Author: admin

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಮಳೆ ಜಾಸ್ತಿ ಇರಬಹುದು. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಯಾದಗಿರಿ, ಬೀದರ್ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ. ಈ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದಂತೆ ಮಳೆಯ ಪ್ರಮಾಣವೂ ಕಡಿಮೆಯಾಗಲಿದೆ. ಈಗಿನಂತೆ ಸೆಪ್ಟೆಂಬರ್ 13ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. ಅಲ್ಲಿಯ ತನಕ…

Read More

ಔರಾದ್: ತಾಲೂಕಿನಲ್ಲಿ ಕಳೆದ ಮೂರುನಾಲ್ಕು ದಿನಗಳಿಂದ ಸುರಿದ ಮಳೆಗೆ ಹಾನಿಗೊಳಗಾದ ಪ್ರದೇಶಗಳಿಗೆ ಗುರುವಾರ ಸಂಸದ ಸಾಗರ ಖಂಡ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕಿನ ಬಾಚೆಪಳ್ಳಿ, ನಾಗೂರ (ಬಿ), ಮಸ್ಕಲ್, ಜೋಜನಾ, ಗುಡಪಳ್ಳಿ, ಮೆಡಪಳ್ಳಿ, ಕೊಳ್ಳುರ್, ಎಕಲಾರ, ತುಳಜಾಪೂರ, ಬೋರಾಳ ಗ್ರಾಮಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ವೀಕ್ಷಣೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಾಗರ ಖಂಡ್ರೆ, ತಾಲೂಕಿನಲ್ಲಿ ಮಾಂಜ್ರಾ ನದಿಯ ಬಳಿಯ ಜಮೀನಿನ ಬೆಳೆಗಳು ಹೆಚ್ಚು ಹಾನಿಗೊಳಗಾಗಿವೆ. ಅಲ್ಲದೇ ಕೆಲ ತಗ್ಗು ಪ್ರದೇಶದಲ್ಲಿ ನೀರು ಸಂಗ್ರಹವಾಗಿದ್ದು ಬೆಳೆ ನಾಶವಾಗಲಿದೆ. ಇವುಗಳ ಸಮೀಕ್ಷೆ ಮಾಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕಿನ ಕೆಲ ಗ್ರಾಮಗಳಲ್ಲಿ ಟ್ರಾನ್ಸ್ ಫಾರ್ಮರ್ ಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಅನೇಕ ಗ್ರಾಮಗಳಲ್ಲಿ ಮನೆಗಳು ಬಿದ್ದಿವೆ. ತಾಲೂಕಿನಲ್ಲಿ ಅಪಾರ ಪ್ರಮಾಣದ ಹಾನಿಯಾಗಿದೆ ಇವುಗಳ ಸಮಗ್ರ ವರದಿಯನ್ನು ನನಗೆ ಹಾಗೂ ಇಲಾಖೆಯ ಮೇಲಾಧಿಕಾರಿಗಳಿಗೆ ಸಲ್ಲಿಸುವಂತೆ ಸ್ಥಳದಲ್ಲಿರುವ ಅಧಿಕಾರಿಗಳಿಗೆ ಸೂಚಿಸಿದರು. ಪ್ರಮುಖರಾದ ಕಾಂಗ್ರೆಸ್ ಡಾ.ಭೀಮಸೇನರಾವ ಶಿಂಧೆ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ…

Read More

