Author: admin

ನವದೆಹಲಿ: ನಮ್ಮ ಸರ್ಕಾರವು ಕ್ರೀಡೆಗೆ ಮತ್ತಷ್ಟು ಬೆಂಬಲ ನೀಡಲು ಬದ್ಧವಾಗಿದೆ. ಮತ್ತಷ್ಟು ಯುವ ಪ್ರತಿಭೆಗಳು ಕ್ರೀಡೆಯಲ್ಲಿ ತೊಡಗಿಸಿಕೊಂಡು ಪ್ರಜ್ವಲಿಸುವುದನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರೀಯ ಕ್ರೀಡಾ ದಿನವಾದ ಇಂದು ಹಾಕಿ ದಂತಕಥೆ ಮೇಜರ್ ಧ್ಯಾನ್‌ ಚಂದ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ ಬಳಿಕ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ರಾಷ್ಟ್ರೀಯ ಕ್ರೀಡಾ ದಿನದ ಶುಭಾಶಯಗಳು. ಇಂದು ನಾವು ಮೇಜರ್ ಧ್ಯಾನ್ ಚಂದ್ ಜಿ ಅವರಿಗೆ ಗೌರವ ಸಲ್ಲಿಸುತ್ತೇವೆ. ಕ್ರೀಡೆಯ ಬಗ್ಗೆ ಆಸಕ್ತಿ ಹೊಂದಿರುವ ಮತ್ತು ಭಾರತಕ್ಕಾಗಿ ಆಡಿದ ಎಲ್ಲರನ್ನು ಅಭಿನಂದಿಸಲು ಇದು ಒಂದು ಸುಸಂದರ್ಭವಾಗಿದೆ ಎಂದು ಪ್ರಧಾನಿ ಹೇಳಿದರು. ನಮ್ಮ ಸರ್ಕಾರವು ಕ್ರೀಡೆಯನ್ನು ಬೆಂಬಲಿಸಲು ಬದ್ಧವಾಗಿದೆ ಮತ್ತು ಹೆಚ್ಚಿನ ಸಂಖ್ಯೆಯ ಯುವಕರು ಯುವಕರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಸಮರ್ಥರಾಗಿದ್ದಾರೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ ಎಂದು ಅವರು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ಥಾಣೆ: ಬಾಲಕಿಯರಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿದ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಲ್ಲಿರುವ ಮಹಾನಗರ ಪಾಲಿಕೆಯ ಶಾಲೆಯೊಂದರಲ್ಲಿ ನಡೆದಿದೆ. ಮುಝಮ್ಮಿಲ್ ಬಂಧಿತ ಆರೋಪಿಯಾಗಿದ್ದಾನೆ. ಈತನನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ ಅಂತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶಿಕ್ಷಕ ತನ್ನ ಮೊಬೈಲ್ ಫೋನ್‌ನಲ್ಲಿ ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿದ್ದು, ಈ ವಿಚಾರವನ್ನು ಬಾಲಕಿಯೊಬ್ಬಳು ತನ್ನ ಪೋಷಕರಿಗೆ ತಿಳಿಸಿದ್ದಳು. ಹೀಗಾಗಿ ಘಟನೆ ಬೆಳಕಿಗೆ ಬಂದಿತ್ತು. 7ನೇ ತರಗತಿಯ ಬಾಲಕಿಗೆ ಶಿಕ್ಷಕ ಅಶ್ಲೀಲ ಚಿತ್ರ ತೋರಿಸಿ ಕಿರುಕುಳ ನೀಡಿದ್ದಾನೆ. ಬಾಲಕಿ ಪ್ರತಿನಿತ್ಯವೂ ಶಾಲೆಗೆ ತಡವಾಗಿ ಬರುತ್ತಿದ್ದಳು. ಹೀಗಾಗಿ ಮುಖ್ಯಶಿಕ್ಷಕರು ಬಾಲಕಿಯ ಪೋಷಕರಿಗೆ ಕರೆ ಮಾಡಿ ವಿಚಾರಿಸಿದ್ದಾರೆ. ಈ ಬಗ್ಗೆ ಬಾಲಕಿಯ ಬಳಿ ಪೋಷಕರು ವಿಚಾರಿಸಿದಾಗ. ಶಿಕ್ಷಕ ತನಗೆ ಅಶ್ಲೀಲ ಚಿತ್ರ ತೋರಿಸಿ, ಅನುಚಿತವಾಗಿ ವರ್ತಿಸುತ್ತಿದ್ದಾರೆ. ಇದರಿಂದಾಗಿ ಶಾಲೆಗೆ ಹೋಗಲು ಮನಸ್ಸಿಲ್ಲ ಎಂದು ಹೇಳಿಕೊಂಡಿದ್ದಾಳೆ. ತಕ್ಷಣವೇ ಎಚ್ಚೆತ್ತ ಬಾಲಕಿಯ ಪೋಷಕರು ಶಿಕ್ಷಕನ ವಿರುದ್ಧ ದೂರು ದಾಖಲಿಸಿದ್ದಾರೆ. ಸದ್ಯ ಬಾಲಕಿಯ ದೂರಿನಾಧಾರದ ಮೇಲೆ ಆರೋಪಿಯ ಮೇಲೆ…

