Author: admin

ಸರಗೂರು: ತಾಲೂಕಿನ ಬಿ ಮಟಕೆರೆ ಗ್ರಾಮ ಪಂಚಾಯಿತಿ  ಮಾಜಿ ಅಧ್ಯಕ್ಷ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಭಾಗ್ಯ ಬಿ ಹಾಗೂ ಸಿಬ್ಬಂದಿಗಳು ಪಂಚಾಯಿತಿ ಹಣ ದುರುಪಯೋಗಪಡಿಸಿಕೊಂಡಿದ್ದಾರೆಂದು ಗ್ರಾ.ಪಂ. ಅಧ್ಯಕ್ಷ ಮತ್ತು ಸದಸ್ಯರು ಆರೋಪಿಸಿದರು. ಗ್ರಾ.ಪಂ. ಅಧ್ಯಕ್ಷ ನಾಗೇಂದ್ರ ಮತ್ತು ಉಪಾಧ್ಯಕ್ಷೆ  ಭಾರತಿ ಮತ್ತು ಸದಸ್ಯರ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ್ ಅಧಿಕಾರಿಗಳಿಗೆ ಅ. 13/08/2024 ರಂದು ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಅದರ ದೂರಿನ ಮೇರೆಗೆ ಬುಧವಾರದಂದು ಪಂಚಾಯಿತಿಯಲ್ಲಿ ಜಿಲ್ಲಾ ಪಂಚಾಯತ್ ತನಿಖಾ ತಂಡ ಪಂಚಾಯಿತಿ ಗೆ ನೀಡಿ ಕಡತಗಳನ್ನು ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ತನಿಖೆ ತಂಡ ಅಧಿಕಾರಿ, ಸರಿಯಾದ ರೀತಿಯಲ್ಲಿ ಕಡತಗಳನ್ನು ಪರಿಶೀಲನೆ ಮಾಡಲು ನೀಡಿಲ್ಲ. ಆದರೆ ಒಂದು ಕಡತ ಕೇಳಿದರೆ, ಇನ್ನೂ ಯಾವ್ಯಾವುದೋ ದಾಖಲು ನೀಡುತ್ತಿದ್ದಾರೆ. ಆದ್ದರಿಂದ ನಮ್ಮ ಮೇಲಿನ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಲಾಗುವುದು ಎಂದರು. ನಂತರ ಮಾಜಿ ಉಪಾಧ್ಯಕ್ಷ ದೇವದಾಸ್ ಮಾತನಾಡಿ, ಗ್ರಾ.ಪಂ. ಪಿಡಿಒ ಭಾಗ್ಯ ಅವರು ಸಿಬ್ಬಂದಿಗಳ ಹೆಸರಿಗೆ ಹಣವನ್ನು ಜಮಾ ಮಾಡಿಕೊಂಡು ಸರಕಾರದ ಹಣವನ್ನು…

Read More

ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುನಿಸಿಪಲ್ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವಿಶ್ರಾಂತ ಕರ್ನಲ್ ಆಗಿರುವ ಅಶೋಕ್ ಅವರನ್ನು ರಾಜ್ಯ ಸರ್ಕಾರವು ಕೆ.ಆರ್.ಪೇಟೆ ತಹಶೀಲ್ದಾರ್ ಆಗಿ ನೇಮಿಸಿ ಸ್ಥಳನಿಯುಕ್ತಿಗೊಳಿಸಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಿಸರ್ಗಪ್ರಿಯಾ ಅವರು ಪಿರಿಯಾಪಟ್ಟಣ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡು ಖಾಲಿಯಾಗಿಯೇ ಉಳಿದಿದ್ದ ತಹಶೀಲ್ದಾರ್ ಹುದ್ದೆಗೆ ಪ್ರಭಾರ ತಹಶೀಲ್ದಾರ್ ಆಗಿ ಶ್ರೀರಂಗಪಟ್ಟಣ ತಹಶೀಲ್ದಾರ್ ಆದರ್ಶ ಕಾರ್ಯ ನಿರ್ವಹಿಸುತ್ತಿದ್ದರು. ಎರಡು ತಿಂಗಳ ನಂತರ ಸರ್ಕಾರವು ಕೆ. ಆರ್.ಪೇಟೆ ತಹಶೀಲ್ದಾರ್ ಆಗಿ ಡಾ.ಅಶೋಕ್ ಅವರನ್ನು ಅಧಿಕೃತವಾಗಿ ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ ಇಂದು ಅಶೋಕ್ ಅಧಿಕಾರ ಸ್ವೀಕರಿಸಿದರು. ನಾನು ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸಿದ್ದೇನೆ. ಮುಕ್ತ ನ್ಯಾಯ ಸಮ್ಮತವಾಗಿ ಕರ್ತವ್ಯ ನಿರ್ವಹಿಸಲು ಪಣ ತೊಟ್ಟಿರುವ ನಾನು ಭ್ರಷ್ಟಾಚಾರ ಮುಕ್ತವಾಗಿ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಜೊತೆಗೆ ಬಡ ಜನರು ಹಾಗೂ ರೈತ ಬಾಂಧವರ ಜೊತೆಗೆ ಬೆರೆತು ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಪರಿಹಾರ ದೊರಕಿಸಿಕೊಡಲು ಬದ್ಧತೆಯಿಂದ ಕೆಲಸ ಮಾಡುತ್ತೇನೆ ಎಂದು ಡಾ.ಅಶೋಕ್…

Read More

ತುರುವೇಕೆರೆ: ತುರುವೇಕೆರೆ ಪಟ್ಟಣ ಪಂಚಾಯಿತಿ ಬಿಜೆಪಿ ತೆಕ್ಕೆಗೆ  ಜಾರಿದ್ದು, ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಪಟ್ಟ ಬಿಜೆಪಿ ಪಾಲಾಗಿದೆ. ಹಾಲಿ ಹಾಗೂ ಮಾಜಿ ಶಾಸಕರ ಹಗ್ಗ ಜಗ್ಗಾಟದಲ್ಲಿ ಮಾಜಿ ಶಾಸಕ ಮಸಾಲ ಜಯರಾಮ್‍ ರವರ ಕೈ ಮೇಲಾಗಿದೆ.  ಒಟ್ಟು 14 ಜನ ಸದಸ್ಯರನ್ನು ಹೊಂದಿರುವ ಪಟ್ಟಣ ಪಂಚಾಯಿತಿಯಲ್ಲಿ ಇಬ್ಬರು ಸದಸ್ಯರು ಗೈರಾಗಿದ್ದು,  12 ಜನ ಹಾಜರಿದ್ದು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಬೆಳಗ್ಗೆ 10:45 ರಿಂದ 12 ಗಂಟೆಯವರೆಗೂ ಚುನಾವಣಾ ಪ್ರಕ್ರಿಯೆ ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ಆಶಾ ರಾಜಶೇಖರ್, ಉಪಾಧ್ಯಕ್ಷ ಸ್ಥಾನಕ್ಕೆ ಭಾಗ್ಯಮ್ಮಕ್ಕೆ ನಾಮಪತ್ರ ಸಲ್ಲಿಸಿದ್ದರು.  12 ಗಂಟೆವರೆಗೂ ಯಾವೊಬ್ಬರೂ ನಾಮಪತ್ರ ಸಲ್ಲಿಸದ ಕಾರಣ, ಆಶಾ ರಾಜಶೇಖರ್ ಅಧ್ಯಕ್ಷರನ್ನಾಗಿ ಮತ್ತು ಭಾಗ್ಯಮ್ಮ ಕೆ. ರವರನ್ನು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ ಮಾಡಲಾಗಿದೆ ಎಂದು  ತಹಶೀಲ್ದಾರ್ ಕುಂಞ ಎಂ.ಎನ್. ಅಹಮದ್ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಸದಸ್ಯರು ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಕೂಡ ಚುನಾವಣೆಯಲ್ಲಿ ಕಾಂಗ್ರೆಸ್ ಸದಸ್ಯರು ಕೂಡ ಬಾಹ್ಯ ಬೆಂಬಲ ನೀಡಿದ್ದಾರೆ. ಬೆಂಬಲಿಗರು ಹಾಗೂ …

