Author: admin

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ದಬ್ಬೇಘಟ್ಟದಲ್ಲಿ ವಾಸಿಸುತ್ತಿದ್ದ ಅಲೆಮಾರಿ ಸಮುದಾಯದ ಬದುಕು ಬಿರುಗಾಳಿಯ ಆರ್ಭಟಕ್ಕೆ ತತ್ತರಿಸಿದ್ದು, ಸಂಕಷ್ಟದಲ್ಲಿದ್ದ ಕುಟುಂಬಗಳನ್ನು ತಾಲ್ಲೂಕು ಆಡಳಿತವು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ರವಾನಿಸಿದೆ. ದಬ್ಬೇಘಟ್ಟದ ಬಯಲು ಪ್ರದೇಶದಲ್ಲಿ ಟಾರ್ಪಲ್ ಟೆಂಟ್‌ಗಳನ್ನು ಹಾಕಿಕೊಂಡು ಕಳೆದ ಹಲವು ತಿಂಗಳುಗಳಿಂದ ಅಲೆಮಾರಿ ಕುಟುಂಬಗಳು ವಾಸಿಸುತ್ತಿದ್ದವು. ಮಂಗಳವಾರ ಸಂಜೆ ಬೀಸಿದ ಅನಿರೀಕ್ಷಿತ ಬಿರುಗಾಳಿಗೆ ಈ ಹಂಗಾಮಿ ಆಶ್ರಯ ತಾಣಗಳು ಸಂಪೂರ್ಣವಾಗಿ ಹಾರಿಹೋಗಿವೆ. ಇದರಿಂದಾಗಿ ವೃದ್ಧರು ಹಾಗೂ ಮಕ್ಕಳು ಆಶ್ರಯವಿಲ್ಲದೆ ಬೀದಿಗೆ ಬಿದ್ದಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ತಹಶೀಲ್ದಾರ್ ಮಮತಾ ಎಂ. ಅವರು ಸಂತ್ರಸ್ತ ಕುಟುಂಬಗಳನ್ನು ಪಟ್ಟಣದ ಅಂಬೇಡ್ಕರ್ ಭವನಕ್ಕೆ ಸ್ಥಳಾಂತರಿಸಲು ತಕ್ಷಣದ ಕ್ರಮ ಕೈಗೊಂಡರು. ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಸಿ.ಬಿ. ಸುರೇಶ್ ಬಾಬು ಅವರು ಸಂತ್ರಸ್ತರ ಅಹವಾಲು ಆಲಿಸಿದರು. ಬಳಿಕ ಮಾತನಾಡಿದ ಅವರು: ”ಈ ಹಿಂದೆ ಗುಂಡುತೋಪಿನಲ್ಲಿ ವಾಸವಿದ್ದ ಈ ಕುಟುಂಬಗಳಿಗೆ ದಬ್ಬೇಘಟ್ಟದ ಬಳಿ ಜಾಗ ಗುರುತಿಸಲಾಗಿತ್ತು, ನಿವೇಶನ ಹಂಚಿಕೆ ಮತ್ತು ಮನೆ ಮಂಜೂರಾತಿ ಪ್ರಕ್ರಿಯೆಯಲ್ಲಿ ಕೆಲವು ತಾಂತ್ರಿಕ ಅಡಚಣೆಗಳಿದ್ದು, ಈ ಬಗ್ಗೆ…

