Author: admin

ಮಿಡಿಗೇಶಿ: ಆಸೆ ಆಮಿಷವೊಡ್ಡಿ ಬಾಲಕಿಯೋರ್ವಳನ್ನು ಬೈಕ್‌ ನಲ್ಲಿ ಕರೆದೊಯ್ದು ಸುತ್ತಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಏಪ್ರಿಲ್ 23ರ ಸಂಜೆ ಮಿಡಿಗೇಶಿ ವ್ಯಾಪ್ತಿಯ ಗ್ರಾಮವೊಂದರಲ್ಲಿ 16 ವರ್ಷದ ಬಾಲಕಿ ಬಹಿರ್ದೆಸೆಗೆಂದು ಹೊರಗೆ ಹೋಗಿದ್ದರು. ಎಷ್ಟು ಹೊತ್ತಾದರೂ ಆಕೆ ಬಾರದ ಕಾರಣ ಪೋಷಕರು ಹುಡುಕಾಟ ನಡೆಸಿದರು. ಸಂಬಂಧಿಕರು ಮತ್ತು ಗ್ರಾಮಸ್ಥರನ್ನು ವಿಚಾರಿಸುತ್ತಿರುವಾಗ ನಿಮ್ಮ ಮಗಳು ಹೀರಮುದ್ದಯ್ಯ ಎಂಬುವವರೊಂದಿಗೆ ಆಗಾಗ್ಗೆ ದೂರವಾಣಿಯಲ್ಲಿ ಮಾತನಾಡುತ್ತಿದ್ದ ಬಗ್ಗೆ ತಿಳಿಸಿದರು. ಈ ಬಗ್ಗೆ ಬೆಂಗಳೂರಿನಲ್ಲಿರುವ ಹೀರಮುದ್ದಯ್ಯನಿಗೆ ಕರೆ ಮಾಡಲಾಗಿ ನನಗೇನೂ ತಿಳಿದಿಲ್ಲ ಎಂದು ಕರೆ ಕಟ್ ಮಾಡಿದ್ದ. ಪೋಷಕರು ಠಾಣೆಗೆ ದೂರು ನೀಡಲಾಗಿ ಕೃತ್ಯ ಹೊರಬಂದಿದೆ. ಅಂದರೆ, ಹೀರಮುದ್ದಯ್ಯನು ಬಾಲಕಿಯನ್ನು ತನ್ನ ಬೈಕ್‌ ನಲ್ಲಿ ಕರೆದೊಯ್ದು ಮೈಸೂರಿಗೆ ಹೋಗಿದ್ದಾನೆ. ಅಲ್ಲಿ ಸ್ನೇಹಿತರ ಮನೆಯಲ್ಲಿ ತಂಗಿದ್ದು, ಹೋಗಿಬರುವಾಗ ಕೆನ್ನೆ ಮುಟ್ಟುವುದು, ಮೈ ಮುಟ್ಟುವುದು ಬಿಟ್ಟರೆ ಬೇರೇನೂ ಮಾಡಿಲ್ಲ ಎಂದು ಬಾಲಕಿ ಹೇಳಿಕೆ ನೀಡಿದ್ದಾಳೆ. ಪೋಷಕರ ದೂರು ಹಾಗೂ ಬಾಲಕಿಯ ಹೇಳಿಕೆಯನ್ನು ಪಡೆದು ಪೊಲೀಸರು ಬಿಎನ್‌ಎಸ್ ಕಾಯ್ದೆ…

