Subscribe to Updates
Get the latest creative news from FooBar about art, design and business.
- ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!
- ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
- ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್ ಬುಕ್ ಅಡ್ಮಿನ್ ಗಳ ವಿರುದ್ಧ ಎಫ್ ಐಆರ್ ದಾಖಲು
- ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!
- ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
- ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
- ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
Author: admin
ಆಲ್ಕೋಹಾಲ್ ಪ್ರಿಯರೇ, ನೀವು ಕುಡಿಯುವ ಮದ್ಯ ಸಸ್ಯಾಹಾರಿಯೇ? ಅಥ್ವಾ ಇದು ಮಾಂಸಾಹಾರಿಯೇ? ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಮದ್ಯ ಸೇವಿಸುವ ಮೊದಲು, ಅದು ಯಾವುದರಿಂದ ಮಾಡಲ್ಪಟ್ಟಿದೆ ಎಂಬುದನ್ನ ಮೊದಲು ಗಮನಿಸಬೇಕು. ವಾಸ್ತವವಾಗಿ, ಆಲ್ಕೋಹಾಲ್’ನ್ನ ಸಾಮಾನ್ಯವಾಗಿ ಸಂಪೂರ್ಣ ಸಸ್ಯಾಹಾರಿ ಆಹಾರವೆಂದು ಪರಿಗಣಿಸಲಾಗುತ್ತದೆ. ಆದಾಗ್ಯೂ, ವೈನ್ ಮತ್ತು ಬಿಯರ್’ನಂತಹ ಆಲ್ಕೋಹಾಲ್ ಮಾಂಸಾಹಾರಿ ಎಂದು ಕೆಲವು ವರದಿಗಳು ಹೇಳುತ್ತವೆ. ಮದ್ಯವನ್ನು ಸಾಮಾನ್ಯವಾಗಿ ಸಂಪೂರ್ಣ ಸಸ್ಯಾಹಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ ವೈನ್ ಮತ್ತು ಬಿಯರ್ ಅನ್ನು ಮಾಂಸಾಹಾರಿ ಎಂದು ಪರಿಗಣಿಸಲಾಗುತ್ತದೆ. ವೋಡ್ಕಾ, ಜಿನ್, ರಮ್, ಟಕಿಲಾ ಸಂಪೂರ್ಣ ಸಸ್ಯಾಹಾರಿ. ಯಾಕಂದ್ರೆ, ಅವುಗಳನ್ನು ಹಣ್ಣುಗಳು ಅಥವಾ ಧಾನ್ಯಗಳಿಂದ ತಯಾರಿಸಲಾಗುತ್ತದೆ. ಆದ್ರೆ, ವೈನ್ ಮತ್ತು ಬಿಯರ್ ಆಗಲ್ಲ. ವಾಸ್ತವವಾಗಿ, ಜೆಲ್ಟಿನ್, ಗಾಜು ಮತ್ತು