Subscribe to Updates
Get the latest creative news from FooBar about art, design and business.
- ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ
- ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ
- ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ
- ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ
- ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿ ಜಯಂತಿ ಹಾಗೂ ವ್ಯಸನ ಮುಕ್ತ ದಿನಾಚರಣೆ
- ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
- ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
- ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ
Author: admin
ತುಮಕೂರು: ಪಾವಗಡ ತಾಲೂಕಿನ ರೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲಿಬೆಟ್ಟ ತಾಂಡ ಗ್ರಾಮದಲ್ಲಿ ಲಂಬಾಣಿ ಸಮುದಾಯದ 80 ಕ್ಕೂ ಹೆಚ್ಚು ಮನೆಗಳ ಬಳಿಯಲ್ಲಿ ಕಲುಷಿತ ವಾತಾವರಣ ಸೃಷ್ಟಿಯಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ನಮ್ಮತುಮಕೂರು ವರದಿ ಮಾಡಿತ್ತು. ವರದಿ ಪ್ರಕಟಗೊಂಡು ಕೆಲವೇ ಗಂಟೆಗಳಲ್ಲಿ ಸ್ಥಳೀಯಾಡಳಿತ ಕ್ರಮಕೈಗೊಂಡಿದೆ. ಚರಂಡಿಯಲ್ಲಿ ಹೂಳು ತುಂಬಿದ ಪರಿಣಾಮ ನೀರು ಚರಂಡಿಯಲ್ಲಿ ನಿಂತಿತ್ತು. ಫಾರ್ತೇನಿಯಂ ಗಿಡಗಳು ಬೆಳೆದು ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್ಯೂ ಭೀತಿ ಸೃಷ್ಟಿಯಾಗಿತ್ತು. ಈ ಬಗ್ಗೆ ನಮ್ಮತುಮಕೂರು ಸವಿವರವಾದ ವರದಿ ಪ್ರಕಟಿಸಿದ ಬೆನ್ನಲ್ಲೇ ಅಧಿಕಾರಿಗಳು ತಕ್ಷಣವೇ ಕ್ರಮಕೈಗೊಂಡಿದ್ದಾರೆ. ಇದೀಗ ಫಾರ್ತೇನಿಯಂ ಗಿಡಗಳನ್ನು ತೆರವುಗೊಳಿಸಿ, ಚರಂಡಿಯನ್ನು ಸ್ವಚ್ಛಗೊಳಿಸುವ ಕೆಲಸ ಅಧಿಕಾರಿಗಳು ನಡೆಸುತ್ತಿದ್ದಾರೆ. ಊರಿನ ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ತಂದ ನಮ್ಮತುಮಕೂರು ಮಾಧ್ಯಮಕ್ಕೆ ಸ್ಥಳೀಯರು ಧನ್ಯವಾದ ತಿಳಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಮೈಕ್ರೋ ಫೈನಾನ್ಸ್ ವಿರುದ್ಧ ನೂರಾರು ಮಹಿಳೆಯರು ಪ್ರತಿಭಟನೆ ನಡೆಸಿದ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ. ಮೈಕ್ರೋ ಫೈನಾನ್ಸ್ ಪ್ರತಿಕೃತಿ ದಹಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ತಾಲೂಕು ಕೇಂದ್ರದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ನೀಡುವ ನೆಪದಲ್ಲಿ ಗ್ರಾಮೀಣ ಜನರಿಗೆ ಮಾನಸಿಕ ಕಿರುಕುಳ ನೀಡುತ್ತಿವೆ. ಇವರ ಕಿರುಕುಳದಿಂದ ಈಗಾಗಲೇ ಕೆಲವರು ಊರು ಬಿಟ್ಟಿದ್ದಾರೆ ಮತ್ತೆ ಕೆಲವು ಪ್ರಾಣ ಬಿಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕುವಂತೆ ಒತ್ತಾಯಿಸಿ ತಹಶೀಲ್ದಾರ್ ಅವರಿಗೆ ಸಾರ್ವಜನಿಕರು ಮನವಿ ಮನವಿ ಸಲ್ಲಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಪಾವಗಡ: ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ 2024– 25 ನೇ ಸಾಲಿನ ನಡೆದ ತಾಲ್ಲೂಕು ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ವೆಂಕಟಾಪುರ ಸರ್ಕಾರಿ ಪ್ರಥಮ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರು ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಈ ಸಾಧನೆಗೆ ಕಾಲೇಜ್ ಪ್ರಾಂಶುಪಾಲರಾದ ನಾರಾಯಣ ಸ್ವಾಮಿ, ದೈಹಿಕ ಶಿಕ್ಷಕರಾದ ಮುರಳಿ, ಸಹ ಶಿಕ್ಷಕರು ಸೇರಿ ಗ್ರಾಮಸ್ಥರಿಂದ ಅಭಿನಂದನೆ ಸಲ್ಲಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತಿಪಟೂರು: ಕಾಮುಕ ತಂದೆಯೊಬ್ಬ ತನ್ನ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿರುವ ಪರಿಣಾಮ 14 ವರ್ಷದ ಬಾಲಕಿ ಗರ್ಭಿಣಿಯಾಗಿರುವ ಘಟನೆ ತಿಪಟೂರು ತಾಲೂಕಿನ ಹೊನ್ನವಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿ ಗರ್ಭ ಧರಿಸಿದ ಪರಿಣಾಮ ತಂದೆಯ ಅಮಾನಷ ಕೃತ್ಯ ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹೊನ್ನವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುಷ್ಕೃತ್ಯ ನಡೆದಿದೆ. ಆರೋಪಿಯ ಕುಟುಂಬ ಎಂಟು ತಿಂಗಳ ಹಿಂದೆ ಕೂಲಿ ಕೆಲಸಕ್ಕಾಗಿ ಹೊರ ರಾಜ್ಯದಿಂದ ಹೊನ್ನವಳ್ಳಿಗೆ ಬಂದು ನೆಲೆಸಿತ್ತು. ಇತ್ತೀಚೆಗೆ ಬಾಲಕಿ ಪದೇ–ಪದೇ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಳು. ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷೆ ವೇಳೆ ಆಕೆ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಆಸ್ಪತ್ರೆ ಸಿಬ್ಬಂದಿ ವಿಚಾರಿಸಿದ ವೇಳೆ ತನ್ನ ಮೇಲೆ ತಂದೆಯೇ ಅತ್ಯಾಚಾರ ಎಸಗಿರುವುದಾಗಿ ಬಾಲಕಿ ಹೇಳಿದ್ದಾಳೆ. ಕಾಮುಕ ತಂದೆಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ವರದಿ: ಆನಂದ್, ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಪಾವಗಡ: ಚಿನ್ನ ಶುದ್ಧಿಕರಿಸುತ್ತೇವೆಂದು ಹೇಳಿ, ಚಿನ್ನ ಕದ್ದು ಪರಾರಿಯಾಗುತ್ತಿದ್ದ ವೇಳೆ ಬೈಕ್ ನಿಂದ ಬಿದ್ದ ಕಳ್ಳರು ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದ ಘಟನೆ ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿಯ ತಿಮ್ಮಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಯಾರು ಇಲ್ಲದ ಸಮಯ ನೋಡಿಕೊಂಡು ಜನರ ಬಳಿ ಬಂದು ಚಿನ್ನ ಶುದ್ಧಿಕರಿಸುತ್ತೇವೆಂದು ನಂಬಿಸಿ ಚಿನ್ನವನ್ನು ದೋಚಿ ಪರಾರಿಯಾಗಲು ಕಳ್ಳರು ಯತ್ನಿಸಿದ್ದಾರೆ. ಆದ್ರೆ ಅತೀವೇಗದಲ್ಲಿ ಆತುರಾತುರವಾಗಿ ಹೋಗುತ್ತಿದ್ದ ವೇಳೆ ಬೈಕ್ ನಿಂದ ಬಿದ್ದಿದ್ದು, ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ತಿರುಮಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅರಸೀಕೆರೆ ಪೊಲೀಸ್ ಠಾಣೆ ಪ್ರಕಟಣೆ: ಸಾರ್ವಜನಿಕರಲ್ಲಿ ವಿನಂತಿಸಿಕೊಳ್ಳುವುದೇದರೆ, ಇರಾನಿ ಗ್ಯಾಂಗ್ ಹಳ್ಳಿಗಳಲ್ಲಿ ಬೆಡ್ ಶೀಟ್ ಮಾರಾಟ ಮಾಡುವ ಅಥವಾ ಬಂಗಾರ–ಬೆಳ್ಳಿ ಪಾಲಿಸ್ ಮಾಡುವ ಅಥವಾ ಒಂಟಿಯಾಗಿ ಇರುವ ಮಹಿಳೆಯರನ್ನು ಗುರಿಯಾಗಿ ಇಟ್ಟುಕೊಂಡು ಅಡ್ರೆಸ್ ಕೇಳುವ ನೆಪದಲ್ಲಿ ನಿಮಗೆ ಮೋಸಮಾಡುವ ಸಾಧ್ಯತೆ ಇರುವುದರಿಂದ ತಾವುಗಳು ಎಚ್ಚರಿಕೆಯಿಂದ ಇರಬೇಕು ಮತ್ತು ಅಂತಹ…
