Author: admin

ಪೆರ್ನಾಜೆ: “ಸ್ವರಸಿಂಚನ” ಸಂಗೀತ ಶಾಲೆ ವಿಟ್ಲ ಮತ್ತು ಪಡಿಬಾಗಿಲು ಶಾಖೆಯ ವಿದ್ಯಾರ್ಥಿಗಳಿಂದ ಶ್ರೀ ಭಗವತಿ ದೇವಸ್ಥಾನ ಪೂಜಾ ಕಾರ್ಯಕ್ರಮದ ಪ್ರಯುಕ್ತ ಶ್ರೀ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ಆಗಸ್ಟ್ 25 ರಂದು ಭಕ್ತಿ ಗಾನ ಸಂಗೀತ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ದೇಗುಲದ ವ್ಯವಸ್ಥಾಪಕರಾದ ಕೇಶವ ಆರ್.ವಿ. ದೀಪ ಪ್ರಜ್ವಲನೆ ಮಾಡಿದರು. ಬಳಿಕ ಮಾತನಾಡಿದ ಅವರು, ಸಂಗೀತ ಶಿಕ್ಷಕಿಯ ಮಾರ್ಗದರ್ಶನದಲ್ಲಿ ಉತ್ತಮ ರೀತಿಯಲ್ಲಿ ವೈವಿಧ್ಯಮಯ ವಿನ್ಯಾಸದಲ್ಲಿ ಸುಂದರ ಹಾಡುಗಳ ಜೋಡಣೆಯಲ್ಲಿ ಪ್ರತಿಭೆಗಳು ಹೊರ ಹೊಮ್ಮುತಿರುವುದನ್ನು ಕಂಡಾಗ ಮನ ತುಂಬಿ ಬರುತ್ತದೆ. ಹಾಗೆ ಈ ವಿದ್ಯಾರ್ಥಿಗಳಿಗೆ ಮುಂದೆ ಉತ್ತಮ ಭವಿಷ್ಯ ಇದೆ ಎಂದು ಮೆಚ್ಚುಗೆಯ ನುಡಿಯನ್ನು ನುಡಿದರು. ವಿಠಲ ಬಾಲಿಕ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಕೆ.ಕೃಷ್ಣ ಭಟ್ , ಗೋಪಾಲಕೃಷ್ಣ ನಾಯಕ್ ಪಾಡಿಬಾಗಿಲು, ವಿಟ್ಲ ಸುಪ್ರ ಜೀತ್ ಐಟಿಐ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ರಘುರಾಮ ಶಾಸ್ತ್ರಿ ಕೋಡಂದೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು. ಸಿಂಚನ ಲಕ್ಷ್ಮಿ ಕೋಡಂದೂರು ಪ್ರಾರ್ಥನೆ ಮಾಡಿದರು. ಮುಖ್ಯ ಶಿಕ್ಷಕಿ ಸವಿತಾ ಕೋಡಂದೂರು ಸ್ವಾಗತಿಸಿದರು.…

