಸೆಪ್ಟೆಂಬರ್ 14ರ ಮಧ್ಯಾಹ್ನ 1 ರಿಂದ ಸಂಜೆ 5 ಗಂಟೆಯವರೆಗೆ ಹಾಗೂ ಸೆಪ್ಟೆಂಬರ್ 15ರ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ನಿಷೇಧಾಜ್ಞೆಯನ್ವಯ ಪರೀಕ್ಷೆ ನಡೆಯುವ ದಿನಾಂಕದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು. ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಹಾಗೂ ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿ ಅವರ…

Read More

ತುಮಕೂರು: ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಸೆಪ್ಟೆಂಬರ್ 14ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಸಚಿವರು ಅಂದು ಬೆಳಿಗ್ಗೆ 10:30 ಗಂಟೆಗೆ ತುಮಕೂರು ನಗರದ ಎಸ್.ಮಾಲ್ ಬಳಿ ಸೇತುವೆ ಪುನರ್ ನಿರ್ಮಾಣ ಕಾಮಗಾರಿ ಹಾಗೂ ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯ ಶ್ರೀ ಸಿದ್ಧಗಂಗಾ ಮಠದ ಆವರಣದಲ್ಲಿರುವ ಯಾತ್ರಿ ನಿವಾಸದ ಪಕ್ಕದಲ್ಲಿ ಭಕ್ತಾಧಿಗಳಿಗೆ ಮತ್ತು ಗಣ್ಯ ವ್ಯಕ್ತಿಗಳಿಗೆ ತಂಗಲು ಅತಿಥಿ ಗೃಹ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಗೆ ಚಾಲನೆ ನೀಡಲಿದ್ದಾರೆ. ಶ್ರೀ ಸಿದ್ಧಗಂಗಾ ಮಠದ ಅಧ್ಯಕ್ಷರಾದ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ದಿವ್ಯ ಸಾನಿಧ್ಯ, ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ. ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಕಾರ್ಯಕ್ರಮಗಳು ನೆರವೇರಲಿವೆ. ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಸಹಕಾರ ಸಚಿವ ಕೆ.ಎನ್.ರಾಜಣ್ಣ, ನವದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ, ಕರ್ನಾಟಕ…

Read More

ತುಮಕೂರು:  ಜನ ಸ್ಪಂದನ, ಕುಂದು–ಕೊರತೆ ಸಭೆಗಳಲ್ಲಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ತಡ ಮಾಡದೆ ಶೀಘ್ರವಾಗಿ ವಿಲೇವಾರಿ ಮಾಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಿರಾ ತಾಲ್ಲೂಕು ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿಂದು ನಡೆದ ಕುಂದು–ಕೊರತೆ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ಅವರು, ಅಧಿಕಾರಿಗಳು ಸರ್ಕಾರಿ ಕೆಲಸಗಳನ್ನು ತಮ್ಮ ಮನೆಯ ಕೆಲಸಗಳಂತೆ ಜವಾಬ್ದಾರಿಯಿಂದ ನಿರ್ವಹಿಸಬೇಕು. ಸಾರ್ವಜನಿಕರೊಂದಿಗೆ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಿದಾಗ ಮಾತ್ರ ಸರ್ಕಾರಿ ಕಾರ್ಯಕ್ರಮಗಳು ಯಶಸ್ವಿಯಾಗಿ ಅನುಷ್ಠಾನಗೊಳ್ಳಲು ಸಾಧ್ಯ ಎಂದರು. ಉದ್ದರಾಮನಹಳ್ಳಿಯ ಮಂಜುನಾಥ್ ಅವರು ರಸ್ತೆ ಒತ್ತುವರಿ ತೆರವುಗೊಳಿಸುವಂತೆ, ಬುಕ್ಕಾಪಟ್ಟಣ ಗ್ರಾಮದ ನಾಗರಾಜು ಅವರು ಪಹಣಿ ಪತ್ರ ನೀಡುವಂತೆ ಹಾಗೂ ದೊಡ್ಡ ಅಗ್ರಹಾರದ ಕೆಂಚಣ್ಣ ಪಡಿತರ ಧಾನ್ಯಗಳನ್ನು ಸರಿಯಾದ ರೀತಿಯಲ್ಲಿ ವಿತರಿಸಲು ಕೋರಿ ಅರ್ಜಿ ಸಲ್ಲಿಸಿದರು. ಸಭೆಯಲ್ಲಿ ಪವತಿ ಖಾತೆ, ರಾಜ ಕಾಲುವೆ ತೆರವು, ಸಾಗುವಳಿ ಚೀಟಿ ಸೇರಿದಂತೆ ಸುಮಾರು 69 ಅರ್ಜಿಗಳನ್ನು ಸ್ವೀಕರಿಸಲಾಯಿತು. ಗಿರಿನಾಥನಹಳ್ಳಿಯ ನಾಗರಾಜು ಎಂಬುವವರು ಗ್ರಾಮನಕ್ಷೆ ಕೋರಿ ಸಲ್ಲಿಸಿದ ಅರ್ಜಿಗೆ ಕೂಡಲೇ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಗ್ರಾಮ…

