Subscribe to Updates
Get the latest creative news from FooBar about art, design and business.
- ನಮ್ಮೂರ ಶಾಲೆ ಉಳಿಸಿ: ಎಐಡಿಎಸ್ ಓ, ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಪ್ರತಿಭಟನೆ
- “ಕರಿಕಾಡ” ಚಿತ್ರದ “ಕಬ್ಬಿನ ಜಲ್ಲೆ” ಹಾಡಿಗೆ ವೀಕ್ಷಕ ಫಿದಾ, 2026 ಫೆಬ್ರವರಿ 6ಕ್ಕೆ ವಿಶ್ವಾದ್ಯಂತ ರಿಲೀಸ್
- ವಿದ್ಯಾರ್ಥಿಗಳ ಕಡೆ ಕುವೆಂಪು ಭಾವಗೀತೆಗಳ ನಡೆ: ಕುವೆಂಪು ಗೀತೆಗಳಲ್ಲಿ ಮಾನವೀಯತೆ ಸ್ಪರ್ಶ
- ಕುಣಿಗಲ್ ನಲ್ಲಿ ಕಸಾಪ ಭವನದ ಗ್ರಂಥಾಲಯ ಲೋಕಾರ್ಪಣೆ: “ರಾಜಕೀಯ ಸ್ವಾರ್ಥಕ್ಕೆ ಧರ್ಮ, ಜಾತಿಗಳ ಕಂದಕ ಸೃಷ್ಟಿ”
- ಬೀದರ್: ಡಿಸೆಂಬರ್ 30ರಂದು ಸಂತಪುರದಲ್ಲಿ ಬೃಹತ್ ರಕ್ತದಾನ ಶಿಬಿರ
- ಪಿ.ಎನ್.ಕೃಷ್ಣ ಮೂರ್ತಿ ಹುಟ್ಟು ಹಬ್ಬ: ಪೌರ ಕಾರ್ಮಿಕರಿಗೆ ಬೆಚ್ಚನೆಯ ಹೊದಿಕೆ ವಿತರಣೆ
- ಕೊರಟಗೆರೆ | ಇಂದು ಹಾಲು ಶೇಖರಣಾ ಘಟಕ ಉದ್ಘಾಟಿಸಲಿರುವ ಡಾ.ಜಿ.ಪರಮೇಶ್ವರ್
- ಉತ್ತಮ ಆಡಳಿತದಿಂದ ಸರ್ವತೋಮುಖ ಪ್ರಗತಿ ಸಾಧ್ಯ: ಕೆ.ಮಂಜುನಾಥ್
Author: admin
ತಿಪಟೂರು: ಗಾಂಧೀಜಿ ಅವರ ಸತ್ಯ, ಅಹಿಂಸೆ, ಶಾಂತಿ ಮತ್ತು ಸ್ವಚ್ಛತೆ ಮೌಲ್ಯಗಳನ್ನು ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸರಳತೆ ಮತ್ತು ಶಿಸ್ತನ್ನು ಅನುಸರಿಸಬೇಕು ಎಂದು ಶಾಸಕ ಕೆ.ಷಡಕ್ಷರಿ ಸಲಹೆ ನೀಡಿದರು. ನಗರಸಭೆ ಕಾರ್ಯಾಲಯದಲ್ಲಿ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯಂದು ನಡೆದ ಕಾರ್ಯಕ್ರಮದಲ್ಲಿ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಗಾಂಧೀಜಿ ಮಾರ್ಗದರ್ಶನದಿಂದಲೇ ಭಾರತ ಸ್ವಾತಂತ್ರ್ಯ ಪಡೆದುಕೊಂಡಿದೆ ಎಂದು ಸ್ಮರಿಸಿದರು. ಗಾಂಧೀಜಿಯ ಸ್ವಚ್ಛತಾ ಸಂದೇಶ ಮತ್ತು ಅಹಿಂಸಾ ಸಿದ್ಧಾಂತವು ಇಂದಿಗೂ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತದೆ ಎಂದರು. ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಸರಳತೆ, ಶಿಸ್ತು ಮತ್ತು ತ್ಯಾಗದ ಪ್ರತೀಕ ಎಂದು ತಿಳಿಸಿದ ಶಾಸಕರು, ಅವರ ‘ಜೈ ಜವಾನ್ — ಜೈ ಕಿಸಾನ್’ ಘೋಷಣೆ ರಾಷ್ಟ್ರದಲ್ಲಿ ಇಂದಿಗೂ ಪ್ರಸ್ತುತವಾಗಿದೆ ಎಂದು ಹೇಳಿದರು. ಇಬ್ಬರ ಮೌಲ್ಯಗಳನ್ನು ದೈನಂದಿನ ಜೀವನದಲ್ಲಿ ಅನುಸರಿಸಿದಾಗಲೇ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಒಳಚರಂಡಿ ಸ್ವಚ್ಛಗೊಳಿಸುವ ಪೌರ ಕಾರ್ಮಿಕರಿಗೆ ‘ನಮಸ್ತೆ’ ಯೋಜನೆಯಡಿಯಲ್ಲಿ ಸುರಕ್ಷತಾ ಸಲಕರಣೆಗಳನ್ನು…
ಕುಣಿಗಲ್: ಶಾಸಕ ಡಾ.ರಂಗನಾಥ್ ಅವರು ನವರಾತ್ರಿ ಒಂಬತ್ತು ದಿನಗಳ ಉಪವಾಸ ಮುಗಿಸಿ, ತಾಲ್ಲೂಕಿನ ಗಡಿಭಾಗದ ವಗೆರಗೆರೆ ಗ್ರಾಮದ ದಲಿತ ಸಮುದಾಯದ ವಿಧವೆ ಜಯಮ್ಮ ಮನೆಗೆ ಭೇಟಿ ನೀಡಿದ್ದು, ಈ ವೇಳೆ ಜಯಮ್ಮನವರು ಶಾಸಕರಿಗೆ ವಿಶೇಷ ಭೋಜನ ಬಡಿಸಿದರು. ಉಪವಾಸ ಅಂತ್ಯಗೊಳಿಸಲು ಬಂದ ಶಾಸಕರನ್ನು ದಲಿತ ಮುಖಂಡರು ಎತ್ತಿನಗಾಡಿ ಮೆರವಣಿಗೆಯೊಂದಿಗೆ ಸಂಭ್ರಮದಿಂದ ಸ್ವಾಗತಿಸಿದರು. ಊಟಕ್ಕೆ ಗ್ರಾಮೀಣ ಸೊಗಡಿನ ಮುದ್ದೆ, ಸುಪ್ಪಿನ ಸಾರು ಮತ್ತು ಪಾಯಸ ಬಡಿಸಲಾಯಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಡದಿ ಟೌನ್ ಶಿಪ್ಟ್ ಮತ್ತು ಬಿಬಿಎಂಪಿ ವಿಭಜನೆ ಕಾರ್ಯವನ್ನು ಕುಮಾರಸ್ವಾಮಿ ಅವರು ಮಾಡಲು ಯೋಚಿಸಿದಾಗ ಯಾವುದೇ ಟೀಕೆ ಇರಲಿಲ್ಲ. ಆದರೆ, ಡಿ.ಕೆ.ಶಿವಕುಮಾರ್ ಅವರು ಅದೇ ಕಾರ್ಯ ಮಾಡಲು ಹೋದಾಗ ಟೀಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಕುಣಿಗಲ್ ತಾಲೂಕನ್ನು ಬೆಂಗಳೂರು ದಕ್ಷಿಣ ಜಿಲ್ಲೆಗೆ ಸೇರಿಸುವ ವಿಚಾರ ಹಾಗೂ ತಾಲ್ಲೂಕಿನ ನೀರಾವರಿ ಸಮಸ್ಯೆಗಳನ್ನು ಪರಿಹರಿಸಲು ಜಿಲ್ಲಾ ಶಾಸಕರು ಸಹಕರಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಕುಣಿಗಲ್ ಬೆಂಗಳೂರು ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಬಂದರೆ ಈ…
