Subscribe to Updates
Get the latest creative news from FooBar about art, design and business.
- ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!
- ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
- ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್ ಬುಕ್ ಅಡ್ಮಿನ್ ಗಳ ವಿರುದ್ಧ ಎಫ್ ಐಆರ್ ದಾಖಲು
- ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!
- ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
- ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
- ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
Author: admin
ಬೆಂಗಳೂರು: ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ರಾಷ್ಟ್ರ ರಾಜಕಾರಣದಲ್ಲಿ ದೊಡ್ಡ ಹುದ್ದೆ ಲಭಿಸಿದ್ದು, ಅವರನ್ನು ಲೋಕಸಭಾ ಸಚೇತಕರಾಗಿ ಆಯ್ಕೆ ಮಾಡಿ ನೇಮಕಾತಿ ಆದೇಶವನ್ನು ಬಿಜೆಪಿ ಹೊರಡಿಸಿದೆ. ಬಿಜೆಪಿಯ ಪಾರ್ಲಿಮೆಂಟರಿ ಆಫೀಸ್ ಸೆಕ್ರೇಟರಿ ಡಾ. ಶಿವ್ ಶಕ್ತಿ ನಾಥ್ ಭಕ್ಷಿ ಅವರು ಲೋಕಸಭಾ ಸ್ಪೀಕರ್ ಅವರಿಗೆ ಪತ್ರದಲ್ಲಿ ಹೆಸರನ್ನು ಆಯ್ಕೆ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಲೋಕಸಭೆಯ ಮುಖ್ಯ ಸಚೇತಕರಾಗಿ ಡಾ.ಸಂಜಯ್ ಜೈಸ್ವಾಲ್ ಅವರನ್ನು ನೇಮಕ ಮಾಡಲಾಗಿದೆ. ಸಚೇತಕರಾಗಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಸೇರಿದಂತೆ 16 ಮಂದಿಯನ್ನು ಆಯ್ಕೆ ಮಾಡಿರುವುದಾಗಿ ತಿಳಿಸಿದ್ದಾರೆ. ತನ್ನನ್ನು ಸಚೇತಕರನ್ನಾಗಿ ನೇಮಕ ಮಾಡಿರೋದಕ್ಕೆ ಕೋಟಾ ಶ್ರೀನಿವಾಸ್ ಪೂಜಾರಿ ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳಿಗೆ ಕೃತಜ್ಞತೆಗಳನ್ನು ತಿಳಿಸಿದ್ದಾರೆ. ಪ್ರಧಾನಿನರೇಂದ್ರ ಮೋದಿಯವರಿಗೆ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾರವರಿಗೆ ಹಾಗೂ ಪಕ್ಷದ ಮುಖಂಡರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ಬೆಂಗಳೂರು: 384 ಕೆಎಎಸ್ ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ ಪೂರ್ವ ನಿಗದಿಯಂತೆ ಆಗಸ್ಟ್ 25 ರಂದೇ ನಡೆಯಲಿದೆ ಎಂದು ಲೋಕಸೇವಾ ಆಯೋಗ ತಿಳಿಸಿದೆ. ಈಗಾಗಲೇ ಪೂರ್ವಭಾವಿ ಪರೀಕ್ಷೆ ದಿನಾಂಕವನ್ನು ಎರಡು ಬಾರಿ ಮರು ನಿಗದಿ ಮಾಡಿರುವ ಕಾರಣ ಮತ್ತೆ ದಿನಾಂಕ ಬದಲಾವಣೆ ಮಾಡದೆ ನಿಗದಿಪಡಿಸಿರುವಂತೆ ಆಗಸ್ಟ್ 25ರಂದೇ ಪರೀಕ್ಷೆ ನಡೆಸಲಾಗುವುದು ತಿಳಿಸಲಾಗಿದೆ. ಆಗಸ್ಟ್ 25ರಂದು ಐಬಿಪಿಎಸ್ ಪರೀಕ್ಷೆ ನಡೆಯುತ್ತಿರುವ ದಿನವೇ ಕೆಎಎಸ್ ಪರೀಕ್ಷೆ ನಡೆಸುವುದರಿಂದ ಎರಡು ಹುದ್ದೆಗಳಿಗೆ ಅರ್ಜಿ ಹಾಕಿದ ಹಲವು ಅಭ್ಯರ್ಥಿಗಳು ಒಂದು ಪರೀಕ್ಷೆಯಿಂದ ವಂಚಿತರಾಗುವ ಕಾರಣ ಮುಂದೂಡುವಂತೆ ಮನವಿ ಮಾಡಲಾಗಿತ್ತು. ಯುಪಿಎಸ್ ಸಿ, ಎಸ್.ಎಸ್.ಸಿ., ಕೆಇಎ ಸೇರಿ ವಿವಿಧ ನೇಮಕಾತಿ ಪ್ರಾಧಿಕಾರಗಳ ಪರೀಕ್ಷಾ ದಿನಾಂಕಗಳನ್ನು ಪರಿಶೀಲಿಸಿ ಮಾಹಿತಿ ಪಡೆದು ಈ ಪರೀಕ್ಷೆಯ ದಿನಾಂಕ ನಿಗದಿಪಡಿಸಲಾಗಿದೆ. ಆಗಸ್ಟ್ 25ಕ್ಕೆ ಪೂರ್ವಭಾವಿ ಪರೀಕ್ಷೆ ದಿನಾಂಕ ನಿಗದಿಪಡಿಸಿ ಜೂನ್ 27ರಂದು ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಕೊರಟಗೆರೆ: ಗಂಡನ ಮುಗಿಸಲು ಮಾಜಿ ಇನ್ಸ್ ಸ್ಟಾಗ್ರಾಂ ಲವರ್ ಮತ್ತು ತಮ್ಮನಿಗೆ ಪತ್ನಿ ಸುಫಾರಿ ನೀಡಿರುವ ಘಟನೆ ನಡೆದಿದ್ದು, ಮಾಜಿ ಲವರ್ ಜೊತೆಗೆ ಸೇರಲು ಅಡ್ಡಿಯಾಗಿದ್ದ ಗಂಡ ಪ್ರಕಾಶ್ ನನ್ನು ಪತ್ನಿ ಹರ್ಷಿತಾ ಬರ್ಬರವಾಗಿ ಹತ್ಯೆ ಮಾಡಿಸಿದ್ದಾಳೆ. ಕೊರಟಗೆರೆ ತಾಲೂಕು ತುಂಬಾಡಿ ಮತ್ತು ಸಿದ್ದರಬೆಟ್ಟ ಸಂಪರ್ಕದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಗುಲ್ಬರ್ಗಾ ಜಿಲ್ಲೆಯ ಚಿಂಚುಳ್ಳಿ ಗ್ರಾಮದ ಪ್ರಕಾಶ(32) ಕೊಲೆಯಾದ ದುರ್ದೈವಿಯಾಗಿದ್ದಾನೆ. 3 ತಿಂಗಳ ಹಿಂದೆಯಷ್ಟೇ ಗಂಡ ಮತ್ತು ಮಗು ಬಿಟ್ಟು ಗುಂಡ ಎಂಬುವನ ಹಿಂದೆ ಹರ್ಷಿತಾ ಹೋಗಿದ್ದಳು. ಈ ವೇಳೆ ಪ್ರಕಾಶ್ ಪೊಲೀಸ್ ಠಾಣೆಗೆ ದೂರು ನೀಡಿ ಹರ್ಷಿತಾಳನ್ನು ಮತ್ತೆ ಮನೆಗೆ ಕರೆದುಕೊಂಡು ಬಂದಿದ್ದ. ಕೊರಟಗೆರೆಯಿಂದ ಮಡದಿಯ ಜೊತೆ ಮಲ್ಲೇಕಾವುಗೆ ಪ್ರಕಾಶ್ ತೆರಳುತ್ತಿದ್ದ ವೇಳೆ ಪ್ರಕಾಶನ ಹೆಂಡತಿ ಹರ್ಷಿತಾ ತಮ್ಮ ಸೋಮ ಕರೆ ಮಾಡಿ, ಕುಡಿದು ಟೈಟ್ ಆಗಿದ್ದೀನಿ ಬಂದು ಕರೆದುಕೊಂಡು ಹೋಗು ಎಂದು ಹೇಳಿದ್ದು, ಹತ್ತಾರು ಬಾರಿ ಮತ್ತೆ ಮತ್ತೆ ಕರೆ ಮಾಡಿದ್ದ. ಹೀಗಾಗಿ ಮಡದಿಯನ್ನ ಮನೆಗೆ ಬಿಟ್ಟು…
ನವದೆಹಲಿ: ದೆಹಲಿ ಕೋಚಿಂಗ್ ಸೆಂಟರ್ ದುರಂತ, ಅಗ್ನಿಪಥ್ ಯೋಜನೆ ಸೇರಿದಂತೆ ಹಲವು ವಿಚಾರಗಳನ್ನಿಟ್ಟುಕೊಂಡು ವಿಪಕ್ಷ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಹುಲ್ ಗಾಂಧಿ ಪ್ರಶ್ನೆಗಳಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ತಲೆ ಚಚ್ಚಿಕೊಂಡು ವಿಡಿಯೋ ವೈರಲ್ ಆಗಿದೆ. ರಾಹುಲ್ ಗಾಂಧಿ, ಹಲ್ವಾ ಕಾರ್ಯಕ್ರಮ ದ ಫೋಟೋ ಪ್ರದರ್ಶನ ಮಾಡಿದಾಗ ನಿರ್ಮಲಾ ಸೀತಾರಾಮನ್ ಅವರು ನಗುತ್ತಾ ಮುಖ ಮುಚ್ಚಿಕೊಂಡರು. ಇದೀಗ ಈ ವಿಡಿಯೋ ಎಲ್ಲೆಡೆ ವೈರಲ್ ಆಗತೊಡಗಿದೆ ಅಲ್ಲದೇ ಹಲವು ಪರ ವಿರೋಧ ಟೀಕೆಗಳು ವ್ಯಕ್ತವಾಗಿವೆ. ಕೇಂದ್ರ ಬಜೆಟ್ ನ್ನು ಮಧ್ಯಮ ವರ್ಗ, ಹಿಂದುಳಿದ ವರ್ಗಗಳ ವಿರೋಧಿ ಬಜೆಟ್ ಎಂದು ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಟೀಕಾ ಪ್ರಹಾರ ನಡೆಸಿದರು. ರಾಹುಲ್ ಗಾಂಧಿ ಬಜೆಟ್ ಪೂರ್ವದಲ್ಲಿ ನಡೆಯುವ ಸಾಂಪ್ರದಾಯಿಕ ಹಲ್ವಾ ಸಮಾರಂಭದ ಪೋಸ್ಟರ್ ನ್ನು ಪ್ರದರ್ಶಿಸಿದ್ದು, ಬಜೆಟ್ ತಯಾರಿಕೆಯ ತಂಡದಲ್ಲಿದ್ದ 20 ಅಧಿಕಾರಿಗಳ ಪೈಕಿ ದಲಿತರು, ಒಬಿಸಿ, ಆದಿವಾಸಿಗಳು ಇಲ್ಲವೇ ಇಲ್ಲ. 20 ಅಧಿಕಾರಿಗಳ ಪೈಕಿ ಯಾರೊಬ್ಬರೂ…