ಮೊಟ್ಟೆಗಳನ್ನ ವೈನ್ ಮತ್ತು ಬಿಯರ್ ತಯಾರಿಕೆಯಲ್ಲಿ ಬಳಸಲಾಗುತ್ತದೆ, ಇದು ಮಾಂಸಾಹಾರಿ ವರ್ಗಕ್ಕೆ ಸೇರುತ್ತದೆ. ಆದಾಗ್ಯೂ, ಅವುಗಳನ್ನ ಎಲ್ಲಾ ರೀತಿಯ ಬಿಯರ್ ಮತ್ತು ವೈನ್’ನಲ್ಲಿ ಬಳಸಲಾಗುವುದಿಲ್ಲ. ಕೆಲವು ವೆಜ್ ಬಿಯರ್’ಗಳೂ ಇವೆ. ಜೆಲಾಟಿನ್, ಗಾಜು ಮತ್ತು ಮೊಟ್ಟೆಗಳನ್ನು…
ಪ್ರಮುಖ ಟೆಲಿಕಾಂ ಆಪರೇಟರ್‌ಗಳಾದ Jio, Airtel ಮತ್ತು Vi ತಮ್ಮ ರೀಚಾರ್ಜ್ ಯೋಜನೆಗಳ ಬೆಲೆಗಳನ್ನು ಸರಾಸರಿ 15 ಪ್ರತಿಶತದಷ್ಟು ಹೆಚ್ಚಿಸಿವೆ. ಹೊಸ ದರಗಳು ಜಾರಿಗೆ ಬಂದಿರುವುದಕ್ಕೆ ದೇಶದಲ್ಲಿ ಸರ್ಕಾರಿ ಸ್ವಾಮ್ಯದ BSNL (ಭಾರತ್ ಸಂಚಾರ್ ನಿಗಮ್ ಲಿಮಿಟೆಡ್) ಗೆ ಹಿಂತಿರುಗಲು ಅಭಿಯಾನ ಆರಂಭವಾಗಿದೆ. ಅಭಿಯಾನದ ಭಾಗವಾಗಿ ಒಂದೇ ದಿನಕ್ಕೆ ಲಕ್ಷಕ್ಕೂ ಹೆಚ್ಚು ಮಂದಿ ಬಿಎಸ್‌ಎನ್‌ಎಲ್‌ಗೆ ತಮ್ಮ ಸಿಮ್ ಅನ್ನು ಪೋರ್ಟ್ ಮಾಡಿಕೊಂಡಿದ್ದಾರೆ. ಕಡಿಮೆ ಬೆಲೆಗೆ BSNL ಸಂಸ್ಥೆ ತನ್ನ ಗ್ರಾಹಕರಿಗೆ ರೀಚಾರ್ಜ್ ಪ್ಲಾನ್ ಗಳನ್ನು ಕೂಡ ಪರಿಶೀಸುವಂತಹ ಕೆಲಸವನ್ನು ಮಾಡುತ್ತಿರುವುದರಿಂದಾಗಿ ಗ್ರಾಹಕರು ಈ ವಿಚಾರದಿಂದಲೂ ಕೂಡ ಇಂಪ್ರೆಸ್ ಆಗಿದ್ದು, ಅಂಥವರಿಗೆ ಮನೆಯಲ್ಲಿ ಕುಳಿತುಕೊಂಡು ಯಾವ ರೀತಿಯಲ್ಲಿ BSNL SIM ಗೆ ಪೋರ್ಟ್ ಆಗಬಹುದು ಎನ್ನುವುದನ್ನು ಇಲ್ಲಿದೆ ನೋಡಿ. ಮೊದಲಿಗೆ 1900 ನಂಬರ್ಗೆ ನೀವು ಪೋರ್ಟ್ ರಿಕ್ವೆಸ್ಟ್ ಮೆಸೇಜ್ ಅನ್ನು ಮೊದಲಿಗೆ ಕಳುಹಿಸಬೇಕಾಗುತ್ತದೆ. ಇದಕ್ಕಾಗಿ ನೀವು ಆ ನಂಬರ್ಗೆ PORT ಎಂಬುದಾಗಿ ಮೆಸೇಜ್ ಮಾಡಬೇಕಾಗಿರುತ್ತದೆ. ಎಲ್ಲಿ ನಿಮಗೆ ಯೂನಿಕ್ ಪೊರ್ಟಿಂಗ್ ಕೋಡ್ ಸಿಗುತ್ತದೆ. ಇದು…
ಬಿಜೆಪಿ ಜಿಪಂ ಸದಸ್ಯ ಯೋಗೇಶ ಗೌಡ ಹತ್ಯೆ ಪ್ರಕರಣದ ಆರೋಪಿಯಾಗಿರೋ ವಿನಯ್ ಕುಲಕರ್ಣಿಗೆ ಸಿಬಿಐ ನ್ಯಾಯಾಲಯ ಧಾರವಾಡ ಕ್ಷೇತ್ರ ಪ್ರವೇಶಿಸದಂತೆ ನಿರ್ಬಂಧ ಹೇರಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಕ್ಷೇತ್ರಕ್ಕೆ ಭೇಟಿ ನೀಡದೆಯೇ ಬಿಜೆಪಿ ಅಭ್ಯರ್ಥಿ ವಿರುದ್ಧ ಗೆದ್ದಿದ್ದರು. ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು, ಕ್ಷೇತ್ರ ಪ್ರವೇಶಕ್ಕೆ ನಿರ್ಬಂಧ ಮುಂದುವರಿದಿದೆ. ಮುಂದಿನ ತಿಂಗಳು ಇದೇ ವಿಚಾರದಲ್ಲಿ ಕೋರ್ಟ್ ವಿಚಾರಣೆ ಇದ್ದು, ಈ ಎಲ್ಲಾ ಬೆಳವಣಿಗೆಗಳ ನಡುವೆ ಕೋಲ ಸೇವೆ ಕೊಟ್ಟಿದ್ದಾರೆ. ಕೋಲಸೇವೆ ಬಗ್ಗೆ ಶಾಸಕ ವಿನಯ್ ಕುಲಕರ್ಣಿ ಹೇಳಿಕೆ ನೀಡಿದ್ದು, ಚುನಾವಣಾ ಪೂರ್ವದಲ್ಲಿಯೇ ಕೋಲ ಸೇವೆಯ ಬಗ್ಗೆ ಕಾಂಗ್ರೆಸ್ ನಾಯಕರು ಹೇಳಿದ್ದರು. ಮಂಗಳೂರಿನ ನನ್ನ ಸ್ನೇಹಿತರು ಕೋಲ ಸೇವೆ ಕೊಡೋ ಬಗ್ಗೆ ಹೇಳಿದ್ದರು. ಈಗ ಘಳಿಗೆ ಕೂಡಿ ಬಂದ ಹಿನ್ನೆಲೆ ಕೋಲ ಸೇವೆ ಕೊಟ್ಟಿದ್ದೇನೆ. ಕುಟುಂಬ ಸಮೇತರಾಗಿ ಬಂದು ಕೋಲ ಸೇವೆಯಲ್ಲಿ ಭಾಗಿಯಾಗಿದ್ದೇನೆ ಎಂದಿದ್ದಾರೆ. ವಿಧಾನಸಭಾ ಚುನಾವಣೆಯ ಗೆಲುವಿನ ಹಿನ್ನೆಲೆಯಲ್ಲಿ ತುಳುನಾಡಿನ ಆರಾಧ್ಯದೈವ ಕೊರಗಜ್ಜನಿಗೆ ಹರಕೆಯ ಕೋಲ ಸೇವೆ ಸಲ್ಲಿಸಲು ಆಗಮಿಸಿದ್ದ…
ಮನೆ ಹಿತ್ತಲಿನಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ 13 ಅಡಿ ಉದ್ದದ ಹೆಬ್ಬಾವನ್ನು ಉರಗ ತಜ್ಞ ದಿಲೀಪ್ ಸೆರೆಹಿಡಿದು ದೇವರಾಯನದುರ್ಗ ಅರಣ್ಯಕ್ಕೆ ಬಿಟ್ಟಿದ್ದಾರೆ. ತುಮಕೂರು ತಾಲೂಕು ಅಯ್ಯನಪಾಳ್ಯ ಗ್ರಾಮದ ಪುಟ್ಟಯ್ಯ ಎಂಬುವರ ಮನೆ ಹಿತ್ತಲಿನಲ್ಲಿ ಹೆಬ್ಬಾವು ಪ್ರತ್ಯಕ್ಷವಾಗಿತ್ತು. ಹುಲ್ಲನ್ನು ಕುಯ್ಯಲು ಹೋದ ಪುಟ್ಟಯ್ಯ ಬೃಹತ್ ಗಾತ್ರದ ಹೆಬ್ಬಾವನ್ನು ಕಂಡು ಭಯಬೀತರಾಗಿದ್ದಾರೆ. ತಕ್ಷಣ ತುಮಕೂರಿನ ವಾರಂಗಲ್ ವಾನ್ಯಜೀವಿ ಜಾಗೃತ ಹಾಗೂ ಉರಗ ರಕ್ಷಣಾ ಸಂಸ್ಥೆಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಉರಗ ತಜ್ಞ ದಿಲೀಪ್ ಮತ್ತು ಹನುಮಯ್ಯ ಅರ್ಧ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ 13 ಅಡಿ ಉದ್ದದ ಹೆಬ್ಬಾವನ್ನು ಸೆರೆಹಿಡಿದಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ವಾರಂಗಲ್ ವನ್ಯಜೀವಿ ಜಾಗೃತ ಹಾಗೂ ಉರಗ ರಕ್ಷಣಾ ಸಂಸ್ಥೆ ಯವರು ರಕ್ಷಣೆ ಮಾಡಿದ್ದ ಹೆಬ್ಬಾವ ಹಾವನ್ನು ದೇವರಾಯನದುರ್ಗ ಅರಣ್ಯಕ್ಕೆ ಬಿಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296…