Read More

ಹಿಂದೂ ಧರ್ಮದಲ್ಲಿ  ಅನೇಕ ವಿಧದ ಯತಿಗಳಿದ್ದಾರೆ. ಅವರಲ್ಲಿ ನಾಗಾ ಸಾಧುಗಳೂ  ಒಬ್ಬರು. ನಾಗಾ ಸಾಧುಗಳು ಭಗವಾನ್ ಶಿವನಿಗೆ ಬಹಳ ಶ್ರದ್ಧೆಯನ್ನು ಹೊಂದಿರುತ್ತಾರೆ. ಅವರು ಕಠಿಣ ಆಧ್ಯಾತ್ಮಿಕ ಅಭ್ಯಾಸಗಳಿಗೆ ಹೆಸರುವಾಸಿಯಾಗಿದ್ದಾರೆ. ಹೆಚ್ಚಿನ ಜನರು ಪುರುಷ ನಾಗಾ ಸಾಧುಗಳ ಬಗ್ಗೆ ಗೊತ್ತಿದ್ದರೂ ಸ್ತ್ರೀ ನಾಗಾ ಸಾಧುಗಳ ಬಗ್ಗೆ ತಿಳಿದಿರುವುದು ಕಡಿಮೆ. ಮಹಿಳಾ ನಾಗಾ ಸಾಧುಗಳು ಪುರುಷ ನಾಗಾ ಸಾಧುಗಳಿಗಿಂತ ಹೆಚ್ಚು ಸವಾಲು ಮತ್ತು ತೊಂದರೆಗಳನ್ನು ಎದುರಿಸುತ್ತಾರೆ. ಅವರು ತಮ್ಮ ಸಂಪೂರ್ಣ ಜೀವನವನ್ನು ದೇವರಿಗೆ ಅರ್ಪಿಸುತ್ತಾರೆ ಮತ್ತು ಕಠಿಣ ತಪಸ್ಸನ್ನು ಮಾಡುತ್ತಾರೆ. ನಾಗಾ ಸಾಧುಗಳೆಂದರೆ ತಕ್ಷಣ ನೆನಪಾಗುವುದು ಕುಂಭ ಮೇಳ. ನಾಗಾ ಸಾಧುಗಳ ಜೀವನ, ಸಂಸ್ಕೃತಿ ಎಲ್ಲವೂ ವಿಭಿನ್ನ ಮತ್ತು ಎಲ್ಲರನ್ನು ಸೆಳೆಯುತ್ತದೆ. ತಪಸ್ವಿಯಂತೆ ಬದುಕುವ ಅವರು ಅತ್ಯಂತ ಗೌರವವನ್ನೂ ಪಡೆಯುತ್ತಾರೆ. ಅವರ ಅತೀಂದ್ರಿಯ ಶಕ್ತಿಯನ್ನು ವ್ಯಾಪಕವಾಗಿ ಗುರುತಿಸಲಾಗಿದೆ. ಇವರಲ್ಲಿ ಸ್ತ್ರೀ ನಾಗಾ ಸಾಧುಗಳು ಇರುತ್ತಾರೆ. ನಾಗಾ ಸಾಧುಗಳು ತಮ್ಮ ಪುರುಷ ಸಹವರ್ತಿಗಳಂತೆ ತಮ್ಮ ಜೀವನವನ್ನು ಸಂಪೂರ್ಣವಾಗಿ ಆಧ್ಯಾತ್ಮಿಕತೆಗೆ ಮೀಸಲಿಡುತ್ತಾರೆ. ನಾಗಾ ಸಾಧು ಆಗಲು ಮಹಿಳೆಯು…

