Author: admin

ಬೆಂಗಳೂರು: ಜನಪ್ರಿಯ ನಟನ ಆಪ್ತನ ಬಂಧನವಾಗಿದ್ದು,  ವ್ಯಕ್ತಿಯೊಬ್ಬನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯಕ್ಷನ್‌ ಪ್ರಿನ್ಸ್ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಎನ್ನುವಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳ ಹಿಂದೆ ವಿಚಾರಣೆ ಎದುರಿಸಿದ್ದ ಅಶ್ವಿನ್‌ನನ್ನು ತನಿಖೆಯ ಮುಂದಿನ ಹಂತವಾಗಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಮೇ 26ರ ರಾತ್ರಿ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಎಂಬಾತನ ಮೇಲೆ ಹಲ್ಲೆ ನಡೆದಿತ್ತು. ಈ ಪ್ರಕರಣ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ್ದು, ಒಬ್ಬೊರಿಗೊಬ್ಬರು ಚೈನ್ ಲಿಂಕ್‌ ಎನ್ನುವಂತೆ ಇದೀಗ ಹಲ್ಲೆ ಪ್ರಕರಣದಲ್ಲಿ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬಂಧನವಾಗಿದೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ರುದ್ರಪ್ರಯಾಗ: ಕೇದಾರನಾಥದಲ್ಲಿ ಸೋಮವಾರ ಸಂಭವಿಸಿದ ಭೂಕುಸಿತದಲ್ಲಿ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯಪ್ರದೇಶದ ದುರ್ಗಾಭಾಯಿ ಖಾಪರ್ (50,) ಸಮನ್ ಭಾಯ್ (50), ಗುಜರಾತ್‌ನ ಭರತ್ ಭಾಯಿ ನಿರಾಲಾಲ್ (52) ಮತ್ತು ನೇಪಾಳದ ತಿತ್ಲಿ ದೇವಿ (70) ಮೃತಪಟ್ಟವರು ಎಂದು ತಿಳಿದು ಬಂದಿದೆ. ನಾಲ್ವರು ಯಾತ್ರಾರ್ಥಿಗಳು ಮೃತದೇಹಗಳನ್ನು ಅವಶೇಷಗಳಡಿಯಿಂದ ಮಂಗಳವಾರ ಹೊರತೆಗೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ. ಅವಶೇಷಗಳಡಿಯಲ್ಲಿ ಇನ್ನಷ್ಟು ಯಾತ್ರಾರ್ಥಿಗಳು ಸಿಲುಕಿರುವ ಸಾಧ್ಯತೆಯಿದೆ ಎಂದು ರುದ್ರಪ್ರಯಾಗ ಪೊಲೀಸರು ತಿಳಿಸಿದ್ದಾರೆ. ಕೇದಾರನಾಥಕ್ಕೆ ಭೇಟಿ ನೀಡಿದ್ದ ಯಾತ್ರಾರ್ಥಿಗಳ ತಂಡವೊಂದು ಸೋಮವಾರ ರಾತ್ರಿ 7:20ರ ಸುಮಾರಿಗೆ ಹಿಂದಿರುಗುತ್ತಿದ್ದ ವೇಳೆ ಭೂಕುಸಿತಕ್ಕೆ ಸಿಲುಕಿಕೊಂಡಿದ್ದರು. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್‌) ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿತ್ತು. ಮಧ್ಯಪ್ರದೇಶದ ಗೋಪಾಲ್ (50) ಎಂಬವರ ಮೃತದೇಹ ಹೊರತೆಗೆಯಲಾಗಿತ್ತು. ಮೂವರನ್ನು ರಕ್ಷಣೆ ಮಾಡಲಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಮಂಡ್ಯ : ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಹೆಣ್ಣು ಭ್ರೂಣ ಹತ್ಯೆ ಪ್ರಕರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಜನರನ್ನ ಪೊಲೀಸರು ಬಂಧಿಸಿದ್ದು, ಇದೀಗ ಮತ್ತೆ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದ್ದು, ಈ ಮೂಲಕ ಬಂಧಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಮದ ನವೀನ್, ಹರಳಹಳ್ಳಿಯ ಜಬ್ಬರ್ ಬಾಬು, ಕೆ.