ಮಂಡ್ಯ: ಜಲಾಶಯಕ್ಕೆ ಒಳಹರಿವು ಏರಿಕೆ ಹಿನ್ನೆಲೆಯಲ್ಲಿ ಕೆಆರ್‍ಎಸ್ ಅಣೆಕಟ್ಟೆಯಿಂದ ಕಾವೇರಿ ನದಿಗೆ ಒಂದು ಲಕ್ಷದ ಮೂವತ್ತು ಸಾವಿರ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಹರಿಸುತ್ತಿದ್ದು, ನದಿಯಲ್ಲಿ ಪ್ರವಾಹ ಉಂಟಾಗಿದೆ. ಶ್ರೀರಂಗಪಟ್ಟಣದ ನದಿ ತೀರದ ದೇವಾಲಯ, ಐತಿಹಾಸಿಕ ಕಟ್ಟಡಗಳು, ರಸ್ತೆಗಳು ಜಲಾವೃತವಾಗಿವೆ. ಪಟ್ಟಣದ ಹೊರವಲಯದ ಗಂಜಾಂನಲ್ಲಿರುವ ಪ್ರಸಿದ್ಧ ನಿಮಿಷಾಂಬ ದೇವಾಲಯದ ಆವರಣ ಜಲಾವೃತವಾಗಿದೆ. ದೇವಾಲಯದ ಮೆಟ್ಟಿಲುಗಳು ಮುಳುಗಡೆಯಾಗಿವೆ. ದೇವಸ್ಥಾನದಲ್ಲಿ ತರಕಾರಿ, ಇತರೆ ಪದಾರ್ಥಗಳನ್ನು ನೆಲದ ಮೇಲೆ ಮಾರಾಟ ಮಾಡುತ್ತಿದ್ದ ವ್ಯಾಪಾರಗಾರರು ತೊಂದರೆಗೊಳಗಾಗಿದ್ದಾರೆ. 1991ರಲ್ಲೂ ದೇವಾಲಯದ ಆವರಣ ಜಲಾವೃತವಾಗಿತ್ತು. ಪ್ರಸಿದ್ಧ ರಂಗನತಿಟ್ಟು ಬಳಿ ಕಾವೇರಿ ತುಂಬಿ ಹರಿಯುತ್ತಿರುವುದರಿಂದ ಪಕ್ಷಿಧಾಮಕ್ಕೆ ನೀರು ನುಗ್ಗಿದೆ. ಮರಗಳು ಮರಳಗಳಲ್ಲಿರುವ ಪಕ್ಷಿಗಳು ತೊಂದರೆಯಲ್ಲಿವೆ. ಶ್ರೀರಂಗಪಟ್ಟಣದ ಬಳಿ ಇರುವ ಐತಿಹಾಸಿಕ ವೆಲ್ಲೆಸ್ಲಿ ಸೇತುವೆ ಮಟ್ಟದವರೆಗೆ ನದಿಯಲ್ಲಿ ನೀರು ಹರಿಯುತ್ತಿದ್ದು, ಮುಳುಗುವ ಹಂತ ತಲುಪಿದೆ. ಪಟ್ಟಣದಿಂದ ಪಾಲಹಳ್ಳಿ ಮಾರ್ಗವಾಗಿ ಮೈಸೂರು, ಕೆಆರ್‍ಎಸ್, ರಂಗನತಿಟ್ಟು ಪಕ್ಷಿಧಾಮಕ್ಕೆ ಸಂಪರ್ಕ ಕಲ್ಪಿಸುವ ಪಶ್ಚಿಮ ವಾಹಿನಿ ಬಳಿಯ ರೈಲ್ವೆ ಸೇತುವೆಯ ಕೆಳಗಿನ ರಸ್ತೆಯಲ್ಲಿ ನೀರು ಹರಿಯುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮುಂಬೈನಲ್ಲಿ 20ರ ಹರೆಯದ ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನೇ ಬರ್ಬರವಾಗಿ ಇರಿದು