Read More

ಮಂಡ್ಯ: ಭ್ರೂಣಲಿಂಗ ಪತ್ತೆ ಮತ್ತು ಅಪ್ರಾಪ್ತ ಗರ್ಭಿಣಿಯರಿಗೆ ಕಾನೂನುಬಾಹಿರವಾಗಿ ಸ್ಕ್ಯಾನಿಂಗ್ ಮಾಡುತ್ತಿದ್ದ ಗಂಭೀರ ಆರೋಪದ ಮೇಲೆ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ಮೂವರು ಖಾಸಗಿ ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೆ.ಆರ್.ಪೇಟೆಯ ಚೇತನ ಮೆಟರ್ನಿಟಿ ಸೆಂಟರ್‌ ನ ಡಾ.ದಿವ್ಯಾ ಚೇತನ, ನಾವಿ ಡಯಾಗ್ನಸ್ಟಿಕ್ ಸೆಂಟರ್‌ ನ ಡಾ. ಹರ್ಷಿತ್ ಮತ್ತು ಕುಶಾಲ್ ಡಯಾಗ್ನಸ್ಟಿಕ್ ಸೆಂಟರ್‌ನ ಡಾ. ಹರೀಶ್ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಸರ್ಕಾರಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ಪ್ರಿಯಾಂಕಾ ಸದ್ಯ ತಲೆಮರೆಸಿಕೊಂಡಿದ್ದು, ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಈ ಕುರಿತು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆಗೆ ಆದೇಶಿಸಿದ್ದರು. ಕೆ.ಆರ್.ಪೇಟೆ ತಾಲೂಕಿನಲ್ಲಿ ಒಟ್ಟು 12 ಎಫ್‌ಐಆರ್‌ಗಳು ದಾಖಲಾಗಿದ್ದು, ಅದರ ಆಧಾರದ ಮೇಲೆ ಈ ಬಂಧನ ನಡೆದಿದೆ. ತನಿಖೆಯ ವೇಳೆ ಸುಮಾರು 31 ಬಾಲ ಗರ್ಭಿಣಿಯರಿಗೆ (ಅಪ್ರಾಪ್ತ ವಯಸ್ಕರು) ನಿಯಮ ಬಾಹಿರವಾಗಿ ಸ್ಕ್ಯಾನಿಂಗ್ ಮಾಡಿರುವುದು ಪತ್ತೆಯಾಗಿದೆ. ಇಲ್ಲಿ 2024ರಲ್ಲಿ 19 ಮತ್ತು 2025ರಲ್ಲಿ…

Read More

ತುಮಕೂರು: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಾರೆ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಜಗನ್ನಾಥಪುರ ಬಳಿಯ ಸೇತುವೆ ಮೇಲೆ ನಡೆದಿದೆ. ಮೃತರನ್ನು ಶಿವರಾಜು (59) ಎಂದು ಗುರುತಿಸಲಾಗಿದೆ. ಏಪ್ರಿಲ್ 26ರಂದು ರಾತ್ರಿ ಸುಮಾರು 10 ಗಂಟೆಯ ಸಮಯದಲ್ಲಿ ಶಿವರಾಜು ಅವರು ರಸ್ತೆ ದಾಟುತ್ತಿದ್ದರು. ಈ ವೇಳೆ ಅಂತರಸನಹಳ್ಳಿಯಿಂದ ಬೆಂಗಳೂರು ಕಡೆಗೆ ಅತೀ ವೇಗವಾಗಿ ಬಂದ ಕಾರೊಂದು ಅವರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ ತೀವ್ರವಾಗಿ ಗಾಯಗೊಂಡಿದ್ದ ಶಿವರಾಜು ಅವರನ್ನು ತಕ್ಷಣವೇ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಗಾಯದ ತೀವ್ರತೆ ಹೆಚ್ಚಾಗಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೆ ಏಪ್ರಿಲ್ 27ರಂದು ಬೆಳಿಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ. ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕ ಬೆಂಗಳೂರು ಮೂಲದ ರಾಘವೇಂದ್ರ ಎಂದು ತಿಳಿದುಬಂದಿದೆ. ಮೃತರ ಪುತ್ರ ಪ್ರಕಾಶ್ ಅವರು ನೀಡಿದ ದೂರಿನ ಮೇರೆಗೆ ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ತುಮಕೂರು: ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ನಗರದ ಹೊರವಲಯದ ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) 2026–27ನೇ ಶೈಕ್ಷಣಿಕ ಸಾಲಿನ ಡಿಪ್ಲೊಮಾ ಕೋರ್ಸ್‌ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪಿಸಲಾಗಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಎಸ್ಸೆಸ್ಸೆಲ್ಸಿ ಓದಿದ ವಿದ್ಯಾರ್ಥಿಗಳಿಗೆ ಡಿಪ್ಲೊಮಾ ಪ್ರವೇಶಾತಿ ಕಲ್ಪಿಸಿದ್ದು, ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಟಿಟಿಸಿ ಪ್ರಾಂಶುಪಾಲ ಜಯ ಪ್ರಕಾಶ್ ಜೆ.ಕೆ. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಜಿಟಿಟಿಸಿ ತುಮಕೂರು ಕೇಂದ್ರದಲ್ಲಿ ಎಐಸಿಟಿಯಿಂದ ಮಾನ್ಯತೆ ಪಡೆದಿರುವ ಡಿಪ್ಲೊಮಾ ಕೋರ್ಸ್‌ಗಳಾದ ಡಿಪ್ಲೊಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ (DTDM), ಡಿಪ್ಲೊಮಾ ಇನ್ ಮೆಕಾಟ್ರಾನಿಕ್ಸ್ (DMCH), ಡಿಪ್ಲೊಮಾ ಇನ್ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ (DEEE) ನ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದರು. ಕೋರ್ಸ್ ಅವಧಿ 3+1 ವರ್ಷ (ಕೌಶಲ್ಯ ಹೆಚ್ಚಳ ಮತ್ತು ಕೈಗಾರಿಕಾ ಜ್ಞಾನಕ್ಕಾಗಿ ಒಂದು ವರ್ಷ…