ಆರ್.ನಗರದ ಶಂಕರ ಬಂಧಿತ ಆರೋಪಿಗಳಾಗಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ಆರೋಪಿಗಳಾದ ಅಭಿಷೇಕ್‌, ವೀರೇಶ್‌ ಸೇರಿದಂತೆ ಒಟ್ಟು 12 ಆರೋಪಿಗಳನ್ನು ಮಂಡ್ಯ ಜಿಲ್ಲೆ ಪೊಲೀಸರು ಬಂಧಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಜೈಪುರ: ಸರಕು ಸಾಗಣೆ ಕಾರಿಡಾರ್‌ ನ ಹಳಿಗಳ ಮೇಲೆ ಎರಡು ಸಿಮೆಂಟ್ ಬ್ಲಾಕ್‌ಗಳನ್ನು ಇಡುವ ಮೂಲಕ ಸರಕು ರೈಲನ್ನು ಹಳಿ ತಪ್ಪಿಸುವ ಯತ್ನ ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ನಡೆದಿದೆ. ತಲಾ 70 ಕೆ.ಜಿ. ತೂಕದ ಸಿಮೆಂಟ್‌ ಬ್ಲಾಕ್‌ ಗಳಿಗೆ ಗೂಡ್ಸ್‌ ರೈಲು ಡಿಕ್ಕಿ ಹೊಡೆದಿದೆ. ಆದರೆ, ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ ಎಂದು ಅವರು ಹೇಳಿದ್ದಾರೆ. ‘ಭಾನುವಾರ ಕೆಲವು ದುರ್ಷ್ಕಮಿಗಳು ಸರಕು ಸಾಗಣೆ ಕಾರಿಡಾರ್‌ನ ಹಳಿಗಳ ಮೇಲೆ ಎರಡು ಸಿಮೆಂಟ್‌ ಬ್ಲಾಕ್‌ಗಳನ್ನು ಇಟ್ಟಿದ್ದಾರೆ. ಗೂಡ್ಸ್‌ ರೈಲು ಅದಕ್ಕೆ ಡಿಕ್ಕಿ ಹೊಡೆದಿದೆ’ ಎಂದು ವಾಯುವ್ಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಸರಕು ಸಾಗಣೆ ಕಾರಿಡಾರ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ರಾಮನಗರ: ಚನ್ನಪಟ್ಟಣದ ತಾಲೂಕು ಬಿಜೆಪಿ ಅಧ್ಯಕ್ಷ ಟಿ.ಎಸ್.ರಾಜು ಮೇಲೆ ಲೈಂಗಿಕ ದೌರ್ಜನ್ಯ ದೂರು ದಾಖಲಾಗಿದ್ದು, ಮಹಿಳೆಯೊಬ್ಬರು ಅಕ್ಕೂರು ಠಾಣೆಯಲ್ಲಿ ದೂರು ನೀಡಿದ್ದಾರೆ. 2 ದಿನದ ಹಿಂದೆ ಗಣೇಶ ವಿಸರ್ಜನೆ ವೇಳೆ ರಾಜು ನನ್ನ ಮೈ ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದು, ನನ್ನ ಮನೆ ಮುಂದೆಯೇ ನನ್ನ ಫೋಟೋ ತೆಗೆದು ರೇಗಿಸಿ ಕಿರುಕುಳ ನೀಡಿದ್ದಾನೆ ಅಂತ ದೂರಿನಲ್ಲಿ ಹೇಳಲಾಗಿದೆ. ಗಣೇಶ ಮೂರ್ತಿ ಮೆರವಣಿಗೆ ದಿನ ರಾತ್ರಿ 11:30ರ ಸಮಯದಲ್ಲಿ ಮನೆಯ ಎದುರು ರಸ್ತೆಯಲ್ಲಿ ನಿಂತಿದ್ದ ವೇಳೆ  ಆರೋಪಿ ಬಂದು, ಯಾವಗ ಬಂದೆ ಬೇಬಿ ಎಂದು ಪ್ರಶ್ನಿಸಿ, ಹೆಗಲ ಮೇಲೆ ಕೈ ಹಾಕಿ ಖಾಸಗಿ ಅಂಗಗಳನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದು, ಬಳಿಕ ಮಹಿಳೆಯ ಫೋಟೋ ತೆಗೆದು ಬೇರೆಯವರಿಗೂ ಕಳುಹಿಸಿದ್ದಾನೆ ಎಂದು ಆರೋಪಿಸಲಾಗಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೂಡ ಕರೆ ಮಾಡಿ, ಕಾಫಿ ಡೇ ಗೆ ಹೋಗೋಣ ಅಂತ ಕರೆದು ಕಿರುಕುಳ ನೀಡಿದ್ದು, ಹಲವು ಬಾರಿ ಮೈಕೈ ಮುಟ್ಟಿ ಮಹಿಳೆಯ ಗೌರವಕ್ಕೆ ಚ್ಯುತಿ ತಂದಿದ್ದಾನೆ…

