Subscribe to Updates
Get the latest creative news from FooBar about art, design and business.
- ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು
- ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ
- ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ
- ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ
- ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ
- ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿ ಜಯಂತಿ ಹಾಗೂ ವ್ಯಸನ ಮುಕ್ತ ದಿನಾಚರಣೆ
- ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
- ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
Author: admin
ಕನ್ನಡ ಮನರಂಜನಾ ವಾಹಿನಿ ಸ್ಟಾರ್ ಸುವರ್ಣ ಹೊಸ ರಿಯಾಲಿಟಿ ಶೋವನ್ನು ಇದೇ ವೀಕೆಂಡ್ ನಲ್ಲಿ ಆರಂಭ ಮಾಡುತ್ತಿದೆ.ವೀಕೆಂಡ್ ನಲ್ಲಿ ರಿಲ್ಯಾಕ್ಸ್ ಆಗಬೇಕು ಅನ್ನೋ ವೀಕ್ಷಕರಿಗೆ ಈ ಹೊಚ್ಚ ಹೊಸ ರಿಯಾಲಿಟಿ ಶೋ ಮೂಲಕ ಮಸ್ತ್ ಮನರಂಜನೆಯ ರಸದೌತಣ ನೀಡುವುದಕ್ಕೆ ಮುಂದಾಗಿದೆ ‘ಸುವರ್ಣ ಸೆಲೆಬ್ರಿಟಿ ಲೀಗ್’. ‘ಸುವರ್ಣ ಸೆಲೆಬ್ರಿಟಿ ಲೀಗ್’ ಕಿರುತೆರೆಯ ಫೇಮಸ್ ಸೆಲೆಬ್ರಿಟಿಗಳಿಗಾಗಿಯೇ ಆರಂಭಿಸುತ್ತಿರುವ ಹೊಸ ರೀತಿಯ ರಿಯಾಲಿಟಿ ಶೋ. ಈ ಶೋನಲ್ಲಿ ಸುಮಾರು ಎರಡು ತಂಡಗಳು ಇರುತ್ತವೆ. 10 ಮಂದಿ ಸೆಲೆಬ್ರಿಟಿಗಳು ಈ ಶೋಗಳಲ್ಲಿ ಭಾಗವಹಿಸುತ್ತಿದ್ದಾರೆ. ಸುಮಾರು 8 ವಾರಗಳ ಕಾಲ ಅಂದರೆ, ಎರಡು ತಿಂಗಳ ಕಾಲ ಕಿರುತೆರೆಯಲ್ಲಿ ಈ ಸಮರ ನಡೆಯಲಿದೆ. ಕೊನೆಯಲ್ಲಿ ಯಾವ ತಂಡ ‘ಸುವರ್ಣ ಸೆಲೆಬ್ರಿಟಿ ಲೀಗ್’ ಗೆಲ್ಲುತ್ತೆ? ಅನ್ನೋದು ಈ ಶೋನ ಅಂತಿಮ ಘಟ್ಟ. ‘ಸುವರ್ಣ ಸೆಲೆಬ್ರಿಟಿ ಲೀಗ್’ ಕಾರ್ಯಕ್ರಮದ ಶೈಲಿ ಏನಪ್ಪಾ ಅಂದರೆ, ಸೆಲೆಬ್ರಿಟಿಗಳ ಮೋಜು-ಮಸ್ತಿ, ತರ್ಲೆ ತುಂಟಾಟದ ಜೊತೆ ಪೈಪೋಟಿಯ ಮಹಾ ಯುದ್ಧವೇ ನಡೆಯಲಿದೆ. ಇನ್ನು ಈ ಕಾರ್ಯಕ್ರಮದ ಮತ್ತೊಂದು ವಿಶೇಷ…
ತುರುವೇಕೆರೆ: ನವೋದಯ ವಿದ್ಯಾಲಯ 2025–26ನೇ ಸಾಲಿನ 6ನೇ ತರಗತಿ ಪರೀಕ್ಷೆಗೆ ಪ್ರವೇಶ ಬಯಸುವ ವಿದ್ಯಾರ್ಥಿ ಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಸೆ.16 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಆರ್.ಎಸ್. ಅಕ್ಷರ ಅಕಾಡಮಿ ಅಧ್ಯಕ್ಷರಾದ ನೆಮ್ಮದಿ ಗ್ರಾಮದ ಎ.ಎಸ್.