Read More

ಧಾರವಾಡ: ನಗರದಲ್ಲಿ ಪೊಲೀಸರ ಕಿರುಕುಳ ಮತ್ತು ಹಣದ ಬೇಡಿಕೆಗೆ ಮನನೊಂದು ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಈ ಸಂಬಂಧ ಕರ್ತವ್ಯ ಲೋಪ ಹಾಗೂ ಕಿರುಕುಳದ ಆರೋಪದ ಮೇಲೆ ವಿದ್ಯಾಗಿರಿ ಠಾಣೆಯ ಮೂವರು ಪೊಲೀಸರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಮೃತ ವಿದ್ಯಾರ್ಥಿಯನ್ನು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬೇಲೂರು ಗ್ರಾಮದ ಆದಿತ್ಯ ಮ್ಯಾಗೇರಿ (20) ಎಂದು ಗುರುತಿಸಲಾಗಿದೆ. ಈತ ಧಾರವಾಡದ ಕಿಟೆಲ್ ಕಾಲೇಜಿನಲ್ಲಿ ಬಿಎಸ್ಸಿ ಓದುತ್ತಿದ್ದನು. ಏಪ್ರಿಲ್ 25ರಂದು ವಿದ್ಯಾಗಿರಿ ಪೊಲೀಸರು ನಡೆಸಿದ ಗಾಂಜಾ ವಿರೋಧಿ ಕಾರ್ಯಾಚರಣೆಯ ವೇಳೆ ಆದಿತ್ಯ ಸೇರಿದಂತೆ ಹಲವು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ಆದಿತ್ಯ ಗಾಂಜಾ ಸೇವಿಸಿಲ್ಲ ಎಂಬುದು ದೃಢಪಟ್ಟಿತ್ತು (ನೆಗೆಟಿವ್ ಬಂದಿತ್ತು). ಆದರೂ, ಪೊಲೀಸರು ಆತನನ್ನು ಬಿಡುಗಡೆ ಮಾಡಲು ಹಣದ ಬೇಡಿಕೆ ಇಟ್ಟಿದ್ದರು ಎಂದು ಕುಟುಂಬದವರು ಆರೋಪಿಸಿದ್ದಾರೆ. ಮೊದಲು 10,000 ರೂ. ಕೇಳಿದ್ದ ಪೊಲೀಸರು, ನಂತರ 2,000 ರೂ. ನೀಡುವಂತೆ ಒತ್ತಡ ಹೇರಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಆದಿತ್ಯ ತನ್ನ…