Read More

ಪಾವಗಡ: 202–25 ನೇ ಸಾಲಿನ ತಾಲ್ಲೂಕಿನ ಕಸಬಾ ಹೋಬಳಿ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ಗೌಡೇಟಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಬಾಲಕರ ವಾಲಿಬಾಲ್ ನಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ತಾಲ್ಲೂಕು  ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಇದೇ ಒಂದು ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರಾದ ತಿಮನೇಶಪ್ಪ, ಸಹ ಶಿಕ್ಷಕರು, ದೈಹಿಕ ಶಿಕ್ಷಕರ ಹಾಗೂ  ಗ್ರಾಮಸ್ಥರಿಂದ ಅಭಿನಂದನೆ ಸಲ್ಲಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.  60 ಲಕ್ಷ ‘ಬಿಪಿಎಲ್ ಕಾರ್ಡ್’ ರದ್ದು ಮಾಡಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ ಎಂದು ಸರ್ಕಾರದ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಕ್ರಮ ಬಿಪಿಎಲ್ ಕಾರ್ಡ್ ದಾರರಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರದ ಮುಂದಾಗಿದ್ದು, ಈ ನಡುವೆ ಆರ್ .ಅಶೋಕ್ ಹೇಳಿಕೆ ಮಹತ್ವ ಪಡೆದಿದೆ. ಸಿದ್ದರಾಮಯ್ಯ ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ. ತೆರಿಗೆ ಹೆಚ್ಚಳ ಮಾಡಿದ್ರೂ ಸಂಬಳ ಕೊಡೋಕೆ ಆಗುತ್ತಿಲ್ಲ. ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಆರ್ಥಿಕ ಸಂಕಷ್ಟದಿಂದ ಪಾರಾಗಲು 60 ಲಕ್ಷ ‘ಬಿಪಿಎಲ್ ಕಾರ್ಡ್’ ರದ್ದು ಮಾಡಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ ಅಂತ ಅವರು ಆರೋಪಿಸಿದ್ದಾರೆ. ಅವೈಜ್ಞಾನಿಕ ಗ್ಯಾರೆಂಟಿಗಳು, ಬ್ರಹ್ಮಾಂಡ ಭ್ರಷ್ಟಾಚಾರದಿಂದ ಅಕ್ಷರಶಃ ಪಾಪರ್ ಆಗಿರುವ ಸರ್ಕಾರ ವರಮಾನ ಸಂಗ್ರಹಕ್ಕೆ ನಾನಾ ಮಾರ್ಗಗಳನ್ನ ಹುಡುಕಲು ಹೊರಟಿದೆ. ಸಂಪನ್ಮೂಲ ಕ್ರೋಢೀಕರಣಕ್ಕೆ ಬಾಸ್ಟನ್ ಕನ್ಸಲ್ಟಿಂಗ್ ಗ್ರೂಪ್ (BCG) ಎಂಬ ವಿದೇಶಿ ಕಂಪನಿಗೆ ಹತ್ತಾರು ಕೋಟಿ ಸಂಭಾವನೆ ಕೊಟ್ಟು ಈಗಾಗಲೇ…

