Subscribe to Updates
Get the latest creative news from FooBar about art, design and business.
- ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
- ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
- ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
- ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
- ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
- ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
- ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
- ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
Author: admin
ತುಮಕೂರು: ಕಳೆದ ಕೆಲವು ದಿನಗಳಿಂದ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಮೈದಾಳ ಕೆರೆ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ನೀರು ಬಿಡುಗಡೆ ಮಾಡುವಂತೆ ಜಿಲ್ಲಾಡಳಿತಕ್ಕೆ ಆದೇಶ ನೀಡಿದ್ದಾರೆ. ಈ ಶುಭ ಸುದ್ದಿಯನ್ನು ಶಾಸಕ ಕೆ.ಎನ್. ರಾಜಣ್ಣ ಅವರು ಘೋಷಿಸುವ ಮೂಲಕ ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತರು ನಡೆಸುತ್ತಿದ್ದ ಪ್ರತಿಭಟನೆಯನ್ನು ಯಶಸ್ವಿಯಾಗಿ ಕೊನೆಗಾಣಿಸಿದರು. ಶನಿವಾರ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ಬಿ. ಸುರೇಶ್ ಗೌಡ ಅವರು ಮಳೆ ಕೊರತೆಯ ಹಿನ್ನೆಲೆಯಲ್ಲಿ ಕುಡಿಯುವ ನೀರಿಗಾಗಿ ಮೈದಾಳ ಕೆರೆಯ ನೀರನ್ನು ಸಂರಕ್ಷಿಸಬೇಕು, ಕಾಲುವೆಗೆ ಹರಿಸಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ನೀರು ಬಿಡುಗಡೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದನ್ನು ವಿರೋಧಿಸಿದ ಅಚ್ಚುಕಟ್ಟು ಪ್ರದೇಶದ ರೈತರು, ತಮ್ಮ ಸಾವಿರಾರು ಎಕರೆ ಅಡಿಕೆ ಮತ್ತು ತೆಂಗಿನ ತೋಟಗಳು ಒಣಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿ ಧರಣಿ ಆರಂಭಿಸಿದ್ದರು. ಕೆ.ಎನ್. ರಾಜಣ್ಣ ಮಧ್ಯಪ್ರವೇಶ: ರೈತರ ಹೋರಾಟಕ್ಕೆ ಬೆಂಬಲ ನೀಡಿದ ಶಾಸಕ ಕೆ.ಎನ್.ರಾಜಣ್ಣ, ಸೋಮವಾರ ಮಾಜಿ…