Read More

2024ರಲ್ಲಿ ಪ್ಯಾರಿಸ್‌ ನಲ್ಲಿ ನಡೆದ ಪ್ಯಾರಾ ಒಲಿಂಪಿಕ್ಸ್‌ ಭಾರತಕ್ಕಾಗಿ ಮೀರಳದ ಸಾಧನೆಗೈದ ಕ್ಷಣಗಳ ಸರಣಿ. ಈ ಕ್ರೀಡಾಕೂಟದಲ್ಲಿ ಭಾರತ 7 ಚಿನ್ನ, 9 ಬೆಳ್ಳಿ, ಮತ್ತು 13 ಕಂಚಿನ ಪದಕಗಳನ್ನು ಗೆದ್ದು ಹೊಸ ಇತಿಹಾಸ ನಿರ್ಮಿಸಿತು. ಒಟ್ಟು 29 ಪದಕಗಳೊಂದಿಗೆ ಭಾರತದ ದಿವ್ಯಾಂಗ ಕ್ರೀಡಾಪಟುಗಳು ವಿಶ್ವದ ಕ್ರೀಡಾಲೋಕದಲ್ಲಿ ತಮ್ಮ ಮುದ್ರೆ ಬಿಟ್ಟಿದ್ದಾರೆ. ಪದಕಗಳ ಸಂದೇಶ: ಈ ಸಾಧನೆ ದಿವ್ಯಾಂಗತೆಯನ್ನು ಮೀರಿ ಸಾಗುವ ಪ್ರಚಂಡ ಶಕ್ತಿಯ ಉದಾಹರಣೆಯಾಗಿದೆ. ದೈಹಿಕ ಸವಾಲುಗಳನ್ನು ಒಗ್ಗೋಲಿಸುವ ಬದಲು, ಭಾರತೀಯ ಪ್ಯಾರಾ ಕ್ರೀಡಾಪಟುಗಳು ಕಠಿಣ ಪರಿಶ್ರಮ ಮತ್ತು ಸಂಕಲ್ಪದಿಂದ ಸತತ ಸಾಧನೆ ತೋರಿಸಿದ್ದಾರೆ. ಅವರ ಈ ಯಶಸ್ಸು ಕೇವಲ ಕ್ರೀಡಾಂಗಣದಲ್ಲಿ ಮಾತ್ರವಲ್ಲ, ದೇಶದ ದಿವ್ಯಾಂಗ ಜನತೆಯ ಜೀವನಶೈಲಿಗೆ ಹೊಸ ಉತ್ತೇಜನ ನೀಡುವಂತಿದೆ. ಸಮರ್ಥತೆಯ ಹಿಂದೆ: ಈ ಸಾಧನೆಯ ಹಿನ್ನಲೆಯಲ್ಲಿ ಸಮರ್ಪಿತ ತರಬೇತಿ ಕೇಂದ್ರಗಳು, ಸುಧಾರಿತ ಮೂಲಸೌಕರ್ಯಗಳು ಮತ್ತು ಕೋಚ್‌ಗಳ ಮಾರ್ಗದರ್ಶನದ ಪಾತ್ರ ಪ್ರಮುಖವಾಗಿದೆ. ಸರ್ಕಾರದ ಬೆಂಬಲ, ತರಬೇತಿ ಉಲ್ಲೇಖನಿಯವಾಗಿದ್ದು, ದಿವ್ಯಾಂಗ ಕ್ರೀಡಾಪಟುಗಳ ಸಫಲತೆಗೆ ಪೂರಕವಾಗಿದೆ. ವಿಶೇಷವಾಗಿ, ದಿವ್ಯಾಂಗ ಕ್ರೀಡೆಗಳ…