Read More

ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಸೋಮವಾರ ಮಹತ್ವದ 3 ವಿಧೇಯಕಗಳಿಗೆ ಅಂಕಿತ ಹಾಕಿರುವುದಾಗಿ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಮಾಹಿತಿ ನೀಡಿದರು. ರಾಜ್ಯ ಸರ್ಕಾರದ 11 ಮಸೂದೆಗಳ ಪೈಕಿ ಕರ್ನಾಟಕ ಸಾರ್ವಜನಿಕ ಪರೀಕ್ಷೆ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನ್ಯಾಯ ತಡೆಗಟ್ಟುವ ಕ್ರಮಗಳು) ಮಸೂದೆ 2023, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಮಸೂದೆ-2024 ಹಾಗೂ ಕರ್ನಾಟಕ ಪುರಸಭೆಗಳು (ಮುನ್ಸಿಪಾಲಿಟಿ) & ಇತರ ಕೆಲವು ಕಾನೂನು (ತಿದ್ದುಪಡಿ) ಮಸೂದೆ-2024ಕ್ಕೆ ಅಂಕಿತ ಹಾಕಿದ್ದಾರೆ. ಕಳೆದೆರಡು ವಾರಗಳ ಹಿಂದೆ ರಾಜ್ಯಪಾಲರು ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ನಡುವೆ ಕಾನೂನು ಸಂಘರ್ಷ ಹೆಚ್ಚಾಗಿತ್ತು. ಒಂದೆಡೆ ಮುಡಾ ಕದನದ ನಡುವೆಯೇ ಉಭಯ ಸದನಗಳಲ್ಲಿ ಅನುಮೋದನೆಗೊಂಡಿದ್ದ 11 ವಿಧೇಯಕಗಳನ್ನು ವಾಪಸ್ ಮಾಡಿದ್ದ ರಾಜ್ಯಪಾಲರ ನಡೆಗೆ ಸರ್ಕಾರ ತೀವ್ರವಾಗಿ ಖಂಡಿಸಿತ್ತು. ಕರ್ನಾಟಕ ಸಾರ್ವಜನಿಕ ಪರೀಕ್ಷೆಗಳು ವಿಧೇಯಕ-2023, ಕರ್ನಾಟಕ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ಸಂಸ್ಥೆಗಳು ವಿಧೇಯಕ-2024, ಕರ್ನಾಟಕ ನಗರ ಯೋಜನೆ (ತಿದ್ದುಪಡಿ) ವಿಧೇಯಕ-2024, ಗದಗ -ಬೆಟಗೇರಿ ವ್ಯಾಪಾರ, ಸಾಂಸ್ಕೃತಿಕ ಮತ್ತು…

Read More

ತಮಿಳು ನಟ ಜಯಂ ರವಿ ಸೆಪ್ಟೆಂಬರ್ 9 ರಂದು ತಮ್ಮ ಪತ್ನಿ ಆರತಿಗೆ ಡಿವೋರ್ಸ್‌ ನೀಡುವುದಾಗಿ ಘೋಷಿಸಿದ್ದಾರೆ. ಈ ವಿಷಯದ ಬಗ್ಗೆ ರವಿ ತಮ್ಮ ಎಕ್ಸ್ ಹ್ಯಾಂಡಲ್‌ʼನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಈ ಕಷ್ಟದ ಸಮಯದಲ್ಲಿ ಗೌಪ್ಯತೆ ಕಾಪಾಡಲು ವಿನಂತಿಸಿದ್ದಾರೆ. 2009ರಲ್ಲಿ ಮದುವೆಯಾಗಿದ್ದ ಈ ಜೋಡಿಗೆ ಆರವ್ ಮತ್ತು ಅಯಾನ್ ಎಂಬ ಇಬ್ಬರು ಗಂಡುಮಕ್ಕಳಿದ್ದಾರೆ. “ಬಹಳಷ್ಟು ಯೋಚನೆ, ಚಿಂತನೆ ಮತ್ತು ಚರ್ಚೆಗಳ ನಂತರ ನಾನು ಆರತಿ ಜೊತೆಗಿನ ದಾಂಪತ್ಯವನ್ನು ಅಂತ್ಯಗೊಳಿಸುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಈ ನಿರ್ಧಾರವನ್ನು ತರಾತುರಿಯಿಂದ ತೆಗೆದುಕೊಂಡಿಲ್ಲ. ಇದು ವೈಯಕ್ತಿಕ ಕಾರಣಗಳಿಂದ ತೆಗೆದುಕೊಂಡ ನಿರ್ಧಾರವೆಂದು ನಾನು ನಂಬುತ್ತೇನೆ” ಎಂದಿದ್ದಾರೆ. ಇದಷ್ಟೇ ಅಲ್ಲದೆ, ಅಭಿಮಾನಿಗಳು ಮತ್ತು ಜನರು ತಮ್ಮ ಖಾಸಗಿತನವನ್ನು ಗೌರವಿಸುವಂತೆ ಜಯಂ ರವಿ ವಿನಂತಿಸಿದ್ದಾರೆ. “ಈ ಕಷ್ಟದ ಸಮಯದಲ್ಲಿ ನನ್ನ ಮತ್ತು ನನ್ನ ಕುಟುಂಬದ ಸದಸ್ಯರ ಗೌಪ್ಯತೆಯನ್ನು ಗೌರವಿಸಲು ನಾನು ನಿಮ್ಮೆಲ್ಲರನ್ನು ವಿನಂತಿಸುತ್ತೇನೆ. ಈ ವಿಷಯದ ಬಗ್ಗೆ ಯಾವುದೇ ಊಹೆಗಳು, ವದಂತಿಗಳು ಅಥವಾ ಆರೋಪಗಳನ್ನು ಮಾಡದಂತೆ ನಿಮ್ಮೆಲ್ಲರಲ್ಲಿ…