ತುಮಕೂರು: ನಗರದಲ್ಲಿ ಗುರುವಾರ ತುಮಕೂರು ದಸರಾ’ ಅಂಗವಾಗಿ ಜರುಗಿದ ‘ಜಂಬೂ ಸವಾರಿ’ಗೆ ಜಿಲ್ಲೆಯ ನಾನಾ ಕಡೆಗಳಿಂದ ಬಂದಿದ್ದ ಸಾವಿರಾರು ಜನ ಸಾಕ್ಷಿಯಾದರು. ಕಲಾ ತಂಡಗಳ ವೈಭವ, ಗಜ ಪಡೆಯ ಗಾಂಭೀರ್ಯದ ನಡೆಯನ್ನು ಕಣ್ಣುಂಬಿಕೊಂಡರು. ರಸ್ತೆಯ ಇಕ್ಕೆಲಗಳಲ್ಲಿ ನಿಂತು ಮೆರವಣಿಗೆ ವೀಕ್ಷಿಸಿದರು. ಅಂಬಾರಿ ಹೊತ್ತ ಶ್ರೀರಾಮ ಆನೆಯ ಜತೆಗೆ ಎರಡು ಲಕ್ಷ್ಮೀ ಆನೆಗಳು ರಾಜ ಬೀದಿಯಲ್ಲಿ ಗಾಂಭೀರ್ಯದಲ್ಲೇ ಹೆಜ್ಜೆ ಹಾಕಿದವು. ದಸರಾ ಪ್ರಯುಕ್ತ ಜಿಲ್ಲಾ ಆಡಳಿತದಿಂದ ಸೆ. 22ರಿಂದ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿದವು. ಕೊನೆಯ ದಿನ ನಡೆದ ಅಂಬಾರಿ ಮೆರವಣಿಗೆ ಹಬ್ಬದ ಸಂಭ್ರಮ ಇಮ್ಮಡಿಗೊಳಿಸಿತು. ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಿನ ಸಂಖ್ಯೆಯ ಜನರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಟೌನ್‌ಹಾಲ್ ಬಳಿ ಸಾರ್ವಜನಿಕರಿಗೆ ಅಸನದ ವ್ಯವಸ್ಥೆ ಮಾಡಲಾಗಿತ್ತು. ಟೌನ್ ಹಾಲ್ ಹತ್ತಿರ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿದ್ದ ಚಾಮುಂಡೇಶ್ವರಿ ದೇವಿಗೆ ಪುಷ್ಪ ನಮನ ಸಲ್ಲಿಸಿ, ನಮಿಸಿದರು. ಶಾಸಕರಾದ ಟಿ.ಬಿ.ಜಯಚಂದ್ರ, ಬಿ.ಸುರೇಶ್‌ಗೌಡ, ಜಿ.ಬಿ.ಜ್ಯೋತಿಗಣೇಶ್, ಗ್ಯಾರಂಟಿ…
ತುಮಕೂರು: ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ನಾವು ಭಾವಿಸಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿಎಂ ಬದಲಾವಣೆ ಆಗುತ್ತಾರೆ ಎಂದು ಹೇಳಿದವರು ಯಾರು? ಸಿದ್ದರಾಮಯ್ಯನವರು ಈಗ ಮುಖ್ಯಮಂತ್ರಿಯಾಗಿದ್ದಾರೆ, ಅವರೇ ಮುಂದುವರಿಯುತ್ತಾರೆ ಎಂದರು. ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸ್ವತಃ ಸಿದ್ದರಾಮಯ್ಯನವರೇ ಹೇಳಿದ್ದಾರೆ. ಇಷ್ಟೆಲ್ಲಾ ಹೇಳಿಯೂ ಕೂಡ ಹೈಕಮಾಂಡ್ ನಾಯಕರು ತೆಗೆದುಕೊಳ್ಳುವ ತೀರ್ಮಾನ ಒಪ್ಪಿಕೊಳ್ಳುತ್ತೇನೆ ಅಂತನೂ ಅವರೇ ಹೇಳಿದ್ದಾರೆ. ನಮ್ಮಲ್ಲಿ ಯಾವುದೇ ಕ್ರಾಂತಿ ಇಲ್ಲ, ಎಲ್ಲವೂ ಶಾಂತಿ. ಗಾಂಧಿ ಜಯಂತಿ ದಿನ ಶಾಂತಿ ಹೇಳಬೇಕೆ ಹೊರತು ಕ್ರಾಂತಿ ಅಲ್ಲ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಪಾವಗಡ: ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಬೆಂಗಳೂರು (DSERT)ರವರು ಹಮ್ಮಿಕೊಂಡಿದ್ದ ಬಾಲ ವೈಜ್ಞಾನಿಕ್ ಪ್ರದರ್ಶಿನಿ ಸ್ಪರ್ಧೆಯಲ್ಲಿ ಇಲ್ಲಿನ ಅರಸೀಕೆರೆ ಸರ್ಕಾರಿ ಪ್ರೌಢಶಾಲೆಯ 10 ನೇ ತರಗತಿಯ ವಿದ್ಯಾರ್ಥಿ ಹೃತಿಕ್ ಹೆಚ್. ಭಾಗವಹಿಸಿ ತೃತೀಯ ಸ್ಥಾನಿಯಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ‘ಸದೃಢ ಭವಿಷ್ಯಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ’ ಎಂಬ ಘೋಷವಾಕ್ಯದಡಿ ತ್ಯಾಜ್ಯ ನಿರ್ವಹಣೆ ವಿಷಯಕ್ಕೆ ಸಂಬಂಧಿಸಿದಂತೆ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಎಂಬ ವಿಷಯದಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳಿಂದ ಪರಿಸರಕ್ಕೆ ಮಾಲಿನ್ಯಕಾರಕವಾಗದಂತೆ ಅದನ್ನು ಮರುಬಳಕೆ ಮಾಡುವ ವಿಧಾನವನ್ನು ಪ್ರಾಯೋಗಿಕವಾಗಿ ಸಾಬೀತು ಮಾಡಿ ತೋರಿಸಿದ ಮಾದರಿ ಇದಾಗಿದೆ. ರಾಜ್ಯಮಟ್ಟದ ಸ್ಪರ್ಧೆಯು ಬೆಂಗಳೂರಿನಲ್ಲಿ ದಿನಾಂಕ 04—10–2025 ರಂದು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಭೇತಿ ಸಂಸ್ಥೆ (DSERT) ಹೊಸಕೆರೆಹಳ್ಳಿ ಬನಶಂಕರಿ 3ನೇ ಹಂತದಲ್ಲಿ ನಡೆಯುತ್ತದೆ. ವಿಜ್ಞಾನ ಶಿಕ್ಷಕರಾದ ರೇಣುಕರಾಜ್. ಜಿ.ಹೆಚ್.ಮಾರ್ಗದರ್ಶನ ಮಾಡಿದ್ದಾರೆ. ವಿದ್ಯಾರ್ಥಿಯ ಈ ಸಾಧನೆಗೆ ಜಿಲ್ಲೆಯ ಉಪನಿರ್ದೇಶಕರಾದ, ಮಾಧವರೆಡ್ಡಿ ಸರ್ , ಡಯಟ್ ಪ್ರಾಂಶುಪಾಲರಾದ ಗಂಗಾಧರ್ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರೇಣುಕಮ್ಮ, ಶಾಲೆಯ ಎಸ್.ಡಿ. ಎಂ.ಸಿ. ಅಧ್ಯಕರಾದ…