ಕುಣಿಗಲ್: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ಕೇವಲ ಅಧಿಕಾರ ಮತ್ತು ಕುರ್ಚಿ ಪೈಪೋಟಿಯಲ್ಲಿ ಮುಳುಗಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ. ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಮಾದಪ್ಪನಹಳ್ಳಿ ಗ್ರಾಮದಲ್ಲಿ ನಡೆದ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಉದ್ಘಾಟನೆ ಹಾಗೂ ಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾನೇ ಐದು ವರ್ಷ ಸಿಎಂ ಎನ್ನುತ್ತಿದ್ದರೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎರಡೂವರೆ ವರ್ಷದ ನಂತರ ತಾನು ಮುಖ್ಯಮಂತ್ರಿ ಎನ್ನುತ್ತಿದ್ದಾರೆ. ಬೆಂಬಲಿಗರ ಮೂಲಕ ಬಲ ಪ್ರದರ್ಶನ ಮಾಡುತ್ತಾ ಕುರ್ಚಿ ಪೈಪೋಟಿಯಲ್ಲಿ ತೊಡಗಿದ್ದಾರೆ. ಇದರಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದರು. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗುತ್ತಿದೆ. ಆದರೆ ಸರ್ಕಾರಕ್ಕೆ ಇದನ್ನು ಬಗೆಹರಿಸುವ ಆಸಕ್ತಿ ಇಲ್ಲ.ಇನ್ನೊಂದೆಡೆ ರಾಜ್ಯದಲ್ಲಿ ಮಾದಕ ವಸ್ತುಗಳ ಮಾರಾಟ, ಸೇವನೆ ಮತ್ತು ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಇವುಗಳನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದರು. ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ ಬೆಂಗಳೂರು…
ರಾಘವೇಂದ್ರ ಅಡಿಗ ಎಚ್ಚೆನ್ ಬೆಟ್ಟಿಂಗ್ ಆಟ ಹಿನ್ನೆಲೆಯ ಕಥೆ ಇರುವ ‘ಲೂಪ್’ ಚಿತ್ರದ ಟ್ರೈಲರ್ ಮತ್ತಿತರೆ ಕಂಟೆಂಟ್ ಗಳು ಈಗಾಗಲೇ ಬಿಡುಗಡೆಯಾಗಿ ಮೆಚ್ಚುಗೆ ಗಳಿಸಿದ್ದು ಲವ್ ಮತ್ತು ಸಸ್ಪೆನ್ಸ್ ಅಂಶಗಳನ್ನ ಹೊಂದಿರೋ ‘ಲೂಪ್’ ಸಿನಿಮಾ ಈಗಾಗಲೇ ಸೆನ್ಸಾರ್ ಮಂಡಳಿಯಿಂದ ಪ್ರಮಾಣಪತ್ರ ಪಡೆದಿದ್ದು ಇದೇ ಮೇ ೮ಕ್ಕೆ ತೆರೆಗೆ ಬರಲಿದೆ. ಸ್ಟಾಪ್ ಬೆಟ್ಟಿಂಗ್ಸ್, ನೋ ಡ್ರಗ್ಸ್ ಎನ್ನುವ ಸಂದೇಶವನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ಇತ್ತೀಚೆಗೆ ಒಳ್ಳೆ ಹುಡುಗ ಪ್ರಥಮ್ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿ ಶುಭ ಕೋರಿದ್ದರು. ಚಿತ್ರಕ್ಕೆ ಯಶವಂತ ಆಕ್ಷನ್–ಕಟ್ ಹೇಳಿದ್ದು, ಎಸ್.ಕೆ.