Author: admin

ಬೆಳಗಾವಿ: ರಾಯಚೂರು ಹೆದ್ದಾರಿಯ ಕಮತಗಿ ಕ್ರಾಸ್ ಬಳಿ ಶುಕ್ರವಾರ ರಾತ್ರಿ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಇಬ್ಬರು ದ್ವಿಚಕ್ರ ವಾಹನ ಸವಾರರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಅಮರೇಶ ಬೆನಕನಾಳಮಠ(24), ಶರಣಯ್ಯ ಬೆನಕನಾಳಮಠ(14) ಮೃತ ಪಟ್ಟವರು ಅಂತ ತಿಳಿದು ಬಂದಿದೆ. ಇವರು ಇಳಕಲ್ ನಗರದ ಓಂಕಾರ ಟಾಕೀಜ್ ಸಮೀಪದ ನಿವಾಸಿಗಳು ಎಂದು ತಿಳಿದು ಬಂದಿದೆ. ಗಣೇಶ ಚುತುರ್ಥಿ ಹಬ್ಬಕ್ಕೆಂದು ತಮ್ಮನನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಬರುತ್ತಿದ್ದ ವೇಳೆಯಲ್ಲಿ ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಇಬ್ಬರೂ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಮೀನಗಡ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಇತ್ತೀಚೆಗಿನ ದಿನಗಳಲ್ಲಿ ಜನರು ವಿದೇಶಿ ಪ್ರವಾಸದ ಬಗ್ಗೆ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಆಧುನಿಕ ಜೀವನ ಜನರನ್ನು ವಿದೇಶಗಳತ್ತ ಸೆಳೆಯುತ್ತಿರುತ್ತದೆ. ಆದ್ರೆ ಕೆಲವೊಂದು ದೇಶಗಳಲ್ಲಿ ಪ್ರವಾಸೋದ್ಯಮ ಲೈಂಗಿಕತೆಯ ಮೇಲೆ ನಿಂತಿದೆ ಎನ್ನುವುದನ್ನು ತಿಳಿದುಕೊಳ್ಳಬೇಕಿದೆ. ಲೈಂಗಿಕತೆಯ ಮೇಲೆಯೇ ಪ್ರವಾಸೋದ್ಯಮ ನಡೆಸ್ತಾ ಇರುವ ದೇಶಗಳು ಯಾವುದು ಅಂತ ತಿಳಿದುಕೊಳ್ಳೋಣ: ನೆದರ್ಲ್ಯಾಂಡ್ಸ್: ಈ ದೇಶ ತನ್ನ ಪ್ರಾಕೃತಿಕ ಸೌಂದರ್ಯಕ್ಕಿಂತ ಲೈಂಗಿಕ ಪ್ರವಾಸೋದ್ಯಮಕ್ಕೆ ಹೆಚ್ಚು ಪ್ರಸಿದ್ಧವಾಗಿದೆ. ಇಲ್ಲಿ ರೆಡ್ ಲೈಟ್ ಡಿಸ್ಟ್ರಿಕ್ಟ್ ನಲ್ಲಿ ಕೆಳವರ್ಗದಿಂದ ಮೇಲ್ವರ್ಗದವರೆಗೂ ಲೈಂಗಿಕ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿರುತ್ತಾರೆ. ಫಿಲಿಪೈನ್ಸ್: ಫಿಲಿಪೈನ್ಸ್ ವೇಶ್ಯಾವಾಟಿಕೆ ಕಾನೂನುಬಾಹಿರವಾಗಿದೆ. ಆದರೂ ಇಲ್ಲಿ ಲೈಂಗಿಕ ಕಾರ್ಯಕರ್ತೆಯರು ಸಾಮಾನ್ಯವಾಗಿ ಸಿಗುತ್ತಾರೆ. ಇವರು ಬಾರ್ ಗರ್ಲ್ ರೀತಿಯಲ್ಲಿ ಐಡಿ ಟ್ಯಾಗ್ ಧರಿಸಿ ಬರುತ್ತಾರೆ. ಕೀನ್ಯಾ: ವೇಶ್ಯಾವಾಟಿಕೆ ಹೊಂದಿರುವ ಟಾಪ್-10 ದೇಶಗಳ ಪಟ್ಟಿಯಲ್ಲಿ ಕೀನ್ಯಾ ಇದೆ. ಇಲ್ಲಿನ ಬಡತನದಿಂದಾಗಿ ಲೈಂಗಿಕ ಪ್ರವಾಸೋದ್ಯಮ ಹುಟ್ಟಿಕೊಂಡಿದೆಯಂತೆ. ಲೈಂಗಿಕ ಪ್ರವಾಸೋದ್ಯಮ ಈ ದೇಶದ ಅತೀ ದೊಡ್ಡ ಆದಾಯದ ಮೂಲವಂತೆ. ಬ್ರೆಜಿಲ್: ಬ್ರೆಜಿಲ್ ನಲ್ಲಿ ವೇಶ್ಯಾವಾಟಿಕೆ ಕಾನೂನು ಬದ್ಧವಾಗಿ ನಡೆಯುತ್ತದೆ. ಆದ್ರೆ ವೇಶ್ಯಾ…