Read More

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ‌ ದರ್ಶನ್‌ ವಿರುದ್ದ ಪೊಲೀಸ್‌ ಇಲಾಖೆ ಸಲ್ಲಿಸಿರುವ ಆರೋಪ ಪಟ್ಟಿಯ ವಿವರಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಹೈಕೋರ್ಟ್‌ ಆದೇಶ ನೀಡಿದೆ. ದರ್ಶನ್‌ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಉಚ್ಚ ನ್ಯಾಯಾಲಯವು, ಈ ಆದೇಶವನ್ನು ಉಲ್ಲಂಘಿಸಿದ ಮಾಧ್ಯಮಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆಗೆ ಸೂಚನೆ ನೀಡಿದೆ. ಆದೇಶದ ಪ್ರತಿಯನ್ನು ಎಲ್ಲಾ ಪ್ರಮುಖ ಮಾಧ್ಯಮಗಳಿಗೂ ಸಹ ರವಾನಿಸುವಂತೆ ಕೋರ್ಟ್ ಸೂಚಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌ ಮತ್ತು ಗ್ಯಾಂಗ್‌ ಬಗ್ಗೆ ಆರೋಪ ಪಟ್ಟಿಯಲ್ಲಿ ಇಂಚಿಂಚೂ ಮಾಹಿತಿಯನ್ನು ನೀಡಲಾಗಿತ್ತು. ಆರೋಪಿಗಳ ಸಿಸಿಟಿವಿ ದೃಶ್ಯಾವಳಿಗಳು, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ, ಪೋಸ್ಟ್‌ ಮಾರ್ಟಮ್‌ ವರದಿಗಳು ಗ್ಯಾಂಗ್‌ ನ ಕ್ರೌರ್ಯವನ್ನು ಎಳೆಎಳೆಯಾಗಿ ಬಿಡಿಸಿಟ್ಟಿತ್ತು. ಪೊಲೀಸರು ತನಿಖೆಯಿಂದ ಬಹಿರಂಗಪಡಿಸಿದ್ದ ಈ ಆರೋಪಪಟ್ಟಿಯನ್ನು ಎಲ್ಲಾ ಮಾಧ್ಯಮಗಳೂ ಸಹ ಯಥಾವತ್ತಾಗಿ ಪ್ರಕಟಿಸಿದ್ದವು. ರೇಣುಕಾಸ್ವಾಮಿ‌ ಕೊಲೆ ಪ್ರಕರಣದ ಸಂಬಂಧಿತ ಆರೋಪ ಪಟ್ಟಿಯಲ್ಲಿನ ಗೌಪ್ಯ ಮಾಹಿತಿಯನ್ನು ಪ್ರಸಾರ/ಪ್ರಕಟ/ಹಂಚಿಕೆ…

