Subscribe to Updates
Get the latest creative news from FooBar about art, design and business.
- ಸರಗೂರು: ಮೂರನೇ ಆಷಾಢ ಶುಕ್ರವಾರ -– ವಾಹನ ಚಾಲಕರ ಸಂಘದಿಂದ ವಿಶೇಷ ಪೂಜೆ ಹಾಗೂ ಖಾಕಿ ಸಮವಸ್ತ್ರ ವಿತರಣೆ
- ಔರಾದ್: ಜೈ ಕಿಸಾನ್ ಶಾಲೆ ಶಿಕ್ಷಕ, ಬಿಎಲ್ ಒ ಮಲ್ಲಿಕಾರ್ಜುನ ಪಿಟ್ರೆ ನಿಧನ
- ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ
- ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!
- ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ
- ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್
- ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
- ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
Author: admin
ತುಮಕೂರು: ಮೂಡಾ ಹಗರಣದಲ್ಲಿ ಭಾಗಿಯಾಗಿರೋ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಸದಾನಂದಗೌಡ ನೇತೃತ್ವದಲ್ಲಿ ತುಮಕೂರು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಟೌನ್ ಹಾಲ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಮುಖ್ಯಮಂತ್ರಿಗಳೊಂದಿಗೆ ರಾಜ್ಯ ಸರ್ಕಾರದಲ್ಲಿ ಸಾಕಷ್ಟು ಮಂದಿ ಭ್ರಷ್ಟ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಅಲ್ಲದೆ ರಾಜ್ಯಪಾಲರ ವಿರುದ್ಧ ಆರೋಪ ಮಾಡುತ್ತಿರುವ ಕಾಂಗ್ರೆಸ್ ಮುಖಂಡರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೇ ಮುಖ್ಯಮಂತ್ರಿ ಅವರ ಮೂಡ ಹಗರಣದ ಕುರಿತು ರಾಜ್ಯಪಾಲರು ಹೊರಡಿಸಿರುವ ಪ್ರಾಸಿಕ್ಯೂಷನ್ ಬಗ್ಗೆ ಮಾತನಾಡುತ್ತಿರುವ ಕಾಂಗ್ರೆಸ್ ಮುಖಂಡರ ಕ್ರಮ ಸರಿಯಲ್ಲ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಕಲ್ಪಿಸಲು ಅರ್ಹ ಮಡಿವಾಳ ಸಮುದಾಯದವರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ, ಗಂಗಾಕಲ್ಯಾಣ ನೀರಾವರಿ, ಅರಿವು-ಶೈಕ್ಷಣಿಕ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ, ಸ್ವಾವಲಂಬಿ ಸಾರಥಿ ಹಾಗೂ ಸ್ವಯಂ ಉದ್ಯೋಗ ಸಾಲ(ವಾಣಿಜ್ಯ ಬ್ಯಾಂಕ್ಗಳ ಸಹಯೋಗದೊಂದಿಗೆ) ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಸಾಲ ಸೌಲಭ್ಯ ಪಡೆಯಲಿಚ್ಛಿಸುವವರು ತಮ್ಮ ಅರ್ಜಿಯನ್ನು ಆಗಸ್ಟ್ 31ರೊಳಗಾಗಿ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಗ್ರಾಮ ಒನ್/ಕರ್ನಾಟಕ ಒನ್, ತುಮಕೂರು ಒನ್ ಸೇವಾ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://kmmd.karnataka.gov.in ಅಥವಾ ನಿಗಮದ ಕೇಂದ್ರ ಕಚೇರಿ ದೂ.ವಾ.ಸಂ. 080-22374832, 8050770004, 8050770005 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂ.ವಾ.ಸಂಖ್ಯೆ 0816-2005008ನ್ನು ಸಂಪರ್ಕಿಸಬೇಕೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ತುಮಕೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿ ನಿಲಯದಲ್ಲಿ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವರ್ಗದವರಿಗೆ ಶೇ.75ರಷ್ಟು ಹಾಗೂ ಪರಿಶಿಷ್ಟ ಜಾತಿ/ ಪ.ಪಂಗಡ/ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಸ್ಥಾನಗಳನ್ನು ಮೀಸಲಿರಿಸಿದ್ದು, ಆಸಕ್ತರು ಸೆಪ್ಟೆಂಬರ್ 12ರೊಳಗಾಗಿ ಜಾಲತಾಣ: https://shp.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಅಜಾದ್ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು-572102 ಅಥವಾ ದೂರವಾಣಿ ಸಂಖ್ಯೆ 0816-2273724ನ್ನು ಸಂಪರ್ಕಿಸಬೇಕೆಂದು ಅಲ್ಪಸಂಖ್ಯಾತರ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಚಿಕ್ಕನಾಯಕನಹಳ್ಳಿ: ಹನುಮಂತ ರಾಮ ನಾಯಕ್ ಗ್ರಾಮೀಣಾಭಿವೃದ್ಧಿ ಸಂಘ ಚಿಕ್ಕನಾಯಕನ ಹಳ್ಳಿ ಹಾಗೂ ತಾಲ್ಲೂಕು ಬಂಜಾರ ಬಳಗ ವತಿಯಿಂದ ಶ್ರೀ ಮಾತಾ ಚಾರಿಟಬಲ್ ಟ್ರಸ್ಟ್ ಸಪ್ತಗಿರಿ ಆಸ್ಪತ್ರೆ, ಬೆಂಗಳೂರು ಇವರ ಸಹಯೋಗದೊಂದಿಗೆ ಚಿಕ್ಕಸಂದ್ರ, ಹೆಸರುಘಟ್ಟ ಮುಖ್ಯರಸ್ತೆ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ಔಷಧಿ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದೆ. ಆಗಸ್ಟ್ 24 ಹಾಗೂ 25ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆವರೆಗೆ ಧ್ಯಾನ ನಗರಿ ಸೇವಾಲಾಲ್ ಸದನ, ಕೋಡಿ ಪಾಳ್ಯ, ಹುಳಿಯಾರ ಇಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಮಾಜಿ ಗ್ರಾ.ಪಂ. ಸದಸ್ಯ, ಸಮಾಜ ಸೇವಕ ಹನುಮಂತ ರಾಮ ನಾಯಕ್ ಚಿಕ್ಕನಾಯಕನಹಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪೂರ್ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಿ ಹೆಂಗರ್ ಪ್ರಾಜೆಕ್ಟ್ ಸಂಸ್ಥೆ ಬೆಂಗಳೂರು ಅಡಿಯಲ್ಲಿ ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಂತ ವೈದ್ಯಾಧಿಕಾರಿಗಳಾದ ರೇಣುಕಾ ನಾಗರಾಳ್ಕರ್ ತಪಾಸಣೆ ನಡೆಸಿದರು. ಅಧ್ಯಕ್ಷ ಸ್ಥಾನ ಅಲಂಕರಿಸಿದ ಮಾದೇವಿ ಪಾಟೀಲ್ ಇವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಸಂತಪುರ ಸರ್ಕಾರಿ ಪ್ರೌಢಶಾಲೆ ಮಕ್ಕಳಿಗೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಂತ ಆರೋಗ್ಯ ತಪಾಸಣೆ ಮಾಹಿತಿ ಕೊಡಲಾಯಿತು. ಕಾರ್ಯಕ್ರಮದಲ್ಲಿ ಅನಸೂಯಾ ದೊಡ್ಡಿ, ಮಾಲಾಶ್ರಿಕೋಟೆ, ಭಾರತಿ ಚಂದಾಪುರೇ, ಶೃತಿ ಗುರು ಅಂಕಲಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತಿಪಟೂರು: ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜಿನ ನೂತನ ಸೈನ್ಸ್ ಕ್ಲಬ್ ಮತ್ತು ಇಕೋ ಕ್ಲಬ್ ನ ಉದ್ಘಾಟನಾ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಚಾಲನೆ ನೀಡಲಾಯಿತು. ನಂತರ ಕಾಲೇಜು ಆವರಣದಲ್ಲಿ 10 ಗಿಡಗಳನ್ನು ಹಸಿರುಪಡೆ ವತಿಯಿಂದ ನೆಡಲಾಯಿತು. ಸೈನ್ಸ್ ಕ್ಲಬ್ ವತಿಯಿಂದ ಸೈನ್ಸ್ ರಂಗೋಲಿ ಸ್ಪರ್ಧೆ ಹಾಗೂ ಪೋಸ್ಟರ್ ಡ್ರಾಯಿಂಗ್ ಸ್ಪರ್ಧೆ ಏರ್ಪಡಿಸಲಾಗಿತ್ತು. ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಎಂ.ಡಿ.