Read More

ಮಾತೃ ಹೃದಯದಿ ಹುದುಗಿದ‌‌ ಮಾತೃತ್ವದ ಕನ್ನಡ ಅಕ್ಷರ ತಿದ್ದಿ ತೀಡಿ ಬಿತ್ತಿದ ಗುರುವರ್ಯರಾದ ಕನ್ನಡ ಭಾಷೆಯ ಶಿಕ್ಷಕರಿಗೆ, ಆಂಗ್ಲರ ಪ್ರಭಾವದಿ ತಳವೂರಿದ ಇಂಗ್ಲೀಷ್ ಭಾಷೆಯ ಇಪ್ಪತ್ತಾರು ಅಕ್ಷರಗಳ ಸರಳತೆಯ ನುಡಿಗಳು ಮಸ್ತಕಕೆ ತುಂಬಿದ ಇಂಗ್ಲಿಷ್ ಭಾಷಾ ಶಿಕ್ಷಕರಿಗೆ ರಾಷ್ಟ್ರೀಯ ಭಾಷೆಯ ಹಿಂದಿಯ ಅಕ್ಷರಗಳ ರಾಷ್ಟ್ರೀಯ ಪ್ರೇಮವ ಹೃದಯಕೆ ಹತ್ತಿರ ತಂದು ಹಿಂದಿಯ ಹಂಬಲ ಹಿಡಿಸಿದ ಹಿಂದಿ ಭಾಷೆಯ ಶಿಕ್ಷಕರಿಗೆ,  ಬದುಕಿನ ವ್ಯವಹಾರಗಳ ಸರಳತೆಯ ಸೂತ್ರಗಳನ್ನು ಒಳ್ಳೇಯದು ಕೂಡಿಸಿ ಕೆಟ್ಟದ್ಧನ್ನು ಕಳೆಯಲು ಗುಣಗಳು ಗುಣಿಸಿ ಸಹಾಯು ಭಾಗಿಸುವ. ಸುಹಾಸವ ಕಲಿಸಿದ  ಗಣಿತ ಶಿಕ್ಷಕರಿಗೆ. ಕಡಿಮೆ ಶ್ರಮದಿ ಹೆಚ್ಚಿನ ಕೆಲಸ ಪಡೆಯಲು  ಅಜ್ಞಾನವ ಅಳಿಸಿ ವೈಜ್ಞಾನಿಕತೆ ತುಂಬಿದ ಸತ್ಯದ ದರ್ಶನ ಮಾಡಿಸಿರುವ ಆರೋಗ್ಯದ ಅರಿವನು ಮೂಡಿಸಿರುವ ವಿಜ್ಞಾನ ಶಿಕ್ಷಕರಿಗೆ,  ಜಗವು ಆಳಿ ಅಳಿದ ಉಳಿದ ಸಾಮ್ರಾಜ್ಯವು ಶೂರರ ಧೀರರು ಹೀಗೆ ಇತ್ತು ಎಂದು ಇತಿಹಾಸ ತಿಳಿಸಿರುವ ಸಮಾಜ ವಿಜ್ಞಾನ ಶಿಕ್ಷಕರಿಗೆ. ದೈಹಿಕ ಮಾನಸಿಕ ಆರೋಗ್ಯಕೆ ದೇಹವು ದಂಡಿಸಿವ ಯೋಗದ ಮಾರ್ಗವು ನೀಡಿ ಕ್ರೀಢೆಯು ಬದುಕಿನ…