Read More

ಅಹಮದಾಬಾದ್: ಗುಜರಾತ್ ನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮಳೆ ಅವಾಂತರದ ಪರಿಣಾಮವಾಗಿ 28 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಕಳೆದ ಮೂರು ದಿನಗಳಿಂದ ಗುಜರಾತ್ ನಲ್ಲಿ ಭಾರೀ ಮಳೆಯಾಗುತ್ತಿದೆ. 18 ಸಾವಿರಕ್ಕೂ ಅಧಿಕ ಮಂದಿಯನ್ನು ಪ್ರವಾಹ ಪೀಡಿತ ಸ್ಥಳದಿಂದ ಸುರಕ್ಷಿತ ತಾಣಕ್ಕೆ ರವಾನಿಸಲಾಗಿದ್ದು, ಸುಮಾರು 11 ಜಿಲ್ಲೆಗಳಲ್ಲಿ ವರುಣನ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಮೋರ್ಬಿ, ವಡೋದರಾ, ಭರೂಚ್, ಜಾಮ್‌ ನಗರ, ಅರಾವಳಿ, ಪಂಚಮಹಲ್, ದ್ವಾರಕಾ ಮತ್ತು ದಂಗ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಆನಂದ್‌ ಜಿಲ್ಲೆಯಲ್ಲಿ ಆರು, ಅಹಮದಾಬಾದ್‌ನಲ್ಲಿ ನಾಲ್ಕು, ಗಾಂಧಿನಗರ, ಖೇಡಾ, ಮಹಿಸಾಗರ್, ದಾಹೋದ್ ಮತ್ತು ಸುರೇಂದ್ರನಗರ ಜಿಲ್ಲೆಗಳಲ್ಲಿ ತಲಾ ಇಬ್ಬರು ಮೃತಪಟ್ಟಿದ್ದಾರೆ ಎಂದು ಗುಜರಾತ್ ಸರ್ಕಾರ ಮಾಹಿತಿ ನೀಡಿದೆ. ಮೃತರ ಪೈಕಿ ಏಳು ಜನರು ಮೋರ್ಬಿ ಜಿಲ್ಲೆಯ ಧವಾನಾ ಗ್ರಾಮದ ಬಳಿ ಉಕ್ಕಿ ಹರಿಯುತ್ತಿದ್ದ ಕ್ರಾಸ್‌ವೇ ದಾಟುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ…