ಕೊಂದು, ಆಕೆಯ ಶವವನ್ನು ರೈಲ್ವೆ ನಿಲ್ದಾಣದ ಬಳಿಯ ಪೊದೆಯಲ್ಲಿ ಎಸೆದಿರುವ ಘಟನೆ ನಡೆದಿದೆ. ಕೊಲೆಯಾದ ಯುವತಿಯನ್ನು ಯಶಶ್ರೀ ಶಿಂಧೆ ಎಂದು ಗುರುತಿಸಲಾಗಿದೆ ಅಂದಹಾಗೆ ಯಶಶ್ರೀಯು ನಾಪತ್ತೆಯಾಗಿದ್ದಾಳೆ ಎಂದು ದೂರು ದಾಖಲಾಗಿತ್ತು. ಈಕೆ ಊರನ್ ನಿವಾಸಿಯಾಗಿದ್ದು, ಸುಮಾರು 25 ಕಿ.ಮೀ ದೂರದ ಬೇಲಾಪುರದಲ್ಲಿ ಕೆಲಸ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಘಟನೆಯ ಕುರಿತು ಉಪ ಪೊಲೀಸ್ ಆಯುಕ್ತ (ನವಿ ಮುಂಬೈ) ವಿವೇಕ್ ಪನ್ಸಾರೆ ಪ್ರತಿಕ್ರಿಯಿಸಿ, ಉರಾನ್ ರೈಲು ನಿಲ್ದಾಣದ ಬಳಿಯ ಪೊದೆಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ ಎಂದು ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ಪೊಲೀಸರಿಗೆ ಕರೆ ಬಂದಿತ್ತು. ಆಕೆಯ ಮೃತದೇಹ ಅನೇಕ ಗಾಯದ ಗುರುತುಗಳು ಮತ್ತು ಇರಿತದ ಗಾಯಗಳನ್ನು ಒಳಗೊಂಡಿದೆ. ಇದು ಆಕೆಯನ್ನು ಅತ್ಯಂತ ಬರ್ಬರವಾಗಿ ಹತ್ಯೆಗೈಯಲಾಗಿದೆ ಎಂದು ಸೂಚಿಸುತ್ತದೆ ಅಲ್ಲದೆ ಪ್ರೀತಿ ವಿಚಾರವಾಗಿ ಕೊಲೆ ಮಾಡಲಾಗಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಘಟನೆಯ ಬಳಿಕ ಪ್ರಿಯಕರ ಕೂಡ ನಾಪತ್ತೆಯಾಗಿದ್ದಾನೆ. ಈ ಕುರಿತು…
ಮಧ್ಯಪ್ರದೇಶದಲ್ಲಿ ಜನ ಕತ್ತೆಗಳಿಗೆ ರುಚಿರುಚಿಯಾದ ಜಾಮೂನು ಮಾಡಿ ಬಡಿಸಿದ್ದಾರೆ. ಕತ್ತೆಗಳು ಬಿಸಿಬಿಸಿ ಜಾಮೂನುಗಳನ್ನು ಚಪ್ಪರಿಸಿ ತಿಂದಿವೆ. ಹೌದು, ಮಧ್ಯಪ್ರದೇಶದ ಭೋಪಾಲಿನಲ್ಲಿ ಕತ್ತೆಗಳಿಗೆ ಜಾಮೂನು ಕೊಡಲಾಗಿದೆ. ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನತೆಗೆ ವರುಣದೇವ ಕೃಪೆ ತೋರಿದ್ದು, ದೇಶಾದ್ಯಂತ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಕೆಲವು ಕಡೆ ಇನ್ನೂ ಮಳೆಯಾಗದ ಕಾರಣ ಜನ ದೇವರ ಮೊರೆ ಹೋಗುತ್ತಿದ್ದು, ಅಂತಹ ಒಂದು ಆಚರಣೆಯ ಫಲವಾಗಿ ಕತ್ತೆಗಳಿಗೆ ಜಾಮೂನು ಭಾಗ್ಯ ದೊರಕಿದೆ. ಮಳೆ ಬರಿಸಲು ಜನರು ಕೈಗೊಳ್ಳುವ ವಿವಿಧ ಆಚರಣೆಗಳಲ್ಲಿ ಕತ್ತೆಗಳಿಗೆ ಮದುವೆ ಮಾಡಿಸುವುದು ಕೂಡ ಒಂದು. ಮಳೆಗಾಲ ಆರಂಭವಾದರೂ ಆಕಾಶದಿಂದ ಭೂಮಿಗೆ ಹನಿ ನೀರು ಕೂಡಾ ಬೀಳದೆ ಇದ್ದಾಗ ಜನರು ಕತ್ತೆಗಳಿಗೆ ಮದುವೆ ಮಾಡಿಸುತ್ತಾರೆ. ಏಕೆಂದರೆ ಕತ್ತೆಗಳಿಗೆ ಮಾಡುವುದರಿಂದ ವರುಣ ದೇವನ ಕೃಪೆಗೆ ಪಾತ್ರವಾಗುತ್ತೇವೆ ಎಂಬುದು ಜನರ ನಂಬಿಕೆ. ಆದರೆ, ಇಲ್ಲೊಂದು ಕಡೆ ಕತ್ತೆಗಳಿಗೆ ಮದುವೆ ಮಾಡಲಾಗಿದೆ. ಆಯಾ ಕತ್ತೆಗಳ ಮದುವೆಯಾದ ಖುಷಿಗೆ ಕತ್ತೆಗಳಿಗೆ ಗುಲಾಬ್ ಜಾಮೂನನ್ನು ತಿನ್ನಿಸಲಾಗುವ ವಿಚಿತ್ರ ಆಚರಣೆ ಜಾರಿಯಲ್ಲಿದೆ. ಮಧ್ಯಪ್ರದೇಶದ…
ತುಮಕೂರು: ನಗರದಲ್ಲಿ ಶನಿವಾರ ಲೋಕಾರ್ಪಣೆಗೊಂಡ ಡಿ.ದೇವರಾಜ ಅರಸು ಬಸ್ ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭಾನುವಾರ ಬೆಳಿಗ್ಗೆ 8:30 ಗಂಟೆಗೆ ಭೇಟಿ ನೀಡಿ ಪ್ರಯಾಣಿಕರ ಸಮಸ್ಯೆ ಹಾಗೂ ನಿಲ್ದಾಣದ ಹೊರಭಾಗದಲ್ಲಿರುವ ಆಟೋ ಚಾಲಕರ ಪಾರ್ಕಿಂಗ್ ಸಮಸ್ಯೆಗಳನ್ನು ಆಲಿಸಿದರು. ಶೀಘ್ರವೇ ನಿಲ್ದಾಣದ ಮುಂಭಾಗ ಆಟೋ ನಿಲ್ಲಿಸಲು ವ್ಯವಸ್ಥೆ ಮಾಡಬೇಕೆಂದು ಕೆಎಸ್ ಆರ್ ಟಿಸಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತ್ರಿವೇಣಿಗೆ ನಿರ್ದೇಶನ ನೀಡಿದರು. ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು ಬಾಕಿ ಇರುವ ಎಲ್ಲಾ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು . ತ್ರಿವೇಣಿ ಅವರು ಬಾಕಿ ಇರುವ ಸಣ್ಣ ಪುಟ್ಟ ಕಾಮಗರಿಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು. ಲಿಫ್ಟ್ ಕಾರ್ಯಾಚರಣೆ, ಶೌಚಾಲಯ, ವಿದ್ಯುತ್ ಸಂಪರ್ಕ, ಸೈನ್ ಬೋರ್ಡ್, ಸಿಸಿಟಿವಿ ಕ್ಯಾಮೆರಾ, ಪ್ರಯಾಣಿಕರ ಮಾಹಿತಿಗಾಗಿ ಟಿವಿ ಅಳವಡಿಕೆ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಟಿ.ಸಿ.ಪಾಯಿಂಟ್ ಹಾಗೂ ಪೊಲೀಸ್ ಚೌಕಿಯಲ್ಲಿ ಮೂಲ ಸೌಕರ್ಯಗಳನ್ನು ಕೂಡಲೇ ಒದಗಿಸಲು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕೆಎಸ್ ಆರ್ ಟಿಸಿ ಡಿಪೋ…
ತುಮಕೂರು: ಏಕಕಾಲದಲ್ಲಿ 10,000 ವಿದ್ಯಾರ್ಥಿಗಳು ಪ್ರಧಾನಿ ಮೋದಿ ಅವರ ‘ಮನ್ ಕಿ ಬಾತ್’ ಕಾರ್ಯಕ್ರಮವನ್ನು ತುಮಕೂರಿನ ಸಿದ್ದಗಂಗಾ ಮಠದಲ್ಲಿ ವೀಕ್ಷಿಸಿದರು. ಮಠದ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಬೃಹತ್ ಪರದೆಯ ಮೂಲಕ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಸಿದ್ದಗಂಗಾ ಮಠದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ, ಶಾಸಕ ಜ್ಯೋತಿ ಗಣೇಶ್ ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ತಿಹಾರ್ ಜೈಲ್ ನಿಂದ ಬೆಚ್ಚಿ ಬೀಳಿಸುವಂತ ಮಾಹಿತಿಯೊಂದು ಹೊರ ಬಂದಿದ್ದು, ಜೈಲಿನಲ್ಲಿ ಒಬ್ಬರಲ್ಲ ಇಬ್ಬರಲ್ಲ ಬರೋಬ್ಬರಿ 125 ಜನ ಕೈದಿಗಳಲ್ಲಿ ಹೆಚ್ ಐವಿ ರೋಗ ಪತ್ತೆಯಾಗಿದೆ. ತಿಹಾರ ಜೈಲಿನಲ್ಲಿರುವ 125 ಕೈದಿಗಳಿಗೆ ಎಚ್ ಐವಿ ಪಾಸಿಟಿವ್ ಬಂದಿದೆ. ಅಷ್ಟೇ ಅಲ್ಲ, 200 ಕೈದಿಗಳು ಸೆಕ್ಸ್ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚೆಗಷ್ಟೇ ಒಟ್ಟು 14 ಸಾವಿರ ಕೈದಿಗಳಲ್ಲಿ 10, 500 ಕೈದಿಗಳ ಮೆಡಿಕಲ್ ಸ್ಕ್ರೀನಿಂಗ್ ಮಾಡಲಾಗಿತ್ತು. ಈ ವೇಳೆ ಇಂತಹದೊಂದು ಆತಂಕಕಾರಿ ವಿಷಯ ಹೊರಗೆ ಬಂದಿದೆ. ಇತ್ತೀಚೆಗೆ ತಿಹಾರ ಜೈಲಿನ ಡಿಜಿ ಆಗಿ ಸತೀಶ್ ಗೋಲ್ಚಾ ಅವರು ಅಧಿಕಾರ ವಹಿಸಿಕೊಂಡಿದ್ದು, ಅವರು ಕೈದಿಗಳ ಆರೋಗ್ಯ ತಪಾಸಣೆಗೆ ಸೂಚಿಸಿದ್ದರು. ಅದರಂತೆ, ಕಳೆದ ಮೇ ಹಾಗೂ ಜೂನ್ ತಿಂಗಳಲ್ಲಿ 10,500 ಕೈದಿಗಳ ಆರೋಗ್ಯ ತಪಾಸಣೆ ಮಾಡಿಸಲಾಗಿದೆ. ಇನ್ನೂ, 3,500 ಕೈದಿಗಳ ಆರೋಗ್ಯ ತಪಾಸಣೆ ಬಾಕಿ ಇದೆ ಎಂದು ತಿಳಿದುಬಂದಿದೆ. ಹಾಗಾಗಿ, ಇನ್ನೂ ಇಂತಹ ಕಾಯಿಲೆ ಪೀಡಿತರ ಸಂಖ್ಯೆ ಜಾಸ್ತಿ ಆಗುವ ಸಾಧ್ಯತೆ ಇದೆ…