Read More

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ತಲೆದೂರಿರುವ ತೀವ್ರ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿರುವ ಆರ್. ಅಶೋಕ, ಸರ್ಕಾರವು ಕೂಡಲೇ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 10 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರಗಾಲದ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದ್ದಿದೆ. ಕೊಳವೆಬಾವಿಗಳು ಬತ್ತಿ ಹೋಗುತ್ತಿದ್ದು, ಜನ ಜಾನುವಾರುಗಳು ಸಂಕಷ್ಟಕ್ಕೆ ಸಿಲುಕಿವೆ. ಈ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಶಾಸಕರಿಗೆ ಹೆಚ್ಚಿನ ಅನುದಾನದ ಅಗತ್ಯವಿದೆ. ರಾಜ್ಯ ಸರ್ಕಾರವು ವರ್ಗಾವಣೆ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಜನರ ಮೂಲಭೂತ ಸಮಸ್ಯೆಗಳಾದ ಕುಡಿಯುವ ನೀರಿನ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಅವರು ಟೀಕಿಸಿದರು. ಹಲವೆಡೆ ಟ್ಯಾಂಕರ್ ಮೂಲಕ ನೀರು ಪೂರೈಕೆಯಾಗುತ್ತಿದೆಯಾದರೂ, ಅದರಲ್ಲಿ ಅವ್ಯವಹಾರ ನಡೆಯುತ್ತಿದೆ. ಶಾಶ್ವತ ಪರಿಹಾರಕ್ಕಾಗಿ ಹೊಸ ಕೊಳವೆಬಾವಿಗಳನ್ನು ಕೊರೆಯಲು ಮತ್ತು ಪಂಪ್‌ಸೆಟ್‌ಗಳ ದುಸ್ತಿಗೆ ಹಣದ ಕೊರತೆಯಿದೆ ಎಂದು ಅವರು ದೂರಿದರು. ಸರ್ಕಾರವು ಕೇವಲ ಭರವಸೆಗಳನ್ನು ನೀಡದೆ, ಕೂಡಲೇ ಜಿಲ್ಲಾಧಿಕಾರಿಗಳ…

Read More

ಬೆಂಗಳೂರು: ಕೆಜಿಎಫ್ ಸರಣಿಯ ಅಭೂತಪೂರ್ವ ಯಶಸ್ಸಿನ ನಂತರ, ಇಡೀ ವಿಶ್ವವೇ ಎದುರು ನೋಡುತ್ತಿದ್ದ ಯಶ್ ಅಭಿನಯದ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ (Toxic) ಚಿತ್ರದ ಬಿಡುಗಡೆ ದಿನಾಂಕ ಮತ್ತೆ ಮುಂದೂಡಿಕೆಯಾಗಿದೆ. ಈ ಬಗ್ಗೆ ಸ್ವತಃ ನಟ ಯಶ್ ಸಾಮಾಜಿಕ ಜಾಲತಾಣಗಳಲ್ಲಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ಈ ಮೊದಲು ಚಿತ್ರವನ್ನು ಜೂನ್ 4 ರಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿತ್ತು. ಆದರೆ ಇತ್ತೀಚೆಗೆ ಅಮೆರಿಕದ ಲಾಸ್ ವೇಗಾಸ್‌ ನಲ್ಲಿ ನಡೆದ ಪ್ರತಿಷ್ಠಿತ ‘ಸಿನೆಮಾಕಾನ್’ (CinemaCon) ಈವೆಂಟ್‌ ನಲ್ಲಿ ಟಾಕ್ಸಿಕ್ ಚಿತ್ರದ ಪ್ರೆಸೆಂಟೇಶನ್‌ ಗೆ ಜಾಗತಿಕ ವಿತರಕರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರದ ವ್ಯಾಪ್ತಿ ಈಗ ಜಾಗತಿಕ ಮಟ್ಟಕ್ಕೆ ವಿಸ್ತರಿಸಲ್ಪಟ್ಟಿದ್ದು, ವಿಶ್ವದಾದ್ಯಂತ ಅತೀ ದೊಡ್ಡ ಮಟ್ಟದಲ್ಲಿ ಏಕಕಾಲಕ್ಕೆ ತೆರೆಗೆ ತರುವ ಉದ್ದೇಶದಿಂದ ದಿನಾಂಕವನ್ನು ಮರುಹೊಂದಿಸಲಾಗಿದೆ ಎಂದು ಯಶ್ ತಿಳಿಸಿದ್ದಾರೆ. “ಟಾಕ್ಸಿಕ್ ನನ್ನ ಪಾಲಿಗೆ ಒಂದು ವಿಶೇಷ ಪಯಣ. ಸಿನೆಮಾಕಾನ್‌ ನಲ್ಲಿ ಸಿಕ್ಕ ಪ್ರತಿಕ್ರಿಯೆ ನಮ್ಮ ನಂಬಿಕೆಯನ್ನು…