Read More

ತುಮಕೂರು: ವಿದ್ಯಾರ್ಥಿಗಳ ಏಕಾಗ್ರತೆಯಿಂದ ತಪಸ್ಸಿಗಾಗಿ ತಾವು ಮಾಡುವ ಕೆಲಸದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು. ಇದರಿಂದ ಯಶಸ್ವಿಯಾಗಲು ಸಾಧ್ಯ. ತಮ್ಮನ್ನು ಇತರರೊಂದಿಗೆ ಹೋಲಿಕೆ ಮಾಡಿಕೊಳ್ಳಬಾರದು. ಕಲಿತ ವಿಷಯಗಳನ್ನು ಅಂತರ್ಗತ ಮಾಡಿಕೊಳ್ಳಬೇಕು. ಇಲ್ಲವಾದರೆ ಅದು ವ್ಯರ್ಥವಾಗುತ್ತದೆ ಎಂದು ತುಮಕೂರು ಶಿಕ್ಷಣ ಮಹಾವಿದ್ಯಾಲಯದ ಡೀನ್ ಕೆ.ಎಸ್. ಡಾ. ಸಿದ್ಧರಾಜು ಕರೆ ನೀಡಿದರು. ತುಮಕೂರು ವಿಶ್ವವಿದ್ಯಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆ.ಎಸ್.ಇ.ಎಫ್. ಶಿಕ್ಷಣ ಮಹಾವಿದ್ಯಾಲಯ ಶಿರಾ ಗೇಟ್ ಇಲ್ಲಿ ಹಮ್ಮಿಕೊಂಡಿದ್ದ ಅಕ್ಷರಂ ಅನಂತಂನ 2027ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಮಾತನಾಡುತ್ತಿದ್ದರು. ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಸಹ ಪ್ರಾಧ್ಯಾಪಕರಾದ ವಿದ್ಯಾರ್ಥಿಗಳು ಮಾತೃಭಾಷೆಯಲ್ಲಿ ಅನುತ್ತೀರ್ಣರಾಗುತ್ತಿರುವುದರ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಹಾಗೆಯೇ ಸಮನ್ವಯ ಶಿಕ್ಷಣ ಸಹಿಷ್ಣುತೆ ಶಿಕ್ಷಣ ಮತ್ತು ನೈತಿಕತೆಯ ಕೆಲವು ನಿದರ್ಶನಗಳ ಮೂಲಕ ವಿವರಿಸಿದರು. ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ಸ್ವ ಮೌಲ್ಯ ಮಾಪನ ಮಾಡಿಕೊಳ್ಳಬೇಕು ಎಂದರು. ಹಿರಿಯ ಉಪನ್ಯಾಸಕರಾದ ಪಿ. ರಾಮಕೃಷ್ಣ ಅವರು ಮಾತನಾಡಿ ವಿದ್ಯೆ ವಿವೇಚನೆ, ಸರಳತೆ ಮತ್ತು ವಿಧೇಯತೆಯನ್ನು ಕಲಿಸಿಕೊಡಬೇಕು. ಪ್ರಸ್ತುತ…

Read More

ಕೊರಟಗೆರೆ: ಹಲವು ವರ್ಷಗಳಿಂದ ಸಾರ್ವಜನಿಕರ ಬಹು ನಿರೀಕ್ಷೆಯಾಗಿದ್ದ ಕೊರಟಗೆರೆ ಪಟ್ಟಣ ಪಂಚಾಯತಿ ಇದೀಗ ಪುರಸಭೆಯಾಗಿ ಮೇಲ್ದರ್ಜೆಗೇರಿರುವ ಹಿನ್ನಲೆಯಲ್ಲಿ ಪುರಸಭೆ ಕಚೇರಿಯಲ್ಲಿ ನೂತನ ನಾಮಫಲಕವನ್ನು ಅನಾವರಣಗೊಳಿಸಲಾಯಿತು. ಈ ಮೂಲಕ ಪಟ್ಟಣದ ಅಭಿವೃದ್ಧಿಗೆ ಹೊಸ ದಿಕ್ಕು ಸಿಕ್ಕಂತಾಗಿದೆ. ಕೊರಟಗೆರೆ ಪಟ್ಟಣ ಪಂಚಾಯಿತಿ ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಕನಸನ್ನ ಪಟ್ಟಣದ ಜನತೆ, ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರು ಹಲವು ವರ್ಷಗಳಿಂದ ಪುರಸಭೆ ಸ್ಥಾನಮಾನಕ್ಕಾಗಿ ಒತ್ತಾಯ ಮಾಡುತ್ತಿದ್ದು, ಇದೀಗ ಆ ಕನಸು ನನಸಾಗಿದೆ. ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರ ವಿಶೇಷ ಒತ್ತಾಸೆ ಮತ್ತು ಪ್ರಯತ್ನದಿಂದ ಕೊರಟಗೆರೆ ಪುರಸಭೆಯಾಗಿ ಮೇಲ್ದರ್ಜೆಗೇರಿದೆ. ಪುರಸಭೆ ಸ್ಥಾನಮಾನದಿಂದ ಪಟ್ಟಣದ ರಸ್ತೆ, ಕುಡಿಯುವ ನೀರು, ಒಳಚರಂಡಿ, ಬೀದಿ ದೀಪ, ಸ್ವಚ್ಛತೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಹರಿದು ಬರಲಿದ್ದು, ಕೊರಟಗೆರೆ ಸಮಗ್ರ ಅಭಿವೃದ್ಧಿಯತ್ತ ಹೆಜ್ಜೆ ಇಡುವ ಅವಕಾಶ ಒದಗಿ ಬಂದಿದೆ. ಈ ಸಂದರ್ಭದಲ್ಲಿ ₹8 ಲಕ್ಷ ವೆಚ್ಚದಲ್ಲಿ ಕಚೇರಿ ಬಳಕೆಗಾಗಿ ಅಳವಡಿಸಲಾದ ಸೋಲಾರ್ ಪ್ಲಾಂಟ್‌ನ್ನು…