Read More

ಪ್ರತಿ ವರ್ಷದಂತೆ ಈ ಬಾರಿಯೂ ಎಲ್ಲೆಡೆ ಗಣೇಶ ಉತ್ಸವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಗಣೇಶ ಚತುರ್ಥಿಯನ್ನು ಯಾಕೆ ಆಚರಿಸುತ್ತೇವೆ, ಇದರ ಹಿಂದಿರುವ ಕಥೆಯ ಬಗ್ಗೆ ಪಂಚಾಂಗಕರ್ತ ಚಿಲಕಮರ್ತಿ ಪ್ರಭಾಕರ ಚಕ್ರವರ್ತಿ ಶರ್ಮಾ ಅವರು ವಿವರಿಸಿದ್ದಾರೆ. ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದ್ದು, ವಿನಾಯ ಮೂರ್ತಿ ಪ್ರತಿಷ್ಠಾಪನೆಗೆ ಅಂತಿಮ ಹಂತದ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ಗಣೇಶ…

Read More

ತುಮಕೂರು:  ಅನೇಕ ತಿಂಗಳಿನಿಂದ‌ ಸಾರ್ವಜನಿಕ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಸೆರೆಯಾಗಿದೆ. ತುಮಕೂರು ತಾಲೂಕಿನ ಹೊನ್ನುಡಿಕೆ ಗ್ರಾಮದಲ್ಲಿ ಚಿರತೆ ಸೆರೆಗಾಗಿ ಬೋನು ಇಡಲಾಗಿತ್ತು. ಬೋನಿಗೆ ಬಿದ್ದ ಸುಮಾರು 1.5 ವರ್ಷದ ಗಂಡು‌ ಚಿರತೆಯಾಗಿದೆ. ಈ ಚಿರತೆ ಕಳೆದ ಎರಡ್ಮೂರು ತಿಂಗಳಿನಿಂದ ಹೊನ್ನುಡಿಕೆ ಗ್ರಾಮದ ಸುತ್ತಮುತ್ತ ಕಾಣಿಸಿಕೊಂಡಿತ್ತು. ಚಿರತೆ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಒತ್ತಾಯಿಸಿದ್ದ ಗ್ರಾಮಸ್ಥರ ಮನವಿ ಮೇರೆಗೆ ಡಿಎಫ್ಒ ಅನುಪಮಾ ನೇತೃತ್ವದಲ್ಲಿ, ಎಸಿಎಫ್ ಮಹೇಶ್ ಮಾಲಗತಿ ಆರ್ ಎಫ್ ಒ ನಿಮತಾ, ಡಿಆರ್ ಎಫ್ ರಬ್ಬನಿ ತಂಡದಿಂದ ಚಿರತೆ ಸೆರೆ ಕಾರ್ಯಚರಣೆ ನಡೆದಿತ್ತು. ಚಿರತೆ ಭೀತಿಯಿಂದ ಇಲ್ಲಿನ ಸ್ಥಳೀಯರು ಆತಂಕಕ್ಕೀಡಾಗಿದ್ದರು. ಇದೀಗ ಅರಣ್ಯಾಧಿಕಾರಿಗಳು ಚಿರತೆಯನ್ನ ಯಶಸ್ವಿಯಾಗಿ ಸೆರೆ ಹಿಡಿದಿದ್ದು, ಹೀಗಾಹಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು: ಅಂತರ್ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸೆಪ್ಟೆಂಬರ್ 15ರಂದು ಸಮಾಜ ಕಲ್ಯಾಣ ಇಲಾಖೆಯು ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಸಂವಿಧಾನ ಪೀಠಿಕೆ ಬೋಧನೆ, 90 ಕಿಲೋ ಮೀಟರ್ ಮಾನವ ಸರಪಳಿಯನ್ನು ನಿರ್ಮಿಸಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಬಗ್ಗೆ ಹೆಚ್ಚು ಅರಿವು ಮೂಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮಾನವ ಸರಪಳಿಯನ್ನು ನಿರ್ಮಿಸಲಾಗುತ್ತಿದ್ದು, ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆ ಗ್ರಾಮ ಪಂಚಾಯಿತಿಯ ಉಜ್ಜನಕುಂಟೆ ಗ್ರಾಮದಿಂದ ತುಮಕೂರು ತಾಲೂಕಿನ ಹಿರೇಹಳ್ಳಿ ಗ್ರಾಮ ಪಂಚಾಯಿತಿಯ ನಂದಿಹಳ್ಳಿ ಗ್ರಾಮದವರೆಗೆ ಈ ಮಾನವ ಸರಪಳಿಯನ್ನು ನಿರ್ಮಿಸಲಾಗುವುದು ಎಂದರು. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮಾನವ ಸರಪಳಿಯನ್ನು ನಿರ್ಮಿಸಲಾಗುತ್ತಿದ್ದು ಜಿಲ್ಲೆಯ ಜನತೆ, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು, ಅಧಿಕಾರಿಗಳು, ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದರು. ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು, ವಿವಿಧ ಸಂಘ–ಸಂಸ್ಥೆಗಳು ಹಾಗೂ…