ಎಲ್ಲಪ್ಪ ಹಾಗೂ ಯುವಿ ಪ್ರಮೋಷನ್ ಉಮೇಶ್ K N ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಶಶಿಕಿರಣ್ ಗೆ ಶೋಭಿತ ಜೋಡಿಯಾಗಿದ್ದು ಮಿಮಿಕ್ರಿ ಗೋಪಿ, ಅಪ್ಪುರಾಜ್, ಅಭಿ ಸಾಮ್ರಾಟ್, ಮಂಜುಳಾ ಅರಸ್, ಗಣೇಶ್, ಜೀವನ್ ಗೌಡ ಕೂಡ ನಟಿಸಿದ್ದಾರೆ. ಜೀವನ್ ಗೌಡ ಸಿನಿಮಾಟೋಗ್ರಾಫಿ, ಸಂತೋಷ್ ಜೋಶ್ವ ಮ್ಯೂಸಿಕ್ ಮತ್ತು ಅನಿಲ್ ಆಚಾರ್ ಸಂಕಲನ ಚಿತ್ರಕ್ಕಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಔರಾದ್: ತಾಲೂಕಿನ ಸಂತಪೂರ್ ಗ್ರಾಮದ ಹೋಲಿ ಕ್ರಾಸ್ ಚರ್ಚಿನಲ್ಲಿ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ರಾಜ್ಯ ಉಪಾಧ್ಯಕ್ಷರಾದ ಸಂಜಯ್ ಜಾಗೀರ್ದಾರ್ ಅವರ ನೇತೃತ್ವದಲ್ಲಿ ತಾಲೂಕಿನ ಕ್ರಿಶ್ಚಿಯನ್ ಮುಖಂಡರ ಮಹತ್ವದ ಸಭೆ ಜರುಗಿತು. ಸಮುದಾಯದ ಜನರ ಕುಂದುಕೊರತೆಗಳು ಹಾಗೂ ಚರ್ಚುಗಳ ಅಭಿವೃದ್ಧಿ ಕುರಿತು ಸಂಜಯ್ ಜಾಗೀರ್ದಾರ್ ಅವರು ಸಮಾಲೋಚನೆ ನಡೆಸಿದರು. “ಸರ್ಕಾರವು ನಿಗಮದ ಮೂಲಕ ಕ್ರಿಶ್ಚಿಯನ್ ಸಮುದಾಯದ ಏಳಿಗೆಗಾಗಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಅನೇಕ ಯೋಜನೆಗಳನ್ನು ರೂಪಿಸಿದೆ. ಸಮುದಾಯದ ಜನರು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಸಬಲರಾಗಲು ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು” ಎಂದು ಅವರು ಕರೆ ನೀಡಿದರು. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸಮುದಾಯದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು. ಸಭೆಯಲ್ಲಿ ಬೀದರ್ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಅರ್ಜುನ್ ಕನಕ, ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಸುಧಾಕರ್ ಕೊಳ್ಳುರ, ಫಾದರ್ ಸ್ಟೀವನ್, ಜಗನ್ನಾಥ ಕೌಠಾ, ಜೇಮ್ಸ್ ರಕ್ಷಳ, ಜಾನ್ಸನ್, ದಾವಿದ, ಅನಿಲ, ಅಶೋಕ ಪಾಸ್ಟರ್, ಪ್ರಭುದಾಸ, ಜೀವನ ಜಾಗಿರದಾರ, ಸುಭಾಷ್,…
ತುಮಕೂರು: ಜಿಲ್ಲೆಯ ಸುಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸಿ ತಾಣವಾದ ಸಿದ್ದರಬೆಟ್ಟದ ನೈಸರ್ಗಿಕ ಸಮತೋಲನವನ್ನು ಕಾಪಾಡುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಸ್ವಚ್ಛತಾ ಅಭಿಯಾನವು ಅತ್ಯಂತ ಯಶಸ್ವಿಯಾಗಿ ಜರುಗಿತು. ಸಾಮಾಜಿಕ ಕಾರ್ಯಕರ್ತ ಹಾಗೂ ಪ್ರಗತಿಪರ ಚಿಂತಕ ಸಲೀಂ ಖಾನ್ ತುಮಕೂರು ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಈ ಅಭಿಯಾನದಲ್ಲಿ ವಿವಿಧ ಸಂಘ–ಸಂಸ್ಥೆಗಳು ಮತ್ತು ಒಕ್ಕೂಟಗಳು ಕೈಜೋಡಿಸಿದ್ದವು. ಸ್ಥಳೀಯ ಸ್ವಯಂಸೇವಕರು ಮಾತ್ರವಲ್ಲದೆ ಚಿತ್ರದುರ್ಗ, ಮಂಡ್ಯ ಹಾಗೂ ಬೆಂಗಳೂರಿನಿಂದ ಆಗಮಿಸಿದ್ದ ಪರಿಸರ 6 ರಾಯಭಾರಿಗಳು ಮತ್ತು ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದರು. ಬೆಟ್ಟದ ಪರಿಸರದಲ್ಲಿ ಬಿದ್ದಿದ್ದ ಸರಿಸುಮಾರು 20 ಕೆಜಿ ಪ್ಲಾಸ್ಟಿಕ್ ಕಸವನ್ನು ಸಂಗ್ರಹಿಸಿದ ತಂಡವು, ಅದನ್ನು ವ್ಯವಸ್ಥಿತವಾಗಿ ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನಕ್ಕೆ ಹಸ್ತಾಂತರಿಸಿತು. ಸತತ 15 ದಿನಗಳ ಪೂರ್ವ ಸಿದ್ಧತೆಯೊಂದಿಗೆ ನಡೆದ ಈ ಕಾರ್ಯಕ್ರಮವು ಶಿಸ್ತು ಮತ್ತು ಸೌಹಾರ್ದತೆಗೆ ಮಾದರಿಯಾಯಿತು. ಅಭಿಯಾನದ ಕುರಿತು ಮಾತನಾಡಿದ ಭಾವೈಕ್ಯ ಯುವಜನ ಸಂಘದ ಸಲೀಂ ಖಾನ್, “ಯಾವುದೇ ಭೇದ-ಭಾವವಿಲ್ಲದೆ ಪ್ರಕೃತಿಯ ಋಣ ತೀರಿಸಲು ನಾವೆಲ್ಲರೂ ಒಂದಾಗಿದ್ದೇವೆ. ಈ ಮೌನ…
ಬಳ್ಳಾರಿ: ಪ್ಯಾನ್ ಐಐಟಿ ಅಲ್ಯೂಮ್ನಿ ಇಂಡಿಯಾ ಅಸೋಸಿಯೇಷನ್ ಮತ್ತು ಕರ್ನಾಟಕ ಸರ್ಕಾರದ ಸಹಯೋಗದಲ್ಲಿ, ಮೇ 16ರಂದು ಬೆಂಗಳೂರಿನಲ್ಲಿ “ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026” ಆಯೋಜಿಸಲಾಗಿದೆ. “ತಂತ್ರಜ್ಞಾನದಲ್ಲಿನ ಸ್ವಾಯತ್ತತೆ” ಎಂಬ ವಿಷಯದಡಿ ಈ ಸಮಿಟ್ ನಡೆಯಲಿದೆ ಎಂದು ಕರ್ನಾಟಕ ಸರ್ಕಾರದ ಇ-ಆಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕರ್ನಾಟಕ, ವಿಶೇಷವಾಗಿ ಬೆಂಗಳೂರು, ಇಂದು ಭಾರತದ ತಂತ್ರಜ್ಞಾನ ಮಹತ್ವಾಕಾಂಕ್ಷೆಯ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ದೇಶದ ಪ್ರಮುಖ ಜಿಡಿಪಿ ಕೊಡುಗೆ ನೀಡುವ ನಗರಗಳಲ್ಲಿ ಬೆಂಗಳೂರು ಒಂದಾಗಿದ್ದು, ವೆಂಚರ್ ಕ್ಯಾಪಿಟಲ್ ಹೂಡಿಕೆಗಳ ಪ್ರಮುಖ ಕೇಂದ್ರವಾಗಿಯೂ ಗುರುತಿಸಿಕೊಂಡಿದೆ. ಸ್ಟಾರ್ಟ್‌ಅಪ್‌ಗಳ ನಿಧಿ ಸಂಗ್ರಹ ಹಾಗೂ ನವೀನ ಚಟುವಟಿಕೆಗಳಲ್ಲಿ ಮಹತ್ತರ ಪಾತ್ರವಹಿಸಿರುವುದು, ಸಾವಿರಾರು ಇಂಜಿನಿಯರಿಂಗ್ ಕಾಲೇಜುಗಳು ಹಾಗೂ ವಿಶ್ವದ ಅತಿ ದೊಡ್ಡ ಪ್ರತಿಭಾ ಸಂಪನ್ಮೂಲಗಳಲ್ಲಿ ಒಂದನ್ನು ಹೊಂದಿರುವುದು—ಈ ಎಲ್ಲ ಕಾರಣಗಳಿಂದ ಬೆಂಗಳೂರು “ಪೂರ್ವದ ಸಿಲಿಕಾನ್ ವ್ಯಾಲಿ” ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಅವರು ಹೇಳಿದರು. ಸಾರ್ವಜನಿಕ ವಲಯ ಮತ್ತು ತಾಂತ್ರಿಕ ಕಂಪನಿಗಳ ಮೂಲಕ ಏರೋಸ್ಪೇಸ್, ರಕ್ಷಣಾ…