ಮೂರ್ತಿ ತಿಳಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು ಜವಾಹರಲಾಲ್ ನವೋದಯ ವಿದ್ಯಾಲಯ ಭಾರತ ಸರ್ಕಾರದ ಒಂದು ಅತ್ಯುತ್ತಮ ಸಂಸ್ಥೆಯಾಗಿದೆ. 6ರಿಂದ 12ನೇ ತರಗತಿವರೆಗಿರುವ ಈ ಶಾಲೆಯಲ್ಲಿ ಉಚಿತ ಊಟ, ವಸತಿ ಸೌಕರ್ಯ, ಬಾಲಕ–ಬಾಲಕಿಯರಿಗೆ ಪ್ರತ್ಯೇಕ ವಸತಿ ನಿಲಯಗಳು, ಕ್ರೀಡೆ ಮತ್ತು ಎನ್.ಸಿ.ಸಿ., ಎನ್.ಎಮ್.ಎಸ್., ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ಉತ್ತಮ ಶಿಕ್ಷಣಕ್ಕೆ ಉತ್ತೇಜನ ನೀಡುವಂತ ಅತ್ಯುತ್ತಮ ಶಾಲೆ ಇದಾಗಿದೆ. ಅಲ್ಲದೆ ಇಂತಹ ಶಾಲೆಗಳಲ್ಲಿ ಓದಿ ಹೊರಬಂದ ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನಮಾನಗಳು ದೊರೆತಿವೆ. ಆ ನಿಟ್ಟಿನಲ್ಲಿ ಹೆಚ್ಚು ಗ್ರಾಮೀಣ ಭಾಗದ 5ನೇ ತರಗತಿ ವಿಧ್ಯಾರ್ಥಿಗಳ ಪೋಷಕರು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದರು. ಅರ್ಜಿ ಸಲ್ಲಿಸುವವರು ನಿಮ್ಮ ಶಾಲಾ ಮುಖ್ಯೋಪಾಧ್ಯಾಯರ ಸಲಹೆ…
ತುಮಕೂರು: ತೆಂಗಿನಕಾಯಿ ಕೀಳುವಾಗ ವಿದ್ಯುತ್ ತಗುಲಿ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ತಾಲೂಕಿನ ಮಲ್ಲಸಂದ್ರ ಬಳಿಯ ಅದಲಾಪುರ ಗ್ರಾಮದಲ್ಲಿ ನಡೆದಿದೆ. ಗುಬ್ಬಿ ತಾಲೂಕಿನ ಅಡಗೂರು ಗ್ರಾಮದ ಮದನ್ (24), ಮೃತ ಕೂಲಿ ಕಾರ್ಮಿಕ ಎಂದು ಗುರುತಿಸಲಾಗಿದೆ. ನಿನ್ನೆ ರೋಟಿಯಿಂದ ತೆಂಗಿನಮರದಲ್ಲಿ ಕಾಯಿ ಕೀಳುತ್ತಿದ್ದ ವೇಳೆ ತೆಂಗಿನಮರದ ಪಕ್ಕದಲ್ಲಿದ್ದ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರ್ಪಡೆಯಾದ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಜುಲಾನಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಈಗಾಗಲೇ ಚುನಾವಣ ಪ್ರಚಾರ ಆರಂಭಿಸಿರುವ ವಿನೇಶ್, ಐಒಎ ಅಧ್ಯಕ್ಷೆ ಪಿ.ಟಿ.ಉಷಾ(PT Usha) ವಿರುದ್ಧ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ ವೇಳೆ ನಾನು(ವಿನೇಶ್) ನಿರ್ಜಲೀಕರಣದಿಂದ ಆಸ್ಪತ್ರೆ ಸೇರಿದ್ದಾಗ ಪಿಟಿ ಉಷಾ ಅವರು ಆರೋಗ್ಯ ವಿಚಾರಿಸುತ್ತಿರುವ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದು ರಾಜಕೀಯ ಉದ್ದೇಶಕ್ಕೋಸ್ಕರ ತೆಗೆದ ಫೋಟೊ ಎಂದು ವಿನೇಶ್ ಹೇಳಿದ್ದಾರೆ. ಸ್ಥಳೀಯ ಸುದ್ದಿ ವಾಹಿನಿಯೊಂದಿಗಿನ ಸಂದರ್ಶನದಲ್ಲಿ ಮಾತನಾಡಿದ ವಿನೇಶ್, “ನನಗೆ ಪ್ಯಾರಿಸ್‌ನಲ್ಲಿ ಯಾವ ಬೆಂಬಲ ಸಿಕ್ಕಿದೆ ಎಂದು ನನಗೆ ತಿಳಿದಿಲ್ಲ. ಪಿಟಿ ಉಷಾ ಮೇಡಂ ನನ್ನನ್ನು ಅಂದು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದರು. ಈ ವೇಳೆ ಒಂದು ಫೋಟೋ ಕ್ಲಿಕ್ಕಿಸಲಾಯಿತು. ಈ ಫೋಟೊವನ್ನು ಉಷಾ ಮೇಡಂ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಆದರೆ, ಈ ಫೋಟೊದ ಹಿಂದೆ ರಾಜಕೀಯ ನಟನೆ ಇತ್ತು” ಎಂದು ವಿನೇಶ್ ಆರೋಪ ಮಾಡಿದ್ದಾರೆ. ಅಂದು ವಿನೇಶ್‌ರನ್ನು ಭೇಟಿಯಾಗಿ ಆರೋಗ್ಯ…
ದುಬೈನ ರಾಜಕುಮಾರಿಯು ತನ್ನ ಬ್ರಾಂಡ್ ಮಹ್ರಾ M1 ಅಡಿಯಲ್ಲಿ “ಡಿವೋರ್ಸ್” ಎನ್ನುವ ಹೆಸರಿನ ಹೊಸ ಸುಗಂಧ ದ್ರವ್ಯಗಳ ಬ್ರ್ಯಾಂಡ್‌ಅನ್ನು ಪ್ರಾರಂಭಿಸಲು ಸಿದ್ಧರಾಗಿದ್ದಾರೆ. ದುಬೈ ಆಡಳಿತಗಾರ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರ 30 ವರ್ಷದ ಮಗಳು ಶೇಖಾ ಮಹ್ರಾ ಅಲ್ ಮಕ್ತೂಮ್ ಅವರು ಸೋಮವಾರ ಇನ್ಸ್‌ಟಾಗ್ರಾಮ್‌ನಲ್ಲಿ ಇದರ ಟೀಸರ್ ಅನ್ನು ಹಂಚಿಕೊಂಡಿದ್ದಾರೆ. ಆಕೆಯ ಪೋಸ್ಟ್‌ನಲ್ಲಿ ಕಪ್ಪು ಬಣ್ಣದ ಬಾಟಲ್‌ನ ಮೇಲೆ ಡಿವೋರ್ಸ್ ಎನ್ನುವ ಪದಗಳನ್ನು ತೋರಿಸಿದೆ. ಇದು ಆಕೆಯ ವೈಯಕ್ತಿಕ ಜೀವನದ ಸದ್ಯದ ಸ್ಥಿತಿಯನ್ನೂ ತೋರಿಸಿದೆ. ಇದಕ್ಕೂ ಒಂದು ದಿನ ಮುಂಚೆ ಪ್ರಕಟ ಮಾಡಿದ ವಿಡಿಯೋದಲ್ಲಿ ಒಡೆದ ಗಾಜು, ಕಪ್ಪು ದಳಗಳು ಮತ್ತು ಕಪ್ಪು ಪ್ಯಾಂಥರ್ ಅನ್ನು ಒಳಗೊಂಡಿತ್ತು. ಶೇಖಾ ಮಹಾರಾ ತಮ್ಮ ಪತಿಯನ್ನು ಇನ್ಸ್ ಟಾಗ್ರಾಮ್ ನಲ್ಲಿಯೇ ಸಾರ್ವಜನಿಕವಾಗಿ ವಿಚ್ಛೇದನ ನೀಡಿದ ಬೆನ್ನಲ್ಲಿಯೇ ‘ಡಿವೋರ್ಸ್’ ಹೆಸರಿನ ಪರ್ಫ್ಯೂಮ್ ಬ್ರ್ಯಾಂಡ್ ಅನ್ನು ಬಿಡುಗಡೆ ಮಾಡಿದ್ದಾರೆ. ಇನ್ಸ್‌ಟಾಗ್ರಾಮ್‌ನಲ್ಲಿ ಬರೆದ ಪೋಸ್ಟ್‌ನಲ್ಲಿ, ‘ಪ್ರೀತಿಯ ಪತಿ, ನೀವು ಇತರ ಸಹಚರರೊಂದಿಗೆ ನಿರತರಾಗಿರುವ ಕಾರಣ, ನಾನು…
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ. ಸರ್ಕಾರ ಪತನಕ್ಕೆ ಟೈಮ್ ಬಾಂಬ್ ಫಿಕ್ಸ್ ಆಗಿದೆ. ಸಂಕ್ರಾಂತಿ ದೂರ ಆಯ್ತು, ದೀಪಾವಳಿ ಒಳಗೆ ಕಾಂಗ್ರೆಸ್, ಸಿದ್ದರಾಮಯ್ಯ ಸರ್ಕಾರ ಢಮಾರ್ ಆಗುತ್ತೆ ಎಂದು ಬಿಜೆಪಿ ನಾಯಕರ ಹೇಳಿಕೆ ಕುರಿತು ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿ, ಬಿಜೆಪಿಯವರು ಇನ್ನೂ ನಾಲ್ಕು ದೀಪಾವಳಿ ಕಾಯಬೇಕು. ಅಲ್ಲಿಯವರೆಗೆ ಮನೆಯಲ್ಲಿ ದೀಪಾವಳಿ ಮಾಡೋಕೆ ಹೇಳಿ ಎಂದು ಮಧುಬಂಗಾರಪ್ಪ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ. ಒಳ್ಳೆಯವರನ್ನ ಕೆಳಗಿಳಿಸಲು ಕುತಂತ್ರ ಇರುತ್ತೆ, ಬಿಜೆಪಿಯವರು ನಿಸ್ಸಿಮರು.ಇವತ್ತಿನವರೆಗೂ ಅವರ ಹಣೆಬರಹಕ್ಕೆ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬಂದಿಲ್ಲ.