Read More

ಹಾಸನ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು ಶುಕ್ರವಾರ ಚಾಲನೆ ನೀಡಿದರು. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದರು. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಕುಡಿಯುವ ನೀರು ಮತ್ತು ಕೆರೆ ತುಂಬಿಸುವ ಈ ಯೋಜನೆಯಿಂದ ಲಕ್ಷಾಂತರ ಜನರ ಬದುಕು ಬದಲಾಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ. ದಶಕಗಳ ಹಿಂದೆ ಕರಾವಳಿ ಮೂಲದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಈ ಯೋಜನೆಗೆ ಬುನಾದಿ ಹಾಕಿದ್ದರು. ಆಗ ಚಿಕ್ಕಬಳ್ಳಾಪುರ ಸಂಸದರಾಗಿದ್ದ ಅವರು ಆ ಕ್ಷೇತ್ರದ ಜನರಿಗೆ ಎತ್ತಿನಹೊಳೆ ನೀರು ಹರಿಸುವುದಾಗಿ ವಾಗ್ಧಾನ ನೀಡಿದ್ದರು. ಈಗ ಅದೇ ಕಾಂಗ್ರೆಸ್ ಅವಧಿಯಲ್ಲಿ ಯೋಜನೆಯ ಪ್ರಮುಖ ಘಟ್ಟಕ್ಕೆ ಚಾಲನೆ ದೊರಕಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ನವದೆಹಲಿ: ಭಾರತದ ಖ್ಯಾತ ರೆಸ್ಲರ್ ಬಜರಂಗ್ ಪುನಿಯಾ, ವಿನೇಶ್ ಫೋಗಟ್ ಅವರು, ಶುಕ್ರವಾರ ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಕ್ಷದ ನಾಯಕ ಪವನ್ ಖೇರಾ, ಹರ್ಯಾಣ ಕಾಂಗ್ರೆಸ್ ಮುಖ್ಯಸ್ಥ ಉದಯ್ ಭಾನ್ ಮತ್ತು ಹರಿಯಾಣದ ಎಐಸಿಸಿ ಉಸ್ತುವಾರಿ ದೀಪಕ್ ಬಬಾರಿಯಾ ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ವಿನೇಶ್ ಫೋಗಟ್, ಕಷ್ಟದ ಸಮಯದಲ್ಲೇ ನಮ್ಮವರು ಯಾರು ಎಂದು ತಿಳಿಯುತ್ತದೆ. ನಮ್ಮನ್ನು ರಸ್ತೆಯಲ್ಲಿ ಎಳೆದುಕೊಂಡು ಹೋಗುವಾಗ ಬಿಜೆಪಿ ಹೊರತುಪಡಿಸಿ ಎಲ್ಲಾ ಪಕ್ಷಗಳು ನಮ್ಮೊಂದಿಗೆ ಇದ್ದವು. ಮಹಿಳೆಯರೊಂದಿಗೆ ನಿಲ್ಲುವ ಮತ್ತು ‘ಸಡಕ್‌ನಿಂದ ಸಂಸದ್’ಗೆ ಹೋರಾಡಲು ಸಿದ್ಧವಾಗಿರುವ ಪಕ್ಷಕ್ಕೆ ನಾನು ಸೇರಿದ್ದೇನೆ ಎಂದು ನನಗೆ ಹೆಮ್ಮೆ ಇದೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ಮೈಸೂರು: ವರದಕ್ಷಿಣೆ ಕಿರುಕುಳದಿಂದ ನೊಂದು ಗರ್ಭಿಣಿ ಮಹಿಳೆಯೊಬ್ಬರು ಸಾವಿಗೆ ಶರಣಾಗಿರುವ ಘಟನೆ ಮೈಸೂರಿನ ಕನಕಗಿರಿಯಲ್ಲಿ ನಡೆದಿದೆ. 