ಬಳ್ಳಾರಿ: ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ, ಕಾರ್ಮಿಕರ ಆಹಾರ, ಬಟ್ಟೆ ಮತ್ತು ವಸತಿ ಅಗತ್ಯತೆಗಳನ್ನು ಪರಿಗಣಿಸಿ, ಚರ್ಚಿಸಿ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಅವರು ಹೇಳಿದರು. ಸಂಡೂರು ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಸಂಡೂರು ತಾಲ್ಲೂಕಿನ ತಾಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ಸಂಡೂರು ಸಂಕಲ್ಪ ಸಮರ್ಪಣಾ ಸಮಾವೇಶ–2 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ಸರ್ಕಾರವು ಅಸಂಘಟಿತ ವಲಯದ ಕಾರ್ಮಿಕರ ಏಳಿಗೆಗೆ ಬದ್ಧವಾಗಿದ್ದು, ಅಂಬೇಡ್ಕರ್ ಸಹಾಯಹಸ್ತ ಕಾರ್ಯಕ್ರಮದ ಮೂಲಕ ವಿವಿಧ ಅಸಂಘಟಿತ ವಲಯಗಳ ಜನರನ್ನು ಮುಖ್ಯವಾಹಿನಿಗೆ ತರಲಾಗುತ್ತಿದೆ ಎಂದರು. ಅಮೆಜಾನ್, ಜೊಮ್ಯಾಟೊ, ಸ್ವಿಗ್ಗಿ ಮುಂತಾದ ಆನ್ ಲೈನ್ ಕಂಪನಿಗಳಲ್ಲಿ ಕೆಲಸ ಮಾಡುವ ಡೆಲಿವರಿ ಬಾಯ್ ಗಳ ಹಿತರಕ್ಷಣೆಗಾಗಿ ಭಾರತದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಗಿಗ್ ವರ್ಕರ್ಸ್ ಬಿಲ್ ಕಾನೂನು ತರಲಾಗಿದೆ. ಚಾಲಕರು ಮತ್ತು ಕ್ಲೀನರ್…
ಗುಬ್ಬಿ (ತುಮಕೂರು): ತಾಲ್ಲೂಕಿನ ಅಂಬಾರಪುರ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆಯೊಂದು ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಅಂಬಾರಪುರ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಹಾವಳಿ ಮಿತಿಮೀರಿತ್ತು. ಇದರಿಂದಾಗಿ ಗ್ರಾಮಸ್ಥರು ಸಂಜೆ ವೇಳೆಗೆ ಮನೆಯಿಂದ ಹೊರಬರಲು ಹಾಗೂ ತಮ್ಮ ದನಕರುಗಳನ್ನು ಮೇಯಿಸಲು ತೀವ್ರ ಭಯಭೀತರಾಗಿದ್ದರು. ಗ್ರಾಮಸ್ಥರ ನಿರಂತರ ಒತ್ತಾಯ ಮತ್ತು ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಚಿರತೆ ಸಂಚರಿಸುವ ಆಯಕಟ್ಟಿನ ಜಾಗದಲ್ಲಿ ಬೋನು ಇರಿಸಿದ್ದರು. ಭಾನುವಾರ ಬೆಳಗಿನ ಜಾವ ಸುಮಾರು 3 ವರ್ಷದ ಹೆಣ್ಣು ಚಿರತೆಯು ಆಹಾರದ ಆಮಿಷಕ್ಕೆ ಒಳಗಾಗಿ ಬೋನಿನಲ್ಲಿ ಸೆರೆಯಾಗಿದೆ. ಬೆಳಿಗ್ಗೆ ಚಿರತೆ ಬೋನಿಗೆ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೆರೆಯಾದ ಚಿರತೆಯನ್ನು ಸುರಕ್ಷಿತವಾಗಿ ಬೋನಿನ ಸಮೇತ ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ. ಚಿರತೆ ಸೆರೆಯಾಗಿರುವುದರಿಂದ ಅಂಬಾರಪುರ ಗ್ರಾಮದ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ನಮ್ಮತುಮಕೂರಿನ…