Read More

ತುಮಕೂರು: ಸರ್ಕಾರಿ ಎಂಪ್ರೆಸ್ ಮಹಿಳಾ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ದಾಖಲಾತಿ ಕೋರಿ ಬರುತ್ತಿರುವ ವಿದ್ಯಾರ್ಥಿನಿಯರಿಗೆ ಉರ್ದು ಒಂದು ಭಾಷೆಯನ್ನಾಗಿ ನೀಡಲು ನಿರಾಕರಿಸುತ್ತಿರುವ ವಿಚಾರವಾಗಿ ಪಿ.ಯು. ಉಪನಿರ್ದೇಶಕ ಡಾ. ಬಾಲಗುರುಮೂರ್ತಿ ಅವರಿಗೆ ಮನವಿ ಸಲ್ಲಿಸಲಾಯಿತು. ಹಲವು ಮುಸ್ಲಿಂ ಮಹಿಳಾ ವಿದ್ಯಾರ್ಥಿನಿಯರು ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಉರ್ದು ಭಾಷೆ ವಿಷಯದೊಂದಿಗೆ ತೇರ್ಗಡೆ ಹೊಂದಿ ಪ್ರಥಮ ವರ್ಷದ ಪಿಯುಸಿಯ ದಾಖಲಾತಿಗೆ ಎಂಪ್ರೆಸ್ ಮಹಿಳಾಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಿಗೆ ಸಂಪರ್ಕಿಸಿದಾಗ ಪ್ರಾಂಶುಪಾಲ ಡಿ.ಬಿ.ಅನ್ನಪೂರ್ಣ ಉರ್ದು ಭಾಷೆಯನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ನಿರಾಕರಿಸುತ್ತಿದ್ದಾರೆ. ಉರ್ದು ಬದಲು ಹಿಂದಿ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಲು ಒತ್ತಾಯಿಸುತ್ತಿದ್ದು, ಇಲ್ಲವಾದಲ್ಲಿ ಬೇರೆ ಕಾಲೇಜಿನಲ್ಲಿ ದಾಖಲಾತಿ ಪಡೆಯಲು ಬಂದ ಮುಸ್ಲಿಂ ಮಹಿಳಾ ವಿದ್ಯಾರ್ಥಿನಿಯರಿಗೆ ಹಾಗೂ ಅವರ ಪೋಷಕರಿಗೆ ಹೇಳುತ್ತಿದ್ದಾರೆ. ಪ್ರಾಂಶುಪಾಲರ ಈ ನಡತೆಯಿಂದ ಅಲ್ಪಸಂಖ್ಯಾತ ಮುಸ್ಲಿಂ ವಿದ್ಯಾರ್ಥಿನಿಯರಿಗೆ ತುಂಬಾ ಅನಾನುಕೂಲತೆ ಹಾಗೂ ಅನ್ಯಾಯವಾಗುತ್ತಿದ್ದು ಅವರ ಮುಂದಿನ ವಿದ್ಯಾಭ್ಯಾಸಕ್ಕೆ ತುಂಬಾ ತೊಂದರೆ ಆಗುತ್ತಿದೆ. ಈಗಾಗಲೇ ಹಿಂದಿನ ವರ್ಷದಲ್ಲಿ ಮೊದಲ ಪಿಯುಸಿ ಉತ್ತೀರ್ಣರಾಗಿ ಈಗ…