ತುಮಕೂರು: ಪಟ್ಟಣದ ಬಿ.ಹೆಚ್. ರಸ್ತೆಯಲ್ಲಿರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಟಿಸಿಎಚ್ ಬಿಎಡ್ ಹಾಸ್ಟೆಲ್ ಗೆ ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಬಗ್ಗೆ ವಿದ್ಯಾರ್ಥಿನಿಯರಿಂದ ಅವರು ಅಭಿಪ್ರಾಯಪಡೆದುಕೊಂಡರು. ಹಾಸ್ಟೆಲ್ ನಲ್ಲಿ ಊಟ, ತಿಂಡಿ ಉತ್ತಮ ಗುಣಮಟ್ಟದಲ್ಲಿ ಕೊಡುತ್ತಿದ್ದಾರೆ. ಗೀಸರ್ ವ್ಯವಸ್ಥೆ ಕೂಡ ಮಾಡಿಕೊಟ್ಟಿದ್ದಾರೆ ಎಂದು ವಿದ್ಯಾರ್ಥಿನಿಯರು ನ್ಯಾಯಮೂರ್ತಿಗಳಿಗೆ ತಿಳಿಸಿದರು. ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ವ್ಯಕ್ತಿತ್ವ ನಿರ್ಮಾಣ, ಶಿಸ್ತು, ಆರೋಗ್ಯ, ಸಂವಿಧಾನ ಇತ್ಯಾದಿ ವಿಚಾರಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳನ್ನ ಕರೆಸಿ ತಿಳುವಳಿಕೆ ಕಾರ್ಯಕ್ರಮವನ್ನ ಮೂಡಿಸ ಬೇಕು ಎಂದು ಇದೇ ವೇಳೆ ಅಧಿಕಾರಿಗಳಿಗೆ ನ್ಯಾಯಮೂರ್ತಿಗಳು ಸೂಚನೆ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೀದರ್: ಯುವತಿ ಭಾಗ್ಯಶ್ರೀ ಹತ್ಯೆಯಲ್ಲಿ ಭಾಗಿಯಾದ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸುವಂತೆ ಶಾಸಕ ಶರಣು ಸಲಗಾರ ಆಗ್ರಹಿಸಿದ್ದಾರೆ. ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಯುವತಿಯ ಹತ್ಯೆಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಬೀದರ್ ಹಾಗೂ ಬಿಜೆಪಿಯ ಯುವ ಮೋರ್ಚಾ ಮತ್ತು ಎಸ್ ಟಿ ಮೋರ್ಚಾ ಜಂಟಿಯಾಗಿ ಬೀದರ್ ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾ ಅಧಿಕಾರಿಗಳ ಕಚೇರಿವರೆಗೆ ಪ್ರತಿಭಟನೆ ರ‍್ಯಾಲಿ ಮೂಲಕ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಬಸವಕಲ್ಯಾಣ ತಾಲೂಕಿನ ಶಾಸಕ ಶರಣು ಸಲಗಾರ ಪ್ರತಿಭಟನೆ ರ‍್ಯಾಲಿಯಲ್ಲಿ ಭಾಗಿಯಾಗಿ ಮಾತನಾಡಿ, ಗುಣತೀರ್ಥವಾಡಿ ಭಾಗ್ಯಶ್ರೀ ಎಂಬ ಯುವತಿಯನ್ನು ಭೀಕರವಾಗಿ ಕೊಲೆ ಮಾಡಿ ಮುಳ್ಳು ಕಂಟಿಯಲ್ಲಿ ಶವ ಬಿಸಾಡಿದ್ದಾರೆ. ಈ ಘಟನೆ ಇಡೀ ಮಾನವ ಕುಲವೆ ಬೆಚ್ಚಿ ಬೀಳಿಸುವ ಕೃತ್ಯವಾಗಿದೆ. ಇಂತಹ ಘಟನೆ ನನ್ನ ಮತ ಕ್ಷೇತ್ರದಲ್ಲಿ ನಡೆದಿರುವುದು ನೋವಿನ ಸಂಗತಿಯಾಗಿದೆ ಎಂದರು. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ಬಂಧಿಸುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ…

Read More

ತುಮಕೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಒಡೆತನದ ಜಿಲ್ಲೆಯ ವಿವಿಧ ತಾಲ್ಲೂಕಿನಲ್ಲಿರುವ ಶಿಥಿಲಗೊಂಡಿರುವ ಹೆದ್ದಾರಿ ಫಲಕಗಳನ್ನು ತೆರವುಗೊಳಿಸಬೇಕಾಗಿರುವ ಕಾರಣ ಈ ಫಲಕಗಳನ್ನು ವಿಲೇವಾರಿ ಮಾಡಲು ವಿವಿಧ ಸಂಘ ಸಂಸ್ಥೆಗಳಿಂದ ದರಪಟ್ಟಿ ಆಹ್ವಾನಿಸಲಾಗಿದೆ. ಶಿಥಿಲಗೊಂಡಿರುವ ಹೆದ್ದಾರಿ ಫಲಕಗಳನ್ನು ಯಥಾಸ್ಥಿತಿಯಲ್ಲಿ ಪಡೆಯಲು ಇಚ್ಚಿಸುವವರು ಸೆಪ್ಟೆಂಬರ್ 13ರೊಳಗೆ ಸಂಸ್ಥೆಯ ಪೂರ್ಣ ವಿಳಾಸದ ವಿವರಗಳೊಂದಿಗೆ ದರಪಟ್ಟಿಯನ್ನು ಸಿದ್ದಪಡಿಸಿ ಮುಚ್ಚಿದ ಲಕೋಟೆಯಲ್ಲಿ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬಾಳನಕಟ್ಟೆ, ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಹತ್ತಿರ, ತುಮಕೂರು–572101 ಇವರಿಗೆ ಸಲ್ಲಿಸುವುದು. ಅವಧಿ ಮೀರಿದ ನಂತರ ಲಕೋಟೆಗಳನ್ನು ಸ್ವೀಕರಿಸುವುದಿಲ್ಲ. ಹೆಚ್ಚಿನ ಮಾಹಿತಿ ಹಾಗೂ ಶಿಥಿಲಗೊಂಡ ಪ್ರಚಾರ ಫಲಕಗಳ ವಿವರಗಳಿಗಾಗಿ ಮೊ.ಸಂ.9964525155ನ್ನು ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ರಾಷ್ಟ್ರೀಯ ವಿದ್ಯಾಪೀಠ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರದಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಇದೇ ವೇಳೆ ತಾಲ್ಲೂಕು ಮಟ್ಟದಲ್ಲಿ ಪದವಿ ಪೂರ್ವ ಕಾಲೇಜು ಕ್ರೀಡಾಕೂಟದಲ್ಲಿ ಬಾಲಕರ ವಾಲಿಬಾಲ್ ನಲ್ಲಿ ಪ್ರಥಮ ಸ್ಥಾನ, ಎತ್ತರ ಜಿಗಿತ ಪ್ರಥಮ ಸ್ಥಾನ ಹಾಗೂಉದ್ದಜಿಗಿತ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಆರ್.ವಿ.ಪಿ. ಸಂಸ್ಥೆಯ ಅಧ್ಯಕ್ಷರಾದ ಈ.ವಿ.ಶ್ರೀಧರ್, ಕಾರ್ಯದರ್ಶಿ ಎನ್.ಆರ್.ಅಶ್ವತ್ಥ್ ಕುಮಾರ್,ನಿರ್ದೇಶಕರಾದ ಟಿ.ಆರ್.ವಿ. ಪ್ರಸಾದ್, ಉಪನ್ಯಾಸಕರಾದ ಅನಿಲ್ ಕುಮಾರ್, ರಾಜು, ಗೋಪಾಲ್, ರಮೇಶ್ ಹಾಜರಾಗಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಪಾವಗಡ: ಟಾಟಾ ಎಸ್ ವಾಹನ ಸಹಿತ ವ್ಯಕ್ತಿಯೊಬ್ಬರು ಸುಟ್ಟುಕರಕಲಾಗಿ ಪತ್ತೆಯಾಗಿರುವ ಘಟನೆ ಪಾವಗಡ ತಾಲೂಕಿನ ಬಳ್ಳಾರಿ ರಸ್ತೆಯ ವೀರಮ್ಮನಹಳ್ಳಿ ಗೇಟ್ ನಿಂದ ಪಲವಳಿಗೆ ಬರುವ ಮಾರ್ಗ ಮಧ್ಯದ ರೈಲ್ವೆ ಬ್ರಿಡ್ಜ್ ಸಮೀಪ ನಡೆದಿದೆ. ಶುಕ್ರವಾರ ಬೆಳಗ್ಗಿನ ಜಾವ 5 ಗಂಟೆಯ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದೆ. ಸದ್ಯದ ಮಾಹಿತಿಯ ಪ್ರಕಾರ ಸುಟ್ಟು ಕರಕಲಾಗಿರುವ ವ್ಯಕ್ತಿ ಎನ್.