ಎಷ್ಟೋ ಜನರಿಗೆ ಹಲವಾರು ಬಾರಿ ತಮ್ಮ ತಮ್ಮ ಮೊಬೈಲ್ ಹ್ಯಾಕ್ ಆಗಿದೆ ಎಂಬ ಅರಿವೇ ಇರುವುದಿಲ್ಲ. ಆದರೆ ಹ್ಯಾಕರ್ ಗಳು ಮತ್ತು ಅಪರಾಧಿಗಳು ಬಳಕೆದಾರರ ವೈಯಕ್ತಿಕ ಡೇಟಾವನ್ನು ಕದಿಯುತ್ತಾರೆ ಮತ್ತು ಅವರ ಬ್ಯಾಂಕ್ ಖಾತೆಗಳನ್ನು ಖಾಲಿ ಮಾಡುವುದು ಇವರ ಗುರಿಯಾಗಿರುತ್ತದೆ. ಈ ವಂಚಕರು ಹಲವು ಬಾರಿ ಬಳಕೆದಾರರಿಗೆ ಮುಗ್ದ ಜನರನ್ನು ಬ್ಲ್ಯಾಕ್ ಮೇಲ್ ಮಾಡಿ ಅವರ ವೈಯಕ್ತಿಕ ಡೇಟಾ ಸೋರಿಕೆ ಮಾಡಿ ಹಣ ವಸೂಲಿ ಮಾಡುತ್ತಾರೆ. ನಿಮ್ಮ ಸ್ಮಾರ್ಟ್ಫೋನ್ ನಲ್ಲಿ ಈ ಕೆಳಗೆ ಪಟ್ಟಿ ಮಾಡಲಾಗಿರುವ ಸಾಮಾನ್ಯ 3 ಲಕ್ಷಣಗಳು ಕಂಡು ಬಂದರೆ ತಕ್ಷಣ ಎಚ್ಚೆತ್ತುಕೊಳ್ಳಬೇಕು. ಅದನ್ನು ಗಮನದಲ್ಲಿಟ್ಟುಕೊಂಡು ನಿಮ್ಮ ಮೊಬೈಲ್ ಹ್ಯಾಕ್ (Phone Hack) ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ನೀವು ಕಂಡುಹಿಡಿಯಬಹುದು. ವಾಸ್ತವವಾಗಿ ಹ್ಯಾಕರ್ ಗಳು ನಿಮ್ಮ ಫೋನ್ ಅನ್ನು ಪ್ರವೇಶಿಸಿದಾಗ ಅಂದರೆ ಫೋನ್ ಅನ್ನು ಹ್ಯಾಕ್ ಮಾಡಿದಾಗ ಫೋನ್ ನಲ್ಲಿ ಈ ಕೆಲವು ಸಿಗ್ನಲ್ ಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ಇದ್ದಕ್ಕಿದ್ದಂತೆ ಮೊಬೈಲ್ ನಿಧಾನವಾಗುವುದು ಅಥವಾ ಸ್ವಿಚ್ ಆಫ್…
ಪಾವಗಡ: ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನಾದ್ಯಂತ ದಿನೇ ದಿನೇ ಹೆಚ್ಚುತ್ತಿರುವ ಡೆಂಗ್ಯೂ ಹಾಗೂ ವಿವಿಧ ರೀತಿಯ ಜ್ವರಗಳಿಂದ ಜನ ಪಟ್ಟಣದ ಸಾರ್ವಜನಿಕ ಆಸ್ಪಯತ್ರೆಯಲ್ಲಿ ಸಾಲುಗಟ್ಟಿ ಬೆಳಿಗ್ಗೆಯಿಂದ ಸಂಜೆವರೆಗೆ ಕಾದು ಚಿಕಿತ್ಸೆ ಪಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಹದಗೆಟ್ಟ ನೈರ್ಮಲ್ಯ ವ್ಯವಸ್ಥೆಯಿಂದ ತಾಲ್ಲೂಕಿನ ರೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲಿಬೆಟ್ಟ ತಾಂಡ ಗ್ರಾಮದಲ್ಲಿ ಲಂಬಾಣಿ ಸಮುದಾಯದ 80 ಕ್ಕೂ ಹೆಚ್ಚು ಮನೆಗಳಿದ್ದರೂ ಸಹ ಸಿ.ಸಿ. ರಸ್ತೆ., ಚರಂಡಿ,ಬೀದಿ ದೀಪಗಳ ಭಾಗ್ಯವಂತೂ ಇಲ್ಲವೇ ಇಲ್ಲ ಇಲ್ಲಿಯ ಗ್ರಾಮಸ್ಥರು ಸಂಜೆಯಾದರೆ ಸಾಕು ಕತ್ತಲಲ್ಲೆ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದಲ್ಲದೇ ಮಳೆಗಾಲದಲ್ಲಿ ಕಲುಷಿತ ವಾತಾವರಣ ಸೃಷ್ಟಿಯಾಗಿದ್ದು ಎಲ್ಲೆಂದರಲ್ಲಿ ಚರಂಡಿ ನೀರು, ಮಳೆ ನೀರು ನಿಂತು ಫಾರ್ತೇನಿಯಂ ಗಿಡಗಳು ಬೆಳೆದು ಸೊಳ್ಳೆಗಳು ಉತ್ಪತ್ತಿಯಾಗಿ ಜನ ಡೆಂಘೀ ಭೀತಿಯಲ್ಲಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತಿಪಟೂರು: ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಕುಪ್ಪಾಳು ಗ್ರಾಮ ಪಂಚಾಯಿತಿಗೆ ಅಧ್ಯಕ್ಷರ ಉಪಾಧ್ಯಕ್ಷರ ಚುನಾವಣೆ ನಡೆಯಿತು. ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಕೊಂಡ್ಲಿಘಟ್ಟ ಕ್ಷೇತ್ರದ ಸದಸ್ಯೆ ಗಾಯತ್ರಿ ಮೈಲಾರ ಸ್ವಾಮಿ ಹಾಗೂ ಉಪಾಧ್ಯಕ್ಷರಾಗಿ ಕರ ಡಾಳು ಕ್ಷೇತ್ರದ ಸದಸ್ಯೆ ಮಂಜುಳಾ ಸೋಮಶೇಖರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ವೇಳೆ ಮಾತನಾಡಿದ ನೂತನ ಅಧ್ಯಕ್ಷರು, ಉಪಾಧ್ಯಕ್ಷರು, ಕುಪ್ಪಾಳು ಗ್ರಾಮ ಪಂಚಾಯಿತಿಯನ್ನು ಮಾದರಿ ಪಂಚಾಯಿತಿಯನ್ನಾಗಿ ಮಾಡಲು ಶ್ರಮಿಸುತ್ತೇವೆ. ಗ್ರಾಮೀಣ ಜನತೆಯ ಕುಂದು ಕೊರತೆಗಳನ್ನು ಆಲಿಸಿ ಸರಿಪಡಿಸುವುದಾಗಿ ಹೇಳಿದರು. ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ನ್ಯಾಕೆನಹಳ್ಳಿ ಸುರೇಶ್ ಮಾತನಾಡಿ, ಈ ಪಂಚಾಯಿತಿಯ ಎಲ್ಲಾ ಸದಸ್ಯರು ಒಗ್ಗಟ್ಟಿನಿಂದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡಿದ್ದಾರೆ. ಗ್ರಾಮದ ಅಭಿವೃದ್ಧಿಗೆ ದುಡಿಯುತ್ತಾರೆ ಎಂದರು. ಮಾಜಿ ಅಧ್ಯಕ್ಷ ಮಹೇಶ್ ಮಾತನಾಡಿ, ಈ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಂಥಾಲಯ, ಶಾಲೆ, ಅಂಚೆ ಕಚೇರಿ, ರೈಲ್ವೆ ನಿಲ್ದಾಣ, ಆಸ್ಪತ್ರೆ, ಪಶು ಆಸ್ಪತ್ರೆಗಳು ಇವೆ, ನರೇಗಾ ಯೋಜನೆ ಮೂಲಕ ಶಾಲೆ, ಗ್ರಂಥಾಲಯ, ಶೌಚಾಲಯ ನಿರ್ಮಾಣ ಸೇರಿದಂತೆ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.ಮಾಜಿ…
ಶತಮಾನಗಳಿಂದ ಧೂಪದ್ರವ್ಯವು (ಊದುಬತ್ತಿ) ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಅವಿಭಾಜ್ಯ ಅಂಗವಾಗಿದೆ. ಧೂಪದ್ರವ್ಯದ ಪರಿಮಳವನ್ನು ಧಾರ್ಮಿಕ ಸಮಾರಂಭಗಳು ಮತ್ತು ದೈನಂದಿನ ದಿನಚರಿಗಳ ವಾತಾವರಣವನ್ನು ಹೆಚ್ಚಿಸಲು ಬಳಸಲಾಗುತ್ತದೆ. ವಾಸ್ತವವಾಗಿ, ಏರ್ ಫ್ರೆಶನರ್ ಗಳು ಮತ್ತು ಪರಿಮಳಯುಕ್ತ ಮೇಣದಬತ್ತಿಗಳ ಆಗಮನದ ಹೊರತಾಗಿಯೂ, ಧೂಪದ್ರವ್ಯ ಕಡ್ಡಿಗಳನ್ನು ಆಧುನಿಕ ಭಾರತದಲ್ಲಿ ಇನ್ನೂ ವ್ಯಾಪಕವಾಗಿ ಬಳಸಲಾಗುತ್ತಿದೆ. ಆದಾಗ್ಯೂ, ಧೂಪದ್ರವ್ಯದ ಕಡ್ಡಿಗಳ ಹೆಚ್ಚಿದ ಜನಪ್ರಿಯತೆಯು ಅವುಗಳ ಸಂಭಾವ್ಯ ಅಪಾಯಗಳ ಬಗ್ಗೆಯೂ ಗಮನ ಸೆಳೆಯುತ್ತಿದೆ. ತಪ್ಪಾಗಿ ಬಳಸಿದಾಗ, ಅದು ಆರೋಗ್ಯ ಮತ್ತು ಸುರಕ್ಷತೆಗೆ ಗಮನಾರ್ಹ ಅಪಾಯವನ್ನು ಉಂಟುಮಾಡಬಹುದು. ಅವುಗಳ ಸುರಕ್ಷಿತ ಬಳಕೆಯನ್ನು ಖಚಿತಪಡಿಸಿಕೊಳ್ಳಲು ಅಗರಬತ್ತಿಗಳನ್ನು ಬಳಸುವುದರಲ್ಲಿ ಮಾಡಬೇಕಾದ ಮತ್ತು ಮಾಡಬಾರದ ವಿಷಯಗಳನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ಪೂಜೆಯ ಸಮಯದಲ್ಲಿ ಎಷ್ಟು ಅಗರಬತ್ತಿಗಳನ್ನು ಬೆಳಗಿಸಬೇಕು? ಶಿವನಿಗೆ: 3 ಅಗರಬತ್ತಿಗಳು ವಿಷ್ಣುವಿಗೆ: 1 ಅಗರಬತ್ತಿ ಲಕ್ಷ್ಮಿ ದೇವಿಗೆ: 1 ಅಗರಬತ್ತಿ ಗಣೇಶನಿಗೆ: 5 ಅಗರಬತ್ತಿಗಳು ಕಾಲ–ಭೈರವರಿಗೆ: 8 ಅಗರಬತ್ತಿಗಳು ಕಾಳಿ ದೇವಿಗೆ: 8 ಅಗರಬತ್ತಿಗಳು ದುರ್ಗಾಮಾತೆಗೆ: 5 ಅಥವಾ 9 ಅಗರಬತ್ತಿಗಳು ಹನುಮಂತನಿಗೆ: 6…
ಗಾಳಿಪಟ, ಗಣೇಶ ಮತ್ತೆ ಬಂದ, ಮನಸಾರೆ, ಕೃಷ್ಣ ನೀ ಲೇಟಾಗಿ ಬಾರೋ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಸುಂದರಿ ನೀತು ಇದೀಗ ಟಾರೋಕಾರ್ಟ್ ರೀಡಿಂಗ್, ಹೀಲಿಂಗ್, ಷಾಮನಿಸಂ ಸೇರಿದಂತೆ ಹಲವು ದೊಡ್ಡ ವಿದ್ಯೆಗಳನ್ನು ಕಲಿಯುತ್ತಿದ್ದಾರೆ. ಈ ವಿದ್ಯೆಯಿಂದ ತಮ್ಮ ಜೀವನದಲ್ಲಿ ನಡೆಯುತ್ತಿರುವ ಘಟನೆ ಮಾತ್ರವಲ್ಲ ಇನ್ನಿತರರಿಗೂ ಸಹಾಯ ಮಾಡುತ್ತಿದ್ದಾರೆ.’ತಂದೆ ತೀರಿಕೊಂಡು ಒಂದು ವರ್ಷ ಆಮೇಲೆ ನಿದ್ರೆಯಲ್ಲಿ ಏನೋ ಕಪ್ಪು ಕಾಣಿಸುತ್ತಿದೆ ನಾನು ಗಾಬರಿ ಆಗುತ್ತಿದ್ದೀನಿ ಉಸಿರು ಗಟ್ಟುತ್ತಿದೆ. ಮಲಗಿ 10 ನಿಮಿಷಕ್ಕೆ ಈ ರೀತಿ ಆಗುತ್ತಿತ್ತು, ಇದನ್ನು ಮತ್ತೊಬ್ಬರ ಜೊತೆ ಚರ್ಚೆ ಮಾಡಿದರೆ ಭ್ರಮೆ ಎನ್ನುತ್ತಿದ್ದರು. ಈ ಘಟನೆ ಬಗ್ಗೆ ಪ್ರಾಣಿಕ್ ಹೀಲರ್ ಜೊತೆ ಮಾತನಾಡಿದ ಮೇಲೆ ತಿಳಿಯಿತು. ಆ ಕಪ್ಪು ನನ್ನ ತಂದೆ ಅವರು ಸತ್ತ ಮೇಲೆ ಮುಕ್ತಿ ಸಿಕ್ಕಿಲ್ಲ ಎಂದು ತಿಳಿಯಿತು. ಗುರುವಾಯುರ್ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿದರೆ ಒಳ್ಳೆಯದಾಗುತ್ತದೆ ಎಂದರು. ಅಲ್ಲಿ ಪೂಜೆ ಮುಗಿಸಿದ ಮೇಲೆ ಮತ್ತೆ ಕಪ್ಪು ಕಾಣಿಸಿಕೊಳ್ಳಲಿಲ್ಲ. ಯಾವಾಗ ಕಪ್ಪು ಕಾಣಿಸಿಕೊಳ್ಳುವುದು ಸ್ಟಾಪ್ ಆಯ್ತು…