ಬಾಂಬೆ ಬಾಯ್ಸ ಅಂತಾ ನೀವೆ ಎಲ್ಲ ಹಾಕಿದ್ರಿ ಇಂತಹ ಸಂಪ್ರದಾಯ ಬೇಕಾ ನಮಗೆ ಎಂದು ಮಧುಬಂಗಾರಪ್ಪ ಪ್ರಶ್ನಿಸಿದರು. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರದ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಯಾರಿಂದಲೂ ಸಾಧ್ಯವಿಲ್ಲ. ಕೋರ್ಟ್ ಅನ್ನುವುದು ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ. ನ್ಯಾಯಿಕ ವಿಚಾರಣೆ ನಡೆದುಕೊಂಡು ಹೋಗುತ್ತದೆ. ಅವರು…
ತುಮಕೂರು: ಜಿಲ್ಲೆಯಲ್ಲಿರುವ ಖಾಸಗಿ ಶಾಲಾ ಆಡಳಿತ ಮಂಡಳಿಗಳ 2024–25ನೇ ಸಾಲಿಗಾಗಿ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣಕ್ಕಾಗಿ ಅವಕಾಶ ಕಲ್ಪಿಸಲಾಗಿದೆ. ಈ ಅವಕಾಶವು 2017–18ರ ಪೂರ್ವದಲ್ಲಿ ನೋಂದಣಿ ಪಡೆದು ನಡೆಸಲಾಗುತ್ತಿರುವ ಖಾಸಗಿ ಅನುದಾನಿತ/ಅನುದಾನ ರಹಿತ ಶಾಲೆಗಳಿಗೆ ಮಾತ್ರ ಅನ್ವಯಿಸುತ್ತದೆ. ಖಾಸಗಿ ಶಾಲಾ ಆಡಳಿತ ಮಂಡಳಿಗಳು ಈ ಅವಕಾಶವನ್ನು ಬಳಸಿಕೊಳ್ಳಬೇಕೆಂದು ತುಮಕೂರು ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಕ್ಕಳ ದಿನಾಚರಣೆ–2024ರ ಅಂಗವಾಗಿ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ” ಶೌರ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 06–18 ವರ್ಷ (2006ರ ಆಗಸ್ಟ್ 1ರಂದು ಹಾಗೂ ನಂತರ ಜನಿಸಿದ)ದೊಳಗಿನ ಮಕ್ಕಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಾಹಸ ಪ್ರದರ್ಶಿಸಿದ ಪ್ರಕರಣವು 2023ರ ಆಗಸ್ಟ್ 1 ರಿಂದ 2024ರ ಜುಲೈ 1ರೊಳಗೆ ನಡೆದಿರಬೇಕು. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ 10,000 ರೂ.ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು. ಅರ್ಜಿ ನಮೂನೆಯನ್ನು ಆಯಾ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ತುಮಕೂರು/ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ, ಯುವಜನ ಸೇವೆ ಮತ್ತು ಸಬಲೀಕರಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ…
ತುಮಕೂರು: ದೇಶದ ಅಭಿವೃದ್ಧಿಗೆ ಸಾಕ್ಷರತೆ ಪೂರಕವಾಗಿರುತ್ತದೆ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜೇರಿ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಡಯಟ್, ಬೆಂಗಳೂರು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ(ಲೋಕ ಶಿಕ್ಷಣ ವಿಭಾಗ), ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಕಚೇರಿ ಸಂಯುಕ್ತ ಆಶ್ರಯದಲ್ಲಿಂದು ಜಿಲ್ಲಾ ಪಂಚಾಯತ್ ಆವರಣದಲ್ಲಿ “ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ” ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಮೊಟ್ಟ ಮೊದಲ ಬಾರಿಗೆ ಯುನೆಸ್ಕೊದಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ದಿನದ ಆಚರಣೆಯನ್ನು ಪ್ರಾರಂಭಿಸಲಾಯಿತು. ಪ್ರಸಕ್ತ 2024ರ ಸಾಕ್ಷರತಾ ದಿನಾಚರಣೆಯನ್ನು “ಬಹು ಭಾಷೆಗಳ ಮೂಲಕ ಸಾಕ್ಷರತೆಯ ಉತ್ತೇಜನ” ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಸಾಕ್ಷರತೆಯಿಂದ ನಮ್ಮಲ್ಲಿರುವ ಜ್ಞಾನವೃದ್ಧಿಯಾಗುವುದಲ್ಲದೆ, ಸಾಮಾಜಿಕ ಅನಿಷ್ಟ ಪದ್ಧತಿಗಳನ್ನು ನಿವಾರಿಸಬಹುದಾಗಿದೆ ಎಂದು ತಿಳಿಸಿದರು. ಸಾಕ್ಷರತೆಯಿಂದ ಅನಕ್ಷರಸ್ಥರಲ್ಲಿ ಸ್ವಾವಲಂಬನೆ ಹೆಚ್ಚುತ್ತದೆ. ಸಂವಿಧಾನದಲ್ಲಿ ಕಲ್ಪಿಸಿರುವ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಮೂಡುತ್ತದೆ ಎಂದು ತಿಳಿಸಿದರಲ್ಲದೆ, ಜಿಲ್ಲೆಯಲ್ಲಿ ಶೇ.85.70 ಪುರುಷರು ಹಾಗೂ ಶೇ.67.38 ಮಹಿಳೆಯರು…
ತುಮಕೂರು: ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಏಕಾಗ್ರತೆ, ನಿರಂತರ ಪ್ರಯತ್ನದ ಜೊತೆಗೆ ಹಠದ ಹಸಿವು ಅಗತ್ಯವೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಕ್ಕಳಿಗೆ ಕಿವಿ ಮಾತು ಹೇಳಿದರು. ಜಿಲ್ಲೆಯ ಕ್ರೀಡಾ ವಸತಿ ಶಾಲಾ ಕ್ರೀಡಾಪಟುಗಳಿಗಾಗಿ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಕ್ರೀಡಾ ಕಿಟ್ ವಿತರಣೆ ಮಾಡಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಿರಂತರ ಪ್ರಯತ್ನದಿಂದ ಉನ್ನತ ಸ್ಥಾನಕ್ಕೆ ಹೋಗಲು ಸಾಧ್ಯ ಎಂದು ಹೇಳಿದರಲ್ಲದೆ, ವಿಶ್ವದಲ್ಲಿರುವ ಸುಮಾರು 900 ಕೋಟಿ ಜನಸಂಖ್ಯೆಯಲ್ಲಿ ಶೇ.15ಕ್ಕೂ ಹೆಚ್ಚಿನ ಜನಸಂಖ್ಯೆಯುಳ್ಳ ಭಾರತ ದೇಶವು ಉತ್ತಮ ಕ್ರೀಡಾ ಸಾಧಕರನ್ನು ಹೊಂದಿರುವ ರಾಷ್ಟçವೆನಿಸಿಕೊಂಡಿದೆ. ಕ್ರೀಡಾ ಸಾಧಕರನ್ನು ಆದರ್ಶವಾಗಿರಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಟಿ.ಆರ್. ರೋಹಿತ್ ಗಂಗಾಧರ್ ಮಾತನಾಡಿ, 92 ಕ್ರೀಡಾಪಟುಗಳಿಗೆ ಕಿಟ್ ವಿತರಣೆ ಮಾಡಲಾಗುತ್ತಿದ್ದು, ವಿದ್ಯಾರ್ಥಿ/ವಿದ್ಯಾರ್ಥಿನಿಯರು ಇದರ ಸದುಪಯೋಗಪಡಿಸಿಕೊಂಡು ಉತ್ತಮ ಕ್ರೀಡಾಪಟುಗಳಾಗಿ ದೇಶಕ್ಕೆ ಕೀರ್ತಿ ತರಬೇಕು ಎಂದು ತಿಳಿಸಿದರು. ಈ…