Subscribe to Updates
Get the latest creative news from FooBar about art, design and business.
- ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
- ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
- ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ
- ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ
- ತಮಿಳುನಾಡಿಗೆ ನೀರು ಹರಿಸುವ ಆದೇಶಕ್ಕೆ ಸಂಘಟನೆಗಳ ಆಕ್ರೋಶ: ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಒತ್ತಾಯ
- ಸರಗೂರು: ಕೊಟ್ಟಿಗೆಗೆ ನುಗ್ಗಿ ಕಾಡು ಪ್ರಾಣಿ ದಾಳಿ: 6 ಕುರಿ ಬಲಿ, 12 ಕುರಿಗಳಿಗೆ ಗಂಭೀರ ಗಾಯ
- ಸರಗೂರು: ಮೂರನೇ ಆಷಾಢ ಶುಕ್ರವಾರ -– ವಾಹನ ಚಾಲಕರ ಸಂಘದಿಂದ ವಿಶೇಷ ಪೂಜೆ ಹಾಗೂ ಖಾಕಿ ಸಮವಸ್ತ್ರ ವಿತರಣೆ
- ಔರಾದ್: ಜೈ ಕಿಸಾನ್ ಶಾಲೆ ಶಿಕ್ಷಕ, ಬಿಎಲ್ ಒ ಮಲ್ಲಿಕಾರ್ಜುನ ಪಿಟ್ರೆ ನಿಧನ
Author: admin
ತಮ್ಮ ಬರ್ತ್ಡೇ ದಿನ ತಮ್ಮ ಮನೆಯ ಬಳಿಗೆ ಬರಬೇಡಿ ಎಂದು ಫ್ಯಾನ್ಸ್ ಗೆ ಮನವಿ ಮಾಡಲು ಸುದ್ದಿಗೋಷ್ಠಿ ಮಾಡಿದ್ದ ನಟ ಕಿಚ್ಚ ಸುದೀಪ್ ಅವರು ಈಗ ದರ್ಶನ್ ವಿಚಾರವಾಗಿಯೂ ರಿಯಾಕ್ಟ್ ಮಾಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಇದ್ದ ಫೋಟೋ ವೈರಲ್ ಆದ ನಂತರ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ನಾನು ಮೊದಲಿನಿಂದ ಮಾತನಾಡಿಕೊಂಡಿದ್ದರೆ ನಾನು ನಿಜವಾಗಲೂ ದರ್ಶನ್ ಅವರನ್ನು ಹೋಗಿ ಮಾತನಾಡಿಸುತ್ತಿದ್ದೆ. ನಾವಿಬ್ಬರೂ ಸರಿಯಿಲ್ಲ. ನಾಟಕೀಯವಾಗಿ ಇರೋಕೆ ಬರಲ್ಲ. ನಮ್ಮ ಇಬ್ಬರ ಟೇಸ್ಟ್ .. ರೂಟ್ ಎಲ್ಲ ಬೇರೆ ಬೇರೆ ಎಂದು ಹೇಳಿದ್ದಾರೆ. ಅವರಿಗೆ ಪಬ್ಲಿಕ್ ನಲ್ಲಿ ಅವಮಾನ ಆಗಿದ್ದಾಗ ನಾನು ಟ್ವೀಟ್ ಮಾಡಿದೆ. ಅದು ನನ್ನ ಕರ್ತವ್ಯ. ನನ್ನ ಜವಾಬ್ದಾರಿ ನನ್ನ ಮಗಳು. ಇನ್ನೊಬ್ಬರನ್ನು ಸರಿ ಮಾಡೋ ಶಕ್ತಿ ಇಲ್ಲ. ರೇಣುಕಾಸ್ವಾಮಿ ಕುಟುಂಬದ ನೋವು ಅವರಿಗೆ ಗೊತ್ತು ಎಂದು ಹೇಳಿದ್ದಾರೆ. ನಾನು ಕೂಡಾ…