Read More

ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಚಿಕ್ಕನಾಯಕನಹಳ್ಳಿ ತಾಲೂಕು ವ್ಯಾಪ್ತಿಯಲ್ಲಿ ಇತ್ತೀಚಿನ ಭಾರಿ ಮಳೆ ಹಾಗೂ ಬಿರುಗಾಳಿಯಿಂದ ಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಪ್ರಕೃತಿ ವಿಕೋಪದಿಂದ ಮಾನವ ಜೀವಹಾನಿ, ಬೆಳೆ ನಷ್ಟ ಹಾಗೂ ಮೂಲಸೌಕರ್ಯ ಹಾನಿಯ ಕುರಿತು ಸಮಗ್ರ ಮಾಹಿತಿ ಪಡೆದು ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣದ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಚಿಕ್ಕನಾಯಕನಹಳ್ಳಿ ಪಟ್ಟಣದ ನಿವಾಸಿ ಪುಟ್ಟಯ್ಯ (70 ವರ್ಷ) ಅವರು ಏಪ್ರಿಲ್ 28ರಂದು ಸಂಜೆ ತೋಟದಿಂದ ಮನೆಗೆ ತೆರಳುವ ವೇಳೆ ಆಕಸ್ಮಿಕ ಗಾಳಿ-ಮಳೆಯ ಪರಿಣಾಮ ಮರದ ಕೊಂಬೆ ತಲೆಯ ಮೇಲೆ ಬಿದ್ದು ಮೃತಪಟ್ಟ ಘಟನೆ ಹಿನ್ನೆಲೆ, ಜಿಲ್ಲಾಧಿಕಾರಿಗಳು ಮೃತರ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಂತಾಪ ಸೂಚಿಸಿ ಸಾಂತ್ವನ ಹೇಳಿದರು. ಈ ವೇಳೆ ತಹಶೀಲ್ದಾರ್, ಮುಖ್ಯಾಧಿಕಾರಿ ಹಾಗೂ ಗ್ರಾಮ ಆಡಳಿತಾಧಿಕಾರಿಗಳಿಗೆ ಮೃತರ ಕುಟುಂಬಕ್ಕೆ ತಕ್ಷಣ ಮರಣ ಪ್ರಮಾಣ ಪತ್ರ ವಿತರಿಸುವುದು, ಹಕ್ಕುಪತ್ರ ಸಂಬಂಧಿತ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸುವುದು ಹಾಗೂ ಅರ್ಹ ಪಿಂಚಣಿ ಸೇರಿದಂತೆ…

Read More

ತುಮಕೂರು: ನಗರದ ಕನ್ನಡ ಭವನದಲ್ಲಿ ಕನ್ನಡ ಪರ ಸಂಘಟನೆಯಾದ ವಿಜಯ ಸೇನೆ ವತಿಯಿಂದ ಆಯೋಜಿಸಲಾಗಿದ್ದ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೊರಟಗೆರೆಯ ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕೊರಟಗೆರೆಯ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿರುತ್ತಿರುವ ಡಿ.ಆರ್.ಶಿಲ್ಪಶ್ರೀ 2007ರಲ್ಲಿ ಶಿಕ್ಷಕಿಯಾಗಿ ನೇಮಕಗೊಂಡು ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಕೋಟಗುಡ್ಡ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿರುತ್ತಾರೆ. 2010ರಲ್ಲಿ ಕೊರಟಗೆರೆ ತಾಲ್ಲೂಕಿನ ಚಟ್ಟೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ    ವರ್ಗಾವಣೆಗೊಂಡು ಪ್ರಾಮಾಣಿಕ ಸೇವೆ ಸಲ್ಲಿಸಿರುತ್ತಾರೆ. ತದ ನಂತರ 2014 ರಿಂದ ಅಕ್ಕಿರಾಂಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ವರ್ಗಾವಣೆ ಅಗಿ ಕರ್ತವ್ಯ ನಿರ್ವಹಿಸಿರುತ್ತಾರೆ, ನಂತರ 2019 ರಿಂದ ಕೊರಟಗೆರೆ ಪಟ್ಟಣದ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಪ್ರಸ್ತುತವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಕರ್ತವ್ಯ ನಿಷ್ಠೆ ಮತ್ತು ನಿಸ್ವಾರ್ಥ ಸೇವೆ, ಶಿಕ್ಷಣ ಕ್ಷೇತ್ರದಲ್ಲಿ…