Read More

ಗಣೇಶ ಮೆರವಣಿಗೆ ಹಿನ್ನೆಲೆ, ನಾಗವಾರ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ಬಂದ್​ ಆಗಲಿದ್ದು, ಪಾರ್ಕಿಂಗ್​ ನಿಷೇಧ ಮಾಡಲಾಗಿದೆ. ಕೆ.ಜಿ.ಹಳ್ಳಿ ಮತ್ತು ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಟ್ಯಾನರಿ ರಸ್ತೆ ಮೂಲಕ ಗಣಪತಿ ಮೂರ್ತಿಗಳ ಮೆರವಣಿಗೆ ನಡೆಯಲಿದೆ. ಹೀಗಾಗಿ ಸೆಪ್ಟೆಂಬರ್​ 11 ರಂದು ಈ ರಸ್ತೆಯಲ್ಲಿ ಮಧ್ಯಾಹ್ನ 12:30 ರಿಂದ ರಾತ್ರಿ 1:00 ಗಂಟೆವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ನಾಗವಾರ ಮುಖ್ಯ ರಸ್ತೆ ಮತ್ತು ಟ್ಯಾನು / ಡೇವಿಸ್ ರೋಡ್ ಮುಖ್ಯ ರಸ್ತೆ ನೇತಾಜಿ ಜಂಕ್ಷನ್​ ನಿಂದ ಪಾಟರಿ ಸರ್ಕಲ್ ಮೂಲಕ ಟ್ಯಾನರಿ ರಸ್ತೆ ಕಡೆಗೆ ಸಂಚಾರವನ್ನು ನಿರ್ಬಂಧಿಸಲಾಗಿದೆ. ಕ್ಲಾರ್ಕ್ ರಸ್ತೆ ಮೂಲಕ ಪಾಟರಿ ಜಂಕ್ಷನ್ ಕಡೆಗೆ ಹೋಗುವ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ. ರೋಜರ್ ರಸ್ತೆ, ಆರ್ಮ್ ಸ್ಟ್ರಾಂಗ್ ರಸ್ತೆ ಹಾಗೂ ಹಾಲ್ ರಸ್ತೆ ಕಡೆಯಿಂದ ಪಾಟರಿ ರಸ್ತೆ ಕಡೆಗೆ ಹೋಗುವ ಸಂಚಾರವನ್ನು ನಿರ್ಬಂಧಿಸಲಾಗಿದೆ. ಮಾಸ್ಕ್ ಜಂಕ್ಷನ್‌ನಿಂದ ಕ್ಲಾರೆನ್ಸ್ ಬ್ರಿಡ್ಜ್ ಮೂಲಕ ಪಾಟರಿ ರಸ್ತೆ ಕಡೆಗೆ ಹೋಗುವ ಸಂಚಾರವನ್ನು ನಿರ್ಬಂಧಿಸಲಾಗಿದೆ. ಮಾಸ್ಕ್ ಜಂಕ್ಷನ್‌…

Read More

ಜಿಮ್ ಟ್ರೇನರ್​ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬಂಧನ ಆಗಿದೆ ಎನ್ನಲಾಗಿದೆ. ಬನಶಂಕರಿ ಪೊಲೀಸರು ಆರೋಪಿ ಅಶ್ವಿನ್​ನ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಮೇ 26 ರಂದು ರಾತ್ರಿ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆದಿತ್ತು. ಹರ್ಷ ಮತ್ತು ಸುಭಾಷ್ ಎಂಬುವವರು ಪ್ರಶಾಂತ್ ಮೇಲೆ ಹಲ್ಲೆ ಮಾಡಿದ್ದರು. ಹಲ್ಲೆ ಮಾಡಿಸಿದ್ದು ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ. ಧ್ರುವ ಸರ್ಜಾಗೆ ನಾಗೇಂದ್ರ ಚಾಲಕನಾಗಿಯೂ ಕೆಲಸ ಮಾಡಿದ್ದ. ನಾಗೇಂದ್ರಗೆ ಸಾಥ್ ಕೊಟ್ಟಿದ್ದೆ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಅನ್ನೋದು ತಿಳಿದು ಬಂದಿದೆ. ಇನ್ನು ಪ್ರಶಾಂತ್ ಪೂಜಾರಿ ಅವರು ಧ್ರುವ ಸರ್ಜಾಗೆ ಆಪ್ತರಾಗಿದ್ದರು. ಧ್ರುವ ಸರ್ಜಾಗೆ ಜಿಮ್​ನಲ್ಲಿ ಟ್ರೇನ್ ಮಾಡುತ್ತಿದ್ದುದು ಇದೇ ಪ್ರಶಾಂತ್. ಇಬ್ಬರ ನಡುವಿನ ಆಪ್ತತೆಯನ್ನು ನಾಗೇಂದ್ರ ಹಾಗೂ ಅಶ್ವಿನ್​ಗೆ ಸಹಿಸಿಕೊಳ್ಳಲು ಆಗುತ್ತಿರಲಿಲ್ಲ. ಹೀಗಾಗಿ ಹಲ್ಲೆಗೆ ಪ್ಲ್ಯಾನ್ ರೂಪಿಸಿದರು. ತಾವೇ ಹಲ್ಲೆ ಮಾಡಿದರೆ ಗೊತ್ತಾಗುತ್ತದೆ ಎಂದು ಸ್ನೇಹಿತರ ಕೈಯಲ್ಲಿ ಹಲ್ಲೆ ಮಾಡಿಸಿದ್ದರಂತೆ. ಕನಕಪುರ ಮೂಲದ ಹರ್ಷ…