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಸದ್ಯ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿದ್ದಾರೆ. ದರ್ಶನ್ ಕನ್ನಡಕ್ಕೆ ಸಿಕ್ಕಿದ್ದ ಸೂಪರ್ ಸ್ಟಾರ್. 60ಕ್ಕು ಹೆಚ್ಚು ಸಿನಿಮಾಗಳಲ್ಲಿ ನಟಿಸಿರೋ ಮಾಸ್ ಹೀರೋ.. ಆದ್ರೆ ಆ ಒಂದು ಕೊಲೆ ದರ್ಶನ್ ಬಣ್ಣದ ಭವಿಷ್ಯವನ್ನೇ ಮುಗಿಸಿ ಬಿಡ್ತಾ? ಇಲ್ಲೊಬ್ಬ ಜ್ಯೋತಿಷಿ ದರ್ಶನ್ ಮುಂದಿನ ಜೀವನದ ಬಗ್ಗೆ ಜ್ಯೋತಿಷ್ಯ ನುಡಿದಿದ್ದಾರೆ. ನಟ ದರ್ಶನ್ ಗೆ ಕೆಟ್ಟ ಸಮಯ. ಕೊಲೆ ಆರೋಪದ ಸುಳಿಗೆ ಸಿಕ್ಕಿ ಒದ್ದಾಡುತ್ತಿರುವ ದರ್ಶನ್ ಗೆ ಹೇಗಾದ್ರು ಮಾಡಿ ಹೊರ ಬರಬೇಕು ಅನ್ನೋ ಹಂಬಲ, ಆದ್ರೆ ಅದಕ್ಕೆ ಸದ್ಯಕ್ಕೆ ಸರಿಯಾದ ಸಮಯ ಇಲ್ವಂತೆ. ದರ್ಶನ್ ಜೀವನದ ಸರಿಯಾದ ಟೈಂ ಶುರುವಾಗೋದು 2027ಕ್ಕೆ ಅಂತೆ. ಅಲ್ಲಿವರೆಗೂ ದರ್ಶನ್ ಜೈಲಿನಿಂದ ಹೊರಬರಲ್ವಾ ಅಂತ ಚಿಂತೆ ಬೇಡ, ಜೈಲಿನಿಂದ ಹೊರ ಬಂದ್ರೂ ಈ ಕೊಲೆ ಕೇಸ್ ಸಿಕ್ಕಾಪಟ್ಟೆ ಸ್ಟ್ರಾಂಗ್ ಆಗಿ ಟಾರ್ಚರ್ ಮಾಡುತ್ತೆ ಅಂತ ಕಾನೂನು ತಜ್ಞರು ಹೇಳುತ್ತಿದ್ದಾರೆ. ಇದಕ್ಕೆ ಸರಿಯಾಗಿ ಜೋತಿಷ್ಯಿ ಒಬ್ಬರು, ದರ್ಶನ್‌ಗೆ ರೈಟ್ ಟೈಂ ಬರೋದು 2027ಕ್ಕೆ…
ಖಾಸಗಿ ಸ್ಥಳಕ್ಕೆ ಹೋಗಿ ಅಲ್ಲಿಯೇ ಉಳಿದು ತಮ್ಮ ಆಪ್ತರ ಜೊತೆ ಸಮಯ ಕಳೆಯಬೇಕೆಂದರೆ OYO ರೂಮ್ ಗಳು ದೇಶಾದ್ಯಂತ ಬಹಳ ಜನಪ್ರಿಯವಾಗಿದೆ. ಜೋಡಿಗಳಿಗೆ ಪಕ್ಕಾ ನೆನಪಿಗೆ ಬರೋದೇ ಓಯೋ ರೂಮ್ಸ್. ಆದರೆ ಈ ರೂಮ್ ಗಳಿಗೆ ಓಯೋ ರೂಮ್ಸ್ ಎಂಬ ಹೆಸರು ಬಂದಿದ್ದು ಹೇಗೆ ಗೊತ್ತಾ? OYO ಎಂದರೆ “ಆನ್ ಯುವರ್ ಓನ್ ರೂಮ್ಸ್” ಎಂದು ಅರ್ಥ. ಅಂದರೆ ನೀವು ಒಮ್ಮೆ ಈ ರೂಂಗೆ ಭೇಟಿ ನೀಡಿದ ನಂತರ ಅದು ನಿಮ್ಮ ಮನೆ ಎಂದೇ ಭಾವಿಸಿಕೊಳ್ಳಿ ಎಂದು. OYO ಭಾರತದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದ್ದು, ಜಾಗತಿಕವಾಗಿ ಬ್ರಾಂಚ್ ಅನ್ನು ಹೊಂದಿದೆ. OYO ನಲ್ಲಿ ಕೊಠಡಿಯನ್ನು ಕಾಯ್ದಿರಿಸಲು ಹೆಚ್ಚಿನ ದಾಖಲೆಗಳನ್ನು ನೀಡುವ ಅಗತ್ಯವಿರುವುದಿಲ್ಲ ಅವಿವಾಹಿತ ದಂಪತಿಗಳಿಗೆ ಪ್ರಾಥಮಿಕ ಕಾಳಜಿಯೆಂದರೆ ಅವರ ವಾಸ್ತವ್ಯದ ಸಮಯದಲ್ಲಿ ಗೌಪ್ಯತೆ ಮತ್ತು ಭದ್ರತೆ. OYO ಕೊಠಡಿಗಳು ಸಾಮಾನ್ಯವಾಗಿ ಸುರಕ್ಷಿತ ಪರಿಸರವನ್ನು ಖಚಿತಪಡಿಸಿಕೊಳ್ಳಲು ವಿವೇಚನಾಯುಕ್ತ ಚೆಕ್–ಇನ್‌ಗಳು ಮತ್ತು ಅತಿಥಿ ಗೌಪ್ಯತೆಗೆ ಗೌರವದಂತಹ ಕ್ರಮಗಳನ್ನು ಅನುಸರಿಸುತ್ತವೆ. OYO ಮಾಲೀಕ ರಿತೇಶ್ ಅಗರ್ವಾಲ್…
ತುಮಕೂರು: ಪಠ್ಯಕ್ಕೆ ಸಂಬಂಧಿಸಿದ ಉತ್ತಮ ವಿಚಾರ ಸೇರಿದಂತೆ ಸದುದ್ದೇಶಗಳಿಗೆ ಮಾತ್ರ ಮೊಬೈಲ್ ಬಳಕೆ ಮಾಡಬೇಕೆಂದು ಮಕ್ಕಳಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ನ್ಯಾಯಾಧೀಶರಾದ ನೂರುನ್ನೀಸಾ ಕರೆ ನೀಡಿದರು. ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯ, ತುಮಕೂರು ತಾಲ್ಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ತುಮಕೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆ ಹಾಗೂ ಊರುಕೆರೆ ಗ್ರಾಮ ಪಂಚಾಯಿತಿ ಸಹಯೋಗದಲ್ಲಿಂದು ಊರುಕೆರೆ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ–2024ರ ಪ್ರಯುಕ್ತ ಹಮ್ಮಿಕೊಂಡಿದ್ದ ತಾಯಿಯ ಹೆಸರಿನಲ್ಲಿ ಗಿಡನೆಡುವ ಮತ್ತು ಪ್ರತಿಜ್ಞಾವಿಧಿ ಬೋಧಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಾಲಾ-ಕಾಲೇಜಿನ ಮಕ್ಕಳಿಗೆ ಪೋಕ್ಸೋ ಕಾಯ್ದೆ, ಜೀವನದ ಮೌಲ್ಯಗಳ ಬಗ್ಗೆ ಶಿಕ್ಷಕರು/ಪೋಷಕರು ತಿಳುವಳಿಕೆ ನೀಡಬೇಕು ಎಂದು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಂ.ಎಲ್. ಚೇತನ್‌ಕುಮಾರ್ ಮಾತನಾಡಿ, ಗರ್ಭಿಣಿ, ಬಾಣಂತಿ ಹಾಗೂ ಕಿಶೋರಿಯರು ಪೌಷ್ಟಿಕಯುಕ್ತ ಆಹಾರವನ್ನು ಸೇವಿಸಬೇಕು ಎಂದು ತಿಳಿಸಿದರು. ತಾಲ್ಲೂಕು ಪಂಚಾಯಿತಿ…