ಬಹಳ ಹಿಂದೆ ಶ್ರೀಧರ್ಮ ಎಂಬ ವರ್ತಕನಿದ್ದ, ಈತ ಸ್ವತಃ ಪಂಡಿತ. ದೇವರಲ್ಲಿ ಅಪಾರ ನಂಬಿಕೆ ಇದರಂತೆ ಪೂಜೆ–ಪುನಸ್ಕಾರ, ಹೋಮ–ಹವನ, ಹಬ್ಬ–ಹರಿದಿನಗಳನ್ನು ಚಾಚೂ ತಪ್ಪದೇ ಆಚರಿಸುತ್ತಿದ್ದ. ಅದರಂತೆ ಮೃತ ಹೊಂದಿದ ತಮ್ಮ ಹಿರಿಯರ ಕರ್ಮಗಳನ್ನು ತಪ್ಪದೇ ನೆರವೇರಿಸಿಕೊಂಡು ಬರುತ್ತಿದ್ದ. ಹೀಗಿರುವಾಗ ಆತನಿಗೂ ಮರಣಶೈಯ ಅವಸ್ಥೆ ಬಂದಿತು. ಆಗ ಒಂದು ದಿನ ತನ್ನ ಮಗ ಸುಧರ್ಮನನ್ನ ಹತ್ತಿರಕ್ಕೆ ಕರೆದು ನೋಡು ನಾನು ಇದುವರೆಗೂ ಯಾವುದೇ ಧಾರ್ಮಿಕ ಕಾರ್ಯ ಅಥವಾ ಕರ್ಮ ಬಿಡದೆ ಅತ್ಯಂತ ಶ್ರದ್ಧೆಯಿಂದ ನೆರವೇರಿಸಿಕೊಂಡು ಬಂದಿದ್ದೇನೆ ನೀನು ನನ್ನ ಮರಣದ ನಂತರ ಮುಂದುವರೆಸಿಕೊಂಡು ಹೋಗುವೆಯಾ ಇದರಿಂದ ನಿನಗೂ ನಿನ್ನ ಮೃತ ಹಿರಿಯರಿಗೂ ತುಂಬಾ ಒಳ್ಳೆಯದು ಆಗುತ್ತದೆ ಎಂದಾಗ, ಮಗ ಸುಧರ್ಮ ಇಂತಹ ಆಚರಣೆಗಳಲ್ಲಿ ಸ್ವಲ್ಪವೂ ನಂಬಿಕೆ ಇಲ್ಲದಿದ್ದರೂ, ಮೃತ ಅವಸ್ಥೆಯಲ್ಲಿರುವ ತನ್ನ ತಂದೆ ಯಾವುದೇ ಮಾನಸಿಕ ನೋವು ಉಂಟಾಗಬಾರದೆಂದು ಖಂಡಿತ ಪಿತಾಶ್ರೀ ನಾನು ನೆರವೇರಿಸಕೊಂಡು ಹೋಗುತ್ತೇನೆ ಎಂದಾಗ ಮಗನ ಮಾತು ಕೇಳಿ ಅತ್ಯಂತ ಆನಂದದಿಂದ ಕಣ್ತುಂಬಿ ನೋಡಿ ಪ್ರಾಣ ಬಿಟ್ಟನು. ಆದರೆ ತಂದೆಯ…
ಬೆಂಗಳೂರು: ಗೃಹ ಲಕ್ಷ್ಮೀ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ವಾಷಿಂಗ್ ಮೆಷಿನ್ ಖರೀದಿಸಿದ್ದು, ಈ ಸಂಬಂಧ ವಿಡಿಯೋ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಈ ವಿಡಿಯೋ ನೋಡಿ ನನ್ನ ದಸರಾ ಹಬ್ಬದ ಸಂಭ್ರಮ ಹಿಮ್ಮಡಿಯಾಯಿತು ಎಂದಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿ ಖುಷಿ ಹಂಚಿಕೊಂಡಿರುವ ಸಿಎಂ, ರಾಮನಗರದ ಗ್ಯಾರಂಟಿ ಯೋಜನೆಯ ಫಲಾನುಭವಿ ಮಹಿಳೆ ಬಿ.ಕೆ.