Read More

ಕೊರಟಗೆರೆ: ತುಂಬಾಡಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಯ ನೂತನ ಅಧ್ಯಕ್ಷರಾಗಿ ನಟರಾಜು ಟಿ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮ ಪಂಚಾಯಿತಿಯ ಈ ಹಿಂದೆ ಇದ್ದ ಅಧ್ಯಕ್ಷ ಹರೀಶ್ ರಾಜೀನಾಮೆಯಿಂದ ಅಧ್ಯಕ್ಷರ ಸ್ಥಾನ ಖಾಲಿ ಇತ್ತು. ಹೀಗಾಗಿ ಎರಡನೆಯ ಅವಧಿಯ ನೂತನ ಅಧ್ಯಕ್ಷರ ಚುನಾವಣೆ ಇಂದು ನಡೆಯಿತು. ಗ್ರಾಮ ಪಂಚಾಯತಿಯ 16 ಜನ ಸದಸ್ಯರು ಸೇರಿ ಒಮ್ಮತದಿಂದ ಅವಿರೋಧವಾಗಿ ನಟರಾಜು ಟಿ.ರವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ ಎಂದು ತಾಲೂಕು ದಂಡಾಧಿಕಾರಿ ಮಂಜುನಾಥ್ ತಿಳಿಸಿದರು. ನೂತನ ಅಧ್ಯಕ್ಷ ನಟರಾಜ್ ಮಾತನಾಡಿ, ನಮ್ಮ ಪಂಚಾಯತಿಯ ಸದಸ್ಯರೆಲ್ಲರೂ ಒಟ್ಟಿಗೆ ಕೂಡಿ ನನ್ನನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ ಅವೆಲ್ಲರಿಗೂ ನಾನು ಚಿರಋಣಿ ಅವರೆಲ್ಲರ ಜೊತೆಗೂಡಿ ಗ್ರಾಮ ಪಂಚಾಯಿತಿಯ ಎಲ್ಲಾ ಗ್ರಾಮಗಳ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಾಜಿ ಅಧ್ಯಕ್ಷ ಹರೀಶ್ ಸೇರಿದಂತೆ ಗ್ರಾಮ ಪಂಚಾಯತಿಯ ಎಲ್ಲ ಸದಸ್ಯರು, ಸಬ್ ಇನ್ಸ್ಪೆಕ್ಟರ್ ಚೇತನ್ ಕುಮಾರ್ ಹಾಗೂ ತಂಡ ಮತ್ತು…

Read More

ಕೊರಟಗೆರೆ: ಪಟ್ಟಣದ ಬೈಪಾಸ್ ರಸ್ತೆಯ ಬೋಡ ಬಂಡೇನಹಳ್ಳಿ ಬೈಪಾಸ್ ಬಳಿ ತಡರಾತ್ರಿ ಮಲ್ಲೇಶ್ವರ ಗ್ರಾಮದಿಂದ ಕೊರಟಗೆರೆ ಬರುತ್ತಿದ್ದಾಗ ಮಲ್ಲೇಶ್ವರ ಗ್ರಾಮದ ಮೂರು ಯುವಕರು ಕುಡಿದ ಮತ್ತಿನಲ್ಲಿ ದ್ವಿಚಕ್ರವಾಹನ ಚಲಾಯಿಸುತ್ತಾ ಬಂದಿದ್ದು, ಈ ವೇಳೆ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿದ್ದ ಒಬ್ಬ ಸಾವನ್ನಪ್ಪಿದ್ದು ಇನ್ನಿಬ್ಬರ ಪರಿಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡ ವ್ಯಕ್ತಿಗಳನ್ನ ಸ್ಥಳದಲ್ಲೇ ಇದ್ದ ಹಂಚಿಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಭೀಮರಾಜು ಹಾಗೂ ಸ್ನೇಹಿತರು ಆಂಬುಲೆನ್ಸ್ ಗೆ ಕರೆ ಮಾಡಿ, ಕೊರಟಗೆರೆಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆಯನ್ನ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನಾ ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಚೇತನ್ ಹಾಗೂ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ನವದೆಹಲಿ: ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದರ  ಬೆನ್ನಲ್ಲೇ, ಅವರನ್ನು ಜೈಲಿನಿಂದ ಬಿಡುಗಡೆಗೊಳಿಸಿ ದೆಹಲಿ ನ್ಯಾಯಾಲಯ ಆದೇಶಿಸಿದೆ. ಕೇಜ್ರಿವಾಲ್ ಪರ ವಕೀಲರು ಕೋರ್ಟ್‌ಗೆ ಇಬ್ಬರ ಜಾಮೀನು ಹಾಗೂ ರೂ.10 ಲಕ್ಷ ಭದ್ರತಾ ಬಾಂಡ್‌ ನೀಡಿದ ಬಳಿಕ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ರಾಕೇಶ್ ಸ್ಯಾಲ್ ಅವರು ಬಿಡುಗಡೆ ಆದೇಶ ಮಾಡಿದರು. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ ಹಾಗೂ ಉಜ್ಜಲ್ ಭುಯನ್ ಅವರಿದ್ದ ಪೀಠ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More