ಬೆಂಗಳೂರು: ರಾಜ್ಯದ ಜನರ ಆಶೀರ್ವಾದ ಪಡೆದು ಅಸ್ಥಿತ್ವಕ್ಕೆ ಬಂದಿರುವ ಪ್ರಜಾತಂತ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ–ಜೆಡಿಎಸ್ ಪಕ್ಷಗಳು ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿ ಹಾಗೂ ರಾಜ್ಯಪಾಲರ ನಡೆಯನ್ನು ಖಂಡಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ನೇತೃತ್ವದಲ್ಲಿ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಲಾಯಿತು. ಹೆಚ್.ಡಿ.ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಜನಾರ್ಧನಾ ರೆಡ್ಡಿ, ಶಶಿಕಲಾ ಜೊಲ್ಲೆ ಅವರ ವಿರುದ್ಧ ಪ್ರಕರಣಗಳ ತನಿಖೆಗೆ ರಾಜ್ಯಪಾಲರು ಅನುಮತಿ ನೀಡದೆ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಮುಡಾ ವಿಚಾರದಲ್ಲಿ ಮುಖ್ಯಮಂತ್ರಿ ಅವರ ವಿರುದ್ಧದ ನಿರಾಧಾರ ಆರೋಪಗಳನ್ನು ಕೂಲಂಕುಶವಾಗಿ ಪರಿಶೀಲಿಸದೇ, ಏಕಾಏಕಿಯಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಒಕ್ಕೊರಲಿನಿಂದ ಖಂಡಿಸಲಾಯಿತು. ಬಳಿಕ ರಾಜಭವನದವರೆಗೆ ಕಾಲ್ನಡಿಗೆ ಜಾಥ ನಡೆಸಿ, ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್, ಡಾ.ಹೆಚ್.ಸಿ.ಮಹದೇವಪ್ಪ, ಕೃಷ್ಣಬೈರೇಗೌಡ, ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ, ಡಾ.ಶರಣಪ್ರಕಾಶ್ ಪಾಟೀಲ್, ಎಸ್.ಎಸ್.ಮಲ್ಲಿಕಾರ್ಜುನ್, ಭೈರತಿ ಸುರೇಶ್, ಜಮೀರ್ ಅಹ್ಮದ್, ಎನ್.ಎಸ್.ಬೋಸರಾಜ್, ಸುಧಾಕರ್, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮಾಜಿ…