ಮಧುಗಿರಿ: ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಬೆನಕನಹಳ್ಳಿ–ಮಿಡಿಗೇಶಿ ರಸ್ತೆಯ ಸಮೀಪವಿರುವ ಹೊಂಡಕ್ಕೆ ಬಿದ್ದು ಅಕ್ಕ ಮತ್ತು ತಮ್ಮ ಸಾವನ್ನಪ್ಪಿರುವ ಧಾರುಣ ಘಟನೆ ಭಾನುವಾರ ನಡೆದಿದೆ. ಮಧುಗಿರಿ ತಾಲ್ಲೂಕಿನ ಕಸಾಪುರ ಗ್ರಾಮದ ನಿವಾಸಿ ಮಂಜುನಾಥ್ ಎಂಬುವವರ ಮಕ್ಕಳಾದ ಸುಚಿತ್ರಾ (11) ಮತ್ತು ರವೀಂದ್ರ (9) ಮೃತಪಟ್ಟ ದುರ್ದೈವಿಗಳು. ಮಂಜುನಾಥ್ ಅವರ ಮೂವರು ಮಕ್ಕಳು ಅಂದು ಮೇಕೆ ಮೇಯಿಸಲು ಹೋಗಿದ್ದರು. ಈ ಸಂದರ್ಭದಲ್ಲಿ ನೀರು ಕುಡಿಯಲೆಂದು ಹೊಂಡದ ಬಳಿ ಹೋದಾಗ ಮೊದಲು ರವೀಂದ್ರ ಕಾಲುಜಾರಿ ಹೊಂಡಕ್ಕೆ ಬಿದ್ದಿದ್ದಾನೆ. ನೀರಿನಲ್ಲಿ ಮುಳುಗುತ್ತಿದ್ದ ತಮ್ಮನನ್ನು ರಕ್ಷಿಸಲು ಹೋದ ಅಕ್ಕ ಸುಚಿತ್ರಾ ಕೂಡ ಕಾಲುಜಾರಿ ಹೊಂಡಕ್ಕೆ ಬಿದ್ದಿದ್ದಾಳೆ. ಇವರಿಬ್ಬರೂ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ಮತ್ತೊಬ್ಬ ಮಗಳು ತಕ್ಷಣ ಪೋಷಕರನ್ನು ಕರೆತರಲು ಓಡಿದ್ದಾಳೆ. ಆದರೆ, ಪೋಷಕರು ಸ್ಥಳಕ್ಕೆ ಬರುವಷ್ಟರಲ್ಲಿ ಇಬ್ಬರೂ ಮಕ್ಕಳು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. “ಪಕ್ಷದ ಹೈಕಮಾಂಡ್ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ, ಯಾವಾಗ ಏನು ಆಗಬೇಕೋ ಅದು ಆಗಿಯೇ ತೀರುತ್ತದೆ” ಎಂದು ಅವರು ಹೇಳಿದ್ದಾರೆ. ನಾಯಕತ್ವದ ಬದಲಾವಣೆ ಅಥವಾ ಅಧಿಕಾರ ಹಂಚಿಕೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ವರಿಷ್ಠರ ತೀರ್ಮಾನಕ್ಕೆ ತಾವು ತಲೆಬಾಗುವುದಾಗಿ ತಿಳಿಸಿದರು. ಈ ಮೂಲಕ ಪಕ್ಷದ ಆಂತರಿಕ ವಿಚಾರಗಳನ್ನು ಹೈಕಮಾಂಡ್ ಗಮನಿಸುತ್ತಿದೆ ಎಂಬ ಸಂದೇಶ ರವಾನಿಸಿದ್ದಾರೆ. ಇದೇ ಮೇ 15 ರಂದು ತಮ್ಮ ಜನ್ಮದಿನವಿದ್ದು, ಅಭಿಮಾನಿಗಳು ಹಾಗೂ ಬೆಂಬಲಿಗರು ಯಾವುದೇ ಕಾರಣಕ್ಕೂ ಫ್ಲೆಕ್ಸ್ ಅಥವಾ ಬ್ಯಾನರ್‌ಗಳನ್ನು ಹಾಕಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಸರಳವಾಗಿ ಜನ್ಮದಿನ ಆಚರಿಸಲು ಅವರು ಮನವಿ ಮಾಡಿದ್ದಾರೆ. ಸುಮಾರು 30–40 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಒಳ ಮೀಸಲಾತಿ ಸಮಸ್ಯೆಗೆ ತಮ್ಮ ಸರ್ಕಾರ ನ್ಯಾಯ ಒದಗಿಸಿದೆ. ಸಾಮಾಜಿಕ ನ್ಯಾಯದ…