Read More

ಕರಾವಳಿ: ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದ್ದು, ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನ ಸೆಪ್ಟೆಂಬರ್ 13ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ನಂತರ ಕಡಿಮೆಯಾಗಲಿದೆ. ಮಲೆನಾಡು : ಕೊಡಗಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಹಾಸನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಸೆಪ್ಟೆಂಬರ್ 14ರಿಂದ ಬಿಸಿಲಿನ ವಾತಾವರಣದ ಅವಧಿ ಹೆಚ್ಚಿರಬಹುದು. ಒಳನಾಡು : ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ರಾಯಚೂರು, ಯಾದಗಿರಿ,…

Read More

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ತನಿಖೆಯನ್ನು ಎನ್‌ ಐಎ ಕೈಗೊಂಡಿದ್ದು, ಚಾರ್ಜ್‌ಶೀಟ್‌ ನಲ್ಲಿ ಬಿಜೆಪಿ ಕಚೇರಿ ಸ್ಪೋಟಿಸುವ ಬಗ್ಗೆ ಸಂಚು ನಡೆಸಿದ್ದರು ಎಂಬ ಅಂಶ ಉಲ್ಲೇಖಿಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾರ್ಜ್‌ಶೀಟ್‌ ನಲ್ಲಿ ಉಲ್ಲೇಖವಾಗಿರುವ  ಮಿಕ್ಕ ವಿಚಾರಗಳು ಗೊತ್ತಿಲ್ಲ ಎಂದರು. ರೇಣುಕಾಸ್ವಾಮಿ ಕೊಲೆ‌ ಪ್ರಕರಣದ ಚಾರ್ಜ್‌ಶೀಟ್‌ ನಲ್ಲಿ ಅಂಶ ಬಹಿರಂಗವಾಗುತ್ತಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರಶ್ನೆಗೆ ಪ್ರತಿಕ್ರಿಯಿಸಿ, ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ ಬಳಿಕ ಅಪೋಸಿಟ್ ಲಾಯರ್‌ ಗು ಚಾರ್ಜ್‌ಶೀಟ್ ನೀಡಲಾಗುತ್ತದೆ. ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನು ಅಲ್ಲ. ಅದನ್ನು ನಿಲ್ಲಿಸಲು ಯಾರಿಂದಲೂ ಆಗುವುದಿಲ್ಲ. ಸಹಜವಾಗಿ ಚಾರ್ಜ್‌ಶೀಟ್‌ ನಲ್ಲಿ ಮಾಹಿತಿ ಹೊರಗೆ ಬರುತ್ತದೆ. ಕೋರ್ಟ್‌ ಏನು ತೀರ್ಮಾನ ಮಾಡುತ್ತದೆ ನೋಡೋಣ ಎಂದು ಹೇಳಿದರು. ಸಾರ್ವಜನಿಕವಾಗಿ ಮಾತನಾಡುವುದನ್ನು ಕೋರ್ಟ್ ಪರಿಗಣಿಸುವುದಿಲ್ಲ. ಸಾಕ್ಷ್ಯ, ದಾಖಲೆಗಳ ಆಧಾರದ ಮೇಲೆ ಪ್ರಕರಣ ನಡೆಯುತ್ತದೆ. ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿ, ಸಾಕ್ಷ್ಯಾಧಾರಗಳನ್ನು ಕೋರ್ಟ್‌ಗೆ ನೀಡುತ್ತಾರೆ.‌ ಆ…

Read More