ತುಳಸಿ ಅವರು ಕಳೆದ ಏಳು ತಿಂಗಳ ಗೃಹಲಕ್ಷ್ಮಿ ಹಣ ಕೂಡಿಟ್ಟು ಮಹಾನವಮಿಯ ದಿನ ಹೊಸ ವಾಷಿಂಗ್ ಮೆಷಿನ್ ಖರೀದಿಸಿ, ಪೂಜಿಸುತ್ತಿರುವ ವೀಡಿಯೋ ನನ್ನ ಹಬ್ಬದ ಸಂಭ್ರಮವನ್ನು ಇಮ್ಮಡಿಯಾಗಿಸಿತು ಎಂದಿದ್ದಾರೆ. ಸ್ತ್ರೀಸಬಲೀಕರಣದ ಆಶಯದೊಂದಿಗೆ ಜಾರಿಗೆ ಕೊಟ್ಟ ಗೃಹಲಕ್ಷ್ಮಿ ಯೋಜನೆಯು ಸ್ತ್ರೀಶಕ್ತಿಯನ್ನು ಆರಾಧಿಸುವ ನವರಾತ್ರಿಯಲ್ಲಿ ಮಹಿಳೆಯೊಬ್ಬರ ಸಂಭ್ರಮಕ್ಕೆ ಕಾರಣವಾಗಿರುವುದು ಹೆಚ್ಚು ಅರ್ಥಪೂರ್ಣ ಮತ್ತು ಸಾರ್ಥಕವೆನಿಸಿದೆ ಎಂದು ಅವರು ಹೇಳಿದ್ದಾರೆ. ಇಂತಹ ಇನ್ನಷ್ಟು ಕುಟುಂಬಗಳ ಖುಷಿಗೆ ನಮ್ಮ ಯೋಜನೆ ಸಾಕ್ಷಿಯಾಗಲಿ ಎಂದು ಆಶಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಮೈಸೂರು: ಗಾಂಧೀಜಿಯವರ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. ಗಾಂಧಿ ಜಯಂತಿ ಪ್ರಯುಕ್ತ ಮೈಸೂರಿನಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮುಖ್ಯಮಂತ್ರಿಗಳು ಸುದ್ದಿಗಾರರೊಂದಿಗೆ ಮಾತನಾಡಿದರು. ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತಿದೆ. ಬಾಪು ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಗಾಂಧೀಜಿಯವರ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿದೆ ಎಂದು ಹೇಳಿದರು. ಇಂದು ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವೂ ಕೂಡಾ ಹೌದು, ದೇಶ ಕಂಡ ಅತ್ಯಂತ ಪ್ರಾಮಾಣಿಕ ಪ್ರಧಾನಿಗಳಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರೀ ಕೂಡ ಒಬ್ಬರು. ಈ ಮಹಾನ್ ಚೇತನಗಳ ಜಯಂತಿಯ ಜೊತೆ ಇಂದು ನಾಡಿನೆಲ್ಲೆಡೆ ಹಬ್ಬದ ಸಂಭ್ರಮ ಕಳೆಗಟ್ಟಿದೆ. ನಾಡಿನ ಸಮಸ್ತ ಜನತೆಗೆ ವಿಜಯದಶಮಿ ಶುಭಾಶಯಗಳನ್ನು ಕೂಡ ಕೋರುತ್ತೇನೆಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಪಾವಗಡ ಪಟ್ಟಣ ಹಾಗೂ ವೈ.