ಶಿವಕುಮಾರ್ ರವರು ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ರಾಜೇಶ್ ಪದ್ಮಾರ್ ರವರು ಆಗಮಿಸಿದ್ದರು. ಸೈನ್ಸ್ ಕ್ಲಬ್ ಕಾರ್ಯದರ್ಶಿಯಾದ ಡಾ. ಲೋಕೇಶ್ ಕೆ ಮತ್ತು ಸಹ ಕಾರ್ಯದರ್ಶಿ ಮಂಜುನಾಥ ಪಿ. ಎನ್. ರವರು ಎಲ್ಲರಿಗೂ ಸೈನ್ಸ್ ಕ್ಲಬ್ ನ ಪ್ರತಿಜ್ಞಾ ವಿಧಿ ಬೋಧಿಸಿದರು. ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ರೂಢಿಸುವುದರ ಜತೆಗೆ, ಮಾನವೀಯ ಸಂವೇದನೆಗಳನ್ನು ಅರ್ಥೈಸಿಕೊಂಡು ಪರಿಸರಪೂರಕ ಮಾದರಿಯಲ್ಲಿ ವೈಜ್ಞಾನಿಕ ಕ್ಷೇತ್ರದಲ್ಲಿ ಕಾರ್ಯಪ್ರವೃತ್ತರಾಗಬೇಕಿದೆ ಎಂದು ಉಪನ್ಯಾಸಕ ರಾಜೇಶ್ ಪದ್ಮಾರ್ ತಿಳಿಸಿದ್ದಾರೆ. ಭಾರತದಲ್ಲಿ ಪ್ರಾಚೀನ ಕಾಲದಿಂದಲೂ ವೈಜ್ಞಾನಿಕ ಸಾಧನೆಗಳು ಹೇರಳವಾಗಿತ್ತು. ಲೋಹಶಾಸ್ತ್ರದ ಸಂಶೋಧನೆಗಳಿಂದ ಪ್ರಾರಂಭಿಸಿ…
ತುಮಕೂರು: ಇಡೀ ದೇಶವನ್ನೇ ಬೆಚ್ಚಿಬೀಳಿಸಿರುವ ಕೋಲ್ಕತ್ತಾದ ಆರ್ ಜಿಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ನಿರತ ಕಿರಿಯ ಮಹಿಳಾ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಹತ್ಯೆಯ ಘಟನೆಯನ್ನು ಖಂಡಿಸಿ ಎಐಡಿಎಸ್ ಓ ವತಿಯಿಂದ ತುಮಕೂರು ಟೌನ್ ಹಾಲ್ ವೃತ್ತದಿಂದ ಸ್ವಾತಂತ್ರ್ಯ ಚೌಕದವರೆಗೆ ಮೋಂಬತ್ತಿ ಮೆರವಣಿಗೆ ಮಾಡಲಾಯಿತು. ಎಐಡಿಎಸ್ ಓ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಸಿ.ಬಿ. ಮಾತನಾಡಿ, ಮಹಿಳೆಯರ ಮೇಲೆ ಹೆಚ್ಚುತ್ತಿರುವ ಅಪರಾಧಗಳಿಗೆ ಮಾಧ್ಯಮಗಳಲ್ಲಿ ನಿರಂತರವಾಗಿ ಮತ್ತು ಅವ್ಯಾಹತವಾಗಿ ಅಶ್ಲೀಲತೆ ಮತ್ತು ಕ್ರೌರ್ಯಗಳ ಪ್ರದರ್ಶನ, ಇಂಟರ್ ನೆಟ್, ಮೊಬೈಲ್ ಗಳ ಮೂಲಕ ಪೋರ್ನೋಗ್ರಫಿಕ್ ವೆಬ್ ಸೈಟ್ ಗಳನ್ನು ಹರಿಬಿಡುತ್ತಿರುವುದು, ದುರಾಭ್ಯಾಸಗಳಿಗೆ ವ್ಯಸನಿಗಳನ್ನಾಗಿಸುತ್ತಿರುವುದು ಮೂಲ ಕಾರಣವಾಗಿವೆ. ವಿಕೃತ ಮನಸ್ಥಿತಿ ಬೆಳೆಸಿಕೊಂಡು ಬಾಲಕಿಯರ ಮೇಲೆ, ಮಹಿಳೆಯರ ಮೇಲೆ ಅತ್ಯಾಚಾರದಂತಹ ಹೀನ, ಅನಾಗರಿಕ, ಅಮಾನವೀಯ ಕೃತ್ಯವನ್ನು ಎಸಗುತ್ತಿದ್ದಾರೆ. ದೆಹಲಿಯ ನಿರ್ಭಯ ಪ್ರಕರಣದ ನಂತರ ನಡೆದ ಪ್ರಭಲ ಹೋರಾಟದ ಫಲವಾಗಿ ಮಹಿಳೆಯರ ಮೇಲಿನ ಅಪರಾಧಗಳನ್ನು ತಡೆಗಟ್ಟಲು ವರ್ಮಾ ಆಯೋಗ ಹಲವಾರು ಶಿಫಾರಸ್ಸುಗಳನ್ನು ಮಾಡಿದ್ದರೂ ಸರ್ಕಾರಗಳು ಅವುಗಳ ಪರಿಣಾಮಕಾರಿ…