Read More

ಕಡೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪೊಲೀಸ್ ಉಪನಿರೀಕ್ಷಕರೊಬ್ಬರ (PSI) ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ. ಕಡೂರು ಪೊಲೀಸ್ ಠಾಣೆಯಲ್ಲಿ ಪಿಎಸ್‌ ಐ ಆಗಿ ಕಾರ್ಯನಿರ್ವಹಿಸುತ್ತಿರುವ ಶರಣಬಸಪ್ಪ ಅವರ ಪತ್ನಿ ಕಾವ್ಯ (25) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕಾವ್ಯ ಅವರು ಕಡೂರು ಪಟ್ಟಣದ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ದಂಪತಿಗಳ ನಡುವೆ ಕಳೆದ ಕೆಲವು ದಿನಗಳಿಂದ ಕೌಟುಂಬಿಕ ವಿಚಾರವಾಗಿ ಮನಸ್ತಾಪವಿತ್ತು ಎನ್ನಲಾಗಿದೆ. ಇದೇ ಕಲಹ ತಾರಕಕ್ಕೇರಿ ಮನನೊಂದ ಕಾವ್ಯ ಈ ಅಂತಿಮ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More

ನವದೆಹಲಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್, ಜಾಮೀನು ಕೋರಿ ಈಗ ಎರಡನೇ ಬಾರಿಗೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಹಿರಿಯ ವಕೀಲ ಮುಕುಲ್ ರೋಹ್ಟಗಿ ಅವರ ಕಚೇರಿಯ ಮೂಲಕ ಈ ಹೊಸ ಜಾಮೀನು ಅರ್ಜಿಯನ್ನು ಸಲ್ಲಿಕೆ ಮಾಡಲಾಗಿದೆ. ದರ್ಶನ್ ಪರ ಸಲ್ಲಿಕೆಯಾಗಿರುವ ಈ ಅರ್ಜಿಯಲ್ಲಿ ಪ್ರಮುಖವಾಗಿ ವಿಚಾರಣೆಯ ವಿಳಂಬದ ಬಗ್ಗೆ ಉಲ್ಲೇಖಿಸಲಾಗಿದೆ,  ರೇಣುಕಾಸ್ವಾಮಿ ಕೇಸ್‌ ನ ಟ್ರಯಲ್ ಆರಂಭವಾಗಿ 8 ತಿಂಗಳು ಕಳೆದಿದ್ದರೂ, ಸಾಕ್ಷಿಗಳ ವಿಚಾರಣೆ ಇನ್ನೂ ಮುಕ್ತಾಯವಾಗಿಲ್ಲ. ಪ್ರಕರಣದಲ್ಲಿ ಒಟ್ಟು 273 ಸಾಕ್ಷಿಗಳಿದ್ದು, ಈವರೆಗೆ ಕೇವಲ 15 ಸಾಕ್ಷಿಗಳ ವಿಚಾರಣೆ ಮಾತ್ರ ನಡೆದಿದೆ. ಇದೇ ವೇಗದಲ್ಲಿ ವಿಚಾರಣೆ ಮುಂದುವರಿದರೆ ಪೂರ್ಣಗೊಳ್ಳಲು ಹಲವು ವರ್ಷಗಳೇ ಬೇಕಾಗಬಹುದು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ತಾವು ಟ್ರಯಲ್ ಪ್ರಕ್ರಿಯೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದು, ಇದನ್ನು ಪರಿಗಣಿಸಿ ಜಾಮೀನು ಮಂಜೂರು ಮಾಡಬೇಕು ಎಂದು ದರ್ಶನ್ ಮನವಿ ಮಾಡಿದ್ದಾರೆ. ವರದಿಯ ಪ್ರಕಾರ, ಟ್ರಯಲ್ ಕೋರ್ಟ್‌ನಲ್ಲಿ ರೇಣುಕಾಸ್ವಾಮಿ ಪೋಷಕರನ್ನು ಹೊರತುಪಡಿಸಿ ಮಹಜರು ಸಾಕ್ಷಿಗಳ ವಿಚಾರಣೆ ನಡೆಯುತ್ತಿದೆ.…