ತುಮಕೂರು: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಜ್ವರದ ಲಕ್ಷಣ ಸೇರಿದಂತೆ ಡೆಂಗ್ಯೂ ರೋಗ ಲಕ್ಷಣಗಳು ಕಂಡು ಬಂದವರ ರಕ್ತ ಮಾದರಿ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಲೇರಿಯಾ ಅಧಿಕಾರಿ ಡಾ. ಚಂದ್ರಶೇಖರ್‌ಗೆ ಸೂಚನೆ ನೀಡಿದರು. ಜಿಲ್ಲಾ ಆಸ್ಪತ್ರೆ ಡೆಂಗ್ಯೂ ವಾರ್ಡಿಗೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ರಕ್ತ ಮಾದರಿ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸುವುದರಿಂದ ಡೆಂಗ್ಯೂ ದೃಢಪಟ್ಟ ಪ್ರಕರಣಗಳಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ. ನಂತರ ರೋಗಿಗಳ ಆರೋಗ್ಯ ಪರಿಸ್ಥಿತಿ, ರಕ್ತದ ಒತ್ತಡದ ಮಾಹಿತಿಯನ್ನು ಪಡೆದ ಅವರು, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿರುವ ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗಿ ದೃಢಪಟ್ಟವರಿಗೆ ಚಿಕಿತ್ಸೆ ನೀಡಲು ನಿರ್ದೇಶನ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಬಳಿಕ ಮಕ್ಕಳ ವಾರ್ಡಿಗೆ ಭೇಟಿ ನೀಡಿ ಅವರಿಗೆ ನೀಡುತ್ತಿರುವ ಚಿಕಿತ್ಸೆ ಬಗ್ಗೆ ಪರಿಶೀಲಿಸಿದರು. ಮಕ್ಕಳಿಗೆ ಸೊಳ್ಳೆ ಕಚ್ಚದಂತೆ ಸೊಳ್ಳೆ ಪರದೆ ವ್ಯವಸ್ಥೆ ಮಾಡಬೇಕು ಎಂದರಲ್ಲದೆ, ಜಿಲ್ಲಾ ಆಸ್ಪತ್ರೆಗೆ ಎಷ್ಟು ಬಾರಿ ಭೇಟಿ ನೀಡಿ ಸೂಚನೆ ನೀಡಿದ್ದರೂ ಸ್ವಚ್ಛತೆ ಕಾಪಾಡುವಲ್ಲಿ ಇನ್ನೂ…
ಮಧುಗಿರಿ : ವ್ಯಕ್ತಿಯೋರ್ವ ತನ್ನ ಕಿರಿಯ ಪತ್ನಿ ಹಾಗೂ ಆಕೆಯ ಪುತ್ರನಿಗೆ ಗಂಭೀರವಾಗಿ ಹಲ್ಲೆ ನಡೆಸಿ, ಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಜೀವಾವಧಿ ಶಿಕ್ಷೆ ಮತ್ತು ರೂ. 1,00,000 ದಂಡ ಹಾಗೂ ಭಾ.ದಂ.ಸಂ ಕಲಂ:326 ಅಡಿಯಲ್ಲಿ 3 ವರ್ಷ ಶಿಕ್ಷೆ ಮತ್ತು 10 ಸಾವಿರ ದಂಡ ವಿಧಿಸಿ ಮಧುಗಿರಿಯ ಗೌರವಾನ್ವಿತ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಈ ಘಟನೆ ಕೊರಟಗೆರೆ ಟೌನ್ ವ್ಯಾಪ್ತಿಯ ಕಾಳಿದಾಸನಗರ ಶ್ರೀನಿವಾಸ ಪದವಿ ಪೂರ್ವ ಕಾಲೇಜು ಬಳಿ ನಡೆದಿತ್ತು. ಆರೋಪಿ ಚಾಂದ್ ಪಾಷ ಹೆಸರಿನಲ್ಲಿ ಕೊರಟಗೆರೆ ಟೌನ್ ಹನುಮಂತಪರ ಸರ್ವೆನಂ 52/2ರಲ್ಲಿ 01.01 ಗುಂಟೆ ನಿವೇಶನ ಇದ್ದು, ಸದರಿ ನಿವೇಶನವನ್ನು ಆರೋಪಿಯು ಮಾರಾಟ ಮಾಡಿ ಬಂದ ಹಣದಲ್ಲಿ ತನ್ನ ಹಿರಿಯ ಹೆಂಡತಿಯ ಮಗಳಾದ ರೇಷ್ಮಾ ರವರಿಗೆ ಒಡವೆಗಳನ್ನು ಮಾಡಿಸಿ ಕೊಡಲು ಮುಂದಾಗಿದ್ದು, ಇದಕ್ಕೆ ಕಿರಿಯ ಪತ್ನಿಯ ಮಗಳಾದ ಜಬೀನ್ ತಾಜ್ ಹಾಗೂ ಮಗ ಮಹಮ್ಮದ್ ಅಲಿ ಅಡ್ಡಿ ಪಡಿಸುತ್ತಿದ್ದಾರೆ ಎಂದು…
ಬೆಳಧರ: ಶಾಲೆಯ ಆಟದ ಮೈದಾನಕ್ಕೆ ಕಾಂಪೌಂಡ್ ಮಾಡಿಸಿಕೊಡದೇ ನಾನು ಶಾಲೆಗೆ ಬರುವುದಿಲ್ಲ ಎಂದು ಪ್ರತಿಜ್ಞೆ ಮಾಡಿ, ಶಾಲೆಯ ಬಿಟ್ಟಿದ್ದ ಮಗುವಿನ ಮನವೊಲಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕಂಪೌಂಡ್ ನಿರ್ಮಾಣದ ಭರವಸೆ ನೀಡಿ ಮಗುವನ್ನು ಶಾಲೆಗೆ ಕರೆದು ಕೊಂಡು ಬಂದ ಘಟನೆ ನಡೆದಿದೆ. ಶಾಲೆಯ ಕಾಂಪೌಂಡ್ ನಿರ್ಮಿಸದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ ಕಾರಣ ಶಾಲೆಯ ಆಟದ ಮೈದಾನಕ್ಕೆ ಕಾಂಪೌಂಡ್ ಮಾಡಿಕೊಡುವವರೆಗೂ ನಾನು ಶಾಲೆಗೆ ಹೋಗುವುದಿಲ್ಲ ಎಂದು ಮಗು ಪಟ್ಟು ಹಿಡಿದು ಕುಳಿತಿದ್ದು, ಕಳೆದ ಒಂದೂವರೆ ತಿಂಗಳುಗಳಿಂದ ಮಗು ಶಾಲೆಯಿಂದ ಹೊರಗಿದ್ದರೂ ಅಧಿಕಾರಿಗಳು ಶಾಲೆಗೆ ಕರೆ ತರಲು ಮುಂದಾಗಿರಲಿಲ್ಲ. ನಿಕಟ ಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ಮಗು ಶಾಲೆಯಿಂದ ಹೊರಗುಳಿದಿರುವ ಬಗ್ಗೆ ಗೊತ್ತಿದ್ದರೂ, ಅವರು ಯಾವುದೇ ಕ್ರಮಕ್ಕೆ ಮುಂದಾಗಿರಲಿಲ್ಲ. ಅವರಿಗೆ ಕಾಳಜಿ ತಂಡದ ಸದಸ್ಯರು ಈ ವಿಚಾರವನ್ನು ಪದೇ ಪದೇ ಗಮನಕ್ಕೆ ತಂದರೂ, ಇದು ನನ್ನ ಕೆಲಸವೇ ಅಲ್ಲ, ಎಂಬಂತೆ ಬೇಜವಾಬ್ದಾರಿಯಿಂದ ವರ್ತಿಸಿದ್ದರು. ಇದರಿಂದ ಬೇಸತ್ತು ಕಾಳಜಿ ತಂಡವು ಉಪ ನಿರ್ದೇಶಕರ ಗಮನಕ್ಕೆ ತಂದರು. ಆದರೆ ಉಪ…