Read More

ರಾಜಕೀಯ ವಿದ್ಯಮಾನಗಳ ಬಗ್ಗೆ ಕರಾರುವಾಕ್ ಆಗಿ ಭವಿಷ್ಯ ನುಡಿಯುವ ಕೋಡಿ ಮಠದ ಶ್ರೀಗಳು ಇದೀಗ ಸಿದ್ದರಾಮಯ್ಯ ಭವಿಷ್ಯದ ಬಗ್ಗೆ ಮತ್ತು ದೇಶದಲ್ಲಿ ಆಗಬಹುದಾದ ಪ್ರಕೃತಿ ವಿನಾಶಗಳ ಬಗ್ಗೆ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.ಮುಡಾ ಹಗರಣದಿಂದ ಸಿಎಂ ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಬರಬಹುದು ಎಂಬ ಆತಂಕದ ನಡುವೆಯೇ ಕೋಡಿ ಶ್ರೀಗಳು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಆಕಾಶದಿಂದ ದೊಡ್ಡ ತೊಂದರೆಯಾಗಲಿದೆ. ಯುದ್ಧದಿಂದ ತೊಂದರೆಯಾಗಬಹುದು. ಮಳೆಯಿಂದಾಗಿ ಇನ್ನೂ ಅನಾಹುತವಾಗಬಹುದು. ಒಂದು ಆಘಾತಕಾರಿ ತೊಂದರೆಯಾಗಬಹುದು. ಅದು ರಾಜನ ಮೇಲೆ ಪರಿಣಾಮ ಬೀರುತ್ತದೆ. ಕೋರ್ಟ್ ನಲ್ಲಿದೆ. ಈಗ ಇದರ ಬಗ್ಗೆ ಹೇಳುವುದು ಬೇಡ. ನಾನು ಮೂರು ತಿಂಗಳ ಹಿಂದೆಯೇ ಹೇಳಿದ್ದೆ. ಅಭಿಮನ್ಯುವಿನ ಬಿಲ್ಲನ್ನು ಕರ್ಣನ ಕೈಯಲ್ಲಿ ಮೋಸದಿಂದ ದಾರ ಕಟ್ ಮಾಡಿಸ್ತಾರೆ. ಮಹಾಭಾರತದಲ್ಲಿ ಕೃಷ್ಣ ಇದ್ದ, ಗದಾಯುದ್ಧದಲ್ಲಿ ಭೀಮ ಗೆದ್ದ. ಈಗ ಕೃಷ್ಣ ಇಲ್ಲ ದುರ್ಯೋಧನ ಗೆಲ್ತಾನೆ ಎಂದು ಹೇಳಬಲ್ಲೆ. ರಾಜ್ಯ ಮತ್ತು ಕೇಂದ್ರದಲ್ಲಿ ಇದೇ ಆಗುವುದು ಎಂದಿದ್ದಾರೆ. ಕೋಡಿ ಶ್ರೀಗಳು ಹೇಳಿದ ಭವಿಷ್ಯ ಅನೇಕ ಬಾರಿ ನಿಜವಾಗಿದ್ದು ಇದೆ.…

Read More