Read More

ಕುಣಿಗಲ್: ರೈತರ ಕೃಷಿಗೆ ಅಸಮರ್ಪಕ ವಿದ್ಯುತ್ ಸರಬರಾಜು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಪದಾಧಿಕಾರಿಗಳು ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು. ರೈತರಿಗೆ ಅವೈಜ್ಞಾನಿಕವಾಗಿ ಯಾವುದೇ ಸಮಯ ನಿಗದಿ ಇಲ್ಲದೆ ವಿದ್ಯುತ್ ನೀಡುವ ಕೆಪಿಟಿಸಿಎಲ್(ಬೆಸ್ಕಾಂ) ಅಧಿಕಾರಿಗಳ ಸರ್ವಾಧಿಕಾರಿ ಧೋರಣೆಯನ್ನು ಖಂಡಿಸಿ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್, ತಾಲ್ಲೂಕು ಅಧ್ಯಕ್ಷ ಅನಿಲ್ ಕುಮಾರ್ ಅವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಮತ್ತು ರೈತರು ಇಲ್ಲಿನ ಬೆಸ್ಕಾಂ ಕಾರ್ಯಪಾಲಕ ಅಭಿಯಂತರರ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಧಿಕಾರಿಗಳ ಬೇಜವಾಬ್ದಾರಿಯನ್ನು ಖಂಡಿಸಿ ಧಿಕ್ಕಾರ ಕೂಗಿದರು. ರೈತಸಂಘ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ಮಾತನಾಡಿ, ರಾಜ್ಯ ಸರ್ಕಾರ ರೈತರಿಗೆ ಏಳು ಗಂಟೆ ಉಚಿತ 3 ಫೇಸ್ ವಿದ್ಯುತ್ ನೀಡುವುದಾಗಿ ಹೇಳಿ, ದಿನಕ್ಕೆ ಕನಿಷ್ಠ ಎರಡು ಗಂಟೆ ವಿದ್ಯುತ್ ನೀಡುತ್ತಿಲ್ಲ. ಹಗಲು ಹೊತ್ತು ವಿದ್ಯುತ್ ಸಮರ್ಪಕವಾಗಿ ನೀಡುತ್ತಿಲ್ಲ. ರಾತ್ರಿ ವೇಳೆ ಮನ ಬಂದಂತೆ ಕರೆಂಟ್ ನೀಡುತ್ತಿದ್ದಾರೆ. ರೈತರು ಬೆಸ್ಕಾಂ ನೀಡುವ ವಿದ್ಯುತ್‌ಗಾಗಿ ಹೆಂಡತಿ,…