Read More

ಪಾವಗಡ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿಗಳ ಕಾರ್ಯಾಲಯ ಪಾವಗಡ ಇದರ ವತಿಯಿಂದ ಹಮ್ಮಿಕೊಂಡಿದ್ದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಹಾಗೂ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಕೋಟಗುಡ್ಡ ಸಹನಾ ಶಾಲೆಯ P. ಗೀತಾ ಲಕ್ಷ್ಮಿ ಹಾಗೂ ತನುಜಾ ಶ್ರೀ. E  ಇವರು ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿಜೇತರನ್ನು ಹಾಗೂ ಮಾರ್ಗದರ್ಶಿ ಶಿಕ್ಷಕರಾದ ತಿಪ್ಪೇಸ್ವಾಮಿ ರವರನ್ನು ECO ರಂಗನಾಥ್, ವಿಜ್ಞಾನ ಸಂಘದ ಕಟ್ಟಾ ನರಸಿಂಹ ಮೂರ್ತಿ, ಹನುಮಂತರೆಡ್ಡಿ ಹಾಗೂ ಸಹನಾ ಶಾಲಾ ಆಡಳಿತ ಅಧಿಕಾರಿಗಳಾದ ಎನ್. ಶ್ರೀನಿವಾಸ್ ರವರು ಅಭಿನಂದಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಹೊಸಪೇಟೆ/ವಿಜಯನಗರ: ಭಾರತ ಸರ್ಕಾರದ 16ನೇ ಕೇಂದ್ರ ಹಣಕಾಸು ಆಯೋಗದ ನಿಯೋಗವು ಐತಿಹಾಸಿಕ ವಿಜಯನಗರ ಜಿಲ್ಲೆಗೆ ಆಗಸ್ಟ್ 30ರಂದು ಭೇಟಿ ನೀಡಿತು. ಪೂರ್ವ ನಿಗದಿಯಂತೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹೊರಟು ಸಂಜೆ ವೇಳೆಗೆ ತೋರಣಗಲ್ಲಿಗೆ ಆಗಮಿಸಿದ ನಿಯೋಗದಲ್ಲಿನ ಅಧ್ಯಕ್ಷರು ಮತ್ತು ಸದಸ್ಯರಿಗೆ ವಿಜಯನಗರ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆಯಿಂದ ಆತ್ಮೀಯವಾಗಿ ಸ್ವಾಗತ ಕೋರಲಾಯಿತು. ರಾಜ್ಯ ಸರ್ಕಾರದ ಪರವಾಗಿ ಆರ್ಥಿಕ ಇಲಾಖೆಯ  ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ.ಅತಿಕ್, ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು ಬಿ.ಎಲ್., ಜಿಪಂ ಸಿಇಓ ನೊಂಗ್ಜಾಯ್ ಮೊಹಮದ್ ಅಲಿ ಅಕ್ರಮ ಷಾಹ ಸೇರಿದಂತೆ ಇತರರು ನಿಯೋಗದಲ್ಲಿ ಹಿರಿಯ ಅಧಿಕಾರಿಗಳಿಗೆ ಹೂಗುಚ್ಛ ನೀಡಿ ಆತ್ಮೀಯವಾಗಿ ಬರ ಮಾಡಿಕೊಂಡರು. ಪುಳಕಿತರಾದರು: ತೋರಣಗಲ್ಲಿನ ಮೂಲಕ ರಸ್ತೆ ಮಾರ್ಗವಾಗಿ ವಿಶೇಷ ವಾಹನದ ಮೂಲಕ ವಿಜಯನಗರ ಜಿಲ್ಲೆಯ ಹೊಸಪೇಟೆಯ ಹಂಪಿಗೆ ಆಗಮಿಸುತ್ತಿದ್ದಂತೆ ನಿಯೋಗದಲ್ಲಿನ ಹಿರಿಯ ಅಧಿಕಾರಿಗಳು ಪುಳಕಿತರಾದರು. ವಿಜಯವಿಠ್ಠಲ ದೇವಾಲಯಕ್ಕೆ ಭೇಟಿ: ಹಂಪಿಗೆ ಭೇಟಿ ನೀಡಿದ ಸಂದರ್ಭದಲ್ಲಿ…