ಹೊಸಕೋಟೆ ನಿವಾಸಿ ರವಿ ಕುಮಾರ್ ಅಂತ ಹೇಳಲಾಗಿದೆ. ಘಟನೆಗೆ ಸಂಬಂಧಪಟ್ಟಂತೆ ಪಾವಗಡ ಪೊಲೀಸ್ ಠಾಣೆಯ ಸಿಪಿಐ ಸುರೇಶ್ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ತನಿಖೆಯ ಬಳಿಕ ಹೆಚ್ಚಿನ ಮಾಹಿತಿಗಳು ತಿಳಿದು ಬರಬೇಕಿದೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಪಾವಗಡ: ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಬಡ್ಡಿಯಲ್ಲಿ  ಸರ್ಕಾರಿ ಪದವಿ ಪೂರ್ವ ಕಾಲೇಜು ಮರಿದಾಸನಹಳ್ಳಿ  ಕ್ರೀಡಾಪಟುಗಳು  ಪಾವಗಡ ಪಟ್ಟಣ ಪದವಿ ಪೂರ್ವ ಕಾಲೇಜು ಪ್ರತಿಸ್ಪರ್ಧಿಗಳ ಎದುರು ಗೆದ್ದು ಪ್ರಥಮ ಸ್ಥಾನ ಗಳಿಸಿದ್ದಾರೆ.. ಮರಿದಾಸನಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳ ವಿದ್ಯಾರ್ಥಿಗಳ ಈ ಕ್ರೀಡಾ ಕ್ಷೇತ್ರದಲ್ಲಿನ ಸಾಧನೆ ಕಂಡು ಗ್ರಾಮಸ್ಥರು ಸಿಹಿ ತಿನಿಸಿ ಸಂಭ್ರಮಿಸಿದರು. ಜೊತೆಗೆ ಕುಣಿದು ಕುಪ್ಪಳಿಸಿದ್ದಾರೆ. ಕಬ್ಬಡಿ ತಂಡದಲ್ಲಿ ಕ್ಯಾಪ್ಟನ್ ವಿಶ್ವ, ಸೇರಿದಂತೆ ರಾಜು, ಭರತ್ ಪಟೇಲ್, ರಘು, ಧನಂಜಯ್ , ಗೌತಮ್, ಮಾರುತಿ, ಅಭಿ, ಕಿರಣ್, ಭರತ್ ಪಟೆಲ್, ನಿತಿನ್ , ಸಿದ್ದಾರ್ಥ ಇವರನ್ನು ಮರಿದಾಸನಹಳ್ಳಿ ಸರ್ಕಾರಿ ಕಾಲೇಜು ಪ್ರಾಂಶುಪಾಲರು ಆಂಜನೇಯಲು, ಟೀಮ್ ಮ್ಯಾನೇಜರ್ ಓಂಕಾರ್ ,  ಕೋಚ್ ಹರೀಶ್ ,ಅಭಿ ಭಾಗವಹಿಸಿದ್ದರು.  ಹಳೆ ವಿದ್ಯಾರ್ಥಿಗಳ ಸಂಘದ ಪಧಾಧಿಕಾರಿಗಳು, ಗ್ರಾಮಸ್ಥರು ವಿದ್ಯಾರ್ಥಿಗಳನ್ನು ಅಭಿನಂದಿಸಿ ಪ್ರೋತ್ಸಾಹಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಪಾವಗಡ: ತಾಲೂಕಿನಲ್ಲಿ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಪಾವಗಡ ತಾಲೂಕಿನಲ್ಲಿ ಹೆಚ್ಚಾಗಿ ಮಳೆ ಬಂದಂತಹ ಸಂದರ್ಭದಲ್ಲಿ  ತೋಟಗಾರಿಕೆ ಬೆಳೆಗಳು ಹಾನಿಗೊಳಗಾಗಿರುವುದರಿಂದ ಬೆಳೆ ಹಾನಿ ಪರಿಹಾರಕ್ಕೆ ಸಂಬಂಧಿಸಿದಂತೆ ಬೆಳೆ ಹಾನಿಯಾದ  20 ರೈತರ ಪಟ್ಟಿಯನ್ನು ತಹಶೀಲ್ದಾರ್/ಗ್ರಾಮ ಪಂಚಾಯತಿ/ ರೈತ ಸಂಪರ್ಕ ಕೇಂದ್ರಗಳಲ್ಲಿ ಸೆಪ್ಟೆಂಬರ್ 3 ರಿಂದು ಪ್ರಕಟಿಸಲಾಗಿದೆ. ಈ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಿಸಿದ ತಹಶೀಲ್ದಾರ್/ತೋಟಗಾರಿಕೆ ಇಲಾಖೆಗಳ ತಾಲ್ಲೂಕು ಕಚೇರಿಗಳಿಗೆ 7 ದಿನಗಳೊಳಗಾಗಿ ಸಲ್ಲಿಸಬೇಕು. ಜೊತೆಗೆ ಪಟ್ಟಿಯಿಂದ ಯಾರಾದರೂ ಬಿಟ್ಟು ಹೋದಲ್ಲಿ ಅವರು ಸೂಕ್ತ ದಾಖಲೆಗಳೊಂದಿಗೆ ಮೇಲಿನ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಪಾವಗಡ ತಹಶೀಲ್ದಾರ್ ಹಾಗೂ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಡಿ ಎನ್ ವರದರಾಜು ಪತ್ರಿಕಾಗೋಷ್ಠಿಯಲ್ಲಿ ಗುರುವಾರ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಾನಕಿರಾಮ್ ಗ್ರೇಡ್ ಟು ತಹಶೀಲ್ದಾರ್ ಎನ್ ಮೂರ್ತಿ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ವಿಶ್ವನಾಥ್ ಗೌಡ ಹಾಜರಿದ್ದರು ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ಕಾರವಾರ: ವಿದ್ಯೆ ಕಲಿಸುವುದಷ್ಟೇ ಶಿಕ್ಷಣದ ಉದ್ದೇಶ ಅಲ್ಲ. ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೂ ಶಿಕ್ಷಣದ ಗುರಿ. ಪ್ರತಿಯೊಬ್ಬರೂ ಉನ್ನತ ಸ್ಥಾನ ಪಡೆಯುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಎಂದು ನಗರಸಭೆಯ ಅಧ್ಯಕ್ಷ ರವಿರಾಜ ಅಂಕೋಲೆಕರ ಹೇಳಿದರು. ಅವರು ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ, ಉತ್ತರಕನ್ನಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕಾರವಾರ, ಕೆ.ಡಿ.ಸಿ.ಸಿ. ಬ್ಯಾಂಕ್ ಶಿರಸಿ (ಶಾಖೆ ಕಾರವಾರ) ಅಂಕೋಲಾ ಅರ್ಬನ್ ಕೋ. ಅಪರೇಟಿವ್ ಬ್ಯಾಂಕ್ ಅಂಕೋಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಕಾರವಾರ ತಾಲೂಕಿನ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಬೋಧನಾ ವೃತ್ತಿ ಅತ್ಯಂತ ಶ್ರೇಷ್ಟ್ರ ವೃತ್ತಿಗಳಲ್ಲಿ ಒಂದು ಎಂಬುದನ್ನು ಪರಿಗಣಿಸಿರುವ ದೇಶ ನಮ್ಮದು. ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುವುದರ ಜತೆಗೆ ಸರಿ ತಪ್ಪುಗಳನ್ನು ತಿದ್ದುವ, ಅವರಲ್ಲಿನ ಆಸಕ್ತಿಗಳನ್ನು ವೃದ್ಧಿಸುವ ಮತ್ತು ಅವರ…

Read More