Read More

ಬಳ್ಳಾರಿ: ನಟ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಯ ಕೇಂದ್ರೀಯ ಕಾರಾಗೃಹಕ್ಕೆ ಇಂದು ಶಿಫ್ಟ್ ಮಾಡಲಾಗಿದೆ. ಈ ನಡುವೆ ನಟ ದರ್ಶನ್ ಅವರಿಗೆ ಜೈಲು ಅಧಿಕಾರಿಗಳು ಕೈದಿ ನಂಬರ್ ನೀಡಿದ್ದಾರೆ. ಬಳ್ಳಾರಿ ಜೈಲಿಗೆ ಪ್ರವೇಶಿಸುತ್ತಿದ್ದಂತೆಯೇ ಪೊಲೀಸರು ನಿಯಮ ಪ್ರಕಾರ ದರ್ಶನ್ ಅವರ ಹೆಸರು, ತಂದೆಯ ಹೆಸರು ಹಾಗೂ ವಿಳಾಸವನ್ನು ಜೈಲಿನ ಡೈರಿಯೊಳಗೆ ಬರೆದುಕೊಂಡಿದ್ದಾರೆ. ಅವರು ಧರಿಸಿದ್ದ  ಸರ ಹಾಗೂ ಕೈಯಲ್ಲಿದ್ದ ಬೆಳ್ಳಿ ಕಡಗವನ್ನು ತೆಗೆಸಿದ್ದಾರೆ. ನಟ ದರ್ಶನ್ ಅವರಿಗೆ ವಿಚಾರಣಾಧೀನ ಕೈದಿ ಸಂಖ್ಯೆ 511 ನೀಡಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರ ಹತ್ಯೆ ಕೇಸ್ ನಲ್ಲಿ ಜೂನ್ ತಿಂಗಳಲ್ಲಿ ಬಂಧನಕ್ಕೊಳಗಾಗಿದ್ದರು. ಅವರ ಜೊತೆಗೆ ಕೊಲೆಗೆ ಸಹಕರಿಸಿದ ಆರೋಪದಡಿ ದರ್ಶನ್ ಸೇರಿ ಒಟ್ಟು 17 ಆರೋಪಿಗಳ ಬಂಧನವಾಗಿದೆ. ಸದ್ಯ ದರ್ಶನ್‌ ನ್ಯಾಯಾಂಗ ಬಂಧನದಲ್ಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಇಂದು ಶಿಫ್ಟ್ ಮಾಡಲಾಗಿದೆ. ನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿರುವ ಫೋಟೋಗಳು ವೈರಲ್ ಆದ ಬೆನ್ನಲ್ಲೇ ಕೋರ್ಟ್ ಆದೇಶದಂತೆ ಅವರನ್ನು ಬಳ್ಳಾರಿ ಜೈಲ್ ಗೆ ಶಿಫ್ಟ್ ಮಾಡಲಾಗಿದೆ. ಗುರುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ನಟ ದರ್ಶನ್ ಜೈಲು ತಲುಪಿದ್ದು, ಸಾಮಾನ್ಯ ಕೈದಿಯಂತೆ ಜೈಲು ಪ್ರವೇಶಿಸಿದ್ದಾರೆ. ಕಪ್ಪು ಟೀ ಶರ್ಟ್ ತೊಟ್ಟು, ಎಡಗೈಗೆ ಕ್ರೇಪ್ ಬ್ಯಾಂಡ್ ಧರಿಸಿ ಬೆಡ್ ಶೀಟ್ , ಬಲಗೈಯಲ್ಲಿ ನೀರಿನ ಬಾಟಲ್ ಹಿಡಿದುಕೊಂಡು ದರ್ಶನ್ ಜೈಲಿನೊಳಗೆ ಪ್ರವೇಶಿಸಿದ್ದಾರೆ.  