Read More

ಬೆಂಗಳೂರು: ಕರಿಯ ಸಿನಿಮಾ ರೀರಿಲೀಸ್ ಸಂದರ್ಭದಲ್ಲಿ ಕೆಲವು ಅಭಿಮಾನಿಗಳು ಪುಂಡಾಟಿಕೆ ಮೆರೆದ ಘಟನೆ ನಡೆದಿದ್ದು, ಪೊಲೀಸರು ವಾರ್ನಿಂಗ್ ನೀಡಿದರೂ ಕೇಳದೇ ದುರ್ವರ್ತನೆ ತೋರಿದ ಘಟನೆ ನಡೆದಿದೆ. ಬೆಂಗಳೂರಿನ ಪ್ರಸನ್ನ ಚಿತ್ರಮಂದಿರದ ಬಳಿ ಈ ಘಟನೆ ನಡೆದಿದೆ.  ಉದ್ಧಟತನದ ವರ್ತನೆ ತೋರುತ್ತಿದ್ದವರಿಗೆ ಪೊಲೀಸರು ಮೈಕ್ ಹಿಡಿದು ವಾರ್ನಿಂಗ್ ನೀಡಿದರು. ನಿಮ್ಮಂತಹ ಅಭಿಮಾನಿಗಳಿಂದ ದರ್ಶನ್‌ ಗೆ ಕೆಟ್ಟ ಹೆಸರು ಬರುತ್ತಿದೆ. ನಿಮ್ಮಿಂದ ಇನ್ನೊಬ್ಬರಿಗೆ ತೊಂದರೆ ಆಗಬಾರದು ಎಂದು ಪೊಲೀಸರು ಬುದ್ಧಿ ಹೇಳಿದರೂ ಬಾಯಿಗೆ ಬಂದಂತೆ ನಿಂದಿಸುತ್ತಾ ಥೇಟರ್ ಬಾಗಿಲು ಹಾಕಿಕೊಂಡರು. ಈ ವೇಳೆ ಥಿಯೇಟರ್ ಬಾಗಿಲು ಓಪನ್ ಮಾಡಿ ಪೊಲೀಸರು ಮೂವರನ್ನು  ವಶಕ್ಕೆ ಪಡೆದರು. ಪೊಲೀಸರು ವಶಕ್ಕೆ  ಪಡೆದ ಬಳಿಕ ಪುಂಡಾಟಿಕೆ ಮೆರೆದ ಅಭಿಮಾನಿ ತಪ್ಪಾಯ್ತು ಅಂತಾ ಕ್ಷಮೆ ಕೇಳಿದ್ದಾರೆ ಅಂತ ವರದಿಯಾಗಿದೆ. ಇನ್ನೂ ಅಭಿಮಾನಿಗಳ ಅತಿರೇಕದ ವರ್ತನೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಸನ್ನ ಥೇಟರ್‌ ನಲ್ಲಿ ರಾತ್ರಿ 10:30ರ ಪ್ರದರ್ಶನವನ್ನು ಪೊಲೀಸರು ಕ್ಯಾನ್ಸಲ್ ಮಾಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ತುಮಕೂರು:  ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಯಾರು ಅಭ್ಯರ್ಥಿ ಆಗಲಿದ್ದಾರೆ ಎಂಬುದಲ್ಲ, ಅಂತಿಮವಾಗಿ  ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್ ಡಿ ಎ  ಅಭ್ಯರ್ಥಿ ಕಣದಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಕೇಂದ್ರ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರುಚನ್ನಪಟ್ಟಣದಲ್ಲಿ ಅಷ್ಟೇ ಅಲ್ಲ ಉಪಚುನಾವಣೆ ಜೊತೆಗೆ ಸಂಡೂರು, ಶಿಗ್ಗಾವಿ ಸೇರಿ ಮೂರು ಕಡೆ ಉಪಚುನಾವಣೆ ನಡೆಯಬೇಕಿದೆ.ಸಾಕಷ್ಟು ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ ಎಂದರು. ಬಿಜೆಪಿ ರಾಜ್ಯನಾಯಕರು, ನಮ್ಮ ಜೆಡಿಎಸ್ ರಾಜ್ಯ ನಾಯಕರು ಸೇರಿ ಚರ್ಚೆ ಮಾಡುತ್ತಿದ್ದಾರೆ. ಸಿ.ಪಿ ಯೋಗೇಶ್ವರ್ ಗೆ ಟಿಕೆಟ್ ವಿಚಾರದಲ್ಲಿ  ಸೂಕ್ತವಾದ ಸಂದರ್ಭದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು. ಚರ್ಚೆಗಳು ಆಗಬೇಕಾಗುತ್ತೆ. ಆಗ ಫಲಿತಾಂಶ ನಮ್ಮ ಪರ ಬರಲು ಸಾಧ್ಯ. ಅಂತಿಮವಾಗಿ ಎನ್ ಡಿಎ ಅಭ್ಯರ್ಥಿಯಾಗಿರುತ್ತೆ. ಜೆಡಿಎಸ್- ಬಿಜೆಪಿ ಚರ್ಚೆಯಿಲ್ಲ, ಒಟ್ಟಾಗಿದ್ದೇವೆ, ಒಗ್ಗಟ್ಟಾಗಿದ್ದೇವೆ. ಹಾಗಾಗಿ ಎನ್ ಡಿಎ ಅಭ್ಯರ್ಥಿ ಕಣದಲ್ಲಿ ಇರಲಿದ್ದಾರೆ ಎಂದರು. ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಜೆಡಿಎಸ್ ಗೆ ಹುಮ್ಮಸ್ಸು ಹೆಚ್ಚಿದೆ, ರಾಜ್ಯದ ಜನತೆ ಬಿಜೆಪಿ- ಜೆಡಿಎಸ್…