Read More

ತುಮಕೂರು: ಜಿಲ್ಲಾ ತಾಲ್ಲೂಕು ಕಚೇರಿಯಲ್ಲಿ ಮಹತ್ವದ ಕಡತವೊಂದು ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಇದಕ್ಕೆ ಕಾರಣರಾದ ನೌಕರರು ಹಾಗೂ ಸಿಬ್ಬಂದಿ ವಿರುದ್ಧ ತಹಶೀಲ್ದಾರ್ ರಾಜೇಶ್ವರಿ ಅವರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹೆಬ್ಬೂರು ಹೋಬಳಿ ಜೋಡಿ ಕಲ್ಲೆರೆ ಗ್ರಾಮದ ಸರ್ವೆ ನಂಬರ್ 60ಕ್ಕೆ ಸಂಬಂಧಿಸಿದ ದಾಖಲೆಗಳು ತಾಲ್ಲೂಕು ಕಚೇರಿಯಿಂದ ಕಳುವಾಗಿವೆ. ಈ ಸ್ವತ್ತಿಗೆ ಸಂಬಂಧಿಸಿದಂತೆ ಶ್ರೀನಿವಾಸ್ ಕಲ್ಲೆರೆ ಎಂಬುವವರು ದಾಖಲಾತಿಗಾಗಿ ಮನವಿ ಮಾಡಿದ್ದರು. ಆದರೆ, ದಾಖಲೆಗಳು ಲಭ್ಯವಿಲ್ಲವೆಂದು ತಹಶೀಲ್ದಾರ್ ನೀಡಿದ್ದ ಹಿಂಬರಹದ ವಿರುದ್ಧ ಶ್ರೀನಿವಾಸ್ ಅವರು ಮಾಹಿತಿ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ಪುರಸ್ಕರಿಸಿದ ಮಾಹಿತಿ ಆಯೋಗವು ತಹಶೀಲ್ದಾರ್ ನೀಡಿದ್ದ ಹಿಂಬರಹವನ್ನು ತಿರಸ್ಕರಿಸಿದೆ. ಅಷ್ಟೇ ಅಲ್ಲದೆ, ಒಂದು ವೇಳೆ ಕಡತ ಲಭ್ಯವಿಲ್ಲದಿದ್ದಲ್ಲಿ ಅದಕ್ಕೆ ಸೂಕ್ತ ಕಾರಣಗಳನ್ನು ನೀಡಿ, ಮೇ 5ರಂದು ಪ್ರಮಾಣ ಪತ್ರದೊಂದಿಗೆ ವಿಚಾರಣೆಗೆ ಹಾಜರಾಗಬೇಕೆಂದು ತಹಸೀಲ್ದಾರ್‌ಗೆ ಕಟ್ಟುನಿಟ್ಟಿನ ಆದೇಶ ನೀಡಿತ್ತು. ಮಾಹಿತಿ ಆಯೋಗದ ಆದೇಶದ ಬೆನ್ನಲ್ಲೇ ಎಚ್ಚೆತ್ತುಕೊಂಡ ತಹಶೀಲ್ದಾರ್ ರಾಜೇಶ್ವರಿ ಅವರು, ಕಡತ ನಾಪತ್ತೆಗೆ ಕಾರಣರಾದವರ ವಿರುದ್ಧ…

Read More