ಬಳ್ಳಾರಿ ಕಾರಾಗೃಹದ ಸೆಲ್ ನಂಬರ್ 15ರಲ್ಲಿ ಅವರನ್ನು ಇಡಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಜಮ್ಮು–ಕಾಶ್ಮೀರ: ಭಾರತೀಯ ಸೇನಾಪಡೆ ಎನ್ಕೌಂಟರ್ ನಲ್ಲಿ ಮೂವರು ಉಗ್ರರನ್ನು ಸದೆಬಡಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗುರುವಾರ ನಡೆದಿದೆ. ಕುಪ್ವಾರ ಜಿಲ್ಲೆ ತಂಗ್ಧಾರ್ ನಲ್ಲಿ ಕೆಲ ಉಗ್ರರು ಗಡಿ ನುಸುಳಲು ಯತ್ನ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನಾಪಡೆ ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿತ್ತು. ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಈ ನಡುವೆ ರಜೌರಿಯಲ್ಲಿಯೂ ಉಗ್ರರು ಹಾಗೂ ಸೇನಾಪಡೆ ನಡುವೆ ಗುಂಡಿನ ಕಾಳಗ ಮುಂದುವರೆದಿದ್ದು, ಸೇನಾಪಡೆ ಎನ್ಕೌಂಟರ್ ಆರಂಭಿಸಿದೆ. ಖೇರಿ ಮೊಹ್ರಾ ಲಾಠಿ ಮತ್ತು ದಂತಲ್ ಪ್ರದೇಶದಲ್ಲಿ ನಿನ್ನೆ ರಾತ್ರಿ 9:30ರ ಸುಮಾರಿಗೆ ಅನುಮಾನಾಸ್ಪದ ಓಡಾಟಗಳು ಕಂಡು ಬಂದ ಹಿನ್ನೆಲೆಯಲ್ಲಿ ಸೇನಾಪಡೆ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಶೋಧನಾ ಕಾರ್ಯಾಚರಣೆ ವೇಳೆ ರಾತ್ರಿ 11:45 ರ ಸುಮಾರಿಗೆ ಉಗ್ರರು ಸೇನಾಪಡೆ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದರು. ಈ ವೇಳೆ ಸೇನಾಪಡೆ ಕೂಡ ದಿಟ್ಟ ಉತ್ತರ ನೀಡಿದ್ದು, ಸ್ಥಳದಲ್ಲಿ ಗುಂಡಿನ…