8 ತಿಂಗಳ ಗರ್ಭಿಣಿ ಚೈತ್ರಾ @ ಚಿಕ್ಕದೇವಿ (23) ಸಾವಿಗೆ ಶರಣಾದವರಾಗಿದ್ದಾರೆ. 2 ವರ್ಷಗಳ ಹಿಂದೆ ಕನಕಗಿರಿಯ ಶರತ್ ರಾಜು ಎಂಬಾತನೊಂದಿಗೆ ನೂರಾರು ಕನಸು ಹೊತ್ತು ವಿವಾಹವಾಗಿದ್ದರು. ಆದರೆ ಪತಿ, ಅತ್ತೆ, ಚಿಕ್ಕತ್ತೆ ವರದಕ್ಷಿಣೆಗಾಗಿ ನಿರಂತರವಾಗಿ ಕಿರುಕುಳ ನೀಡಿದ್ದರು ಎನ್ನಲಾಗಿದೆ. ಚೈತ್ರಾಳ ತಂದೆ—ತಾಯಿ ಪತಿಯ ವಿರುದ್ಧ ಇದೀಗ ವರದಕ್ಷಿಣೆ ಕಿರುಕುಳ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡಿರುವ ವಿದ್ಯಾರಣ್ಯಪುರಂ ಪೊಲೀಸರು ಶರತ್ ರಾಜುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ರೇಣುಕಾಸ್ವಾಮಿಯನ್ನು ಖೆಡ್ಡಾಕ್ಕೆ ಬೀಳಿಸಲು ಆತನ ವಿವರಗಳನ್ನು ತಿಳಿದುಕೊಳ್ಳಲು ಪವಿತ್ರಾ ಗೌಡ ಹೆಸರಿನಲ್ಲಿ ಪವನ್ ಚಾಟ್ ಮಾಡಿ ಆತನ ವಿಳಾಸ ಪತ್ತೆ ಹಚ್ಚಿದ್ದ ಎನ್ನುವ ವಿಚಾರ ಇದೀಗ ತಿಳಿದು ಬಂದಿದೆ. ಈ ವಿಚಾರವನ್ನು ರೇಣುಕಾಸ್ವಾಮಿ ಮತ್ತು ಪವಿತ್ರಾಗೌಡ ಹಾಗೂ ಉಳಿದ ಆರೋಪಿಗಳ ಮೊಬೈಲ್ ಗಳಿಂದ ರಿಟ್ರೀವ್ ಮಾಡಿ ಎಫ್ ಎಸ್ ಎಲ್‌ನಿಂದ ಮಾಹಿತಿ ಪಡೆದುಕೊಂಡು ಚಾರ್ಜ್‌ಶೀಟ್ ನಲ್ಲಿ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ. ಪವಿತ್ರಾ ಗೌಡ ಹೆಸರಿನಲ್ಲಿ ಚಾಟ್ ಮಾಡಿದ್ದ ಪವನ್, ರೇಣುಕಾಸ್ವಾಮಿ ಕೆಲಸ ಮಾಡುತ್ತಿದ್ದ ಶಾಪ್, ಆತನ ಊರು, ವಾಸಸ್ಥಳದ ವಿಳಾಸವನ್ನು ಪತ್ತೆ ಹಚ್ಚಿದ್ದ. ನಂತರ ರೇಣುಕಾಸ್ವಾಮಿಯನ್ನು ಅಪಹರಿಸಿ ಚಿತ್ರದುರ್ಗದಿಂದ ನಗರದ ಪಟ್ಟಣಗೆರೆ ಶೆಡ್ ಗೆ ಕರೆತಂದಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More