Read More

ಬೆಂಗಳೂರು: ಕೆನಡಾದ ಕೃಷಿ ಉತ್ಪನ್ನ ತಯಾರಿಕಾ ಪ್ರಮುಖ ಕಂಪನಿಯಾಗಿರುವ ವಿಟೆರಾ  ವಿಜಯಪುರ ಜಿಲ್ಲೆಯಲ್ಲಿ ಕೃಷಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು 250 ಕೋಟಿ ರೂ. ಮೊತ್ತದ ಬಂಡವಾಳ ಹೂಡಲಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ವಿಟೆರಾ ಕಂಪನಿಯ ಪ್ರತಿನಿಧಿಗಳ ಜತೆ ಸಚಿವರು ಇಲ್ಲಿನ ಖನಿಜ ಭವನದಲ್ಲಿ ನಡೆಸಿದ ಸಭೆಯಲ್ಲಿ ಈ ಬಂಡವಾಳ ಹೂಡಿಕೆ ನಿರ್ಧಾರ ಕೈಗೊಳ್ಳಲಾಗಿದೆ. ವಿಜಯಪುರ ಜಿಲ್ಲೆಯ ಕೃಷಿ ಸಮುದಾಯದ ಬಳಕೆಗೆ ಅತ್ಯಾಧುನಿಕ ಶೈತ್ಯಾಗಾರಗಳನ್ನು ನಿರ್ಮಿಸಿ ರೈತರು ಸುಗ್ಗಿಯ ನಂತರ ಎದುರಿಸುವ ನಷ್ಟ ತಗ್ಗಿಸಲು ಮತ್ತು ಕೃಷಿ ಉತ್ಪನ್ನಗಳ ಉತ್ಪಾದನೆ, ಪೂರೈಕೆ ಹಾಗೂ ಮಾರಾಟ ಪ್ರಕ್ರಿಯೆಯಲ್ಲಿ ದಕ್ಷತೆ ತರಲು ವಿಟೆರಾ ನೆರವಾಗಲಿದೆ. ವಿಟೆರಾ ಕಂಪನಿಯು ಸುಧಾರಿತ ಉತ್ಪಾದನಾ ತಂತ್ರಜ್ಞಾನ ಬಳಸಲಿದೆ. ರಾಜ್ಯದಲ್ಲಿ ಕೆನಡಾದ ಆಧುನಿಕ ಕೃಷಿ ತಂತ್ರಜ್ಞಾನ ಬಳಕೆ ಹಾಗೂ ಈ ಬಂಡವಾಳ ಹೂಡಿಕೆಯಿಂದ ಕೃಷಿ ಕ್ಷೇತ್ರದ ಉತ್ಪಾದನೆ ಹೆಚ್ಚಲಿದ್ದು, ಅದರಿಂದ ರಾಜ್ಯದ ಒಟ್ಟಾರೆ ಆರ್ಥಿಕತೆಗೂ ಉತ್ತೇಜನ ದೊರೆಯಲಿದೆ ಎಂದೂ ಸಚಿವರು ಹೇಳಿದ್ದಾರೆ. ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತೆ…

Read More

ಬೀದರ್: ಭಾರತೀಯ ವಾಯುಪಡೆ ಬೀದರನ  ಸೂರ್ಯಕಿರಣ ಏರೋಬ್ಯಾಟಿಕ್ ಟೀಂ ‌ನಿಂದ ಬೀದರ ಕೋಟೆಯ ಮೇಲೆ ಶುಕ್ರವಾರ ಆಕರ್ಷಕ ಏರ್ ಶೋ ನಡೆಯಿತು. ಸೂರ್ಯಕಿರಣ ಟೀಂ ಲೀಡರ್ ಗ್ರುಪ್ ಕ್ಯಾಪ್ಟನ್ ಗುರುಪ್ರಿತಸಿಂಗ್ ದಿಲ್ಲೋನ್ ನೇತೃತ್ವದಲ್ಲಿ ನಡೆದ ಏರ್ ಶೋ ಕಾರ್ಯಕ್ರಮದಲ್ಲಿ  9 ಸೂರ್ಯಕಿರಣ ವಿಮಾನಗಳು ವಿವಿಧ ರೀತಿಯಲ್ಲಿ ಆಕರ್ಷಕ ಪ್ರದರ್ಶನ ನೀಡುವ ಮೂಲಕ ನೋಡುಗರನ್ನು ಮಂತ್ರಮುಗ್ದರನ್ನಾಗಿಸಿದವು. ಸೂರ್ಯಕಿರಣ‌ ವಿಮಾನಗಳು ಆಕಾಶದಲ್ಲಿ ಮೇಲಿನಿಂದ ಕೆಳಗೆ. ಪರಸ್ಪರ ಒಂದಾನೊಂದು ಎದುರಿಗೆ ಕ್ರಾಸಿಂಗ್. ಬ್ಯಾರಲ್ ರೋಲ್. ರಾಷ್ಟ್ರೀ ಧ್ವಜ ಕೇಸರಿ. ಬಿಳಿ. ಹಸಿರು ಬಣ್ಣಗಳು ಹಾಗೂ ಹೃದಯದ ಚಿತ್ರಗಳನ್ನು ಬಿಡುಸುವ ಮೂಲಕ ನೋಡುಗರನ್ನು ಮೂಕವಿಸ್ಮಿತರನ್ನಾಗಿ  ಮಾಡುವ ಮೂಲಕ ಆಕಾಶದಲ್ಲಿ ಚಿತ್ತಾರಗಳನ್ನು ಮೂಡಿಸಿದವು. ಕೆಲವೊಂದು ಸಲ ಒಂಟಿಯಾಗಿ. ಜೋಡಿಯಾಗಿ ಮತ್ತು ತಂಡವಾಗಿ ಬರುತ್ತಿದ್ದ ವಿಮಾನಗಳು ಆಕಾಶದಲ್ಲಿ ಯಾವ ದಿಕ್ಕಿನಿಂದ ವಿಮಾನಗಳು ಬರುತ್ತಿವೆ ಎನ್ನುವುದನ್ನು ಜನರು ಕುತೂಹಲದಿಂದ ವೀಕ್ಷಿಸುತ್ತಿದ್ದರು. 1996 ರಲ್ಲಿ ಆರಂಭಿಸಲಾದ  ಸೂರ್ಯಕಿರಣ ಏರೋಬ್ಯಾಟಿಕ್ ಟೀಂ ವಿಮಾನಗಳು ಇಲ್ಲಿಯವರೆಗೆ ಭಾರತ ಮಾತ್ರವಲ್ಲದೆ  ಶ್ರೀಲಂಕಾ. ಸಿಂಗಾಪುರ್. ದುಬೈ ಸೇರಿದಂತೆ ಇತರೆ…