ರೈಲಿನಲ್ಲಿ ಮದ್ಯ ಒಯ್ಯಲು ಅವಕಾಶವಿದೆಯಾ, ಇದ್ದರೆ ಎಷ್ಟು ಬಾಟಲಿ ಒಯ್ಯಬಹುದು? 1989ರ ರೈಲು ಆಯಕ್ಟ್ ಹೇಳುವುದೇನು? ಈ ನಿಯಮ ಈಗಲೂ ಇದೆಯಾ? ಇಲ್ಲಿದೆ ವಿವರ.ಕಿ ರೈಲಿನಲ್ಲಿ ಮದ್ಯ ಒಯ್ಯಲು ಅವಕಾಶವಿದೆಯಾ ಅನ್ನೋದು ಹಲವರ ಪ್ರಶ್ನೆ. ಹಲವರು 1989ರ ಭಾರತೀಯ ರೈಲ್ವೇ ಆ್ಯಕ್ಟ್ ಮುಂದಿಟ್ಟು ರೈಲಿನಲ್ಲಿ ಗರಿಷ್ಠ 2 ಲೀಟರ್ ಮದ್ಯ ಒಯ್ಯಲು ಅವಕಾಶವಿದೆ ಅನ್ನೋ ವಾದ ಮುಂದಿಡುತ್ತಾರೆ. ಆದರೆ ನಿಜಕ್ಕೂ 2 ಲೀಟರ್ ಮದ್ಯ ಒಯ್ಯಲು ಅವಕಾಶವಿದೆಯಾ? ಭಾರತೀಯ ರೈಲಿನಲ್ಲಿ ಮದ್ಯ ಒಯ್ಯಲು ಅವಕಾಶವಿಲ್ಲ. ಮದ್ಯಕ್ಕೆ ಬೆಂಕಿ ಹೊತ್ತಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ತೊಟ್ಟು ಹನಿ ಮದ್ಯವನ್ನು ಭಾರೀಯ ರೈಲಿನಲ್ಲಿ ಒಯ್ಯಲು ಅವಕಾಶವಿಲ್ಲ. ಸೀಲ್ಡ್ ಬಾಟಲ್ ಇದ್ದರೂ ಭಾರತೀಯ ರೈಲಿನಲ್ಲಿ ಪ್ರಯಾಣಿಕರು ಮದ್ಯ ಒಯ್ಯಲು ಅವಕಾಶವಿಲ್ಲ. ನಿಯಮ ಉಲ್ಲಂಘಿಸಿದರೆ ದುಬಾರಿ ದಂಡ ಹಾಗೂ ಜೈಲು ಶಿಕ್ಷೆಗೂ ಗುರಿಯಾಗುವ ಸಾಧ್ಯತೆ ಇದೆ.ಮದ್ಯದ ಬಾಟಲಿ ಅಥವಾ ಮದ್ಯದ ಜೊತೆ ರೈಲಿನಲ್ಲಿ ಸಿಕ್ಕಿಬಿದ್ದರೆ ಕನಿಷ್ಠ 1,000 ರೂಪಾಯಿ ದಂಡ, ಗರಿಷ್ಠ 3 ವರ್ಷದ ವರೆಗೆ ಜೈಲು…
ರಾಜ್ಯದಲ್ಲಿ ಕೃಷಿ ಭೂಮಿ ಖರೀದಿಗೆ ಸಂಬಂಧಿಸಿದಂತೆ ಹೊಸ ನಿಯಮ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಶೀಘ್ರವೇ ಭೂ ಸುಧಾಕರಣೆ ಕಾಯ್ದೆಗೆ ತಿದ್ದುಪಡಿ ಮಾಡಲು ನಿರ್ಧರಿಸಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಭೂ ಸುಧಾರಣೆಗೆ ಮರು ತಿದ್ದುಪಡಿ ತಂದು ಉದ್ಯಮಿಗಳ ಪಾಲಾಗುತ್ತಿರುವ ಕೃಷಿಕರ ಜಮೀನುಗಳನ್ನು ಮರಳಿ ಕೃಷಿಕರಿಗೆ ಮಾತ್ರ ಸೀಮಿತಗೊಳಿಸಲಾಗುವುದು. ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಿ ಅಸಂಖ್ಯಾತ ಜನರಿಗೆ ಭೂಮಿಯ ಮಾಲೀಕತ್ವ ನೀಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಭೂಮಿಯ ಹಕ್ಕನ್ನು ಖಾತ್ರಿಪಡಿಸಲು 79 ಎ ಮತ್ತು ಬಿ ಗೆ ಮಾಡಿರುವ ತಿದ್ದುಪಡಿಯನ್ನು ಮತ್ತೆ ಸರಿಪಡಿಸಲಾಗುವುದು ಎಂದು ಹೇಳಿದ್ದಾರೆ. ಸ್ವಾತಂತ್ರ್ಯ ಬಂದು 77 ವರ್ಷಗಳು ಕಳೆದರೂ ಇನ್ನೂ ನಮ್ಮಲ್ಲಿ ಸಾಮಾಜಿಕ ಸಮಾನತೆ ಸಾಧ್ಯವಾಗಿಲ್ಲ. ಸಮಾನವಾಗಿ ಸಂಪತ್ತು ಹಂಚಿಕೆ ನಮಗೆ ಸಾಧ್ಯವಾಗಿಲ್ಲ. ವ್ಯಕ್ತಿಯನ್ನು ಜಾತಿ ಆಧಾರದಲ್ಲಿ ಗುರುತಿಸುವಂತಹ ವ್ಯವಸ್ಥೆ ಇನ್ನೂ ನಮ್ಮಲ್ಲಿ ಇದೆ. ಜನರನ್ನು ಅವರ ಪ್ರತಿಭೆ ಮೇಲೆ, ವ್ಯಕ್ತಿತ್ವದ ಮೇಲೆ ಗುರುತಿಸದೆ ಜಾತಿ ಆಧಾರದಲ್ಲಿ ಗುರುತಿಸಲಾಗುತ್ತಿದೆ.…
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರಾಗೌಡ ಜೈಲು ಸೇರಿದ್ದಾರೆ. ಇತ್ತ ಪವಿತ್ರಾಗೌಡ ಮನೆಯಲ್ಲಿದ್ದ ಶ್ವಾನಗಳು ಸರಿಯಾದ ಆರೈಕೆಯಿಲ್ಲದೇ ಸೊರಗಿದ್ದವು. ಪವಿತ್ರಾ ಮನೆಯಲ್ಲಿದ್ದ ನಾಯಿಗಳನ್ನು ಪವನ್ ಎಂಬಾತ ನೋಡಿಕೊಳ್ಳುತ್ತಿದ್ದ. ಆದರೆ ಆತ ಕೂಡ ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದರಿಂದ ನಾಯಿಗಳು ಅನಾಥವಾಗಿವೆ. ಈ ವಿಷಯ ತಿಳಿಯುತ್ತಿದ್ದಂತೆ ಪೀಪಲ್ಸ್ ಫಾರ್ ಅನಿಮಲ್ಸ್ ಸಂಸ್ಥೆಯ ಹರೀಶ್ ಹಾಗೂ ಲೀನಾ ಆರ್.ಆರ್.ನಗರ ಪೊಲೀಸರಿಗೆ ಹಾಗೂ ಪಶುಸಂಗೋಪನಾ ಇಲಾಖೆಯ ಗಮನಕ್ಕೆ ತಂದಿದ್ದರು. ಇದೀಗ ಅಧಿಕಾರಿಗಳ ನೆರವಿನಿಂದ ಪವಿತ್ರಾ ಗೌಡ ಮನೆಯಲ್ಲಿದ್ದ ಬುಲ್ ಡಾಗ್ ಹಾಗೂ ಬೆಲ್ಜಿಯನ್ ಮಾಲಿನೋಯಿಸ್ ತಳಿಯ ಶ್ವಾನಗಳನ್ನು ದರ್ಶನ್ ಮನೆಗೆ ಶಿಫ್ಟ್ ಮಾಡಲಾಗಿದೆ ಎಂದು ವರದಿಗಳಿಂದ ತಿಳಿದು ಬಂದಿದೆ. ಉಳಿದ ಮತ್ತೊಂದು ಶ್ವಾನವನ್ನು ಪವಿತ್ರಾ ಗೌಡ ಸ್ನೇಹಿತರು ತೆಗೆದುಕೊಂಡು ಹೋಗಿದ್ದು, ಆರೈಕೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ರಾಂಚಿ: ಜಾರ್ಖಂಡ್‌ನಲ್ಲಿ ಅಬಕಾರಿ ಇಲಾಖೆಯ ಕಾನ್ ಸ್ಟೆಬಲ್ ನೇಮಕಾತಿಯ ದೈಹಿಕ ಪರೀಕ್ಷೆ ವೇಳೆ ಮೂರ್ಛೆ ಹೋಗಿ ಚಿಕಿತ್ಸೆ ಪಡೆಯುತ್ತಿದ್ದ 25 ಅಭ್ಯರ್ಥಿಗಳ ಪೈಕಿ ಮೂವರು ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ. ಪಲಮು ಜಿಲ್ಲೆಯ ಮೇದಿನಿನಗರದಲ್ಲಿರುವ ಮೇದಿನಿರಾಯ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಅಭ್ಯರ್ಥಿಗಳು