ಪಾವಗಡ: ಭಾರತೀಯ ಪರಿವರ್ತನ ಸಂಘ–BPS ಹಾಗೂ ನಿಸರ್ಗ ದೃಷ್ಟಿಧಾಮ ಚಂದಾಪುರ, ಸಹಯೋಗದೊಂದಿಗೆ ಹೈಕೋರ್ಟ್ ವಕೀಲರು ಹಾಗೂ ಬಿಪಿಎಸ್ ರಾಜ್ಯಾಧ್ಯಕ್ಷರು ಆದಂತಹ ಪ್ರೊ.ಹರಿರಾಮ್ ಅವರ ನೇತೃತ್ವದಲ್ಲಿ19 ಜನರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಎಲ್ಲರನ್ನೂ ಚಿಕಿತ್ಸೆಯ ಬಳಿಕ ಬೆಂಗಳೂರಿಂದ ಪಾವಗಡಕ್ಕೆ ಕಳುಹಿಸಿಕೊಡಲಾಯಿತು. ಇದೇ ವೇಳೆ ಮಾತನಾಡಿದ ಹರಿರಾಮ್ ಎ., ಪಾವಗಡ ತಾಲ್ಲೂಕು, ವೈ.ಎನ್.ಹೊಸಕೋಟೆ ಹೋಬಳಿ, ಬಲ್ಲೇನಹಳ್ಳಿ ಗ್ರಾಮದಲ್ಲಿ ದಿನಾಂಕ 06.08.2024 ರಂದು ಉಚಿತ ಕಣ್ಣಿನ ತಪಾಸಣೆ ಮತ್ತು ಆರೋಗ್ಯ ಶಿಬಿರವನ್ನು ಪರಿವರ್ತನ ಸಂಘ ಪಾವಗಡ ಮತ್ತು ನಿಸರ್ಗ ದೃಷ್ಟಿಧಾಮ ಸಹಯೋಗದೊಂದಿಗೆ ಆ ಯೋಜನೆ ಮಾಡಿದ್ದೆವು, ಈ ಆರೋಗ್ಯ ಶಿಬಿರದಲ್ಲಿ ವೈದ್ಯರ ತಪಾಸಣೆಯಲ್ಲಿ ಆಯ್ಕೆಯಾದ ಜನರಿಗೆ ದಿನಾಂಕ 11.08.2024 ರಂದು ಅದೇ ಗ್ರಾಮದಲ್ಲಿ 110 ಜನರಿಗೆ ಉಚಿತ ಕನ್ನಡಕಗಳನ್ನು ವಿತರಿಸಿದ್ದೆವು, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದ 19 ಜನರನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಎಲ್ಲರಿಗೂ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಆಗಿದ್ದು ಇಂದು ಪಾವಗಡಕ್ಕೆ ಕರೆದುಕೊಂಡು ಹೋಗುತ್ತಿದ್ದೇವೆ, ಇವರೆಲ್ಲರನ್ನು ಆಸ್ಪತ್ರೆಯಲ್ಲಿ ಚೆನ್ನಾಗಿ ನೋಡಿಕೊಂಡಂತಹ ಕೆಂಚರಾಯ, ಈರಣ್ಣ,…
ತುಮಕೂರು: ಈ ವರ್ಷದ ಮುಂಗಾರಿನಲ್ಲಿ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ. 92ರಷ್ಟು ಹೆಚ್ಚಿನ ಮಳೆಯಾಗಿದೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು. ನಗರದ ಅಮಾನಿಕೆರೆ ಬಾಗಿನ ಅರ್ಪಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯ ಮುಂಗಾರಿನಂತೆ ಕಾಣಿಸುತ್ತಿದೆ. ಮುಂಗಾರಿನಲ್ಲಿ ವಾಡಿಕೆ ಪ್ರಕಾರ 302 ಮಿ.ಮೀ ಮಳೆಯನ್ನು ನಿರೀಕ್ಷಿಸಲಾಗಿತ್ತು. ಮುಂಗಾರು ಆರಂಭವಾದಾಗಿನಿಂದ ಈವರೆಗೆ ಜಿಲ್ಲೆಯಲ್ಲಿ 592 ಮಿ.