ತಿಪಟೂರು: ಕರ್ನಾಟಕ ಟ್ಯಾಕ್ಸಿ ಡ್ರೈವರ್ ಆರ್ಗನೈಸೇಷನ್ ಮತ್ತು ಸಮಾನ ಮನಸ್ಕ ಪ್ರವಾಸಿ ವಾಹನ ಸಂಘಟನೆಗಳ ವತಿಯಿಂದ, ಪ್ರವಾಸಿ ವಾಹನಗಳಿಗೆ ಅವೈಜ್ಞಾನಿಕ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಅಳವಡಿಕೆ ಆದೇಶದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ನಗರದ ಡಾ. ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಸಹ ಕಾರ್ಯದರ್ಶಿ ಯೋಗೇಶ್, ಕೇಂದ್ರ ಸಾರಿಗೆ ಇಲಾಖೆಯ ಆದೇಶದಂತೆ, ರಾಜ್ಯ ಸಾರಿಗೆ ಇಲಾಖೆಯು ನೀಡಿರುವ ವಾಣಿಜ್ಯ ವಾಹನಗಳಿಗೆ ಪ್ಯಾನಿಕ್ ಬಟನ್ ಮತ್ತು ಜಿ.ಪಿ.ಆರ್.ಎಸ್ ಎಂಬ ಅವೈಜ್ಞಾನಿಕವಾದ ಸಾಧನವನ್ನು ಅಳವಡಿಸಲು ನೀಡಿರುವ ಆದೇಶ ತುಂಬಾ ತ್ರಾಸದಾಯಕವಾಗಿದ್ದು, ರಾಜ್ಯದ ಎಲ್ಲಾ ವಾಣಿಜ್ಯ ವಾಹನಗಳು,ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್ ಚಾಲಕ– ಮಾಲೀಕರುಗಳಿಗೆ ಇದರಿಂದ ತುಂಬಾ ತೊಂದರೆಯಾಗಲಿದ್ದು, ಬಾರಿ ಸಂಕಷ್ಟದಿಂದ ಜೀವನ ನಡೆಸುತ್ತಿದ್ದೇವೆ. ಈ ಆದೇಶದಿಂದ ಮತ್ತಷ್ಟು ನಾವುಗಳು ಬೀದಿಗೆ ಬರಲಿದ್ದೇವೆ ಎಂದು ತಿಳಿಸಿದರು. ರಾಜ್ಯ ಜಂಟಿ ಕಾರ್ಯದರ್ಶಿ ಮಹಮ್ಮದ್ ಹುಸೇನ್ ಮಾತನಾಡಿ, ದುಬಾರಿ ತೆರಿಗೆ, ಸ್ಪೀಡ್ ಗವರ್ನರ್ ಬಾಡಿಗೆ…
ಬೀದರ್ ಜಿಲ್ಲೆಯಲ್ಲಿ ಸಚಿವ ಈಶ್ವರ ಖಂಡ್ರೆ ಮಳೆ ಹಾನಿ ವೀಕ್ಷಿಸಿದದರು. ಕಳೆದ ವಾರ ಬೀದರ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಬೀದರ ಜಿಲ್ಲೆಯಲ್ಲಿ ಸಾಕಷ್ಟು ಮನೆಗಳು ಹಾಗೂ ಬೆಳೆ ಹಾನಿಯಾಗಿದ್ದು, ಈ ಹಿನ್ನೆಲೆ ಗ್ರಾಮಗಳಿಗೆ ಅವರು ಭೇಟಿ ನೀಡಿದರು. ಬೀದರ್ ದಕ್ಷಿಣ ಕ್ಷೇತ್ರದ ಖಾಶೆಂಪುರ್, ಕಾಡವಾದ, ಚಟ್ನಳ್ಳಿ ಗ್ರಾಮಗಳಿಗೆ ಜಿಲ್ಲೆಯ ಉನ್ನತ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ, ಮನೆಯ ಗೋಡೆಗಳು ಹಾಗೂ ಮೇಲ್ಛಾವಣಿಗಳು ಕುಸಿದು ಬಿದ್ದಿರುವ ಬಗ್ಗೆ ಪರಿಶೀಲನೆ ನಡೆಸಿದರು. ಭಾಗಶಃ ಕುಸಿದಿರುವ ಮನೆಗೆ ತುರ್ತು 6,500 ರೂ. ನೀಡುವಂತೆ ಆದೇಶ ನೀಡಿದ ಅವರು, 50 ಸಾವಿರ ಪರಿಹಾರ ನೀಡುವಂತೆ ಸೂಚನೆ ನೀಡಿದರಲ್ಲದೇ, ಪೂರ್ತಿ ಮನೆ ಬಿದ್ದಿರುವ ಸಂತ್ರಸ್ಥರಿಗೆ (NDRF-SDRF) ಅಡಿ 1 ಲಕ್ಷ 20 ಸಾವಿರ ಹಾಗೂ ಸರ್ಕಾರದ ವತಿಯಿಂದ ಒಂದು ಮನೆ ಕೊಡುವ ಭರವಸೆಯನ್ನು ಸಚಿವ ಈಶ್ವರ ಖಂಡ್ರೆ ನೀಡಿದರು. ಮಳೆ ಅವಾಂತರದಿಂದ ಜಿಲ್ಲೆಯ ಜನರಿಗೆ ಸಂಕಷ್ಟ ಆಗದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು…
ಹೊಸ ಸಿನಿಮಾಗಳನ್ನು ಕೆಲವೇ ದಿನಗಳಲ್ಲಿ ವೆಬ್ ಸೈಟ್ ಗೆ ಅಪ್ ಲೋಡ್ ಮಾಡಿ ಚಿತ್ರ ನಿರ್ಮಾಪಕರಿಗೆ ನಷ್ಟ ಉಂಟು ಮಾಡುತ್ತಿದ್ದ ತಮಿಳ್ ರಾಕರ್ಸ್ ವೆಬ್ ಸೈಟ್ ಅಡ್ಮಿನ್ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸ್ಟೀಫನ್ ರಾಜ್ ಬಂಧಿತ ಆರೋಪಿಯಾಗಿದ್ದಾನೆ. ಈತ ಕೇರಳದ ತಿರುವನಂತಪುರಂನಲ್ಲಿರುವ ಏರಿಯಾಸ್ ಥಿಯೇಟರ್ ನಲ್ಲಿ ನಟ ಧನುಷ್ ಅಭಿನಯದ ರಾಯನ್ ಚಿತ್ರದ ರೆಕಾರ್ಡಿಂಗ್ ಮಾಡುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ. ಸ್ಟೀಫನ್ ಒಂದು ವರ್ಷಗಳಿಂದಲೂ ಹೊಸ ಸಿನಿಮಾ ರಿಲೀಸ್ ಆಗುತ್ತಿದ್ದಂತೆಯೇ ಮೊದಲಿಗೆ ಬರುತ್ತಿದ್ದನಂತೆ. ಸೀಟಿನಲ್ಲಿ ಚಿಕ್ಕ ಕ್ಯಾಮೆರಾ ಅಳವಡಿಸಿ ಹೊಸ ಚಿತ್ರಗಳ ವಿಡಿಯೋ ತೆಗೆಯುತ್ತಿದ್ದ ಎಂದು ಪೊಲೀಸರ ವಿಚಾರಣೆ ವೇಳೆ ಹೇಳಿದ್ದಾನೆ. ಒಂದು ಚಿತ್ರವನ್ನು ಈತ ವೆಬ್ ಸೈಟ್ ಗೆ ಅಪ್ ಲೋಡ್ ಮಾಡಿದ್ರೆ 5 ಸಾವಿರ ರೂಪಾಯಿ ಕಮಿಷನ್ ಸಿಗುತ್ತಿತ್ತು ಎಂದು ಆತ ತಿಳಿಸಿರುವುದಾಗಿ ತಿಳಿದು ಬಂದಿದೆ. ತಮಿಳ್ ರಾಕರ್ಸ್ ಅಂದ್ರೆ ಪೈರಸಿ ಮಾಡೋದ್ರಲ್ಲಿ ಪಂಟರ್ ಅಂತಲೇ ಕರೆಯಲ್ಪಡುತ್ತಾರೆ. ಈಗಾಗಲೇ ಇವರ ವಿರುದ್ಧ ಹಲವಾರು ಬಾರಿ…