ಮೃತಪಟ್ಟಿದ್ದರೆ, ಮತ್ತೊಬ್ಬ ಅಭ್ಯರ್ಥಿ ರಾಂಚಿಯ ‘ರಿಮ್ಸ್’ನಲ್ಲಿ ಸಾವಿಗೀಡಾಗಿದ್ದಾರೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಮಣಿಭೂಷಣ್ ಪ್ರಸಾದ್ ತಿಳಿಸಿದ್ದಾರೆ. ಅಮರೇಶ್ ಕುಮಾರ್ (20), ಅರುಣ್ ಕುಮಾರ್ (25) ಮತ್ತು ಪ್ರದೀಪ್ ಕುಮಾರ್ (25) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪಲಾಮು ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯ ಕಾನ್‌ಸ್ಟೆಬಲ್ ನೇಮಕಾತಿಯ ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಿದ್ದ 100ಕ್ಕೂ ಅಭ್ಯರ್ಥಿಗಳು ಮೂರ್ಛೆ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೆ.9ರವರೆಗೆ ನೇಮಕಾತಿ ಪ್ರಕ್ರಿಯೆ ಮುಂದುವರಿಯಲಿದೆ. ಆದರೆ, ದೈಹಿಕ ಪರೀಕ್ಷೆಯನ್ನು 9 ಗಂಟೆ ಬದಲು ಬೆಳಿಗ್ಗೆ 4:30ರಿಂದ ನಡೆಸಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ನಡುವೆ ಕಾನ್ ಸ್ಟೆಬಲ್ ಅಭ್ಯರ್ಥಿಗಳು ಮೃತಪಟ್ಟಿರುವ ಬಗ್ಗೆ…
ದಾವಣಗೆರೆ: ದಾವಣಗೆರೆಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣ ಸಂಬಂಧ ಅಸ್ವಸ್ಥರಾದವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈವರೆಗೆ 52 ಜನರು ತೀವ್ರ ಅಸ್ವಸ್ಥತೆಯಿಂದ ವಿವಿಧ ಆಸ್ಪತ್ರೆಗೆಗಳಿಗೆ ದಾಖಲಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡವರ ಸಂಖ್ಯೆ ಹೆಚ್ಚಿದ್ದು, ವಾಂತಿ-ಬೇಧಿಯಿಂದ ಜನರು ಬಳಲುತ್ತಿದ್ದಾರೆ. 52 ಜನರನ್ನು ಚನ್ನಗಿರಿ, ಭದ್ರಾವತಿ, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿಗಳು ಜೋಳದಾಳ್ ಗ್ರಾಮದಲ್ಲಿಯೇ ಬೀಡುಬಿಟ್ಟಿದ್ದಾರೆ. ಸಧ್ಯ ಯಾವುದೇ ಪ್ರಾಣಾಪಾಯವಿಲ್ಲ ಎಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q