Read More

ಪಾವಗಡ: ಶ್ರಾವಣ ಮಾಸದಲ್ಲಿ ಪಾವಗಡದ ಶನಿಮಹಾತ್ಮ ಸ್ವಾಮಿಯ ದರ್ಶನಕ್ಕೆ ಭಕ್ತರ ದಂಡೇ ಹರಿದು ಬರುತ್ತದೆ. ಅದರಂತೆ ಈ ವರ್ಷವೂ ಕಳೆದ ಮೂರು ವಾರಗಳಿಂದ ಶ್ರೀ ಸ್ವಾಮಿಯ ದರ್ಶನ ಭಾಗ್ಯಕ್ಕಾಗಿ ಕರ್ನಾಟಕವಲ್ಲದೆ ಅಂತರಾಜ್ಯಗಳಿಂದ ಭಕ್ತ ಸಮೂಹ ಕಿಕ್ಕಿರಿದು ಬಂದಿದ್ದು ಸಾಕ್ಷಿಯಾಗಿದೆ. ನಂಬಿ ಬಂದ ಭಕ್ತರ ಬದುಕಿನಲ್ಲಿ ಅನೇಕ ಅಚ್ಚರಿಗಳನ್ನು ಮೂಡಿಸುತ್ತಿರುವ  ಶನಿಮಹಾತ್ಮ ಮತ್ತು ಶೀತಲಾಂಬ ತಾಯಿಯ ಲೀಲೆಗೆ  ವರ್ಷದಿಂದ ವರ್ಷಕ್ಕೆ ಭಕ್ತರ ಬರುವಿಕೆ ಹೆಚ್ಚಳವಾಗುತ್ತಿದೆ. ಇಲ್ಲಿ ವಿಶೇಷವಾಗಿ ನವಗ್ರಹ ಹೋಮ, ಚಂಡಿಕ ಹೋಮ ಇನ್ನಿತರೆ ಪೂಜಾ ಕೈಂಕರ್ಯ ಕಂಡ ಭಕ್ತರು ಪುನೀತರಾಗುತ್ತಿದ್ದಾರೆ. ಇನ್ನು ಶೀತಲಾಂಬಿಕೆ ಪೂಜೆ ಮಾಡಿದರೆ  ಮದುವೆ ಆಗದವರಿಗೆ ಕಂಕಣ ಬಲ ಮನಶಾಂತಿ ನೆಮ್ಮದಿ ಕರುಣಿಸುತ್ತಾಳೆ ಎಂಬ ನಂಬಿಕೆ ಅಚಲವಾಗಿದೆ. ಮತ್ತೊಂದು ವಿಶೇಷ ಅಂದ್ರೆ ಬಂದಂತಹ ಭಕ್ತರಿಗೆ ಎಲ್ಲಿಯೂ ಸಮಸ್ಯೆಯಾಗದಂತೆ ಎಸ್ ಎಸ್ ಕೆ ಸಂಘದವರು ಜಾಗೃತವಾಗಿ ಮೂಲಭೂತ ಸೌಕರ್ಯಗಳಾದ ಪ್ರಸಾದ, ಕೊಠಡಿ, ದರ್ಶನ ಸೌಲಭ್ಯ ನಿರ್ವಹಣೆ ಮಾಡುತ್ತಿರುವುದು ಮೆಚ್ಚುಗೆ ವ್ಯಕ್ತವಾಗಿದೆ. ಎಸ್ ಎಸ್ ಕೆ ಸಂಘದ ಅಧ್ಯಕ್ಷರು ಆನಂದರಾವ್ ಅವರು…

Read More

ವಿವೇಕಾನಂದ. ಎಚ್. ಕೆ. ಸುಮಾರು 6 ಗಂಟೆ. ಮೋಡ ಮುಸುಕಿದ ವಾತಾವರಣ. ಇನ್ನೂ ಸ್ವಲ್ಪ ಬೆಳಕಿತ್ತು. ನಗರದ ಅಪಾರ್ಟ್ಮೆಂಟ್ ಕಟ್ಟಡ ನಿರ್ಮಾಣ ಕಾರ್ಯದ ಅಂದಿನ ಕೆಲಸ ಮುಗಿದು ಕೂಲಿ ಹಣದ ಬಟವಾಡೆ ನಡೆಯುತ್ತಿತ್ತು. ಮೇಸ್ತ್ರಿ ಒಬ್ಬರು ಕುರ್ಚಿ, ಟೇಬಲ್ ಹಾಕಿಕೊಂಡು ಕುಳಿತು ನಗದು ಹಣವನ್ನು ಹಂಚಿಕೆ ಮಾಡುತ್ತಿದ್ದರು. ಅಲ್ಲಿ ಸುಮಾರು 40 – 50 ವಿವಿಧ ಕೆಲಸಗಾರರು ಸೇರಿದ್ದರು. ಅದರಲ್ಲಿ ಹೆಂಗಸರು ಸಹ ಬಹುತೇಕ ಸಮ ಪ್ರಮಾಣದಲ್ಲಿ ಇದ್ದರು. ಕೆಲವರು ನೆಲದ ಮೇಲೆ, ಸ್ವಲ್ಪ ಜನ ಅಲ್ಲಿದ್ದ ಸಿಮೆಂಟ್ ಇಟ್ಟಿಗೆಗಳ ಮೇಲೆ, ಹಲವರು ಪ್ಲಾಸ್ಟಿಕ್ ಚೀಲಗಳ ಮೇಲೆ ಕುಳಿತು ತದೇಕ ಚಿತ್ತದಿಂದ ಮೇಸ್ತ್ರಿ ಎಣಿಸುವ ದುಡ್ಡನ್ನೇ ನೋಡುತ್ತಾ ಕುಳಿತಿದ್ದರು. ಒಂದಿಬ್ಬರು ಎಲೆ ಅಡಿಕೆ, ಮತ್ತಿಬ್ಬರು ಸಿಗರೇಟು, ಇನ್ನಿಬ್ಬರು ವಿಮಲ್ ಅಡಿಕೆ ಪುಡಿ ಹಾಕುತ್ತಾ ಹಣವನ್ನೇ ದಿಟ್ಟಿಸುತ್ತಿದ್ದರು. ಹೆಣ್ಣು ಮಗಳೊಬ್ಬರು ಮಗುವಿಗೆ ಹಾಲು ಕುಡಿಸುತ್ತಿದ್ದರೆ ಮತ್ತೊಂದು ಹೆಂಗಸು ತಲೆ ಬಾಚಿಕೊಳ್ಳುತ್ತಾ ಹಣವನ್ನೇ ನೋಡುತ್ತಿತ್ತು. ಅಲ್ಲಿ ಒಬ್ಬಬ್ಬರಿಗೆ ಅಂದಾಜು ಸುಮಾರು 3 ರಿಂದ 5…

Read More

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 Provided by ಮೇಷ ರಾಶಿ: ಮೇಷ ರಾಶಿಯ ಜನರು ವಿಷ್ಣು ಸಹಸ್ರನಾಮವನ್ನು ಪಠಿಸುವುದರಿಂದ ಜೀವನದಲ್ಲಿ ನೆಮ್ಮದಿಯನ್ನು ಕಾಣುತ್ತಾರೆ ಗುತ್ತಿಗೆ ವ್ಯವಹಾರದಲ್ಲಿ ಎಡವು ಬೀಳುವ ಸಾಧ್ಯತೆ ಇದೆ ಎಚ್ಚರ!! ಮಿಥುನ ರಾಶಿ: ಮಿಥುನ ರಾಶಿಯ ಜನರು ಅಪರಿಚಿತ ವ್ಯಕ್ತಿಗಳ ನಡುವೆ ತಾಳ್ಮೆಯಿಂದ ವರ್ತಿಸುವುದನ್ನು ಕಲಿಯಿರಿ. ಐಸ್ ಕ್ರೀಮ್ ತಂಪು ಪಾನೀಯ…

Read More