ಮೀ ಮಳೆಯಾಗಿದೆ. ಶೇ. 92ರಷ್ಟು ಹೆಚ್ಚು ಮಳೆ ಬಿದ್ದಿದೆ ಎಂದರು. ಜಿಲ್ಲೆಯಲ್ಲಿ ಅನೇಕ ಕೆರೆಗಳು ತುಂಬಿ ಕೋಡಿ ಹರಿದಿವೆ. ತುಮಕೂರು ನಗರದ ಅಮಾನಿ ಕೆರೆ ತುಂಬುವುದೇ ಬಹಳ ವಿರಳ. ಕಳೆದ ವರ್ಷ ಹೆಚ್ಚು ಬರಗಾಲವಿದ್ದ ಪರಿಣಾಮ ಕೆರೆಗೆ ನೀರು ಬರಲಿಲ್ಲ. ಆದಾಗ್ಯೂ ಇದ್ದ ನೀರನ್ನು ರಕ್ಷಸಿಕೊಂಡು ಬಂದಿದ್ದೇವೆ. ಕೆರೆಯ ಅಭಿವೃದ್ಧಿ ಕಾರ್ಯಕ್ಕೆ ಒತ್ತು ನೀಡಲಾಗುವುದು ಎಂದು ಹೇಳಿದರು. ಸೇತುವೆ ನೀರ್ಮಾಣ ಕಾಮಗಾರಿ ಪೂಋಣಗೊಳಿಸುವ ಬಗ್ಗೆ ಗುತ್ತಿಗೆದಾರರೊಂದಿಗೆ ಮಾತನಾಡಿದ್ದೇನೆ. ಸೆಪ್ಟೆಂಬರ್‌ನೊಳಗೆ ಮುಗಿಸಿ ಕೊಡುತ್ತಾರೆ. ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುವುದು. ಎಸ್ ಮಾಲ್‌ನವರು ರಾಜಗಾಲುವೆ ಒತ್ತುವರಿ ಮಾಡಿರುವ ಬಗ್ಗೆ ಪರಿಶೀಲನೆ…
ಕೋಲ್ಕತ್ತಾದಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ದೇಶವೇ ಬೆಚ್ಚಿ ಬೀಳುವಂತೆ ಮಾಡಿದೆ. ಘಟನೆಯ ಬಗ್ಗೆ ಅನೇಕರು ಪ್ರತಿಕ್ರಯಿಸಿದ್ದು ಹಲವರು ತಮಗಾದ ಲೈಂಗಿಕ ಕಿರುಕುಳ, ಯಾತನೆ, ನೋವುಗಳ ಬಗ್ಗೆ ಮಾತನಾಡಿದ್ದಾರೆ.ನಟಿ ಸೆಲಿನಾ ಜೇಟ್ಲಿ ತಮ್ಮ ಜೀವನದಲ್ಲಿ ನಡೆದ ಆಘಾತಕಾರಿ ಘಟನೆಯೊಂದನ್ನು ಬಿಚ್ಚಿಟ್ಟಿದ್ದಾರೆ. ತಮ್ಮ ಆರನೇ ತರಗತಿ ಫೋಟೋ ಒಂದನ್ನು ಪೋಸ್ಟ್ ಮಾಡಿದ ಸೆಲಿನಾ, ಇಂಥ ಪ್ರಕರಣಗಳಲ್ಲಿ ಯಾವಾಗಲೂ ಬಲಿಪಶುವನ್ನೇ ತಪ್ಪು ಮಾಡಿದವಳು ಎಂದು ಹೇಳಲಾಗುತ್ತದೆ. ಈ ಫೋಟೋ ನಾನು ಆರನೇ ತರಗತಿಯಲ್ಲಿದ್ದಾಗಿನದು. ಹತ್ತಿರದ ಕಾಲೇಜಿನ ಹುಡುಗನೊಬ್ಬ ನಾನು ಶಾಲೆಯಿಂದ ಹೊರಬರುವುದನ್ನು ಕಾಯುತ್ತಿದ್ದ. ಅವನು ಪ್ರತಿದಿನ ನನ್ನ ಶಾಲೆಯ ರಿಕ್ಷಾವನ್ನು ಹಿಂಬಾಲಿಸಿ ಮನೆಯವರೆಗೆ ಬರುತ್ತಿದ್ದ. ಕೆಲವು ದಿನಗಳ ನಂತರ, ನನ್ನ ಗಮನವನ್ನು ಸೆಳೆಯಲು, ಅವನು ರಸ್ತೆಯ ಮಧ್ಯದಲ್ಲಿ ನನ್ನ ಮೇಲೆ ಕಲ್ಲು ಎಸೆಯಲು ಪ್ರಾರಂಭಿಸಿದ್ದ. ಅಲ್ಲಿದ್ದವರು ಯಾರೂ ಆತನ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ಎಂದಿದ್ದಾರೆ. ಇದರ ಮಧ್ಯೆ ನನ್ನ ಟೀಚರ್ ನನ್ನ ಮೇಲೆಯೇ ಆರೋಪ ಮಾಡಿದ್ರು. ನಾನು ಬಿಗಿಯಾದ ಬಟ್ಟೆ…