ಎನ್ ಹೊಸಕೋಟೆ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿಎಸ್ ಐ ಗಳಾದ ವಿಜಯ್ ಕುಮಾರ್ ಮತ್ತು ಮಾಳಪ್ಪರವರು ಶಾಸಕರು, ತುಮುಲ್ ಅಧ್ಯಕ್ಷರು ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಹೆಚ್.ವಿ.ವೆಂಕಟೇಶ್ ಅವರಿಗೆ ದಸರಾ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು. ಹನುಮಂತನಹಳ್ಳಿಯ ತೋಟದ ಮನೆಯಲ್ಲಿ ಹೆಚ್.ವಿ.ವೆಂಕಟೇಶ್ ಅವರನ್ನು ಭೇಟಿ ಮಾಡಿ ದಸರಾ ಹಬ್ಬದ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಪಿ.ಎಸ್.ಐ. ಲೋಕೇಶ್ ರವರು ಸೇರಿ ಇತರರು ಇದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಶಕ್ತಿ ಮತ್ತು ಶ್ರಮವನ್ನು ಕಾಂಗ್ರೆಸ್ ಹೈಕಮಾಂಡ್ ಪರಿಗಣಿಸಿ, ಸೂಕ್ತ ಸ್ಥಾನಮಾನ ನೀಡಬೇಕು ಎಂದು ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಡಿ.ರಂಗನಾಥ್ ಒತ್ತಾಯಿಸಿದರು. ಬೆಂಗಳೂರಿನ ತಮ್ಮ ನಿವಾಸದಲ್ಲಿ ಗುರುವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜಕೀಯ ಎಂಬುದು ಕೃಷಿಯಿದ್ದಂತೆ. ಹೆಚ್ಚು ಶ್ರಮ ಹಾಕಿದಷ್ಟು ಉತ್ತಮ ರೀತಿಯಲ್ಲಿ ಬೆಳೆ ಬರುತ್ತದೆ. ಕಠಿಣ ಪರಿಶ್ರಮದ ಮೇಲೆ ನಮಗೆ ಹೆಚ್ಚು ನಂಬಿಕೆಯಿದೆ. ಇವರ ಮೇಲೆ ಭಗವಂತನ ಹಾರೈಕೆ, ಜನರ ಪ್ರೀತಿ, ವಿಶ್ವಾಸ, ಹೈಕಮಾಂಡ್ ಆಶೀರ್ವಾದವಿದೆ. ರಾಜ್ಯದಲ್ಲಿ ಕಾಂಗ್ರೆಸ್ 140 ಸ್ಥಾನಗಳನ್ನು ಗೆದ್ದಿರುವುದ ಹಿಂದೆ ಡಿ.ಕೆ.ಶಿವಕುಮಾರ್ ಅವರ ಶಕ್ತಿ ಹಾಗೂ ಶ್ರಮವಿದೆ ಎಂದು ಅನೇಕ ನಾಯಕರು ಹೇಳುತ್ತಾರೆ. ಇದನ್ನು ಪಕ್ಷದ ಹೈಕಮಾಂಡ್ ಪರಿಗಣಿಸಿ ಸೂಕ್ತ ಸ್ಥಾನಮಾನ ನೀಡಬೇಕು ಎಂದರು. ಡಿ.ಕೆ.ಶಿವಕುಮಾರ್ ಅವರಂತೆ ಬೆಳಿಗ್ಗೆ 8ರಿಂದ ರಾತ್ರಿ 3 ಗಂಟೆಯ ತನಕ ಕೆಲಸ ಮಾಡುವ ಬೇರೆ ನಾಯಕರಿದ್ದರೆ ನನಗೆ ತಿಳಿಸಿ. ಇವರ ಶ್ರಮಕ್ಕೆ ತಕ್ಕ ಪ್ರತಿಫಲ ಇದ್ದೇ ಇರುತ್ತದೆ. ಡಿ.ಕೆ.ಶಿವಕುಮಾರ್ ಅವರು ಒಂದಲ್ಲೊಂದು ದಿನ ರಾಜ್ಯದ…