Read More

ತುಮಕೂರು: ಜಿಲ್ಲೆಯಲ್ಲಿ ಮೇ 1ರಂದು ಭಗವಾನ್ ಬುದ್ಧ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಹಾಗೂ ವಿವಿಧ ಸಂಘ ಸಂಸ್ಥೆಗಳು ಸಜ್ಜಾಗಿವೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬುದ್ಧ ಧಮ್ಮ ಪ್ರತಿಷ್ಠಾನ ಹಾಗೂ ಧಮ್ಮ ಲೋಕ ಬುದ್ಧ ವಿಹಾರದ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮೇ 1ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಗವಾನ್ ಬುದ್ಧರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಜಯಂತಿಗೆ ಚಾಲನೆ ನೀಡಲಾಗುವುದು. ನಂತರ ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಗೂಳಹರಿ ಗೆದ್ದಲಹಳ್ಳಿಯ ಗೌತಮ ಬುದ್ಧ ನಗರದಲ್ಲಿರುವ ‘ಧಮ್ಮ ಲೋಕ ಬುದ್ಧ ವಿಹಾರ’ದಲ್ಲಿ ವಿಶೇಷ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ತುಮಕೂರು: ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತುಮಕೂರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು. ಸಭೆಯಲ್ಲಿ ಪ್ರಸ್ತುತ ಮುಂಗಾರು ಹಂಗಾಮಿನ ಋತುಮಾನ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಿ, ಜಿಲ್ಲೆಯಾದ್ಯಂತ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಹಾಗೂ ತುರ್ತು ಕ್ರಮಗಳ ಕುರಿತು ಚರ್ಚಿಸಲಾಯಿತು. ಜಿಲ್ಲಾಧಿಕಾರಿಗಳು ಮುಂಗಾರು ಹಂಗಾಮಿನ ಹಿನ್ನೆಲೆಯಲ್ಲಿ ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಸಮರ್ಪಕ ಲಭ್ಯತೆ ಖಚಿತಪಡಿಸಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಸಾರ್ವಜನಿಕರಿಗೆ ಪೂರೈಕೆಯಾಗುವ ಕುಡಿಯುವ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸುವುದರ ಜೊತೆಗೆ, ಸರ್ಕಾರಿ ವಸತಿ ನಿಲಯಗಳು ಹಾಗೂ ಹಾಸ್ಟೆಲ್‌ ಗಳಲ್ಲಿ ಕುಡಿಯುವ ನೀರಿನ ಮಾದರಿಗಳನ್ನು ಪರಿಶೀಲಿಸಿ, ಕ್ಲೋರಿನೇಷನ್ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ತಿಳಿಸಲಾಯಿತು. ಮಳೆಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಉಂಟಾಗದಂತೆ ಚರಂಡಿ ಮತ್ತು ತ್ಯಾಜ್ಯ ವಿಲೇವಾರಿ ಪ್ರದೇಶಗಳ ಸ್ವಚ್ಛತೆ, ಕ್ಲೀನಿಂಗ್ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಕಲುಷಿತ ನೀರು ಕುಡಿಯುವ ನೀರಿನ ಮೂಲಗಳಿಗೆ ಸೇರ್ಪಡೆಯಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಎಲ್ಲಾ…

Read More

ಮಧುಗಿರಿ: ಜಿಲ್ಲೆಯ ಮಧುಗಿರಿ ತಾಲ್ಲೂಕಿನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಹಣದ ವಿಚಾರವಾಗಿ ಉಂಟಾದ ಸಣ್ಣ ತಕರಾರು ವಿಕೋಪಕ್ಕೆ ತಿರುಗಿ, ಅಣ್ಣನೇ ತನ್ನ ಸ್ವಂತ ತಮ್ಮನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಪುರವರ ಹೋಬಳಿಯ ನಿಟ್ರಾಹಳ್ಳಿ ಗ್ರಾಮದ ನಾಗಪ್ಪ ಎಂಬುವವರ ಮಕ್ಕಳಾದ ನರಸಿಂಹಮೂರ್ತಿ ಮತ್ತು ಗಂಗರಾಜು (28) ನಡುವೆ ಈ ಘರ್ಷಣೆ ಸಂಭವಿಸಿದೆ. ಮೂಲಗಳ ಪ್ರಕಾರ, ಕಳೆದ ಕೆಲವು ದಿನಗಳಿಂದ ಇಬ್ಬರ ನಡುವೆ ಹಣಕಾಸಿನ ವಿಚಾರವಾಗಿ ಮನಸ್ತಾಪವಿತ್ತು. ಇಂದು ಅದೇ ವಿಚಾರವಾಗಿ ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿದೆ. ಜಗಳದ ಸಂದರ್ಭದಲ್ಲಿ ತೀವ್ರ ಆಕ್ರೋಶಗೊಂಡ ಅಣ್ಣ ನರಸಿಂಹಮೂರ್ತಿ, ಪಕ್ಕದಲ್ಲಿದ್ದ ದೊಡ್ಡ ಕಲ್ಲನ್ನು ಎತ್ತಿ ತಮ್ಮ ಗಂಗರಾಜು ತಲೆಯ ಮೇಲೆ ಹಾಕಿದ್ದಾನೆ. ಕಲ್ಲಿನ ಏಟಿಗೆ ಗಂಗರಾಜು ಅವರ ತಲೆಗೆ ಗಂಭೀರ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಕೊಡಿಗೇನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಅಣ್ಣ ನರಸಿಂಹಮೂರ್ತಿಯನ್ನು ಪೊಲೀಸರು ಈಗಾಗಲೇ…

Read More