Read More

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ: 9535156490 ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ✨ಹಣಕಾಸಿನ ಸಮಸ್ಯೆಯಿಂದ ಬಳಲುತ್ತಿದ್ದೀರಾ ಪರ್ಸ್ ನಲ್ಲಿ ನಾವು ಹೇಳುವ ಈ ಒಂದು ವಸ್ತುವನ್ನು ಇಟ್ಟುಕೊಳ್ಳಿ✨ Provided by ಈಗಿನ ಕಾಲದಲ್ಲಿ ಮುದುಕರಿಂದ ಹಿಡಿದು ಚಿಕ್ಕ ವಯಸ್ಸಿನ ಮಕ್ಕಳಿಗೂ ಹಣ ಎನ್ನುವುದು ಎಲ್ಲರಿಗೂ ಅತ್ಯಮೂಲ್ಯವಾಗಿ ಬೇಕು.  ಪರಿಸ್ಥಿತಿ ಹದಗೆಟ್ಟವರಿಗೆ ಯಾರು ಕೂಡ ಬೆಲೆ…

Read More

ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಅನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಈಗ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಅಲ್ಲಿ ದರ್ಶನ್​ ವಾಸ ಹೇಗಿರಲಿದೆ. ಯಾವ ರೀತಿಯ ಊಟ ಅವರಿಗೆ ಸಿಗಲಿದೆ? ಇಲ್ಲಿದೆ ಮಾಹಿತಿ. ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ​ಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಹಾಕಿ ದರ್ಶನ್ ಹಾಗೂ ಇತರೆ ಆರೋಪಿಗಳನ್ನು ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡಿಸುತ್ತಿದ್ದಾರೆ. ನಟ ದರ್ಶನ್ ಅನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗುತ್ತಿದೆ. ಬಳ್ಳಾರಿ ಜೈಲಿನಲ್ಲಿ ದರ್ಶನ್ ವಾಸ ಹೇಗಿರಲಿದೆ? ಅಲ್ಲಿ ಊಟಕ್ಕೆ ಏನೇನು ಸಿಗುತ್ತದೆ? ಇಲ್ಲಿದೆ ಮಾಹಿತಿ. ಪರಪ್ಪನ ಅಗ್ರಹಾರ ಜೈಲಿಗೆ ಹೋಲಿಸಿದರೆ ಬಳ್ಳಾರಿ ಜೈಲಿನ ವಿಸ್ತೀರ್ಣ ಕಡಿಮೆ ಎನ್ನಲಾಗುತ್ತಿದೆ. ಬ್ಯಾರಕ್ ​ಗಳು ಸಹ ಪರಪ್ಪನ ಅಗ್ರಹಾರ ಜೈಲಿನಲ್ಲಿ ವ್ಯವಸ್ಥಿತವಾಗಿಲ್ಲ ಎಂಬ ಮಾತುಗಳು ಇವೆ. ಇನ್ನು ಊಟದ ವಿಷಯಕ್ಕೆ ಬರುವುದಾದರೆ, ಸರಳವಾದ ಊಟದ ಮೆನು ಬಳ್ಳಾರಿ ಜೈಲಿನಲ್ಲಿದೆ. ಪ್ರತಿದಿನ ಬೆಳಿಗ್ಗೆ…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ಪವಿತ್ರಾ ಗೌಡ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆಯಿತು. ವಾದ-ಪ್ರತಿ ವಾದವನ್ನು ಆಲಿಸಿದಂತ ನ್ಯಾಯಾಲಯವು, ಅರ್ಜಿಯ ವಿಚಾರಣೆಯ ಬಳಿಕ ಆದೇಶವನ್ನು ಆಗಸ್ಟ್ 31ಕ್ಕೆ ಕಾಯ್ದಿರಿಸಿದೆ. ಪವಿತ್ರಾ ಗೌಡ ಅವರು ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಿತು. ಆರೋಪಿ ಪವಿತ್ರಾ ಗೌಡ ಪರವಾಗಿ ಹಿರಿಯ ವಕೀಲ ಟಾಮಿ ಸೆಬಾಸ್ಟಿನ್ ವಾದಿಸಿದರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಕೋಲ್ಕತ್ತ: ವೈದ್ಯೆಯ ಹತ್ಯೆ, ಅತ್ಯಾಚಾರ ಪ್ರಕರಣವನ್ನು ಸಹಿಸುವುದು ಅಸಾಧ್ಯ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐನೊಂದಿಗೆ ಮಾತನಾಡಿರುವ ಅವರು, ಕೋಲ್ಕತ್ತಾದಲ್ಲಿ ನಡೆದ ವೈದ್ಯೆಯ ಹತ್ಯೆ, ಅತ್ಯಾಚಾರ ಪ್ರಕರಣದ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಇಂತಹ ಪ್ರಕರಣಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿರುವ ರಾಷ್ಟ್ರಪತಿಗಳು, ಮಹಿಳೆಯರ ವಿರುದ್ಧದ ಇಂತಹ ಘೋರ ಅಪರಾಧಗಳನ್ನು ತಡೆಗಟ್ಟಲು ಸಾಮಾಜಿಕ ಪರಿಷ್ಕರಣೆಯ ತುರ್ತು ಅಗತ್ಯವಿದೆ ಎಂದು ಹೇಳಿದ್ದಾರೆ. ಕೋಲ್ಕತ್ತಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರತಿಕ್ರಿಯೆ ನೀಡಿರುವ ರಾಷ್ಟ್ರಪತಿಗಳು, ಕೋಲ್ಕತ್ತಾದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ತನ್ನ ಬೆಂಬಲವನ್ನು ವ್ಯಕ್ತಪಡಿಸಿದರು ಮತ್ತು ತ್ವರಿತ ನ್ಯಾಯಕ್ಕಾಗಿ ಕರೆ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More